ವಿಸ್ತಾರ ಸಂಪಾದಕೀಯ | ಮುಖ್ಯ ಚುನಾವಣಾ ಆಯುಕ್ತರ ನೇಮಕದಲ್ಲಿ ಪಾರದರ್ಶಕತೆ ಅಗತ್ಯ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ | ಮುಖ್ಯ ಚುನಾವಣಾ ಆಯುಕ್ತರ ನೇಮಕದಲ್ಲಿ ಪಾರದರ್ಶಕತೆ ಅಗತ್ಯ

ಚುನಾವಣೆಯು ತಮ್ಮ ಅಪೇಕ್ಷೆಗೆ ತಕ್ಕಂತೆ ನಡೆಯಬೇಕು ಎಂಬುದು ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪಕ್ಷಗಳ ಇಂಗಿತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಟಿ.ಎನ್ ಶೇಷನ್‌ರಂಥ ದಿಟ್ಟ ಅಧಿಕಾರಿಗಳ ನೇಮಕದ ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಸೂಕ್ತವಾಗಿದೆ.

VISTARANEWS.COM


on

97 crore people registered to vote in Lok Sabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಟಿ.ಎನ್‌ ಶೇಷನ್‌ ಅವರಂಥ ದಿಟ್ಟ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಕಟುವಾಗಿ ಹೇಳಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತರ ನೇಮಕದಲ್ಲಿ ಸುಧಾರಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಎಲ್ಲ ಸರ್ಕಾರಗಳು ಕೇಂದ್ರ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡಿವೆ. ಪ್ರಧಾನಿಯ ವಿರುದ್ಧವೂ ಕ್ರಮ ಕೈಗೊಳ್ಳುವ ಅಧಿಕಾರವುಳ್ಳ ಮುಖ್ಯ ಚುನಾವಣಾ ಆಯುಕ್ತರ ಅಗತ್ಯವಿದೆ. ಆಯುಕ್ತರ ನೇಮಕಕ್ಕೆ ಒಕ್ಕೂಟ ಸರ್ಕಾರದ ಸಚಿವ ಸಂಪುಟ ಮಾತ್ರವಲ್ಲದೇ ವಿಸ್ತೃತ ವ್ಯವಸ್ಥೆಯ ಅಗತ್ಯವಿದೆ. ಈಗಿರುವ ವ್ಯವಸ್ಥೆಯಲ್ಲಿ ಬದಲಾವಣೆ ಈ ಕ್ಷಣದ ಅಗತ್ಯವಾಗಿದೆ ಎಂದು ಪೀಠ ಹೇಳಿದೆ.

ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದಿಂದಲೇ ಬಂದಿರುವ ಈ ಅಭಿಪ್ರಾಯಕ್ಕೆ ಮಹತ್ವವಿದೆ ಹಾಗೂ ಇದನ್ನು ಯಾವ ರೀತಿಯಿಂದಲೂ ಕಡೆಗಣಿಸಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡ ವ್ಯಕ್ತಿಯನ್ನು ಆಯುಕ್ತರಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದೆಯೇ ಎಂಬುದನ್ನು ಪರೀಕ್ಷಿಸುವುದು ಅಗತ್ಯವಿದೆ, ನೇಮಕಾತಿಯಲ್ಲಿ ಸರಿಯಾದ ಕ್ರಮಗಳನ್ನು ಅನುಸರಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಬೇಕು ಎಂದು ಪೀಠ ಹೇಳಿರುವುದರಿಂದ ಕೇಂದ್ರ ಸರ್ಕಾರಕ್ಕೆ ಮುಖಭಂಗವೇ ಆಗಿದೆ. ಪ್ರತಿ ಸರ್ಕಾರವೂ ಚುನಾವಣಾ ಆಯೋಗದ ಮುಖ್ಯಸ್ಥರನ್ನಾಗಿ ತನ್ನ ಧೋರಣೆಗೆ ಸರಿ ಹೊಂದುವವರನ್ನು ಮಾತ್ರವೇ ನೇಮಕ ಮಾಡುತ್ತ ಬಂದಿವೆ ಎಂದೇ ನ್ಯಾಯಮೂರ್ತಿಗಳೊಬ್ಬರು ಹೇಳಿದ್ದಾರೆ. ಇದು ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ ತಾಳಿರುವ ಕಠಿಣ ನಿಲುವುಗಳಲ್ಲಿ ಒಂದಾಗಿದೆ.

