Delhi MCD Election| ಗೆಲುವಿನೆಡೆಗೆ ಹೆಜ್ಜೆ ಹಾಕುತ್ತಿರುವ ಆಮ್​ ಆದ್ಮಿ ಪಕ್ಷ; ಸದ್ಯ ಬಿಜೆಪಿಗೆ 60 ವಾರ್ಡ್​​ಗಳಲ್ಲಿ ಗೆಲುವು - Vistara News

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election| ಗೆಲುವಿನೆಡೆಗೆ ಹೆಜ್ಜೆ ಹಾಕುತ್ತಿರುವ ಆಮ್​ ಆದ್ಮಿ ಪಕ್ಷ; ಸದ್ಯ ಬಿಜೆಪಿಗೆ 60 ವಾರ್ಡ್​​ಗಳಲ್ಲಿ ಗೆಲುವು

ಕಳೆದ 15 ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆ ಆಡಳಿತ ಬಿಜೆಪಿ ಕೈಯಲ್ಲಿತ್ತು. ಆದರೆ ಈ ಸಲ ಆಮ್​ ಆದ್ಮಿ ಪಕ್ಷ ಗೆಲ್ಲುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಆಪ್​ ಸಂಭ್ರಮಾಚರಣೆಯೂ ಶುರುವಾಗಿದೆ.

VISTARANEWS.COM


on

AAP Won 80 wards in Delhi MCD Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಸಾಗುತ್ತಿದ್ದು, ಇದುವರೆಗೆ ಶೇ.82 ಮತಗಳ ಎಣಿಕೆಯಾಗಿದೆ. ಈ ಸಲ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಗೆಲುವು ಸಾಧಿಸುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಇಲ್ಲಿಯವರೆಗೆ ಆಮ್​ ಆದ್ಮಿ ಪಕ್ಷ 80 ವಾರ್ಡ್​​ಗಳನ್ನು ಗೆದ್ದಿದ್ದು, ಬಿಜೆಪಿ 60 ವಾರ್ಡ್​ಗಳಲ್ಲಿ ಜಯ ಸಾಧಿಸಿದೆ ಎಂದು ದೆಹಲಿ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಹಾಗೇ ಕಾಂಗ್ರೆಸ್​ 4 ವಾರ್ಡ್​​ ಗೆದ್ದುಕೊಂಡಿದೆ.

ಕಳೆದ 15 ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆ ಆಡಳಿತ ಬಿಜೆಪಿ ಕೈಯಲ್ಲಿದೆ. ಈ ಸಲ ಡಿಸೆಂಬರ್​ 4ರಂದು ಚುನಾವಣೆ ನಡೆದಿತ್ತು. ಪ್ರಸಕ್ತ ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು.

ಸಂಭ್ರಮಾಚರಣೆಗೆ ಸಿದ್ಧತೆ
ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಅವರು ಆಪ್​ ಪಕ್ಷದ ಕಚೇರಿಯನ್ನು ಅಲಂಕರಿಸುತ್ತಿದ್ದಾರೆ. ಕೆಲವು ಪ್ರಮುಖ ನಾಯಕರು ಸಿಎಂ ಅರವಿಂದ್ ಕೇಜ್ರಿವಾಲ್​ ಮನೆಗೂ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Delhi MCD Election| ದೆಹಲಿ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಬಿಜೆಪಿ-ಆಪ್​ ತೀವ್ರ ಪೈಪೋಟಿ; ಸಮಬಲದಲ್ಲಿ ಮುನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದಿಲ್ಲಿ ಪಾಲಿಕೆ ಚುನಾವಣೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದ ಸುಪ್ರೀಂ, ಆಪ್‌ಗೆ ಭಾರಿ ಮುನ್ನಡೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದರಿಂದ ಬಿಜೆಪಿ ಹಾಗೂ ಆಪ್‌ ನಡುವಿನ ಬಿಕ್ಕಟ್ಟು ಬಹುತೇಕ ಬಗೆಹರಿದಂತಾಗಿದೆ.

