Accident | ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ಮೂವರ ಸಾವು - Vistara News

ಕ್ರೈಂ

Accident | ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ಮೂವರ ಸಾವು

VISTARANEWS.COM


on

accident
ಶಿವಮೊಗ್ಗದಲ್ಲಿ ಕಾರಿಗೆ ಡಿಕ್ಕಿಯಾದ ಬೈಕ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪ ಭಾನುವಾರ ರಾತ್ರಿ ಕಾರು ಮತ್ತು ಬೈಕ್‌ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident ) ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಶಿರಾಳಕೊಪ್ಪ ಸಮೀಪದ ಮಂಚಿನಕೊಪ್ಪದಲ್ಲಿ ಈ ಅಪಘಾತ ಸಂಭವಿಸಿದ್ದು, ಸಮೀಪದ ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತಪಟ್ಟಿದ್ದಾರೆ.

ಮಂಚಿಕೊಪ್ಪ-ಮುತ್ತಿಗಿ ಗ್ರಾಮಗಳ ಮಧ್ಯೆ ಅಪಘಾತ ಸಂಭವಿಸಿತು. ಮಲ್ಲಿಕಾರ್ಜನ ಅವರು, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಜತೆ ಬೈಕಿನಲ್ಲಿ ತೆರಳುತ್ತಿದ್ದರು. ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು.

ಆಗ ಮತ್ತೊಂದು ಕಾರು ಹಿರೇಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು. ಆದರೆ ಕಾರು, ಬೈಕು ಡಿಕ್ಕಿಯಾಗಿ ಅಪಘಾತ ಸಂಭವಿಸಿತು. ಗಂಭೀರ ಗಾಯಗೊಂಡಿರುವ ಮಲ್ಲಿಕಾರ್ಜುನ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

Theft case : ರಾತ್ರೋರಾತ್ರಿ ಪೊಲೀಸ್‌ವೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದಿದ್ದಾರೆ. ಕಳ್ಳರು ಇರುವಾಗಲೇ ಮನೆ ಮಾಲೀಕರು ಬಂದಾಗ ಚಾಕು ಚೂರಿ ತೋರಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

By

theft case
Koo

ಮೈಸೂರು: ತಡರಾತ್ರಿ ಮನೆ ಬೀಗ ಮುರಿದ ಕಳ್ಳರು (theft Case) ತಮ್ಮ ಕೈ ಚಳಕ ತೋರಿಸಿದ್ದಾರೆ. ಮೈಸೂರಿನ ಜೆ.ಪಿ ನಗರದ ಎರಡನೇ ಹಂತದಲ್ಲಿ ಘಟನೆ ನಡೆದಿದೆ. ಪೊಲೀಸರ ಮನೆಗೆ ನುಗ್ಗಿದ ಕಳ್ಳರು ಸಿನಿಮೀಯ ರೀತಿಯಲ್ಲಿ ಕದಿಯಲು ಮುಂದಾಗಿದ್ದರು. ಆದರೆ ಅವರ ಟೈಂ ಕೈಕೊಟ್ಟಿತ್ತು ಕಳ್ಳರು ಮನೆಯಲ್ಲಿರುವಾಗಲೇ ಮಾಲೀಕರು ಮನೆಗೆ ವಾಪಸ್‌ ಆಗಿದ್ದರು.

ಮನೆ ಮಾಲೀಕರನ್ನು ಕಂಡು ಗಾಬರಿಗೊಂಡ ಕಳ್ಳರು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಂದಿಗೆಲ್ಲ ಚಾಕು ತೋರಿಸಿ ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್‌ಗಳನ್ನು ಬಿಟ್ಟು ಓಡಿಹೋಗಿದ್ದಾರೆ.

ಕಳ್ಳರು ಓಡಿ ಹೋದ ಬಳಿಕ ಮನೆಯೊಳಗೆ ತೆರಳಿ ನೋಡಿದಾಗ 135 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡಸಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ಚಳ್ಳಕೆರೆ ಪೊಲೀಸರ ವಿರುದ್ಧವೇ ದೂರು ಕೊಟ್ಟ ಯುವಕ

