Delhi MCD Election| ದೆಹಲಿ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಬಿಜೆಪಿ-ಆಪ್​ ತೀವ್ರ ಪೈಪೋಟಿ; ಸಮಬಲದಲ್ಲಿ ಮುನ್ನಡೆ - Vistara News

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election| ದೆಹಲಿ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಬಿಜೆಪಿ-ಆಪ್​ ತೀವ್ರ ಪೈಪೋಟಿ; ಸಮಬಲದಲ್ಲಿ ಮುನ್ನಡೆ

ಬೆಳಗ್ಗೆ 8 ಗಂಟೆಗೆ ದೆಹಲಿ ಮಹಾನಗರ ಪಾಲಿಕೆ ಮತ ಎಣಿಕೆ ಪ್ರಾರಂಭವಾದಾಗ ಬಿಜೆಪಿ ಮುನ್ನಡೆ ಸಾಧಿಸಿತ್ತು. ಆದರೆ ನಂತರ ಆಪ್​ ಮತ್ತು ಬಿಜೆಪಿ ನಡುವೆ ಸಮಾನಾಂತರವಾಗಿ ಮುನ್ನಡೆ ಆಗುತ್ತಿದೆ.

VISTARANEWS.COM


on

neck and neck battle Fight Between AAP And BJP In Delhi MCD Polls
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ (Delhi MCD Election) ನಡೆಯುತ್ತಿದ್ದು, ಬಿಜೆಪಿ ಮತ್ತು ಆಮ್​ ಆದ್ಮಿ ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಮೋಹನ್​ ಗಾರ್ಡನ್​​​ ವಾರ್ಡ್​ ಮತ್ತು ಲಕ್ಷ್ಮೀ ನಗರ ವಾರ್ಡ್​ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೋಹನ್​ ಗಾರ್ಡನ್​ನಲ್ಲಿ ಬಿಜೆಪಿಯ ಶ್ಯಾಮ್​ ಕೃಷ್ಣ ಮಿಶ್ರಾ ಮತ್ತು ಲಕ್ಷ್ಮೀನಗರಲ್ಲಿ ಅಲಕಾ ರಾಘವ್​ ಜಯ ಸಾಧಿಸಿದ್ದರೆ, ದರಿಯಾಗಂಜ್ ವಾರ್ಡ್​​ನಲ್ಲಿ ಆಪ್​ ಅಭ್ಯರ್ಥಿ ಸಾರಿಕಾ ಚೌಧರಿ ಗೆದ್ದಿದ್ದಾರೆ. ಈ ಮೂವರ ವಿಜಯವನ್ನು ದೆಹಲಿ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾದಾಗ ಮೊದಲು ಬಿಜೆಪಿ ಮುನ್ನಡೆ ಸಾಧಿಸಿತ್ತು. ಆಪ್​ ಅದರ ಹಿಂದಿತ್ತು. ಕಾಂಗ್ರೆಸ್ ಮೂರನೇ ಸ್ಥಾನದಲ್ಲಿ ಹೆಜ್ಜೆ ಹಾಕುತ್ತಿತ್ತು. ಆದರೆ ಈಗ ಆಮ್​ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಸಮಾನ ಪೈಪೋಟಿ ಇದೆ. ಆಪ್​ 123 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 121 ಕ್ಷೇತ್ರಗಳಲ್ಲಿ ಮುಂದಿದೆ. ಒಂದು ಸಲ ಬಿಜೆಪಿ ಮುಂದಿದ್ದರೆ, ಮತ್ತೊಂದು ಸಲ ಆಪ್​ ಮುಂದೆ ಓಡುತ್ತಿದೆ. ಹೀಗಾಗಿ ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ತುಂಬ ಕುತೂಹಲ ಮೂಡಿಸಿದೆ. ಇನ್ನು ಕಾಂಗ್ರೆಸ್​ 8 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದರೆ, ಪಕ್ಷೇತರರು 5 ಸ್ಥಾನಗಳಲ್ಲಿ ಮುಂದಿದ್ದಾರೆ. ಇದುವರೆಗೆ 23 ಲಕ್ಷ ಮತಗಳ ಎಣಿಕೆಯಾಗಿದೆ.

