Higher Education | ಭಾರತೀಯರಿಗೆ ಉನ್ನತ ಶಿಕ್ಷಣಕ್ಕೆ ಅಮೆರಿಕ ಈಗಲೂ ಹಾಟ್‌ಸ್ಪಾಟ್‌ - Vistara News

ವಿದೇಶ

Higher Education | ಭಾರತೀಯರಿಗೆ ಉನ್ನತ ಶಿಕ್ಷಣಕ್ಕೆ ಅಮೆರಿಕ ಈಗಲೂ ಹಾಟ್‌ಸ್ಪಾಟ್‌

ಅಮೆರಿಕದಲ್ಲಿ ಉನ್ನತ ಶಿಕ್ಷಣ (Higher Education) ಪಡೆಯಬೇಕೆಂದು ಕನಸು ಕಾಣುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗಲೂ ಕಡಿಮೆಯಾಗಿಲ್ಲ. ವರ್ಷದಿಂದ ವರ್ಷಕ್ಕೆ ಅಲ್ಲಿಗೆ ಹಾರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.

VISTARANEWS.COM


on

Higher Education
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅಮೆರಿಕದಲ್ಲಿ ಉನ್ನತ ಶಿಕ್ಷಣ (Higher Education) ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಏರುತ್ತಲೇ ಇದ್ದು, ಸದ್ಯ ಅಲ್ಲಿ ಶಿಕ್ಷಣ ಪಡೆಯುತ್ತಿರುವ ವಿದೇಶಿ ವಿದ್ಯಾರ್ಥಿಗಳ ಪೈಕಿ ಶೇ.21ರಷ್ಟು ಭಾರತೀಯ ವಿದ್ಯಾರ್ಥಿಗಳು ಎಂದು ಸಮೀಕ್ಷೆಯೊಂದು ಹೇಳಿದೆ.

ಸತತವಾಗಿ ಕಳೆದ ಎರಡು ವರ್ಷಗಳಿಂದ ದಾಖಲೆ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. 2021-22ರ ಶೈಕ್ಷಣಿಕ ಸಾಲಿನಲ್ಲಿ ಸರಿಸುಮಾರು 2 ಲಕ್ಷ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಯ ಅಮೆರಿಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಇತ್ತೀಚೆಗೆ ಬಿಡುಗಡೆಯಾದ “ಓಪನ್ ಡೋರ್ಸ್ ರಿಪೋರ್ಟ್‌ʼʼ ನ ಸಮೀಕ್ಷಾ ವರದಿ ತಿಳಿಸಿದೆ.

2021-22ರ ಶೈಕ್ಷಣಿಕ ಸಾಲಿನಲ್ಲಿ ಅಮೆರಿಕಕ್ಕೆ ಹೋದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ 1,99,182. ಅದರ ಹಿಂದಿನ ಸಾಲಿನಲ್ಲಿ ಅಂದರೆ 2020-21 ನೇ ಸಾಲಿನಲ್ಲಿ 1,67,582 ವಿದ್ಯಾರ್ಥಿಗಳು ಹೋಗಿದ್ದರು. ಇದಕ್ಕೆ ಹೋಲಿಸಿದಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ.19ರಷ್ಟು ಹೆಚ್ಚಾಗಿದೆ. ಇದರಿಂದ ಅಮೆರಿಕದಲ್ಲಿ ಕಲಿಕೆ ಈಗಲೂ ಭಾರತೀಯ ವಿದ್ಯಾರ್ಥಿಗಳಿಗೆ ಕನಸಿನ ವಿಷಯ ಎಂಬುದು ಸಾಬೀತಾಗುತ್ತಿದೆ ಎಂದು ಸಮೀಕ್ಷೆ ಹೇಳಿದೆ.

