Border Dispute | ಮಹಾರಾಷ್ಟ್ರದಿಂದ ಕನ್ನಡಿಗರನ್ನು ಓಡಿಸುತ್ತೇವೆ: ಎಂಎನ್‌ಎಸ್‌ ಮುಖಂಡನ ಉದ್ಧಟತನ - Vistara News

ಬೆಳಗಾವಿ

Border Dispute | ಮಹಾರಾಷ್ಟ್ರದಿಂದ ಕನ್ನಡಿಗರನ್ನು ಓಡಿಸುತ್ತೇವೆ: ಎಂಎನ್‌ಎಸ್‌ ಮುಖಂಡನ ಉದ್ಧಟತನ

ಉದ್ಧವ್ ಠಾಕ್ರೆ ಬಣದಿಂದ ಬೆಳಗಾವಿ ಗಡಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಗಿತ್ತು. ಮರುದಿನವೇ ರಾಜ್ ಠಾಕ್ರೆ ಬಣದಿಂದ ಪ್ರತಿಭಟನೆ ನಡೆಸಲಾಗಿದೆ.

VISTARANEWS.COM


on

Border Dispute
ಎಂಎನ್‌ಎಸ್‌ ಸಾಂಗ್ಲಿ ಜಿಲ್ಲಾ ಘಟಕದ ಅಧ್ಯಕ್ಷ ತಾನಾಜಿ ಸಾವಂತ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಬಣದಿಂದ ಜಿಲ್ಲೆಯ ಗಡಿಯಲ್ಲಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್‌ಎಸ್‌) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಂಘಟನೆಯ ಸಾಂಗ್ಲಿ ಜಿಲ್ಲಾ ಘಟಕದ ಅಧ್ಯಕ್ಷ ತಾನಾಜಿ ಸಾವಂತ್‌ ಉದ್ಧಟತನದ ಹೇಳಿಕೆ ನೀಡಿದ್ದು, ಕನ್ನಡಿಗರನ್ನು ಮಹಾರಾಷ್ಟ್ರದಿಂದ ಓಡಿಸಬೇಕಾಗುತ್ತದೆ. ಮಹಾರಾಷ್ಟ್ರಕ್ಕೆ ಬರುವ ಕರ್ನಾಟಕದ ಬಸ್‌ಗಳನ್ನು ಬ್ಯಾನ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಉದ್ಧವ್ ಠಾಕ್ರೆ ಬಣದಿಂದ ಗಡಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಮರುದಿನವೇ ರಾಜ್ ಠಾಕ್ರೆ ಬಣದಿಂದ(ಎಂಎನ್‌ಎಸ್) ಪ್ರತಿಭಟನೆ ನಡೆಸಲಾಗಿದೆ. ಎಂಎನ್‌ಎಸ್‌ ಪುಂಡರು ಬೆಳಗಾವಿಯ ಕಾಗವಾಡ ಚೆಕ್‌ಪೋಸ್ಟ್‌ವರೆಗೂ ‌ಬಂದು ಪ್ರತಿಭಟನೆ ನಡೆಸಿದ್ದಾರೆ.

ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಸಾಂಗ್ಲಿ ಜಿಲ್ಲೆಯ ಅಧ್ಯಕ್ಷ ತಾನಾಜಿ ಸಾವಂತ್‌ ಮಾತನಾಡಿ, ಕರ್ನಾಟಕದವರು ನಮ್ಮ ಮೇಲೆಯೇ ಅವಲಂಬಿತರಾಗಿದ್ದಾರೆ. ಇವರ ಆರೋಗ್ಯ ಸೇವೆಗೆ ಮಹಾರಾಷ್ಟ್ರ ಬೇಕು, ಉದ್ಯೋಗಕ್ಕೆ ಹಲವು ಜನರು ನಮ್ಮ ರಾಜ್ಯಕ್ಕೆ ಬರುತ್ತಾರೆ. ಇವರಿಗೆ ‌ಕುಡಿಯುವ ನೀರು ಸಹ ಮಹಾರಾಷ್ಟ್ರದಿಂದಲೇ‌ ಬೇಕು. ಆದರೆ ಗಡಿ ವಿಚಾರ ಬಂದಾಗ ಮಾತ್ರ ನಮ್ಮ ಮೇಲೆ ದೌರ್ಜನ್ಯ ಎಸಗುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Border Dispute | ಸಂಸತ್ತಿನಲ್ಲಿ ಕರ್ನಾಟಕದ ವಿರುದ್ಧ ಹರಿಹಾಯ್ದ ಸುಳೆ! ಶಾ ಮಧ್ಯಪ್ರವೇಶಕ್ಕೆ ಆಗ್ರಹ