ಇದನ್ನೂ ಓದಿ: Delhi MCD Election 2022| ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ; ಬಿಜೆಪಿ 132, ಆಪ್​ 117 ವಾರ್ಡ್‌ಗಳಲ್ಲಿ ಮುನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಿಲ್ಲಿ ಪಾಲಿಕೆ ಚುನಾವಣೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದ ಸುಪ್ರೀಂ, ಆಪ್‌ಗೆ ಭಾರಿ ಮುನ್ನಡೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದರಿಂದ ಬಿಜೆಪಿ ಹಾಗೂ ಆಪ್‌ ನಡುವಿನ ಬಿಕ್ಕಟ್ಟು ಬಹುತೇಕ ಬಗೆಹರಿದಂತಾಗಿದೆ.

VISTARANEWS.COM


on

Delhi Mayor Polls
Koo

ನವದೆಹಲಿ: ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆಯ ಕಗ್ಗಂಟಿನ (Delhi Mayor Polls) ವಿಚಾರದಲ್ಲಿ ಬಿಜೆಪಿ ವಿರುದ್ಧ ಆಪ್‌ಗೆ ಭಾರಿ ಮುನ್ನಡೆ ದೊರೆತಿದೆ. “ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಪ್ರಸ್ತಾಪಿಸಿದ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗೆಯೇ, ೨೪ ಗಂಟೆಯೊಳಗೆ ಮೇಯರ್‌ ಆಯ್ಕೆಗೆ ಚುನಾವಣೆ ನಡೆಸಿ ಎಂದು ಲೆಫ್ಟಿನೆಂಟ್‌ ಗವರ್ನರ್‌ಗೆ ಸೂಚಿಸಿದೆ.

“ದೆಹಲಿ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ. ಇದರ ಕುರಿತು ಕಾನೂನಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ” ಎಂದು ಆಪ್‌ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೇಯರ್‌ ಆಯ್ಕೆಗೆ ಜನವರಿ ೬, ೨೪ ಹಾಗೂ ಫೆಬ್ರವರಿ ೬ರಂದು ಸಭೆ ನಡೆಸಲಾಗಿತ್ತು. ಆದರೆ, ಬಿಜೆಪಿ-ಆಪ್‌ ಗಲಾಟೆಯಿಂದಾಗಿ ಆಯ್ಕೆ ಸಾಧ್ಯವಾಗಿರಲಿಲ್ಲ.

ಇದುವರೆಗೆ, ಪಾಲಿಕೆಯ ಸಭೆಯಲ್ಲಿ ಬಿಜೆಪಿಯ ನಾಮನಿರ್ದೇಶಿತ ಸದಸ್ಯರಿಗೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಮೊದಲು ಮತದಾನ ಮಾಡಲು ಅವಕಾಶ ನೀಡಿದ ಕಾರಣ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಮೊದಲು ಮತದಾನದ ಅವಕಾಶ ನೀಡಿದ ಕಾರಣ ಬೇಸತ್ತ ಆಪ್‌ ಕೋರ್ಟ್‌ ಮೊರೆ ಹೋಗಿದೆ.

ಇದನ್ನೂ ಓದಿ: Delhi Mayor Polls: ದಿಲ್ಲಿ ಮಹಾನಗರ ಪಾಲಿಕೆ ಸಭೆ ಮುಂದೂಡಿಕೆ, ಮತ್ತೆ ಆಯ್ಕೆಯಾಗಲಿಲ್ಲ ಮೇಯರ್! ಆಪ್ ಕೋರ್ಟ್ ಮೊರೆ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Ruckus | ದೆಹಲಿಯಲ್ಲಿ ಬೀದಿಗೆ ಬಂದ ಬಿಜೆಪಿ, ಆಪ್‌ ಜಗಳ, ಮತ ಹಾಕಿದ ಜನರಿಗೇ ನಾಚಿಕೆಯಾಗುವಂತೆ ಕಿತ್ತಾಟ

ದೆಹಲಿ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಪ್‌ ಕೌನ್ಸಿಲರ್‌ಗಳ ಕಿತ್ತಾಟವು ಮುಗಿಲುಮುಟ್ಟಿದೆ. ಕೆಲ ದಿನಗಳ ಹಿಂದೆ ಪಾಲಿಕೆಯ ಕಚೇರಿಯಲ್ಲಿ ನಡೆದಿದ್ದ ಗಲಾಟೆ (Delhi MCD Ruckus) ಈಗ ಬೀದಿಗೆ ಬಂದಿದೆ.

