Cow slaughter | ನನ್ನ ಮುಂದೆ ಬೀಫ್‌ ತಿಂದ್ರೆ ಸಿದ್ದರಾಮಯ್ಯರನ್ನು ಒಳಗೆ ಹಾಕಿಸ್ತೀನಿ ಎಂದ ಸಚಿವ ಪ್ರಭು ಚವ್ಹಾಣ್‌ - Vistara News

ಕರ್ನಾಟಕ

Cow slaughter | ನನ್ನ ಮುಂದೆ ಬೀಫ್‌ ತಿಂದ್ರೆ ಸಿದ್ದರಾಮಯ್ಯರನ್ನು ಒಳಗೆ ಹಾಕಿಸ್ತೀನಿ ಎಂದ ಸಚಿವ ಪ್ರಭು ಚವ್ಹಾಣ್‌

ಒಂದು ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮುಂದೆ ಬೀಫ್‌ ತಿಂಧ್ರೆ ಅವರನ್ನು ಜೈಲಗೆ ಹಾಕಿಸ್ತೇನೆ ಎಂದು ಸಚಿವ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

ಸಚಿವ ಪ್ರಭು ಚವ್ಹಾಣ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ರೊಚ್ಚಿಗೆದ್ದಿದ್ದಾರೆ. ಗೋ ಹತ್ಯಾ ನಿಷೇಧ ಕಾಯಿದೆಯಿಂದ (Cow slaughter) ಯಾವುದೇ ಲಾಭವಾಗಿಲ್ಲ. ಜನರಿಗೆ ನಷ್ಟವಾಗಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಲೂ ಸಿದ್ಧ ಎಂದು ಆಕ್ರೋಶದಿಂದ ಹೇಳಿದ್ದಾರೆ.

ʻʻಕಾಂಗ್ರೆಸ್ ನಾಯಕರು ನನ್ನ ಇಲಾಖೆ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಾಂಗ್ರೆಸ್ ನಾಯಕರಿಗೆ ಬುದ್ಧಿ ಇಲ್ಲ ಅಂತ ಹೇಳಬೇಕಾ, ಏನು ಹೇಳಬೇಕೋ ಗೊತ್ತಾಗ್ತಿಲ್ಲʼʼ ಎಂದು ಮಾಧ್ಯಮ ಗೋಷ್ಠಿಯಲ್ಲಿ ಅವರು ಹರಿಹಾಯ್ದರು.

ʻʻ1964ರಲ್ಲಿ ಎಸ್ ನಿಜಲಿಂಗಪ್ಪನವರು ಮುಖ್ಯಮಂತ್ರಿ ಆಗಿದ್ದಾಗಲೇ ಗೋಹತ್ಯೆ ನಿಷೇಧ ಕಾನೂನು ಇತ್ತು. ನಾವು ಅದನ್ನು ಮತ್ತಷ್ಟು ಬಿಗಿ ಮಾಡಿದ್ದೇವೆ. ಮೂರು ವರ್ಷಗಳ ಅಂತರದಲ್ಲಿ ಹಸುಗಳನ್ನು ಉಳಿಸಬೇಕು ಎನ್ನುವುದು ಗೋಹತ್ಯೆ ನಿಷೇಧ ಕಾನೂನು ಬಿಗಿ ಮಾಡಿರುವುದರ ಉದ್ದೇಶ. 1964ರಲ್ಲಿ ಗೋಹತ್ಯೆಗೆ 1 ಸಾವಿರ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ ಇತ್ತು. ಬಿಎಸ್‌ ಯಡಿಐೂರಪ್ಪ ಅವರ ನೇತೃತ್ವದ ಸರಕಾರದಲ್ಲಿ ಕಾನೂನನ್ನು ಬಿಗಿ ಮಾಡಿದೆವು. ಈಗ ಗೋಹತ್ಯೆ ಮಾಡಿದ್ರೆ 3ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಇದೆ. 50 ಸಾವಿರದಿಂದ 10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆʼʼ ಎಂದು ವಿವರಿಸಿದರು.

