Sidhu Moose Wala Murder | ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ 10 ದಿನ ಎನ್‌ಐಎ ಕಸ್ಟಡಿಗೆ - Vistara News

ಕ್ರೈಂ

Sidhu Moose Wala Murder | ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ 10 ದಿನ ಎನ್‌ಐಎ ಕಸ್ಟಡಿಗೆ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ (Sidhu Moose Wala Murder) ಆರೋಪಿ ಲಾರೆನ್ಸ್‌ ಬಿಷ್ಣೋಯಿಯನ್ನು ಎನ್‌ಐಎ ಬಂಧಿಸಿದೆ.

VISTARANEWS.COM


on

Sidhu Moose Wala Murder Case
ಪಂಜಾಬಿ ಗಾಯಕ ಸಿಧು ಮೂಸೆವಾಲಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಪಂಜಾಬಿ ಗಾಯಕ, ಕಾಂಗ್ರೆಸ್‌ ಮುಖಂಡ ಸಿಧು ಮೂಸೆವಾಲಾ ಹತ್ಯೆ (Sidhu Moose Wala Murder) ಪ್ರಕರಣದಲ್ಲಿ ಬಂಧಿತನಾಗಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿಯನ್ನು ಕೋರ್ಟ್‌ 10 ದಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಸ್ಟಡಿಗೆ ನೀಡಲಾಗಿದೆ.

“ಸಿಧು ಮೂಸೆವಾಲಾ ಹತ್ಯೆ ಹಿಂದೆ ದೊಡ್ಡ ಪಿತೂರಿಯೇ ಇದೆ. ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳ ಪೂರೈಕೆಯಾಗುತ್ತಿದೆ. ಸಿಧು ಮೂಸೆವಾಲಾ ಅವರಂತಹವರು ಕೆಲವು ಟಾರ್ಗೆಟ್‌ ಅಷ್ಟೆ. ಹಾಗಾಗಿ, ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿಯನ್ನು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ” ಎಂದು ಎನ್‌ಐಎ ತಿಳಿಸಿತು. ಆಗ ಪಟಿಯಾಲ ಹೌಸ್‌ ಕೋರ್ಟ್‌, 10 ದಿನ ಕಸ್ಟಡಿಗೆ ನೀಡಿತು.

ಸಿಧು ಮೂಸೆವಾಲಾ ಅವರನ್ನು ಮೇ 29ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಿರುವ ಎನ್‌ಐಎ ಅಧಿಕಾರಿಗಳು‌, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಗೆ ಬಳಸಿದ AN-94 ರೈಫಲ್‌, AK-47ಕ್ಕಿಂತ ಅಪಾಯಕಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮೈಸೂರು

Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Food Poisoning : ಮೈಸೂರಿನಲ್ಲಿ ಗೃಹ ಪ್ರವೇಶದ ಕಾರ್ಯಕ್ರಮದಲ್ಲಿ ಊಟ ತಿಂದವರಿಗೆ ವಾಂತಿ, ಭೇದಿಯಾಗಿದ್ದು, ವೃದ್ಧೆಯೊಬ್ಬರು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ಆಸ್ಪತ್ರೆ ಮುಂದೆ ಜಮಾಯಿಸಿದ ಕುಟುಂಬಸ್ಥರು
Koo

ಮೈಸೂರು: ಗೃಹ ಪ್ರವೇಶದಲ್ಲಿ ಊಟ ತಿಂದ ವೃದ್ಧೆಯೊಬ್ಬರು ತೀವ್ರ ಅಸ್ವಸ್ಥಗೊಂಡು (Food Poisoning) ಮೃತಪಟ್ಟಿದ್ದಾರೆ. ಶಿವಮ್ಮ (65) ಮೃತ ದುರ್ದೈವಿ. ಮೈಸೂರಿನ ಮಾರ್ಬಳ್ಳಿಯಲ್ಲಿ ಘಟನೆ ನಡೆದಿದೆ.

ಮಾರ್ಬಳ್ಳಿಯಲ್ಲಿ ನಿನ್ನೆ ಭಾನುವಾರ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮವಿತ್ತು. ಈ ಗೃಹ ಪ್ರವೇಶ ಕಾರ್ಯದಲ್ಲಿ ಗ್ರಾಮಸ್ಥರು ಊಟ ಸೇವಿಸಿದ್ದರು. ಊಟದ ಬಳಿಕ ಸುಮಾರು ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿ ಶುರುವಾಗಿತ್ತು.

ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

ಬರ್ತ್‌ ಡೇ ಪಾರ್ಟಿಯಲ್ಲಿ ಭಾರೀ ಶೂಟೌಟ್‌-27 ಮಂದಿಗೆ ಗುಂಡೇಟು

ಅಕ್ರಾನ್‌ : ಕೆಲವೊಮ್ಮೆ ಸಣ್ಣ ಪುಟ್ಟ ಗಲಾಟೆ ಜಗಳ, ಕೋಪ, ಎಡವಟ್ಟಿನಿಂದಾಗಿ ಅದೆಂಥಾ ದೊಡ್ಡ ಸಂಭ್ರಮಾಚರಣೆ ಆಗಿದ್ದರೂ ಅದನ್ನು ಒಂದು ಕ್ಷಣದಲ್ಲಿ ಸ್ಮಶಾನವನ್ನಾಗಿಸಿ ಬಿಡುತ್ತದೆ. ಅಂತಹದ್ದೇ ಒಂದು ಘಟನೆ ಅಮೆರಿಕದ ಓಹಿಯೋ ರಾಜ್ಯದಲ್ಲಿ ನಡೆದಿದೆ. ಸಂಭ್ರಮದಿಂದ ನಡೆಯುತ್ತಿದ್ದ ಬರ್ತ್‌ ಡೇ ಪಾರ್ಟಿ(Birthday Party) ದುರಂತ ಅಂತ್ಯ ಕಂಡಿದೆ. ಏಕಾಏಕಿ ಶೂಟೌಟ್‌(Shootout) ನಡೆದಿದ್ದು, ಬರೋಬ್ಬರಿ 27 ಮಂದಿಗೆ ಗುಂಡೇಟು ಬಿದ್ದಿದೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಓಹಿಯೋ ರಾಜ್ಯದ ಅಕ್ರಾನ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಕೆಲ್ಲಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ 10 ಗಂಟೆಗೆ ಬರ್ತ್‌ ಡೇ ಪಾರ್ಟಿವೊಂದನ್ನು ಆಯೋಜಿಸಲಾಗಿತ್ತು. ಹೀಗಾಗಿ ಸುಮಾರು 200ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಜನ ಕಿಕ್ಕಿರಿದಿದ್ದ ಹಿನ್ನೆಲೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗಿತ್ತು ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಸ್ತೆ ಕ್ಲಿಯರ್‌ ಮಾಡುವಂತೆ ಸೂಚಿಸಿದ್ದರು. ಇದಾದ ಬಳಿಕ ಅವರು ಅಲ್ಲಿಂದ ತೆರಳಿದ್ದರು. ಇದಾದ ಕೆಲವೇ ಹೊತ್ತಲ್ಲಿ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಪೊಲೀಸರಿಗೆ ಬ್ಯಾಕ್‌ ಟು ಬ್ಯಾಕ್‌ ಕರೆಗಳು ಹೋಗಿವೆ. ಸ್ಥಳಕ್ಕೆ ಬಂದು ನೋಡಿದಾಗ 25ಜನ ಗುಂಡೇಟು ತಗುಲಿ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲೇ ಜೀವನ್ಮರಣದ ನಡುವೆ ಹೋರಾಡುತ್ತಿದ್ದರು.

ಇನ್ನು ಘಟನೆಯಲ್ಲಿ 27ವರ್ಷದ ಒಬ್ಬ ಯುವಕ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಬಹಳ ಗಂಭೀರವಾಗಿದೆ. ಇನ್ನು ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ, ರೈಫಲ್‌ನಿಂದ ಕೇಸಿಂಗ್‌ಗಳು ಸೇರಿದಂತೆ ಎರಡು ಬಂದೂಕುಗಳು ಮತ್ತು ಅನೇಕ ರೀತಿಯ ಶೆಲ್ ಕೇಸಿಂಗ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

