ಮೂರೂ ಕಡೆಯಿಂದ ಲಾಕ್‌ ಆದ ಸಿದ್ದರಾಮಯ್ಯ; ಮಗನ ಕ್ಷೇತ್ರದಲ್ಲೇ ಸ್ಪರ್ಧಿಸಲು ತೀರ್ಮಾನ? - Vistara News

ಕರ್ನಾಟಕ

ಮೂರೂ ಕಡೆಯಿಂದ ಲಾಕ್‌ ಆದ ಸಿದ್ದರಾಮಯ್ಯ; ಮಗನ ಕ್ಷೇತ್ರದಲ್ಲೇ ಸ್ಪರ್ಧಿಸಲು ತೀರ್ಮಾನ?

ಸ್ವತಃ ತಾವು ಗೆಲ್ಲುವುದಷ್ಟೆ ಅಲ್ಲದೇ ರಾಜ್ಯದ ವಿವಿಧೆಡೆ ಪ್ರವಾಸ ಮಾಡಿ ಬೆಂಬಲಿಗರನ್ನೂ ಗೆಲ್ಲಿಸಬೇಕಾಗಿರುವುದರಿಂದ ಸುರಕ್ಷಿತವಾಗಿ ವರುಣವನ್ನೇ ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬ ತೀರ್ಮಾನಕ್ಕೆ ಸಿದ್ದರಾಮಯ್ಯ ಬಂದಿದ್ದಾರೆ ಎನ್ನಲಾಗುತ್ತಿದೆ.

VISTARANEWS.COM


on

siddaramaiah may contest from varuna constituency
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬ ಅನೇಕ ತಿಂಗಳ ಚರ್ಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ತೆರೆ ಎಳೆಯಲು ಮುಂದಾಗಿದ್ದಾರೆ. ಹಾಲಿ ಪ್ರತಿನಿಧಿಸುತ್ತಿರುವ ಬಾದಾಮಿ, ಆಪ್ತರು ಪ್ರತಿನಿಧಿಸುತ್ತಿರುವ ಕೋಲಾರ ಹಾಗೂ ಚಾಮರಾಜಪೇಟೆಯ ಬದಲಿಗೆ ಪುತ್ರ ಶಾಸಕನಾಗಿರುವ ವರುಣದಿಂದಲೇ ಸ್ಪರ್ಧೆ ಮಾಡಲು ತೀರ್ಮಾನಕ್ಕೆ ಬಂದಿದ್ದಾರೆ.

ಬಾದಾಮಿಯಲ್ಲಿ ಸ್ಥಳೀಯ ವಿರೋಧ

2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರಾದರೂ ಅಲ್ಲಿ ಜೆಡಿಎಸ್‌ನಿಂದ ಜಿ.ಟಿ. ದೇವೇಗೌಡ ಪ್ರಬಲ ಸ್ಪರ್ಧೆಯೊಡ್ಡುವ ಸೂಚನೆ ನೀಡಿದ್ದರು. ಪರೋಕ್ಷವಾಗಿ ಬಿಜೆಪಿಯೂ ಕೈಜೋಡಿಸಿದ್ದರಿಂದಾಗಿ ತಮ್ಮ ಸೋಲು ಖಚಿತ ಎಂಬುದನ್ನು ಅರಿತ ಸಿದ್ದರಾಮಯ್ಯ, ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಬಾದಾಮಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಬಾದಾಮಿಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಜಯಗಳಿಸಿದ ಸಿದ್ದರಾಮಯ್ಯ, ನಿರೀಕ್ಷೆಯಂತೆಯೇ ಇತ್ತ ಚಾಮುಂಡೇಶ್ವರಿಯಲ್ಲಿ ಸೋಲುಂಡರು. ಆದರೆ ಇಷ್ಟು ಭಾರೀ ಅಂತರದಲ್ಲಿ, ಹೀನಾಯವಾಗಿ ಸೋತಿದ್ದು ಗಾಬರಿ ಉಂಟುಮಾಡಿತ್ತು. ಈ ಕುರಿತು ಇತ್ತೀಚೆಗೆ ಸ್ವತಃ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದರು.

ಮತ್ತೆ ಬಾದಾಮಿಯಲ್ಲಿ ಸ್ಪರ್ಧೆ ಮಾಡಲು, ಆ ಆಕ್ಷೇತ್ರ ದೂರ ಎಂಬ ಕಾರಣವನ್ನು ಸಿದ್ದರಾಮಯ್ಯ ನೀಡುತ್ತಿದ್ದಾರೆ. ಆದರೆ ನಿಜಕ್ಕೂ ಅಲ್ಲಿನ ರಾಜಕೀಯ ಸನ್ನಿವೇಶ ಬದಲಾಗಿದೆ. ಆಗ ಸಿದ್ದರಾಮಯ್ಯ ಅವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿ.ಬಿ. ಚಿಮ್ಮನಕಟ್ಟಿ, 2021ರಲ್ಲಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ಷೇತ್ರ ಬಿಟ್ಟುಕೊಟ್ಟರೆ ವಿಧಾನ ಪರಿಷತ್‌ ಸದಸ್ಯನನ್ನಾಗಿ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ಅದನ್ನೂ ಮಾಡಲಿಲ್ಲ. ಹುಲಿಯಂತೆ ಇದ್ದ ನಾನು ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟು ಇಲಿಯಂತಾಗಿದ್ದೇನೆ. ಸಿದ್ದರಾಮಯ್ಯ ಬೇಕಿದ್ದರೆ ತಮ್ಮ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಲಿ ಎಂದು ಹೇಳಿದ್ದರು. ಸ್ಥಳೀಯ ನಾಯಕರ ವಿರೋಧದಿಂದಾಗಿ ಬಾದಾಮಿ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ತೀರ್ಮಾನಿಸಿದ್ದರು.

