Sonu Sood | ಚಲಿಸುತ್ತಿರುವ ರೈಲಿನ ಫುಟ್‌ಬೋರ್ಡ್‌ನಲ್ಲಿ ಸೋನು ಸೂದ್: ರೈಲ್ವೆ ಪೊಲೀಸ್‌ ಟ್ವೀಟ್‌ನಲ್ಲಿ ಹೇಳಿದ್ದೇನು? - Vistara News

ಬಾಲಿವುಡ್

Sonu Sood | ಚಲಿಸುತ್ತಿರುವ ರೈಲಿನ ಫುಟ್‌ಬೋರ್ಡ್‌ನಲ್ಲಿ ಸೋನು ಸೂದ್: ರೈಲ್ವೆ ಪೊಲೀಸ್‌ ಟ್ವೀಟ್‌ನಲ್ಲಿ ಹೇಳಿದ್ದೇನು?

ಸೋನು ಸೂದ್ (Sonu Sood) ಅವರು ಇತ್ತೀಚೆಗೆ ರೈಲಿನಲ್ಲಿ ಪ್ರಯಾಣಿಸುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ರೈಲ್ವೆ ಪೊಲೀಸರು ಎಚ್ಚರಿಕೆಯ ಮೆಸೇಜ್‌ ನೀಡಿದ್ದಾರೆ.

VISTARANEWS.COM


on

Sonu Sood
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್‌ ನಟ ಸೋನು ಸೂದ್ (Sonu Sood) ಅವರು ಇತ್ತೀಚೆಗೆ ರೈಲಿನಲ್ಲಿ ಪ್ರಯಾಣಿಸುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಗಳು ಆಗುತ್ತಿದ್ದು, ಸೋನು ಸೂದ್ ಅಭಿಮಾನಿಗಳು ವಿಡಿಯೊ ನೋಡಿ ಸಂತಸ ವ್ಯಕ್ತಪಡಿಸಿದರೆ ರೈಲ್ವೆ ಪೊಲೀಸರು ಎಚ್ಚರಿಕೆಯ ಮೆಸೇಜ್‌ ನೀಡಿದ್ದಾರೆ.

ರೈಲಿನ ಪ್ರಯಾಣವನ್ನು ಆನಂದಿಸುತ್ತಿರುವ ವಿಡಿಯೊವನ್ನು ನಟ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆ ಚರ್ಚೆಗಳು ಆಗುತ್ತಿವೆ. ಸೋನು ಸೂದ್ ಫುಟ್‌ಬೋರ್ಡ್‌ನಲ್ಲಿ ಕುಳಿತು ಚಲಿಸುತ್ತಿರುವ ರೈಲಿನ ಬಾಗಿಲಿನ ಬಳಿ ಹ್ಯಾಂಡಲ್ ಅನ್ನು ಹಿಡಿದುಕೊಂಡು ಇಣುಕಿ ನೋಡುವುದನ್ನು ಕಾಣಬಹುದು. ಅವರು ವಿಡಿಯೊವನ್ನು ಹಂಚಿಕೊಂಡ ತಕ್ಷಣ, ನೆಟ್ಟಿಗರು ಸೋನು ಅವರನ್ನು ಡೌನ್ ಟು ಅರ್ಥ್ ಎಂದು ಶ್ಲಾಘಿಸಿದ್ದಾರೆ. ಹಾಗೇ ʻʻಸ್ಟಾರ್ ಆದ ನಂತರವೂ ಸರಳವಾಗಿ ಇದ್ದಾರೆ. ಪ್ರತಿ ಕ್ಷಣ ತಮ್ಮ ಲೈಫ್‌ ಅನ್ನು ಆನಂದಿಸುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ | Sonu sood | ಶ್ರೀಮಂತನಾದ ಸೋನು ಸೂದ್‌ ಈಗ ರೈತ!