VISTARANEWS.COM


on

Delhi Mayor Polls
Koo

ನವದೆಹಲಿ: ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆಯ ಕಗ್ಗಂಟಿನ (Delhi Mayor Polls) ವಿಚಾರದಲ್ಲಿ ಬಿಜೆಪಿ ವಿರುದ್ಧ ಆಪ್‌ಗೆ ಭಾರಿ ಮುನ್ನಡೆ ದೊರೆತಿದೆ. “ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಪ್ರಸ್ತಾಪಿಸಿದ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗೆಯೇ, ೨೪ ಗಂಟೆಯೊಳಗೆ ಮೇಯರ್‌ ಆಯ್ಕೆಗೆ ಚುನಾವಣೆ ನಡೆಸಿ ಎಂದು ಲೆಫ್ಟಿನೆಂಟ್‌ ಗವರ್ನರ್‌ಗೆ ಸೂಚಿಸಿದೆ.

“ದೆಹಲಿ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ. ಇದರ ಕುರಿತು ಕಾನೂನಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ” ಎಂದು ಆಪ್‌ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೇಯರ್‌ ಆಯ್ಕೆಗೆ ಜನವರಿ ೬, ೨೪ ಹಾಗೂ ಫೆಬ್ರವರಿ ೬ರಂದು ಸಭೆ ನಡೆಸಲಾಗಿತ್ತು. ಆದರೆ, ಬಿಜೆಪಿ-ಆಪ್‌ ಗಲಾಟೆಯಿಂದಾಗಿ ಆಯ್ಕೆ ಸಾಧ್ಯವಾಗಿರಲಿಲ್ಲ.

ಇದುವರೆಗೆ, ಪಾಲಿಕೆಯ ಸಭೆಯಲ್ಲಿ ಬಿಜೆಪಿಯ ನಾಮನಿರ್ದೇಶಿತ ಸದಸ್ಯರಿಗೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಮೊದಲು ಮತದಾನ ಮಾಡಲು ಅವಕಾಶ ನೀಡಿದ ಕಾರಣ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಮೊದಲು ಮತದಾನದ ಅವಕಾಶ ನೀಡಿದ ಕಾರಣ ಬೇಸತ್ತ ಆಪ್‌ ಕೋರ್ಟ್‌ ಮೊರೆ ಹೋಗಿದೆ.

ಇದನ್ನೂ ಓದಿ: Delhi Mayor Polls: ದಿಲ್ಲಿ ಮಹಾನಗರ ಪಾಲಿಕೆ ಸಭೆ ಮುಂದೂಡಿಕೆ, ಮತ್ತೆ ಆಯ್ಕೆಯಾಗಲಿಲ್ಲ ಮೇಯರ್! ಆಪ್ ಕೋರ್ಟ್ ಮೊರೆ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Ruckus | ದೆಹಲಿಯಲ್ಲಿ ಬೀದಿಗೆ ಬಂದ ಬಿಜೆಪಿ, ಆಪ್‌ ಜಗಳ, ಮತ ಹಾಕಿದ ಜನರಿಗೇ ನಾಚಿಕೆಯಾಗುವಂತೆ ಕಿತ್ತಾಟ

ದೆಹಲಿ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಪ್‌ ಕೌನ್ಸಿಲರ್‌ಗಳ ಕಿತ್ತಾಟವು ಮುಗಿಲುಮುಟ್ಟಿದೆ. ಕೆಲ ದಿನಗಳ ಹಿಂದೆ ಪಾಲಿಕೆಯ ಕಚೇರಿಯಲ್ಲಿ ನಡೆದಿದ್ದ ಗಲಾಟೆ (Delhi MCD Ruckus) ಈಗ ಬೀದಿಗೆ ಬಂದಿದೆ.

VISTARANEWS.COM


on

Delhi MCD Ruckus
Koo

ನವದೆಹಲಿ: ಮುನ್ಸಿಪಲ್‌ ಕಾರ್ಪೊರೇಷನ್‌ ಆಫ್‌ ದೆಹಲಿ (MCD)ಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಫ್‌ ಕೌನ್ಸಿಲರ್‌ಗಳ ಮಧ್ಯೆ ನಡೆಯುತ್ತಿರುವ ಗಲಾಟೆಯೀಗ (Delhi MCD Ruckus) ಬೀದಿಗೆ ಬಂದಿದೆ. ಮೇಯರ್‌ ಚುನಾವಣೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇಂತಹವರಿಗೆ ನಾವು ಮತ ಹಾಕಿದೆವಾ ಎಂದು ಜನ ಬೇಸರ ವ್ಯಕ್ತಪಡಿಸುವಷ್ಟರ ಮಟ್ಟಿಗೆ ಕಾದಾಟ ತಾರಕಕ್ಕೇರಿದೆ.

ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಪ್ರತಿಭಟನೆ
ಲೆಫ್ಟಿನೆಂಟ್‌ ಗವರ್ನರ್‌ ಅವರು ಮಹಾನಗರ ಪಾಲಿಕೆಯ ಸ್ಪೀಕರ್‌ ಆಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ನೇಮಿಸಿದ ಕಾರಣ ಬಿಜೆಪಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕೌನ್ಸಿಲರ್‌ಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಜಲಫಿರಂಗಿ
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಗುಂಪನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿಯ ಇಬ್ಬರು ಮಹಿಳಾ ಕೌನ್ಸಿಲರ್‌ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಇದರಿಂದಾಗಿ ಪೊಲೀಸರು ಜಲಫಿರಂಗಿ ಪ್ರಯೋಗಿಸಬೇಕಾಯಿತು.

ಏಕೆ ಇಷ್ಟೊಂದು ಗಲಾಟೆ?
ಜನವರಿ 6ರಂದು ನಡೆದ ಮೊದಲ ಸಭೆಯ ವೇಳೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ತಾತ್ಕಾಲಿಕವಾಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುತ್ತಿದ್ದಂತೆ ಸಭೆಯಲ್ಲಿ ಸಂಘರ್ಷ ಶುರುವಾಯಿತು. ಶರ್ಮಾ ಅವರು ಮೊದಲಿಗೆ, ನಾಮನಿರ್ದೇಶನಗೊಂಡ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಪ್ ಸದಸ್ಯರು, ನಾಮನಿರ್ದೇಶನಗೊಂಡ ಸದಸ್ಯರಿಗಿಂತ ಮೊದಲು, ಚುನಾಯಿತ ಸದಸ್ಯರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಪಟ್ಟು ಹಿಡಿದರು. ಆಗ ಬಿಜೆಪಿ ಮತ್ತು ಆಪ್ ಸದಸ್ಯರ ಮಧ್ಯೆ ಜಟಾಪಟಿ ಶುರುವಾಯಿತು.

ಹೊಸದಾಗಿ ಚುನಾಯಿತವಾದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗೆ 10 ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸಕ್ಸೇನಾ ಅವರು ಶುಕ್ರವಾರ ಮೇಯರ್ ಚುನಾವಣೆಯ ಅಧ್ಯಕ್ಷತೆ ವಹಿಸಲು ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ಅವರನ್ನು ತಾತ್ಕಾಲಿಕ ಸ್ಪೀಕರ್ ಎಂದು ಘೋಷಿಸಿದರು. ಮೇಯರ್ ಆಯ್ಕೆಯ ಹಿನ್ನೆಲೆಯು ಆಪ್ ಮತ್ತು ಬಿಜೆಪಿ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ | Delhi Mayor Polls | ಮಾರಾಮಾರಿ ನಡುವೆ ದಿಲ್ಲಿ ಪಾಲಿಕೆ ಸಭೆ ಮುಂದೂಡಿಕೆ, ನಡೆಯಲಿಲ್ಲ ಮೇಯರ್ ಎಲೆಕ್ಷನ್!

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election | ಆಪ್​ ವಿರುದ್ಧ ಸೋತಿದ್ದರೂ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಸ್ಥಾನಕ್ಕೆ ಮತ್ತು ಆಲೆ ಮೊಹಮ್ಮದ್​ ಇಕ್ಬಾಲ್​ ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳಾಗಿದ್ದಾರೆ.