ಅಮೆರಿಕದ ವಿದೇಶಾಂಗ ಇಲಾಖೆಯು ನವ ದೆಹಲಿ, ಚೆನ್ನೈ, ಕೊಲ್ಕತಾ, ಬೆಂಗಳೂರು, ಅಹಮದಾಬಾದ್, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಅಮೆರಿಕದ ಶಿಕ್ಷಣ ಸಂಸ್ಥೆ ಮತ್ತು ಕೋರ್ಸ್‌ಗಳ ಕುರಿತು ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಅಮೆರಿಕವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಭವಿಷ್ಯವನ್ನು ಎದುರಿಸಲು ಅಗತ್ಯವಾಗಿರುವ ತಂತ್ರಜ್ಞಾನ, ಕೌಶಲಗಳನ್ನು (ಉದಾ: ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಇತ್ಯಾದಿ) ಕಲಿಯಲು ಅಮೆರಿಕವನ್ನು ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅಮೆರಿಕದ ಶಿಕ್ಷಣದ ಬಗ್ಗೆ ಒಲವು ವ್ಯಕ್ತಪಡಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಅಭಿನಂದಿಸುವುದಾಗಿ ಅಮೆರಿಕದ ವಿದೇಶಾಂಗ ಸಚಿವಾಲಯವು ಹೇಳಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಶಿಕ್ಷಣ ಎನ್ನುವುದು ಲಾಭ ದೋಚುವ ವ್ಯಾಪಾರವಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Anti Islam Rally: ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಇನ್ನು, ರ‍್ಯಾಲಿ ನಡೆಯುವಾಗಲೇ ದುಷ್ಕರ್ಮಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾನೆ.

VISTARANEWS.COM


on

Anti Islam Rally
Koo

ಬರ್ಲಿನ್:‌ ಜರ್ಮನಿಯ ಮ್ಯಾನ್‌ಹೆಮ್‌ನಲ್ಲಿ ನಡೆದ ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ (Anti Islam Rally) ದುಷ್ಕರ್ಮಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ರ‍್ಯಾಲಿಯ ಮಧ್ಯೆ ಏಕಾಏಕಿ ನುಗ್ಗಿ, ಚಾಕು ಇರಿದ ಕಾರಣ ಒಬ್ಬ ಪೊಲೀಸ್‌ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ಮಾರ್ಕ್ಟ್‌ಪ್ಲಾಟ್ಜ್‌ ಪ್ರದೇಶದ ಬಳಿ ಇಸ್ಲಾಂಅನ್ನು ವಿರೋಧಿಸಿ ರ‍್ಯಾಲಿ ನಡೆಯುತ್ತಿರುವಾಗ ದುಷ್ಕರ್ಮಿಯು ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವ್ಯಕ್ತಿಯೊಬ್ಬರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಇಸ್ಲಾಮಿಕ್‌ ಹಿಂಸಾಚಾರ ಖಂಡಿಸಿ ಅವರು ಭಾಷಣ ಮಾಡುವವರಿದ್ದರು. ಆದರೆ, ಇದೇ ವೇಳೆ ವ್ಯಕ್ತಿಯು ದಾಳಿ ಮಾಡಿದ್ದಾನೆ. ಆತನನ್ನು ಹಿಡಿಯಲು ಹೋದ ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಇನ್ನು, ಮತ್ತೊಬ್ಬ ಪೊಲೀಸ್‌ ಅಧಿಕಾರಿಯು ದುಷ್ಕರ್ಮಿಯ ಮೇಲೆ ಗುಂಡು ಹಾರಿಸುವ ಮೂಲಕ ಆತನನ್ನು ಹಿಡಿದಿದ್ದಾರೆ. ಪೊಲೀಸ್‌ ಗುಂಡಿನ ದಾಳಿಗೆ ಗಾಯಗೊಂಡಿರುವ ದುಷ್ಕರ್ಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