ಆದರೆ ಈ ವಿಡಿಯೊ ರೈಲ್ವೆ ಅಧಿಕಾರಿಗಳ ಕಣ್ಣಿಗೂ ಬಿದ್ದಿದ್ದು ಎಚ್ಚರಿಕೆ ಮತ್ತು ಸಲಹೆಯೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಮುಂಬೈ ವಿಭಾಗದ ರೈಲ್ವೆ ಪೊಲೀಸ್ ಹ್ಯಾಂಡಲ್ ಟ್ವೀಟ್‌ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸದಂತೆ ನಟನಿಗೆ ಸಲಹೆ ನೀಡಿದೆ. ಟ್ವೀಟ್‌ ಮೂಲಕ ʻʻಸೋನು ಸೂದ್ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುವುದು ಚಲನಚಿತ್ರಗಳಲ್ಲಿ ‘ಮನರಂಜನೆ’ಯ ಮೂಲವಾಗಿರಬಹುದು. ನಿಜ ಜೀವನದಲ್ಲಿ ಅಲ್ಲ! ನಾವು ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸೋಣ ಮತ್ತು ಎಲ್ಲರಿಗೂ ‘ಹೊಸ ವರ್ಷದ ಶುಭಾಶಯಗಳು” ಎಂದು GRP ಹ್ಯಾಂಡಲ್ ಟ್ವೀಟ್ ಮಾಡಿದೆ.

ಸೋನು ನಗರದಲ್ಲಿ ಪ್ರಯಾಣಿಸಲು ರೈಲಿನಲ್ಲಿ ಹೋಗುತ್ತಿರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದೆಯೂ ಮುಂಬೈ ಲೋಕಲ್ ರೈಲಿನಲ್ಲಿ ಪ್ರಯಾಣಿಸುವ ವಿಡಿಯೋವನ್ನು ಶೇರ್ ಮಾಡಿದ್ದರು. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವಾರು ವಲಸೆ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಸಹಾಯ ಮಾಡಿ ದೇಶದ ಗಮನ ಸೆಳೆದಿದ್ದರು. ಸೋನು ಕೊನೆಯದಾಗಿ ಅಕ್ಷಯ್ ಕುಮಾರ್ ಮತ್ತು ಮಾನುಷಿ ಛಿಲ್ಲರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ | Vaani Kapoor | ಬಾಲಿವುಡ್‌ ಬೆಡಗಿ ವಾಣಿ ಕಪೂರ್‌ ಡ್ರೆಸ್‌ ಝಲಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sonakshi-Zaheer wedding: ಸೋನಾಕ್ಷಿ-ಜಹೀರ್ ಆರತಕ್ಷತೆ ವೇಳೆ ನಟಿ ರೇಖಾ ಕಾಲಿಗೆ ನಮಸ್ಕರಿಸಿದ ಸಿದ್ಧಾರ್ಥ್!

Sonakshi-Zaheer wedding: ಇದೀಗ ವೈರಲ್‌ ಆದ ಕ್ಲಿಪ್‌ನಲ್ಲಿ ಸಿದ್ಧಾರ್ಥ್ ಮತ್ತು ಅದಿತಿ ಒಟ್ಟಿಗೆ ಪೋಸ್‌ ಕೊಟ್ಟಿದ್ದಾರೆ. ಅದಕ್ಕೂ ಮುಂಚೆ ರೇಖಾ ಅವರನ್ನು ಕಾಣುತ್ತಿದ್ದಂತೆ ಸಿದ್ಧಾರ್ಥ್ ಅವರು ರೇಖಾ ಅವರ ಪಾದಗಳನ್ನು ಮುಟ್ಟಿ ಅವರ ಆಶೀರ್ವಾದವನ್ನು ಪಡೆದರು. ನಂತರ ರೇಖಾ ಅವರು ನಟನ ತಲೆಯನ್ನು ಮುಟ್ಟಿದರು. ಮತ್ತೊಂದು ಕ್ಲಿಪ್‌ನಲ್ಲಿ, ಅದಿತಿ ಹಿಂದಿನಿಂದ ರೇಖಾ ಅವರನ್ನು ತಬ್ಬಿಕೊಳ್ಳುತ್ತಿರುವುದು ಕಂಡುಬಂದಿದೆ.