ಕೋಲಾರದಲ್ಲಿ ಕಚ್ಚಾಟ

ಜೆಡಿಎಸ್‌ನ ಕೆ. ಶ್ರೀನಿವಾಸಗೌಡ ಪ್ರತಿನಿಧಿಸುತ್ತಿರುವ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಎರಡನೇ ಆಯ್ಕೆಯಾಗಿ ಸಿದ್ದರಾಮಯ್ಯ ಪರಿಗಣಿಸಿದರು. ಕಳೆದ ವರ್ಷ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ವಿಪ್‌ ಉಲ್ಲಂಘಿಸಿ ಕಾಂಗ್ರೆಸ್‌ ಅಭ್ಯರ್ಥಿ ಪರ ಅಡ್ಡ ಮತದಾನ ಮಾಡಿದ್ದ ಶ್ರೀನಿವಾಸಗೌಡ, ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದರು.

ಮಾಜಿ ಸಚಿವ ರಮೇಶ್‌ ಕುಮಾರ್‌ ಸೇರಿ ಕೋಲಾರದ ಸುತ್ತಮುತ್ತಲಿನ ಕಾಂಗ್ರೆಸ್‌ ಶಾಸಕರೂ ಈ ಮಾತಿಗೆ ದನಿಗೂಡಿಸಿದ್ದರು. ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ತಮ್ಮ ಕ್ಷೇತ್ರಗಳಲ್ಲೂ ಈ ಪ್ರಭಾವ ಉಂಟಾಗಿ ಗೆಲುವು ಸುಲಭವಾಗುತ್ತದೆ ಎಂಬ ಲೆಕ್ಕಾಚಾರ ಇತ್ತು. ಈ ಕುರಿತು ಬೆಂಬಲಿಗರ ಮಾತನ್ನು ಕೇಳದ ರಾಜಕಾರಣಿ ಸಿದ್ದರಾಮಯ್ಯ, ಕ್ಷೇತ್ರದ ಚಿತ್ರಣವನ್ನು ತಾವೇ ಕಾಣಲು ನವೆಂಬರ್‌ 13ರಂದು ಕೋಲಾರಕ್ಕೆ ಒಂದು ದಿನ ಭೇಟಿ ನೀಡಿದ್ದರು. ಕೋಲಾರದಿಂದಲೇ ಸ್ಪರ್ಧಿಸಿ ಏಕೆ ಸಿಎಂ ಆಗಬಾರದು? ಎಂದು ಸ್ಪರ್ಧಿಸುವ ಆಕಾಂಕ್ಷೆಯನ್ನೂ ಬಿಚ್ಚಿಟ್ಟರು.

ಆದರೆ ಸ್ಥಳೀಯವಾಗಿ, ಮುಖ್ಯವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಬುಸುಗುಡುವ ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ಅವರು ಅಪಸ್ವರ ತೆಗೆದರು. ಈ ಹಿಂದೆ ಮುನಿಯಪ್ಪ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂಬ ಸಿಟ್ಟನ್ನು ಹೊಂದಿರುವ ಮುನಿಯಪ್ಪ, ಸಿದ್ದರಾಮಯ್ಯ ಭೇಟಿ ನೀಡಿದ ದಿನ ಕೋಲಾರದಿಂದ ಹೊರಗಿದ್ದರು. ನಂತರವೂ ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಒಮ್ಮತ ಮೂಡಿಲ್ಲ. ಇದೇ ವೇಳೆ ಜೆಡಿಎಸ್‌ ಸಹ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲು ಪ್ರಯತ್ನದಲ್ಲಿದ್ದು, ಕೋಲಾರ ಜಿಲ್ಲೆಯಿಂದಲೇ ಪಂಚರತ್ನ ಯಾತ್ರೆಗೆ ಚಾಲನೆ ನೀಡಿದೆ. ಕೋಲಾರ ಸಂಸದರಾಗಿ ಬಿಜೆಪಿಯ ಮುನಿಸ್ವಾಮಿ ಇದ್ದಾರೆ. ಕಾಂಗ್ರೆಸ್‌ ಭಿನ್ನಮತೀಯರ ಜತೆಗೆ ಜೆಡಿಎಸ್‌, ಬಿಜೆಪಿ ಶಕ್ತಿಗಳೂ ಸೇರಿದರೆ ತಮ್ಮ ಗೆಲುವು ಕಷ್ಟವಾಗಬಹುದು ಎಂಬ ಲೆಕ್ಕಾಚಾರವನ್ನು ಸಿದ್ದರಾಮಯ್ಯ ಹಾಕಿದ್ದಾರೆ.