1950ರಲ್ಲಿ ಚುನಾವಣಾ ಆಯೋಗದ ರಚನೆ ಆಗಿದ್ದು, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಹೊಣೆ ಅದರ ಮೇಲೆ ಹೊರಿಸಲಾಗಿದೆ. ಇದು ಹಾಕಿಕೊಡುವ ಚೌಕಟ್ಟಿನ ಒಳಗೆ ಮತದಾನ ಪ್ರಕ್ರಿಯೆಯನ್ನು ನಡೆಸಲು ಆಳುವ ಸರ್ಕಾರಗಳು, ಕಾನೂನು ಪಾಲನಾ ಸಂಸ್ಥೆಗಳು ಶ್ರಮಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಬಹುತೇಕ ಎಲ್ಲ ಅಧಿಕಾರವೂ ತಾತ್ಕಾಲಿಕವಾಗಿ ಚುನಾವಣಾ ಆಯೋಗದ ಕೈಯಲ್ಲಿ ನಿಕ್ಷೇಪಿತವಾಗುತ್ತದೆ. ಇದು ಮೇಲ್ನೋಟಕ್ಕೆ ಆಯೋಗದ ಕೈಯಲ್ಲಿ ಅಪರಿಮಿತ ಅಧಿಕಾರವನ್ನು ಹೊಂದಿರುವಂತೆ ಕಾಣುತ್ತದೆ. ಆದರೆ, ಚುನಾವಣೆಗಳ ಹೊಣೆ ಹೊತ್ತುಕೊಂಡ ಆಯುಕ್ತರ ನೇಮಕಾತಿಯೇ ಸರ್ಕಾರದ ಕೈಯಲ್ಲಿ ಇದೆ. ಚುನಾವಣೆ ತಮ್ಮ ಅಪೇಕ್ಷೆಗೆ ತಕ್ಕಂತೆ ನಡೆಯಬೇಕು ಎಂಬುದು ಇದುವರೆಗಿನ ಎಲ್ಲ ಸರ್ಕಾರಗಳ ಇಂಗಿತವಾಗಿದೆ. ಹೀಗಾಗಿ ಸರ್ಕಾರಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ಆಯುಕ್ತರನ್ನು ನೇಮಕ ಮಾಡಿಕೊಳ್ಳುತ್ತಿವೆ ಎಂಬ ದೂರು ಮೊದಲಿನಿಂದಲೂ ಇದೆ. ಒಂದೇ ರಾಜ್ಯದಲ್ಲಿ ಹಲವು ಹಂತಗಳ ಮತದಾನ ಘೋಷಿಸುವುದು, ಒಂದು ಕಡೆ ಮತದಾನ ನಡೆಯುವ ವೇಳೆಯಲ್ಲೇ ಇನ್ನೊಂದು ಕಡೆ ಚುನಾವಣಾ ರ್ಯಾಲಿಗಳಿಗೆ ಅವಕಾಶ ನೀಡುವುದು- ಇವೆಲ್ಲವೂ ಆಯೋಗ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಜನರ ಭಾವನೆಯನ್ನು ದೃಢಗೊಳಿಸುವಂತಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ದಕ್ಷ, ಪಾರದರ್ಶಕ ಮತ್ತು ಬಲಿಷ್ಠ ಚುನಾವಣೆ ಆಯೋಗದ ಅಗತ್ಯ ಬಗ್ಗೆ ಮಾತನಾಡಿರುವುದು ಉತ್ತಮ ಬೆಳವಣಿಗೆ.