VISTARANEWS.COM


on

Sonakshi-Zaheer wedding Siddharth touches Rekha feet wedding bash
Koo

ಬೆಂಗಳೂರು: ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ (Sonakshi-Zaheer wedding) ಅವರ ವಿವಾಹದ ಆರತಕ್ಷತೆಯಲ್ಲಿ ರೇಖಾ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಭಾಗವಹಿಸಿದ್ದರು. ಸಮಾರಂಭದಲ್ಲಿನ ಅತಿಥಿಗಳ ಹಲವಾರು ವಿಡಿಯೊಗಳು ಮತ್ತು ಫೋಟೊಗಳು ವೈರಲ್‌ ಆಗಿವೆ. ಇದೀಗ ಸಿದ್ಧಾರ್ಥ್ ಅವರು ರೇಖಾ ಅವರ ಕಾಲಿಗೆ ನಮಸ್ಕರಿಸಿರುವ ವಿಡಿಯೊವೊಂದು ವೈರಲ್‌ ಆಗಿದೆ. ನಟನ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದೀಗ ವೈರಲ್‌ ಆದ ಕ್ಲಿಪ್‌ನಲ್ಲಿ ಸಿದ್ಧಾರ್ಥ್ ಮತ್ತು ಅದಿತಿ ಒಟ್ಟಿಗೆ ಪೋಸ್‌ ಕೊಟ್ಟಿದ್ದಾರೆ. ಅದಕ್ಕೂ ಮುಂಚೆ ರೇಖಾ ಅವರನ್ನು ಕಾಣುತ್ತಿದ್ದಂತೆ ಸಿದ್ಧಾರ್ಥ್ ಅವರು ರೇಖಾ ಅವರ ಪಾದಗಳನ್ನು ಮುಟ್ಟಿ ಅವರ ಆಶೀರ್ವಾದವನ್ನು ಪಡೆದರು. ನಂತರ ರೇಖಾ ಅವರು ನಟನ ತಲೆಯನ್ನು ಮುಟ್ಟಿದರು. ಮತ್ತೊಂದು ಕ್ಲಿಪ್‌ನಲ್ಲಿ, ಅದಿತಿ ಹಿಂದಿನಿಂದ ರೇಖಾ ಅವರನ್ನು ತಬ್ಬಿಕೊಳ್ಳುತ್ತಿರುವುದು ಕಂಡುಬಂದಿದೆ. ಕ್ಯಾಮೆರಾ ನೋಡುತ್ತಾ ರೇಖಾ ಅವರು ಅದಿತಿ ಮತ್ತು ಸಿದ್ಧಾರ್ಥ್ ಜೋಡಿ ಎಂದು ಸನ್ನೆ ಮಾಡಿದರು. ಕಾರ್ಯಕ್ರಮಕ್ಕಾಗಿ ಸಿದ್ಧಾರ್ಥ್ ಬಿಳಿ ಕುರ್ತಾ ಪೈಜಾಮ ಮತ್ತು ಬೀಜ್ ಜಾಕೆಟ್‌ನಲ್ಲಿ ಕಾಣಿಸಿಕೊಂಡರು. ರೇಖಾ ಬಿಳಿ ಮತ್ತು ಚಿನ್ನದ ಬಣ್ಣದ ಸೀರೆಯನ್ನು ಧರಿಸಿದ್ದರು.

ವೀಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ಸಿದ್ದಾರ್ಥ್‌ ಅವರದ್ದು ಒಳ್ಳೆಯ ಗೆಸ್ಚರ್” ಎಂದು ಕಮೆಂಟ್‌ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ ಕೆಂಪು ರೇಷ್ಮೆ ಸೀರೆಯನ್ನು ಧರಿಸಿದ್ದರು, ಇದಕ್ಕೆ ಪೂರಕವಾಗಿ ನೆಕ್ಲೇಸ್ ಮತ್ತು ಮಲ್ಲಿಗೆಯಿಂದ ಅಲಂಕರಿಸಲ್ಪಟ್ಟ ಬನ್ ಹಾಕಿದ್ದರು. ಆರತಕ್ಷತೆಯಲ್ಲಿ ಸಲ್ಮಾನ್ ಖಾನ್, ಟಬು, ಅನಿಲ್ ಕಪೂರ್, ಆದಿತ್ಯ ರಾಯ್ ಕಪೂರ್, ಕಾಜೋಲ್, ರವೀನಾ ಟಂಡನ್, ವಿದ್ಯಾ ಬಾಲನ್, ಸಿದ್ಧಾರ್ಥ್ ರಾಯ್ ಕಪೂರ್, ಸೈರಾ ಬಾನು ಮುಂತಾದವರು ಭಾಗವಹಿಸಿದ್ದರು.