“ಇಸ್ಲಾಂ ವಿರೋಧಿ ರ‍್ಯಾಲಿಯ ವೇಳೆ ವ್ಯಕ್ತಿಯೊಬ್ಬ ಪೊಲೀಸ್‌ ಅಧಿಕಾರಿ ಸೇರಿ ಹಲವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಹಾಗೊಂದು ವೇಳೆ, ದಾಳಿಯ ಹಿಂದೆ ಇಸ್ಲಾಮಿಕ್‌ ಕೈವಾಡ ಇದೆ ಎಂಬುದು ಗೊತ್ತಾದರೆ ದೇಶದಲ್ಲಿ ಮತ್ತೊಂದು ಇಸ್ಲಾಮಿಕ್‌ ಹಿಂಸಾಚಾರ ನಡೆಯಲಿದೆ. ಇಂತಹ ಹಿಂಸಾಚಾರದ ಬಗ್ಗೆ ನಾವು ಮೊದಲಿನಿಂದಲೂ ಎಚ್ಚರಿಕೆ ನೀಡುತ್ತಲೇ ಬಂದಿದ್ದೇವೆ” ಎಂಬುದಾಗಿ ಜರ್ಮನಿ ಗೃಹ ಸಚಿವ ನ್ಯಾನ್ಸಿ ಫೇಸರ್‌ ಪ್ರಕಟಣೆ ಹೊರಡಿಸಿದ್ದಾರೆ.

ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಪೂರ್ವ ಜರ್ಮನಿಯಲ್ಲಿ ಇಸ್ಲಾಂ ಧರ್ಮೀಯರ ಉಪಟಳ ಖಂಡಿಸಿ ಪೆಜಿಡಾ (PEGIDA) ಎಂಬ ಸಂಘಟನೆಯು ನಿಯಮಿತವಾಗಿ ಇಸ್ಲಾಂ ವಿರುದ್ಧ ರ‍್ಯಾಲಿಗಳನ್ನು ನಡೆಸುತ್ತಲೇ ಇರುತ್ತದೆ. ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಈ ಸಂಘಟನೆಯ ಸದಸ್ಯರೂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Continue Reading

ವಿದೇಶ

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Spelling Bee:ಫೈಜಾನ್‌ ಜಾಕಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿರುವ ಬೃಹತ್‌, 50,000 ಡಾಲರ್‌ ನಗದು ಬಹುಮಾನವನ್ನೂ ಪಡೆದಿದ್ದಾನೆ. ಇನ್ನು ಈ ಸ್ಪೆಲ್ಲಿಂಗ್ ಬೀ ಇಂಗ್ಲೀಷ್‌ ಭಾಷೆಯ ಅತ್ಯಂತ ಪ್ರತಿಷ್ಠೆಯ ಸ್ಪರ್ಧೆ ಇದಾಗಿದ್ದು, ಈ ಬಾರಿ ವಾಷಿಂಗ್ಟನ್‌ನಲ್ಲಿ ಆಯೋಜನೆಗೊಂಡಿತ್ತು. ಇನ್ನು ಏಳನೇ ತರಗತಿಯಲ್ಲಿ ಓದುತ್ತಿರುವ ಬೃಹತ್‌, ಇದಕ್ಕೂ ಮುನ್ನ ನಡೆದ ಮೂರು ಸ್ಪೆಲ್ಲಿಂಗ್‌ ಬೀ ಸ್ಪರ್ಧೆಗಳನ್ನು ಗೆದ್ದ ಬಳಿಕ ಅಂತಿಮ ಘಟ್ಟಕ್ಕೆ ತಲುಪಿದ್ದ.

VISTARANEWS.COM


on

Spelling Bee
Koo

ಅಮೆರಿಕ: ಭಾರತ ಮೂಲದ 12 ವರ್ಷದ ಬಾಲಕ ಸ್ಕ್ರಿಪ್ಸ್‌ ನ್ಯಾಷನಲ್‌ ಸ್ಪೆಲ್ಲಿಂಗ್‌ ಬೀ(Spelling Bee) ಚಾಂಪಿಯನ್‌ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತೀಯ ಮೂಲದ ಅಮೆರಿಕನ್‌ ಬಾಲಕ ಬೃಹತ್‌ ಸೋಮ(Bruhat Soma) 29 ಪದಗಳ ಸ್ಪೆಲ್ಲಿಂಗ್‌ ಅನ್ನು ಸರಿಯಾಗಿ ಹೇಳುವ ಮೂಲಕ ಚಾಂಪಿಯನ್‌ ಆಗಿ ಹೊರ ಹೊಮ್ಮುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾನೆ.