VISTARANEWS.COM


on

Rekha Gupta is Delhi BJP Mayor candidate
ರೇಖಾ ಗುಪ್ತಾ ಮತ್ತು ಶೆಲ್ಲಿ ಓಬೆರಾಯ್​
Koo

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಎದುರು ಸೋತಿದ್ದ ಬಿಜೆಪಿ, ಅಷ್ಟು ಸುಲಭಕ್ಕೆ ಅಲ್ಲಿನ ಪಟ್ಟ ಬಿಟ್ಟುಕೊಡುವ ಹಾಗೆ ಕಾಣುತ್ತಿಲ್ಲ. ಡಿಸೆಂಬರ್​ 4ರಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಒಟ್ಟು 250 ವಾರ್ಡ್​ಗಳಿಗೆ ನಡೆದ ಎಲೆಕ್ಷನ್​​ನಲ್ಲಿ ಆಮ್​ ಆದ್ಮಿ ಪಕ್ಷ 134 ಸೀಟುಗಳನ್ನು ಗೆದ್ದಿದ್ದರೆ, ಬಿಜೆಪಿ 104 ವಾರ್ಡ್​ಗಳಲ್ಲಿ ಜಯಸಾಧಿಸಿತ್ತು. ಈ ಮೂಲಕ ಕಳೆದ 15ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಇದ್ದ ಬಿಜೆಪಿ ಆಡಳಿತ ಕೊನೆಗೊಂಡಿತ್ತು.

ಗೆದ್ದ ಪಕ್ಷದಿಂದಲೇ ಮೇಯರ್​ ಮತ್ತು ಉಪಮೇಯರ್​ಗಳನ್ನು ಆಯ್ಕೆ ಮಾಡಲಾಗುತ್ತದೆ. ದೆಹಲಿ ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದ ಆಮ್​ ಆದ್ಮಿ ಪಕ್ಷ ಜನವರಿ 6ರಂದು ಮೇಯರ್​ ಮತ್ತು ಉಪಮೇಯರ್​ ಸ್ಥಾನದ ಆಯ್ಕೆ ಪ್ರಕ್ರಿಯೆಯನ್ನು ನಿಗದಿಪಡಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿತ್ತು. ಇದೇ ವೇಳೆ ಬಿಜೆಪಿ ಯೂಟರ್ನ್​ ಹೊಡೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಇದೀಗ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದರಂತೆ ಮೇಯರ್​ ಸ್ಥಾನಕ್ಕೆ ಬಿಜೆಪಿ ರೇಖಾ ಗುಪ್ತಾರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಉಪಮೇಯರ್ ಸ್ಥಾನಕ್ಕೆ ಕಮಲ್ ಬಾಗ್ರಿ ಅವರನ್ನು ಕಣಕ್ಕಿಳಿಸಿದೆ. ಇವರಿಬ್ಬರೂ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದರಲ್ಲಿ ರೇಖಾಗುಪ್ತಾ ಶಾಲಿಮಾರ್ ಬಾಘ್​​ನ ಕೌನ್ಸಿಲರ್​ ಆಗಿದ್ದು, ಮೂರು ಅವಧಿಗೆ ಆಡಳಿತ ನಡೆಸಿದ ಅನುಭವಿ. ಹಾಗೇ, ಕಮಲ್​ ಬಾಗ್ರಿಯವರು ರಾಮ್​ ನಗರ ವಾರ್ಡ್​​ನ ಕೌನ್ಸಿಲರ್​. ಮೇಯರ್​ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಗೆದ್ದ ಪಕ್ಷದವರೇ ಆಯ್ಕೆಯಾಗಬೇಕು ಎಂದೇನೂ ಇಲ್ಲ. ಹಾಗಾಗಿಯೇ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇನ್ನೊಂದೆಡೆ ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಅಭ್ಯರ್ಥಿಯಾಗಿದ್ದು, ಉಪಮೇಯರ್​ ಸ್ಥಾನಕ್ಕೆ ಆಲೆ ಮೊಹಮ್ಮದ್​ ಇಕ್ಬಾಲ್​ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

ಇದನ್ನೂ ಓದಿ: Delhi MCD Election | ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಿಂದ ಆಪರೇಷನ್‌ ಕಮಲ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