ಇದನ್ನೂ ಓದಿ: Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ದೀರ್ಘಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡೂ ಕುಟುಂಬಗಳ ಆಪ್ತರು, ಗೆಳೆಯರ ಸಮ್ಮುಖದಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಮದುವೆಯಾಗಿದ್ದು, ಮದುವೆಯ ಫೋಟೊಗಳನ್ನು ಸೋನಾಕ್ಷಿ ಸಿನ್ಹಾ ಅವರೇ ಹಂಚಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ ಮದುವೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಹಿಂದು ಅಥವಾ ಇಸ್ಲಾಂ ಸಂಪ್ರದಾಯದಂತೆ ಮದುವೆಯಾಗದೆ, ಜಹೀರ್‌ ಅವರ ತಂದೆ ಇಕ್ಬಾಲ್‌ ರತಾನ್ಸಿ ಅವರು ಇದಕ್ಕೂ ಮೊದಲು ಹೇಳಿದಂತೆ ‘ನಾಗರಿಕʼ ಸಂಪ್ರದಾಯದಂತೆ ಅಂದರೆ, ಸಾಮಾನ್ಯವಾಗಿ ಮದುವೆಯಾಗಿದ್ದಾರೆ. ಇಬ್ಬರೂ ತಮ್ಮ ವಿವಾಹವನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು, ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಮುನಿಸು ಮರೆತು, ನವದಂಪತಿಗೆ ಆಶೀರ್ವಾದ ಮಾಡಿದ್ದಾರೆ.

Continue Reading

ಬಾಲಿವುಡ್

Shah Rukh Khan : ಶಾರುಖ್‌ ಖಾನ್ ಜತೆ ಸಮಂತಾ ರೊಮ್ಯಾನ್ಸ್‌!

Shah Rukh Khan : ಶಾರುಖ್ ಇತ್ತೀಚೆಗೆ ರಾಜ್‌ಕುಮಾರ್ ಹಿರಾನಿಯವರ ʻಡಂಕಿʼಯಲ್ಲಿ ಕಾಣಿಸಿಕೊಂಡರು, 500 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು ಸಿನಿಮಾ 2023ರಲ್ಲಿ ಶಾರುಖ್‌ ಅವರ ಮೂರನೇ ಸಿನಿಮಾ ಡಂಕಿಯಾಗಿತ್ತು. ಆದಾಗ್ಯೂ, ಶಾರುಖ್ ಅವರ ಯಾವುದೇ ಚಿತ್ರಗಳು ಈ ವರ್ಷ ಬಿಡುಗಡೆಯಾಗಿಲ್ಲ. ನಟನ ಮುಂಬರುವ ಚಿತ್ರಗಳು ಇನ್ನೂ ಬಹಿರಂಗಗೊಂಡಿಲ್ಲ.

VISTARANEWS.COM


on

Shah Rukh Khan and Samantha Ruth Prabhu to Star in Rajkumar Hirani
Koo

ಬೆಂಗಳೂರು: ಬಾಲಿವುಡ್ ನಟ ಶಾರುಖ್‌ ಖಾನ್ (Shah Rukh Khan) ಅವರು ನಯನತಾರಾ ಜತೆ ತೆರೆ ಹಂಚಿಕೊಂಡ ನಂತರ ಅವ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಂದಿಗೆ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಸಮಂತಾ ರುತ್ ಪ್ರಭು ಜತೆ ಶಾರುಖ್‌ ರೊಮ್ಯಾನ್ಸ್‌ ಮಾಡಲಿದ್ದಾರಂತೆ. ʻಪಿಕೆʼ ಖ್ಯಾತಿಯ ರಾಜ್‌ಕುಮಾರ್ ಹಿರಾನಿ ಸಿನಿಮಾಗೆ ಶಾರುಖ್‌ ಸಹಿ ಮಾಡಿದ್ದು, ಈ ಸಿನಿಮಾಗೆ ಸಮಂತಾ ನಾಯಕಿ ಎನ್ನಲಾಗುತ್ತಿದೆ. ʻಡಂಕಿʼ ಹಿಟ್‌ ಸಿನಿಮಾ ಕೊಟ್ಟ ಬಳಿಕ ಶಾರುಖ್‌ ಅವರು ರಾಜ್‌ಕುಮಾರ್ ಹಿರಾನಿ ಜತೆ ಮತ್ತೊಮ್ಮೆ ಕೈ ಜೋಡಿಸಲು ರೆಡಿಯಾಗಿದ್ದಾರೆ.