ನಾಮ್‌ ಕೆ ವಾಸ್ತೆಗೆ ರಾಷ್ಟ್ರಪತಿಗಳು ಆಯುಕ್ತರ ನೇಮಕಕ್ಕೆ ಅಂತಿಮ ಸಹಿ ಹಾಕುತ್ತಾರೆ. ಆದರೆ ಆಯುಕ್ತರ ನೇಮಕ ಶಿಫಾರಸು ಆಗುವುದು ಸಚಿವ ಸಂಪುಟದಿಂದಲೇ ಆಗಿರುವುದರಿಂದ, ನೇಮಕದ ಪೂರ್ತಿ ಅಧಿಕಾರದ ಸರ್ಕಾರದ ಕೈಯಲ್ಲಿರುತ್ತದೆ. 1989ರವರೆಗೂ ಏಕೈಕ ಆಯುಕ್ತರ ವ್ಯವಸ್ಥೆಯಿತ್ತು. ನಂತರ ಮೂವರು ಆಯುಕ್ತರ ನೇಮಕ ಆಗತೊಡಗಿತು. ಆಗಲೇ ಈ ವ್ಯವಸ್ಥೆ ದುರ್ಬಲಗೊಂಡಿತು. ಹಾಗೆಂದು, ಎಲ್ಲ ಆಯುಕ್ತರೂ ದುರ್ಬಲರೇ ಆಗಿದ್ದರೆಂದಲ್ಲ. 1990ರಿಂದ 1996ರವರೆಗೂ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಟಿ.ಎನ್‌ ಶೇಷನ್‌ ಅವರು ಎಲ್ಲ ಅಪ್ರಾಮಾಣಿಕ ರಾಜಕಾರಣಿಗಳಿಗೂ ಸಿಂಹಸ್ವಪ್ನವೇ ಆಗಿದ್ದರು ಎಂಬುದು ಇಂದಿಗೆ ಒಂದು ದಂತಕಥೆ. ಅವರು ಚುನಾವಣಾ ಆಯೋಗ ಏನು ಮಾಡಬಲ್ಲದು, ಅದರ ಅಧಿಕಾರದ ವ್ಯಾಪ್ತಿ ಎಷ್ಟು ಎಂಬುದನ್ನು ಭಾರತದ ಪ್ರಜೆಗೆ ಸಂಪೂರ್ಣ ಮನದಟ್ಟು ಮಾಡಿಸಿದ್ದರು. ಅಂಥ ಆಯುಕ್ತರು ಮತ್ತೊಮ್ಮೆ ಬಾರದಿರಲಿ ಎಂಬುದೇ ಬಹುತೇಕ ಎಲ್ಲ ರಾಜಕೀಯ ಪಕ್ಷಗಳ ಇರಾದೆಯಾಗಿದೆ. ಇದನ್ನೇ ಸುಪ್ರೀಂ ಕೋರ್ಟ್‌ ಗುರುತಿಸಿರುವುದರಿಂದಲೇ ಮೇಲಿನ ಮಾತುಗಳನ್ನು ಆಡಿದೆ.

ಆದರೆ ಚುನಾವಣೆ ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಆಗಬೇಕಿದ್ದರೆ ಸ್ವತಂತ್ರ ನಿಲುವು ಹೊಂದಿದ, ನಿರ್ಭೀತ ವ್ಯಕ್ತಿತ್ವದ, ಸಾಂವಿಧಾನಿಕ ನಿಷ್ಠೆಯನ್ನು ಹೊರತುಪಡಿಸಿ ವೈಯಕ್ತಿಕ ರಾಜಕೀಯ ನಿಷ್ಠೆಗಳಿಂದ ದೂರ ನಿಂತಿರುವವರ ನೇಮಕವಾಗುವುದು ಅಗತ್ಯವಿದೆ. ಅಂಥವರ ನೇಮಕ ಕಷ್ಟವೇ. ಆದರೆ ಪ್ರಜಾಪ್ರಭುತ್ವದ ಚೈತನ್ಯವನ್ನು ಉಳಿಸಲು ಅಂಥ ನೇಮಕ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೋರ್ಟ್‌ ಸೂಚಿಸಿರುವಂತೆ, ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನೂ ಸೇರಿಸುವ ಮೂಲಕ ತಟಸ್ಥತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಗಡಿ ವಿವಾದ, ಮಹಾರಾಷ್ಟ್ರದ ಹತಾಶ ಯತ್ನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 29 2024
Koo

