IPL 2023 | ಐಪಿಎಲ್​ ಹರಾಜಿನಲ್ಲಿ ಬೆನ್​ ಸ್ಟೋಕ್ಸ್​, ಕ್ಯಾಮೆರೂನ್​, ಮಯಾಂಕ್​; 405 ಕ್ರಿಕೆಟಿಗರ ಅಂತಿಮ ಪಟ್ಟಿ ಪ್ರಕಟ - Vistara News

ಐಪಿಎಲ್ 2024

IPL 2023 | ಐಪಿಎಲ್​ ಹರಾಜಿನಲ್ಲಿ ಬೆನ್​ ಸ್ಟೋಕ್ಸ್​, ಕ್ಯಾಮೆರೂನ್​, ಮಯಾಂಕ್​; 405 ಕ್ರಿಕೆಟಿಗರ ಅಂತಿಮ ಪಟ್ಟಿ ಪ್ರಕಟ

ಐಪಿಎಲ್​ 2023ನೇ ಆವೃತ್ತಿಗೆ ಹರಾಜಿಗೆ ಅರ್ಹತೆ ಹೊಂದಿರುವ ಆಟಗಾರರ ಪಟ್ಟಿಯನ್ನು ಐಪಿಎಲ್​ ಆಡಳಿತ ಮಂಡಳಿ ಮಂಗಳವಾರ ಪ್ರಕಟಿಸಿದೆ.

VISTARANEWS.COM


on

IPL 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಐಪಿಎಲ್​ 2023ನೇ ಆವೃತ್ತಿಯ ಐಪಿಎಲ್​ ಹರಾಜು ಪ್ರಕ್ರಿಯೆಗೆ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ ಹರಾಜಿನಲ್ಲಿ ಪಾಲ್ಗೊಳ್ಳಲಿರುವ 405 ಆಟಗಾರರ ಅಂತಿಮ ಪಟ್ಟಿಯನ್ನು ಐಪಿಎಲ್​ ಆಡಳಿತ ಮಂಡಳಿ ಮಂಗಳವಾರ ಪ್ರಕಟಿಸಿದೆ. ಇಂಗ್ಲೆಂಡ್​ ತಂಡದ ಸ್ಟಾರ್ ಆಲ್​ರೌಂಡರ್​ ಬೆನ್​ಸ್ಟೋಕ್ಸ್​, ಕರ್ನಾಟಕದ ಬ್ಯಾಟರ್​ ಮಯಾಂಕ್​ ಅಗರ್ವಾಲ್​, ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್​ ಕ್ಯಾಮೆರಾನ್​ ಗ್ರೀನ್​ ಫ್ರಾಂಚೈಸಿಗಳ ನಡುವಿನ ಪೈಪೋಟಿಗೆ ಕಾರಣರಾಗಲಿದ್ದಾರೆ.

ಫ್ರಾಂಚೈಸಿಗಳ ಪ್ರಸ್ತುತ ಸಾಮರ್ಥ್ಯದ ಲೆಕ್ಕಾಚಾರದ ಪ್ರಕಾರ ಒಟ್ಟು 87 ಸ್ಥಾನ ಬಾಕಿ ಇದೆ. ಅಂತಿಮ ಪಟ್ಟಿಯಲ್ಲಿರುವ 405 ಆಟಗಾರರು ಈ ಸ್ಥಾನಕ್ಕಾಗಿ ಪೈಪೋಟಿ ನಡೆಸಲಿದ್ದಾರೆ.

ಒಟ್ಟು 991 ಆಟಗಾರರು ಮುಂದಿನ ಆವೃತ್ತಿಯ ಹರಾಜಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲನೆ ಮಾಡಿದ ಐಪಿಎಲ್​ ಆಡಳಿತ ಮಂಡಳಿ 405 ಆಟಗಾರರಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಇದರಲ್ಲಿ 273 ಆಟಗಾರರು ಭಾರತೀಯರಾಗಿದ್ದರೆ 132 ವಿದೇಶಿ ಆಟಗಾರರು ಇದ್ದಾರೆ. ಇದರಲ್ಲಿ 119 ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವವರು.

ಕೋಲ್ಕೊತಾ ನೈಟ್​ ರೈಡರ್ಸ್​ ಹಾಗೂ ಲಖನೌ ಸೂಪರ್​ ಜಯಂಟ್ಸ್​ ತಂಡ ಅನುಕ್ರಮವಾಗಿ 11 ಹಾಗೂ 10 ಆಟಗಾರರನ್ನು ಒಳಗೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಕನಿಷ್ಠ 5 ಆಟಗಾರರು ಬೇಕಾಗಿದ್ದಾರೆ.