ಕಾಯಿದೆ ಜಾರಿ ಬಳಿಕ ಗೋಹತ್ಯೆ ಪ್ರಮಾಣ ಕುಸಿತ
ʻʻಯಾವುದೇ ಸಾಕ್ಷಿ, ದಾಖಲೆ ಇಲ್ಲದೆ ಕಾಂಗ್ರೆಸ್‌ನವರು ಆರೋಪ ಮಾಡಿದ್ದಾರೆ. ನಾನು ಸಚಿವನಾದ ಬಳಿಕ ಗೋರಕ್ಷಕನಾಗಿ ಗೋ ಸೇವೆ ಮಾಡುತ್ತಿದ್ದೇನೆ. ಕಾಯಿದೆಯಿಂದ ಗೋಹತ್ಯೆಯ ಸಂಖ್ಯೆ ಕಡಿಮೆಯಾಗಿದೆ. ಗೋಶಾಲೆಗಳ ನಿರ್ವಹಣೆ ಮಾಡುತ್ತಿದ್ದೇವೆ. ಖಾಸಗಿ ಗೋಶಾಲೆಗಳಿಗೂ ಉತ್ತೇಜನ ನೀಡುತ್ತಿದ್ದೇವೆ. ದೇಶದಲ್ಲಿ ಮೊದಲ ಬಾರಿಗೆ ಪಶುಸಂಜೀವಿನಿ ಆಂಬ್ಯುಲೆನ್ಸ್ ಶುರು ಮಾಡಿದ್ದೇವೆʼʼ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಮೇಲೆ ವಾಗ್ದಾಳಿ
ʻʻವಿಪಕ್ಷ ನಾಯಕರಾದ ಸಿದ್ದರಾಮಯ್ಯ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತೇವೆ ಎಂದು ಹೇಳಿದ್ದಾರೆ. ಮಾತು ಮಾತಿಗೆ ನಾನು ಬೀಫ್ ತಿಂತೀನಿ ಅಂತ ಸಿದ್ದರಾಮಯ್ಯ ಹೇಳ್ತಾರೆ. ಒಂದು ವೇಳೆ ಬೀಫ್ ತಿಂದ್ರೆ,
ಹಸುವನ್ನು ಕತ್ತರಿಸಿದರೆ ಸಿದ್ದರಾಮಯ್ಯ ಆಗಲಿ, ಖರ್ಗೆಯಾಗಲಿ ಅವರನ್ನು ಜೈಲಿಗೆ ಹಾಕ್ತೀನಿ. ನನ್ನ ಮುಂದೆ ಬೀಫ್ ತಿಂದ್ರೆ ಅವರನ್ನ ಒಳಗೆ ಹಾಕಿಸ್ತೇನೆʼʼ ಎಂದು ಎಚ್ಚರಿಸಿದರು.

ಕುಮಾರಸ್ವಾಮಿ ಹೇಳಿಕೆಯಿಂದ ಕಾಂಗ್ರೆಸ್‌ಗೆ ಭಯ
ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ಡಿಸಿಎಂ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಕಾಂಗ್ರೆಸ್‌ನವರಿಗೆ ಭಯ ಶುರುವಾಗಿದೆ. ಕಾಂಗ್ರೆಸ್‌ನವರಿಗೆ ಮುಸ್ಲಿಂ‌ನವರು ಮತ ಹಾಕಲ್ಲ‌ ಅಂತ ಹೆದರಿದ್ದಾರೆ. ಹೀಗಾಗಿ ಮುಸ್ಲಿಂ ಮತಗಳು ಕಳೆದುಹೋಗಬಹುದು ಎಂದು ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡ್ತಿದ್ದಾರೆ. ಮುಸ್ಲಿಂ ಬಾಂಧವರ ಪರವಾಗಿ ಕಾಂಗ್ರೆಸ್ ಹೀಗೆ ಮಾಡ್ತಿದೆʼʼ ಎಂದು ಪ್ರಭು ಚವ್ಹಾಣ್‌ ಹೇಳಿದರು.