ಶಾರುಖ್ ಇತ್ತೀಚೆಗೆ ರಾಜ್‌ಕುಮಾರ್ ಹಿರಾನಿಯವರ ʻಡಂಕಿʼಯಲ್ಲಿ ಕಾಣಿಸಿಕೊಂಡರು, 500 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು ಸಿನಿಮಾ 2023ರಲ್ಲಿ ಶಾರುಖ್‌ ಅವರ ಮೂರನೇ ಸಿನಿಮಾ ಡಂಕಿಯಾಗಿತ್ತು. ಆದಾಗ್ಯೂ, ಶಾರುಖ್ ಅವರ ಯಾವುದೇ ಚಿತ್ರಗಳು ಈ ವರ್ಷ ಬಿಡುಗಡೆಯಾಗಿಲ್ಲ. ನಟನ ಮುಂಬರುವ ಚಿತ್ರಗಳು ಇನ್ನೂ ಬಹಿರಂಗಗೊಂಡಿಲ್ಲ.

ಕೆಜಿಎಫ್ ನಟ ಯಶ್ ಅವರ ಮುಂಬರುವ ಚಿತ್ರ ʻಟಾಕ್ಸಿಕ್‌ʼನಲ್ಲಿಯೂ ಶಾರುಖ್‌ ಕಾಣಿಸಿಕೊಳ್ಳುತ್ತಾರೆ ಎಂಬ ವದಂತಿಗಳಿವೆ. ʻಪಠಾಣ್ʼ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ʻಕಿಂಗ್ʼ ಎಂಬ ಸಿನಿಮಾದಲ್ಲಿ ಶಾರುಖ್‌ ಈಗ ಬ್ಯುಸಿಯಾಗಿದ್ದಾರೆ. ಸುಹಾನಾ ಖಾನ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತೊಂದೆಡೆ, ಸಮಂತಾ ರುತ್ ಪ್ರಭು ಕೊನೆಯದಾಗಿ ʻಖುಷಿʼಸಿನಿಮಾದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ನಯನತಾರಾ ಜೊತೆ ‘ಜವಾನ್’ ಸಿನಿಮಾ ಕ್ಲಿಕ್ ಆದಂತೆ ಹೊಸ ಸಿನಿಮಾ ಕೂಡ ಗೆಲ್ಲಲಿ ಎಂದು ಸಮಂತಾರನ್ನು ರಾಜ್‌ಕುಮಾರ್ ಹಿರಾನಿ ಟೀಮ್ ಸಂಪರ್ಕಿಸಿದೆ.ಬಾಲಿವುಡ್ ಸ್ಟಾರ್‌ಗೆ ಸಮಂತಾ ನಾಯಕಿಯಾಗ್ತಾರೆ ಎಂಬ ಸುದ್ದಿ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ‘ಖುಷಿ’ (Kushi) ಸಿನಿಮಾದ ಬಳಿಕ ಯಾವುದೇ ಘೋಷಣೆ ಕೂಡ ಆಗಿಲ್ಲ. ಹಾಗಾಗಿ ನಟಿಯ ಕಡೆಯಿಂದ ಗುಡ್ ನ್ಯೂಸ್ ಸಿಗಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಸಿನಿಮಾ

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳಿಂದ ಭಾರಿ ನಷ್ಟ ಅನುಭವಿಸಿದ್ದರಿಂದ 250 ಕೋಟಿ ರೂ. ಸಾಲವನ್ನು ಮರು ಪಾವತಿಸಲು ಬಾಲಿವುಡ್ ನ ಖ್ಯಾತ ಚಿತ್ರ ನಿರ್ಮಾಪಕ ವಶು ಭಗ್ನಾನಿ (Vashu Bhagnani) ಅವರು ತಮ್ಮ ಪೂಜಾ ಎಂಟರ್‌ಟೈನ್‌ಮೆಂಟ್‌ನ ಏಳು ಮಹಡಿಗಳ ಕಚೇರಿಯನ್ನು ಮಾರಾಟ ಮಾಡಿದ್ದಾರೆ.