VISTARANEWS.COM


on

Delhi MCD Ruckus
Koo

ನವದೆಹಲಿ: ಮುನ್ಸಿಪಲ್‌ ಕಾರ್ಪೊರೇಷನ್‌ ಆಫ್‌ ದೆಹಲಿ (MCD)ಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಫ್‌ ಕೌನ್ಸಿಲರ್‌ಗಳ ಮಧ್ಯೆ ನಡೆಯುತ್ತಿರುವ ಗಲಾಟೆಯೀಗ (Delhi MCD Ruckus) ಬೀದಿಗೆ ಬಂದಿದೆ. ಮೇಯರ್‌ ಚುನಾವಣೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇಂತಹವರಿಗೆ ನಾವು ಮತ ಹಾಕಿದೆವಾ ಎಂದು ಜನ ಬೇಸರ ವ್ಯಕ್ತಪಡಿಸುವಷ್ಟರ ಮಟ್ಟಿಗೆ ಕಾದಾಟ ತಾರಕಕ್ಕೇರಿದೆ.

ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಪ್ರತಿಭಟನೆ
ಲೆಫ್ಟಿನೆಂಟ್‌ ಗವರ್ನರ್‌ ಅವರು ಮಹಾನಗರ ಪಾಲಿಕೆಯ ಸ್ಪೀಕರ್‌ ಆಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ನೇಮಿಸಿದ ಕಾರಣ ಬಿಜೆಪಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕೌನ್ಸಿಲರ್‌ಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಜಲಫಿರಂಗಿ
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಗುಂಪನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿಯ ಇಬ್ಬರು ಮಹಿಳಾ ಕೌನ್ಸಿಲರ್‌ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಇದರಿಂದಾಗಿ ಪೊಲೀಸರು ಜಲಫಿರಂಗಿ ಪ್ರಯೋಗಿಸಬೇಕಾಯಿತು.

ಏಕೆ ಇಷ್ಟೊಂದು ಗಲಾಟೆ?
ಜನವರಿ 6ರಂದು ನಡೆದ ಮೊದಲ ಸಭೆಯ ವೇಳೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ತಾತ್ಕಾಲಿಕವಾಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುತ್ತಿದ್ದಂತೆ ಸಭೆಯಲ್ಲಿ ಸಂಘರ್ಷ ಶುರುವಾಯಿತು. ಶರ್ಮಾ ಅವರು ಮೊದಲಿಗೆ, ನಾಮನಿರ್ದೇಶನಗೊಂಡ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಪ್ ಸದಸ್ಯರು, ನಾಮನಿರ್ದೇಶನಗೊಂಡ ಸದಸ್ಯರಿಗಿಂತ ಮೊದಲು, ಚುನಾಯಿತ ಸದಸ್ಯರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಪಟ್ಟು ಹಿಡಿದರು. ಆಗ ಬಿಜೆಪಿ ಮತ್ತು ಆಪ್ ಸದಸ್ಯರ ಮಧ್ಯೆ ಜಟಾಪಟಿ ಶುರುವಾಯಿತು.

ಹೊಸದಾಗಿ ಚುನಾಯಿತವಾದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗೆ 10 ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸಕ್ಸೇನಾ ಅವರು ಶುಕ್ರವಾರ ಮೇಯರ್ ಚುನಾವಣೆಯ ಅಧ್ಯಕ್ಷತೆ ವಹಿಸಲು ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ಅವರನ್ನು ತಾತ್ಕಾಲಿಕ ಸ್ಪೀಕರ್ ಎಂದು ಘೋಷಿಸಿದರು. ಮೇಯರ್ ಆಯ್ಕೆಯ ಹಿನ್ನೆಲೆಯು ಆಪ್ ಮತ್ತು ಬಿಜೆಪಿ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ | Delhi Mayor Polls | ಮಾರಾಮಾರಿ ನಡುವೆ ದಿಲ್ಲಿ ಪಾಲಿಕೆ ಸಭೆ ಮುಂದೂಡಿಕೆ, ನಡೆಯಲಿಲ್ಲ ಮೇಯರ್ ಎಲೆಕ್ಷನ್!

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election | ಆಪ್​ ವಿರುದ್ಧ ಸೋತಿದ್ದರೂ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಸ್ಥಾನಕ್ಕೆ ಮತ್ತು ಆಲೆ ಮೊಹಮ್ಮದ್​ ಇಕ್ಬಾಲ್​ ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳಾಗಿದ್ದಾರೆ.