ವರುಣದಲ್ಲಿ ಸಿದ್ದರಾಮಯ್ಯ ಮಿಂಚಿನ ಸಂಚಾರ: ಮಗನಿಗಾಗಿಯೋ? ತಮಗಾಗಿಯೋ?

ಚಾಮರಾಜಪೇಟೆಯ ತೊಂದರೆ

ಬೆಂಗಳೂರಿನಲ್ಲಿ ಜಮೀರ್‌ ಅಹ್ಮದ್‌ ಪ್ರತಿನಿಧಿಸುತ್ತಿರುವ ಚಾಮರಾಜಪೇಟೆಯಿಂದಲೇ ಕಣಕ್ಕಿಳಿಯುವ ಕುರಿತೂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದರು. ಈ ಕುರಿತು ಜಮೀರ್‌ ಆಸಕ್ತಿ ತೋರಿದ್ದರು. ಇಡೀ ಕ್ಷೇತ್ರ ತಮ್ಮ ವಶದಲ್ಲಿದ್ದು, ಮುಸ್ಲಿಂ ಮತಗಳೇ ನಿರ್ಣಾಯಕ ಆಗಿರುವುದರಿಂದ ಗೆದ್ದುಬರಲು ಯಾವುದೇ ಸಮಸ್ಯೆ ಇಲ್ಲ. ನಿಮ್ಮ ಪಾಡಿಗೆ ಬೇರೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ, ನಾನು ಗೆಲ್ಲಿಸಿಕೊಂಡು ಬರುವೆ ಎಂದು ಜಮೀರ್‌ ಭರವಸೆ ನೀಡಿದ್ದರು.

ಆದರೆ ಕಳೆದ ವಾರವಷ್ಟೆ ಚಾಮರಾಜಪೇಟೆಯ ಕುರಿತು ಸುದ್ದಿಗೋಷ್ಠಿ ನಡೆಸಿದ್ದ ಎಚ್‌.ಡಿ. ಕುಮಾರಸ್ವಾಮಿ, ಈ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲು ಎಲ್ಲ ಪ್ರಯತ್ನ ಮಾಡುವುದಾಗಿ ಹೇಳಿದ್ದರು. ಇದರ ಜತೆಗೆ, ಮುಸ್ಲಿಂ ಮತಗಳಿರುವ ಕಾರಣಕ್ಕೇ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತವೆ. ಈಗಾಗಲೆ ಹಿಂದು ವಿರೋಧಿ ಎಂಬ ಹಣೆಪಟ್ಟಿ ಕಟ್ಟಲು ಎಲ್ಲ ಪ್ರಯತ್ನ ಮಾಡುತ್ತಿದೆ. ಹಾಗಾಗಿ ಚಾಮರಾಜಪೇಟೆಯೂ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ವರುಣವೇ ಸೇಫ್‌

ಸುತ್ತಿ ಬಳಸಿ ಕೊನೆಗೆ ವರುಣ ಕ್ಷೇತ್ರವೇ ಸೇಫ್‌ ಎಂಬ ತೀರ್ಮಾನಕ್ಕೆ ಸಿದ್ದರಾಮಯ್ಯ ಬಂದಿದ್ದಾರೆ. ಈ ಕುರಿತು ಆಪ್ತರ ಜತೆಗೆ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲೂ ಪ್ರಸ್ತಾಪ ಮಾಡಲಾಗಿದೆ. ಪುತ್ರ ಪ್ರತಿನಿಧಿಸುತ್ತಿರುವ ವರುಣದಲ್ಲಿ ಕಳೆದ ವಾರ ಪ್ರವಾಸ ಮಾಡಿದ್ದಾರೆ. ಕ್ಷೇತ್ರದಲ್ಲಿ ತಮ್ಮ ಪರ ಅಲೆ ಇರುವುದನ್ನು ಸಿದ್ದರಾಮಯ್ಯ ಗುರುತಿಸಿದ್ದಾರೆ. ಈ ಬಾರಿ ಪುತ್ರನಿಗೆ ಟಿಕೆಟ್‌ ತಪ್ಪಿಸಿ ತಾವೇ ಸ್ಪರ್ಧಿಸುವುದು, ಹೇಗಿದ್ದರೂ ಮುಂದಿನ ಚುನಾವಣೆಯಲ್ಲಿ ಯತೀಂದ್ರ ಅವರಿಗೇ ಬಿಟ್ಟುಕೊಡುವ ತೀರ್ಮಾನ ಮಾಡಿದ್ದಾರೆ. ಒಬ್ಬರಿಗೆ ಒಂದೇ ಕ್ಷೇತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಖಡಕ್ಕಾಗಿ ಹೇಳಿರುವುದೂ ವರುಣ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಳ್ಳಲು ಅನಿವಾರ್ಯತೆ ಸೃಷ್ಟಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Siddaramaiah CM | ಸಿದ್ದರಾಮಯ್ಯ ಕೋಲಾರದಲ್ಲೇ ಸ್ಪರ್ಧಿಸಬೇಕು, ವರಿಷ್ಠರು ಸಿಎಂ ಮಾಡ್ಲೇಬೇಕು: ರಮೇಶ್‌ ಕುಮಾರ್‌ ವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