ಗೋಹತ್ಯೆ ನಿಷೇಧ ಕಾಯ್ದೆಯಿಂದ ಯಾವುದೇ ನಷ್ಟವಾಗಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಮುಂದೆ ನಮ್ಮದೇ ಸರಕಾರ ಬರಲಿದ್ದು, ಇನ್ನಷ್ಟು ಕಠಿಣವಾಗಿ ಜಾರಿಗೆ ತರುತ್ತೇವೆ ಎಂದರು ಪ್ರಭು ಚವ್ಹಾಣ್‌.

ಇದನ್ನೂ ಓದಿ | ಅಕ್ರಮ ಗೋ ಹತ್ಯೆ | ರಾಜ್ಯದಲ್ಲೇ ಮೊದಲ ಬಾರಿಗೆ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಶುರು, ಖಾದರ್‌ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

Fire Accident: ಹಾವೇರಿ ಜಿಲ್ಲೆಯ ಚಿಕ್ಕೇರೂರು ಗ್ರಾಮದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು (Fire Accident), ಐದಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಸುಮಾರು 30 ಲಕ್ಷ ರೂ.ಗಿಂತ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.‍ ಸದ್ಯ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ದಟ್ಟ ಹೊಗೆ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

Fire Accident
Koo

ಹಾವೇರಿ: ಹಾವೇರಿ ಜಿಲ್ಲೆಯ ಚಿಕ್ಕೇರೂರು ಗ್ರಾಮದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು (Fire Accident), ಐದಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಸುಮಾರು 30 ಲಕ್ಷ ರೂ.ಗಿಂತ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.‍ ಸದ್ಯ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ದಟ್ಟ ಹೊಗೆ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಎಲೆಕ್ಟ್ರಿಕಲ್ ಅಂಗಡಿ, ಬೇಕರಿ, ಗೊಂಬಿ ಅಂಗಡಿ, ಫುಟವೇರ್ ಅಂಗಡಿ, ಹೊಟೇಲ್ ಭಸ್ಮ.ವಾಗಿದೆ. ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ.ಬಣಕಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಖನಗಾಂವ ಗ್ರಾಮದ ಕೆ.ಎಚ್.ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕೆಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ಡಿಕ್ಕಿಯಾಗಿ ಈ ಅವಘಡ ನಡೆದಿದೆ. ಮೃತರನ್ನು ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ (29) ಎಂದು ಗುರುತಿಸಲಾಗಿದೆ.

ಬೆಳಗಾವಿ ಕಡೆಗೆ ಬರುತ್ತಿದ್ದ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ವಿಠ್ಠಲ ದತ್ತಾ ಲೋಕರೆ 30 ಅಡಿ ದೂರದ ಹೊಲಕ್ಕೆ ಹಾರಿ ಬಿದ್ದಿದ್ದರು. ಬಳಿಕ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಕೂಡ ಪಲ್ಟಿ ಹೊಡೆದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

ಮೈಸೂರು: ಗುಜರಿಯ ಗೋಡೌನ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಾಗಿ (Gas Leakage) 30 ಮಂದಿ ಅಸ್ವಸ್ಥಗೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಅಂಗಡಿಯಲ್ಲಿ ಈ ಸಮಸ್ಯೆ ಉಂಟಾಗಿದ್ದು, ಆರಂಭದಲ್ಲಿ ಶೆಡ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥಗೊಂಡರೆ ಬಳಿಕ ಸುತ್ತಲಿನ ಗ್ರಾಮಸ್ಥರೂ ಆರೋಗ್ಯ ಸಮಸ್ಯೆ ಎದುರಿಸಿ ಆಸ್ಪತ್ರೆ ಸೇರಿದ್ದಾರೆ.

ಶುಕ್ರವಾರ ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ಗುಜರಿ ಗೋಡೌನ್​ನಲ್ಲಿ ಘಟನೆ ಸಂಭವಿಸಿದೆ. ಅನಿಲ ಗೋಡೌನ್​ನಿಂದ ಹೊರಕ್ಕೆ ಬಂದು ಕೆಸರೆ ಗ್ರಾಮದಲ್ಲಿ ಹರಡಿದಿಎ. ಕೆಸರೆ ಗ್ರಾಮಸ್ಥರಲ್ಲೂ ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡಿದ್ದಾರೆ. ಎನ್.ಆರ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಹಾಗೂ ಆರೋಗ್ಯಾಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದೆ. ಘಟನೆ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Continue Reading

ಕರ್ನಾಟಕ

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

NDA 3.0: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

VISTARANEWS.COM


on

NDA 3.0
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (National Democratic Alliance) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೇಂದ್ರ ಕ್ಯಾಬಿನೆಟ್ ಮಂತ್ರಿ ಹುದ್ದೆ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದ್ದು, ಬಿಜೆಪಿಯಿಂದ ಯಾರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ.

