Shraddha Murder Case | ಪೊಲೀಸರು ಸಹಕಾರ ನೀಡಿದ್ದರೆ ಮಗಳು ಬದುಕುತ್ತಿದ್ದಳು, ಶ್ರದ್ಧಾ ತಂದೆ ಗಂಭೀರ ಆರೋಪ - Vistara News

ಕ್ರೈಂ

Shraddha Murder Case | ಪೊಲೀಸರು ಸಹಕಾರ ನೀಡಿದ್ದರೆ ಮಗಳು ಬದುಕುತ್ತಿದ್ದಳು, ಶ್ರದ್ಧಾ ತಂದೆ ಗಂಭೀರ ಆರೋಪ

ಪೊಲೀಸರಿಂದಲೇ ನಾನು ತೊಂದರೆ ಅನುಭವಿಸಿದೆ. ಪೊಲೀಸರು ಸಹಕಾರ ನೀಡಿದ್ದರೆ ನನ್ನ ಮಗಳು ಬದುಕುತ್ತಿದ್ದಳು ಎಂದು ಶ್ರದ್ಧಾ ವಾಳ್ಕರ್‌ (Shraddha Murder Case) ತಂದೆ ವಿಕಾಸ್‌ ವಾಳ್ಕರ್‌ ಹೇಳಿದ್ದಾರೆ.

VISTARANEWS.COM


on

Shraddha Walker Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶವನ್ನೇ ಅಚ್ಚರಿ ಮೂಡಿಸಿದ ಶ್ರದ್ಧಾ ವಾಳ್ಕರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ (Shraddha Murder Case) ಶ್ರದ್ಧಾ ವಾಳ್ಕರ್‌ ತಂದೆ ವಿಕಾಸ್‌ ವಾಳ್ಕರ್‌ ಗಂಭೀರ ಆರೋಪ ಮಾಡಿದ್ದಾರೆ. “ಮಹಾರಾಷ್ಟ್ರದ ವಸಾಯಿ ಪೊಲೀಸರು ತೊಂದರೆ ಮಾಡಿದರು. ಅವರು ಸಹಕಾರ ನೀಡಿದ್ದಿದ್ದರೆ ನನ್ನ ಮಗಳು ಬದುಕುಳಿಯುತ್ತಿದ್ದಳು” ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಹಾಗೂ ವಸಾಯಿ ಪೊಲೀಸರು ಸದ್ಯ ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಇದಕ್ಕೂ ಮೊದಲು ವಸಾಯಿ ಪೊಲೀಸರು ಸಹಕಾರ ನೀಡಿದ್ದರೆ ನನ್ನ ಮಗಳ ಕೊಲೆಯಾಗುತ್ತಿರಲಿಲ್ಲ. ವಸಾಯಿ ಪೊಲೀಸರು ತನಿಖೆಯಲ್ಲಿ ನಿರಾಸಕ್ತಿ ತೋರಿದ ಕಾರಣ ಮಗಳ ಕೊಲೆಯಾಯಿತು” ಎಂದು ತಿಳಿಸಿದ್ದಾರೆ.

“೨೦೨೧ರಲ್ಲಿ ಶ್ರದ್ಧಾ ವಾಳ್ಕರ್‌ ಜತೆ ಕೊನೆಯದಾಗಿ ಮಾತನಾಡಿದೆ. ಮತ್ತೊಂದು ಬಾರಿ ಕರೆ ಮಾಡಿದಾಗ ಅಫ್ತಾಬ್‌ ಪೂನಾವಾಲಾ ಮಾತನಾಡಿದ. ಆತನಿಗೆ ಶ್ರದ್ಧಾ ಬಗ್ಗೆ ಕೇಳಿದರೆ ಉತ್ತರ ದೊರಕಲಿಲ್ಲ. ಅಫ್ತಾಬ್‌ ಕೃತ್ಯಗಳ ಬಗ್ಗೆ ಆತನ ಕುಟುಂಬಸ್ಥರಿಗೆ ಮೊದಲೇ ಗೊತ್ತಿತ್ತು. ಆದರೆ, ಯಾರೂ ನನ್ನ ಮಗಳನ್ನು ಉಳಿಸಿಕೊಡಲು ನೆರವಾಗಲಿಲ್ಲ” ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನು, ಡೇಟಿಂಗ್‌ ಆ್ಯಪ್‌ಗಳ ಬಗ್ಗೆ ಪೊಲೀಸರು ಮೇಲ್ವಿಚಾರಣೆ ನಡೆಸಬೇಕು. ಉಗ್ರರು, ಅಪರಾಧಿಗಳು ಈ ಆ್ಯಪ್‌ಗಳನ್ನು ಬಳಸುತ್ತಿದ್ದು, ನಿಗಾ ಇಡಬೇಕು ಎಂದಿದ್ದಾರೆ.