ಕನ್ನಡ ಪರ ಸಂಘಟನೆಗಳಿಂದ ಮಹಾರಾಷ್ಟ್ರ ವಾಹನಗಳ ಮೇಲೆ ದಾಳಿ ಆಗುತ್ತಿದೆ. ಇದು ಹೀಗೆಯೇ ಮುಂದುವರಿದರೆ ಮಹಾರಾಷ್ಟ್ರದಲ್ಲಿ ಇರುವಂತಹ ಕನ್ನಡಿಗರನ್ನು ಓಡಿಸಬೇಕಾಗುತ್ತದೆ. ಮಹಾರಾಷ್ಟ್ರಕ್ಕೆ ಬರುವ ಬಸ್‌ಗಳನ್ನೂ ಬ್ಯಾನ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಬಸ್ ಸಂಚಾರ ಬಂದ್ ಮಾಡಿರುವುದರಿಂದ ನೆರೆರಾಜ್ಯದಿಂದ ಬರುವ ಪ್ರಯಾಣಿಕರು ಕಾಲ್ನಡಿಗೆಯಲ್ಲಿ ರಾಜ್ಯ ಪ್ರವೇಶ ಮಾಡುತ್ತಿದ್ದಾರೆ. ಮಹಾ ಗಡಿಯವರೆಗೆ ಮಾತ್ರ ಅಲ್ಲಿನ ಬಸ್‌ಗಳು ಜನರನ್ನು ತಂದು ಬಿಡುತ್ತಿರುವ ಹಿನ್ನೆಲೆಯಲ್ಲಿ ಕಾಗವಾಡ ಚೆಕ್‌ ಪೋಸ್ಟ್ ಮೂಲಕ ಜನರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಬಸ್‌ ಸಂಚಾರ ಬಂದ್‌; ಬೆಳಗಾವಿ ವಿಭಾಗಾಧಿಕಾರಿಗೆ ತರಾಟೆ
ಬಸ್‌ ಸಂಚಾರ ಬಂದ್‌ ಮಾಡಿರುವುದಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯ ಬೆಳಗಾವಿ ವಿಭಾಗಾಧಿಕಾರಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಅಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ ಕರವೇ ಕಾರ್ಯಕರ್ತರು, 24 ಗಂಟೆಯೊಳಗೆ ಬಸ್‌ಗಳ ಸಂಚಾರ ಆರಂಭವಾಗಬೇಕು. ನಾವು ಮಹಾರಾಷ್ಟ್ರದ ಬಸ್‌ಗಳಿಗೆ ಏನೂ ಮಾಡಲ್ಲ, ಅವರೇನಾದರೂ ನಮ್ಮ ಬಸ್‌ಗಳಿಗೆ ತೊಂದರೆ ನೀಡಿದರೆ ಮಹಾರಾಷ್ಟ್ರದ ಒಂದೂ ಬಸ್ ಉಳಿಯಲ್ಲ. ರಾಜ್ಯದ ಒಳಗೆ ಇರುವ ಮಹಾರಾಷ್ಟ್ರ ಬಸ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | Border Dispute | ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಶಿವಸೇನೆ ಒತ್ತಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

Reels Accident : ರೀಲ್ಸ್‌ ಹುಚ್ಚು ಯುವತಿಯೊಬ್ಬಳ ಪ್ರಾಣವನ್ನೇ ಕಸಿದಿದೆ. ಬೆಟ್ಟದ ತುದಿಯಲ್ಲಿ ಸಾಹಸ ಪ್ರದರ್ಶಿಸಲು ಹೋಗಿ 25ರ ಯುವತಿ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದ್ದಾಳೆ. ಸಾವಿನ ಕೊನೆ ಕ್ಷಣವು ಸ್ನೇಹಿತನ ಮೊಬೈಲ್‌ನಲ್ಲಿ (Reels Tragedy) ಸೆರೆಯಾಗಿದೆ.

