Kantara Movie | ವರಾಹ ರೂಪಂ ವಿವಾದ: ತಡೆಯಾಜ್ಞೆ ತೆರವು ಕೋರಿದ ಹೊಂಬಾಳೆ ಅರ್ಜಿ ವಜಾ - Vistara News

ಸಿನಿಮಾ

Kantara Movie | ವರಾಹ ರೂಪಂ ವಿವಾದ: ತಡೆಯಾಜ್ಞೆ ತೆರವು ಕೋರಿದ ಹೊಂಬಾಳೆ ಅರ್ಜಿ ವಜಾ

ವರಾಹ ರೂಪಂ ಹಾಡು ಬಳಕೆಗೆ ತಡೆ ನೀಡಿರುವ ಕೋಝಿಕ್ಕೋಡ್‌ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಹೊಂಬಾಳೆ ಫಿಲ್ಮ್ಸ್‌ (Kantara Movie) ಮುಂದಿಟ್ಟಿರುವ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ.

VISTARANEWS.COM


on

Kantara Movie Kerala HC dismisses petitions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯವು ಕಾಂತಾರ ಸಿನಿಮಾದ (Kantara Movie) ‘ವರಾಹ ರೂಪಂ’ ಹಾಡಿನ ಬಳಕೆಯನ್ನು ಮಾಡದಂತೆ ಮಧ್ಯಂತರ ತಡೆಯಾಜ್ಞೆ ಆದೇಶ ಈ ಹಿಂದೆ ನೀಡಿತ್ತು. ಇದರ ವಿರುದ್ಧ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ ಅರ್ಜಿಯನ್ನು ಕೇರಳ ಹೈಕೋರ್ಟ್ ನವೆಂಬರ್‌ 23 ಬುಧವಾರ ವಜಾಗೊಳಿಸಿದೆ. ಪರ್ಯಾಯ ಕಾನೂನು ಪರಿಹಾರ ಪಡೆಯುವುದಕ್ಕೆ ಅರ್ಜಿದಾರರು ಸ್ವತಂತ್ರರು ಎಂದು ನ್ಯಾಯಪೀಠ ಇದೇ ವೇಳೆ ಹೇಳಿದೆ.

ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಅಧೀನ ನ್ಯಾಯಾಲಯಗಳು ನೀಡಿದ ಮಧ್ಯಂತರ ಆದೇಶದಲ್ಲಿ ಆ ನ್ಯಾಯಾಲಯದ ಮೇಲ್ವಿಚಾರಣಾ ಅಧಿಕಾರ ವ್ಯಾಪ್ತಿಯಲ್ಲಿ ನಾವು ಮಧ್ಯಸ್ಥಿಕೆ ವಹಿಸಬಾರದು. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ ಎಂದು ಅರ್ಜಿಯನ್ನು ವಜಾಗೊಳಿಸಿದೆ.

Kantara Movie Kerala HC dismisses petitions

ಇದನ್ನೂ ಓದಿ | Kantara Movie | ಒಟಿಟಿಯಲ್ಲಿ ಕಾಂತಾರ: ಪ್ರೇಕ್ಷಕರು ʻಸಿನಿಮಾ ನೋಡಲು ಮನಸ್ಸಾಗಲ್ಲʼ ಅಂದಿದ್ಯಾಕೆ?

ಕೋರ್ಟ್‌ ಮೊರೆ ಹೋಗಿತ್ತು ಹೊಂಬಾಳೆ
ತಡೆಯಾಜ್ಞೆಯ ಆದೇಶದಂತೆ ಹೊಂಬಾಳೆ ಫಿಲ್ಮ್ಸ್ ಮುಂದಿನ ಆದೇಶದವರೆಗೆ ʻವರಾಹ ರೂಪಂʼ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ನಿರ್ಬಂಧ ವಿಧಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೊಂಬಾಳೆ ಫಿಲ್ಮ್ಸ್‌ ಹೈಕೋರ್ಟ್‌ ಮೊರೆ ಹೋಗಿತ್ತು.