ಶ್ರದ್ಧಾ ವಾಳ್ಕರ್‌ ಹಾಗೂ ಅಫ್ತಾಬ್‌ ಪೂನಾವಾಲಾ ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಕಳೆದ ಮೇ ತಿಂಗಳಲ್ಲಿ ಮದುವೆ ವಿಚಾರಕ್ಕಾಗಿ ಜಗಳವಾಡಿ, ಆಕೆಯನ್ನು ಪೂನಾವಾಲಾ ಕೊಲೆಗೈದಿದ್ದ. ಅಲ್ಲದೆ, ಆಕೆಯ ದೇಹವನ್ನು ೩೫ ತುಂಡುಗಳನ್ನಾಗಿ ಮಾಡಿ ದೆಹಲಿಯ ಹಲವೆಡೆ ಎಸೆದಿದ್ದ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

POCSO Case: ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು ಕರೆದೊಯ್ದಿದ್ದಾರೆ. ಮನೆಯಲ್ಲಿ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿದ್ದರು. ಆದರೆ, ಈ ಯುವಕರ ವರ್ತನೆಯನ್ನು ದೂರದಿಂದಲೇ ಗಮನಿಸಿದ್ದ ಸ್ಥಳೀಯರಿಗೆ ಇವರ ಮೇಲೆ ಅನುಮಾನ ಬಂದಿದೆ. ಹೀಗಾಗಿ ನಿಗಾ ಇಟ್ಟಿದ್ದರು. ಅವರು ಮನೆಯೊಳಗೆ ಕರೆದೊಯ್ಯುತ್ತಿದ್ದಂತೆ ಬಂದು ರಕ್ಷಣೆ ಮಾಡಿದ್ದಾರೆ.

VISTARANEWS.COM


on

POCSO Case 7 year old girl attempted to rape on pretext of giving her chocolates
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 7 ವರ್ಷದ ಹೆಣ್ಣು ಮಗಳೊಬ್ಬಳ ಮೇಲೆ ಇಬ್ಬರು ಯುವಕ ಕಾಮಪಿಶಾಚಿಗಳು ಅತ್ಯಾಚಾರಕ್ಕೆ (Assault case) ಯತ್ನಿಸಿದ್ದಾರೆ. ಅದೃಷ್ಟವಶಾತ್‌ ಸ್ಥಳೀಯರಿಗೆ ಮಾಹಿತಿ ಗೊತ್ತಾಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ, ಇಬ್ಬರು ಯುವಕರಿಗೆ ಧರ್ಮದೇಟು ನೀಡಿದ್ದಾರೆ. ಏಪ್ರಿಲ್‌ 24ರಂದು ಈ ಪೋಕ್ಸೋ ಪ್ರಕರಣ (POCSO Case) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಬ್ಬ ಆರೋಪಿ ಮಾತ್ರ ಸಿಕ್ಕಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ಈ ಕಾಮುಕರು ಕರೆದೊಯ್ದಿದ್ದಾರೆ. ಮನೆಯಲ್ಲಿ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿದ್ದರು. ಆದರೆ, ಈ ಯುವಕರ ವರ್ತನೆಯನ್ನು ದೂರದಿಂದಲೇ ಗಮನಿಸಿದ್ದ ಸ್ಥಳೀಯರಿಗೆ ಇವರ ಮೇಲೆ ಅನುಮಾನ ಬಂದಿದೆ. ಹೀಗಾಗಿ ನಿಗಾ ಇಟ್ಟಿದ್ದರು.

