Vijayananda Film | ನ.6ರಂದು ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ ಆಡಿಯೊ ಲಾಂಚ್ - Vistara News

ಪ್ರಮುಖ ಸುದ್ದಿ

Vijayananda Film | ನ.6ರಂದು ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ ಆಡಿಯೊ ಲಾಂಚ್

‘ವಿಜಯಾನಂದ’ ಚಿತ್ರದ ಆಡಿಯೊ (Vijayananda Film) ನವೆಂಬರ್‌ 6ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ.
‘ಹಾಗೆ ಆದ ಆಲಿಂಗನ’ ಎಂದು ಸಾಗುವ ರೊಮ್ಯಾಂಟಿಕ್ ಸಾಂಗ್ ಇದಾಗಿದೆ.

VISTARANEWS.COM


on

Vijayananda-Film-3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ (Vijayananda Film) ಚಿತ್ರವು ಪ್ರಾರಂಭದಿಂದಲೂ ಸ್ಟಾರ್ ಕಾಸ್ಟ್, ಕಲಾವಿದರ ಲುಕ್, ಮೇಕಿಂಗ್, ಕುತೂಹಲ ಮೂಡಿಸುವ ಟೀಸರ್, ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಬಿಡುಗಡೆ ಯೋಜನೆ ಸೇರಿ ಹಲವು ಕಾರಣಕ್ಕೆ ಸುದ್ದಿ ಮಾಡುತ್ತಿದೆ. ಈಗ ಸಿನಿಮಾ ಕುರಿತು ಮತ್ತೊಂದು ಅಪ್‌ಡೇಟ್‌ ಸಿಕ್ಕಿದ್ದು, ‘ವಿಜಯಾನಂದ’ ಚಿತ್ರದ ಆಡಿಯೊ ನವೆಂಬರ್‌ 6ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ. ‘ಹಾಗೆ ಆದ ಆಲಿಂಗನ’ ಎಂದು ಸಾಗುವ ರೊಮ್ಯಾಂಟಿಕ್ ಸಾಂಗ್ಅನ್ನು ಬಿಡುಗಡೆ ಮಾಡಲಾಗುತ್ತಿದೆ.

ನಿಹಾಲ್‌ ನಾಯಕನಾಗಿ, ಸಿರಿ ಪ್ರಹ್ಲಾದ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ, ಹಳೇಬೀಡು, ಬೇಲೂರು ಸೇರಿದಂತೆ 10ಕ್ಕೂ ಹೆಚ್ಚು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಹೆಸರಾಂತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ. ಒರಾಯನ್ ಮಾಲ್‌ನಲ್ಲಿ ನಡೆಯಲಿರುವ ಆಡಿಯೊ ಬಿಡುಗಡೆ ಕಾರ್ಯಕ್ರಮದಲ್ಲಿ ಗೋಪಿ ಸುಂದರ್ ಹಾಡಿನ ಪ್ರದರ್ಶನ ನೀಡಲಿದ್ದಾರೆ. ಶರಣ್, ಹರ್ಷಿಕಾ ಪೂಣಚ್ಚ ಸೇರಿ ಸ್ಯಾಂಡಲ್‌ವುಡ್‌ನ ನಟ, ನಟಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಶಸ್ವಿ ಮತ್ತು ಮಾದರಿ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರ ಕುರಿತ ‘ವಿಜಯಾನಂದ’ ಚಿತ್ರವನ್ನು ವೀಕ್ಷಿಸಲು ನಾಡಿನ ಜನ ಕಾತರದಿಂದ ಕಾಯುತ್ತಿದ್ದಾರೆ. ಭಾನುವಾರ ಇದರ ಹಾಡುಗಳ ಆಡಿಯೊ ಬಿಡುಗಡೆ ಆಗುತ್ತಿರುವುದು ಸಂತಸದ ಸಂಗತಿ. ಈ ಚಿತ್ರದ ಟ್ರೇಲರ್ ಸೂಪರ್ ಹಿಟ್ ಆದಂತೆ, ಹಾಡುಗಳೂ ಜನ ಮೆಚ್ಚುಗೆ ಗಳಿಸಲಿವೆ.
ಹರಿಪ್ರಕಾಶ್ ಕೋಣೆಮನೆ, ಸಿಇಒ ಮತ್ತು ಪ್ರಧಾನ ಸಂಪಾದಕ, ವಿಸ್ತಾರ ನ್ಯೂಸ್