VISTARANEWS.COM


on

Rekha Gupta is Delhi BJP Mayor candidate
ರೇಖಾ ಗುಪ್ತಾ ಮತ್ತು ಶೆಲ್ಲಿ ಓಬೆರಾಯ್​
Koo

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಎದುರು ಸೋತಿದ್ದ ಬಿಜೆಪಿ, ಅಷ್ಟು ಸುಲಭಕ್ಕೆ ಅಲ್ಲಿನ ಪಟ್ಟ ಬಿಟ್ಟುಕೊಡುವ ಹಾಗೆ ಕಾಣುತ್ತಿಲ್ಲ. ಡಿಸೆಂಬರ್​ 4ರಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಒಟ್ಟು 250 ವಾರ್ಡ್​ಗಳಿಗೆ ನಡೆದ ಎಲೆಕ್ಷನ್​​ನಲ್ಲಿ ಆಮ್​ ಆದ್ಮಿ ಪಕ್ಷ 134 ಸೀಟುಗಳನ್ನು ಗೆದ್ದಿದ್ದರೆ, ಬಿಜೆಪಿ 104 ವಾರ್ಡ್​ಗಳಲ್ಲಿ ಜಯಸಾಧಿಸಿತ್ತು. ಈ ಮೂಲಕ ಕಳೆದ 15ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಇದ್ದ ಬಿಜೆಪಿ ಆಡಳಿತ ಕೊನೆಗೊಂಡಿತ್ತು.

ಗೆದ್ದ ಪಕ್ಷದಿಂದಲೇ ಮೇಯರ್​ ಮತ್ತು ಉಪಮೇಯರ್​ಗಳನ್ನು ಆಯ್ಕೆ ಮಾಡಲಾಗುತ್ತದೆ. ದೆಹಲಿ ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದ ಆಮ್​ ಆದ್ಮಿ ಪಕ್ಷ ಜನವರಿ 6ರಂದು ಮೇಯರ್​ ಮತ್ತು ಉಪಮೇಯರ್​ ಸ್ಥಾನದ ಆಯ್ಕೆ ಪ್ರಕ್ರಿಯೆಯನ್ನು ನಿಗದಿಪಡಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿತ್ತು. ಇದೇ ವೇಳೆ ಬಿಜೆಪಿ ಯೂಟರ್ನ್​ ಹೊಡೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಇದೀಗ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದರಂತೆ ಮೇಯರ್​ ಸ್ಥಾನಕ್ಕೆ ಬಿಜೆಪಿ ರೇಖಾ ಗುಪ್ತಾರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಉಪಮೇಯರ್ ಸ್ಥಾನಕ್ಕೆ ಕಮಲ್ ಬಾಗ್ರಿ ಅವರನ್ನು ಕಣಕ್ಕಿಳಿಸಿದೆ. ಇವರಿಬ್ಬರೂ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದರಲ್ಲಿ ರೇಖಾಗುಪ್ತಾ ಶಾಲಿಮಾರ್ ಬಾಘ್​​ನ ಕೌನ್ಸಿಲರ್​ ಆಗಿದ್ದು, ಮೂರು ಅವಧಿಗೆ ಆಡಳಿತ ನಡೆಸಿದ ಅನುಭವಿ. ಹಾಗೇ, ಕಮಲ್​ ಬಾಗ್ರಿಯವರು ರಾಮ್​ ನಗರ ವಾರ್ಡ್​​ನ ಕೌನ್ಸಿಲರ್​. ಮೇಯರ್​ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಗೆದ್ದ ಪಕ್ಷದವರೇ ಆಯ್ಕೆಯಾಗಬೇಕು ಎಂದೇನೂ ಇಲ್ಲ. ಹಾಗಾಗಿಯೇ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇನ್ನೊಂದೆಡೆ ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಅಭ್ಯರ್ಥಿಯಾಗಿದ್ದು, ಉಪಮೇಯರ್​ ಸ್ಥಾನಕ್ಕೆ ಆಲೆ ಮೊಹಮ್ಮದ್​ ಇಕ್ಬಾಲ್​ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

ಇದನ್ನೂ ಓದಿ: Delhi MCD Election | ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಿಂದ ಆಪರೇಷನ್‌ ಕಮಲ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