1993 Mumbai Serial Blast: ಜೈಲಿನಲ್ಲೇ ಹತ್ಯೆಯಾದ ಸರಣಿ ಬಾಂಬ್‌ ಬ್ಲಾಸ್ಟ್‌ ಅಪರಾಧಿ

1993 Mumbai Serial Blast: ಜೈಲಿನ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ವಾಗ್ವಾದ ನಡೆದು ಇತರ ಕೈದಿಗಳು 59 ವರ್ಷದ ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭವರ್ಲಾಲ್ ಗುಪ್ತಾ ಮೇಲೆ ಹಲ್ಲೆಗೈದಿದ್ದಾರೆ. ಮೊಹಮ್ಮದ್‌ ಅಲಿ ಖಾನ್‌ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಸ್ಫೋಟಕ್ಕೆ ಮೊದಲು ಭಯೋತ್ಪಾದಕರಿಗೆ ಆರ್ಡಿಎಕ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ತಲುಪಿಸಿದ ಆರೋಪ ಮೊಹಮ್ಮದ್ ಮೇಲಿದೆ. ಸದ್ಯ ಕೊಲ್ಹಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

VISTARANEWS.COM


on

1993 Mumbai Serial Blast
Koo

ಕೊಲ್ಹಾಪುರ: ಜೈಲಿನಲ್ಲಿರುವ 1993ರ ಮುಂಬೈ ಬಾಂಬ್ ಸ್ಫೋಟ(1993 Mumbai Serial Blast) ಪ್ರಕರಣದ ಅಪರಾಧಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭನ್ವರ್ ಲಾಲ್ ಗುಪ್ತಾನನ್ನು ಸಹ ಕೈದಿಗಳೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೊಹಮ್ಮದ್‌ ಅಲಿ ಖಾನ್‌, ಮಹಾರಾಷ್ಟ್ರ(Maharashtra)ದ ಕೊಲ್ಹಾಪುರದಲ್ಲಿರುವ ಕಲಾಂಬಾ ಜೈಲಿನಲ್ಲಿದ್ದ. ಈತನನ್ನು ಐವರು ಕೈದಿಗಳು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿ

ಜೈಲಿನ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ವಾಗ್ವಾದ ನಡೆದು ಇತರ ಕೈದಿಗಳು 59 ವರ್ಷದ ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭವರ್ಲಾಲ್ ಗುಪ್ತಾ ಮೇಲೆ ಹಲ್ಲೆಗೈದಿದ್ದಾರೆ. ಮೊಹಮ್ಮದ್‌ ಅಲಿ ಖಾನ್‌ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಸ್ಫೋಟಕ್ಕೆ ಮೊದಲು ಭಯೋತ್ಪಾದಕರಿಗೆ ಆರ್ಡಿಎಕ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ತಲುಪಿಸಿದ ಆರೋಪ ಮೊಹಮ್ಮದ್ ಮೇಲಿದೆ. ಸದ್ಯ ಕೊಲ್ಹಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಕಲಂಬಾದ ಕೇಂದ್ರ ಕಾರಾಗೃಹದಲ್ಲಿದ್ದ ಮೊಹಮ್ಮದ್ ಅಲಿ ಖಾನ್ ಅವರನ್ನು ಭಾನುವಾರ ಬೆಳಿಗ್ಗೆ ಕೆಲವು ಕೈದಿಗಳು ಚರಂಡಿ ಮುಚ್ಚಳದಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಲಿ ನೀರಿನ ಟ್ಯಾಂಕ್ ಬಳಿ ಸ್ನಾನ ಮಾಡಲು ಹೋದಾಗ, 5 ಕೈದಿಗಳು ಒಟ್ಟಾಗಿ ಒಳಚರಂಡಿಗೆ ತಳ್ಳಿ ಹಲ್ಲೆ ನಡೆಸಿದ್ದರು. ಈ ವೇಳೆ ಒಳಚರಂಡಿಯಲ್ಲಿಟ್ಟಿದ್ದ ಕಬ್ಬಿಣದ ರಾಡ್‌ನಿಂದ ಖಾನ್‌ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಖಾನ್‌ ಮೃತಪಟ್ಟಿದ್ದಾನೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಪಿಳ್ಳ್ಯ ಸುರೇಶ್ ಪಾಟೀಲ್, ಸಂದೀಪ್ ಶಂಕರ್, ದೀಪಕ್ ಖೋಟ್, ರಿತುರಾಜ್ ವಿನಾಯಕ್ ಮತ್ತು ಸೌರಭ್ ವಿಕಾಸ್ ಕೊಲೆಗೈದಿದ್ದಾರೆ.

