JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ - Vistara News

ಬೆಂಗಳೂರು

JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ

JDS Pancharatna | ಭಾರಿ ಮಳೆ ಕಾರಣಕ್ಕೆ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಿ, ನಾಲ್ಕು ದಿನ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

JDS Pancharatna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತುಮಕೂರು ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನರಾರಂಭ ಆಗಬೇಕಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು (JDS Pancharatna) ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿ ರಾಜ್ಯದ ಒಳನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡುವ ಮೂಲಕ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Elections | ಬಿಜೆಪಿಯಿಂದ ಮತ್ತೊಂದು ಮೆಗಾ ಸಮಾವೇಶ: ಡಿ. 18ರಂದು ನಾನಾ ಪ್ರಕೋಷ್ಠಗಳ ಶಕ್ತಿ ಸಂಗಮ

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ಮರು ಆರಂಭವಾಗಲಿದ್ದು, ಡಿ. 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ. ಡಿ. 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ. 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ | Kalyana Kranti Samavesha | ನಾವು ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಖಾಲಿ ಹುದ್ದೆ ಭರ್ತಿ: ಖರ್ಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Inspirational Story: ಮಗಳ ದುರಂತ ಸಾವಿನಿಂದ ನೊಂದಿದ್ದ ಎಎಸ್‌ಐ ಲೋಕೇಶಪ್ಪ ಬಡಮಕ್ಕಳಲ್ಲಿ ಮಗಳನ್ನು ಕಾಣುತ್ತಿದ್ದಾರೆ. ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣವನ್ನು ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ಧನ ಸಹಾಯ ಮಾಡುತ್ತಿದ್ದಾರೆ

VISTARANEWS.COM


on

By

Inspirational Story
ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಲೋಕೇಶಪ್ಪ
Koo

ಬೆಂಗಳೂರು: ಜನ-ಸಾಮಾನ್ಯರ ರಕ್ಷಣೆ ಮಾಡುವ ಆ ಎಎಸ್‌ಐಗೆ ಮಗಳೇ ಜೀವವಾಗಿದ್ದಳು. ಆಕೆಯ ಭವಿಷ್ಯಕ್ಕಾಗಿ ನೂರಾರು ಕನಸು ಕಂಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಸಾಕಿ ಸಾಲುಹಿದ್ದ ಮಗಳು ಅಗ್ನಿ ದುರಂತದಲ್ಲಿ ತಂದೆ ಕಣ್ಣೆದುರೇ ಸುಟ್ಟು ಕರಕಲಾಗಿದ್ದಳು. ಮಗಳ ಅಗಲಿಕೆಯಿಂದ ಮನನೊಂದಿದ್ದ ಅವರು ಕೊರಗಿ ಕಂಗಲಾಗಿದ್ದರು. ಆದರೆ ಮಗಳ ಸಾವಿಗೆ ಗೌರವ ಸರ್ಮಪಿಸಬೇಕೆಂದು ಆ ಖಾಕಿ ಇಟ್ಟ ಹೆಜ್ಜೆ ಹಲವು ಮಕ್ಕಳ ಭವಿಷ್ಯಕ್ಕೆ ದಾರಿ (Inspirational Story) ದೀಪವಾಗಿದೆ.

ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕೆಲಸ ಮಾಡುತ್ತಿರುವ ಲೋಕೇಶಪ್ಪ ಬಡ ಮಕ್ಕಳಿಗೆ ಮಾಡಿದ ದಾನದಿಂದಲೇ ಹೆಸರು ಮಾಡಿದ್ದಾರೆ. 2019ರಲ್ಲಿ ಬೆಂಕಿ ಅವಘಡದಲ್ಲಿ ತಮ್ಮ ಮಗಳು ಹರ್ಷಾಲಿಯನ್ನು ಕಳೆದುಕೊಂಡಿದ್ದರು. ಇದರಿಂದ ಮನನೊಂದಿದ್ದ ಅವರು ಮಗಳ ಸಾವಿನ ಗೌರವಾರ್ಥವಾಗಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ತಮ್ಮ ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣವನ್ನು ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ಧನಸಹಾಯ ಮಾಡುತ್ತಿದ್ದಾರೆ. ಲೊಕೇಶಪ್ಪ ಪತ್ನಿ ಕೂಡ ಮಗಳನ್ನು ಕಳೆದುಕೊಂಡು ತೀವ್ರವಾಗಿ ನೊಂದಿದ್ದರು. ಹೀಗಾಗಿ ಶಿಕ್ಷಣ ಇಲಾಖೆಯ ಕೆಲಸ ಬಿಟ್ಟು , ಹರ್ಷಾಲಿ ಹೆಸರಿನಲ್ಲಿ ಎನ್‌ಜಿಒ ಶುರು ಮಾಡಿ ಅದರ ಮೂಲಕ ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಇನ್ನು ಲೋಕೇಶಪ್ಪ ದಂಪತಿ ಕಳೆದ ಒಂದು ವರ್ಷದಿಂದ ಈ ಕಾರ್ಯವನ್ನು ನೆರವೇರಿಸಿಕೊಂಡು ಬರುತ್ತಿದ್ದಾರೆ. ಮೈಸೂರು 1, ಹಾಸನ 4 , ಬೆಂಗಳೂರು 1 ಶಾಲೆ ಸೇರಿ ಒಟ್ಟು ಆರು ಸರ್ಕಾರಿ ಶಾಲೆಗಳಲ್ಲಿರುವ ಬಡ ಮಕ್ಕಳನ್ನು ಗುರುತಿಸಿದ್ದಾರೆ. ಅವರ ವಿದ್ಯಾಭ್ಯಾಸಕ್ಕೆ ಬೇಕಾದ ಪರಿಕರಗಳಾದ ಪುಸ್ತಕ, ಪೆನ್ನು, ಪೆನ್ಸಿಲ್, ವಾಟರ್ ಬಾಟಲ್ ಸೇರಿದಂತೆ ಹಲವು ವಸ್ತುಗಳನ್ನ ವಿತರಣೆ ಮಾಡುತ್ತಿದ್ದಾರೆ.

ಆರು ಶಾಲೆಗಳ ಸುಮಾರು 600‌ ಮಕ್ಕಳ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ್ದಾರೆ. ಬೆಂಗಳೂರಿನ 200 ಮಕ್ಕಳು ಸೇರಿದಂತೆ 600 ಮಕ್ಕಳಿಗೆ ಆಸರೆಯಾಗಿದ್ದಾರೆ. ಸದ್ಯ ಎಎಸ್‌ಐ ಅವರ ಕೆಲಸಕ್ಕೆ ಹಲವೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಡ ಮಕ್ಕಳಲ್ಲಿ ತನ್ನ ಮಗಳನ್ನ ಕಾಣುತ್ತಿರುವ ಎಎಸೈ ಲೊಕೇಶಪ್ಪ ಪ್ರತಿ ವರ್ಷವೂ ಕೂಡ ಮಗಳ ಸಾವಿನ ದಿನವನ್ನು ದಾನ ಮಾಡುವ ಮೂಲಕ ಸ್ಮರಣಾರ್ಥ ದಿನವಾಗಿ ಮಾಡಲು ನಿರ್ಧರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Karave Protest: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Karave Protest
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು (Jobs For Kannadigas) ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವೇದಿಕೆಯಿಂದ (Karave Protest) ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಆರಂಭವಾಗಿವೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ ಬಳಿ ಕುವೆಂಪು ಪುತ್ಥಳಿಗೆ ಟಿ.ಎ. ನಾರಾಯಣ ಗೌಡರು ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು. ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್‌ ಸೇರಿದರು. ನಂತರ ಅಲ್ಲಿ ಹೋರಾಟ ಆರಂಭಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಮೆಟ್ರೋ ಸ್ಟೇಷನ್‌, ಬಸ್‌ ನಿಲ್ದಾಣ, ಮಾಲ್‌ಗಳ ಬಳಿ ಕೂಡ ಬಂದೋಬಸ್ತ್‌ ಮಾಡಲಾಗಿದೆ.

ಪೋಲಿಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ನಾವು ಫ್ರೀಡಂ ಪಾರ್ಕಿನಲ್ಲಿ ಧರಣಿ ಬಿಟ್ಟು ಬೇರೆ ಯೋಜನೆ ಮಾಡಿಲ್ಲ. ಹೋರಾಟಗಳಲ್ಲಿ ಎರಡು ವಿಧ, ಒಂದು ಶಾಂತಿ, ಮತ್ತೊಂದು ಕ್ರಾಂತಿ. ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡಲು ಕರೆ ಕೊಟ್ಟಿದ್ದೇವೆ. ಒಂದು ತಿಂಗಳೊಳಗೆ ಸರೋಜಿನಿ ಮಹಿಷಿ ವರದಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಯಲಿದೆ. ಈ ಸಂಬಂಧ ಸಿಎಂ ಭೇಟಿಗೆ ಮನವಿ ಮಾಡಿದ್ದೇವೆ. ರ‍್ಯಾಲಿ, ಮೆರವಣಿಗೆ ಮಾಡಬಾರದು ಎಂತಲೂ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಕರವೇ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ಸಾಥ್ ನೀಡಿದೆ. ಸ್ಯಾಂಡಲ್‌ವುಡ್ ನಟ ಪ್ರೇಮ್, ನಟಿ ಪೂಜಾಗಾಂಧಿ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.

ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹಾಗೆಯೇ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕರವೇ ರಣಕಹಳೆ

ಬೆಳಗಾವಿ: ಬೆಳಗಾವಿಯಲ್ಲೂ ಸರ್ಕಾರದ ವಿರುದ್ಧ ಕರವೇ ರಣಕಹಳೆ ಮೊಳಗಿದೆ. ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲ ತೆರಳಿ ಹೋರಾಟ ನಡೆಸಿದರು.

ಡಾ, ಸರೋಜನಿ ಮಹಿಷಿ ವರದಿ ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ ಕಾರ್ಯಕರ್ತರು, ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪರರಾಜ್ಯದವರ ಹಾವಳಿ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕನ್ನಡಿಗರಿಗೆ ಮಾತ್ರ ಶೇ.100 ಉದ್ಯೋಗ ನೀಡುವಂತೆ ಒತ್ತಾಯಿಸಲಾಗಿದೆ.

ಕೋಟೆ ನಾಡಿನಲ್ಲಿ ಸಿಡಿದೆದ್ದ ಕರವೇ

ಚಿತ್ರದುರ್ಗ: ಸರ್ಕಾರದ ವಿರುದ್ಧ ಕೋಟೆ ನಾಡಿನಲ್ಲಿ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಗರದ ಡಿಸಿ ವೃತ್ತದಲ್ಲಿ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾರ್ಪೊರೇಟ್ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿದರು. ರಾಜ್ಯದ ನಿರುದ್ಯೋಗಿ ಯುವಕರಿಗೆ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ನಮಗೆ ಉದ್ಯೋಗಿ ಕೊಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು.

ಹಾವೇರಿಯಲ್ಲಿ ಕರವೇ ಪ್ರತಿಭಟನೆ

ಹಾವೇರಿ: ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರವೇಯಿಂದ ಪ್ರತಿಭಟನೆ ನಡೆಯಿತು. ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆ ರೂಪಿಸಲು ಒತ್ತಾಯಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ

ಯಾದಗಿರಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕರವೇಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಇದನ್ನೂ ಓದಿ : Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ

ಧಾರವಾಡ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡದ ಡಿಸಿ ಕಚೇರಿ ಎದುರು ಕರವೇ ಬಣದಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಈ ಕೂಡಲೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Continue Reading

ಕ್ರೈಂ

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Murder Case: ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

VISTARANEWS.COM


on

hassan murder case
Koo

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ರೌಡಿಯಾಗಲು ಹವಾ ಸೃಷ್ಟಿಸಿದ್ದವನನ್ನು ಇರಿದು ಕೊಂದರು!

