ಮಾತಿನ ಮಲ್ಲ, ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್‌ ಇನ್ನಿಲ್ಲ - Vistara News

ಕರ್ನಾಟಕ

ಮಾತಿನ ಮಲ್ಲ, ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್‌ ಇನ್ನಿಲ್ಲ

ಯಕ್ಷಗಾನ ಮತ್ತು ತಾಳಮದ್ದಳೆಗಳ ಹೆಸರಾಂತ ಕಲಾವಿದ ಕುಂಬಳೆ ಸುಂದರ ರಾವ್‌ ಅವರು ನಿಧನರಾಗಿದ್ದು, ಯಕ್ಷಗಾನ ವಲಯ ತೀವ್ರ ಶೋಕ ವ್ಯಕ್ತಪಡಿಸಿದೆ.

VISTARANEWS.COM


on

kumble sundar rao
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಕ್ಷರಂಗದಲ್ಲಿ ಮಾತಿನ ಮನೆ ಕಟ್ಟಿದ ಹಿರಿಯ ಕಲಾವಿದ, ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬಳೆ ಸುಂದರ್ ರಾವ್(88) ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಪ್ರಾಸಬದ್ಧವಾದ ಮಾತುಗಾರಿಕೆಗೆ ಹೆಸರಾಗಿದ್ದ ಅವರು ಯಕ್ಷಗಾನ ಬಯಲಾಟ ಹಾಗೂ ತಾಳಮದ್ದಳೆ ಎರಡೂ ಪ್ರಕಾರಗಳಲ್ಲಿ ಹೆಸರಾದ ಕಲಾವಿದರಾಗಿದ್ದರು. ಯಾವುದೇ ಬಗೆಯ ಪಾತ್ರಗಳನ್ನು ಲೀಲಾಜಾಲವಾಗಿ ಮಾಡುತ್ತಿದ್ದ ಅವರಿಗೆ ಪಾದುಕಾ ಪಟ್ಟಾಭಿಷೇಕದ ಭರತ, ವಿರಾಟ ಪರ್ವದ ಉತ್ತರ ಕುಮಾರ, ಕೃಷ್ಣ ಸಂಧಾನದ ಕೃಷ್ಣ, ದಕ್ಷಯಜ್ಞದ ಈಶ್ವರ, ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಗೋವಿಂದ ದೀಕ್ಷಿತ, ತ್ರಿಪುರ ಮಥನದ ಚಾರ್ವಾಕ ಮುಂತಾದ ಪಾತ್ರಗಳು ಬಹಳಷ್ಟು ಪ್ರಸಿದ್ಧಿಯನ್ನು ತಂದುಕೊಟ್ಟಿದ್ದವು. ಭಕ್ತಿ, ಕರುಣಾರಸದ ಪಾತ್ರಗಳನ್ನು ಹೆಚ್ಚು ಸೊಗಸಾಗಿ ಚಿತ್ರಿಸುತ್ತಿದ್ದರು.

ಇಂದು ಕೇರಳವನ್ನು ಸೇರಿರುವ ಕಾಸರಗೋಡು ಸಮೀಪದ ಕುಂಬಳೆಯಲ್ಲಿ ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಜನಿಸಿದ ಅವರು ಚಿಕ್ಕಂದಿನಲ್ಲಿಯೇ ಯಕ್ಷಗಾನದ ತೀವ್ರ ಆಸಕ್ತಿ ಬೆಳೆಸಿಕೊಂಡಿದ್ದರು. ನಂತರ ಕೂಡ್ಲು, ಕುಂಡಾವು, ಸುರತ್ಕಲ್, ಧರ್ಮಸ್ಥಳ, ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಮಿಂಚಿದರು. ಶೇಣಿ ಗೋಪಾಲಕೃಷ್ಣ ಭಟ್‌, ಮಲ್ಪೆ ಶಂಕರನಾರಾಯಣ ಸಾಮಗ, ಮಲ್ಪೆ ರಾಮದಾಸ ಸಾಮಗ, ತೆಕ್ಕಟ್ಟೆ ಆನಂದ ಮಾಸ್ಟರ್ ಮುಂತಾದವರ ಜತೆ ತಾಳಮದ್ದಳೆಗಳಲ್ಲೂ ಮೆರೆದರು. ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಂಘಟನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಅವರು ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಒಂದು ಅವಧಿಗೆ ಕಾರ್ಯ ನಿರ್ವಹಿಸಿದರು.