ಇದನ್ನೂ ಓದಿ | IPL 2023 | 16ನೇ ಆವೃತ್ತಿಯ ಐಪಿಎಲ್​ ಟೂರ್ನಿ ಒಂದು ವಾರ ತಡವಾಗಿ ಆರಂಭ; ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

PBKS vs RR: ಪ್ಲೇ ಆಫ್​ ರೇಸ್​ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್​ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್​ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್​​ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ

VISTARANEWS.COM


on

PBKS vs RR
Koo

ಗುವಾಹಟಿ: ಬುಧವಾರದ ಸಣ್ಣ ಮೊತ್ತದ ಐಪಿಎಲ್(IPL 2024)​ ಮೇಲಾಟದಲ್ಲಿ ಪಂಜಾಬ್​ ಕಿಂಗ್ಸ್​(PBKS vs RR) ತಂಡ ರಾಜಸ್ಥಾನ್​ ರಾಯಲ್ಸ್​(Rajasthan Royals) ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದೆ. ಲಕ್ನೋ ಸೋಲಿನಿಂದ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಸಂಜು ಪಡೆಗೆ ಈ ಸೋಲು ಯಾವುದೇ ಪರಿಣಾಮ ಬೀರಲಿಲ್ಲ. ಒಂದೊಮ್ಮೆ ಡೆಲ್ಲಿ ವಿರುದ್ಧ ಲಕ್ನೋ ಮಂಗಳವಾರದ ಪಂದ್ಯದಲ್ಲಿ ಗೆಲುವು ಸಾಧಿಸುತ್ತಿದ್ದರೆ, ಈ ಸೋಲು ರಾಜಸ್ಥಾನ್​ಗೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿತ್ತು.

ರಾಜಸ್ಥಾನ್​ ತಂಡಕ್ಕೆ​ 2ನೇ ತವರಾದ ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್ ಬ್ಯಾಟಿಂಗ್​ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 144 ರನ್​ ಗಳಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್(Punjab Kings)​ ಕೂಡ ಒಂದು ಹಂತದಲ್ಲಿ ಆಘಾತ ಎದುರಿಸಿ ಬಳಿಕ ಚೇತರಿಕೆ ಹಾದಿ ಹಿಡಿದು 18.5 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 145 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಪ್ಲೇ ಆಫ್​ ರೇಸ್​ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್​ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್​ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್​​ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ತನ್ನ ಅಂತಿಮ ಲೀಗ್​ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ ಆಡಲಿದೆ. ಈ ಪಂದ್ಯ ಮೇ 19ರಂದು ನಡೆಯಲಿದೆ.

ಚೇಸಿಂಗ್​ ವೇಳೆ ಪಂಜಾಬ್​ ಕೂಡ ಅಗ್ರ ಕ್ರಮಾಂಕದ ಆಟಗಾರರನ್ನು ಅಗ್ಗಕ್ಕೆ ಕಳೆದುಕೊಂಡು ರಾಜಸ್ಥಾನ್​ ತಂಡದ ಹಾಗೆ ಆರಂಭಿಕ ಆಘಾತಕ್ಕೆ ಸಿಲುಕಿತು. ಪ್ರಭಾಸಿಮ್ರಾನ್ ಸಿಂಗ್(6) ಮತ್ತು ಜಾನಿ ಬೇರ್​ಸ್ಟೋ(14) ರನ್​ ಗಳಿಸಿ ಪೆವಿಲಿಯನ್​ ಸೇರಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ, ಈ ಬಾರಿಯ ಐಪಿಎಲ್​ನಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸಂಚಲನ ಸೃಷ್ಟಿಸಿದ್ದ ಶಶಾಂಕ್​ ಸಿಂಗ್​ ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡರು. 36 ರನ್​ಗೆ 3 ವಿಕೆಟ್​ ಕಳೆದುಕೊಂಡ ಪಂಜಾಬ್​, ಚೇತರಿಕೆ ಕಾಣುವಷ್ಟರಲ್ಲಿ ಉತ್ತಮವಾಗಿ ಆಡುತ್ತಿದ್ದ ರೀಲಿ ರೋಸೊ(22) ವಿಕೆಟ್ ಕೂಡ​ ಕಳೆದುಕೊಂಡಿತು. ತಂಡದ ಮೊತ್ತ 50 ಗಡಿ ದಾಟುವ ಮುನ್ನ 4 ವಿಕೆಟ್​ ಕಳೆದುಕೊಂಡು ಮತ್ತಷ್ಟು ತೀವ್ರ ಸಂಕಟಕ್ಕೆ ಒಳಗಾಯಿತು.