ಯಾವಾಗ ಈ ಯುವಕರು ಆ ಬಾಲಕಿಯನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡರೋ ಆ ತಕ್ಷಣ ಸ್ಥಳೀಯರು ಆ ಮನೆಗೆ ದೌಡಾಯಿಸಿದ್ದಾರೆ. ಮನೆ ಬಾಗಿಲು ಬಡಿದು ಹೊರಗೆ ಬರುವಂತೆ ಕೂಗಿದ್ದಾರೆ . ಎಷ್ಟೇ ಬಾಗಿಲು ಬಡಿದರೂ ಯುವಕರು ಕೆಲ ಸಮಯ ಬಾಗಿಲು ತೆಗೆಯಲಿಲ್ಲ. ಕೊನೆಗೆ ಬಾಗಿಲು ಒಡೆಯುವ ಬೆದರಿಕೆಯನ್ನೂ ಒಡ್ಡಲಾಯಿತು. ಸ್ವಲ್ಪ ಸಮಯದ ಬಳಿಕ ಯುವಕರು ಬಾಗಿಲು ತೆಗೆದಿದ್ದಾರೆ. ಆಗ ಯುವಕರನ್ನು ಹಿಡಿದುಕೊಂಡ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಆದರೆ, ಅಷ್ಟರಲ್ಲಿ ಒಬ್ಬ ತಪ್ಪಿಸಿಕೊಂಡಿದ್ದಾನೆ. ಆತನ ಶೋಧ ಕಾಋಯ ಮುಂದುವರಿದಿದೆ.

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್‌ ಈ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.

ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

Continue Reading

ಕರ್ನಾಟಕ

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case: ರಾಜ್ಯ ಮಹಿಳಾ ಆಯೋಗದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿವೆ.

VISTARANEWS.COM


on

Hassan Pen Drive Case
ಸುಮನ್ ಡಿ ಪೆನ್ನೇಕರ್, ಎಡಿಜಿಪಿ ಬಿ.ಕೆ. ಸಿಂಗ್, ಸೀಮಾ ಲಾಟ್ಕರ್
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಹಿಳಾ ಆಯೋಗ ದೂರು ನೀಡಿತ್ತು. ಅದೇ ರೀತಿ ಮಹಿಳೆಯೊಬ್ಬರು ಏ.28ರಂದು ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ಅಡಿ ದಾಖಲಾದ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading

ವೈರಲ್ ನ್ಯೂಸ್

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Crime News: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಕೊರಗಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಈ ಕೃತ್ಯ ಎಸಗಿದ್ದಳು. ನಾಯಿ ಮರಿ 5 ದಿನಗಳ ಹಿಂದೆ ನಾಪತ್ತೆಯಾಗಿತ್ತು. ಬಾಲಕಿ ಮತ್ತು ಶ್ವಾನದ ಮಧ್ಯೆ ಮೂರು ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು ಎಂದು ಮನೆಯವರು ತಿಳಿಸಿದ್ದಾರೆ. ಶ್ವಾನಮರಿ ನಾಪತ್ತೆಯಾದಾಗಿನಿಂದ ಆಕೆ ಖಿನ್ನತೆಗೆ ಜಾರಿದ್ದಳು ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Crime News
Koo

ಚಂಡಿಗಢ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ, ಅಪ್ಪ-ಅಮ್ಮ ಬೈದರು, ಮೊಬೈಲ್​ ನೋಡಬೇಡ ಎಂದು ಹೇಳಿದರು ಎಂಬಿತ್ಯಾದಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು / ಹದಿಹರೆಯದವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿದ್ದೇವೆ. ಇದೂ ಕೂಡ ಅಂತಹದ್ದೇ ಮಾದರಿಯ ಘಟನೆ. ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಶನಿವಾರ (ಏಪ್ರಿಲ್‌ 27) ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು (Crime News).