VISTARANEWS.COM


on

By

Reels tragedy
Koo

ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ (Reels Accident) ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ರೀಲ್ಸ್‌ (Reels Tragedy) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಅಂತಹದ್ದೇ ಘಟನೆಯೊಂದು ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ರೀಲ್ಸ್ ಹುಚ್ಚಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ.

ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿ ಹಾಗೂ ಉತ್ತರ ಒಳನಾಡಿನ ನೈರುತ್ಯ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿರಲಿದೆ. ಈ ದಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ, ಉತ್ತರ ಒಳನಾಡು ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಗಾಳಿ ಜತೆಗೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ಇದನ್ನೂ ಓದಿ: Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

ಬೆಂಗಳೂರು: ಬೇಸಿಗೆ ಕಾಲದ ನಂತರ ಬರುವ ಮಳೆಗಾಲ ನಿಮ್ಮನ್ನು ಶಾಖದಿಂದ ಮುಕ್ತಗೊಳಿಸಿ ತಂಪನ್ನು ನೀಡುತ್ತದೆ ನಿಜ. ಆದರೆ ಈ ಸಮಯದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳ ಹಾವಳಿ ಹೆಚ್ಚಾಗಿರುತ್ತದೆ. ಹಾಗಾಗಿ ಅನೇಕ ಕಾಯಿಲೆಗಳು ಕೂಡ ಹರಡುತ್ತದೆ. ಇದರಿಂದ ನೀವು ಬಹಳ ಬೇಗನೆ ಅನಾರೋಗ್ಯಕ್ಕೊಳಗಾಗುತ್ತೀರಿ. ಹಾಗಾಗಿ ಮಳೆಗಾಲದಲ್ಲಿ ನೀವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಇದರಿಂದ ನೀವು ಫಿಟ್ ಆಗಿ ಆರೋಗ್ಯ (Health Tips) ವಾಗಿರಬಹುದು.

ಶುದ್ಧ ಮತ್ತು ಕುದಿಸಿದ ನೀರನ್ನು ಕುಡಿಯಿರಿ

ಮಳೆಗಾಲದಲ್ಲಿ ನೀರು ತುಂಬಾ ಕಲುಷಿತವಾಗಿರುತ್ತದೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಈ ನೀರನ್ನು ನೀವು ಹಾಗೇ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಜ್ವರದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಮಳೆಗಾಲದಲ್ಲಿ ಶುದ್ಧವಾದ ನೀರನ್ನು ಬಳಸಿ ಮತ್ತು ಕುದಿಸಿ ಆರಿಸಿದ ನೀರನ್ನೇ ಕುಡಿಯಿರಿ. ಹಾಗೇ ಹೊರಗಡೆ ಹೋದಾಗ ಅಲ್ಲಲ್ಲಿ ನೀರನ್ನು ಕುಡಿಯುವ ಬದಲು ಮನೆಯ ನೀರನ್ನು ತೆಗೆದುಕೊಂಡು ಹೋಗಿ ಬಳಸಿ.

Health Tips

ಬೀದಿ ಬದಿಯ ಆಹಾರ ಮತ್ತು ಜಂಕ್ ಫುಡ್ ಸೇವನೆಯನ್ನು ತಪ್ಪಿಸಿ

ಹೆಚ್ಚಿನ ಜನರು ಬೀದಿಗಳಲ್ಲಿ ಮಾರಾಟ ಮಾಡುತ್ತಿರುವ ಆಹಾರವನ್ನು ಸೇವಿಸುತ್ತಾರೆ. ಆದರೆ ಬೀದಿಗಳಲ್ಲಿ ಆಹಾರಗಳನ್ನು ತೆರೆದಿಡುತ್ತಾರೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಸೇರಿಕೊಳ್ಳುತ್ತದೆ. ಅದನ್ನು ಸೇವಿಸಿದರೆ ನಿಮ್ಮ ಆರೋಗ್ಯ ಕೆಡುತ್ತದೆ. ಹಾಗಾಗಿ ಅವುಗಳನ್ನು ತಿನ್ನುವುದನ್ನು ತಪ್ಪಿಸಿ.