ಮೂವರಿಗೆ ಸಚಿವ ಸ್ಥಾನ?

ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಇಬ್ಬರು ಸಂಸದರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಮೂವರಿಗೆ ಮಂತ್ರಿ ಪಟ್ಟ ಸಿಕ್ಕಂತಾಗಲಿದೆ. ಈಗಿನ ಸನ್ನಿವೇಶದಲ್ಲಿ ಮೂರಕ್ಕಿಂತ ಹೆಚ್ಚು ಸಚಿವ ಸ್ಥಾನ ರಾಜ್ಯಕ್ಕೆ ಸಿಗುವುದು ಕಷ್ಟ ಎನ್ನುವ ಮಾತೂ ಕೇಳಿ ಬಂದಿದೆ. ಮುಂಬರುವ ಚುನಾವಣಾ ರಾಜ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೈ ಕಮಾಂಡ್, ಮಹಾರಾಷ್ಟ್ರ, ಹರಿಯಾಣ ಸಂಸದರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಜತೆಗೆ ಮಿತ್ರ ಪಕ್ಷಗಳಿಗೂ ಆದ್ಯತೆ ನೀಡಬೇಕಿದೆ.

ಪ್ರಲ್ಹಾದ್ ಜೋಶಿಗೆ ಮತ್ತೆ ಅವಕಾಶ?

ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ. ಪ್ರಹ್ಲಾದ ಜೋಶಿ (Prahlad Joshi) ಅವರು ಎನ್‌ಡಿಎ ಮೂರನೆಯ ಅವಧಿಯಲ್ಲೂ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಿರರ್ಗಳತೆ ಹೊಂದಿರುವ ಪ್ರಹ್ಲಾದ್‌ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ನಾಲ್ಕನೇ ಬಾರಿಗೆ ಹುಬ್ಬಳ್ಳಿ- ಧಾರವಾಡದ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, ಬ್ರಾಹ್ಮಣ ಕೋಟಾವನ್ನು ತುಂಬಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಸಿ.ಎನ್‌. ಮಂಜುನಾಥ್‌ (Dr CN Manjunath) ಅವರೂ ಸಚಿವ ಸ್ಥಾನ ಪಡೆಯಬಲ್ಲವರ ಯಾದಿಯಲ್ಲಿ ಇದ್ದಾರೆ ಎನ್ನಲಾಗಿದೆ. ಮಂಜುನಾಥ್‌ ಅವರ ಹಿರಿತನ, ಆರೋಗ್ಯ ಕ್ಷೇತ್ರದ ಅನುಭವ ಸರಕಾರದಲ್ಲಿ ನೆರವಾಗಲಿದೆ ಎಂಬ ಮುಂದಾಲೋಚನೆ. ಜತೆಗೆ ಹಲವು ಬಾರಿಯ ಸಂಸದರಾಗಿರುವ, ಕಾಂಗ್ರೆಸ್‌ನ ಹೆಬ್ಬಂಡೆ ಡಿ.ಕೆ ಸುರೇಶ್‌ (DK Suresh) ಅವರನ್ನು ದೊಡ್ಡ ಅಂತರದಲ್ಲಿ ಸೋಲಿಸಿ ಮಣ್ಣು ಮುಕ್ಕಿಸಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದ ಹೆಗ್ಗಳಿಕೆ ಜತೆಗಿದೆ.

