Avatar: The Way of Water | ಅವತಾರ್‌-2 ಬಿಡುಗಡೆಗೆ ಸಿದ್ಧ: ಚಿತ್ರದ ಒಟ್ಟು ಅವಧಿ ಎಷ್ಟು? - Vistara News

ಸಿನಿಮಾ

Avatar: The Way of Water | ಅವತಾರ್‌-2 ಬಿಡುಗಡೆಗೆ ಸಿದ್ಧ: ಚಿತ್ರದ ಒಟ್ಟು ಅವಧಿ ಎಷ್ಟು?

ಈಗಾಗಲೇ ಅವತಾರ್‌ (Avatar: The Way of Water) ಸಿನಿಮಾದ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ಈ ಸಿನಿಮಾ ಸೆನ್ಸಾರ್‌ ಮುಗಿಸಿ, ಯು/ಎ ಪ್ರಮಾಣ ಪತ್ರ ಪಡೆದಿದೆ.

VISTARANEWS.COM


on

Avatar The Way of Water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಅವತಾರ್‌-2 ಸಿನಿಮಾ (Avatar: The Way of Water ) ವಿಶ್ವಾದ್ಯಂತ ಡಿಸೆಂಬರ್‌ 16ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ವಿಮರ್ಶಕರು ಹಾಡಿ ಹೊಗಳಿದ್ದಾರೆ. ಈಗಾಗಲೇ ಅವತಾರ್‌ ಸಿನಿಮಾದ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ಈ ಸಿನಿಮಾ ಸೆನ್ಸಾರ್‌ ಮುಗಿಸಿ, ಯು/ಎ ಪ್ರಮಾಣ ಪತ್ರ ಪಡೆದಿದೆ.

ಲಂಡನ್‌ನಲ್ಲಿ ಆಯ್ದ ಪತ್ರಿಕಾ ಸದಸ್ಯರಿಗೆ ಸಿನಿಮಾ ಪ್ರದರ್ಶನ ಏರ್ಪಡಿಸಲಾಗಿದ್ದು, ಟ್ವೀಟ್‌ ಮೂಲಕ ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಜೇಮ್ಸ್‌ ಕ್ಯಾಮರಾನ್‌ ಕಲ್ಪನೆಯನ್ನು ಮೆಚ್ಚಿ ಹಾಡಿ ಹೊಗಳಿದ್ದಾರೆ. ಸುಮಾರು 3 ಗಂಟೆ 12 ನಿಮಿಷ 10 ಸೆಕೆಂಡುಗಳಿಗೂ ಹೆಚ್ಚು ಡ್ಯೂರೆಷನ್‌ ಸಿನಿಮಾ ಹೊಂದಿದೆ. ಈ ಚಿತ್ರದ ಎರಡು ಟ್ರೈಲರ್‌ಗಳು ಈಗಾಗಲೇ ಬಿಡುಗಡೆಯಾಗಿವೆ. ಇತ್ತೀಚೆಗೆ ಬಿಡುಗಡೆಯಾದ ಟ್ರೈಲರ್‌ನಲ್ಲಿ, ತಮ್ಮ ಬುಡಕಟ್ಟು ಜನಾಂಗವನ್ನು ಉಳಿಸುವ ಪ್ರಯತ್ನದಲ್ಲಿ ಜೀವ ತೊರೆದು ಹೋರಾಡುವ ಅನ್ಯ ಜೀವಿಗಳ ರೋಚಕ ಯುದ್ಧದ ದೃಶ್ಯಗಳು ನೋಡುಗರನ್ನು ಅಚ್ಚರಿಗೊಳಿಸಿವೆ. 

ಇದನ್ನೂ ಓದಿ | Avatar: The Way of Water | ರಿಲೀಸ್‌ ಆಯ್ತು ಅವತಾರ್‌-2 ಕನ್ನಡ ಟ್ರೈಲರ್‌!