ಯುವಕನೊಬ್ಬ ಚಳ್ಳಕೆರೆ ಪೊಲೀಸರ ವಿರುದ್ಧ ದೂರು ಕೊಟ್ಟಿದ್ದಾನೆ. ಚಿತ್ರದುರ್ಗದ ಚಳ್ಳಕೆರೆ ಡಿವೈಎಸ್‌ಪಿ ರಾಜಣ್ಣ ಅವರಿಗೆ ಪೃಥ್ವಿ ಎಂಬಾತ ದೂರು ನೀಡಿದ್ದಾನೆ. ದೂರಿನ ಪ್ರಕಾರ ಪೃಥ್ವಿ ಪ್ರವಾಸಕೆಂದು ಹೋದಾಗ ಆತನ ಫೋನ್‌ ಸ್ವಿಚ್ಡ್‌ ಆಫ್‌ ಆಗಿತ್ತು. ಇದರಿಂದ ಗಾಬರಿಗೊಂಡ ಪೃಥ್ವಿ ತಾಯಿಈ ಸಂಬಂಧ ದೂರು ನೀಡಲು ಹೋದಾಗ ಚಳ್ಳೇಕರೆ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳಿಸಿದ್ದಾರೆ.

ಇತ್ತ ಪೃಥ್ವಿ ಪ್ರವಾಸದಿಂದ ವಾಪಸ್‌ ಬಂದಾಗ ಠಾಣೆಯಲ್ಲಿ ನಡೆದದ್ದನ್ನು ಹೇಳಿದ್ದಾರೆ. ಹೀಗಾಗಿ ಪೃಥ್ವಿ ತನ್ನ ತಾಯಿ ಜತೆಗೆ ವಾಪಸ್‌ ಚಳ್ಳಕೆರೆ ಠಾಣೆಗೆ ತೆರಳಿ, ದೂರು ಸ್ವೀಕರಿಸದ ಸಂಬಂಧ ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು ಪೃಥ್ವಿ ಮೇಲೆ ಹಲ್ಲೆ ನಡೆಸಿದ್ದಲ್ಲದೇ ತಾಯಿ ಮುಂದೆಯೇ ಅವಾಚ್ಯವಾಗಿ ನಿಂದಿಸಿದ್ದಾರೆ. ಪೊಲೀಸರ ನಡೆಯನ್ನು ರೆಕಾರ್ಡ್‌ ಮಾಡಿಕೊಂಡಿದ್ದಕ್ಕೆ ಮೊಬೈಲ್ ಕಸಿದು, ವಿಡಿಯೋ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಕಸಿದು ಸಾಕ್ಷ್ಯವನ್ನು ನಾಶ ಮಾಡಿದವರ‌ ಮೇಲೆ‌ ಕ್ರಮ ಕೈಗೊಳ್ಳಿ ಎಂದು ಡಿವೈಎಸ್‌ಪಿ ಪೃಥ್ವಿ ದೂರು ನೀಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Sexual Harassment : ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Sexual Harassment: ವಿದ್ಯಾರ್ಥಿಯೊಬ್ಬ ಸ್ವೀಮಿಂಗ್ ಕ್ಲಾಸ್‌ಗೆ ಮುಗಿಸಿ ರಾತ್ರಿ 9.45ರ ಸುಮಾರಿಗೆ ಆಟೋರಿಕ್ಷಾದಲ್ಲಿ ಒಬ್ಬಂಟಿಯಾಗಿ ಮನೆಗೆ ಹಿಂದಿರುಗುತ್ತಿದ್ದಾಗ, ಆಟೋ ಚಾಲಕ ವಿಟಾವಾ ಪೆಟ್ರೋಲ್ ಪಂಪ್ ಬಳಿ ವಾಹನವನ್ನು ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅವನ ಈ ದುಷ್ಕೃತ್ಯ ಹುಡುಗನಿಗೆ ಆಘಾತವನ್ನುಂಟುಮಾಡಿದೆ. ನಂತರ ಅವನು ಅದರ ಬಗ್ಗೆ ತನ್ನ ಹೆತ್ತವರಿಗೆ ತಿಳಿಸಿದ್ದಾನೆ. ನಂತರ ಅವರೆಲ್ಲರೂ ಪೊಲೀಸರನ್ನು ಸಂಪರ್ಕಿಸಿ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ.