VISTARANEWS.COM


on

By

Vashu Bhagnani
Koo

ಬಾಲಿವುಡ್ ನ (Bollywood) ಖ್ಯಾತ ಚಿತ್ರ ನಿರ್ಮಾಪಕ (Producer) ವಶು ಭಗ್ನಾನಿ (Vashu Bhagnani) ಅವರು ತಮ್ಮ 250 ಕೋಟಿ ಸಾಲವನ್ನು ಪಾವತಿಸಲು ಪೂಜಾ ಎಂಟರ್‌ಟೈನ್‌ಮೆಂಟ್‌ನ (Pooja Entertainment) ಏಳು ಮಹಡಿಗಳ ಕಚೇರಿಯನ್ನು ಮಾರಾಟ ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳಿಂದ ಪೂಜಾ ಎಂಟರ್‌ಟೈನ್‌ಮೆಂಟ್‌ ಭಾರೀ ನಷ್ಟ ಅನುಭವಿದೆ.

ವಶು ಭಗ್ನಾನಿ ಮಾರಾಟದಿಂದ ಪಡೆದ ಹಣದಿಂದ ಸಾಲವನ್ನು ತೀರಿಸುತ್ತಿದ್ದಾರೆ ಮತ್ತು ಪ್ರೊಡಕ್ಷನ್ ಹೌಸ್ ಶೇ. 80ರಷ್ಟು ಸಿಬ್ಬಂದಿಯನ್ನು ವಜಾಗೊಳಿಸಿದೆ ಎನ್ನಲಾಗಿದೆ.

2021ರಲ್ಲಿ ಕೋವಿಡ್ ಸಾಂಕ್ರಾಮಿಕದ ಬಳಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮೊದಲ ಹಿಂದಿ ಚಲನಚಿತ್ರ ಬೆಲ್ ಬಾಟಮ್. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸೋತಿತು ಮತ್ತು ಮುಂದಿನ ಚಿತ್ರ ಮಿಷನ್ ರಾಣಿಗಂಜ್, ದೊಡ್ಡ ಬಜೆಟ್ ನ ಗಣಪತ್ ಪ್ರದರ್ಶನ ನೀಡಲು ವಿಫಲವಾದಾಗ ಕಂಪನಿಗೆ ಭಾರೀ ಹಿನ್ನಡೆಯಾಯಿತು. ಸ್ವಾಧೀನ ಒಪ್ಪಂದದ ಹೊರತಾಗಿಯೂ ನೆಟ್‌ಫ್ಲಿಕ್ಸ್‌ನಿಂದ ತಿರಸ್ಕರಿಸಲ್ಪಟ್ಟಿತು.

ಈ ಹೊತ್ತಿಗೆ ಕಂಪನಿಯ ನಷ್ಟವನ್ನು ಅನುಭವಿಸುತ್ತಿತ್ತು. ಬಡೇ ಮಿಯಾನ್ ಚೋಟೆ ಮಿಯಾನ್‌ನಲ್ಲಿನ ಅಗಾಧ ಹೂಡಿಕೆ ಮಾಡಿ ಸಂಪೂರ್ಣ ಕೈಸುಟ್ಟುಕೊಂಡಿತ್ತು.

Vashu Bhagnani


ಇಷ್ಟೊಂದು ನಷ್ಟದಲ್ಲಿದ್ದರೂ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿನಯದ ಆಕ್ಷನ್ ಚಿತ್ರಕ್ಕೆ ಹಣ ಪಾವತಿಸುವುದಾಗಿ ಭರವಸೆಯನ್ನು ನೀಡಿದೆ. ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಚಿತ್ರದ ಐತಿಹಾಸಿಕ ವೈಫಲ್ಯವು ಕಂಪನಿಯನ್ನು ಬಹುತೇಕ ದುರ್ಬಲಗೊಳಿಸಿತು. ಅಪಾರ ಸಾಲವನ್ನು ತೀರಿಸಲು ಕಟ್ಟಡವನ್ನು ಮಾರಾಟ ಮಾಡದೆ ವಶುಗೆ ಬೇರೆ ದಾರಿ ಇರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Nisha Ravikrishnan:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ʻಗಟ್ಟಿಮೇಳ’ ನಟಿ!