Vijayanagara News: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Disciplinary action if cases of mother and child deaths recur DC Diwakar warns
Koo

ಹೊಸಪೇಟೆ: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ (Vijayanagara News) ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ತಾಯಿ ಮತ್ತು ಶಿಶು ಮರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು. ತಾಯಿ ಮತ್ತು ಶಿಶು ಮರಣಕ್ಕೆ ವೈದ್ಯರು ಅಥವಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವ ದೂರು ಬಾರದ ಹಾಗೆ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ದಿನ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಶುಶ್ರೂಷಣಾ ಸಿಬ್ಬಂದಿ ರೋಗಿಗಳೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳಬೇಕು. ಚಿಕಿತ್ಸೆ ಕೊಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು. ಬೇರೊಬ್ಬರನ್ನು ಹೊಣೆಯಾಗಿಸಬಾರದು. ಸಕಾಲದಲ್ಲಿ ಸಿಗಬೇಕಾಗಿದ್ದ ಆರೋಗ್ಯ ಸೇವೆ ಸಿಗದ ಕಾರಣಕ್ಕೆ ತಾಯಿ ಮರಣ, ಶಿಶುಮರಣ ಪ್ರಕರಣಗಳು ದಾಖಲಾಗುತ್ತಿವೆ ಎನ್ನುವ ದೂರುಗಳು ಬಂದಲ್ಲಿ ಮತ್ತು ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಮತ್ತೆ ಮರುಕಳಿಸಿದಲ್ಲಿ ಯಾವುದೇ ಮುಲಾಜಿಲ್ಲದೇ ತನಿಖೆಗೊಳಪಡಿಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

ಸರ್ಕಾರಿ ಆಸ್ಪತ್ರೆಗಳಿಗೆ ಬಹುತೇಕ ಕೃಷಿ ಕಾರ್ಮಿಕರು, ಕಡು ಬಡವರೇ ಹೆಚ್ಚಾಗಿ ಬರುತ್ತಾರೆ. ವೈದ್ಯರೇ ದೇವರೆಂದು ಭಾವಿಸಿ ಅವರು ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡಿರುತ್ತಾರೆ. ವೈದ್ಯರು ಏನೇ ಹೇಳಿದರು ಅವರು ಅದಕ್ಕೆ ಸಮ್ಮತಿ ಸೂಚಿಸುತ್ತಾರೆ. ನನ್ನ ಮಗಳು ಆರಾಮಿರಬೇಕು. ಹೆರಿಗೆ ಸುಸೂತ್ರವಾಗಿ ನಡೆದು ಕೂಸು ಬದುಕಬೇಕು ಎಂಬುದು ಪ್ರತಿಯೊಬ್ಬ ತಂದೆ ತಾಯಿ ಪಾಲಕರ ಆಸೆ ಆಗಿರುತ್ತದೆ. ಆಸ್ಪತ್ರೆಗೆ ಯಾರೆ ಬರಲಿ ಅವರೊಂದಿಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳಬೇಕು. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು.

ಹೆರಿಗೆಯಂತಹ ಸಂದರ್ಭದಲ್ಲಿ ವಿಳಂಬಕ್ಕೆ ಆವಕಾಶ ಮಾಡಿಕೊಡದೇ ಸಕಾಲಕ್ಕೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದೆ ಎಂಬುದು ಗೊತ್ತಾದಾಗ ವಿಳಂಬ ಮಾಡದೇ ಮೇಲಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಕೂಡಲೇ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರು ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಹಾಗೆ ಅವರಿಗೆ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು, ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಆಡಳಿತ ವ್ಯೆದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಹಾಜರಿದ್ದರು.

Continue Reading

ಕರ್ನಾಟಕ

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Uttara Kannada News: ವಿಶ್ವವೇ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಬಂದಿದ್ದು, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗುವ ಕಡೆಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಈ ಬಾರಿ ಚುನಾವಣೆಯಲ್ಲಿ ಇವಿಎಂ ಮೇಲೆ ಯಾರೂ ಆರೋಪ ಮಾಡಿಲ್ಲ, ಮೋದಿಯವರು ಗೆದ್ದರು, ಇವಿಎಂ ಕೂಡ ಗೆದ್ದಿತು. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ, ಸ್ಥಿರ ಸರ್ಕಾರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

VISTARANEWS.COM


on

BJP State Spokesperson Hariprakash konemane pressmeet at yallapura
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ (Uttara Kannada News) ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಮತದಾರರು ಅತ್ಯಂತ ಗರಿಷ್ಠ ಪ್ರಮಾಣದ ಅಂತರದಲ್ಲಿ ಗೆಲ್ಲಿಸಿರುವುದು ಗಮನಾರ್ಹ ಸಂಗತಿ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ, ಯಲ್ಲಾಪುರ-ಮುಂಡಗೋಡದಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಮೊದಲು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಕಾರ್ಯಕರ್ತರ ಪರಿಶ್ರಮ ಮತ್ತು ಪಕ್ಷದ ನೇತೃತ್ವ, ಸಂಘಟನೆಗಳಿಂದ ಬಿಜೆಪಿಯ ವೈಚಾರಿಕತೆ ಮತದಾರರನ್ನು ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಮತದಾರರು ಪ್ರಬುದ್ಧರಾಗಿ ಮತ ಚಲಾವಣೆ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