ಚಂದ್ರನು ಸೋಮವಾರವೂ ಮಕರ ರಾಶಿಯಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಿ, ಇದರಿಂದ ನಿಮಗೆ ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಧನಸ್ಸು ರಾಶಿಯವರಿಗೆ ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಹೆಚ್ಚಿದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 07:56 ವಾರ: ಸೋಮವಾರ
ನಕ್ಷತ್ರ: ಪೂರ್ವ ಆಷಾಢ 28:41 ಯೋಗ: ಸಿದ್ಧಿ 24:24
ಕರಣ: ತೈತುಲ 07:56 ಅಮೃತಕಾಲ: ಸೋಮವಾರ ರಾತ್ರಿ 11:56 ರಿಂದ ಮಂಗಳವಾರ ಮುಂಜಾನೆ 01:31
ದಿನದ ವಿಶೇಷ: ಬ್ರಹ್ಮಾವರ ರಥೋತ್ಸವ, ನೊಣವಿನಕೆರೆ ಬೇಟೆರಾಯ ರಥೋತ್ಸವ

ಸೂರ್ಯೋದಯ : 06:00   ಸೂರ್ಯಾಸ್ತ : 06:34

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲದಿಂದಾಗಿ ನೀವು ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಹೀಗಾಗಿ ಮಾತನಾಡುವಾಗ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಿ, ಇದರಿಂದ ನಿಮಗೆ ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಹೀಗಾಗಿ ತುಸು ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿಯಾಗುವುದು. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯವನ್ನು ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆಯು ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಬಹದು. ಹೀಗಾಗಿ ಸ್ವಲ್ಪ ತಾಳ್ಮೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ ಉಂಟಾಗಲಿದೆ. ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ನಿಮ್ಮದಾಗಲಿದೆ. ಹಿರಿಯರಿಂದ ಮಾರ್ಗದರ್ಶನ ಪಡೆಯಿರಿ. ಅದು ನಿಮ್ಮ ಗುರಿಗೆ ಸ್ಪಷ್ಟತೆಯನ್ನು ನೀಡಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಹೆಚ್ಚಿದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮವನ್ನು ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ, ಅದೇ ಸಮಯದಲ್ಲಿ ಖರ್ಚುಗಳೂ ಹೆಚ್ಚಾಗುತ್ತದೆ. ನಿಮ್ಮ ಬಗ್ಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಹೀಗಾಗಿ ಅದರತ್ತ ಹೆಚ್ಚಿನ ಗಮನವನ್ನು ಕೊಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಈ ವೇಳೆ ನಿಮ್ಮ ಸಂಗಾತಿ ನೀಡುವ ಸಲಹೆ ಹಿತಕರವೆನಿಸಲಿದೆ. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಉಂಟು. ಕೌಟುಂಬಿಕವಾಗಿ ಶುಭಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕರ್ನಾಟಕ

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಒಂದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನೂ 29 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

BUS
Koo

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಒಂದು ಪಲ್ಟಿಯಾಗಿದ್ದು, 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನು 29 ಮಂದಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು (Chikkamagalur) ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ 100 ಅಡಿ ಆಳಕ್ಕೆ ಬಸ್‌ ಬಿದ್ದ ಕಾರಣ ಹೆಚ್ಚಿನ ಜನರಿಗೆ ಗಾಯಗಳಾಗಿವೆ. ಗಾಯಾಳುಗಳಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಂದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪ್ರವಾಸಿಗರು ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ತೆರಳಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದವರಲ್ಲಿ ಮೊಹಮ್ಮದ್‌ ಸವಾಜ್‌ ಎಂಬ ಆರು ವರ್ಷದ ಬಾಲಕನು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಾಣಿಕ್ಯಾರದಿಂದ ದತ್ತಪೀಠದ ಬಳಿ ಹೋಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಕಾರು ಪಲ್ಟಿಯಾಗಿ ಯುವತಿ ಸಾವು