BJP Poaching AAP | ದೆಹಲಿಯ ಒಬ್ಬ ಕೌನ್ಸಿಲರ್‌ಗೆ ಬಿಜೆಪಿ 10 ಕೋಟಿ ರೂ. ಆಫರ್‌, ಆಪ್‌ ಗಂಭೀರ ಆರೋಪ

ದೆಹಲಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ “ಕುದುರೆ ವ್ಯಾಪಾರ”ದ (BJP Poaching AAP) ಆರೋಪ ಮಾಡಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಬಿಜೆಪಿಯ ೧೫ ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದೆ. “ಆಪ್‌ನ ೧೦ ಕೌನ್ಸಿಲರ್‌ಗಳ ಖರೀದಿಗೆ ಬಿಜೆಪಿ ೧೦೦ ಕೋಟಿ ರೂಪಾಯಿಯ ಆಫರ್‌ (BJP Poaching AAP) ನೀಡಿದೆ” ಎಂದು ಆಪ್‌ ಕೌನ್ಸಿಲರ್‌ಗಳು ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ.

“ಪಾಲಿಕೆ ಚುನಾವಣೆಯಲ್ಲಿ ಸೋತ ಬಿಜೆಪಿಯು ಹೊಲಸು ರಾಜಕಾರಣ ಮಾಡುತ್ತಿದೆ. ಹಣಬಲದಿಂದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ. ಆಪ್‌ನ ಒಬ್ಬ ಕೌನ್ಸಿಲರ್‌ಗೆ ೧೦ ಕೋಟಿ ರೂ. ಆಫರ್‌ ನೀಡಿದೆ. ಒಬ್ಬ ಕೌನ್ಸಿಲರ್‌ಗೆ ತಲಾ ೧೦ ಕೋಟಿ ರೂ. ನೀಡಿ, ಒಟ್ಟು ೧೦ ಕೌನ್ಸಿಲರ್‌ಗಳನ್ನು ಸೆಳೆಯುವ ತಂತ್ರ ಬಿಜೆಪಿಯದ್ದಾಗಿದೆ. ಹಾಗೆಯೇ, ಒಂದು ಕ್ರಾಸ್‌ ವೋಟಿಂಗ್‌ಗೆ ೫೦ ಲಕ್ಷ ರೂ. ಫಿಕ್ಸ್‌ ಮಾಡಿದೆ. ಆ ಮೂಲಕ ದೆಹಲಿ ಪಾಲಿಕೆಯಲ್ಲಿ ಆಪ್‌ ಆಡಳಿತ ನಡೆಸುವುದನ್ನು ತಡೆಯಲು ಬಿಜೆಪಿ ಎಲ್ಲ ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಕೌನ್ಸಿಲರ್‌ಗಳಾದ ಡಾ.ರೊನಾಕ್ಷಿ ಶರ್ಮಾ, ಅರುಣ್‌ ನವಾರಿಯಾ ಹಾಗೂ ಜ್ಯೋತಿ ರಾಣಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಇದಕ್ಕೂ ಮೊದಲು, ಬಿಜೆಪಿ ಕೂಡ ಆಪ್‌ ವಿರುದ್ಧ ಇದೇ ಆರೋಪ ಮಾಡಿದೆ. ಬಿಜೆಪಿ ಕೌನ್ಸಿಲರ್‌ಗಳಿಗೆ ಆಪ್‌ ಆಮಿಷ ಒಡ್ಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ದೆಹಲಿ ಮಹಾನಗರ ಪಾಲಿಕೆಯ ೨೫೦ ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಆಪ್‌ ೧೩೪, ಬಿಜೆಪಿ ೧೦೪ ಹಾಗೂ ಕಾಂಗ್ರೆಸ್‌ ೯ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ | Delhi MCD Election| ದೆಹಲಿ ಮಹಾನಗರ ಪಾಲಿಕೆ ಆಪ್​ ಮಡಿಲಿಗೆ; ಬಿಜೆಪಿಯ 15 ವರ್ಷಗಳ ಆಡಳಿತ ಅಂತ್ಯ

Continue Reading
Advertisement
Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್30 mins ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ31 mins ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ31 mins ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ45 mins ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್60 mins ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

tomato price rise
ಕರ್ನಾಟಕ1 hour ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ2 hours ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ2 hours ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ2 hours ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ2 hours ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202417 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202419 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202421 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202421 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