ದೇಶದಲ್ಲಿ 63 ಕೋಟಿ ಜನ ಮತದಾರರಿಂದ ಮತ ಚಲಾವಣೆಯಾಗಿದೆ. 76 ದಿನ ಪ್ರಚಾರ ಮಾಡಲಾಗಿದೆ. ವಿಶ್ವವೇ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಬಂದಿದೆ. ದೇಶ ಮತ್ತು ಜಗತ್ತು ಗಮನ ಸೆಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುವ ಕಡೆಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಈ ಬಾರಿ ಚುನಾವಣೆಯಲ್ಲಿ ಇವಿಎಂ ಮೇಲೆ ಆರೋಪ ಮಾಡಿಲ್ಲ, ಮೋದಿಯವರು ಗೆದ್ದರು, ಇವಿಎಂ ಕೂಡ ಗೆದ್ದಿತು. ಒಟ್ಟಾರೆ ಪ್ರಜಾಪ್ರಭುತ್ವ ವ್ಯವಸ್ಥೆ ಗೆದ್ದಿದೆ. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ, ಸ್ಥಿರ ಸರ್ಕಾರ ಕೊಡಲಿದ್ದಾರೆ ಎಂದು ಕೋಣೆಮನೆ ಹೇಳಿದರು.

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ಯಲ್ಲಾಪುರ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ಸೇರಿದಂತೆ ಶೇಕಡಾ 90% ಬೂತ್‌ಗಳಲ್ಲಿ ಲೀಡ್‌ ಗಳಿಸಿದ್ದೇವೆ. ಪಕ್ಷ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಸದೃಢವಾಗಿ ವಿಶ್ವಾಸದೊಂದಿಗೆ ಚುನಾವಣಾ ಎದುರಿಸಿದ್ದೇವೆ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ನಮ್ಮ ಶಾಸಕರು ಬಿಜೆಪಿ ಪರವಾಗಿ ನಿಲ್ಲದೇ ಇರುವಂತಹ ಸಂದರ್ಭದಲ್ಲಿ ಕಾರ್ಯಕರ್ತರ ನೇತೃತ್ವವೇ ನಮ್ಮ ನಾಯಕತ್ವವೆಂದು ನಂಬಿ, ಚುನಾವಣೆ ಎದುರಿಸಿ, ಯಲ್ಲಾಪುರ ತಾಲೂಕಿನಲ್ಲಿ 14,708 ಮತಗಳನ್ನು ಪಡೆದಿದ್ದೇವೆ. ವಿಶ್ವಾಸದೊಂದಿಗೆ ಪಕ್ಷವನ್ನು ಸಂಘಟಿಸಿದ್ದೇವೆ ಮತ್ತು ಮುಂದೆಯೂ ಸಂಘಟಿಸುತ್ತೇವೆ. ಈ ಗೆಲುವಿಗೆ ಕಾರಣೀಕರ್ತರಾದ ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ನಮಗೆ ಸಹಕಾರ ನೀಡಿದ ಮಾಧ್ಯಮಕ್ಕೆ ಕೃತಜ್ಞತೆಗಳು ಎಂದರು.

ಬಿಜೆಪಿ ಪಕ್ಷದಲ್ಲಿದ್ದೂ, ಸೋತ ಸಂಸದರಾದ ಡಿ.ಕೆ ಸುರೇಶ್‌ ಅವರನ್ನು ಸಮಾಧಾನ ಮಾಡಲು ಹೋದ ನಮ್ಮ ಶಾಸಕರ ನಡೆಯನ್ನು ಯಲ್ಲಾಪುರ ಮಂಡಲದಿಂದ ಖಂಡಿಸುತ್ತೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಈ ಸಂದರ್ಭದಲ್ಲಿ ಬಿಜೆಪಿ ವಿವಿಧ ಘಟಕಗಳ ಪ್ರಮುಖರಾದ ಗಣಪತಿ ಮಾನಿಗದ್ದೆ, ಗಣಪತಿ ಬೋಳುಗುಡ್ಡೆ, ಸೋಮೇಶ್ವರ ನಾಯ್ಕ, ಪ್ರದೀಪ ಯಲ್ಲಾಪುರಕರ, ವಿಘ್ನೇಶ ಭಟ್ಟ ಮಾಳಕೊಪ್ಪ, ರವಿ ದೇವಡಿಗ, ಬಜ್ಜು ಪಿಂಗಳೆ ಇದ್ದರು.

Continue Reading

ಬೆಂಗಳೂರು

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Trekking Tragedy: ಉತ್ತರಾಖಂಡದ ಚಾರಣ ದುರಂತದಲ್ಲಿ ಬದುಕುಳಿದ 13 ಚಾರಣಿಗರನ್ನು ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಬೆಂಗಳೂರಿಗೆ ಕರೆತೆರಲಾಗುತ್ತಿದೆ.

