Sexual Harrassment | ಲೈಂಗಿಕ ಕಿರುಕುಳ ನೀಡಲು ಬಂದ ಶಿಕ್ಷಕನ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿನಿಯರು! - Vistara News

ಕರ್ನಾಟಕ

Sexual Harrassment | ಲೈಂಗಿಕ ಕಿರುಕುಳ ನೀಡಲು ಬಂದ ಶಿಕ್ಷಕನ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿನಿಯರು!

ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೋಕ್ಸೊ ಪ್ರಕರಣವನ್ನು (Sexual Harrassment) ದಾಖಲಿಸಿದ್ದಾರೆ. ಬಾಲಕಿಯರ ಧೈರ್ಯಕ್ಕೆ ಡಿಡಿಪಿಐ ಜವರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sexual Harrassment in mandya hostel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಲೈಂಗಿಕ ಕಿರುಕುಳ (Sexual Harrassment) ನೀಡಲು ಬಂದ ಶಿಕ್ಷಕನ ಅಟ್ಟಾಡಿಸಿ ವಿದ್ಯಾರ್ಥಿನಿಯರು ಹೊಡೆದಿರುವ ಘಟನೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿರುವ ರಾಣಿಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.

Sexual Harrassment
ಬಂಧಿತ ಶಿಕ್ಷಕ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಕಟ್ಟೇರಿ ಗ್ರಾಮದ ಪ್ರೌಢಶಾಲೆ ಹಾಗೂ ಹೆಣ್ಣು ಮಕ್ಕಳ ವಸತಿ ಶಾಲೆಯ ಉಸ್ತುವಾರಿ ಚಿನ್ಮಯಾನಂದ ಬಂಧಿತ ಆರೋಪಿ ಶಿಕ್ಷಕ.

Sexual Harrassment
ಕೈನಲ್ಲಿ ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು

ಏನಿದು ಪ್ರಕರಣ?
ಬುಧವಾರ ತಡರಾತ್ರಿ ವಸತಿ ಶಾಲೆಗೆ ಬಂದ ಶಿಕ್ಷಕ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಜತೆಗೆ ಕೆಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಶಿಕ್ಷಕನ ವರ್ತನೆಗೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೆ, ಕೈಗೆ ಸಿಕ್ಕ ದೊಣ್ಣೆ, ಪೊರಕೆಯಿಂದ ಧರ್ಮದೇಟು ಕೊಟ್ಟಿದ್ದಾರೆ. ವಿದ್ಯಾರ್ಥಿನಿಯರ ಏಟು ತಪ್ಪಿಸಿಕೊಳ್ಳಲು ಓಡಿ ಹೋಗಲು ಯತ್ನಿಸಿದ್ದಾಗ, ಹಾಸ್ಟೆಲ್‌ ಗೇಟ್ ಬಂದ್ ಮಾಡಿ ಮತ್ತಷ್ಟು ಥಳಿಸಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವೇಳೆ ವಿದ್ಯಾರ್ಥಿನಿಯರು ಚೀರಾಟ, ಕೂಗಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕಾಗಮಿಸಿದ್ದಾರೆ. ಬಳಿಕ ಪೊಲೀಸರಿಗೆ ಫೋನ್ ಮಾಡಿ ಕಿರುಕುಳ ನೀಡಿದ ಶಿಕ್ಷಕನನ್ನು ಖಾಕಿಗೆ ಒಪ್ಪಿಸಿದ್ದಾರೆ.