ಏನಿತ್ತು ಕೋರ್ಟ್‌ ಆದೇಶ?
ಈ ಹಿಂದೆ ವರಾಹ ರೂಪಂ ಹಾಡಿನ ಪ್ರಸಾರಕ್ಕೆ ಕೇರಳದ ಕಲ್ಲಿಕೋಟೆಯ ಸೆಷನ್ಸ್‌ ಕೋರ್ಟ್ ತಡೆ ನೀಡಿತ್ತು. ಕಾಂತಾರದ ನಿರ್ಮಾಪಕರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಹಾಡು ಪ್ರಸಾರ ಮಾಡುತ್ತಿರುವ ಅಮೆಜಾನ್‌, ಯುಟ್ಯೂಬ್‌, ಸ್ಪೋಟಿಫೈ, ವಿಂಕ್‌, ಜಿಯೋ ಸಾವನ್‌ ಸೇರಿದಂತೆ ಇನ್ನಿತರ ಆನ್‌ಲೈನ್‌ ವೇದಿಕೆಗಳಿಗೆ ಆದೇಶ ಹೊರಡಿಸಿತ್ತು.

Kantara Movie Kerala HC dismisses petitions

ಬ್ಲಾಕ್‌ಬಸ್ಟರ್‌ ಸಿನಿಮಾ ಕಾಂತಾರದ ವರಾಹ ರೂಪಂ ಹಾಡು ನಾವು ಐದು ವರ್ಷದ ಹಿಂದೆ ರಚಿಸಿ ಬಿಡುಗಡೆ ಮಾಡಿದ್ದ ನವರಸಂ ಹಾಡಿನ ಕಾಪಿ ಎಂಬುದಾಗಿ ತೈಕುಡಂ ಬ್ರಿಡ್ಜ್ ಎಂಬ ಸಂಸ್ಥೆ ಕೋರ್ಟ್‌ ಮೊರೆ ಹೋಗಿತ್ತು. ಅಂತೆಯೇ ವಿಚಾರಣೆ ನಡೆಸಿದ ಕೋರ್ಟ್‌ ಹಾಡಿನ ಪ್ರಸರಣವನ್ನು ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು. ತಡೆಯಾಜ್ಞೆ ತಂದಿರುವ ವಿಚಾರವನ್ನು ತೈಕುಡಂ ಬ್ರಿಜ್‌ ಮ್ಯೂಸಿಕ್‌ ಸಂಸ್ಥೆ, ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿತ್ತು. ಇದರ ಬೆನ್ನಲ್ಲೇ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಕೋರ್ಟ್ ಮೊರೆ ಹೋಗಿತ್ತು. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿತ್ತು.

ಇದನ್ನೂ ಓದಿ | Kantara movie | ವಿಶ್ವಾದ್ಯಂತ ಕಾಂತಾರ ಸಿನಿಮಾ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Banned Film: ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸುವ ಒಂದಷ್ಟು ಹಾಲಿವುಡ್ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿ ಅನುಮತಿ ನೀಡಿಲ್ಲ. ಭಾರತದಲ್ಲಿ ಪ್ರದರ್ಶನಗೊಳ್ಳದ ಆ ಸಿನಿಮಾಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

VISTARANEWS.COM


on

Banned Films
Koo

ಬೆಂಗಳೂರು: ಭಾರತದಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನ ಕಾಣಬೇಕೆಂದರೆ ಮೊದಲು ಭಾರತೀಯ ಸೆನ್ಸಾರ್ ಮಂಡಳಿಯ ಅನುಮತಿ ಪಡೆಯಬೇಕು.  ಭಾರತೀಯ ಸೆನ್ಸಾರ್ ಮಂಡಳಿಯು ಉತ್ತಮವಾದ ಚಲನಚಿತ್ರಗಳನ್ನು ವೀಕ್ಷಿಸಲು ಅನುವು ಮಾಡಿಕೊಡುತ್ತದೆ. ಅಶ್ಲೀಲ ದೃಶ್ಯಾವಳಿ, ಕೆಟ್ಟ ಬೈಗುಳ ಪದಗಳಿರುವಂತಹ ಚಿತ್ರಗಳನ್ನು ಬ್ಯಾನ್ (Banned Film) ಮಾಡಲಾಗುತ್ತದೆ. ಇಂತಹ ಚಿತ್ರಗಳು ಜನರ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಸೆನ್ಸಾರ್ ಮಂಡಳಿ ಅನುಮತಿ ನೀಡುವುದಿಲ್ಲ.