ಇನ್ನೂ ಟಿಕೆಟ್ ದರ 1500 ರೂ. ಅಧಿಕ ಬೆಲೆ ಇದ್ದರೂ ಕೂಡ 2 ಕೋಟಿ ಟಿಕೆಟ್‌ ಅಡ್ವಾನ್ಸ್ ಆಗಿ ಬುಕ್ ಆಗಿರುವುದು ವಿಶೇಷ. ‘ಅವತಾರ್‌’ ಟೈಟಲ್ ಮೂಲಕವೇ ಇಡೀ ಜಗತ್ತಿನ ಗಮನ ಸೆಳೆದಿತ್ತು ಈ ಸಿನಿಮಾ. ಅದರಲ್ಲೂ ಕೋಟಿ ಕೋಟಿ ಭಾರತೀಯರಿಗೆ ‘ಅವತಾರ್‌’ ಎಂಬ ಹೆಸರು ಸಾಕಷ್ಟು ಹತ್ತಿರವಾಗಿತ್ತು. ಅವತಾರ್‌-2 ಟ್ರೈಲರ್‌ ಬಿಡುಗಡೆಗೊಂಡಿದ್ದು ನೋಡುಗರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಜೇಮ್ಸ್‌ ಕ್ಯಾಮರಾನ್‌ ಕಲ್ಪನೆಯನ್ನು ನೋಡುಗರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ | Avatar: The Way of Water | ಕೇರಳದ 400 ಚಿತ್ರಮಂದಿರಗಳಲ್ಲಿ ಅವತಾರ್‌-2 ಬ್ಯಾನ್‌: ಕಾರಣವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Maharaj Movie: ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ, ಪುಣೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರ ಆಂದೋಲನ ನಡೆಸಲಾಯಿತು.

VISTARANEWS.COM


on

Hindu Jana Jagruti Samiti demands immediate ban on Maharaj movie
Koo

ಪುಣೆ: ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು (Maharaj Movie) ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರ ಆಂದೋಲನ ನಡೆಸಲಾಯಿತು.

ಭಾರತವು ಸಾಧು-ಸಂತರ ಭೂಮಿಯಾಗಿದೆ. ಸಂತರು ಜಗತ್ತಿನಾದ್ಯಂತ ಸಂಚರಿಸಿ, ಭಾರತೀಯ ಸಂಸ್ಕೃತಿ, ಧರ್ಮ, ಜ್ಞಾನ, ಕಲೆ, ಸಭ್ಯತೆ, ಸದಾಚಾರ ಹಾಗೂ ಭಗವದ್ ಭಕ್ತಿ ಕಲಿಸಿ ಸಮಾಜಕ್ಕೆ ಆದರ್ಶ ಜೀವನವನ್ನು ನಡೆಸಲು ಪ್ರೋತ್ಸಾಹಿಸುತ್ತಿದ್ದಾರೆ. ಹೀಗಿರುವಾಗ ನಟ ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ನಟಿಸಿರುವ ಯಶ್‌ ರಾಜ್ ಫಿಲ್ಮ್ಸ್ ನಿರ್ಮಾಣದ ‘ಮಹಾರಾಜ್” ಚಲನಚಿತ್ರನಲ್ಲಿ ಸಾಧುಸಂತರನ್ನು ದುರಾಚಾರಿಗಳು, ಗೂಂಡಾಗಳೆಂದು ಬಿಂಬಿಸಿ ಅವರ ತೇಜೋವಧೆ ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಆರೋಪಿಸಿದ್ದು,. ಈ ಹಿನ್ನಲೆಯಲ್ಲಿ ಈ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗ್ರಹಿಸಲಾಯಿತು.

ಇದನ್ನೂ ಓದಿ: Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಪುಣೆಯ ಕೊಥರೂಡ ಎಂಬಲ್ಲಿನ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿಯ ಸಮೀಪ ಬುಧವಾರ ಆಂದೋಲನ ನಡೆಸಿ ಒತ್ತಾಯಿಸಲಾಯಿತು. ಆಂದೋಲನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಪರಾಗ ಗೋಖಲೆ ಅವರ ನೇತೃತ್ವದಲ್ಲಿ ಸಮವಿಚಾರಿ ಸಂಘಟನೆಗಳೂ ಪಾಲ್ಗೊಂಡಿದ್ದವು.

ಇದನ್ನೂ ಓದಿ: Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಈ ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಲಾಗಿದೆ. ಕೇಂದ್ರ ಸರ್ಕಾರವು ಕೂಡಲೇ ಈ ಚಲಚಿತ್ರವನ್ನು ನಿಷೇಧಿಸಬೇಕು. ಅಲ್ಲದೆ, ದೇವತೆ, ಧರ್ಮ, ಸಂತರ ಅವಹೇಳನ ತಡೆಯಲು ದೇಶಾದ್ಯಂತ ‘ಧರ್ಮನಿಂದನೆ ತಡೆ ಕಾನೂನು’ಜಾರಿಗೊಳಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗ್ರಹಿಸಲಾಯಿತು.