ಸ್ಥಳೀಯರ ಆಕ್ರೋಶ
ಈ ಶಿಕ್ಷಕ ಹಾಸ್ಟೆಲ್‌ ಉಸ್ತುವಾರಿಯಾಗಿರಬಹುದು. ಸಂಜೆ ೫ ಗಂಟೆವರೆಗೆ ಮಾತ್ರ ಹಾಸ್ಟೆಲ್‌ನಲ್ಲಿ ಆತ ನಿರ್ವಹಣೆ ಮಾಡಬೇಕು ಎಂಬ ನಿಯಮವಿದೆ. ಆದರೆ, ರಾತ್ರಿ ೧೧ ಗಂಟೆ, ೧೨ ಗಂಟೆಯಾದರೂ ಆತ ಆಗಾಗ ಹಾಸ್ಟೆಲ್‌ಗೆ ಭೇಟಿ ನೀಡುತ್ತಲೇ ಇರುತ್ತಿದ್ದ. ನಾವು ಸ್ಥಳೀಯರು ಪ್ರಶ್ನೆ ಮಾಡಿದರೆ, ಯಾವುದೋ ದಾಖಲೆಗಾಗಿ ಬಂದಿದ್ದೇನೆ ಎಂಬಿತ್ಯಾದಿ ಸಬೂಬು ನೀಡುತ್ತಿದ್ದ. ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ. ಬುಧವಾರ ರಾತ್ರಿ ವಿದ್ಯಾರ್ಥಿನಿಯರ ಕೂಗಾಟ ಕೇಳಿ ನಾವೆಲ್ಲ ಬಂದಾಗ ಈತನ ನಿಜಬಣ್ಣ ಬಯಲಾಗಿದೆ ಎಂದು ಹಾಸ್ಟೆಲ್‌ ಪಕ್ಕದ ನಿವಾಸಿ ವೆಂಕಟೇಶ್‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Sexual Harrassment
ಶಿಕ್ಷಕನಿಗೆ ಚಳಿ ಬಿಡಿಸಿದ ವಿದ್ಯಾರ್ಥಿನಿಯರು

ಬಾಲಕಿರ ಧೈರ್ಯಕ್ಕೆ ಡಿಡಿಪಿಐ ಜವರೇಗೌಡ ಮೆಚ್ಚುಗೆ
ಈ ಸಂಬಂಧ ಕಟ್ಟೇರಿಯಲ್ಲಿ ಪ್ರತಿಕ್ರಿಯಿಸಿರುವ ಡಿಡಿಪಿಐ ಜವರೇಗೌಡ, ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಬಾಲಕಿಯರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಘಟನೆ‌ ಕುರಿತು ಸಮಿತಿ ರಚಿಸಲಾಗುವುದು. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಜತೆಗೆ ಇಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುವುದು. ಆರೋಪಿ ಶಿಕ್ಷಕನನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.

ಹಾಸ್ಪೆಲ್‌ಗೆ ಭೇಟಿ ನೀಡಿದ ಶಾಸಕ ಸಿ.ಎಸ್‌.ಪುಟ್ಟರಾಜು
ಕಟ್ಟೇರಿ ಗ್ರಾಮದ ಆರ್‌ಎಂಎಸ್‌ವಿ ವಿದ್ಯಾರ್ಥಿನಿಲಯಕ್ಕೆ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರಿಂದ ಘಟನೆ ಬಗ್ಗೆ ಮಾಹಿತಿ ಪಡೆದ ಶಾಸಕ ಸಿ.ಎಸ್.ಪುಟ್ಟರಾಜು, ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿನಿಯರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣ ಮತ್ತೆ ನಡೆಯಬಾರದು. ಗುರುವಾರ ನಡೆಯುವ ಕೆಡಿಪಿ ಸಭೆಯಲ್ಲಿ ಹಾಗೂ ಸದನದಲ್ಲಿ ಈ ವಿಚಾರ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ | ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಶಿಕ್ಷಕ ವಶಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಆರ್‌. ಶ್ರೀಧರ್ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬಿ. ಎನ್. ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.

VISTARANEWS.COM


on

Press Club of Bangalore
Koo

ಬೆಂಗಳೂರು: 2024-25ನೇ ಸಾಲಿನ ʼಪ್ರೆಸ್ ಕ್ಲಬ್ ಆಫ್ ಬೆಂಗಳೂರುʼ (Press Club of Bangalore) ಚುನಾವಣೆಯಲ್ಲಿ ಹಿರಿಯ ಪತ್ರಕರ್ತ ಆರ್‌. ಶ್ರೀಧರ್ ಅವರು ಮರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬಿ. ಎನ್. ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ. ʼಪ್ರೆಸ್ ಕ್ಲಬ್ ಆಫ್ ಬೆಂಗಳೂರುʼಗೆ ಭಾನುವಾರ ಚುನಾವಣೆ ನಡೆದಿದ್ದು, ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗುವಲ್ಲಿ ಆರ್‌. ಶ್ರೀಧರ್ ಸಫಲರಾದರು.