ದಾಳಿಕೋರರನ್ನು ಪ್ರತೀಕ್ ಅಲಿಯಾಸ್ ಪಿಲ್ಯ ಸುರೇಶ್ ಪಾಟೀಲ್, ದೀಪಕ್ ನೇತಾಜಿ ಖೋಟ್, ಸಂದೀಪ್ ಶಂಕರ್ ಚವಾಣ್, ಋತುರಾಜ್ ವಿನಾಯಕ್ ಇನಾಮದಾರ್ ಮತ್ತು ಸೌರಭ್ ವಿಕಾಸ್ ಎಂದು ಗುರುತಿಸಲಾಗಿದೆ. ಕೊಲ್ಲಾಪುರ ಪೊಲೀಸರು ಐವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಮಾರ್ಚ್ 12, 1993 ರಂದು, ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಜನರು ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ, ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತು ಮತ್ತು ನಂತರ ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ:Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Continue Reading

ಕ್ರೈಂ

Moral Policing: ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ

Moral Policing: ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

VISTARANEWS.COM


on

moral policing shivamogga
Koo

ಶಿವಮೊಗ್ಗ: ಮುಸ್ಲಿಂ ಸಹೋದ್ಯೋಗಿಯನ್ನು (Muslim colleague) ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ (Hindu youth) ಮೇಲೆ ಹಲ್ಲೆ (Assault Case) ಮಾಡಿದ ಘಟನೆ ಶಿವಮೊಗ್ಗ (Shivamogga news) ನಗರದ ಆರ್‌ಎಂಎಲ್ ನಗರದ ಸಮೀಪ ನಡೆದಿದೆ. ಪ್ರಕರಣ (moral policing) ತುಸು ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್, ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 20ಕ್ಕೂ ಹೆಚ್ಚು ಅನ್ಯ ಕೋಮಿನ ಯುವಕರು ನಂದನ್‌ನನ್ನು ತಡೆದು ಥಳಿಸಿದ್ದರು.

ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಶಾಸಕ ಎಸ್.ಎನ್ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ನಂದನ್ ಆರೋಗ್ಯ ವಿಚಾರಿಸಿದರು. ನಂದನ್‌ಗೆ ಧೈರ್ಯ ಹೇಳಿ, ಸೂಕ್ತ ಕಾನೂನು ಕ್ರಮದ ಭರವಸೆ ನೀಡಿದರು.

ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್‌ ಆಡಳಿತವನ್ನು ಆಕ್ಷೇಪಿಸಿದ್ದಾರೆ. “ಕಾನೂನು ಸುವ್ಯವಸ್ಥೆಯನ್ನು ಮತೀಯ ಆಧಾರದ ಮೇಲೆ ನಿರ್ವಹಿಸುವ ಮೂಲಕ ಬಹುಸಂಖ್ಯಾತರನ್ನು ಕಾಂಗ್ರೆಸ್‌ ಅಭದ್ರತೆಯ ಸ್ಥಿತಿಗೆ ತಳ್ಳುತ್ತಿದೆ. ಸರ್ಕಾರದ ಆಡಳಿತ ತುಘಲಕ್ ನೀತಿಯನ್ನು ನೆನಪಿಸುತ್ತಿದೆ. ಅಮಾಯಕ ಹಿಂದೂ ಯುವಕನ ಮೇಲಿನ ಹಲ್ಲೆ ಘಟನೆಯು ಶಾಂತಿ ಸುವ್ಯವಸ್ಥೆ ಕದಡುವ ಸ್ಥಿತಿಗೆ ಕಾರಣವಾಗದಂತೆ ಪೋಲಿಸರು ಕಾರ್ಯೋನ್ಮುಖರಾಗಿ ನಂದನ್ ಮೇಲೆ ಹಲ್ಲೆ ನಡೆಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸುವೆ” ಎಂದು ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ

ಯಾದಗಿರಿ/ವಿಜಯಪುರ: ಭಾರಿ ಮಳೆಗೆ ವಿದ್ಯುತ್‌ ಕಂಬ ಮುರಿದು (Accident Case) ಬಿದ್ದಿತ್ತು. ಕಂಬ ಜೋಡಣೆ ಮಾಡುವಾಗ ಎಡವಟ್ಟಾಗಿದ್ದು, ಕಂಬ ಏರಿ ರಿಪೇರಿ ಕೆಲಸ ಮಾಡುವಾಗ ಕಾರ್ಮಿಕನಿಗೆ ದಿಢೀರ್‌ ವಿದ್ಯುತ್ ಪ್ರವಹಿಸಿ ಒದ್ದಾಡಿದ್ದಾನೆ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕ ರಾಯಪ್ಪ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಲೈನ್ ಬಂದ್ ಮಾಡಿ ಕೆಲಸ ಮಾಡುತ್ತಿದ್ದಾಗ ಏಕಾಎಕಿ ವಿದ್ಯುತ್‌ ಹರಿದಿದೆ. ಕಾರ್ಮಿಕ ರಾಯಪ್ಪ ನಿಯಂತ್ರಣ ತಪ್ಪಿದ್ದು ಕಂಬದಲ್ಲಿ ನೇತಾಡಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ನಂತರ ವಿದ್ಯುತ್ ಬಂದ್ ಮಾಡಿಸಿ ಸ್ಥಳೀಯರೇ ವಿದ್ಯುತ್‌ ಕಂಬ ಏರಿ ಕಾರ್ಮಿಕನ‌ನ್ನು ರಕ್ಷಣೆ ಮಾಡಿದ್ದಾರೆ. ಕೆಂಭಾವಿ ವಿಭಾಗದ ಜೆಸ್ಕಾಂ ‌ಸಿಬ್ಬಂದಿ ಬೇಜವಾಬ್ದಾರಿತನ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Continue Reading

ಕ್ರೈಂ

Road Accident: ವಿಆರ್‌ಎಲ್ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಹಲವರಿಗೆ ಗಾಯ

Road Accident: ವಿಜಯಾನಂದ ರೋಡ್‌ಲೈನ್ಸ್‌ (VRL) ಸಂಸ್ಥೆಗೆ ಸೇರಿದ ಬಸ್‌ ಅಪಘಾತಕ್ಕೀಡಾಯಿತು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಹತ್ತುಗೂಡೂರು ಬಳಿ ಪಲ್ಟಿಯಾಯಿತು. ಕಲಬುರಗಿ ಮೂಲದ ಇಬ್ಬರು ಪ್ರಯಾಣಿಕರು ಸಾವಿಗೀಡಾದರು.

VISTARANEWS.COM


on

vrl bus road accident
Koo

ಯಾದಗಿರಿ: ಖಾಸಗಿ ಬಸ್‌ ಪಲ್ಟಿಯಾಗಿ (bus accident) ಇಬ್ಬರು ಮೃತಪಟ್ಟು (death news) ಹತ್ತಾರು ಮಂದಿಗೆ ಗಾಯಗಳಾಗಿವೆ. ಈ ಅಪಘಾತ (Road Accident) ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡೂರು ಗ್ರಾಮದ ಬಳಿ ನಡೆದಿದೆ.

ವಿಜಯಾನಂದ ರೋಡ್‌ಲೈನ್ಸ್‌ (VRL) ಸಂಸ್ಥೆಗೆ ಸೇರಿದ ಬಸ್‌ ಅಪಘಾತಕ್ಕೀಡಾಯಿತು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಹತ್ತುಗೂಡೂರು ಬಳಿ ಪಲ್ಟಿಯಾಯಿತು. ಕಲಬುರಗಿ ಮೂಲದ ಇಬ್ಬರು ಪ್ರಯಾಣಿಕರು ಸಾವಿಗೀಡಾದರು. ಬಸ್‌ನಲ್ಲಿ 37 ಜನ ಪ್ರಯಾಣ ಮಾಡುತ್ತಿದ್ದರು. ಬಸ್‌ನಲ್ಲಿ ಸಿಲುಕಿಕೊಂಡ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಚಾಲಕ ಸೇರಿ 6 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

ಹೊಸದಿಲ್ಲಿ: ಭಾನುವಾರ ರಾತ್ರಿ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ಲೋಡಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ (Tractor Accident) ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಪ್ರಯಾಣಿಕರು (Road Accident) ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಮೃತರು, ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದ (wedding procession) ಮದುವೆ ದಿಬ್ಬಣದಲ್ಲಿದ್ದರು.

ರಾಜ್‌ಗಢ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ತಿಳಿಸಿದ್ದಾರೆ. “ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ” ಎಂದು ಅವರು ತಿಳಿಸಿದರು.

ಮದುವೆ ದಿಬ್ಬಣದ ಟ್ರಾಕ್ಟರ್‌ನಲ್ಲಿ 40ರಿಂದ 50 ಜನರು ಹತ್ತಿದ್ದು, ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. “40ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ” ಎಂದು ದೀಕ್ಷಿತ್ ತಿಳಿಸಿದ್ದಾರೆ.