ಒಟಿಟಿ ಅಥವಾ ವಿದೇಶಿ ಮಾರುಕಟ್ಟೆಗಳಲ್ಲಿ ದೊಡ್ಡ ಹೆಸರು ಗಳಿಸಿರುವಂತಹ ಕೆಲವೊಂದು ಚಲನಚಿತ್ರಗಳು ಭಾರತದಲ್ಲಿ ಬಿಡುಗಡೆಯಾಗಲಿಲ್ಲ. ಸೆನ್ಸಾರ್ ಮಂಡಳಿ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ಪ್ರಸಿದ್ಧ ಚಲನಚಿತ್ರಗಳನ್ನು ಭಾರತೀಯ ಸೆನ್ಸಾರ್ ಮಂಡಳಿಯು ಸ್ಪಷ್ಟ ವಿಷಯಗಳ ಕಾರಣದಿಂದ ಭಾರತದಲ್ಲಿ ನಿಷೇಧಿಸಿದೆ. ಅಂತಹ ಹಾಲಿವುಡ್ ಚಿತ್ರಗಳ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Banned Film

1. ಫಿಫ್ಟಿ ಶೇಡ್ಸ್ ಆಫ್ ಗ್ರೇ(Fifty Shade Of Gray)

ಈ ಚಿತ್ರದ ಕಥೆ ಅನಾ ಎಂಬ ಕಾಲೇಜು ವಿದ್ಯಾರ್ಥಿನಿಯ ಸುತ್ತ ಸುತ್ತುತ್ತದೆ. ಆಕೆ ಒಬ್ಬ ವ್ಯಾಪಾರಿ ಉದ್ಯಮಿ ಕ್ರಿಶ್ಚಿಯನ್ನೊಂದಿಗೆ ಸಂಬಂಧ ಹೊಂದುತ್ತಾಳೆ. ಈ ಚಿತ್ರದಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಚಿತ್ರೀಕರಿಸಲಾಗಿದೆ. ಹಾಗಾಗಿ ಈ ಚಿತ್ರವನ್ನು ಭಾರತೀಯ ಸೆನ್ಸರ್ ಮಂಡಳಿ ನಿಷೇಧಿಸಿದೆ.

Banned Film

2. ದ ಡಾ ವಿನ್ಸಿ ಕೋಡ್ (The Da Vinci Code)

ಈ ಚಿತ್ರ ಡಿ ವಿನ್ಸಿ ಕೋಡ್ ರಾಬರ್ಟ್ ಲ್ಯಾಂಗ್ಡನ್ ಎಂಬ ಸಂಕೇತಶಾಸ್ತ್ರಜ್ಞನ ಬಗ್ಗೆ ಚಿತ್ರಿಸುತ್ತದೆ. ಅವರು ಪ್ಯಾರಿಸ್ ನಿಂದ ಲಂಡನ್ ಗೆ ಒಂದು ಕೊಲೆಯ ಬಗ್ಗೆ ತಿಳಿಯಲು ಹೋಗುತ್ತಾರೆ. ಈ ಚಿತ್ರದಲ್ಲಿ ಕ್ರಿಶ್ಚಿಯನ್ ವಿರೋಧಿ ಸಂದೇಶವನ್ನು ನೀಡಲಾಗಿದೆ. ಹಾಗಾಗಿ ಈ ಚಿತ್ರವನ್ನು ನಿಷೇಧಿಸುವಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬಾರತೀಯ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ಬ್ಯಾನ್ ಮಾಡಿದೆ.