ಅಧ್ಯಕ್ಷ ಸ್ಥಾನಕ್ಕಾಗಿ ಧ್ಯಾನ್ ಪೂಣಚ್ಚ, ಆರ್. ಶ್ರೀಧರ್ ಹಾಗೂ ಸುಭಾಷ್ ಹೂಗಾರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಅತಿ ಹೆಚ್ಚು ಮತದಾರರ ಬೆಂಬಲದಿಂದ ಆರ್. ಶ್ರೀಧ‌ರ್ ಅವರು ಅಧ್ಯಕ್ಷರಾಗಿ ಮರು ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಮಹಾಂತೇಶ್ ಹೀರೇಮರ್, ಬಿ.ಎನ್.ಮೋಹನ್ ಕುಮಾರ್ ಹಾಗೂ ವಿಶ್ವನಾಥ್ ಭಾಗವತ್ ಕಣದಲ್ಲಿದ್ದರು. ಅಂತಿಮವಾಗಿ ಮೋಹನ್ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೊಡ್ಡ ಬೊಮ್ಮಯ್ಯ, ಟಿ. ಮಂಜುನಾಥ್, ಎಂ.ಡಿ ಶಿವಕುಮಾರ್ ಬೆಳ್ಳಿತಟ್ಟೆ ಹಾಗೂ ವೈ.ಎಸ್.ಎಲ್. ಸ್ವಾಮಿ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ಶಿವಕುಮಾರ್ ಬೆಳ್ಳಿತಟ್ಟೆಯವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಪಟ್ಟಿ

1.ಅಧ್ಯಕ್ಷ – ಹಿರಿಯ ಪತ್ರಕರ್ತ ಆರ್. ಶ್ರೀಧರ್ ಶ್ರೀಧರ್
2.ಉಪಾಧ್ಯಕ್ಷ- ಬಿ.ಎನ್.ಮೋಹನ್ ಕುಮಾರ್
3.ಪ್ರಧಾನ ಕಾರ್ಯದರ್ಶಿ – ಎಂ.ಡಿ.ಶಿವಕುಮಾರ್ ಬೆಳ್ಳಿತಟ್ಟೆ
4.ಕಾರ್ಯದರ್ಶಿ – ಜಿ.ವೈ. ಮಂಜುನಾಥ್
5.ಜಂಟಿ ಕಾರ್ಯದರ್ಶಿ- ಧರಣೀಶ್ ಬಿ.ಎನ್
6.ಖಜಾಂಚಿ- ಜಿ.ಗಣೇಶ್

ಕಾರ್ಯಕಾರಿ ಸಮಿತಿ ಸದಸ್ಯರು

ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಗೆ ಸ್ಪರ್ಧಿಸಿದ್ದ 19 ಅಭ್ಯರ್ಥಿಗಳ ಈ ಕೆಳಕಂಡ ಪೈಕಿ 6 ಸದಸ್ಯರು ಗೆಲುವು ಕಂಡಿದ್ದಾರೆ.

1.ರೋಹಿಣಿ ವಿ. ಅಡಿಗ
2.ಮಂಜುನಾಥ್ ಸಿ.ಆರ್.
3.ಮುಮ್ತಾಜ್ ಅಲೀಂ ಜಿ
4.ಯಾಸಿರ್ ಮುಶ್ತಾಕ್
5.ಶರಣಬಸಪ್ಪ ಎ.ಎಚ್.
6.ಶಿವಣ್ಣ

ಕಾರ್ಯಕಾರಿ ಸಮಿತಿ ಮಹಿಳಾ ಸದಸ್ಯರು

ಮಿನಿ ತೇಜಸ್ವಿ: ಪ್ರೆಸ್ ಕ್ಲಬ್ ಮಹಿಳಾ ಮೀಸಲು ವಿಭಾಗದಲ್ಲಿ ಸ್ಪರ್ಧಿಸಿದ್ದ ಇಬ್ಬರ ಪೈಕಿ ಮಿನಿ ತೇಜಸ್ವಿ ಗೆಲುವು ಪಡೆದು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಯಾರಿಗೆಷ್ಟು ಮತ?

ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆಗೆ ಬೆಳಗ್ಗೆ 9 ರಿಂದ 4ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯಿತು. ಒಟ್ಟು 1040 ಮತದಾರರ ಪೈಕಿ ಈ ಬಾರಿ 767 ಸದಸ್ಯರು ಮತ ಚಲಾಯಿಸಿದರು.

ಆರ್.ಶ್ರೀಧರ್ – 404
ಬಿ.ಎನ್.ಮೋಹನ್ ಕುಮಾರ್- 417
ಎಂ.ಡಿ.ಶಿವಕುಮಾರ್ ಬೆಳ್ಳಿತಟ್ಟೆ – 336
ಗಣೇಶ್.ಜಿ. – 556
ಮಂಜುನಾಥ್ ಜಿ.ವೈ.- 288
ಧರಣೀಶ್ ಬಿ.ಎನ್.- 195
ಕಾರ್ಯಕಾರಿ ಸಮಿತಿ ಮಹಿಳಾ ಮೀಸಲು ಸದಸ್ಯೆ – ಮಿನಿ ತೇಜಸ್ವಿ – 491
ಮಂಜುನಾಥ್ ಸಿ.ಆರ್ – 281
ರೋಹಿಣಿ ವಿ ಅಡಿಗ – 306
ಯಾಸಿರ್ ಮುಶ್ತಾಕ್ – 259
ಮುಮ್ತಾಜ್ ಅಲೀಂ ಜಿ – 272
ಶಿವಣ್ಣ – 234
ಶರಣಬಸಪ್ಪ ಎ.ಎಚ್. – 258

Paris Olympics 2024: ಒಲಿಂಪಿಕ್ಸ್‌ಗೆ ಭಾರತದ ಎಲ್ಲ ಕ್ರೀಡಾಪಟುಗಳು ಫಿಟ್‌ ಎಂದ ಐಒಎ

Continue Reading

ಮಳೆ

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಕಾರವಾರ: ಕರಾವಳಿ ಭಾಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಜು.8ಕ್ಕೂ ವ್ಯಾಪಕ ಮಳೆಯಾಗುವ (Heavy rain Alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉತ್ತರಕನ್ನಡದಲ್ಲಿ ನಾಳೆಯೂ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಮಳೆಗೆ ಕುಸಿದು ಬಿದ್ದ ಮನೆ ಗೋಡೆ

ಭಾರೀ ಗಾಳಿ ಮಳೆಗೆ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಕುಮಟಾ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡದಲ್ಲಿ ಘಟನೆ ನಡೆದಿದೆ. ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಕ್ಕದ ವಿಷ್ಣು ಹಮ್ಮು ಮುಕ್ರಿ ಅವರ ಮನೆಯ ಗೋಡೆಯು ಕುಸಿದು ಹಾನಿಯಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿದೆ. ಮನೆ ಕಳೆದುಕೊಂಡು ರಘು, ವಿಷ್ಣು ಕುಟುಂಬಸ್ಥರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Bengaluru’s Second Airport: ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಎಲ್ಲಿ‌ ನಿರ್ಮಿಸಬೇಕು ಎನ್ನುವ ಮಾತುಕತೆ ನಡೆಯತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

Bengaluru's Second Airport
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಸಮೀಪದ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ತಮಿಳುನಾಡು ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ (Bengaluru’s Second Airport) ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸ್ಥಳ ಹುಡುಕಾಟ ಚುರುಕುಗೊಳಿಸಿದೆ. ಈ ಸಂಬಂಧ ಸಚಿವ ಎಂ.ಬಿ.ಪಾಟೀಲ್‌ ಅವರು, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಸಭೆ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಪ್ರತಿಕ್ರಿಯಿಸಿರುವ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರು, ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದನ್ನು ಎಲ್ಲಿ‌ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜತೆ ವಿಚಾರ ವಿನಿಮಯ ನಡೆಸಿ, ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ಆದರೆ, ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.

ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ದಾಬಸ್‌ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ನುಡಿದರು.

ಮುಂಬೈ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ, ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು ಎಂದು ವಿವರಿಸಿದರು.

ಇದನ್ನೂ ಓದಿ | Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಏರ್ಪೋರ್ಟ್ ಕಟ್ಟುವುದಾಗಿ ಹೇಳುತ್ತಿದೆ. ಇದರ ಸಾಧಕಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದು ಪಾಟೀಲ್‌ ಹೇಳಿದ್ದಾರೆ.