ಚಾಲಕ ಪಾನಮತ್ತನಾಗಿದ್ದ ಮತ್ತು ಟ್ರಾಲಿ ಓವರ್‌ಲೋಡ್ ಆಗಿತ್ತು ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ನಂತರ, ಜನರು ಅದರ ಅಡಿಯಲ್ಲಿ ಸಿಲುಕಿಕೊಂಡರು. ತಡರಾತ್ರಿಯವರೆಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯಲಾಯಿತು.

ರಾಷ್ಟ್ರಪತಿ ಮುರ್ಮು, ಸಿಎಂ ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಮೃತರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ. “ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಹಾಗೂ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ (MP CM Mohan Yadav) ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ರಾಜಸ್ಥಾನದ ಝಲಾವರ್ ಜಿಲ್ಲೆಯ 13 ಜನರ ಅಕಾಲಿಕ ಮರಣದ ಸುದ್ದಿ ಅತ್ಯಂತ ದುಃಖಕರವಾಗಿದೆ. ಸ್ಥಳದಲ್ಲಿ ಜನಪ್ರತಿನಿಧಿ ನಾರಾಯಣ ಸಿಂಗ್ ಪನ್ವಾರ್‌, ರಾಜಗಢ ಜಿಲ್ಲಾಧಿಕಾರಿ ಮತ್ತು ಎಸ್ಪಿ ಉಪಸ್ಥಿತರಿದ್ದರು. ನಾವು ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ರಾಜ್‌ಗಡ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳ ಚಿಕಿತ್ಸೆ ನಡೆಯುತ್ತಿದೆ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್‌ಗೆ ಕಳಿಸಲಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಯಾದವ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Continue Reading
Advertisement
Udupi-Chikmagalur Lok Sabha constituency
ದೇಶ18 mins ago

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Vasishta Simha Lovely Kannada Film Trailer Event
ಸ್ಯಾಂಡಲ್ ವುಡ್24 mins ago

Vasishta Simha: ಟ್ರೈಲರ್‌ ಲಾಂಚ್ ವೇಳೆ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ವಸಿಷ್ಠ ಸಿಂಹ!

Heat wave
ದೇಶ24 mins ago

Heat Wave: ಒಡಿಶಾದಲ್ಲಿ ಬಿಸಿಗಾಳಿ ಶಾಖಕ್ಕೆ ಒಂದೇ ದಿನ 45 ಜನ ಬಲಿ

Food Poisoning
ಮೈಸೂರು26 mins ago

Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Gold Rate Today
ಚಿನ್ನದ ದರ35 mins ago

Gold Rate Today: ಚಿನ್ನದ ಬೆಲೆ ಮತ್ತೂ ಇಳಿಕೆ; ಇಂದಿನ ಧಾರಣೆಯನ್ನು ಇಲ್ಲಿ ಗಮನಿಸಿ

karnataka Rain
ಮಳೆ46 mins ago

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Team India
ಪ್ರಮುಖ ಸುದ್ದಿ55 mins ago

Team India : ಈ ಕೆಲಸ ಇಷ್ಟವಿದೆ; ಟೀಮ್ ಇಂಡಿಯಾ ಕೋಚ್​ ಹುದ್ದೆಯ ಬಗ್ಗೆ ಮೊದಲ ಹೇಳಿಕೆ ನೀಡಿದ ಗೌತಮ್ ಗಂಭೀರ್​

Priyanka Chopra The Bluff team Malti enjoys
ಬಾಲಿವುಡ್1 hour ago

Priyanka Chopra: ಆಸ್ಟ್ರೇಲಿಯಾದ ಬೀಚ್‌ನಲ್ಲಿ ಅಮ್ಮನ ಸಿನಿ ತಂಡದ ಜತೆ ಎಂಜಾಯ್ ಮಾಡಿದ ಮಾಲತಿ ಮೇರಿ ಚೋಪ್ರಾ!

George Fernandes ರಾಜಮಾರ್ಗ ಅಂಕಣ
ಅಂಕಣ1 hour ago

ರಾಜಮಾರ್ಗ ಅಂಕಣ: ಜಾರ್ಜ್ ಫರ್ನಾಂಡಿಸ್ ಮತ್ತು ಕೊಂಕಣ್ ರೈಲ್ವೆ ಎಂಬ ಮಹಾ ಕನಸು!

gold rate today
ಕರ್ನಾಟಕ1 hour ago

Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