ಮತದಾರರಿಂದಲೇ ವಿಧಾನಸಭೆಗೆ ಆರಿಸಲ್ಪಟ್ಟ ಪ್ರಪ್ರಥಮ ಯಕ್ಷಗಾನ ಕಲಾವಿದ ಎಂಬ ಶಾಸಕರೆಂಬ ಹೆಗ್ಗಳಿಕೆ ಅವರದು. ಬಿಜೆಪಿಯಿಂದ ಟಿಕೆಟ್‌ ಪಡೆದು ಸುರತ್ಕಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಬಂದು 1994ರಿಂದ 1999ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ, ರವೀಂದ್ರ ಕಲಾಕ್ಷೇತ್ರವನ್ನು ಯಕ್ಷಗಾನ ಪ್ರದರ್ಶನಕ್ಕೆ ಸರ್ಕಾರ ನಿರಾಕರಿಸಿದಾಗ, ಸದನದಲ್ಲಿ ಪ್ರತಿಭಟಿಸಿ ಯಕ್ಷಗಾನಕ್ಕೆ ಅನುಮತಿ ದೊರಕಿಸಿಕೊಟ್ಟಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಪಡೆದಿದ್ದಾರೆ.

ಸುಂದರ ರಾವ್‌ ನಿಧನಕ್ಕೆ ಯಕ್ಷಗಾನ ವಲಯ ತೀವ್ರ ಶೋಕ ವ್ಯಕ್ತಪಡಿಸಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಮಂಗಳೂರು ಪಂಪ್‌ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ | Kateel Durgaparameshwari | ಕಾಲಮಿತಿ ಯಕ್ಷಗಾನ ಪ್ರದರ್ಶನಕ್ಕೆ ವಿರೋಧ; ಕಟೀಲಮ್ಮನೆಡೆ ಭಕ್ತರ ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

‌Assault Case: ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಲಕ್ಷ್ಮಿನಾರಾಯಣ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು. ಮೋದಿ ಹಾಡು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯುವಕನನ್ನು ಥಳಿಸಲಾಗಿತ್ತು. ಈ ಸಂಬಂಧ ಐವರ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

‌Assault Case
Koo

ಮೈಸೂರು: ಮೋದಿ ಹಾಡು ಬಿಡುಗಡೆ ಮಾಡಿದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ (‌Assault Case) ಸಂಬಂಧಿಸಿ ನಗರದ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲ್ಲೆಗೊಳಗಾದ ಯುವಕ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಲೀಂ, ಜಾವೀದ್, ಪಾಷಾ ಸೇರಿ ಐವರ ಮೇಲೆ ಎಫ್ಐಆರ್ ದಾಖಲಾಗಿದೆ. ಹಳ್ಳಿಕೆರೆಹುಂಡಿ ಗ್ರಾಮದ ಲಕ್ಷ್ಮಿನಾರಾಯಣ್ ಎಂಬ ಯುವಕನ ಮೇಲೆ ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಹಲ್ಲೆ ನಡೆದಿತ್ತು.

ಮೂರನೇ ಬಾರಿ ಮೋದಿ ಅಧಿಕಾರಕ್ಕೆ ಏಕೆ ಬರಬೇಕು ಎಂದು ಯುವಕ ಹಾಡು ರಚಿಸಿದ್ದ. ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಸಾರ್ವಜನಿಕವಾಗಿ ವಿಡಿಯೊ ನೋಡುವಂತೆ ಮನವಿ ಮಾಡುತ್ತಿದ್ದ.
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವಿಡಿಯೊ ನೋಡುವಂತೆ ಹೇಳಿದ್ದ. ನಂತರ ಆತನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿತ್ತು. ಇದೀಗ ಗಾಯಾಳು ಲಕ್ಷ್ಮೀನಾರಾಯಣನ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿತ್ತು. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಯುವಕನಿಗೆ ಒತ್ತಾಯ ಮಾಡಲಾಗಿತ್ತು.

ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿತ್ತು. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದರು. ನಂತರ ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಬಗ್ಗೆ ವಿಡಿಯೊ ಮೂಲಕ ಲಕ್ಷ್ಮಿನಾರಾಯಣ್ ಮಾಹಿತಿ ನೀಡಿದ್ದ.

ಇದನ್ನೂ ಓದಿ | Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

ಘಟನೆ ಬಗ್ಗೆ ಗಾಯಾಳು ಲಕ್ಷ್ಮಿನಾರಾಯಣ್‌ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

Uttara Kannada News: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

VISTARANEWS.COM


on

Mathobara Sri Umamadhukeshwara devara Maharathotsava at Banavasi
Koo

ಬನವಾಸಿ: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ (Uttara Kannada News) ನಡೆಯಿತು.

ಮಹಾರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಶ್ರೀ ಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ಬಳಿಕ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಉಮಾಮಧುಕೇಶ್ವರ ದೇವರ ಉತ್ಸವ ಮೂರ್ತಿಯನ್ನು ಮನ್ಮಹಾಸ್ಯಂದನ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಇದನ್ನೂ ಓದಿ: Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

ಪ್ರತಿಷ್ಟಾಪನೆಯ ನಂತರ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಭಕ್ತಿ ಸಮರ್ಪಿಸಿದರು. ರಾತ್ರಿ 12 ಗಂಟೆಯವರೆಗೆ ಸಾವಿರಾರು ಭಕ್ತರು ದರ್ಶನ ಪಡೆದರು.

ಬಳಿಕ ರಾತ್ರಿ 12-30ಕ್ಕೆ ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ಶ್ರೀ ಮಧುಕೇಶ್ವರ ದೇವರ ಮಹಾರಥೋತ್ಸವ ಆರಂಭಗೊಂಡಿತು. ಬೃಹತ್ ರುದ್ರಾಕ್ಷಿ ಮಾಲೆ, ವಿವಿಧ ಫಲ-ಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಹಾರಥವನ್ನು ಭಕ್ತ ಸಮೂಹ ಹರಹರ ಮಹಾದೇವ ಎಂಬ ಜಯ ಘೋಷ ಮೊಳಗಿಸುತ್ತ ಎಳೆಯುತ್ತ ಸಾಗಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ನೆರೆದಿದ್ದ ಸಾವಿರಾರು ಭಕ್ತರು ಹೂ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಮಹಾ ರಥೋತ್ಸವವು ಶುಕ್ರವಾರ ಬೆಳಿಗ್ಗೆ 5 ಗಂಟೆ ವೇಳೆಗೆ ಸಂಪನ್ನಗೊಂಡಿತು.

Continue Reading

ಮಂಡ್ಯ

Lok Sabha Election 2024: ರೈತನ ಮಗ ಸ್ಟಾರ್ ಚಂದ್ರು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಿ: ಶಾಸಕ ನರೇಂದ್ರಸ್ವಾಮಿ

Lok Sabha Election 2024: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಶಾಸಕ ನರೇಂದ್ರಸ್ವಾಮಿ ಮತಯಾಚನೆ ನಡೆಸಿದರು.