VISTARANEWS.COM


on

Trekking tragedy
Koo

ದೇವನಹಳ್ಳಿ: ಉತ್ತರಾಖಂಡದ ಚಾರಣ ದುರಂತದಲ್ಲಿ (Trekking Tragedy) ಬದುಕುಳಿದ 13 ಕನ್ನಡಿಗ ಚಾರಣಿಗರು ಇಂದು (ಜೂನ್‌ 6) ಬೆಂಗಳೂರಿಗೆ ಆಗಮಿಸಲಿದ್ದಾರೆ. ಡೆಹ್ರಾಡೂನ್‌ನಲ್ಲಿ ರಾಜ್ಯದ ಚಾರಣಿಗರು ವಿಮಾನ ಹತ್ತಿದ್ದು, ಇಂದು ರಾತ್ರಿ ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿಯಲಿದ್ದಾರೆ.

ಉತ್ತರಾಖಂಡ ಉತ್ತರಕಾಶಿ ಬಳಿಯ ಸಹಸ್ತ್ರ ತಾಲ್‌ಗೆ ಚಾರಣಕ್ಕೆ (uttarakhand trekking tragedy) ರಾಜ್ಯದ 18 ಮಂದಿ ಸೇರಿ 22 ಮಂದಿ ತೆರಳಿದ್ದರು. ಈ ವೇಳೆ ಪ್ರತಿಕೂಲ ಹವಾಮಾನದಿಂದ 9 ಮಂದಿ ಮೃತಪಟ್ಟಿದ್ದರು. ಉಳಿದ 13 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರೆಲ್ಲಾ ಇಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಡೆಹ್ರಾಡೂನ್‌ನಿಂದ 6E6136 ಇಂಡಿಗೋ ವಿಮಾನದ ಮೂಲಕ ಕೆಂಪೇಗೌಡ ಏರ್‌ಪೋರ್ಟ್‌ಗೆ 13 ಮಂದಿ ಕನ್ನಡಿಗರು ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ವಿವಿಧೆಡೆ ಸಿಲುಕಿದ್ದ 13 ಮಂದಿ ಕನ್ನಡಿಗರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ 13 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ.

ಸಾವಿನ ಕಣಿವೆಯಾದ ಸಹಸ್ತ್ರತಾಲ್; ಬೆಂಗಳೂರಿನ 9 ಚಾರಣಿಗರು ಬಲಿಯಾದದ್ದು ಹೇಗೆ?

ಬೆಂಗಳೂರು: ಉತ್ತರಾಖಂಡದ (Uttarakhand) ಸಹಸ್ತ್ರತಾಲ್‌ ಶಿಖರ (Sahstra Tal Summit) ಏರಲು ಹೋಗಿದ್ದ ಬೆಂಗಳೂರಿನ 22 ಮಂದಿಯ ಚಾರಣಿಗರ (Trekkers) ತಂಡದಲ್ಲಿ 13 ಮಂದಿ ಮಾತ್ರ ಪಾರಾಗಿದ್ದಾರೆ. 9 ಮಂದಿ ಮೃತಪಟ್ಟಿದ್ದಾರೆ. ವಿಪರೀತ ಹಿಮಗಾಳಿ (blizzard), ಪ್ರತಿಕೂಲ ಹವಾಮಾನದಿಂದಾಗಿ ಈ ದುರ್ಘಟನೆ (Trekking Tragedy) ಸಂಭವಿಸಿದೆ. ಚಾರಣಿಗರಲ್ಲಿ ಬದುಕುಳಿದವರು ಅಲ್ಲಿ ಏನು ನಡೆಯಿತು ಎಂಬ ಚಿತ್ರಣವನ್ನು ಕೊಟ್ಟಿದ್ದಾರೆ.