ಆರ್ಥಿಕ ಪರಿಸ್ಥಿತಿಯ ಹೊರತಾಗಿಯೂ ವಶು ಮತ್ತು ಅವರ ಮಗ ಜಾಕಿ ಭಗ್ನಾನಿ ಅವರು ತಮ್ಮ ಕಾರ್ಯಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಮತ್ತು ಅವರು ಮತ್ತೆ ಪುಟಿದೇಳಲು ಸಹಾಯ ಮಾಡುವ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪ್ರೊಡಕ್ಷನ್ ಹೌಸ್‌ನ ಸಿಬ್ಬಂದಿಯೊಬ್ಬರು ಪೂಜಾ ಎಂಟರ್‌ಟೈನ್‌ಮೆಂಟ್‌ಗೆ ಪಾವತಿ ಮಾಡಿಲ್ಲ ಎಂದು ಆರೋಪಿಸಿದ ಒಂದು ದಿನದ ಅನಂತರ ಈ ಮಾಹಿತಿ ಹೊರಬಿದ್ದಿದೆ.

Continue Reading

ಬಾಲಿವುಡ್

Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

Sonakshi Sinha: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಭಾನುವಾರ (ಜೂನ್‌ 23) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಬ್ಬರೂ ಮದುವೆಯಾಗಿದ್ದು, ಶೀಘ್ರದಲ್ಲೇ ಮುಂಬೈನಲ್ಲಿ ಅದ್ಧೂರಿ ರಿಸೆಪ್ಶನ್‌ ಏರ್ಪಾಡು ಮಾಡಲಿದ್ದಾರೆ. ಬಾಲಿವುಡ್‌ ನಟ-ನಟಿಯರು ರಿಸೆಪ್ಶನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ದೀರ್ಘಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡೂ ಕುಟುಂಬಗಳ ಆಪ್ತರು, ಗೆಳೆಯರ ಸಮ್ಮುಖದಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಮದುವೆಯಾಗಿದ್ದು, ಮದುವೆಯ ಫೋಟೊಗಳನ್ನು ಸೋನಾಕ್ಷಿ ಸಿನ್ಹಾ ಅವರೇ ಹಂಚಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ ಮದುವೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸೋನಾಕ್ಷಿ ಸಿನ್ಹಾ ಅವರು ಫೋಟೊಗಳನ್ನು ಹಂಚಿಕೊಂಡಿರುವ ಜತೆಗೆ ಭಾವನಾತ್ಮಕವಾಗಿ ಪೋಸ್ಟ್‌ ಮಾಡಿದ್ದಾರೆ. “ಏಳು ವರ್ಷದ ಹಿಂದಿನ ಇದೇ ದಿನ ಅಂದರೆ, 2017ರ ಜೂನ್‌ 23ರಂದು ನಮ್ಮಿಬ್ಬರ ಕಣ್ಣುಗಳು ಮೊದಲ ಬಾರಿ ಸಂಧಿಸಿದವು. ಆ ಕಣ್ಣುಗಳ ನೋಟದಲ್ಲಿಯೇ ನಾವು ನಿಜವಾದ ಪ್ರೇಮವನ್ನು ಕಂಡೆವು ಹಾಗೂ ಆ ಪ್ರೀತಿ ತುಂಬಿದ ನೋಟವನ್ನು ಜೀವನಪೂರ್ತಿ ಸವಿಯಲು ನಿರ್ಧರಿಸಿದೆವು. ಸವಾಲುಗಳನ್ನು ಎದುರಿಸಿ, ದೇವರು ಹಾಗೂ ಕುಟುಂಬಸ್ಥರ ಆಶೀರ್ವಾದದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ. ಮುಂದಿನ ದಿನಗಳಲ್ಲೂ ಪ್ರೀತಿಯು ನಮ್ಮ ಜೀವನವನ್ನು ಇನ್ನಷ್ಟು ಸುಂದರಗೊಳಿಸುತ್ತದೆ ಎಂಬ ನಂಬಿಕೆ ಇದೆ” ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ಶುಭ ಕೋರಲು ಆಗದೆ ಅಭಿಮಾನಿಗಳಿಗೆ ನಿರಾಸೆ