VISTARANEWS.COM


on

Sexual Harassment
Koo


ಮುಂಬೈ: ಯುವತಿಯರು, ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣಗಳು ಕೇಳಿಬರುತ್ತಿತ್ತು. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಆದರೆ ಈಗ ಅವರು ಬಾಲಕರ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ 13 ವರ್ಷದ ಅಪ್ರಾಪ್ತ ಬಾಲಕನೊಬ್ಬನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ (Sexual Harassment )ನೀಡಿದ ಘಟನೆ ಮಹಾರಾಷ್ಟ್ರದ ನವೀ ಮುಂಬೈನಲ್ಲಿ ನಡೆದಿದೆ. ಆತನ ವಿರುದ್ಧ ಮಹಾರಾಷ್ಟ್ರದ ನವೀ ಮುಂಬೈನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಂಬೈನ ಮುಲುಂಡ್ ನಲ್ಲಿ ವಾಸಿಸುವ 9 ನೇ ತರಗತಿ ವಿದ್ಯಾರ್ಥಿ ತನ್ನ ಸ್ವೀಮಿಂಗ್ ಕ್ಲಾಸ್‍ಗೆ ಹಾಜರಾಗಲು ಕಲ್ವಾಗೆ ಭೇಟಿ ನೀಡಿದ್ದನು. ನಂತರ ರಾತ್ರಿ 9.45 ರ ಸುಮಾರಿಗೆ ಆಟೋರಿಕ್ಷಾದಲ್ಲಿ ಒಬ್ಬಂಟಿಯಾಗಿ ಮನೆಗೆ ಹಿಂದಿರುಗುತ್ತಿದ್ದಾಗ, ಆಟೋ ಚಾಲಕ ವಿಟಾವಾ ಪೆಟ್ರೋಲ್ ಪಂಪ್ ಬಳಿ ವಾಹನವನ್ನು ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅವನ ಈ ದುಷ್ಕೃತ್ಯ ಹುಡುಗನಿಗೆ ಆಘಾತವನ್ನುಂಟುಮಾಡಿದೆ. ನಂತರ ಅವನು ಅದರ ಬಗ್ಗೆ ತನ್ನ ಹೆತ್ತವರಿಗೆ ತಿಳಿಸಿದ್ದಾನೆ. ನಂತರ ಅವರೆಲ್ಲರೂ ಪೊಲೀಸರನ್ನು ಸಂಪರ್ಕಿಸಿ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ನವೀ ಮುಂಬೈನ ಪೊಲೀಸರು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದು, ಚಾಲಕನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ ಈ ವರ್ಷದ ಜೂನ್ ತಿಂಗಳ ಕೊನೆಯಲ್ಲಿ 25 ವರ್ಷದ ರಿಕ್ಷಾ ಚಾಲಕ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಆರೋಪಿಯನ್ನು ಕಂಡಿವಲಿ (ಪೂರ್ವ) ನಿವಾಸಿ ರೋಹಿತ್ ಭೋಸಲೆ (25) ಎಂದು ಗುರುತಿಸಲಾಗಿದೆ. ಪೊಲೀಸ್ ದೂರಿನ ಪ್ರಕಾರ, ದೂರುದಾರ ಬಾಲಕಿ ಶುಕ್ರವಾರ ಮಧ್ಯಾಹ್ನ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಆರೋಪಿ ಆಟೋ ಚಾಲಕ ತನ್ನ ವಾಹನವನ್ನು ಆಕೆಯ ಹತ್ತಿರದಿಂದ ಓಡಿಸಿ, ಹುಡುಗಿಯನ್ನು ತಳ್ಳಿದ್ದಾನೆ.

ಇದನ್ನೂ ಓದಿ: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

ಅಲ್ಲದೇ ಖಾಂಡಿವಲಿ ಪೂರ್ವದ ಎವರ್ ಶೈನ್ ಕ್ರೌನ್ ಕಟ್ಟಡದ ಮುಂದೆ ಆತ ತನ್ನ ರಿಕ್ಷಾವನ್ನು ಸಂತ್ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಆಕೆಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಾಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಚಿಕ್ಕೋಡಿ

Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

Assault Case : ಠಾಣೆಗೆ ಬಂದ ಮಹಿಳೆಗೆ ಪಿಎಸ್‌ಐವೊಬ್ಬರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಮಹಿಳೆಯ ಹೊಟ್ಟೆಗೆ ಜಾಡಿಸಿ ಒದ್ದು ನರಳಾಡುವಂತೆ ಮಾಡಿದ್ದಾರೆ. ಸದ್ಯ ಮಹಿಳೆಯನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