3. ದ ಗರ್ಲ್ ವಿತ್ ಡ್ರ್ಯಾಗನ್ ಟ್ಯಾಟೂ (The Girl With Dragon Tattoo)

ಈ ಚಿತ್ರ ನಲವತ್ತು ವರ್ಷಗಳ ಹಿಂದೆ ನಾಪತ್ತೆಯಾದ ಮಹಿಳೆಯೊಬ್ಬಳ ಪ್ರಕರಣವನ್ನು ಭೇದಿಸಲು ಕಂಪ್ಯೂಟರ್ ಹ್ಯಾಕರ್ ಅನ್ನು ನೇಮಿಸಿಕೊಳ್ಳುವ ಪತ್ರಕರ್ತನ ಸುತ್ತ ಸುತ್ತುತ್ತದೆ. 2011ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಕೆಲವು ದೃಶ್ಯಗಳನ್ನು ಸೆನ್ಸರ್ ಮಂಡಳಿ ತೆಗೆದುಹಾಕುವಂತೆ ಹೇಳಿತು. ಆದರೆ ನಿರ್ದೇಶಕ ಡೇವಿಡ್ ಫಿಂಚರ್ ಇದನ್ನು ನಿರಾಕರಿಸಿದ್ದರಿಂದ ಭಾರತದಲ್ಲಿ ಈ ಚಿತ್ರ ಬಿಡುಗಡೆಯಾಗಲಿಲ್ಲ.

Banned Film

4. ಡರ್ಟಿ ಗ್ರ್ಯಾಂಡ್ ಪಾ( durty Grand pa)

ಇದು  ಯುಎಸ್ ನ ಮಿಲಿಟರಿ ಪರಿಣತರನ್ನು ಆಧರಿಸಿದ ಚಿತ್ರವಾಗಿದೆ. ಒಬ್ಬ ಅಜ್ಜ ಮೊಮ್ಮಗ ಜೇಸನ್ ಎನ್ನುವವನನ್ನು ತನ್ನ ಜೊತೆ ಪ್ಲೋರಿಡಾಕ್ಕೆ ಕರೆದೊಯ್ದರು. ಪ್ರವಾಸದ ವೇಳೆ ಅಜ್ಜನ ಸರಣಿ ದುಷ್ಕೃತ್ಯಗಳ ಬಗ್ಗೆ ಆತನಿಗೆ ತಿಳಿದಿರುವುದಿಲ್ಲ. ಈ ಚಿತ್ರದಲ್ಲಿ ಲೈಂಗಿಕತೆಯ ಬಗ್ಗೆ ಬಿಂಬಿಸಿದ ಕಾರಣ ಇದು ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Banned Film

5. ಬ್ಲೂ ಜಾಸ್ಮಿನ್ ( Blue Jasmine)

ಈ ಚಿತ್ರದಲ್ಲಿ ಕೆಲವು ಪಾತ್ರಗಳು ಹೆಚ್ಚು ಧೂಮಪಾನ ಮಾಡುತ್ತಿರುವುದು ಕಂಡುಬಂದ ಕಾರಣ ಅದನ್ನು ತೆಗೆಯುವಂತೆ ಸೆನ್ಸಾರ್ ಮಂಡಳಿ ತಿಳಿಸಿದ್ದು, ಇದಕ್ಕೆ ನಿರ್ದೇಶಕರು ಒಪ್ಪದ ಕಾರಣ ಈ ಚಿತ್ರಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ.

6. ಐ ಸ್ಪಿಟ್ ಆನ್ ಯುವರ್ ಗ್ರೇವ್ ( I Spit On Your Grave)

ಈ ಚಿತ್ರ ವಿವಾದಾತ್ಮಕವಾಗಿದ್ದು, ಹಲವಾರು ಭಯಾನಕ ಲೈಂಗಿಕ ಕಿರುಕುಳದ ದೃಶ್ಯಗಳನ್ನು ಹೊಂದಿದೆ. ಮೀರ್ ಜಾರ್ಚಿ ನಿರ್ದೇಶನದ ಈ ಚಿತ್ರವನ್ನು ಭಾರತ ಮಾತ್ರವಲ್ಲದೇ ಯುಕೆ, ಕೆನಡಾ, ಚೀನಾ, ಆಸ್ಟ್ರೇಲಿಯಾ ಮತ್ತು ಇತರ ಹಲವು ದೇಶಗಳಲ್ಲಿ ನಿಷೇಧಿಸಲಾಗಿದೆ.