ಇದನ್ನೂ ಓದಿ IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

ಅರ್ಧಶತಕ ಬಾರಿಸಿದ ಕರನ್​

ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ನೆರವಾದದ್ದು ನಾಯಕ ಸ್ಯಾಮ್​ ಕರನ್​ ಮತ್ತು ಜಿತೇಶ್​ ಶರ್ಮ. ಉಭಯ ಆಟಗಾರರು ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. 5ನೇ ವಿಕೆಟ್​ಗೆ 63 ರನ್​ ಒಟ್ಟುಗೂಡಿಸಿದರು. ಈ ಉಪಯುಕ್ತ ಜತೆಯಾಟದ ಸಹಾಯದಿಂದ ಪಂಜಾಬ್​ ಗೆಲುವಿನ ದಡ ಸೇರಿತು. ಜಿತೇಶ್​ ಶರ್ಮ 20 ಎಸೆತಗಳಿಂದ 22 ರನ್​ ಬಾರಿಸಿ ಪರಾಗ್​ಗೆ ವಿಕೆಟ್​ ಒಪ್ಪಿಸಿದರು. ಕರನ್ ಅಜೇಯರಾಗಿ ಉಳಿದು ಅರ್ಧಶತಕ ಬಾರಿಸಿದರು. ಇದು ಅವರ ಈ ಆವೃತ್ತಿಯ 2ನೇ ಅರ್ಧಶತಕವಾಗಿದೆ. ಒಟ್ಟು 41 ಎಸೆತ ಎದುರಿಸಿದ ಕರನ್​ 63* ರನ್​ ಬಾರಿಸಿದರು. ಈ ವೇಳೆ ಇವರ ಬ್ಯಾಟ್​ನಿಂದ 5 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ​

ರಾಜಸ್ಥಾನ್​ಗೆ ಆಸರೆಯಾದ ಪರಾಗ್-ಅಶ್ವಿನ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ರಾಜಸ್ಥಾನ್​ ಪರ ಯಶಸ್ವಿ ಜೈಸ್ವಾಲ್​(4) ಜಾಸ್​ ಬಟ್ಲರ್​ ಅನುಪಸ್ಥಿತಿಯಲ್ಲಿ ಆಡಲಿಳಿದ ಕೊಹ್ಲರ್-ಕಾಡ್ಮೋರ್(18), ನಾಯಕ ಸಂಜು ಸ್ಯಾಮ್ಸನ್​(18), ಧೃವ್​ ಜುರೇಲ್​(0), ರೋಮನ್​ ಪೋವೆಲ್(4) ಬ್ಯಾಟಿಂಗ್​ ವೈಫಲ್ಯ ಕಂಡು ಪೆವಿಲಿಯನ್​ ಪರೇಡ್​ ನಡೆಸಿದರು. ರಿಯಾನ್​ ಪರಾಗ್​(48) ಮತ್ತು ಆರ್​.ಅಶ್ವಿನ್​(28) ಅವರ ಅಸಾಮಾನ್ಯ ಬ್ಯಾಟಿಂಗ್​ನಿಂದಾಗಿ ತಂಡ 100 ಗಡಿ ದಾಟಿ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ಸು ಕಂಡಿತು. ಪಂಜಾಬ್​ ಪರ 2 ವಿಕೆಟ್​ ಪಡೆದ ಹರ್ಷಲ್​ ಪಟೇಲ್​ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನ ಪಡೆದರು. ಉಳಿದಂತೆ ಕರನ್​, ಮತ್ತು ರಾಹುಲ್​ ಚಹರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading

ಕ್ರೀಡೆ

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

IPL 2024: ಆರೋಗ್ಯ ಹದಗೆಡಲು ಸ್ಟೇಡಿಯಂನ ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಡೆಲ್ಲಿ ಮತ್ತು ಆರ್​ಸಿಬಿ(DC vs RCB) ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(Karnataka State Cricket Association) ಆಡಳಿತ ಮಂಡಳಿ (KSCA) ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 12ರಂದು ಐಪಿಎಲ್ ವೀಕ್ಷಣೆ ಬಂದಿದ್ದ 23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿನ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದ ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾನು ಕುಳಿತುಕೊಂಡಿದ್ದ ಜಾಗದಲ್ಲಿಯೇ ಚೈತನ್ಯ ಕುಸಿದುಬಿದ್ದಿದ್ದಾನೆ. ತಕ್ಷಣ ಸ್ಟೇಡಿಯಂ ಸಿಬ್ಬಂದಿ ನೆರವಿನಿಂದ ಆತನಿಗೆ ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚೈತನ್ಯರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಈ ಸಂಬಂಧ ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ವೇಳೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಹಲವು ಬಾರಿ ಇಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಇಲ್ಲಿನ ಆಹಾರ ವಿತರಣೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಇನ್ನಾದರೂ ಕೆಎಸ್​ಸಿಎ ಈ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಆಹಾರ ನೀಡುವ ಕೆಲಸವನ್ನು ಮಾಡಬೇಕಿದೆ. ಡೆಲ್ಲಿ ವಿರುದ್ಧದ ಈ ಪಂದ್ಯವನ್ನು ಆರ್​ಸಿಬಿ 47 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!


ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

Continue Reading

ಐಪಿಎಲ್ 2024

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

IPL 2024: ರಾಜಸ್ಥಾನ ರಾಯಲ್ಸ್ ಸಿಎಸ್‌ಕೆ ಗೆಲುವಿನೊಂದಿಗೆ ಆರ್‌ಸಿಬಿ (RCB) ಮತ್ತಷ್ಟು ಒತ್ತಡಕ್ಕೆ ಸಿಲುಕಿದ್ದು, ಭಾನುವಾರವೇ (ಮೇ 12) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲ್ಲುವ ಜತೆಗೆ ಕೊನೆಯ ಪಂದ್ಯವನ್ನು ಸಿಎಸ್‌ಕೆ ವಿರುದ್ಧ ಗೆಲ್ಲಲೇಬೇಕಿದೆ. ಇದರೊಂದಿಗೆ ಬೇರೆ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರವೂ ನಿರ್ಣಾಯಕವಾಗಲಿದೆ.

VISTARANEWS.COM


on

IPL 2024
Koo

ಚೆನ್ನೈ: ಪ್ರಸಕ್ತ ಐಪಿಎಲ್‌ ಟೂರ್ನಿಯ (IPL 2024) ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ಗಳ ಅಂತರಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಸಿಎಸ್‌ಕೆ ಗೆಲುವಿನೊಂದಿಗೆ ಆರ್‌ಸಿಬಿ (RCB) ಮತ್ತಷ್ಟು ಒತ್ತಡಕ್ಕೆ ಸಿಲುಕಿದ್ದು, ಭಾನುವಾರವೇ (ಮೇ 12) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲ್ಲುವ ಜತೆಗೆ ಕೊನೆಯ ಪಂದ್ಯವನ್ನು ಸಿಎಸ್‌ಕೆ ವಿರುದ್ಧ ಗೆಲ್ಲಲೇಬೇಕಿದೆ. ಇದರೊಂದಿಗೆ ಬೇರೆ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರವೂ ನಿರ್ಣಾಯಕವಾಗಲಿದೆ.