ಇದನ್ನೂ ಓದಿ | ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ ಚರ್ಚೆ ಜೋರು; ನಟಿ ಜತೆಗಿನ ಫೋಟೋ ವೈರಲ್


ಪದ್ಮಶ್ರೀ ಡಾ. ವಿಜಯ ಸಂಕೇಶ್ವರರ ಬಯೋಪಿಕ್‌ಅನ್ನು ವಿಆರ್‌ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸುತ್ತಿದ್ದಾರೆ. ‘ಟ್ರಂಕ್’ ಖ್ಯಾತಿಯ ನಿರ್ದೇಶಕಿ ರಿಷಿಕಾ ಶರ್ಮಾ ನಿರ್ದೇಶಿಸುತ್ತಿದ್ದಾರೆ. ಡಾ. ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್ ರಜಪೂತ್, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್, ಡಾ. ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್, ಡಾ. ಆನಂದ ಸಂಕೇಶ್ವರರ ಪಾತ್ರದಲ್ಲಿ ಭರತ್ ಬೋಪಣ್ಣ ಹಾಗೂ ವಿಜಯ ಸಂಕೇಶ್ವರರ ಗುರುಗಳ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ.

ಡಾ. ವಿಜಯ ಸಂಕೇಶ್ವರ ಅವರ ಜೀವನ ಮತ್ತು ಸಾಧನೆ‌ಯ ಕತೆ ಎಲ್ಲರಿಗೂ ಪ್ರೇರಣಾದಾಯಕ. ಶೀಘ್ರವೇ ಬಿಡುಗಡೆ ಆಗಲಿರುವ ‘ವಿಜಯಾನಂದ’ ಚಿತ್ರ ಸ್ಫೂರ್ತಿದಾಯಕ ಆಗಲಿದೆ. ಭಾನುವಾರ ನ.6ರಂದು ಬಿಡುಗಡೆ ಆಗಲಿರುವ ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಲಿ.
-ಎಚ್ ವಿ ಧರ್ಮೇಶ್, ಚೇರ್ಮನ್ ಮತ್ತು ಎಂಡಿ, ವಿಸ್ತಾರ ನ್ಯೂಸ್ ಪ್ರೈ.ಲಿ.

    ‘ವಿಜಯಾನಂದ’ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ.

    Vijayananda Film
    Vijayananda Film

    ಇದನ್ನೂ ಓದಿ | Vijay Sankeshwar | ಇತಿಹಾಸ ಸೃಷ್ಟಿಸಿದವರೆಲ್ಲರೂ ಅಪ್ಪನ ವಿರುದ್ಧ ಹೋದವರು!: ವಿಜಯಾನಂದ ಟೀಸರ್‌ ವೈರಲ್‌

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಭವಿಷ್ಯ

    Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

    Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    VISTARANEWS.COM


    on

    By

    Dina bhavishya
    Koo

    ಚಂದ್ರನು ಭಾನುವಾರ ವೃಷಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಷಭ ರಾಶಿಯವರು ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

    ಇಂದಿನ ಪಂಚಾಂಗ (kannada panchanga) (28-07-2024)

    ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
    ತಿಥಿ: ಅಷ್ಟಮಿ 19:26 ವಾರ: ಭಾನುವಾರ
    ನಕ್ಷತ್ರ: ಅಶ್ವಿನಿ 11:46 ಯೋಗ: ಶೂಲ 20:09
    ಕರಣ: ಬಾಲವ 20:09 ದಿನದ ವಿಶೇಷ: ಕೊಟ್ಟೂರೇಶ್ವರ ಶಿವಯೋಗಿ ಪುಣ್ಯದಿನ

    ಸೂರ್ಯೋದಯ : 06:04   ಸೂರ್ಯಾಸ್ತ : 06:48

    ರಾಹುಕಾಲ: ಸಂಜೆ 4.30 ರಿಂದ 6.00
    ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
    ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

    ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

    Horoscope Today

    ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

    Horoscope Today

    ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

    Horoscope Today

    ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

    Horoscope Today

    ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

    Horoscope Today

    ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 8

    Horoscope Today

    ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

    ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

    Horoscope Today

    ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

    Horoscope Today

    ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

    Horoscope Today

    ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

    Horoscope Today

    ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳತೆ ಇರಲಿದೆ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

    Horoscope Today

    ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

    Horoscope Today

    ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

    Horoscope Today

    ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
    ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