ಸದ್ಯ ಕರ್ನಾಟಕಕ್ಕೆ 2+1+1 ಫಾರ್ಮುಲಾ ಅನುಸರಿಸಲು ಬಿಜೆಪಿ ಹೈ ಕಮಾಂಡ್ ಚಿಂತನೆ ಎನ್ನಲಾಗಿದ್ದು, ಬಿಜೆಪಿಯಿಂದ 2 ಸಚಿವರು, ಜೆಡಿಎಸ್‌ಗೆ 1 ಹಾಗೂ 1 ರಾಜ್ಯ ಸಚಿವರನ್ನಾಗಿ ಮಾಡಲೂ ಬಿಜೆಪಿ ಚಿಂತನೆ ನಡೆಸಿದೆ ಎನ್ನುವ ಮಾತೂ ಕೇಳಿ ಬಂದಿದೆ.

ಇದನ್ನೂ ಓದಿ: Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Continue Reading

ಕರ್ನಾಟಕ

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ಮಧ್ಯೆ ಜಗಳ ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಇಲ್ಲೂ ಅಗಿರುವುದು ಅದೇ ರೀತಿಯ ಘಟನೆ. ಪತಿಯ ಅತಿಯಾದ ಕಾಳಜಿ, ಪೊಸೇಸೀವ್‌ನೆಸ್‌ನಿಂದ ಬೇಸತ್ತ ಪತ್ನಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪತಿ ಇದೀಗ ದೂರು ಕೊಟ್ಟಿದ್ದಾರೆ.

VISTARANEWS.COM


on

crime news
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ಮಧ್ಯೆ ಜಗಳ ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಇಲ್ಲೂ ಅಗಿರುವುದು ಅದೇ ರೀತಿಯ ಘಟನೆ. ಪತಿಯ ಅತಿಯಾದ ಕಾಳಜಿ, ಪೊಸೇಸೀವ್‌ನೆಸ್‌ನಿಂದ ಬೇಸತ್ತ ಪತ್ನಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪತಿ ಇದೀಗ ದೂರು ಕೊಟ್ಟಿದ್ದಾರೆ.

ಗೆಳೆಯರಿಗೆ ಡಿಯರ್ ಎಂದು ಮೆಸೇಜ್‌ ಮಾಡಬೇಡ, ಅಣ್ಣ, ಸರ್ ಎಂದು ಮೆಸೇಜ್ ಮಾಡು ಎಂದು ಪತಿ ಹೇಳಿದ್ದಕ್ಕೆ ಪತ್ನಿ ಮನೆಯನ್ನೇ ಬಿಟ್ಟು ಹೋಗಿದ್ದಾಳೆ ಎನ್ನಲಾಗಿದೆ. ಗಂಡ ಬೈದ ಎನ್ನುವ ಕಾರಣವನ್ನೇ ನೆಪವಾಗಿಟ್ಟುಕೊಂಡು ಮಹಿಳೆ ಎಸ್ಕೇಪ್‌ ಆಗಿರುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಪತ್ನಿ ಮೊಬೈಲ್‌ಗೆ Good morning dear ಎಂಬ ಮೆಸೇಜ್ ಬಂದಿತ್ತು. ಇದನ್ನ ನೋಡಿದ ಪತಿ ದಿಲೀಪ್ ಕುಮಾರ್, ʼʼಡಿಯರ್ ಅಂತ ಮೆಸೇಜ್ ಹಾಕ್ಬೇಡ. ಸರ್ ಅಂತ ಕಳಿಸುʼʼ ಎಂದು ಪತ್ನಿಗೆ ಸೂಚಿಸಿದ್ದರು. ಇದರಿಂದ ಕೆರಳಿದ ಪತ್ನಿ ವಾಗ್ವಾದ ನಡೆಸಿದ್ದರು. ಇದು ಅತಿರೇಕಕ್ಕೆ ತಿರುಗಿ ದಂಪತಿ ಮಧ್ಯೆ ದೊಡ್ಡ ಜಗಳವೇ ನಡೆದಿತ್ತು.