ಮನೆಯ ಸುತ್ತಮುತ್ತ ನೀರು ನಿಲ್ಲುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಮನೆಯ ಸುತ್ತಮುತ್ತಲಿರುವ ಹೊಂಡಗಳು, ಮಡಿಕೆಗಳು, ಪ್ಲಾಸ್ಟಿಕ್ ಡಬ್ಬಗಳು, ಬಾಟಲಿಗಳು ಮುಂತಾದವುಗಳಲ್ಲಿ ನೀರು ಸಂಗ್ರಹವಾಗುತ್ತದೆ. ಹಾಗಾಗಿ ಇಂತಹ ನೀರಿನಲ್ಲಿ ಸೊಳ್ಳೆಗಳು ಮೊಟ್ಟಯಿಟ್ಟು ಮರಿ ಮಾಡುತ್ತವೆ. ಈ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ, ಮಲೇರಿಯಾದಂತಹ ಹಲವಾರು ಕಾಯಿಲೆಗಳು ಹರಡುತ್ತವೆ. ಹಾಗಾಗಿ ಈ ನೀರು ಶೇಖರಣೆಯಾಗುವುದನ್ನು ತಪ್ಪಿಸಿ.

Health Tips

ಹಣ್ಣುಗಳು-ತರಕಾರಿಗಳನ್ನು ತೊಳೆದು ಬಳಸಿ

ಮಾರುಕಟ್ಟೆಯಿಂದ ತಂದ ಹಣ್ಣುಗಳು ಮತ್ತು ತರಕಾರಿಗಳ ಮೇಲ್ಮೈ ಮೇಲೆ ಬ್ಯಾಕ್ಟೀರಿಯಾಗಳು ಇರುತ್ತವೆ. ಇದನ್ನು ಹಾಗೇ ಸೇವಿಸಿದರೆ ಹೊಟ್ಟೆ ಕೆಡುತ್ತದೆ. ಹಾಗಾಗಿ ಅವುಗಳನ್ನು ಉಪ್ಪನ್ನು ಬೆರೆಸಿದ ನೀರಿನಲ್ಲಿ ಚೆನ್ನಾಗಿ ತೊಳೆದು ಉಪಯೋಗಿಸಿ. ಮತ್ತು ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ. ಹಸಿ ತರಕಾರಿ ತಿನ್ನುವುದನ್ನು ತಪ್ಪಿಸಿ.

Health Tips

ಸುಖಕರವಾಗಿ ನಿದ್ರೆ ಮಾಡಿ

ನಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ತಡವಾಗಿ ನಿದ್ರೆ ಮಾಡುವುದು , ಕಡಿಮೆ ನಿದ್ರೆ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ನೀವು ಜ್ವರ, ಶೀತದಂತಹ ಸಾಮಾನ್ಯ ಕಾಯಿಲೆಯಿಂದ ಬಳಲುತ್ತೀರಿ. ಹಾಗಾಗಿ ದಿನದಲ್ಲಿ 8 ಗಂಟೆಗಳ ಕಾಲ ನಿದ್ರಿಸಿ.

Health Tips

ನಿಯಮಿತವಾದ ವ್ಯಾಯಾಮ

ಮಳೆಗಾಲದಲ್ಲಿ ಹೊರಗಡೆ ಮಳೆ ಸುರಿಯುವುದರಿಂದ ವಾಕಿಂಗ್, ಸೈಕ್ಲಿಂಗ್, ಯೋಗ ಮುಂತಾದ ವ್ಯಾಯಾಮಗಳನ್ನು ಮಾಡಲು ಅಡ್ಡಿಯಾಗುತ್ತದೆ. ಆದರೆ ನೀವು ಪ್ರತಿದಿನದ ವ್ಯಾಯಾಮವನ್ನು ತಪ್ಪಿಸಬೇಡಿ. ಮನೆಯೊಳಗೆ ನಿಮಗೆ ಸಾಧ್ಯವಾದಷ್ಟು ವ್ಯಾಯಾಮ ಮಾಡಿ. ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗೂ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ನಿಮ್ಮ ಕೈಗಳನ್ನು ಚೆನ್ನಾಗಿ ತೊಳೆಯಿರಿ