VISTARANEWS.COM


on

MLA Narendraswamy Election campaign in various places at Malavalli Assembly Constituency
Koo

ಮಳವಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಇದೇ ಜಿಲ್ಲೆಯ ರೈತನ ಮಗ. ಹಳ್ಳಿಗಾಡಿನಲ್ಲಿ ಓದಿ, ನಗರದಲ್ಲಿ ಉದ್ಯಮಿಯಾಗಿ ಬೆಳೆದು ಈಗ ಹುಟ್ಟೂರಿನ ಋಣ ತೀರಿಸಲು ರಾಜಕೀಯಕ್ಕೆ ಬಂದಿದ್ದಾರೆ. ರೈತನ ಮಗನಾದ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಬೇಕು ಎಂದು ಶಾಸಕ ನರೇಂದ್ರಸ್ವಾಮಿ ಮತದಾರರಲ್ಲಿ ಮನವಿ (Lok Sabha Election 2024) ಮಾಡಿದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಮತಯಾಚಿಸಿ ಮಾತನಾಡಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ಮೋದಿ ಶ್ರೀಮಂತರ ಸಾಲಮನ್ನಾ ಮಾಡ್ತಾರೆ, ರೈತರ ಸಾಲಮನ್ನಾ ಮಾಡಲ್ಲ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾಲಮನ್ನಾ ಮಾಡುತ್ತದೆ. ಉದ್ಯೋಗದ ಭದ್ರತೆ ನಾವು ಕೊಡುತ್ತೇವೆ. ಜನರ ಬದುಕನ್ನು ಹಸನು ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.

ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ನೀಡಿದ ಪರಿಣಾಮ ಬರಗಾಲದಲ್ಲಿ ಬಡವರಿಗೆ ಕಾಂಗ್ರೆಸ್ ನೆರವಾಗಿದೆ ಎಂದ ಅವರು, ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

Continue Reading

ಕರ್ನಾಟಕ

Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

Lok Sabha Election 2024: ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕ್ತಿರೋದು ಕಾಂಗ್ರೆಸ್‌ನವರು. ಅವರಿಗೆ ಈ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ಲೋಕಾಸಭಾ ಚುನಾವಣೆ(Lok Sabha Election 2024) ವೇಳೆ ಕಾಂಗ್ರೆಸ್‌ ನೀಡಿರುವ ಜಾಹೀರಾತು, ಸದ್ಯ ಕೈ ಮತ್ತು ಬಿಜೆಪಿ ನಡುವೆ ಟ್ವೀಟ್‌ ಸಮರಕ್ಕೆ ಕಾರಣವಾಗಿದೆ. “ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೆಂಬು” ಎಂಬ ಕಾಂಗ್ರೆಸ್‌ನ ಜಾಹೀರಾತಿಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಎಂದರೆ ಕನ್ನಡಿಗರಿಗೆ ಅನ್ಯಾಯ, ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯವರಿಗೆ ವಾಪಸ್ ನೀಡೋಣ ಚೆಂಬು ಎಂದು‌ ಕಾಂಗ್ರೆಸ್‌ ನಾಯಕರು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ತಮಿಳುನಾಡಿಗೆ ನೀರು ಬಿಟ್ಟು ಕಾವೇರಿಯ ಮಡಿಲು ಖಾಲಿ ಮಾಡಿ, ನೀವು ಜನರಿಗೆ ಚೆಂಬು ಕೊಟ್ಟಿದ್ದೀರಾ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಜಾಹೀರಾತು ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿ, ನಿಜವಾಗಿಯೂ ಕಾಂಗ್ರೆಸ್‌ಗೆ ಮಾನ ಮರ್ಯಾದೆ ಇದೆಯಾ? ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕ್ತಿರೋದು ಕಾಂಗ್ರೆಸ್‌ನವರು. ಜನರೇ ಕಾಂಗ್ರೆಸ್‌ನವರಿಗೆ ಚೆಂಬು ಕೊಟ್ಟಿದ್ದಾರೆ. ಅವರಿಗೆ ಈ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Neha Murder Case: ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ ಸರ್: ಜೋಶಿಗೆ ನೇಹಾ ತಂದೆ ನಿರಂಜನ್ ಮನವಿ

