Murder revenge | ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ; ಸಂಬಂಧಿಕರಿಂದ ಆರೋಪಿಯ ಮಾವನ ಮನೆಗೆ ಬೆಂಕಿ - Vistara News

ಕೋಲಾರ

Murder revenge | ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ; ಸಂಬಂಧಿಕರಿಂದ ಆರೋಪಿಯ ಮಾವನ ಮನೆಗೆ ಬೆಂಕಿ

ನ್ಯಾಯ ಪಂಚಾಯತಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಹೀಗಾಗಿ ಮೃತರ ಸಂಬಂಧಿಕರು ಆಕ್ರೋಶಗೊಂಡು ಮನೆಗೆ ಬೆಂಕಿ ಹಚ್ಚಿದ್ದಾರೆ.

VISTARANEWS.COM


on

ಕೊಲೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಕೊಲೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು ಆರೋಪಿಯ ಮಾವನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕರಿಪಲ್ಲಿ ಗ್ರಾಮದಲ್ಲಿ ನಡೆದಿದೆ.

ವೆಂಕಟರವಣಪ್ಪ (55) ಕೊಲೆಯಾದ ವ್ಯಕ್ತಿ. ಭಾನುವಾರ ನ್ಯಾಯ ಪಂಚಾಯತಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ವೆಂಕಟರವಣಪ್ಪನನ್ನು ಗಣೇಶ್ ಹಾಗೂ ಸಹಚರರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು, ಆರೋಪಿ ಗಣೇಶನ ಮಾವ ಲಚ್ಚನ್ನ ಮನೆಗೆ ಬೆಂಕಿ ಹಚ್ಚಿದ್ದಾರೆ.

ಅವಘಡದಲಿ ಮನೆಯಲ್ಲಿದ್ದ ಟಿವಿ, ಬಟ್ಟೆಗಳು, ಪೀಠೋಪಕರಣ, ದ್ವಿಚಕ್ರ ವಾಹನ ಸೇರಿ ವಿವಿಧ ಸಾಮಗ್ರಿ ಭಸ್ಮವಾಗಿವೆ. ಸ್ಥಳಕ್ಕೆ ಕೋಲಾರ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ರಕ್ತದ ಮಾದರಿ ಪಡೆಯುವಾಗ ನವಜಾತ ಶಿಶು ಸಾವು; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋಲಾರ

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

BEML Factory KGF: ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

VISTARANEWS.COM


on

beml factory kgf
Koo

ಕೋಲಾರ: ಬೆಮೆಲ್ ಕಾರ್ಖಾನೆಯ (BEML Factory KGF) ನೇಮಕಾತಿಯಲ್ಲಿ (Employments) ಸ್ಥಳೀಯರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸಾವಿರಾರು ಕನ್ನಡಿಗ ಕಾರ್ಮಿಕರು (labourers) ಧರಣಿ ಪ್ರತಿಭಟನೆ (Workers protest) ನಡೆಸಿದ್ದಾರೆ. ಸುಮಾರು 2500 ಕಾರ್ಮಿಕರಿಂದ ಪ್ರತಿಭಟನೆ ಮುಂದುವರಿದಿದೆ.

ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

ಕಾಂಟ್ರಾಕ್ಟ್ ಆಪರೇಟರ್ಸ್ ಸೇರಿ ವಿವಿಧ ಗುತ್ತಿಗೆ ನೌಕರರಿಂದ ಪ್ರತಿಭಟನೆ ನಡೆಯುತ್ತಿದೆ. ಬೆಮೆಲ್ ಕಾರ್ಖಾನೆ ಎದುರು ಜಮಾಯಿಸಿರುವ ಸೆಕೆಂಡ್ ಶಿಫ್ಟ್ ಹಾಗೂ ರಾತ್ರಿ ಪಾಳಯದ ನೌಕರರು, ಕೆಲಸಕ್ಕೆ ಹೋಗದೆ ಮುಷ್ಕರ ನಡೆಸಿದ್ದಾರೆ. ಆಡಳಿತ ಮಂಡಳಿ ನೌಕರರ ಮನವೊಲಿಸಲು‌ ಮುಂದಾಗಿದೆ. ಕೆಜಿಎಫ್ ಪೊಲೀಸರಿಂದ ಸಂಸ್ಥೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು ಸ್ಥಳದಲ್ಲಿ ನಾಲ್ಕು ಡಿಎಆರ್ ವ್ಯಾನ್, ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ.

ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Tomato Price: ದಿಢೀರ್‌ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಭಾನುವಾರವೂ (Rain News) ಮುಂದುವರಿಯಲಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯು (Karnataka Weather Forecast) ಜನರ ನಿದ್ದೆಗೆಡಿಸಿದೆ. ಅದರಲ್ಲೂ ನದಿ ಪಾತ್ರದ ಜನರು ಗಂಟುಮೂಟೆ ಕಟ್ಟಿಕೊಂಡು ಮನೆ ಖಾಲಿ ಮಾಡಿದ್ದಾರೆ. ಸದ್ಯ ಭಾನುವಾರವೂ ಗಾಳಿ ಜತೆಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಬೆಂಗಳೂರಿನಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಉಡುಪಿ, ಬೀದರ್,ಕಲಬುರಗಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಶನಿವಾರ ಹಲವಡೆ ಸುರಿದ ಮಳೆಯು (Rain News) ಸಾವು-ನೋವಿಗೆ ಕಾರಣವಾಗಿದೆ. ಭಾನುವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಾಳಿ ಜತೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದೆಡೆ ಗಾಳಿ ಜತೆಗೆ ಮಳೆಯಾಗಲಿದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಮುತ್ತತ್ತಿಗೆ ಪ್ರವಾಸಿಗರ ನಿಷೇಧ

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ (Heart attack) ಮನೆ ಯಜಮಾನ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಿನ್ನೆ ಶನಿವಾರ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ (80) ಎಂಬುವವರು ಅಘಾತಕ್ಕೆ ಒಳಗಾಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇತ್ತ ದಶರಥ ಕುಟುಂಬಸ್ಥರು ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆಯೇ ಮುಳುಗಿ ಹೋಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿ ನಿವಾಸಿ‌ ಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಮಕ್ಕಳು, ನಾಯಿ ಮರಿಗಳ ಜತೆಗೆ ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮನೆ ಯಜಮಾನ ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಕಂಗಲಾಗಿದ್ದಾರೆ.

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ ಸಾವು

ಅಪರಿಚಿತ ವೃದ್ಧೆ ಕುಮದ್ವತಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಬಸ್‌ ಚಾಲಕ ನದಿಗೆ ಹಾರಿದ್ದರು. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ನದಿಗೆ ಬಿದ್ದ ಅಪರಿಚಿತ ವೃದ್ಧೆ ಕಂಡು ಜೀವ ಉಳಿಸಲು ಮುಂದಾದರು. ಆದರೆ ಉಸಿರಾಟದ ತೊಂದರೆಯಿಂದ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಜೀವದ ಹಂಗು ತೊರೆದು ವೃದ್ದೆ ಕಾಪಾಡಲು ಮುಂದಾದ ಚಾಲಕ ಮಜೀದ್ ಸಾಬ್ ಗುಬ್ಬಿ ಅವರ ಪ್ರಯತ್ನ ವಿಫಲವಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

ಪ್ರವಾಹ ಭೀತಿ 10ಕ್ಕೂ ಹೆಚ್ಚು ಗರ್ಭಿಣಿಯರ ಸ್ಥಳಾಂತರ

ರಾಯಚೂರಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಗರ್ಭಿಣಿಯರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಆಂಬ್ಯುಲೆನ್ಸ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕಡದರಗಡ್ಡಿ, ಮ್ಯಾದರಗಡ್ಡಿ, ಹಂಚಿನಾಳ, ಯರಗೋಡಿ, ವಕ್ಕಂಗಡ್ಡಿ ಸೇರಿದಂತೆ ಇನ್ನಿತರ ನಡುಗಡ್ಡೆ ಗ್ರಾಮಗಳಲ್ಲಿ ಇದ್ದ 15 ಮಂದಿ ಗರ್ಭಿಣಿಯರನ್ನು ಹಂಚಿನಾಳ ಗ್ರಾಮದ ಹೆಲ್ತ್ ಸೆಂಟರ್ ಶಿಫ್ಟ್‌ ಮಾಡಲಾಗಿದೆ. ಕೃಷ್ಣಾ ನದಿಯಿಂದಾಗಿ ಪ್ರವಾಹ ಹೆಚ್ಚಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ.

ಕೃಷ್ಣಾ ನದಿಯ ಪ್ರವಾಹಕ್ಕೆ ಕೊಳ್ಳುರು ಸೇತುವೆ ಸಂಪೂರ್ಣ ಜಲಾವೃತ

ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಜಲದಿಗ್ಭಂಧನ ಹಾಕಲಾಗಿದೆ. ಕೊಳ್ಳುರು ಸೇತುವೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ಎತ್ತರ ನಿರ್ಮಾಣ ಮಾಡಬೇಕೆಂದು ಬಹು ವರ್ಷಗಳ ಬೇಡಿಕೆ ಇದೆ. ಸಾಕಷ್ಟು ಜನ ಪ್ರತಿನಿಧಿ ಅಧಿಕಾರಿಗಳು ಸೇತುವೆ ಎತ್ತರ ನಿರ್ಮಾಣ ಮಾಡುತ್ತೆವೆಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ.

ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಮೇಕೆಗಳು ಸಾವು

ಭಾರಿ ಮಳೆಗೆ ಮನೆ ಗೋಡೆ ಕುಸಿದು 7 ಮೇಕೆಗಳು ಮೃತಪಟ್ಟಿವೆ. ಚಿತ್ರದುರ್ಗದ ಭೀಮಸಮುದ್ರ ಬಳಿ ತೊರೆ ಬಯಲು ಗ್ರಾಮದಲ್ಲಿ ಘಟನೆ ನಡೆದಿದೆ. ತೊರೆ ಬಯಲು ಗ್ರಾಮದ ಜಯಣ್ಣ ಎಂಬುವವರ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜಯಣ್ಣ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆ ಗೋಡೆ ಮಣ್ಣಿನಡಿ ಸಿಲುಕಿ ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಕಾರು, ಆಟೋ ಮೇಲೆ ಉರುಳಿ ಬಿದ್ದ ಮರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಧರಶಾಹಿ ಮುಂದುವರಿದಿದೆ. ಯಾವುದೇ ಮಳೆ ಇಲ್ಲದೆ ಇದ್ದರೂ ದಿಢೀರ್ ಬೃಹತ್‌ ಗಾತ್ರದ ಮರವೊಂದು ಉರುಳಿದೆ. ಪರಿಣಾಮ 2 ಕಾರುಗಳು, ಆಟೋವೊಂದು ಜಖಂಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಆಟೋ ಡ್ರೈವರ್‌ ದಿವಾಕರ್‌, ಪ್ರಯಾಣಿಕ ಸ್ಟಾಲಿನ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಬೇಕಾಯಿತು.

ಮನೆ ಮೇಲೆ ಬಿದ್ದ ತೆಂಗಿನಮರ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಗಾಬಿತವಾಡದ ಆಶಾ ಪಟೇ ಎಂಬುವವರ ಮನೆಯ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಭಟ್ಕಳದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯ ಹೇರಿಬಿಳ್ಳೂರು ಗ್ರಾಮದಲ್ಲಿ ಮಂಜುನಾಥ ನಾಯ್ಕ, ಕುಪ್ಪಯ್ಯ ನಾಯ್ಕ ಸೇರಿ ಹಲವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ಅಡಿಕೆ ಮರ ಬಿದ್ದು ಸುಮಾರು 8 ಎಕರೆ ತೋಟಕ್ಕೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
New Governors
ದೇಶ4 mins ago

New Governors: ಹೊಸ ರಾಜ್ಯಪಾಲರನ್ನು ನೇಮಿಸಿದ ರಾಷ್ಟ್ರಪತಿ; ಮೈಸೂರಿನ ವಿಜಯ ಶಂಕರ್ ಮೇಘಾಲಯ ಗವರ್ನರ್‌

karnataka rain news yadgir
ಪ್ರಮುಖ ಸುದ್ದಿ10 mins ago

Karnataka Rain News: ತುಂಬಿ ಬರಿಯುತ್ತಿರುವ ಕೃಷ್ಣಾ, ಘಟಪ್ರಭಾ; ಸೇತುವೆ ಮುಳುಗಡೆ, ನಡುಗಡ್ಡೆಯಿಂದ ಗರ್ಭಿಣಿಯರ ಸ್ಥಳಾಂತರ

vali sugreeva ಧವಳ ಧಾರಿಣಿ
ಅಂಕಣ51 mins ago

ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

beml factory kgf
ಕೋಲಾರ57 mins ago

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

ರಾಜಮಾರ್ಗ ಅಂಕಣ n narasimhaiah
ಅಂಕಣ1 hour ago

ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Uttara Kannada landslide
ಪ್ರಮುಖ ಸುದ್ದಿ1 hour ago

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Weight lose
ಆರೋಗ್ಯ2 hours ago

Weight Lose: ಏನೇ ಸರ್ಕಸ್‌ ಮಾಡಿದರೂ ತೂಕ ಇಳಿಯದೇ? ಹಾಗಿದ್ದರೆ ಕಾರಣ ಇದಾಗಿರಬಹುದು!

World Hepatitis Day
ಆರೋಗ್ಯ3 hours ago

World Hepatitis Day: ಏನಿದು ಹೆಪಟೈಟಿಸ್‌? ಇದು ಏಕೆ ಅಪಾಯಕಾರಿ?

karnataka weather Forecast
ಮಳೆ3 hours ago

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Dina bhavishya
ಭವಿಷ್ಯ3 hours ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ18 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ19 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