Continue Reading

ಪ್ರಮುಖ ಸುದ್ದಿ

Actor Darshan: ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು; ದರ್ಶನ್ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಮಂಗಳವಾರ ರಿ ಟ್ವೀಟ್ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ಹಂಚಿಕೊಂಡು, ನಟ ದರ್ಶನ್‌ ಸೇರಿ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯಗಳು ಎಲ್ಲೆಡೆ ಕೇಳಿಬರುತ್ತಿವೆ. ಈ ನಡುವೆ ನಟ ದರ್ಶನ್‌ಗೆ (Actor Darshan) ಜೀವಾವಧಿ ಶಿಕ್ಷೆಯಾಗಲಿ ಎಂಬ ಪೋಸ್ಟ್‌ನ ರಿ ಟ್ವೀಟ್‌ ಮಾಡಿದ್ದ ನಟಿ ರಮ್ಯಾ ಇದೀಗ, ಮತ್ತೊಂದು ಟ್ವೀಟ್‌ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕುಟುಂಬದ ಪರ ನಿಂತ ನಟಿ, ಪ್ರಕರಣದಲ್ಲೇ ಯಾರೇ ತಪ್ಪಿತಸ್ಥರಾದರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಮಂಗಳವಾರ ರಿ ಟ್ವೀಟ್ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ರಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ರೇಣುಕಾ ಸ್ವಾಮಿ ತಂದೆ ದು:ಖದಲ್ಲಿರುವ ವಿಡಿಯೊವನ್ನು ಅಕ್ಷಯ್‌ ಅಕ್ಕಿ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡು, ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನು ನಟಿ ರಮ್ಯಾ ರಿ ಟ್ವೀಟ್‌ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಸಂದೇಶವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ನೆನ್ನೆ ಹಂಚಿಕೊಂಡಿದ್ದರು. ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು. ಎಂಬ ಪೋಸ್ಟ್‌ ಅನ್ನು ಕರ್ನಾಟಕ ಬಾಕ್ಸ್‌ ಆಫೀಸ್‌ ಖಾತೆಯಲ್ಲಿ ಟ್ವೀಟ್‌ ಮಾಡಲಾಗಿತ್ತು. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇದ್ದ ಪೋಸ್ಟ್‌ ಅನ್ನು ರಮ್ಯಾ ರಿ ಟ್ವೀಟ್‌ ಮಾಡಿದ್ದರು.

ಇದನ್ನು ಓದಿ | Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದರು. ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ರಿ ಟ್ವೀಟ್‌ ಮಾಡಿ ಪರೋಕ್ಷವಾಗಿ ದರ್ಶನ್‌ ವಿರುದ್ಧ ಕಠಿಣ ಕ್ರಮವಾಗಲಿ ಎಂದು ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Actor Darshan: ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸೋಷಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ.

VISTARANEWS.COM


on

Actor Darshan wife Vijayalakshmi will get divorce
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ದರ್ಶನ್‌ ಜತೆಗಿದ್ದ ಇನ್​ಸ್ಟಾಗ್ರಾಮ್​ ಪ್ರೊಫೈಲ್‌​ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಇದೀಗ ವಿಜಯಲಕ್ಷ್ಮಿ ವಿಚ್ಛೇದನ ಪಡೆಯುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕೌಟುಂಬಿಕ ಕಲಹದಲ್ಲಿ ʼದಾಸʼ

ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.

ಇದನ್ನೂ ಓದಿ: Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

ಇದಾದ ಬಳಿಕ ದರ್ಶನ್‌ ಕುಡಿದು ಬಂದು ವಿಜಯಲಕ್ಷ್ಮಿ ವಿರುದ್ಧ ಕೂಗಾಡಿರುವ ಆಡಿಯೊ ವೈರಲ್‌ ಆಗಿತ್ತು. ಸ್ವತಃ ವಿಜಯಲಕ್ಷ್ಮಿ ಅವರೇ ಆಡಿಯೊ ಸುಳ್ಳು ಎಂದು ಹೇಳಿಕೆ ನೀಡಿದ್ದರು. ಹೀಗೆ ಸಿಹಿ-ಕಹಿ ಜೀವನ ನಡೆಸುತ್ತಿದ್ದ ದಂಪತಿ ಮಧ್ಯೆ ಮತ್ತೆ ಬಿರುಗಾಳಿಯಂತೆ ಬಂದಿದ್ದು ಪವಿತ್ರಾ ಗೌಡ.

ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ್ದ ದರ್ಶನ್‌

ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ನಟ ದರ್ಶನ್‌ ಸ್ನೇಹಿತರು ಹುಟ್ಟುಹಬ್ಬವನ್ನು ಜೋರಾಗಿಯೇ ಸೆಲೆಬ್ರೇಟ್ ಮಾಡಿದ್ದರು. ಪಾರ್ಟಿಯೊಂದರಲ್ಲಿ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಸ್ತ್‌ ಡಾನ್ಸ್ ‌ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಿರ್ಮಾಪಕ ಉಮಾಪತಿ ಗೌಡ ಹಾಗೂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಪದಗಳ ಬಳಕೆ ಹಿನ್ನೆಲೆಯಲ್ಲಿ ಮಹಿಳಾ ಸಂಘಟನೆಗಳು ಸೇರಿ ವಿವಿಧ ಸಂಘಗಳು, ನಟನ ವಿರುದ್ಧ ಅಸಮಾಧಾನ ಹೊರಹಾಕಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದವು. ಆದರೆ, ವಿವಾದಗಳಿಗೆ ಸೊಪ್ಪು ಹಾಕದ ದರ್ಶನ್‌, ಪಾರ್ಟಿಯೊಂದರಲ್ಲಿ ಭಾಗಿಯಾಗಿ ಪತ್ನಿ ಜತೆ ಕುಣಿದು ಕುಪ್ಪಳಿಸಿದ್ದರು.

ಪವಿತ್ರಾ ಗೌಡ ಜತೆ ವಾರ್‌

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸೋಷಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇದೀಗ ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಇದೀಗ ಪವಿತ್ರಾ ಗೌಡ ವಿಚಾರವಾಗಿಯೇ ದರ್ಶನ್‌ ಜೈಲು ಸೇರಿದ್ದಾರೆ. ಇನ್ನು ದರ್ಶನ್‌ ಜೈಲು ಸೇರುವುದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಹೀಗಿರುವಾಗ ವಿಜಯಲಕ್ಷ್ಮಿ ಅವರು ದರ್ಶನ್‌ ಅವರನ್ನು ಅನ್‌ಫಾಲೋ ಮಾಡಿ, ಡಿಪಿ ಕೂಡ ಡಿಲಿಟ್‌ ಮಾಡಿದ್ದಾರೆ.ವೈವಾಹಿಕ ಜೀವನದಲ್ಲಿ ಪದೇ ಪದೇ ಬೇಸತ್ತು ವಿಜಯಲಕ್ಷ್ಮಿ ವಿಚ್ಛೇದನ ಪಡೆಯುವ ಗಂಭೀರ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಗಾಸಿಪ್‌ಗಳು ಹರಿದಾಡುತ್ತಿವೆ.

Continue Reading

ಬಾಲಿವುಡ್

Kiran Bedi: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್‌: ಕುಶಾಲ್ ಚಾವ್ಲಾ ಆ್ಯಕ್ಷನ್‌ ಕಟ್‌!

Kiran Bedi: ಈ ಬಯೋಪಿಕ್‌ (Kiran Bedi) ಸಿನಿಮಾ ನಮ್ಮ ಭಾರತದ ಮೊಟ್ಟಮೊದಲ ಮಹಿಳಾ ಐಪಿಎಸ್ (Indias first IPS officer) ಆಗಿರುವ ( BEDI: The Name You Know. The Story You Don’t) ಕಿರಣ್‌ ಬೇಡಿ ಕುರಿತಾಗಿ ಇದೆ. ಕುಶಾಲ್ ಚಾವ್ಲಾ ಅವರು ಬರೆದು ನಿರ್ದೇಶಿಸಿದ ಈ ಸಿನಿಮಾ ಬೇಡಿ ಅವರ ವೃತ್ತಿಜೀವನ ಕುರಿತು ಇದೆ.