ಈ ಬಗ್ಗೆ ಟೀಟ್‌ ಮಾಡಿರುವ ವಿಜಯೇಂದ್ರ ಅವರು, ಕಾಂಗ್ರೆಸ್‌ನವರೇ… ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ‘ತುಂಬಿದ ಕೊಡ’ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೆಂಬು ಕೊಟ್ಟವರು ನೀವು. ಬೆಳೆ ಒಣಗಿಸಿ ರೈತರಿಗೆ ಚೆಂಬು ಕೊಟ್ಟವರು ನೀವು. ಇದ್ದ ಬದ್ದ ಹಣವನ್ನೆಲ್ಲ ಖಾಲಿಮಾಡಿಕೊಂಡು ಪರಿಶಿಷ್ಟರ/ ಹಿಂದುಳಿದವರ ಕಲ್ಯಾಣಕ್ಕೆ ಮೀಸಲಾದ ಹಣವನ್ನೂ ವರ್ಗಾಯಿಸಿಕೊಂಡು ಶೋಷಿತರಿಗೆ ಚೆಂಬು ಕೊಟ್ಟವರು ನೀವು. ಕುಡಿಯುವ ನೀರೂ ಒದಗಿಸಲಾರದೇ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಅಲೆದಾಡುವ ಸ್ಥಿತಿ ತಂದವರು ನೀವು. ನಿರುದ್ಯೋಗಿಗಳಿಗೆ ಯುವನಿಧಿ ಹೆಸರಲ್ಲಿ ಖಾಲಿ ಚೆಂಬು ಕೊಟ್ಟವರು ನೀವು. ದೇಶದಲ್ಲಿ ಕಾಣದ ‘ಕೈ’ ಸ್ಥಿತಿ ತಲುಪುತ್ತಿರುವ ನಿಮಗೆ ಕೆಲವೇ ದಿನಗಳಲ್ಲಿ ಜನರೇ ನೀಡಲಿದ್ದಾರೆ ‘ಖಾಲಿ ಚೆಂಬು’ ಎಂದು ವಾಗ್ದಾಳಿ ನಡೆಸಿದ್ದಾರೆ.

ಜನರಿಗೆ ಚೆಂಬು ನೀರು ಕೊಟ್ಟಿಲ್ಲ ಇವರು ಎಂದ ಅಶೋಕ್

ವಿಪಕ್ಷನಾಯಕ ಆರ್‌.ಅಶೋಕ್ ಪ್ರತಿಕ್ರಿಯಿಸಿ, ಈಗಾಗಲೇ ನಮ್ಮ ಪ್ರಧಾನಿ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಈಗಾಗಲೇ ಅನೇಕ ಭರವಸೆ ನೀಡಿ ಕೈಗೆ ಚೊಂಬು ಕೊಟ್ಟಿದ್ದಾರೆ. ಗರೀಬಿ ಹಠಾವೋ ಅಂತ ಹೇಳಿದ್ರು, ಯಾರೂ ದೇಶದಲ್ಲಿ ಬಡವರೇ ಇರಲ್ಲ ಅಂತ ಹೇಳಿದ್ರು. ಬಿಪಿಎಲ್ ಕಾರ್ಡ್ ಎಷ್ಟಿವೆ? ಹತ್ತು ಕೆ.ಜಿ ಅಕ್ಕಿ ಅಂತ ಹೇಳಿದರು, ಕೊಟ್ರಾ? ಕೃಷ್ಣೆಗೆ 50 ಸಾವಿರ ಕೋಟಿ ಅಂತ ಹೇಳಿದ್ದರು. 5 ರೂಪಾಯಿಯೂ ಕೊಡಲಿಲ್ಲ. ಎಚ್.ಕೆ ಪಾಟೀಲ್ ಅವರೇ ಕೃಷ್ಣೆ ಕಣ್ಣೀರು ಅಂತ ಪುಸ್ತಕ ಬಿಡುಗಡೆ ಮಾಡಿದರು, ಕೇಳಿದರೆ ದೇಶಕ್ಕೆ ಅಂತಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕೇಂದ್ರದಲ್ಲಿ ಬರೀ ಭ್ರಷ್ಟಾಚಾರ. ಪತ್ರಿಕೆ ಬೇಡ, ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಅಂತ ಕೆಲವರು ಸುಮ್ಮನಿದ್ದರು. ಇವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನೂ ಬಿಡಲಿಲ್ಲ‌. ಪತ್ರಿಕಾ ರಂಗವನ್ನೂ ಬಿಡದೆ ಲೂಟಿ ಹೊಡೆದಿದ್ದು ಕಾಂಗ್ರೆಸ್ ನಾಯಕರು. ಇನ್ಯಾವ ಅಂಗ ಬಿಟ್ಟಿದ್ದೀರಿ. ನೀವು ಚೆಂಬು ಅಂತ ಜಾಹೀರಾತು ಕೊಟ್ಟಿದ್ದೀರಿ, ಚೆಂಬಿನಷ್ಟು ನೀರು ಕೊಟ್ಟಿಲ್ಲ ನಿಮ್ಮ ಯೋಗ್ಯತೆಗೆ. ಅಲ್ಲಿ ಚೆಂಬಲ್ಲಿ ನೀರಿಲ್ಲ, ಕೇರಳಕ್ಕೆ ಬನ್ನಿ ಬಿಂದಿಗೆಯಲ್ಲಿ ನೀರು ಕೊಡ್ತೀವಿ ಅಂತ ಕರೀತಿದ್ದಾರೆ. ಚೆಂಬು ಇಟ್ಟುಕೊಂಡು ಕೇರಳಕ್ಕೆ ಹೋಗಿ. ಇದುವರೆಗೂ 700 ಕೋಟಿ SDRF ಹಣ ಬಿಡುಗಡೆ ಆಗಿದ್ದು, ಅದು ಕೇಂದ್ರದ ಪರಿಹಾರ. ಶೇ. 75 ಕೇಂದ್ರದ ಹಣ, ಇವರದ್ದಲ್ಲ. ಅದನ್ನು ಎಂದಾದರೂ ಹೇಳಿದ್ದಾರಾ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