ಕ್ರೀಮ್‌ ಬಣ್ಣದ ಸೀರೆಯಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಕುರ್ತಾದಲ್ಲಿ ಜಹೀರ್‌ ಇಕ್ಬಾಲ್‌ ಮಿಂಚಿದ್ದಾರೆ. ಸೋನಾಕ್ಷಿ ಅವರು ಜಹೀರ್‌ ಇಕ್ಬಾಲ್‌ ಅವರನ್ನು ತಬ್ಬಿಕೊಂಡರೆ, ಸೋನಾಕ್ಷಿ ಕೈಗೆ ಜಹೀರ್‌ ಸಿಹಿ ಮುತ್ತು ಕೊಟ್ಟಿದ್ದಾರೆ. ಆದರೆ, ಸೋನಾಕ್ಷಿ ಸಿನ್ಹಾ ಅವರು ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಹಂಚಿಕೊಂಡು, ಪೋಸ್ಟ್‌ಗೆ ಕಮೆಂಟ್‌ಗಳನ್ನು ಬ್ಲಾಕ್‌ ಮಾಡಿದ ಕಾರಣ ಅಭಿಮಾನಿಗಳಿಗೆ ಶುಭಾಶಯ ತಿಳಿಸಲು ಆಗಿಲ್ಲ. ಇದರಿಂದಾಗಿ ಅಭಿಮಾನಿಗಳಿಗೆ ತುಸು ನಿರಾಸೆಯಾಗಿದೆ ಎಂದು ತಿಳಿದುಬಂದಿದೆ.

ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಹಿಂದು ಅಥವಾ ಇಸ್ಲಾಂ ಸಂಪ್ರದಾಯದಂತೆ ಮದುವೆಯಾಗದೆ, ಜಹೀರ್‌ ಅವರ ತಂದೆ ಇಕ್ಬಾಲ್‌ ರತಾನ್ಸಿ ಅವರು ಇದಕ್ಕೂ ಮೊದಲು ಹೇಳಿದಂತೆ ‘ನಾಗರಿಕʼ ಸಂಪ್ರದಾಯದಂತೆ ಅಂದರೆ, ಸಾಮಾನ್ಯವಾಗಿ ಮದುವೆಯಾಗಿದ್ದಾರೆ. ಇಬ್ಬರೂ ತಮ್ಮ ವಿವಾಹವನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು, ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಮುನಿಸು ಮರೆತು, ನವದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಕಳೆದ ಎರಡು ವಾರದ ಹಿಂದಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತ್ತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡಿದ್ದರು. ಆದರೆ, ಅವರು ಮುನಿಸು ಮರೆತು ಮದುವೆಗೆ ಹಾಜರಾಗಿ, ಆಶೀರ್ವಾದ ಮಾಡಿದ್ದಾರೆ.

ಇದನ್ನೂ ಓದಿ: Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

Continue Reading
Advertisement
karnataka Weather Forecast
ಮಳೆ10 seconds ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Artificial Colours Ban
ಪ್ರಮುಖ ಸುದ್ದಿ6 mins ago

Artificial Colours Ban: ರಾಜ್ಯದಲ್ಲಿ ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Divorce
ದೇಶ36 mins ago

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Crush Saree Fashion
ಫ್ಯಾಷನ್40 mins ago

Crush Saree Fashion: ಸೆಲೆಬ್ರೆಟಿ ಲುಕ್‌ ನೀಡುವ ಡಿಸೈನರ್‌ ಕ್ರಶ್‌ ಸೀರೆಗಳು

ಕರ್ನಾಟಕ44 mins ago

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

union Minister Pralhad Joshi took oath in the name of God in his mother tongue
ಕರ್ನಾಟಕ53 mins ago

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Divisional Level Progress Review Meeting of Revenue Department by Minister Krishna Byregowda
ಕಲಬುರಗಿ59 mins ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Hardeep Singh Nijjar
ದೇಶ1 hour ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sleep After Lunch
ಲೈಫ್‌ಸ್ಟೈಲ್1 hour ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ1 hour ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ10 seconds ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