ಬಳಿಕ ʼʼಸರಿ ಹೋಗ್ಲಿ. ಕೋಪ ಮಾಡ್ಕೋಬೇಡʼʼ ಎಂದು ಮಗುವನ್ನು ಕರೆದುಕೊಂಡು ದಿಲೀಪ್‌ ಕುಮಾರ್‌ ರೂಂ ಒಳಗೆ ಹೋಗಿದ್ದರು. ಕೆಲವು ಸಮಯಗಳ ಬಳಿಕ ಕೆಲಸದವರು ದಿಲೀಪ್‌ ಬಳಿ ಬಂದು ಊಟ ಕೊಡಲು ಹೇಳಿ ನಿಮ್ಮ ಪತ್ನಿ ಆಚೆ ಹೋದರು ಎಂದು ಹೇಳಿದಾಗಲೇ ಪತ್ನಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಎಷ್ಟೆ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನಲೆಯಲ್ಲಿ ದಿಲೀಪ್ ದೂರು ನೀಡಿದ್ದರು. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ. ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Road Accident: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Continue Reading

ದೇಶ

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಈ ಬಾರಿ ಮಳೆಗಾಲದಲ್ಲಿ ಮನೆಯಲ್ಲೇ ಸುಮ್ಮನೆ ಹೊದಿಕೆ ಹೊದ್ದು ಮಲಗುವ ಬದಲು ಬೆಂಗಳೂರು ಸುತ್ತಮುತ್ತಲೂ ಇರುವ ಸುಂದರ ತಾಣಗಳಿಗೆ (Monsoon Tour) ಭೇಟಿ ನೀಡೋಣ. ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳೋಣ.

VISTARANEWS.COM


on

By

Monsoon Tour
Koo

ಸುರಿಯುತ್ತಿರುವ ಮಳೆಯ ನಡುವೆ ಹೊರಗೆ ಹೋಗುವುದು ಬೇಜಾರು. ಆದರೆ ಪ್ರಕೃತಿಯ ಸೌಂದರ್ಯ ಎದ್ದು ಕಾಣುವುದೇ ಮಳೆಗಾಲದಲ್ಲಿ (Monsoon Tour). ಈ ಸಂದರ್ಭದಲ್ಲಿ ದೂರ ಹೋಗುವುದು ಅಸಾಧ್ಯವಾದರೂ ಹತ್ತಿರ ಇರುವ ಕೆಲವು ತಾಣಗಳಲ್ಲಿ (tourist place) ಸುತ್ತಾಡಬಹುದು. ಮಳೆಯ ನಡುವೆ ಸುತ್ತಮುತ್ತಲಿನ ಪರಿಸರದಲ್ಲಿ (nature) ಕಾಣುವ ಹೊಸತನದ ಚಿಗುರನ್ನು ನೋಡಿ ಆನಂದಿಸಬಹುದು.

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ (malenadu) ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ (bengaluru) ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಪ್ರಾಚೀನ ಭಾರತೀಯ ದೇವಾಲಯಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ವಾಸ್ತುಶಿಲ್ಪದ ಪರಂಪರೆಯನ್ನು ಪ್ರದರ್ಶಿಸುತ್ತವೆ. ಈ ಪವಿತ್ರ ತಾಣಗಳು ಕೇವಲ ಪೂಜಾ ಸ್ಥಳಗಳಲ್ಲ. ಇತಿಹಾಸ, ಕಲೆ ಮತ್ತು ಆಧ್ಯಾತ್ಮಿಕತೆಯ ಭಂಡಾರಗಳಾಗಿವೆ. ಇವುಗಳಲ್ಲಿ ಹಲವು ದೇವಾಲಯ ನಮ್ಮ ಬೆಂಗಳೂರಿನ ಸುತ್ತಮುತ್ತಲಿದೆ. ಈ ಬಾರಿ ಮಳೆಗಾಲದಲ್ಲಿ ಈ ಎಂಟು ದೇವಾಲಯಗಳಲ್ಲಿ ಹೆಜ್ಜೆ ಹಾಕಿ ಮಳೆಗಾಲದ ನೆನಪನ್ನು ಬೆಚ್ಚಗೆ ಮನದಲ್ಲಿ ತುಂಬಿ ಇಡೋಣ.