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder caseನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Continue Reading

ಬೆಂಗಳೂರು

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Murder case : ರೌಡಿ ಆಗಬೇಕೆಂದು ಸಿಕ್ಕ ಸಿಕ್ಕವರಿಗೆ ಹೊಡೆದು ಬಡೆದು ಮಾಡುತ್ತಿದ್ದವನನ್ನು ಅದೇ ಏರಿಯಾದ ಹುಡುಗರು ಅಟ್ಟಾಡಿಸಿಕೊಂದು ಹೋಗಿ ಕೊಂದು ಹಾಕಿದ್ದರು. ಇದೀಗ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

murder case
ಬರ್ಬರವಾಗಿ ಕೊಲೆಯಾದ ಅಪ್ಪು
Koo

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder case) ನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅರುಣ್ ಕುಮಾರ್, ಜಾನ್ ಜಾಕೋಬ್, ಆ್ಯಂಡ್ರೀಸ್ ,‌ ಪ್ರಶಾಂತ್ ಹಾಗು ಸಂಜೀವ್ ಎಂಬ ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

ಕೋಲ್ಕತ್ತಾ: ಅನೈತಿಕ ಸಂಬಂಧದಲ್ಲಿ (Illicit relationship) ತೊಡಗಿದ್ದರು ಎನ್ನಲಾದ ಜೋಡಿಯೊಂದರ ಮೇಲೆ ತೃಣಮೂಲ ಕಾಂಗ್ರೆಸ್ (‌Trinamoola Congress) ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ (Assault Case) ನಡೆಸಿದ್ದರು. ಇದರ ವಿಡಿಯೋ ವೈರಲ್ (viral viedo) ಆದ ನಂತರ ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿವೆ. “ಮುಸ್ಲಿಂ ರಾಷ್ಟ್ರ ನೀತಿ ಸಂಹಿತೆ ಪ್ರಕಾರ ನಡೆದುಕೊಳ್ಳಲಾಗಿದೆ…” ಎಂದು ತೃಣಮೂಲ ಕಾಂಗ್ರೆಸ್‌ ಶಾಸಕನೊಬ್ಬ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾನೆ.

ಬಿದಿರಿನ ದೊಣ್ಣೆಗಳಿಂದ ಇಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಈ ವ್ಯಕ್ತಿಯನ್ನು ತಜ್ಮುಲ್ ಅಲಿಯಾಸ್ “ಜೆಸಿಬಿ” ಎಂದು ಗುರುತಿಸಲಾಗಿದೆ. ಈತ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಹೇಳಲಾಗಿದೆ. ಸ್ಥಳೀಯ ಪಂಚಾಯ್ತಿಯ ತೀರ್ಪಿನ ನಂತರ ಈ ಘಟನೆ ನಡೆದಿದೆ. ಘಟನೆಯ ಕುರಿತು ಪಶ್ಚಿಮ ಬಂಗಾಳ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡು ತಜ್ಮುಲ್‌ನನ್ನು ಬಂಧಿಸಿದ್ದಾರೆ.

ಚೋಪ್ರಾ ಶಾಸಕ ಹಮೀದುಲ್ ರಹಮಾನ್, ಟಿಎಂಸಿಗೆ ತಜ್ಮುಲ್ ಜೊತೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ʼಮಹಿಳೆಯ ಚಟುವಟಿಕೆಗಳು ಅನೈತಿಕವಾಗಿದ್ದವು. ಇದು ಹಳ್ಳಿಯ ವಿಷಯವಾಗಿದ್ದು, ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಘಟನೆಯನ್ನು ಖಂಡಿಸುತ್ತೇವೆ. ಆದರೆ ಮಹಿಳೆಯೂ ತಪ್ಪು ಮಾಡಿದ್ದಾಳೆ. ಅವಳು ತನ್ನ ಗಂಡ, ಮಗ ಮತ್ತು ಮಗಳನ್ನು ತೊರೆದಿದ್ದಾಳೆ. ಮುಸ್ಲಿಂ ರಾಷ್ಟ್ರದ ಪ್ರಕಾರ ಕೆಲವು ನೀತಿ ಸಂಹಿತೆ ಮತ್ತು ನ್ಯಾಯವಿದೆ. ಈಗ ಈ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತೃಣಮೂಲ ಶಾಸಕ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ಈ ಘಟನೆಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಟಿಎಂಸಿ ಹೇಳಿದೆ.