By

Assault case
Koo

ಚಿಕ್ಕೋಡಿ: ಮಹಿಳೆಯೊಬ್ಬರು ವ್ಯಾಜ್ಯದ ಸಲುವಾಗಿ ಪೊಲೀಸ್‌ ಠಾಣೆಗೆ ತೆರಳಿದ್ದರು. ಈ ವೇಳೆ ಮಹಿಳಾ ಪಿಎಸ್‌ಐ ಜಾಡಿಸಿ ಒದ್ದು ಹಲ್ಲೆ (Assault Case) ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಖಡಕಲಾಟ ಠಾಣೆಯಲ್ಲಿ ಘಟನೆ ನಡೆದಿದೆ. ಮಹಿಳಾ ಪಿಎಸ್‌ಐ ಅನಿತಾ ರಾಠೋಡ ಎಂಬುವವರು ಮಹಿಳೆಯ ಹೊಟ್ಟೆಗೆ ಜಾಡಿಸಿ ಒದ್ದಿದ್ದಾರೆ. ನಿರ್ದಯಿ ಪೊಲೀಸ್ ಅಧಿಕಾರಿಯಿಂದ ಮಹಿಳೆಯ ಮೇಲೆ ಹಲ್ಲೆಗೆ ಕುಟುಂಬಸ್ಥರು ಕಿಡಿಕಾರಿದ್ದಾರೆ.

ಪೂನಂ ಮಾಯಣ್ಣವರ ಎಂಬಾಕೆ ಅಣ್ಣ-ತಮ್ಮಂದಿರ ವ್ಯಾಜ್ಯದ ಸಲುವಾಗಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಖಡಕಲಾಟ ಪಿಎಸ್‌ಐ ಅನಿತಾ ರಾಠೋಡ ಪೂನಂ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರ ಅಸ್ವಸ್ಥಳಾಗಿದ್ದ ಪೂನಂ ಮಾಯಣ್ಣಳನ್ನು ಕುಟುಂಬಸ್ಥರು ಕೂಡಲೇ ನಿಪ್ಪಾಣಿ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಪೂನಂ ನರಳಾಡುತ್ತಿದ್ದು, ಪಿಎಸ್‌ಐ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಷ್ಟಕ್ಕೂ ಠಾಣೆಗೆ ಬಂದ ಮಹಿಳೆಗೆ ಪಿಎಸ್‌ಐ ಅನಿತಾ ಹಲ್ಲೆ ಮಾಡಿದ್ದು ಯಾಕೆ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

ಕೈ ಕಟ್‌ ಮಾಡಿದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ (Rowdysheeters) ಮೇಲೆ ಕನಕಪುರ ನಗರ ಪೊಲೀಸರು (Kanakapura Police) ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ವ್ಯಕ್ತಿಯೊಬ್ಬನ ಕೈ ಕತ್ತರಿಸಿ (Assault Case) ಪರಾರಿಯಾಗಿದ್ದ ರೌಡಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಕನಕಪುರ ಟೌನ್ ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್ಐ ಮನೋಹರ್ ಅವರಿಂದ ಫೈರಿಂಗ್ ನಡೆದಿದೆ. ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಗಾಯಗೊಂಡ ರೌಡಿಶೀಟರ್‌ಗಳು. ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಪೊಲೀಸರಿಂದ ಫೈರಿಂಗ್ ನಡೆದಿದೆ.

ಕಳೆದ ವಾರ ಕನಕಪುರದ ಮಾಳಗಾಳು ಬಡಾವಣೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಒಬ್ಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೈ ಕಟ್ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಂತೆ ದಲಿತ‌‌ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇಂದು ಮುಂಜಾನೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಈ ರೌಡಿಗಳು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಅವರನ್ನು ಬಂಧಿಸಿದ್ದಾರೆ. ಹಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಎಂಬವರಿಗೂ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.

ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

ರಾಯಚೂರು: ವಿಚ್ಛೇದಿತ ನರ್ಸ್‌ ಒಬ್ಬಾಕೆಯೊಂದಿಗೆ ಲವ್ವಿ ಡವ್ವಿ (Illicit Relationship) ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ (Police constable) ಒಬ್ಬಾತನಿಗೆ ಆತನ ಪತ್ನಿ ಕಾನೂನು ಅಸ್ತ್ರದ ಮೂಲಕ ಪಾಠ ಕಲಿಸಲು ಮುಂದಾಗಿದ್ದಾರೆ. ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. ರಾಜ್ ಮಹಮ್ಮದ್ ಮತ್ತು ಪ್ಯಾರಿ‌ ಬೇಗಂ ಪ್ರೀತಿಸಿ ಮದುವೆಯಾದವರು. ಆದರೆ ಇತ್ತೀಚೆಗೆ ರಾಜ್‌ ಮಹಮ್ಮದ್‌ ಇನ್ನೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ.