ಭಾನುವಾರವೇ (ಏಪ್ರಿಲ್‌ 28) ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದಷ್ಟೇ ವಿಜಯಪುರ ಜಿಲ್ಲೆಯಲ್ಲಿ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಬಳಿ ಅಪಘಾತ ನಡೆದಿತ್ತು. ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ (55) ಮೃತರು.

ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Continue Reading

ಕ್ರೀಡೆ

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

CSK vs SRH: 40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

CSK vs SRH
Koo

ಚೆನ್ನೈ: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸತತ ಎರಡು ಸೋಲು ಕಂಡು ಮಂಕಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಭರ್ಜರಿ(CSK vs SRH) ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ವಿರುದ್ಧ ತವರಿನಲ್ಲಿ ನಡೆದ ಭಾನುವಾರದ ಪಂದ್ಯದಲ್ಲಿ 78 ರನ್​ಗಳ ಗೆಲುವು ಸಾಧಿಸಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಕಾಡಿದ ತುಷಾರ್​ ದೇಶ್​ಪಾಂಡೆ


ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ಗೆ ಮೊದಲ ಎಸೆತದಲ್ಲೇ ಟ್ರಾವಿಸ್​ ಹೆಡ್​ ಬೌಂಡರಿ ಮೂಲಕ ರನ್​ ಖಾತೆ ತೆರೆದರು. ಮುಂದಿನ ಓವರ್​ನಲ್ಲಿ ತುಷಾರ್​ ದೇಶ್​ಪಾಂಡೆಗೆ ಸಿಕ್ಸರ್​ ರುಚಿ ತೋರಿಸಿದರು. ಅಭಿಷೇಕ್​ ಶರ್ಮ ಕೂಡ ಒಂದು ಸಿಕ್ಸರ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಈ ವೇಳೆ ಧೋನಿ ನೀಡಿದ ಸಲಹೆಯನ್ನಾಧರಿಸಿ ಇದೇ ಓವರ್​ನಲ್ಲಿ ತುಷಾರ್​ ದೊಡ್ಡ ಬೇಟೆಯಾಡುವಲ್ಲಿ ಯಶಸ್ವಿಯಾದರು. ಟ್ರಾವಿಸ್​ ಹೆಡ್(13)​ ಮತ್ತು ಅನ್ಮೋಲ್ಪ್ರೀತ್ ಸಿಂಗ್​(0) ಖಾತೆ ತರೆಯುವ ಮುನ್ನವೇ ವಿಕೆಟ್​ ಕಿತ್ತು ಪೆವಿಲಿಯನ್​ ಕಡೆಗೆ ದಾರಿ ತೋರಿದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೈದರಾಬಾದ್​ ಈ ಆಘಾತವನ್ನು ಅರಗಿಸಿಕೊಳ್ಳುವ ಮುನ್ನವೇ ಅಭಿಷೇಕ್​ ಶರ್ಮ(15) ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಕೂಡ ತುಷಾರ್ ಪಾಲಾಯಿತು. ಅಲ್ಲಿಗೆ ಅಗ್ರ ಕ್ರಮಾಂಕದ ಮೂರು ವಿಕೆಟ್​ ಕೂಡ ತುಷಾರ್​ ಕಿತ್ತರು.