7. ಇಂಡಿಯಾನ ಜೋನ್ಸ್ ಆ್ಯಂಡ್ ದ ಟೆಂಪಲ್ ಆಫ್ ಡೂಮ್( Indiana Jones And The Temple Of Doom)

ಆರಾಧನೆಯ ಹೆಸರಿನಲ್ಲಿ ಬಲಿಪಶುಗಳನ್ನು ಬೆಂಕಿಗೆ ಎಸೆಯುವಂತಹ ಕ್ರೂರ ದೃಶ್ಯವನ್ನು ಒಳಗೊಂಡ ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲಿಲ್ಲ. ಭಾರತೀಯ ಸೆನ್ಸಾರ್ ಮಂಡಳಿ ಇದನ್ನು ಕೆಟ್ಟ ಆಚರಣೆಯ ಮನಸ್ಥಿತಿ ಎಂದು ನಿಷೇಧಿಸಿದೆ.

8. ಗೆಟ್ ಹಾರ್ಡ್(Get Hard)

ಕಾಮಿಡಿ ಥ್ರಿಲ್ಲರ್ ಜೇಮ್ಸ್ ಕಿಂಗ್ ಎಂಬ ವ್ಯಕ್ತಿಯನ್ನು ಬಗ್ಗೆ ತಿಳಿಸುತ್ತದೆ ಮತ್ತು ಅವರು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ. ಇದರಿಂದ ಜನರು ಆಕ್ರೋಶಗೊಳ್ಳಬಹುದು ಎಂದು ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Banned Film

9. ಮ್ಯಾಜಿಕ್ ಮೈಕ್ XXL( magic mike XXL)

ಈ ಚಿತ್ರ ಸ್ಟ್ರಿಪ್ಪರ್ ಎಂಬ ಪುರುಷನ ಜೀವನವನ್ನು ಬಿಂಬಿಸುತ್ತದೆ. ಈ ವ್ಯಕ್ತಿ ಸಮಾವೇಶಕ್ಕಾಗಿ ಮಿರ್ಟಲ್ ಬೀಚ್ ಗೆ ತಮ್ಮ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಾನೆ. ಆ ವೇಳೆ ಅವರು ತಮ್ಮ ಹಿಂದಿನ ಹಳೆಯ ನೆನಪುಗಳನ್ನು ಪುನರುಜ್ಜೀವನ ಗೊಳಿಸುತ್ತಾರೆ. ಇದರಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಬಿಂಬಿಸಲಾದ್ದರಿಂದ ಭಾರತದಲ್ಲಿ ಮೊದಲ ಬಾರಿಗೆ ನಿಷೇಧಗೊಂಡಿತ್ತು. ನಂತರ ಅದರಲ್ಲಿರುವ ದೃಶ್ಯವನ್ನು ಕತ್ತರಿಸಲು ಸೆನ್ಸಾರ್ ಮಂಡಳಿ ತಿಳಿಸಿದರೂ ಅದನ್ನು ನಿರಾಕರಿಸಿದ ಕಾರಣ ಅದು ಎರಡನೇ ಬಾರಿ ನಿಷೇಧಗೊಂಡಿತ್ತು. ಹಾಗಾಗಿ ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Continue Reading

ಸ್ಯಾಂಡಲ್ ವುಡ್

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

Yuva Movie: ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

VISTARANEWS.COM


on

Yuva Movie streaming ott yuva rajkumar
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಿಸುತ್ತಿರುವ, ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʼಯುವʼ (Yuva Movie). ಮಾರ್ಚ್‌ 29ರಂದು ತೆರೆ ಕಂಡಿತ್ತು. ಆದರೀಗ ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ. ಸದ್ದಿಲ್ಲದೇ ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ (Amazon Prime) ಆಗುತ್ತಿದೆ.

ವಿಶೇಷ ಎಂದರೆ ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು. ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಕೂಡ ನಡೆದಿತ್ತು.ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಒಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

Continue Reading

ಕಿರುತೆರೆ

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

Kannada Serials TRP: ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಧಾರಾವಾಹಿಗಳ ಟಿಆರ್‌ಪಿ ಭಾರಿ ಕುಸಿತ ಕಂಡಿದೆ. ಈ ವಾರ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ. ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಮೂರನೇ ಸ್ಥಾನ ಪಡೆದುಕೊಂಡಿದೆ. ಸೀತಾ ರಾಮ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ.