ಕವಿತಾ ಆಸ್ಪತ್ರೆ ನರ್ಸ್ ಸರಳ ಎಂಬಾಕೆಯ ಜೊತೆ ಸುಮಾರು 4-5 ವರ್ಷಗಳಿಂದ ವಿವಾಹೇತರ ಸಂಬಂಧ ನಡೆಸಿದ್ದ. ಇವರಿಬ್ಬರನ್ನೂ ಮನೆಯೊಂದರಲ್ಲಿ ರೆಡ್ ಹ್ಯಾಂಡ್ ಆಗಿ ಪ್ಯಾರಿ ಬೇಗಂ ಹಿಡಿದಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿ ಪತಿ ವಿರುದ್ಧವೇ ಎಸ್ಪಿಗೆ ದೂರು ನೀಡಿದ್ದಾರೆ. ಎಸ್‌ಪಿಯನ್ನು ಭೇಟಿ ಮಾಡಿ, ‌ಬಳಿಕ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ ಮಹಮ್ಮದ್, ರಿಜಿಯಾ ಬೇಗಂ, ಮೈಬೂಬ್ ಮತ್ತು ಸ್ಟಾಫ್ ನರ್ಸ್ ಸರಳ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗರ್ಭಪಾತ, ವರದಕ್ಷಿಣೆ ಕಿರುಕುಳ (Dowry harassment), ಕೊಲೆ ಯತ್ನ (Murder attempt) ಸೇರಿದಂತೆ ಹಲವು ಆರೋಪಗಳನ್ನು ಗಂಡನ ವಿರುದ್ಧ ಪ್ಯಾರಿ ಬೇಗಂ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Valmiki Corporation Scam: 10 ಕೆಜಿ ಚಿನ್ನದ ಗಟ್ಟಿ ಮನೆಯಲ್ಲಿಟ್ಟಿದ್ದ ವಾಲ್ಮೀಕಿ ನಿಗಮ ಹಗರಣದ ಆರೋಪಿ! ಇನ್ನೂ 5 ಕಿಲೋ ಗಾಯಬ್

Valmiki Corporation Scam: ಆರೋಪಿಯು ಹೈದರಾಬಾದ್‌ನ ಫ್ಲಾಟ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಆರೋಪಿ ಸತ್ಯನಾರಾಯಣ ವರ್ಮಾ ವಾಲೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 15 ಕೆಜಿ ಚಿನ್ನದ ಬಿಸ್ಕೆಟ್‌ಗಳ ಬಗ್ಗೆ ಬಾಯಿ ಬಿಟ್ಟಿದ್ದು, ಅದರಂತೆ ಹೈದ್ರಾಬಾದ್‌ನ ತನ್ನ ಫ್ಲಾಟ್‌ನಲ್ಲಿ 10 ಕೆಜಿ ಚಿನ್ನದ ಗಟ್ಟಿ ಇಟ್ಟಿರುವುದಾಗಿ ಹೇಳಿದ್ದ.

VISTARANEWS.COM


on

valmiki corporation scam satyanarayana varma
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ (Valmiki Corporation Scam) ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ (CID) ಹಾಗೂ ಎಸ್‌‍ಐಟಿ (SIT) ಅಧಿಕಾರಿಗಳು, ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಅಡಗಿಸಿಟ್ಟಿದ್ದ ಬರೋಬ್ಬರಿ 10 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು (Gold Biscuits) ವಶಕ್ಕೆ ಪಡೆದಿದೆ.

ಆರೋಪಿಯು ಹೈದರಾಬಾದ್‌ನ ಫ್ಲಾಟ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಆರೋಪಿ ಸತ್ಯನಾರಾಯಣ ವರ್ಮಾ ವಾಲೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 15 ಕೆಜಿ ಚಿನ್ನದ ಬಿಸ್ಕೆಟ್‌ಗಳ ಬಗ್ಗೆ ಬಾಯಿ ಬಿಟ್ಟಿದ್ದು, ಅದರಂತೆ ಹೈದ್ರಾಬಾದ್‌ನ ತನ್ನ ಫ್ಲಾಟ್‌ನಲ್ಲಿ 10 ಕೆಜಿ ಚಿನ್ನದ ಗಟ್ಟಿ ಇಟ್ಟಿರುವುದಾಗಿ ಹೇಳಿದ್ದ.