40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಹೆನ್ರಿಚ್​ ಕ್ಲಾಸೆನ್​ ಮತ್ತು ಅಬ್ದುಲ್​ ಸಮದ್​ ಕೂಡ ಈ ಪಂದ್ಯದಲ್ಲಿ ರನ್​ ಗಳಿಸಲು ಪರದಾಡಿದರು. ಕ್ಲಾಸೆನ್​ 21 ಎಸೆತ ಎದುರಿಸಿ 20 ರನ್​ ಗಳಿಸಿದರು. ಸಿಡಿದದ್ದು 1 ಸಿಕ್ಸರ್​ ಮಾತ್ರ. ಅಬ್ದುಲ್​ ಸಮದ್ 18 ಎಸೆತಗಳಿಂದ 19 ರನ್​ ಕಲೆಹಾಕಿದರು. ಡೇರಿಯಲ್​ ಮಿಚೆಲ್​ ಈ ಪಂದ್ಯದಲ್ಲಿ 5 ಕ್ಯಾಚ್​ ಹಿಡಿದು ಮಿಂಚಿದರು.

ಗಾಯಕ್ವಾಡ್​ ಸೂಪರ್​ ಅರ್ಧಶತಕ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಆರಂಭದಲ್ಲೇ ಅಜಿಂಕ್ಯಾ ರಹಾನೆ ವಿಕೆಟ್​ ಕಳೆದುಕೊಂಡರೂ ಕೂಡ ಇದರಿಂದ ವಿಚಲಿತರಾಗಲಿಲ್ಲ. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಡೇರಿಯಲ್​ ಮಿಚೆಲ್​ ಸೇರಿಕೊಂಡು ಹೈದರಾಬಾದ್​ ಬೌಲರ್​ಗಳ ಮೇಲೆ ಸವಾರಿ ನಡೆಸಿ ಅರ್ಧಶತಕ ಬಾರಿಸಿದರು. ಗಾಯಕ್ವಾಡ್​ ಕೇವಲ 27 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಜಯ್​ದೇವ್​ ಉನಾದ್ಕತ್​ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು. ಗಾಯಕ್ವಾಡ್ ಮತ್ತು ಮಿಚೆಲ್​ ದ್ವಿತೀಯ ವಿಕೆಟ್​ಗೆ 107 ರನ್​ಗಳ ಅಮೋಘ ಜತೆಯಾಟ ನಡೆಸಿತು. ಮಿಚೆಲ್​ ಅವರು ​ಉನಾದ್ಕತ್ ಎಸೆತ ಲೋ ಫುಲ್​ಟಾಸ್ ಎಸೆತಕ್ಕೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. 7 ಬೌಂಡರಿ ಮತ್ತು 1 ಸಿಕ್ಸರ್​ ಬಾರಿಸಿದ ಮಿಚೆಲ್​ 52 ರನ್​ ಗಳಿಸಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

​ಮಿಚೆಲ್​ ವಿಕೆಟ್​ ಬಿದ್ದರೂ ಕೂಡ ಚೆನ್ನೈ ತಂಡದ ರನ್​ ಗಳಿಕೆಗೆ ಯಾವುದೇ ಹಿನ್ನಡೆಯಾಗಲಿಲ್ಲ. ಶಿವಂ ದುಬೆ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯ ಬ್ಯಾಟಿಂಗ್ ನಡೆಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು. 19.2 ಓವರ್​ ತನಕ ಬ್ಯಾಟಿಂಗ್​ ಕಾಯ್ದುಕೊಂಡಿದ್ದ ಗಾಯಕ್ವಾಡ್​ 98 ರನ್​ ಗಳಿಸಿ ವಿಕೆಟ್​ ಕಳೆದುಕೊಂಡು ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಕಳೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಶತಕ ಸಿಡಿಸಿದ್ದರು. ಸತತವಾಗಿ 2ನೇ ಶತಕ ಬಾರಿಸುವ ಅವಕಾಶ ಕೈ ಚೆಲ್ಲಿದರು. ಒಟ್ಟು 54 ಎಸೆತ ಎದುರಿಸಿದ ಗಾಯಕ್ವಾಡ್​ 10 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 98 ರನ್​ ಗಳಿಸಿದರು.