ಇನ್ನು ಫೈಜಾನ್‌ ಜಾಕಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿರುವ ಬೃಹತ್‌, 50,000 ಡಾಲರ್‌ ನಗದು ಬಹುಮಾನವನ್ನೂ ಪಡೆದಿದ್ದಾನೆ. ಇನ್ನು ಈ ಸ್ಪೆಲ್ಲಿಂಗ್ ಬೀ ಇಂಗ್ಲೀಷ್‌ ಭಾಷೆಯ ಅತ್ಯಂತ ಪ್ರತಿಷ್ಠೆಯ ಸ್ಪರ್ಧೆ ಇದಾಗಿದ್ದು, ಈ ಬಾರಿ ವಾಷಿಂಗ್ಟನ್‌ನಲ್ಲಿ ಆಯೋಜನೆಗೊಂಡಿತ್ತು. ಇನ್ನು ಏಳನೇ ತರಗತಿಯಲ್ಲಿ ಓದುತ್ತಿರುವ ಬೃಹತ್‌, ಇದಕ್ಕೂ ಮುನ್ನ ನಡೆದ ಮೂರು ಸ್ಪೆಲ್ಲಿಂಗ್‌ ಬೀ ಸ್ಪರ್ಧೆಗಳನ್ನು ಗೆದ್ದ ಬಳಿಕ ಅಂತಿಮ ಘಟ್ಟಕ್ಕೆ ತಲುಪಿದ್ದ.

ಇನ್ನು ತನ್ನ‌ ಗೆಲುವಿನ ಬಗ್ಗೆ ಮಾತನಾಡಿದ ಬೃಹತ್‌, ಕಳೆದ ಮೂರು ಸ್ಪೆಲ್ಲಿಂಗ್‌ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿರುವುದ ದೊಡ್ಡ ವಿಚಾರವೇನಲ್ಲ. ನನ್ನ ಅಂತಿಮ ಗುರಿ ಇದಾಗಿತ್ತು. ಈ ಸ್ಪರ್ಧೆಯನ್ನು ನಾನು ಗೆದ್ದಿದ್ದೇನೆ. ಆ ಬಗ್ಗೆ ನನಗೆ ಬಹಳಷ್ಟು ಸಂತೋಷವಿದೆ ಎಂದು ಹೇಳಿದ್ದಾರೆ. ಇನ್ನು ಕಳೆದ 35 ವರ್ಷಗಳಲ್ಲಿ 29 ನೇ ಬಾರಿ ಭಾರತೀಯ ಮೂಲದ ಅಮೆರಿಕನ್‌ ಬಾಲಕ ಈ ಸ್ಪರ್ಧೆಯಲ್ಲಿ ಗೆಲುವು ಸಾಧಿಸುತ್ತಿರುವುದು.

ಇದನ್ನೂ ಓದಿ:Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

ಕಳೆದ ವರ್ಷ ಇದೇ ಸ್ಪರ್ಧೆಯಲ್ಲಿ ಭಾರತೀಯ ಮೂಲದ ದೇವ್‌ ಶಾ ಎಂಬ 14 ವರ್ಷದ ಬಾಲಕ ಪ್ರತಿಷ್ಠಿತ ‘ಸ್ಕ್ರಿಫ್ಸ್‌ ನ್ಯಾಷನಲ್‌ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತನಾಗಿದ್ದಾನೆ. ಅಮೆರಿಕದ ಮಾರ್ಯಾಲ್ಯಾಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಕೊನೆಯ ಸುತ್ತಿನಲ್ಲಿPsammophilus (ಪ್ಸಾಮ್ಮೊಫೈಲ್‌) ಎಂಬ ಇಂಗ್ಲಿಷ್‌ನ 11 ಸ್ಪೆಲ್ಲಿಂಗ್‌ ಅನ್ನು ದೇವ್‌ ಸರಿಯಾಗಿ ಉಚ್ಚರಿಸಿ ವಿಜೇತನಾಗಿದ್ದು, 41 ಲಕ್ಷ ರು. ನಗದು ಬಹುಮಾನ ಸ್ವೀಕರಿಸಿದ್ದ.