Continue Reading

ವಿಜಯನಗರ

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Self Harming : ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಜಾರಿದ್ದ ಆಟೋ ಚಾಲಕನೊಬ್ಬ ಮನನೊಂದು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದೆ.

VISTARANEWS.COM


on

By

Self harming
ಸಾಂದರ್ಭಿಕ ಚಿತ್ರss
Koo

ವಿಜಯನಗರ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ (Self Harming ) ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ.

ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್‌ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದರು.

Self harming

ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್‌ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವ ಡೆತ್‌ನೋಟ್‌ ಸಿಕ್ಕಿದೆ.

ಸದ್ಯ ಮೃತನ ತಮ್ಮನ ದೂರಿನ ಅನ್ವಯ ಕೊಟ್ಟೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಕೂಡ್ಲಿಗಿ ಶವಾಗಾರಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

ಮುಂಬೈ: ಪುಣೆ ಪೋರ್ಶ್‌ ಕಾರು ಹಿಟ್‌ ಆಂಡ್‌ ರನ್‌ ಕೇಸ್‌(Hit and Run Case) ಮಾಸುವ ಮುನ್ನವೇ ಮುಂಬೈನಲ್ಲೂ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ಮೀನು ತರಲೆಂದು ಮನೆಯಿಂದ ಹೊರಗೆ ಬಂದಿದ್ದ ದಂಪತಿಗೆ ಬಿಎಂಡಬ್ಲ್ಯೂ ಕಾರು(BMW Car) ಡಿಕ್ಕಿ ಹೊಡೆದಿದೆ. ಇನ್ನು ಕುಡಿದು ಕಾರು ಓಡಿಸಿದ ಚಾಲಕ ಘಟನೆ ಬಳಿಕ ಕಾರು ಸಮೇತ ಎಸ್ಕೇಪ್‌ ಆಗಿದ್ದಾನೆ. ಮುಂಬೈಯ ವರ್ಲಿಯಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ.

ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಶಿವಸೇನೆ ನಾಯಕನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌

ಇನ್ನು ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಕಾರನ್ನು ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಪಾಲ್ಗರ್‌ ಜಿಲ್ಲಾ ಉಪಾಧ್ಯಕ್ಷ ರಾಜೇಶ್‌ ಅವರ ಪುತ್ರನಿಂದ ಈ ಕೃತ್ಯ ನಡೆದಿದೆ ಎಂಬುದು ಬಯಲಾಗಿದೆ. ರಾಜೇಶ್‌ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾನೆ. ಮಿಹಿರ್‌ ಮತ್ತು ಆತನ ಕಾರಿನ ಚಾಲಕ ಕಾರಿನಲ್ಲಿದ್ದರು ಎನ್ನಲಾಗಿದೆ.

ಮಿಹಿರ್‌ ನಾಪತ್ತೆ, ಪೊಲೀಸರ ಹುಡುಕಾಟ

ಇನ್ನು ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಸಿಎಂ ಪ್ರತಿಕ್ರಿಯೆ

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Press Club of Bangalore
ಬೆಂಗಳೂರು8 mins ago

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Foods For Hormone Balance
ಆರೋಗ್ಯ10 mins ago

Foods For Hormone Balance: ಮಹಿಳೆಯರೇ, ಹಾರ್ಮೋನಿನ ಸಮತೋಲನಕ್ಕಾಗಿ ಈ ಆಹಾರಗಳನ್ನು ಮರೆಯದೇ ಸೇವಿಸಿ

ZIM vs IND
ಪ್ರಮುಖ ಸುದ್ದಿ12 mins ago

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

Viral Video
ವೈರಲ್ ನ್ಯೂಸ್19 mins ago

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

Mobile Tariffs
ದೇಶ25 mins ago

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

karnataka weather Forecast
ಮಳೆ26 mins ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Puri Jagannath Yatra
ದೇಶ39 mins ago

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Rahul Dravid
ಪ್ರಮುಖ ಸುದ್ದಿ44 mins ago

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Abhishek Sharma
ಪ್ರಮುಖ ಸುದ್ದಿ1 hour ago

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Bengaluru's Second Airport
ಕರ್ನಾಟಕ1 hour ago

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ26 mins ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ3 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ4 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ14 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