VISTARANEWS.COM


on

Kannada Serials TRP IPL Matches Effected On Kannada Serial
Koo

ಬೆಂಗಳೂರು: ಈ ಮೊದಲು ಬಿಗ್ ಬಾಸ್ ಬಂದಾಗ ಧಾರಾವಾಹಿಗಳ ಟಿಆರ್​ಪಿ (Kannada Serials TRP) ಕಡಿಮೆ ಆಗಿತ್ತು. ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಧಾರಾವಾಹಿಗಳ ಟಿಆರ್‌ಪಿ ಭಾರಿ ಕುಸಿತ ಕಂಡಿದೆ. ಈ ವಾರ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ.

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿದೆ. ಈ ಧಾರಾವಾಹಿಯಲ್ಲಿ ಪುಟ್ಟಕ್ಕನ ಮೊದಲ ಮಗಳು ಸಹನಾ ಜೀವನ ಈಗಾಗಲೇ ಬೀದಿಗೆ ಬಿದ್ದಿದೆ. ಹಾಗೇ ಪುಟ್ಟಕ್ಕನ ಎರಡನೇ ಮಗಳು ಅತ್ತೆ ಬಂಗಾರಮ್ಮಳನ್ನು ಜೈಲಿಗೆ ಕಳುಹಿಸಿದ್ದಾಳೆ. ಈಗ ಬಂಗಾರಮ್ಮ ಜೈಲಿನಲ್ಲಿ ನಿಂತು ಪುಟ್ಟಕ ಮುಂದೇನೆ ತನ್ನ ಮನೆಯಿಂದಲೇ ಸ್ನೇಹಾಳನ್ನು ಮನೆಯಿಂದ ಆಚೆ ಹಾಕುವುದಾಗಿ ಹೇಳಿದ್ದಾಳೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ‘ಶ್ರಾವಣಿ ಸುಬ್ರಮಣ್ಯ’: ಟಾಪ್​ ಐದರಲ್ಲಿ ಇಲ್ಲ ʻರಾಮಾಚಾರಿʼ!

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಮೂರನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಅಶೋಕ್ ಹಾಗೂ ಆಕೆಯ ಗೆಳೆತಿಯ ಜತೆ ಮದುವೆ ನಡೆಯುತ್ತಿದೆ. ಇದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 4ನಲ್ಲಿ `ರಾಮಾಚಾರಿ’ ಧಾರಾವಾಹಿ; ರೇಸ್‌ನಲ್ಲಿ ಇಲ್ಲ ʻಸತ್ಯʼ, ʻಶ್ರೀರಸ್ತು ಶುಭಮಸ್ತುʼ!

‘ಶ್ರಾವಣಿ ಸುಬ್ರಮಣ್ಯ’

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Uttarakaanda Movie: ಪಾಟೀಲನಾಗಿ ‘ಉತ್ತರಕಾಂಡ’ ಸಿನಿಮಾಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್

Uttarakaanda Movie: ಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Uttarakaanda Movie Yogaraj bhat entry
Koo

ಬೆಂಗಳೂರು: ಖ್ಯಾತ ನಿರ್ದೇಶಕ ಯೋಗರಾಜ್ ಭಟ್ `ಉತ್ತರಾಕಾಂಡ’ದಲ್ಲಿ (Uttarakaanda Movie) ನಟಿಸಲಿದ್ದಾರೆ‌. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆ್ಯಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. 

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading
Advertisement
Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ13 mins ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ15 mins ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

IPL 2024
ಕ್ರೀಡೆ18 mins ago

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

Party symbols
ರಾಜಕೀಯ22 mins ago

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

letter to President
ಕರ್ನಾಟಕ23 mins ago

letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Surapura assembly constituency by election Congress candidate Rajavenugopal Nayaka filed nomination
ಯಾದಗಿರಿ40 mins ago

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Royal Challengers Banaglore
ಕ್ರೀಡೆ44 mins ago

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Video Viral Parameshwara statement on ballot paper bogus voting
ವೈರಲ್ ನ್ಯೂಸ್46 mins ago

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Money Guide
ಮನಿ-ಗೈಡ್1 hour ago

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

‌Assault Case
ಕರ್ನಾಟಕ1 hour ago

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ5 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ16 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