Continue Reading

ವಿದೇಶ

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Donald Trump: ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ.

VISTARANEWS.COM


on

Donald Trump
Koo

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾರ್ಕ್‌ನ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾ (Trump Media)ದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ. ಈ ಕಂಪನಿಯು ಟ್ರೂತ್ ಸೋಷಿಯಲ್ ಪ್ಲಾಟ್ ಫಾರ್ಮ್‌ (Truth Social platform)ನ ಮಾತೃ ಸಂಸ್ಥೆಯಾಗಿದೆ.

ಟ್ರಂಪ್‌ ಈ ಕಂಪನಿಯಲ್ಲಿ ಶೇ. 65ರಷ್ಟು ಪಾಲು ಹೊಂದಿದ್ದಾರೆ. ಸುಮಾರು ಶೇ. 10ರಷ್ಟು ಕುಸಿತವು ಮಾಜಿ ಅಧ್ಯಕ್ಷರ ಷೇರುಗಳ ಮೌಲ್ಯದಲ್ಲಿ 532 ಮಿಲಿಯನ್ ಡಾಲರ್ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಫೋರ್ಬ್ಸ್ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಫೇಸ್‌ಬುಕ್‌ (Facebook) ಮತ್ತು ಎಕ್ಸ್‌ (ಹಿಂದಿನ ಟ್ವಿಟ್ಟರ್‌)ಗೆ ಸವಾಲು ಸ್ಪರ್ಧೆ ಒಡ್ಡಲು ಡೊನಾಲ್ಡ್ ಟ್ರಂಪ್ ತಮ್ಮದೇ ಹೊಸ ಸೋಷಿಯಲ್ ಮೀಡಿಯಾ ಆದ ಟ್ರೂತ್ ಸೋಷಿಯಲ್ (Truth Social) ಆರಂಭಿಸಿದ್ದರು.

2021ರಲ್ಲಿ ಅಮೆರಿಕ ಸಂಸತ್‌ ಭವನದಲ್ಲಿ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ಎಲ್ಲ ಸಾಮಾಜಿಕ ಜಾಲತಾಣಗಳು ನಿಷೇಧ ಹೇರಿದ್ದವು. ಹೀಗಾಗಿ ಅವರು 2021ರ ಅಕ್ಟೋಬರ್‌ನಲ್ಲಿ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ಘೋಷಿಸಿದ್ದರು. ಅದಂತೆ 2022ರಲ್ಲಿ ಟ್ರೂತ್ ಸೋಷಿಯಲ್ ಅಪ್ಲಿಕೇಷನ್‌ ಆರಂಭಿಸಿದ್ದರು. ಟ್ರಂಪ್‌ ಮೀಡಿಯಾ ಆ್ಯಂಡ್‌ ಟೆಕ್ನಾಲಜಿ ಗ್ರೂಪ್‌ನ ಮಾಲಿಕತ್ವದಲ್ಲಿ ಈ ಅಪ್ಲಿಕೇಷನ್‌ ಅನ್ನು ಆರಂಭಿಸಲಾಗಿತ್ತು.

ಇದನ್ನೂ ಓದಿ: Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು?

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್‌ ಸ್ಪರ್ಧಿಸಲಿದ್ದಾರೆ.

Continue Reading

ವಿದೇಶ

Donald Trump: ನೀಲಿಚಿತ್ರಗಳ ತಾರೆಗೆ ಹಣ ನೀಡಿದ ಪ್ರಕರಣ; ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ತಪ್ಪಿತಸ್ಥ ಎಂದ ಕೋರ್ಟ್‌

Donald Trump: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ನ್ಯಾಯಾರ್ಕ್‌ನ ನ್ಯಾಯಾಲಯ ಡೊನಾಲ್ಡ್ ಟ್ರಂಪ್ ಅವರು ʼಹಷ್‌ ಮನಿʼ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಇದರೊಂದಿಗೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ.