ರಾಜಸ್ಥಾನ ಸಾಧಾರಣ ಮೊತ್ತ

ಟೂರ್ನಿಯುದ್ದಕ್ಕೂ ಅತ್ಯುತ್ತಮ ಆಟವಾಡಿರುವ ರಾಜಸ್ಥಾನ ರಾಯಲ್ಸ್‌ ತಂಡವು ಸಿಎಸ್‌ಕೆ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಸಾಧಾರಣ ಮೊತ್ತ ಪೇರಿಸಿತು. ನಿಗದಿತ 20 ಓವರ್‌ಗಳಲ್ಲಿ ಆರ್‌ಆರ್‌ 5 ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು. ರಿಯಾನ್‌ ಪರಾಗ್‌ 47 ಹಾಗೂ ಧ್ರುವ್‌ ಜುರೆಲ್‌ 28 ಹೊರತುಪಡಿಸಿ ಯಾವೊಬ್ಬ ಆಟಗಾರನೂ ಸ್ಫೋಟಕ ಬ್ಯಾಟಿಂಗ್‌ ನಡೆಸದ ಕಾರಣ ಸಾಧಾರಣ ಮೊತ್ತ ದಾಖಲಾಯಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್‌ಕೆ 16 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ಸಿಎಸ್‌ಕೆ ಪರ ಉತ್ತಮವಾಗಿ ಆಡಲು ರಚಿನ್‌ ರವೀಂದ್ರ ಮತ್ತೆ ವಿಫಲರಾದರು. ರಚಿನ್‌ ರವೀಂದ್ರ 27 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೆ, ಡೆರಿಲ್ ಮಿಚೆಲ್‌ 22, ಮೋಯಿನ್‌ ಅಲಿ 10, ಶಿವಂ ದುಬೆ 18 ರನ್‌ ಗಳಿಸಿದರು. ನಾಯಕನ ಆಟವಾಡಿದ ಋತುರಾಜ್‌ ಗಾಯಕ್ವಾಡ್‌ 42 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರೊಂದಿಗೆ ಆಡಿದ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಅಂಕ ಗಳಿಸಿದ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ಜತೆಗೆ ಪ್ಲೇಆಫ್‌ ಕನಸಿಗೆ ಹತ್ತಿರವಾಯಿತು. ಮೇ 18ರಂದು ಸಿಎಸ್‌ಕೆ ಆರ್‌ಸಿಬಿ ವಿರುದ್ಧ ಆಡಲಿದ್ದು, ಗೆಲುವು ಸಾಧಿಸಿದರೆ ಪ್ಲೇಆಫ್‌ಗೆ ಹೋಗುವ ಸಾಧ್ಯತೆ ಹೆಚ್ಚಿದೆ. ಆರ್‌ಸಿಬಿ ವಿರುದ್ಧ ಸೋಲನುಭವಿಸಿದರೆ ರನ್‌ರೇಟ್‌ ಲೆಕ್ಕಾಚಾರ ಆಧಾರವಾಗಲಿದೆ.

ಸಂಕ್ಷಿಪ್ತ ಸ್ಕೋರ್‌

ರಾಜಸ್ಥಾನ ರಾಯಲ್ಸ್‌ 20 ಓವರ್‌ಗಳಲ್ಲಿ 141/5
(ರಿಯಾನ್‌ ಪರಾಗ್‌ 47, ಧ್ರುವ್‌ ಜುರೆಲ್‌ 28, ಸಮರ್‌ಜೀತ್‌ ಸಿಂಗ್‌ 26ಕ್ಕೆ 3)

ಸಿಎಸ್‌ಕೆ 18.2 ಓವರ್‌ಗಳಲ್ಲಿ 145/5
(ಋತುರಾಜ್‌ ಗಾಯಕ್ವಾಡ್‌ 42, ರಚಿನ್‌ ರವೀಂದ್ರ 27, ಆರ್.ಅಶ್ವಿನ್‌ 35/2)

ಇದನ್ನೂ ಓದಿ: IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

Continue Reading

ಕ್ರಿಕೆಟ್

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

IPL 2024: ಆಡಿದ 12 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್‌ಸಿಬಿಯು ಪ್ಲೇಆಫ್‌ ತಲುಪಲು ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಗೆಲುವು ಸಾಧಿಸದಿದ್ದರೆ, ಟೂರ್ನಿಯಿಂದಲೇ ಆರ್‌ಸಿಬಿ ಹೊರಬೀಳಲಿದೆ. ಹಾಗಾಗಿ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯವು ಆರ್‌ಸಿಬಿಗೆ ನಿರ್ಣಾಯಕ ಎನಿಸಿದೆ.

VISTARANEWS.COM


on

IPL 2024
Koo

ಬೆಂಗಳೂರು: ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯು (IPL 2024) ದಿನೇದಿನೆ ಹೆಚ್ಚು ರೋಚಕವಾಗುತ್ತಿದೆ. ಪ್ಲೇ ಆಫ್‌, ರನ್‌ರೇಟ್‌, ಎದುರಾಳಿ ತಂಡದ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂ, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಪ್ಲೇಆಫ್‌ಗೇರಲು ಭಾನುವಾರ ಅಗ್ನಿಪರೀಕ್ಷೆ ಎದುರಿಸುತ್ತಿದೆ. ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಮಧ್ಯೆ ನಿರ್ಣಾಯಕ ಪಂದ್ಯ ನಡೆಯಲಿದ್ದು, ಪ್ಲೇಆಫ್‌ಗೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಇನ್ನು, ಆರ್‌ಸಿಬಿ, ಡೆಲ್ಲಿ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ವೆದರ್‌ ರಿಪೋರ್ಟ್‌ ಹೇಳುವುದೇನು?