ಕರ್ನಾಟಕ ಮೌಂಟನೀರಿಂಗ್ ಇನ್ಸ್ಟಿಟ್ಯೂಟ್ ಮುಖಾಂತರ ಉತ್ತರಾಖಂಡದ ಸಹಸ್ತ್ರತಾಲ್‌ಗೆ ಮೇ 29ರಂದು ಕರ್ನಾಟಕದ 22 ಜನರ ಗುಂಪು ಚಾರಣಕ್ಕೆ ತೆರಳಿತ್ತು. 21 ಚಾರಣಿಗರು ಮತ್ತು ಒಬ್ಬರು ಗೈಡ್ ಅನ್ನೊಳಗೊಂಡ ಟೀಂ ಇದಾಗಿತ್ತು. ಅಲ್ಲಿನ ಕುಫ್ರಿ ಟಾಪ್‌ ಎಂಬ ಶಿಖರಕ್ಕೆ ಹತ್ತಿ ಮರಳುತ್ತಿದ್ದಾಗ ಹವಾಮಾನ ಕೆಟ್ಟು ವಿಪರೀತ ಹಿಮಗಾಳಿ ಬೀಸಲಾರಂಭಿಸಿದೆ. ಇಳಿಯುವ ದಾರಿ ಮುಚ್ಚಿಹೋಗಿದ್ದು, ಹಿಂದಿರುಗಲು ಗೊತ್ತಾಗಿಲ್ಲ. ಎಲ್ಲರೂ ಅಲ್ಲೇ ಬಂಡೆಗಳನ್ನು ಆಶ್ರಯಿಸಿ ಪಾರಾಗಲು ಯತ್ನಿಸಿದ್ದಾರೆ. ಆದರೆ 9 ಜನ ಮೃತಪಟ್ಟಿದ್ದಾರೆ. ನಿನ್ನೆ 5 ಜನರ ಮೃತದೇಹ ಪತ್ತೆಯಾಗಿದ್ದು, ಇಂದು ಬೆಳಗ್ಗೆ 4 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಇಂದು ಸಂಜೆ ಬೆಂಗಳೂರಿಗೆ ಮೃತದೇಹಗಳನ್ನು ತರುವ ಸಾಧ್ಯತೆ ಇದೆ. ವಿಶೇಷ ವಿಮಾನದಲ್ಲಿ ಮೃತ ದೇಹಗಳು ರವಾನೆಯಾಗಲಿವೆ. ಸಚಿವ ಕೃಷ್ಣಬೈರೇಗೌಡ ಡೆಹ್ರಾಡೂನ್‌ಗೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಪಡೆಯುತ್ತಿದ್ದಾರೆ.

ಬದುಕುಳಿದ ಚಾರಣಿಗ, 52 ವರ್ಷದ ಮಧು ಕಿರಣ್ ರೆಡ್ಡಿ ಎಂಬವರು ಘಟನೆಯನ್ನು ವಿವರಿಸಿದ್ದಾರೆ: “ನಮ್ಮಲ್ಲಿ ಹೆಚ್ಚಿನವರು ಅನುಭವಿ ಚಾರಣಿಗರು. 25ರಿಂದ 30 ಚಾರಣ ಮಾಡಿದ್ದೇನೆ. ಜೂನ್ 3ರ ಮಧ್ಯಾಹ್ನ ಸಹಸ್ತ್ರ ತಾಲ್ ಶಿಖರದಲ್ಲಿ ಸಂತೋಷದಿಂದ ಸಮಯ ಕಳೆದ ನಂತರ ನಮ್ಮ ಗುಂಪು ಬೇಸ್ ಕ್ಯಾಂಪ್‌ಗೆ ಹಿಂತಿರುಗುತ್ತಿತ್ತು. ಇಬ್ಬರು ಸದಸ್ಯರು ಮುಖ್ಯ ಗುಂಪಿನ ಮುಂದೆ ಇದ್ದರು. ಅವರಿಗೆ ಏನೂ ಆಗಲಿಲ್ಲ. ಮಧ್ಯಾಹ್ನ 3.30ರ ಸುಮಾರಿಗೆ ಹಿಮ ಬಿರುಗಾಳಿ ಬೀಸಲಾರಂಭಿಸಿತು. ಗೋಚರತೆ ತಪ್ಪಿಹೋಯಿತು. ಅಲ್ಲಿಯವರೆಗೆ ಚಾರಣಕ್ಕೆ ಏನೂ ಕಷ್ಟವಾಗಿರಲಿಲ್ಲ. ಹಿಮಗಾಳಿ ನಾಲ್ಕು ಗಂಟೆಗಳ ಕಾಲ ಬೀಸಿತು. ನಮಗಿಂತ ಒಂದು ಅಡಿ ಮುಂದಿರುವುದೂ ಕಾಣುತ್ತಿರಲಿಲ್ಲ.”

“ಹಿಂತಿರುಗುವ ದಾರಿ ಕಾಣುವವರೆಗೆ ಅಲ್ಲಿಯೇ ಇರಲು ನಿರ್ಧರಿಸಿದೆವು. ನಾವೆಲ್ಲ ದೊಡ್ಡ ಬಂಡೆಯ ಕೆಳಗೆ ಆಶ್ರಯ ಪಡೆದೆವು. ಆ ರಾತ್ರಿಯಲ್ಲಿ ಚಳಿಯಿಂದಾಗಿ ನಮ್ಮ ಮುಂದೆಯೇ ಇಬ್ಬರು ಸತ್ತರು. ಬೆಳಗಿನ ವೇಳೆಗೆ ಇತರ ಇಬ್ಬರು ಸಾವನ್ನಪ್ಪಿದರು. ಮರುದಿನ ಇನ್ನೂ ಐದು ಮಂದಿ ಸಾವನ್ನಪ್ಪಿದರು. ಅಂತಿಮವಾಗಿ ನಮ್ಮ ದಾರಿ ಕಾಣಲಾರಂಭಿಸಿದಾಗ ಹಿಂದಿರುಗಿದೆವು. ನಮ್ಮ ಮೂಲ ಶಿಬಿರದಿಂದ ಕೇವಲ ಒಂದು ಗಂಟೆ ದೂರದಲ್ಲಿದ್ದೆವು ಎಂಬುದು ನಂತರ ಗೊತ್ತಾಯಿತು” ಎಂದು ಅವರು ಹೇಳಿದ್ದಾರೆ.