1. ಚೆನ್ನಕೇಶವ ದೇವಸ್ಥಾನ

ಹಾಸನ ಜಿಲ್ಲೆಯಲ್ಲಿರುವ 12ನೇ ಶತಮಾನದ ಬೇಲೂರಿನ ಚೆನ್ನಕೇಶವ ದೇವಾಲಯವು ತನ್ನ ಸಂಕೀರ್ಣವಾದ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಇದು ನಕ್ಷತ್ರಾಕಾರದ ದೇವಾಲಯವಾಗಿದ್ದು, ಹಿಂದೂ ದೇವರಾದ ವಿಷ್ಣುವಿಗೆ ಸಮರ್ಪಿತವಾಗಿದೆ.


2. ಕೋಟಿಲಿಂಗೇಶ್ವರ ದೇವಸ್ಥಾನ

ಬೃಹತ್ ಶಿವಲಿಂಗಕ್ಕೆ ಹೆಸರುವಾಸಿಯಾಗಿರುವ ಈ ದೇವಾಲಯವು ವಿಶ್ವದ ಅತಿದೊಡ್ಡ ಲಿಂಗಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಕೋಟಿಲಿಂಗೇಶ್ವರ ದೇವಸ್ಥಾನ ಕೋಲಾರದಲ್ಲಿದೆ.


3. ಹೊಯ್ಸಳೇಶ್ವರ ದೇವಸ್ಥಾನ

12ನೇ ಶತಮಾನದ ಈ ದೇವಾಲಯವು ಹಾಸನ ಜಿಲ್ಲೆಯಲ್ಲಿದೆ ಮತ್ತು ಇದು ಶಿವನಿಗೆ ಸಮರ್ಪಿತವಾಗಿದೆ. ಹೊಯ್ಸಳ ವಾಸ್ತುಶೈಲಿಗೆ ಹೆಸರುವಾಸಿಯಾದ. ಇದು ಹಳೇಬೀಡುನಲ್ಲಿರುವ ಅತಿ ದೊಡ್ಡ ದೇವಾಲಯವಾಗಿದೆ.

Monsoon Tour


4. ಶ್ರೀ ರಂಗನಾಥಸ್ವಾಮಿ ದೇವಸ್ಥಾನ

ಮೈಸೂರಿನ ಸಮೀಪ ಶ್ರೀರಂಗಪಟ್ಟಣದಲ್ಲಿರುವ ಈ ದೇವಾಲಯವು ಕರ್ನಾಟಕದಲ್ಲಿಯೇ ಅತಿ ದೊಡ್ಡದಾಗಿದೆ ಮತ್ತು ವಿಷ್ಣುವಿನ ರೂಪವಾದ ರಂಗನಾಥನಿಗೆ ಸಮರ್ಪಿತವಾಗಿದೆ. ವೈಷ್ಣವ ಸಂಪ್ರದಾಯದ 108 ಅಭಿಮಾನ ಕ್ಷೇತ್ರಗಳಲ್ಲಿ ಒಂದಾಗಿ ಇದು ವಿಶೇಷ ಸ್ಥಾನವನ್ನು ಹೊಂದಿದೆ.


5. ಲೇಪಾಕ್ಷಿ ದೇವಸ್ಥಾನ

ಬೆಂಗಳೂರಿನಿಂದ ಇದು ತುಂಬ ದೂರ ಏನಿಲ್ಲ. ಆಂಧ್ರಪ್ರದೇಶದ ಅನಂತಪುರದಲ್ಲಿದೆ ಲೇಪಾಕ್ಷಿ ದೇವಾಲಯ. ಇಲ್ಲಿನ ಅದ್ಭುತ ವಿಜಯನಗರ ವಾಸ್ತುಶಿಲ್ಪ ಮತ್ತು ಪ್ರಸಿದ್ಧ ನೇತಾಡುವ ಸ್ತಂಭಗಳು ಪ್ರವಾಸಿಗರಲ್ಲಿ ಬೆರಗು ಮೂಡಿಸುತ್ತದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣ ಕೆತ್ತನೆಗಳು ಮತ್ತು ವರ್ಣಚಿತ್ರಗಳು ನಯನ ಮನೋಹರವಾಗಿದೆ.