ನೀವು ಹೊರಗಡೆಯಿಂದ ಬಂದಾಗ ಕೈಕಾಲುಗಳನ್ನು ಸ್ವಚ್ಛ ಗೊಳಿಸುವುದನ್ನು ಮರೆಯಬೇಡಿ. ಹಾಗೇ ಯಾವುದೇ ಆಹಾರವನ್ನು ಸೇವಿಸುವ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯಿರಿ. ಇದು ನಿಮ್ಮನ್ನು ಹಾನಿಕಾರಕ ಬ್ಯಾಕ್ಟೀರಿಯಾಗಳಿಂದ ಕಾಪಾಡುತ್ತದೆ.

ಆಗಾಗ ಮಳೆಯಲ್ಲಿ ನೆನೆಯುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಹೊರಗಡೆ ಮಳೆ ಧಾರಕಾರವಾಗಿ ಸುರಿಯುತ್ತಿರುತ್ತದೆ. ಹಾಗಾಗಿ ನೀವು ಹೊರಗಡೆ ಹೋಗುವಾಗ ಛತ್ರಿ, ರೈನ್ ಕೋಟ್ ಧರಿಸುವುದನ್ನು ಮರೆಯಬೇಡಿ. ಇಲ್ಲವಾದರೆ ನೀವು ಮಳೆಯಲ್ಲಿ ನೆನೆಯಬೇಕಾಗುತ್ತದೆ. ಇದರಿಂದ ನೀವು ಅನಾರೋಗ್ಯಕ್ಕೊಳಗಾಗಬಹುದು. ಹಾಗಾಗಿ ಮಳೆಗಾಲದಲ್ಲಿ ನೀವು ಆರೋಗ್ಯವಾಗಿರಲು ಪ್ರಯತ್ನಿಸಿ. ಅದಕ್ಕಾಗಿ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಇವು ನಿಮ್ಮನ್ನು ರೋಗಗಳಿಂದ ಕಾಪಾಡಲು ಸಹಾಯ ಮಾಡುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

Belagavi News: ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ.

VISTARANEWS.COM


on

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
Koo

ಬೆಳಗಾವಿ: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿಯ ಕನ್ನಡ ಶಾಲೆಗಳಿಗೆ (Kannada Schools) ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರದ (Maharashtra Government) ಕನ್ನಡ ವಿರೋಧಿ ನೀತಿಯನ್ನು ಪ್ರತಿಭಟಿಸುವ ಕುರಿತು ಈಗ ಕನ್ನಡಿಗರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ (Belagavi News) ಬರೆದಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾ ಪಂಚಾಯಿತಿಯು ಇತ್ತೀಚೆಗೆ ಕನ್ನಡ ಶಾಲೆಗಳಿಗಾಗಿ ನೇಮಕ ಮಾಡಿದ 24 ಶಿಕ್ಷಕರ ಪೈಕಿ ಕೇವಲ ನಾಲ್ವರು ಮಾತ್ರ ಕನ್ನಡಿಗರಾಗಿದ್ದಾರೆ. ಕನ್ನಡ ಡಿ.ಎಡ್. ಪದವಿ ಪಡೆದ ನೂರಾರು ಶಿಕ್ಷಕರು ಕನ್ನಡ ಪ್ರದೇಶಗಳಲಿದ್ದು ಅವರನ್ನು ಕನ್ನಡ ಶಾಲೆಗಳಿಗೆ ನೇಮಕ ಮಾಡದೇ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವ ಅಲ್ಲಿಯ ಸರ್ಕಾರದ ಕ್ರಮವು ದುರದ್ದೇಶಪೂರಿತವಾಗಿದೆ. ಈ ಕ್ರಮದ ವಿರುದ್ಧ ಅಲ್ಲಿಯ ಕನ್ನಡಿಗರು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಅವರ ಬೆನ್ನಿಗೆ ಕರ್ನಾಟಕ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ತನ್ನ ಸೂಕ್ತ ಹಾಗೂ ಸಮಂಜಸವಾದ ಪ್ರತಿಭಟನೆಯನ್ನು ತಿಳಿಸಬೇಕು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನೊಳಗೊಂಡ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ ಸಮಗ್ರವಾದ ವರದಿಯೊಂದನ್ನು ತಾವು ತರಿಸಿಕೊಂಡು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಲಿಯ ಕನ್ನಡಿಗರ ಹಿತರಕ್ಷಣೆಗೆ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಬೇಕೆಂದು ಕೋರುತ್ತೇವೆ ಎಂದು ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಸದಸ್ಯರು ಪತ್ರ ಬರೆದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಧೋರಣೆಯನ್ನು ಮನವರಿಕೆ ಮಾಡಿದ್ದಾರೆ.