ಎಲ್ಲಾ ಒಂಬತ್ತು ಮಂದಿ ಹೈಪೋಥರ್ಮಿಯಾದಿಂದ ಸಾವನ್ನಪ್ಪಿದ್ದಾರೆ. ಗುಂಪಿನ ಎಲ್ಲಾ ಸದಸ್ಯರ ಬಳಿಯೂ ಸಾಕಷ್ಟು ಥರ್ಮಲ್‌ಗಳು, ರಕ್‌ಸಾಕ್‌ಗಳು ಮತ್ತು ಪೊಂಚೋಗಳನ್ನು ಒಳಗೊಂಡಂತೆ ಅಗತ್ಯ ಸಿದ್ಧತೆಗಳಿದ್ದರೂ ಹೀಗಾಗಿದೆ.

ಬದುಕುಳಿದ ಚಾರಣಿಗರ ತಂಡದೊಂದಿಗೆ ಡೆಹ್ರಾಡೂನ್‌ನಲ್ಲಿ ಸಚಿವ ಕೃಷ್ಣಬೈರೇಗೌಡ ಮುಖಾಮುಖಿಯಾಗಿದ್ದು, ಅಲ್ಲಿ ನಡೆದದ್ದೇನು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

“ಜೂನ್ 3ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತವು ಪ್ರಾರಂಭವಾಗಿದೆ. ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದನ್ನು ಅಸಾಧ್ಯಗೊಳಿಸಿದೆ. ಗೋಚರತೆಯೂ ಶೂನ್ಯಕ್ಕೆ ಇಳಿದಿದೆ.

ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಿಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ. ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ.

ಜೂನ್ 4ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.

ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.”

ಮೃತಪಟ್ಟವರು:

1) ಸುಜಾತ, ಬೆಂಗಳೂರು -52 ವರ್ಷ
2) ಸಿಂಧು , ಪ್ರಾಯ-47 ವರ್ಷ
3) ಚಿತ್ರಾ, ಪ್ರಾಯ-48 ವರ್ಷ
4) ಪದ್ಮಿನಿ ವಯಸ್ಸು 45 ವರ್ಷ
5) ವೆಂಕಟೇಶ್‌ ಪ್ರಸಾದ್‌ 52 ವರ್ಷ
6) ಅನಿತಾ, ಪ್ರಾಯ 61 ವರ್ಷ
7) ಆಶಾ ಸುಧಾಕರ, ಪ್ರಾಯ 72 ವರ್ಷ
8) ಪದ್ಮನಾಭನ್ ಕೆಪಿಎಸ್‌, ವಯಸ್ಸು 50 ವರ್ಷ
9) ವಿನಾಯಕ್

ರಕ್ಷಣೆಗೊಳಗಾದವರು:

1) ಸೌಮ್ಯಾ, 36 ವರ್ಷ
2) ವಿನಯ್, 49 ವರ್ಷ
3) ಶಿವಜ್ಯೋತಿ- 46 ವರ್ಷ
4) ಸುಧಾಕರ್‌, 64 ವರ್ಷ
5) ಸ್ಮೃತಿ, 41 ವರ್ಷ
6) ಸೀನಾ, 48 ವರ್ಷ
7) ಮಧುರೆಡ್ಡಿ- 52 ವರ್ಷ
8) ಜಯಪ್ರಕಾಶ್- 61 ವರ್ಷ
9) ಭರತ್- 53 ವರ್ಷ
10) ಅನಿಲ್ ಭಟ್- 52 ವರ್ಷ
11)‌ ವಿವೇಕ್ ಶ್ರೀಧರ್
12) ರಿತಿಕಾ ಜಿಂದಾಲ್
13) ನವೀನ್ ಎ.

ಇದನ್ನೂ ಓದಿ: Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

Continue Reading

ಕರ್ನಾಟಕ

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Valmiki Corporation Scam: ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಬಿ.ನಾಗೇಂದ್ರ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಜಮೀರ್‌ ಅಹ್ಮದ್‌, ಎಂಎಲ್‌ಸಿ ನಜೀರ್‌ ಅಹ್ಮದ್ ಉಪಸ್ಥಿತರಿದ್ದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. ಇದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾದಂತಾಗಿದೆ.

ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಉಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿದರು. ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ನಾಗೇಂದ್ರ ಬರೆದಿದ್ದಾರೆ.

ಇದಕ್ಕೂ ಮೊದಲು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಗೇಂದ್ರ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ಇದಕ್ಕಾಗಿ ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದರು.

ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಇದನ್ನೂ ಓದಿ | Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading
Advertisement
Disciplinary action if cases of mother and child deaths recur DC Diwakar warns
ಆರೋಗ್ಯ14 mins ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ16 mins ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು18 mins ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ22 mins ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ46 mins ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ1 hour ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Kangana Ranaut
ಪ್ರಮುಖ ಸುದ್ದಿ1 hour ago

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut
ಪ್ರಮುಖ ಸುದ್ದಿ2 hours ago

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Lok Sabha Election 2024
ದೇಶ2 hours ago

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

Viral Video
ವೈರಲ್ ನ್ಯೂಸ್2 hours ago

Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