ʼʼಕೆಲವು ದಿನಗಳ ಹಿಂದೆ ನಾಪತ್ತೆಯಾದ ನೆಚ್ಚಿನ ಶ್ವಾನ ಇನ್ನೂ ಪತ್ತೆಯಾಗದ ಕೊರಗಿನಿಂದ 12 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲವು ದಿನಗಳಿಂದ ಆಕೆ ಈ ವಿಚಾರದಲ್ಲಿ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆʼʼ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ವಿವರ

ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಮನೆಯವರು ತಿಳಿಸಿದ್ದಾರೆ. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ವಿವರಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ʼʼಮೂರು ತಿಂಗಳಿಂದ ಆಕೆ ಮತ್ತು ಶ್ವಾನದ ಮಧ್ಯೆ ಅತ್ಯುತ್ತಮ ಬಾಂಧವ್ಯ ರೂಪುಗೊಂಡಿತ್ತು. ನಾಯಿ ಮರಿ ನಾಪತ್ತೆಯಾದಾಗಿನಿಂದ ಆಕೆ 5 ದಿನಗಳಿಂದ ಆಹಾರ ಸೇವಿಸುವುದನ್ನೇ ನಿಲ್ಲಿಸಿ ಬಿಟ್ಟಿದ್ದಳು. ನಿನ್ನೆ ನಾನು ತರಕಾರಿ ಖರೀದಿಗಾಗಿ ಹೊರ ಹೋಗಿದ್ದೆ. ಈ ವೇಳೆ ನಮ್ಮ ನೆರೆಯವರು ಕರೆ ಮಾಡಿ ಕೂಡಲೇ ಆಗಮಿಸುವಂತೆ ಹೇಳಿದ್ದರು. ಕೂಡಲೇ ಮನೆಗೆ ಧಾವಿಸಿ ಬಂದಿದ್ದೆ. ಈ ವೇಳೆ ಆಕೆ ಮೃತಪಟ್ಟಿದ್ದಳುʼʼ ಎಂದು ಬಾಲಕಿ ತಾಯಿ ನೋವಿನಿಂದ ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ವರ್ಷಗಳ ಹಿಂದೆ ಮಹಾರಾಷ್ಟ್ರದ ಭಯಂದರ್ ಎಂಬಲ್ಲಿ 13 ವರ್ಷದ ಬಾಲಕನೊಬ್ಬ ಅತ್ಯಂತ ಕ್ಷುಲ್ಲಕ ಮತ್ತು ವಿಚಿತ್ರ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ. ‘ತನ್ನ ತಲೆಕೂದಲನ್ನು ಅತ್ಯಂತ ಚಿಕ್ಕದಾಗಿ ಕತ್ತರಿಸಿಬಿಟ್ಟರು’ ಎಂಬ ಕಾರಣಕ್ಕೆ ಅಪಾರ್ಟ್​ಮೆಂಟ್​​ನ 16ನೇ ಮಹಡಿಯಲ್ಲಿರುವ ತಮ್ಮ ಮನೆಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.

Continue Reading

ಬಾಲಿವುಡ್

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Sahil Khan: 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಇದೀಗ ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Sahil Khan Arrested in Mahadev Betting App Case
Koo

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು (pre-arrest bail was rejected ) ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದಾರೆ. ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹಾದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹಾದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವೀಗ ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

Continue Reading
Advertisement
Delivery Boy
ಕರ್ನಾಟಕ4 mins ago

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Job Alert
ಉದ್ಯೋಗ4 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

POCSO Case 7 year old girl attempted to rape on pretext of giving her chocolates
ಕರ್ನಾಟಕ9 mins ago

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

Ishan Kishan
ಕ್ರೀಡೆ32 mins ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 202433 mins ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್47 mins ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Drugs Smuggling
ದೇಶ52 mins ago

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Shiva Rajkumar Graces Muhurtha Of Father Kannada Movie
ಸ್ಯಾಂಡಲ್ ವುಡ್53 mins ago

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 hour ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 hour ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20246 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ9 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