BJP Poaching AAP | ದೆಹಲಿಯ ಒಬ್ಬ ಕೌನ್ಸಿಲರ್‌ಗೆ ಬಿಜೆಪಿ 10 ಕೋಟಿ ರೂ. ಆಫರ್‌, ಆಪ್‌ ಗಂಭೀರ ಆರೋಪ

ದೆಹಲಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ “ಕುದುರೆ ವ್ಯಾಪಾರ”ದ (BJP Poaching AAP) ಆರೋಪ ಮಾಡಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಬಿಜೆಪಿಯ ೧೫ ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದೆ. “ಆಪ್‌ನ ೧೦ ಕೌನ್ಸಿಲರ್‌ಗಳ ಖರೀದಿಗೆ ಬಿಜೆಪಿ ೧೦೦ ಕೋಟಿ ರೂಪಾಯಿಯ ಆಫರ್‌ (BJP Poaching AAP) ನೀಡಿದೆ” ಎಂದು ಆಪ್‌ ಕೌನ್ಸಿಲರ್‌ಗಳು ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ.

“ಪಾಲಿಕೆ ಚುನಾವಣೆಯಲ್ಲಿ ಸೋತ ಬಿಜೆಪಿಯು ಹೊಲಸು ರಾಜಕಾರಣ ಮಾಡುತ್ತಿದೆ. ಹಣಬಲದಿಂದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ. ಆಪ್‌ನ ಒಬ್ಬ ಕೌನ್ಸಿಲರ್‌ಗೆ ೧೦ ಕೋಟಿ ರೂ. ಆಫರ್‌ ನೀಡಿದೆ. ಒಬ್ಬ ಕೌನ್ಸಿಲರ್‌ಗೆ ತಲಾ ೧೦ ಕೋಟಿ ರೂ. ನೀಡಿ, ಒಟ್ಟು ೧೦ ಕೌನ್ಸಿಲರ್‌ಗಳನ್ನು ಸೆಳೆಯುವ ತಂತ್ರ ಬಿಜೆಪಿಯದ್ದಾಗಿದೆ. ಹಾಗೆಯೇ, ಒಂದು ಕ್ರಾಸ್‌ ವೋಟಿಂಗ್‌ಗೆ ೫೦ ಲಕ್ಷ ರೂ. ಫಿಕ್ಸ್‌ ಮಾಡಿದೆ. ಆ ಮೂಲಕ ದೆಹಲಿ ಪಾಲಿಕೆಯಲ್ಲಿ ಆಪ್‌ ಆಡಳಿತ ನಡೆಸುವುದನ್ನು ತಡೆಯಲು ಬಿಜೆಪಿ ಎಲ್ಲ ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಕೌನ್ಸಿಲರ್‌ಗಳಾದ ಡಾ.ರೊನಾಕ್ಷಿ ಶರ್ಮಾ, ಅರುಣ್‌ ನವಾರಿಯಾ ಹಾಗೂ ಜ್ಯೋತಿ ರಾಣಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಇದಕ್ಕೂ ಮೊದಲು, ಬಿಜೆಪಿ ಕೂಡ ಆಪ್‌ ವಿರುದ್ಧ ಇದೇ ಆರೋಪ ಮಾಡಿದೆ. ಬಿಜೆಪಿ ಕೌನ್ಸಿಲರ್‌ಗಳಿಗೆ ಆಪ್‌ ಆಮಿಷ ಒಡ್ಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ದೆಹಲಿ ಮಹಾನಗರ ಪಾಲಿಕೆಯ ೨೫೦ ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಆಪ್‌ ೧೩೪, ಬಿಜೆಪಿ ೧೦೪ ಹಾಗೂ ಕಾಂಗ್ರೆಸ್‌ ೯ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ | Delhi MCD Election| ದೆಹಲಿ ಮಹಾನಗರ ಪಾಲಿಕೆ ಆಪ್​ ಮಡಿಲಿಗೆ; ಬಿಜೆಪಿಯ 15 ವರ್ಷಗಳ ಆಡಳಿತ ಅಂತ್ಯ

Continue Reading
Advertisement
Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ1 ದಿನ ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು2 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು2 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು2 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ3 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ3 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು3 ದಿನಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