VISTARANEWS.COM


on

Kiran Bedi announces her biopic by director Kushaal Chawla
Koo

ಬೆಂಗಳೂರು: ಡ್ರೀಮ್ ಸ್ಲೇಟ್ ಪಿಕ್ಚರ್ಸ್ ಅಧಿಕೃತವಾಗಿ ಬಹು ನಿರೀಕ್ಷಿತ ಬಯೋಪಿಕ್ ‘ಬೇಡಿ: ದಿ ನೇಮ್ ಯು ನೋ. ದ ಸ್ಟೋರಿ ಯು ಡೋಂಟ್’ ಸಿನಿಮಾ ಘೋಷಿಸಿದೆ. ಈ ಬಯೋಪಿಕ್‌ (Kiran Bedi) ಸಿನಿಮಾ ನಮ್ಮ ಭಾರತದ ಮೊಟ್ಟಮೊದಲ ಮಹಿಳಾ ಐಪಿಎಸ್ (Indias first IPS officer) ಆಗಿರುವ ( BEDI: The Name You Know. The Story You Don’t) ಕಿರಣ್‌ ಬೇಡಿ ಕುರಿತಾಗಿ ಇದೆ. ಕುಶಾಲ್ ಚಾವ್ಲಾ ಅವರು ಬರೆದು ನಿರ್ದೇಶಿಸಿದ ಈ ಸಿನಿಮಾ ಬೇಡಿ ಅವರ ವೃತ್ತಿಜೀವನ ಕುರಿತು ಇದೆ.

ಈ ಬಗ್ಗೆ ಕಿರಣ್ ಬೇಡಿ ಮಾತನಾಡಿ ʻʻಈ ಕಥೆ ಕೇವಲ ನನ್ನ ಕಥೆಯಲ್ಲ. ಇದು ಭಾರತೀಯ ಮಹಿಳೆಯ ಕಥೆ-ಭಾರತದಲ್ಲಿ ಬೆಳೆದ, ಭಾರತದಲ್ಲಿ ಅಧ್ಯಯನ ಮಾಡಿದ, ಭಾರತೀಯ ಪೋಷಕರಿಂದ ಬೆಳೆದ ಮತ್ತು ತನ್ನ ವೃತ್ತಿಜೀವನದುದ್ದಕ್ಕೂ ಭಾರತದ ಜನರಿಗಾಗಿ ಕೆಲಸ ಮಾಡಿದ ಭಾರತೀಯ ಮಹಿಳೆಯ ಕಥೆ. ನಾವು ಈ ಚಿತ್ರವನ್ನು 50ನೇ ಅಂತಾರಾಷ್ಟ್ರೀಯ ಮಹಿಳಾ ವರ್ಷದಲ್ಲಿ ಬಿಡುಗಡೆ ಮಾಡುವ ಗುರಿ ಹೊಂದಿದ್ದೇವೆ, ಇದು ನಮ್ಮ ಶ್ರೇಷ್ಠ ರಾಷ್ಟ್ರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಭಾರತೀಯ ಮಹಿಳೆಯ ಕಥೆಯಾಗಿದೆʼʼಎಂದರು.

ಕುಶಾಲ್ ಚಾವ್ಲಾ ಮಾತನಾಡಿ ʻʻಈ ಚಿತ್ರವು ಪ್ರೀತಿಯ ಶ್ರಮ. ನಾಲ್ಕು ವರ್ಷಗಳ ಕಾಲ ಸಂಶೋಧನೆಯಲ್ಲಿ ತೊಡಗಿ ಮಾಡಿರುವ ಸಿನಿಮಾ. ಡಾ.ಕಿರಣ್ ಬೇಡಿಯವರ ಜೀವನದ ಕುರಿತು ಸಿನಿಮಾ ಮಾಡಿ ನಿರ್ದೇಶಿಸಿರುವುದು ನನ್ನ ಸೌಭಾಗ್ಯ. ಅವರು ನನಗೆ ಸ್ಫೂರ್ತಿಯಾಗಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುತ್ತಿರುವುದು, ಹಾಗೇ ಅವರ ವಿಶ್ವಾಸವನ್ನು ಗಳಿಸಿರುವುದು ನನಗೆ ಆಶೀರ್ವಾದವಾಗಿದೆʼʼ ಎಂದರು.

ಇದನ್ನೂ ಓದಿ: ರಾಜ ಮಾರ್ಗ ಅಂಕಣ | ಕಿರಣ್ ಬೇಡಿ ಎಂಬ ಕ್ರಾಂತಿಯ ಕಿಡಿ, 73 ವರ್ಷದ ಆಕೆ ಇಂದಿಗೂ ದೇಶದ ಯೂತ್‌ ಐಕಾನ್‌!

ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಜೀವನಾಧಾರಿತ ಬೇಡಿಯ ಮೋಷನ್ ಪೋಸ್ಟರ್ ಈಗಾಗಲೇ ಚಿತ್ರತಂಡ ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಡ್ರೀಮ್ ಸ್ಲೇಟ್ ಪಿಕ್ಚರ್ಸ್ ಅಡಿಯಲ್ಲಿ ಗೌರವ್ ಚಾವ್ಲಾ ನಿರ್ಮಿಸಿದ್ದಾರೆ. ಇನ್ನು ಸಿನಿಮಾ ರಿಲೀಸ್‌ ಡೇಟ್‌ ಘೋಷಣೆ ಆಗಿಲ್ಲ.

ಭಾರತದ ವಿವಿಧ ಭಾಷೆಗಳಲ್ಲಿ ಕಿರಣ್‌ ಬೇಡಿ ಹೆಸರಲ್ಲಿ ಬಂದಿರುವ ಪೊಲೀಸ್ ಸಿನೆಮಾಗಳು ಬೇರೆ ಯಾರ ಹೆಸರಲ್ಲಿ ಕೂಡ ಬಂದಿರುವ ಉದಾಹರಣೆ ಇಲ್ಲ. ಇಡೀ ದೇಶದ ಯೂತ್‌ ಐಕಾನ್‌ ಆಗಿದ್ದಾರೆ ಕಿರಣ್‌. ಹೆಣ್ಮಕ್ಕಳ ಪಾಲಿಗಂತೂ ಆತ್ಮವಿಶ್ವಾಸದ ಪ್ರತೀಕ. ಯಾವುದೇ ಮಹಿಳಾ ಚರ್ಚೆ ಆಕೆಯ ಹೆಸರೆತ್ತದೆ ಮುಕ್ತಾಯವಾಗುವುದು ಸಾಧ್ಯವೇ ಇಲ್ಲ.

ಕಿರಣ್ ಬೇಡಿ ಮಾಡಿದ ಈ ಜೈಲು ಸುಧಾರಣೆಯ ಕ್ರಮಗಳು ಜಗತ್ತಿನಲ್ಲಿಯೇ ವಿನೂತನ ಆಗಿದ್ದವು. ಅದರಿಂದ ದೇಶದ, ವಿದೇಶದ ಮಾಧ್ಯಮಗಳು ಆಕೆಯ ಬಗ್ಗೆ, ತಿಹಾರ್ ಜೈಲಿನ ಸುಧಾರಣ ಕ್ರಮಗಳ ಬಗ್ಗೆ ಲೀಡ್ ಲೇಖನ ಬರೆದವು. ಆಗ ಭಾರೀ ಇಂಪ್ರೆಸ್ ಆದ ಅಮೆರಿಕಾದ ಆಗಿನ ಅಧ್ಯಕ್ಷ ಬಿಲ್ ಕ್ಲಿಂಟನ್ ಆಕೆಗೆ ಪತ್ರ ಬರೆದು ಶುಭಾಶಯ ಹೇಳಿದರು. ಮತ್ತು ಅವರ ಜೊತೆ ಒಮ್ಮೆ ಊಟ ಮಾಡಬೇಕು ಅಂತ ಆಸೆ ವ್ಯಕ್ತ ಪಡಿಸಿದರು! ಆಕೆಗೆ ಜಾಗತಿಕ ಮಟ್ಟದ ‘ಮ್ಯಾಗ್ಸೆಸೆ ಪ್ರಶಸ್ತಿ’ಯು ದೊರೆಯಿತು. ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿತು. ಮುಂದೆ ನಿವೃತ್ತರಾದ ನಂತರ ಅವರು ಪಾಂಡಿಚೇರಿಯ ಮೊದಲ ಮಹಿಳಾ ಗವರ್ನರ್ ಆಗಿ ಸೇವೆ ಸಲ್ಲಿಸಿದರು

Continue Reading
Advertisement
Health Tips Kannada
ಆರೋಗ್ಯ34 mins ago

Health Tips Kannada: ನಮ್ಮ ದೇಹದಲ್ಲಿ ಉಪ್ಪಿನ ಅಂಶ ಕಡಿಮೆಯಾಗಿದೆ ಎಂದು ತಿಳಿಯುವುದು ಹೇಗೆ?

HSRP Number plate
ಪ್ರಮುಖ ಸುದ್ದಿ44 mins ago

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

Rain News
ಕರ್ನಾಟಕ1 hour ago

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Tips For Rainy Season
ಆರೋಗ್ಯ2 hours ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Alcohal
ಪ್ರಮುಖ ಸುದ್ದಿ3 hours ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ8 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ8 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ8 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ9 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