ಕೇಂದ್ರ ಸಚಿವ ಮತ್ತು ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಟಿಎಂಸಿಯ ಶಾಸಕನ “ಮುಸ್ಲಿಂ ರಾಷ್ಟ್ರ” ಉಲ್ಲೇಖದ ಬಗ್ಗೆ ಆತಂಕಪಟ್ಟಿದ್ದಾರೆ. “ಮುಸ್ಲಿಂ ರಾಷ್ಟ್ರ ಕೆಲವು ನಿಯಮಗಳ ಅಡಿಯಲ್ಲಿ ಶಿಕ್ಷೆಗಳನ್ನು ಚರ್ಚಿಸುವ ಹೇಳಿಕೆಗಳು ಕಳವಳ ಮೂಡಿಸುತ್ತವೆ. ಟಿಎಂಸಿ ಪಶ್ಚಿಮ ಬಂಗಾಳವನ್ನು ಷರಿಯಾ ಕಾನೂನನ್ನು ಅನ್ವಯಿಸುವ ರಾಜ್ಯವೆಂದು ಘೋಷಿಸುತ್ತಿದೆಯೇ?” ಎಂದು ಸುಕಾಂತ ಮಜುಂದಾರ್ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂಗಾಳ ಪೊಲೀಸರು ಹೇಳಿದ್ದೇನು?

ಇಸ್ಲಾಂಪುರ ಪೊಲೀಸ್ ಹೇಳಿಕೆಯಲ್ಲಿ, “ಇಸ್ಲಾಂಪುರ ಪಿಡಿ ಅಡಿಯಲ್ಲಿ ಚೋಪ್ರಾ ಪಿಎಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಒಬ್ಬ ವ್ಯಕ್ತಿಯನ್ನು ಪೊಲೀಸರು ತಕ್ಷಣ ಗುರುತಿಸಿ ಬಂಧಿಸಿದ್ದಾರೆ. ಸಂತ್ರಸ್ತ ಜೋಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ” ಎಂದು ತಿಳಿಸಿದೆ. ಇಸ್ಲಾಂಪುರ ಪೊಲೀಸ್ ಅಧೀಕ್ಷಕ ಜೋಬಿ ಥಾಮಸ್ ಕೆ. ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕ್ಲಿಪ್ ಅನ್ನು ವೀಕ್ಷಿಸಿದ್ದಾರೆ ಮತ್ತು ಅದನ್ನು ಪರಿಶೀಲಿಸಿದ ನಂತರ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

ಭಾರೀ ಸಂಖ್ಯೆಯ ಜನರು ನೋಡುತ್ತಿದ್ದಂತೆಯೇ ನೋವಿನಿಂದ ಅಳುತ್ತಿದ್ದ ಮಹಿಳೆಗೆ ಆರೋಪಿಗಳು ಥಳಿಸಿದ ದೃಶ್ಯ ವೈರಲ್ ಆಗಿದೆ. ಹಲ್ಲೆ ಮಾಡಿದಾತ ಆಕೆಯ ತಲೆಕೂದಲು ಎಳೆದು ಒದೆಯುವುದು ಕಂಡುಬಂದಿತು. ಆರೋಪಿಗಳು ವ್ಯಕ್ತಿಯೊಬ್ಬನಿಗೆ ದೊಣ್ಣೆಗಳಿಂದ ಥಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Inspirational Story
ಬೆಂಗಳೂರು7 mins ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ27 mins ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್39 mins ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ41 mins ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Karave Protest
ಪ್ರಮುಖ ಸುದ್ದಿ55 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ1 hour ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ1 hour ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ2 hours ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ2 hours ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