    M: 9481854580 | pnaveenshastri@gmail.com

    Continue Reading

    ಪ್ರಮುಖ ಸುದ್ದಿ

    Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

    Delhi Floods: ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ಇಬ್ಬರು ವಿದ್ಯಾರ್ಥಿನಿಯರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    VISTARANEWS.COM


    on

    Delhi Floods
    Koo

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾತಾವರಣವೇ ಹಾಗೆ. ಮಳೆಗಾಲದಲ್ಲಿ ವಿಪರೀತ ಮಳೆ, ಬೇಸಿಗೆಯಲ್ಲಿ ವಿಪರೀತ ಬಿಸಿಲು ಹಾಗೂ ಚಳಿಗಾಲದಲ್ಲಿ ಮೈ ಕೊರೆಯುವ ಚಳಿ ಇರುತ್ತದೆ. ಮೂರು ಸೀಸನ್‌ಗಳು ಕೂಡ ಜನರಿಗೆ ಮಾರಣಾಂತಿಕವಾಗಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲೀಗ ಭಾರಿ ಮಳೆ (Rain In Delhi) ಸುರಿಯುತ್ತಿದೆ. ಇನ್ನು, ದೆಹಲಿಯ ಹಲವೆಡೆ ಪ್ರವಾಹದ ಸ್ಥಿತಿ (Delhi Floods) ಉಂಟಾಗಿದ್ದು, ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ (Rao IAS Coaching Institute) ನೀರು ನುಗ್ಗಿವೆ. ನೆಲಮಹಡಿ ತುಂಬ ನೀರುತ್ತಿದ್ದು, ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ವಿದ್ಯಾರ್ಥಿಯೊಬ್ಬರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.

    ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ, ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿದೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಶವ ಪತ್ತೆಯಾಗಿವೆ. ಈಗ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿದುಬಂದಿದೆ.

    ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ಇಬ್ಬರು ವಿದ್ಯಾರ್ಥಿನಿಯರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತಡರಾತ್ರಿಯಾದರೂ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    “ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೋಚಿಂಗ್‌ ಸೆಂಟರ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದೆ. ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಹೊರಬರಲು ಆಗದೆ, ಮೇಲಿನ ಮಹಡಿಗೂ ಹೋಗಲು ಆಗದೆ ನೀರಿನಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿನಿಯರ ಸಾವುಂಟಾಗಿದೆ. ಕೂಡಲೇ ಎನ್‌ಡಿಆರ್‌ಎಫ್‌ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಲೂ ಕಾರ್ಯಾಚರಣೆ ಮುಂದುವರಿದಿದೆ” ಎಂಬುದಾಗಿ ಸೆಂಟ್ರಲ್‌ ದೆಹಲಿ ಡಿಸಿಪಿ ಎಂ. ಹರ್ಷವರ್ಧನ್‌ ತಿಳಿಸಿದ್ದಾರೆ.

    ಇದನ್ನೂ ಓದಿ: Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

    Continue Reading

    ದೇಶ

    Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

    Pervez Musharraf: ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

    VISTARANEWS.COM


    on

    Pervez Musharraf
    Koo

    ತಿರುವನಂತಪುರಂ: ಭಾರತ ವಿರೋಧಿಯಾಗಿದ್ದ, 1999ರಲ್ಲಿ ಕಾರ್ಗಿಲ್‌ ಯುದ್ಧಕ್ಕೆ ಕಾರಣನಾದ, ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಛೂ ಬಿಟ್ಟು ಅಶಾಂತಿಗೆ ಕಾರಣನಾದ ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ‍್ರಫ್‌ಗೆ (Pervez Musharraf) ಕೇರಳದ ಬ್ಯಾಂಕ್‌ ಆಫ್‌ ಇಂಡಿಯಾ (BOI) ನೌಕರರ ಒಕ್ಕೂಟದಲ್ಲಿ ಗೌರವ ನಮನ ಸಲ್ಲಿಸಲು ತೀರ್ಮಾನಿಸಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜುಲೈ 27ರಂದು ಕೇರಳದ ಆಲಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಕಾರ್ಯಕ್ರಮಕ್ಕೂ ಮೊದಲೇ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.

    ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿಸಿತ್ತು. ಇದರಿಂದಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬ್ಯಾಂಕ್‌ಗಳ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ, ಒಕ್ಕೂಟವು ಗೌರವಕ್ಕೆ ಪಾತ್ರರಾಗುವವರ ಪಟ್ಟಿಯಿಂದ ಪರ್ವೇಜ್‌ ಮುಷರ‍್ರಫ್‌ ಹೆಸರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

    ಪಾಲಿ ಜಾರ್ಜ್‌ ನಗರದಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ 23ನೇ ರಾಜ್ಯ ಸಮಾವೇಶ ನಡೆದಿದೆ. ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಇದೇ ವೇಳೆ, ಕಾರ್ಗಿಲ್‌ ಯುದ್ಧದ ವಿಜಯ, ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ಅಲ್ಲದೆ, ನಟರು, ಗಾಯಕರು, ನೃತ್ಯಪಟುಗಳು, ಕ್ರೀಡಾಪಟುಗಳು, ಹೋರಾಟಗಾರರು ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

    ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದೆಲ್ಲ ಜನ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕರು ಕೂಡ ಇದನ್ನು ಖಂಡಿಸಿದ್ದಾರೆ.

    ಇದನ್ನೂ ಓದಿ: Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

    Continue Reading

    ಪ್ರಮುಖ ಸುದ್ದಿ

    Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

    Paris Olympics 2024 : ಬೆಳಗ್ಗಿನ ಅವಧಿಯಲ್ಲಿ ಭಾರತದ ಶೂಟರ್​ಗಳು ನಿರಾಸೆ ಮೂಡಿಸಿದ್ದರು. ಆದರೆ, ಸಂಜೆ ವೇಳೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆಕೊಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದರು. ಇದೀಗ ಷಟ್ಲರ್​ಗಳು ಖುಷಿ ಕೊಟ್ಟಿದ್ದಾರೆ. ರೋಯಿಂಗ್​ನಲ್ಲಿ ಪುರುಷರ ಸಿಂಗಲ್ ಸ್ಕಲ್ಸ್ ಸ್ಪರ್ಧೆಯಲ್ಲಿ​​ ಬಲರಾಜ್ ಪನ್ವಾರ್ 4ನೇ ಸ್ಥಾನಕ್ಕೇರಿದ್ದಾರೆ.

    VISTARANEWS.COM


    on

    Paris Olympics 2024
    Koo

    ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಮೊದಲ ದಿನ ಭಾರತದ ಷಟ್ಲರ್​ಗಳು ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ. ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್ ಹಾಗೂ ಡಬಲ್ಸ್​ ಜೋಡಿಯಾಗಿರು ಸಾತ್ವಿಕ್ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ತಮ್ಮ ಮೊಲದ ಪಂದ್ಯಗಳಲ್ಲಿ ಗೆಲುವು ಕಂಡಿದ್ದಾರೆ. ಇದೇ ವೇಳೆ ಟೇಬಲ್ ಟೆನಿಸ್​ನ ಪುರುಷರ ಸಿಂಗಲ್ಸ್​ನಲ್ಲಿ ಹರ್ಮೀತ್ ದೇಸಾಯಿ 64ನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಜತೆಗೆ ಹಾಕಿ ತಂಡವೂ ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿದೆ.

    ಬೆಳಗ್ಗಿನ ಅವಧಿಯಲ್ಲಿ ಭಾರತದ ಶೂಟರ್​ಗಳು ನಿರಾಸೆ ಮೂಡಿಸಿದ್ದರು. ಆದರೆ, ಸಂಜೆ ವೇಳೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆಕೊಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದರು. ಇದೀಗ ಷಟ್ಲರ್​ಗಳು ಖುಷಿ ಕೊಟ್ಟಿದ್ದಾರೆ. ರೋಯಿಂಗ್​ನಲ್ಲಿ ಪುರುಷರ ಸಿಂಗಲ್ ಸ್ಕಲ್ಸ್ ಸ್ಪರ್ಧೆಯಲ್ಲಿ​​ ಬಲರಾಜ್ ಪನ್ವಾರ್ 4ನೇ ಸ್ಥಾನಕ್ಕೇರಿದ್ದಾರೆ.

    ಬ್ಯಾಡ್ಮಿಂಟನ್​ ಸಿಂಗಲ್ಸ್ ನಲ್ಲಿ ಲಕ್ಷ್ಯ ಸೇನ್, ಗ್ವಾಟೆಮಾಲಾದ ಕೆವಿನ್ ಕಾರ್ಡನ್ ಅವರನ್ನು ನೇರ ಗೇಮ್‌ಗಳಿಂದ ಮಣಿಸಿದ್ದಾರೆ. 22ರ ಹರೆಯದ ಸೇನ್ 42 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಕಾರ್ಡನ್ ವಿರುದ್ಧ 21-8, 22-20 ಅಂತರದಲ್ಲಿ ಗೆದ್ದರು. ಅಂದ ಹಾಗೆ ಲಕ್ಷ್ಯಗೆ ಇದು ಮೊದಲ ಒಲಿಂಪಿಕ್ಸ್ ಪ್ರವೇಶ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ 2021ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದ ಸೇನ್, ಜುಲೈ 29ರಂದು ತಮ್ಮ ಎರಡನೇ ಗುಂಪು ಹಂತದ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ವಿರುದ್ಧ ಆಡಲಿದ್ದಾರೆ.