Continue Reading

ಮಳೆ

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಲ್ಲಿ (Rain News) ಮಳೆಯಾಗಿದ್ದು, ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು:ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಡುವು ಕೊಟ್ಟಿದ್ದ ವರುಣ ಸೋಮವಾರ (Karnataka weather Forecast) ಅಬ್ಬರಿಸಿದ್ದ. ಕಾಫಿನಾಡು ಚಿಕ್ಕಮಗಳೂರಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆ (Rain News) ಸುರಿದಿದೆ. ಗಾಳಿ ಸಹಿತ ಮಳೆಗೆ ಸವಾರರು ಹೆಡ್ ಲೈಟ್ ಹಾಕಿಕೊಂಡೇ ವಾಹನ ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಅದರಲ್ಲೂ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದ್ದವು. ಭಾರಿ ಮಳೆಗೆ ರಸ್ತೆ ಕಾಣದೆ ಹಲವರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡಿದ್ದರು.

ಬೆಂಗಳೂರಲ್ಲಿ ಸಣ್ಣ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯು ಮಾಯವಾಗಿತ್ತು. ನಗರದ ಹಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಶುರುವಾಗಿತ್ತು. ಮುಖ್ಯವಾಗಿ ಕಾರ್ಪೋರೇಶನ್, ಕೆಆರ್‌ ಮಾರ್ಕೆಟ್, ಮೆಜೆಸ್ಟಿಕ್, ಶೇಷಾದ್ರಿಪುರಂ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯುನ್ನುಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕುಮಟಾದಲ್ಲಿ ಅತಿ ಹೆಚ್ಚು ಮಳೆ ದಾಖಲು

ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 9 ಸೆಂ.ಮೀ ದಾಖಲಾಗಿದೆ.

ಉಳಿದಂತೆ ಗೇರ್ಸೊಪ್ಪ, ಗೋಕರ್ಣ, ಅಂಕೋಲಾ, ಗದಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಕಿ, ಹಳಿಯಾಳ, ಶಿರಾಲಿ ಪಿಟಿಒ, ಸಂಕೇಶ್ವರ , ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಇನ್ನೂ ಕಾರವಾರ, ಹೊನ್ನಾವರ, ನಿಪ್ಪಾಣಿಯಲ್ಲಿ 3 ಸೆಂ.ಮೀ ಹಾಗೂ ಯಲ್ಲಾಪುರ, ಮುಂಡಗೋಡು , ಚಿಕ್ಕೋಡಿ , ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸಿದ್ದಾಪುರ, ಜಗಲಬೆಟ್, ಕೋಟ, ಕಿರವ, ಕದ್ರಾ, ಲೋಂಡಾ, ಹಾವೇರಿ ಪಿಟಿಒ, ಔರಾದ್ , ಧಾರವಾಡ ಹಾಗೂ ಕುಂದಗೋಳ, ಚಿಂತಾಮಣಿ, ರಾಯಲ್ಪಾಡು, ಸೋಮವಾರಪೇಟೆ, ಕೊಡಗು, ಹಾರಂಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಜೂನ್‌ 18ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿಯು ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
International Yoga Day 2024
ಫ್ಯಾಷನ್10 mins ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು15 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್29 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ35 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ36 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ1 hour ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ1 hour ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ1 hour ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ1 hour ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ1 hour ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