ಇದೀಗ ಎಸ್‌‍ಐಟಿ ತನಿಖಾ ತಂಡ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದು ಉಳಿದ 5 ಕೆಜಿ ಚಿನ್ನದ ಬಿಸ್ಕೆಟ್‌ಗಾಗಿ ಶೋಧ ನಡೆಸುತ್ತಿದೆ. ಒಟ್ಟಾರೆ ವಾಲೀಕಿ ನಿಗಮದ ಹಣದಿಂದ ಸತ್ಯನಾರಾಯಣ ವರ್ಮಾ ಬರೋಬ್ಬರಿ 35 ಕೆಜಿ ಚಿನ್ನದ ಬಿಸ್ಕೆಟ್‌ ಖರೀದಿ ಮಾಡಿರುವ ಮಾಹಿತಿಯನ್ನು ತನಿಖಾ ತಂಡ ಕಲೆ ಹಾಕಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸತ್ಯನಾರಾಯಣ ವರ್ಮಾ ನಾಪತ್ತೆಯಾಗಿದ್ದ. ಎಸ್‌‍ಐಟಿ ತಂಡ ಸತತ ಒಂದು ವಾರ ಕಾಲ ಹುಡುಕಾಟ ನಡೆಸಿದ್ದರಾದರೂ ಪತ್ತೆಯಾಗಿರಲಿಲ್ಲ.

ತದನಂತರ ವರ್ಮಾ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ಹೈದ್ರಾಬಾದ್‌ನಲ್ಲಿರುವುದು ಗೊತ್ತಾಗಿತ್ತು. ತಕ್ಷಣ ತನಿಖಾ ತಂಡ ಹೈದರಾಬಾದ್‌ಗೆ ತೆರಳಿ ಈತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ನಗರಕ್ಕೆ ಕರೆತಂದು ತೀವ್ರ ವಿಚಾರಣೆಗೊಳಪಡಿಸಿದಾಗ ಹಣ ಹಾಗೂ ಚಿನ್ನದ ಬಗ್ಗೆ ತಿಳಿಸಿದ್ದ. ಸತ್ಯನಾರಾಯಣ ವರ್ಮಾ ಬಂಧನಕ್ಕೊಳಗಾಗುವ ವೇಳೆಗಾಗಲೇ ಹಣ, ಚಿನ್ನವನ್ನು ಬೇರೆಬೇರೆ ಕಡೆಗೆ ಸಾಗಿಸಿದ್ದ. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹಣ ಹಾಗೂ ಫ್ಲಾಟ್‌ ಖರೀದಿ ಬಗ್ಗೆ ಸತ್ಯನಾರಾಯಣ ವರ್ಮಾ ಬಾಯ್ಬಿಟ್ಟಿದ್ದ.

ತದನಂತರ ನ್ಯಾಯಾಲಯದಿಂದ ಸರ್ಚ್‌ ವಾರೆಂಟ್‌ ಪಡೆದು ಎಸ್‌‍ಐಟಿ ತಂಡ ಹೈದ್ರಾಬಾದ್‌ಗೆ ತೆರಳಿ ವರ್ಮಾಗೆ ಸೇರಿದ ಫ್ಲಾಟ್‌ ಶೋಧ ನಡೆಸಿತ್ತು. ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. ಹೈದರಾಬಾದ್‌ನ ಸೀಮಾಪೇಟೆ, ಮೀಯಾಪುರದಲ್ಲಿ ವಾಸವಿ ಬಿಲ್ಡರ್ಸ್‌ನಲ್ಲಿ ತಲಾ 2 ಫ್ಲಾಟ್‌ ಸೇರಿ ಬರೋಬ್ಬರಿ 11 ಫ್ಲಾಟ್‌ ಖರೀದಿಸಿರುವ ಬಗ್ಗೆ ಎಸ್‌‍ಐಟಿಗೆ ಮಾಹಿತಿ ಲಭ್ಯವಾಗಿದೆ.

ವಾಲ್ಮೀಕಿ ನಿಗಮ ಹಗರಣ; ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌!