ಚೆಂಬು ಜಾಹೀರಾತು ವಿಚಾರಕ್ಕೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ಹತ್ತು ವರ್ಷಗಳ ಮನಮೋಹನ್ ಸಿಂಗ್ ಸರ್ಕಾರ ಮತ್ತು ಮೋದಿ ಸರ್ಕಾರದ ತುಲನೆ ಮಾಡಬೇಕು. ತಮಿಳುನಾಡಿನಲ್ಲಿ ನಮ್ಮ ಒಂದೇ ಒಂದು ಸೀಟಿಲ್ಲ. ಅಲ್ಲಿ UPA ಏನು ಕೊಟ್ಟಿದೆ, NDA ಏನು ಕೊಟ್ಟಿದೆ. ಯಾರು ಯಾರಿಗೆ ಚೆಂಬು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.

Continue Reading
Advertisement
Money Guide
ಮನಿ-ಗೈಡ್12 mins ago

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

‌Assault Case
ಕರ್ನಾಟಕ13 mins ago

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

Char Dham Yatra 2024
Latest27 mins ago

Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

Diabetic Controle
ಲೈಫ್‌ಸ್ಟೈಲ್36 mins ago

Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Banned Films
ಸಿನಿಮಾ38 mins ago

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Workers protest
ವಿದೇಶ42 mins ago

Workers protest: ಇಸ್ರೇಲ್​ ಜತೆಗಿನ ಒಪ್ಪಂದ ವಿರೋಧಿಸಿ ಪ್ರತಿಭಟಿಸಿದ್ದ ಗೂಗಲ್​​ನ 28​ ಉದ್ಯೋಗಿಗಳ ವಜಾ

Cardiac Arrest
ಲೈಫ್‌ಸ್ಟೈಲ್47 mins ago

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Mathobara Sri Umamadhukeshwara devara Maharathotsava at Banavasi
ಉತ್ತರ ಕನ್ನಡ47 mins ago

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

MLA Narendraswamy Election campaign in various places at Malavalli Assembly Constituency
ಮಂಡ್ಯ51 mins ago

Lok Sabha Election 2024: ರೈತನ ಮಗ ಸ್ಟಾರ್ ಚಂದ್ರು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಿ: ಶಾಸಕ ನರೇಂದ್ರಸ್ವಾಮಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ4 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ15 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