VISTARANEWS.COM


on

Donald Trump
Koo

ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ನ್ಯಾಯಾರ್ಕ್‌ನ ನ್ಯಾಯಾಲಯ ಡೊನಾಲ್ಡ್ ಟ್ರಂಪ್ ಅವರು ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಇದರೊಂದಿಗೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಮತ್ತೊಮ್ಮೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಟ್ರಂಪ್‌ಗೆ ಇದು ಬಹು ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಲಾಗುತ್ತಿದೆ. ನವೆಂಬರ್‌ನಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್‌, ತೀರ್ಪನ್ನು ʼಅವಮಾನʼ ಮತ್ತು ʼಮೋಸ” ಎಂದು ಕರೆದಿದ್ದಾರೆ. ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತದಾರರಿಂದ ʼನಿಜವಾದ ತೀರ್ಪುʼ ಹೊರ ಬರಲಿದೆ ಎಂದು ಹೇಳಿದ್ದಾರೆ. ಅದಾಗ್ಯೂ ಈ ಪ್ರಕರಣದಲ್ಲಿ ಟ್ರಂಪ್‌ ಜೈಲು ಸೇರುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ. ವ್ಯವಹಾರ ದಾಖಲೆಗಳನ್ನು ತಿರುಚಿದ್ದಕ್ಕಾಗಿ ಟ್ರಂಪ್‌ ಅವರಿಗೆ ಜುಲೈ 11ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು ಎಂದು ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು ತಿಳಿಸಿದ್ದಾರೆ. 12 ಸದಸ್ಯರ ತೀರ್ಪುಗಾರರು ಎರಡು ದಿನಗಳಲ್ಲಿ 11 ಗಂಟೆಗಳಿಗೂ ಹೆಚ್ಚು ಕಾಲ ಚರ್ಚಿಸಿ ಗುರುವಾರ ಟ್ರಂಪ್‌ ದೋಷಿ ಎಂದು ಘೋಷಿಸಿದ್ದರು.

ʼʼನಾನು ಮುಗ್ಧ ವ್ಯಕ್ತಿ, ಮತ್ತು ಯಾವುದೇ ತಪ್ಪು ಮಾಡಿಲ್ಲ. ನಾನು ನಮ್ಮ ದೇಶಕ್ಕಾಗಿ ಮತ್ತು ನಮ್ಮ ಸಂವಿಧಾನಕ್ಕಾಗಿ ಹೋರಾಡುತ್ತಿದ್ದೇನೆ. ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದು ಜನರಿಗೆ ಗೊತ್ತಿದೆ. ಹೀಗಾಗಿ ಅವರು ನನ್ನ ಕೈ ಬಿಡುವುದಿಲ್ಲʼʼ ಎಂದು ಟ್ರಂಪ್‌ ಹೇಳಿದ್ದಾರೆ.

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ಇದನ್ನು ಖಾಸಗಿ ವಹಿವಾಟು ಎಂದು ಕರೆದಿದ್ದರು. ಸದ್ಯ ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಚುನಾವಣಾ ಪ್ರಚಾರದ ವೇಳೆ ಎದುರಾಳಿಗಳು ಟ್ರಂಪ್‌ ವಿರುದ್ಧದ ವಿಚಾರದಲ್ಲಿ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: Nikki Haley: ಅಮೆರಿಕ ಚುನಾವಣೆ ರೇಸ್‌ನಿಂದ ನಿಕ್ಕಿ ಹ್ಯಾಲೆ ಔಟ್;‌ ಟ್ರಂಪ್‌ ಹಾದಿ ಸುಗಮ

Continue Reading
Advertisement
LPG Price Cut
ವಾಣಿಜ್ಯ2 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ9 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್13 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ37 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು37 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ56 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ1 hour ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ2 hours ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ3 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