ಶಿವಂ ದುಬೆ 4 ಬಿಗ್​ ಹಿಟ್ಟಿಂಗ್​ ಸಿಕ್ಸರ್​ ಮತ್ತು 1 ಬೌಂಡರಿ ಬಾರಿಸಿ ಅಜೇಯ 39 ರನ್​ ಗಳಿಸಿದರು. ಧೋನಿ ಕೂಡ 5 ರನ್ ಬಾರಿಸಿ ಅಜೇಯರಾಗಿ ಉಳಿದರು. ಹೈದರಾಬಾದ್​ ಪರ ಭುವನೇಶ್ವರ್ ಕುಮಾರ್​, ಟಿ. ನಟರಾಜನ್​ ಮತ್ತು ಉನಾದ್ಕತ್​ ತಲಾ ಒಂದು ವಿಕೆಟ್​ ಕಿತ್ತರು.​​

Continue Reading

ಕರ್ನಾಟಕ

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳನ್ನು ಪಾಲಿಸದೆ ಇಬ್ಬರು ಆರೋಪಿಗಳು ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಹಾಗಾಗಿ, ಇಬ್ಬರಿಗೂ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Notes
Koo

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಿಯಮಗಳನ್ನು ಉಲ್ಲಂಘಿಸಿ ನೋಟುಗಳನ್ನು ನಗದೀಕರಣ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯವು (CBI Special Court) ಇಬ್ಬರು ಆರೋಪಿಗಳಿಗೆ ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನೋಟು ನಗದೀಕರಣ ಮಾಡಿದ ಎಸ್.‌ ಗೋಪಾಲಯ್ಯ ಹಾಗೂ ಎಲ್‌ಐಸಿ ಏಜೆಂಟ್‌ ಕೆ.ರಾಘವೇಂದ್ರ ಎಂಬುವರಿಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

2016ರಲ್ಲಿ ಕೇಂದ್ರ ಸರ್ಕಾರವು ಐನೂರು ಹಾಗೂ ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ನಿಷೇಧಿತ ಕರೆನ್ಸಿಗಳ ನಗದೀಕರಣಕ್ಕೆ ಆರ್‌ಬಿಐ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇಬ್ಬರೂ ಆರ್‌ಬಿಐ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದರು. ಹಾಗಾಗಿ, ಸಿಬಿಐ ನ್ಯಾಯಾಲಯವು ಇಬ್ಬರಿಗೂ ಜೈಲು ಶಿಕ್ಷೆಯ ಜತೆಗೆ ಭಾರಿ ದಂಡ ವಿಧಿಸಿದೆ. ಎಸ್‌.ಗೋಪಾಲಯ್ಯಗೆ 2.10 ಲಕ್ಷ ರೂ. ಹಾಗೂ ರಾಘವೇಂದ್ರಗೆ 1.6 ಲಕ್ಷ ರೂ. ದಂಡ ವಿಧಿಸಿದೆ.

money guide

ಮಾರ್ಗಸೂಚಿ ಅನುಸರಿಸದೆ ನೋಟುಗಳನ್ನು ನಗದೀಕರಣ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಐ 2017ರ ಮಾರ್ಚ್‌ನಲ್ಲಿ ಈಗ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನಿಖೆ ವೇಳೆ ಇವರ ದುರುದ್ದೇಶ ಬಯಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತಂಡವು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಂತೆ, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೆಲ ತಿಂಗಳ ಹಿಂದಷ್ಟೇ, ರಾಷ್ಟ್ರೀಯ ತನಿಖಾ ದಳವು ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿತ್ತು. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Fake Currency: ಬಳ್ಳಾರಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಇಬ್ಬರ ಬಂಧನ

Continue Reading
Advertisement
dina bhavishya read your daily horoscope predictions for April 29 2024
ಭವಿಷ್ಯ10 mins ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ5 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ5 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು6 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ6 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ6 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ6 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ6 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ7 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ10 mins ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202412 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202415 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202417 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202417 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ20 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