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಕೇಸ್‌ (Valmiki Corporation Scam)ನಲ್ಲಿ ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಮೂಲಕ ಕೇಂದ್ರ ತನಿಖಾ ಸಂಸ್ಥೆ ಜತೆ ರಾಜ್ಯ ಸರ್ಕಾರ ನೇರ ಸಂಘರ್ಷಕ್ಕೆ ಇಳಿಯಿತಾ ಎನ್ನುವ ಪ್ರಶ್ನೆ ಮೂಡಿದೆ. ಮಾಜಿ ಸಚಿವ ಬಿ.ನಾಗೇಂದ್ರ (B Nagendra) ಹೆಸರು ಹೇಳುವಂತೆ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಲಾಗಿದೆ ಎಂಬ ಆರೋಪದಲ್ಲಿ ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್ ಬಿ. ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧನವಾಗಿರುವ ಮಾಜಿ ಸಚಿವ ನಾಗೇಂದ್ರ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ನಿಗಮದ ಈ ಹಿಂದಿನ ಎಂಡಿ ಕಲ್ಲೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇಡಿ ಕಚೇರಿ ಶಾಂತಿನಗರದಲ್ಲಿ ಇರುವುದರಿಂದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬಿಎನ್‌ಎಸ್‌ ಕಾಯ್ದೆಯಡಿ ಕೇಸ್

ಸೆಕ್ಷನ್ 3(5), 351(2), 352ರಡಿ (ಕ್ರಿಮಿನಲ್ ಬೆದರಿಕೆ ಮತ್ತು ಶಾಂತಿ ಹದಗೆಡಿಸುವ ಉದ್ದೇಶದಿಂದ ಅವಮಾನ ಆರೋಪ) ಎಫ್‌ಐಆರ್‌ ದಾಖಲಿಸಿಕೊಂಡಿರುವ ವಿಲ್ಸನ್ ಗಾರ್ಡನ್ ಪೊಲೀಸರು ಇಡಿ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ಆರೋಪಗಳ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಿದ್ದಾರೆ. ಸದ್ಯ ಮುಂದಿನ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳ ಪೊಲೀಸರು ಚರ್ಚಿಸುತ್ತಿದ್ದಾರೆ.

ಇದನ್ನೂ ಓದಿ: TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

Continue Reading
Advertisement
Indo-Pak Romance
ವೈರಲ್ ನ್ಯೂಸ್4 mins ago

ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Dog Meat Controversy
ಕರ್ನಾಟಕ9 mins ago

Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Actor Dhanush new poster from Kubera unveiled on his birthday
ಟಾಲಿವುಡ್18 mins ago

Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

theft case
ಮೈಸೂರು34 mins ago

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

CH Vijayashankar2
ಪ್ರಮುಖ ಸುದ್ದಿ39 mins ago

CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್

Paris 2024 Shooting
ಕ್ರೀಡೆ50 mins ago

Paris 2024 Shooting: ಶೂಟಿಂಗ್​ನಲ್ಲಿ ಫೈನಲ್​ ಪ್ರವೇಶಿಸಿದ ರಮಿತಾ ಜಿಂದಾಲ್; ಭಾರತಕ್ಕೆ 2 ಪದಕ ನಿರೀಕ್ಷೆ

Ranveer Singh up for new film directed by Aditya Dhar
ಬಾಲಿವುಡ್50 mins ago

Ranveer Singh:‌ ಒಂದೇ ಸಿನಿಮಾದಲ್ಲಿ ಬಾಲಿವುಡ್‌ನ ಐದು ಸ್ಟಾರ್ಸ್; ರಣವೀರ್ ಸಿಂಗ್ ಹೊಸ ಸಿನಿಮಾ ಅನೌನ್ಸ್!

DK Shivakumar
ಕರ್ನಾಟಕ1 hour ago

DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

Israel Palestine War
ವಿದೇಶ2 hours ago

Israel Palestine War: ಹಿಜ್ಬುಲ್ಲಾ ದಾಳಿಗೆ 12 ಮಂದಿ ಸಾವು; ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ

hd kumaraswamy muda
ಪ್ರಮುಖ ಸುದ್ದಿ2 hours ago

HD Kumaraswamy: ನಾನು ಮುಡಾದಿಂದ ನಿವೇಶನ ಪಡೆದಿಲ್ಲ, ಸಿಗದಿದ್ದುದೇ ನನ್ನ ಭಾಗ್ಯ: ಎಚ್‌ಡಿ ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ21 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಟ್ರೆಂಡಿಂಗ್‌