ಅಕ್ಯುವೆದರ್‌ (Accuweather) ವರದಿ ಪ್ರಕಾರ, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮೋಡಿ ಕವಿದ ವಾತಾವರಣ ಇರಲಿದೆ ಎಂದು ತಿಳಿದುಬಂದಿದೆ. ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ವರದಿ ತಿಳಿಸಿದೆ. ಮಳೆ ಬರುವ ಸಾಧ್ಯತೆ ಶೇ.50-60ರಷ್ಟು ಕಡಿಮೆ ಇದೆ. ಇನ್ನು, ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಗಂಟೆಗೆ 13 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ರಾಜ್ಯ ರಾಜಧಾನಿಯಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಸಂಜೆ ಮಳೆ ಬಂದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಹೇಗಿದೆ ಪಿಚ್?‌

ಚಿಕ್ಕದಾದ ಬೌಂಡರಿ ಲೈನ್, ಫ್ಲ್ಯಾಟ್‌ ಪಿಚ್‌ ಇರುವ ಕಾರಣ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟರ್‌ಗಳ ಸ್ವರ್ಗ ಎಂದೇ ಹೇಳಲಾಗುತ್ತದೆ. ಹಾಗಾಗಿ, ಆರ್‌ಸಿಬಿ ಹಾಗೂ ಡೆಲ್ಲಿ ಪಂದ್ಯದಲ್ಲೂ ರನ್‌ ಮಳೆ ಸುರಿಯುವ ಸಾಧ್ಯತೆ ಇದೆ. ಪಿಚ್‌ ಸ್ಪಿನ್ನರ್‌ಗಳಿಗಿಂತ ಪೇಸರ್‌ಗಳಿಗೆ ಹೆಚ್ಚು ಅನುಕೂಲವಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಆರ್‌ಸಿಬಿಯು ಗುಜರಾತ್‌ ಟೈಟನ್ಸ್‌ ವಿರುದ್ಧ ಭರ್ಜರಿ ಜಯ ಗಳಿಸಿರುವುದು ಆತ್ಮವಿಶ್ವಾಸ ಹೆಚ್ಚಿಸಿದೆ. ಅತ್ತ, ಆರ್‌ಸಿಬಿಯನ್ನು ತವರಿನಲ್ಲೇ ಮಣಿಸುವ ಮೂಲಕ ಪ್ಲೇಆಫ್‌ ಹಾದಿ ಸುಗಮ ಮಾಡಿಕೊಳ್ಳುವ ಯೋಜನೆಯನ್ನು ಡೆಲ್ಲಿ ಕ್ಯಾಪಿಟಲ್ಸ್‌ ಹಾಕಿಕೊಂಡಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ

ಆಡಿದ 12 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್‌ಸಿಬಿಯು ಪ್ಲೇಆಫ್‌ ತಲುಪಲು ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಗೆಲುವು ಸಾಧಿಸದಿದ್ದರೆ, ಟೂರ್ನಿಯಿಂದಲೇ ಆರ್‌ಸಿಬಿ ಹೊರಬೀಳಲಿದೆ. ಡೆಲ್ಲಿ ವಿರುದ್ಧ ಗೆದ್ದು, ಉಳಿದ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರದಲ್ಲಿರುವ ಆರ್‌ಸಿಬಿಯು ಕಳೆದ ನಾಲ್ಕು ಪಂದ್ಯಗಳಲ್ಲಿ ಸತತವಾಗಿ ಕಂಡಿರುವ ಗೆಲುವು, ತವರಿನ ಅಭಿಮಾನಿಗಳ ಬಲದೊಂದಿಗೆ ಕಣಕ್ಕಿಳಿಯುತ್ತಿದೆ. ಭಾನುವಾರ ಮಧ್ಯಾಹ್ನ ರಾಜಸ್ಥಾನ ರಾಯಲ್ಸ್‌ ಹಾಗೂ ಸಿಎಸ್‌ಕೆ ಪಂದ್ಯ ನಡೆಯಲಿದ್ದು, ಸಿಎಸ್‌ಕೆ ಸೋಲಿಗಾಗಿ ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

Continue Reading
Advertisement
Namrata Gowda Holiday Look in Red Ruffle Layered Maxi Dress
ಫ್ಯಾಷನ್2 mins ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್2 mins ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Karnataka Weather Forecast
ಮಳೆ15 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ30 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ32 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್37 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ41 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್45 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ47 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ56 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

ಟ್ರೆಂಡಿಂಗ್‌