6. ಭೋಗ ನಂದೀಶ್ವರ ದೇವಸ್ಥಾನ

ನಂದಿ ಬೆಟ್ಟದ ತಪ್ಪಲಿನಲ್ಲಿರುವ ಈ ದೇವಾಲಯದ ಸಂಕೀರ್ಣವು ಶಿವನಿಗೆ ಸಮರ್ಪಿತವಾಗಿದೆ ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ನಿಖರವಾದ ಮೂಲಗಳು ತಿಳಿದಿಲ್ಲವಾದರೂ ವಾಸ್ತುಶಿಲ್ಪವು 9ನೇ – 10ನೇ ಶತಮಾನದ ಹಿಂದಿನದು ಎಂದು ನಂಬಲಾಗಿದೆ.


7. ಶ್ರೀ ಚಾಮುಂಡೇಶ್ವರಿ ದೇವಸ್ಥಾನ

ಮೈಸೂರಿನಲ್ಲಿರುವ ವಿಶ್ವಪ್ರಸಿದ್ಧ ಈ ದೇವಾಲಯವು ಚಾಮುಂಡಿ ಬೆಟ್ಟದ ಮೇಲಿದೆ ಮತ್ತು ದುರ್ಗದ ರೂಪವಾದ ಚಾಮುಂಡೇಶ್ವರಿ ದೇವಿಯನ್ನು ಇಲ್ಲಿ ಪೂಜಿಸಲಾಗುತ್ತದೆ.

ಇದನ್ನೂ ಓದಿ: Sri Lanka Tour: ಕಡಿಮೆ ವೆಚ್ಚದಲ್ಲಿ ಶ್ರೀಲಂಕಾ ಪ್ರವಾಸ; ಐಆರ್‌ಸಿಟಿಸಿ ಸ್ಪೆಷಲ್‌ ಪ್ಯಾಕೇಜ್‌


8. ತಲಕಾಡು ಪಂಚಲಿಂಗ ದೇವಾಲಯಗಳು

ತಲಕಾಡು ಶಿವನಿಗೆ ಅರ್ಪಿತವಾದ ಪಂಚಲಿಂಗ ದೇವಾಲಯಗಳು ಸೇರಿದಂತೆ ಹಲವಾರು ಪುರಾತನ ದೇವಾಲಯಗಳಿಗೆ ನೆಲೆಯಾಗಿದೆ. ಪಂಚ ಲಿಂಗ ದರ್ಶನವು ಸಾಮಾನ್ಯವಾಗಿ ಪ್ರತಿ ಹನ್ನೆರಡು, ಏಳು, ಐದು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಕಾರ್ಯಕ್ರಮವಾಗಿದ್ದು, ಆಶೀರ್ವಾದ ಪಡೆಯಲು ಭಕ್ತರು ಐದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

Continue Reading
Advertisement
Prashant Kishor
ದೇಶ3 mins ago

Prashant Kishor: “ಇನ್ನೆಂದೂ ಚುನಾವಣಾ ಭವಿಷ್ಯ ನುಡಿಯಲ್ಲ”; ಫಲಿತಾಂಶದ ಬಳಿಕ ಪ್ರಶಾಂತ್‌ ಕಿಶೋರ್‌ ಫಸ್ಟ್‌ ರಿಯಾಕ್ಷನ್‌

Fire Accident
ಕರ್ನಾಟಕ13 mins ago

Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

Aamir Khan shooting for Sitaare Zameen Par in Vadodara
ಬಾಲಿವುಡ್18 mins ago

Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

CWC Meeting
ದೇಶ43 mins ago

CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

NDA 3.0
ಕರ್ನಾಟಕ52 mins ago

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

Lok Sabha Election 2024
ರಾಜಕೀಯ58 mins ago

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

Kotee Movie Kannada Team Gives First Ticket To Kichcha Sudeep
ಸ್ಯಾಂಡಲ್ ವುಡ್1 hour ago

Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

Viral Video
ವೈರಲ್ ನ್ಯೂಸ್1 hour ago

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರʼ ಫೈಟ್‌ ಹೇಗಿದೆ ನೋಡಿ!

crime news
ಕರ್ನಾಟಕ1 hour ago

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

Viral Video
ವೈರಲ್ ನ್ಯೂಸ್1 hour ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ16 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