    ಡಬಲ್ಸ್​ನಲ್ಲಿ ಧಮಾಕ


    ಡಬಲ್ಸ್​​ನಲ್ಲಿ ತಮ್ಮ ಮೊದಲ ಗುಂಪು ಹಂತದ ಪಂದ್ಯದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಗೆಲುವು ಕಂಡರು. ಈ ಮುಖಾಮುಖಿಯಲ್ಲಿ ಭಾರತದ ಜೋಡಿ 21-17, 21-14ರ ನೇರ ಗೇಮ್​ಗಳಿಂದ ಗೆದ್ದರು. ಅವರು ಆತಿಥೇಯ ಫ್ರಾನ್ಸ್​ ಜೋಡಿ ಲುಕಾಸ್ ಕಾರ್ವಿ ಮತ್ತು ರೊನಾನ್ ಲ್ಯಾಬರ್ ಅವರನ್ನು ಮಣಿಸಿದರು. ಸಾತ್ವಿಕ್-ಚಿರಾಗ್ ಮುಂದಿನ ಪಂದ್ಯದಲ್ಲಿ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ – ಮಾರ್ವಿನ್ ಸೀಡೆಲ್ ವಿರುದ್ಧ ಆಡಲಿದ್ದಾರೆ.

    ಇದನ್ನೂ ಓದಿ: Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

    ಹರ್ಮಿತ್​ಗೆ ಶುಭ ಸುದ್ದಿ

    ಭಾರತದ ಟೆನಿಸ್ ಆಟಗಾರ ಹರ್ಮೀತ್ ದೇಸಾಯಿ ತಮ್ಮ ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಸಿಂಗಲ್ಸ್‌ನ ಪ್ರಾಥಮಿಕ ಮೊದಲ ಪಂದ್ಯದಲ್ಲಿ, ಜೋರ್ಡಾನ್‌ನ ಝೈದ್ ಅಬೋ ಯಮನ್‌ ಅವರನ್ನು 4-0 ಅಂತರದಿಂದ (11-7, 11-9, 11-5, 11-5) ಗೆದ್ದರು.

    Continue Reading
    Advertisement
    World Hepatitis Day
    ಆರೋಗ್ಯ17 mins ago

    World Hepatitis Day: ಏನಿದು ಹೆಪಟೈಟಿಸ್‌? ಇದು ಏಕೆ ಅಪಾಯಕಾರಿ?

    karnataka weather Forecast
    ಮಳೆ17 mins ago

    Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

    Dina bhavishya
    ಭವಿಷ್ಯ47 mins ago

    Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

    Delhi Floods
    ಪ್ರಮುಖ ಸುದ್ದಿ6 hours ago

    Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

    Paris Olympics 2024
    ಕ್ರೀಡೆ6 hours ago

    Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

    Pervez Musharraf
    ದೇಶ6 hours ago

    Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

    Paris Olympics 2024
    ಪ್ರಮುಖ ಸುದ್ದಿ6 hours ago

    Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

    Paris Olympics 2024
    ಪ್ರಮುಖ ಸುದ್ದಿ6 hours ago

    Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

    Tihar Jail
    ದೇಶ7 hours ago

    Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

    IND vs SL
    ಪ್ರಮುಖ ಸುದ್ದಿ7 hours ago

    IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka weather Forecast
    ಮಳೆ11 hours ago

    Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    ramanagara news
    ರಾಮನಗರ16 hours ago

    Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    karnataka rain
    ಮಳೆ17 hours ago

    Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

    Ankola landslide
    ಉತ್ತರ ಕನ್ನಡ1 day ago

    Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

    karnataka rain
    ಮಳೆ2 days ago

    Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

    Karnataka Rain
    ಮಳೆ2 days ago

    Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

    Karnataka rain
    ಮಳೆ2 days ago

    Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

    karnataka Rain
    ಮಳೆ3 days ago

    Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

    Actor Darshan
    ಸ್ಯಾಂಡಲ್ ವುಡ್3 days ago

    Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

    Actor Darshan
    ಸಿನಿಮಾ3 days ago

    Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

    ಟ್ರೆಂಡಿಂಗ್‌