ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ | ವಿಸ್ತಾರ ನ್ಯೂಸ್‌ ಅಭಿಯಾನಕ್ಕೆ ಕುಪ್ಪಗಡ್ಡೆಯಲ್ಲಿ ಅದ್ಧೂರಿ ಆರಂಭ; ಕಳೆಗಟ್ಟಿದ ಮೆರವಣಿಗೆ - Vistara News

ಕರ್ನಾಟಕ

ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ | ವಿಸ್ತಾರ ನ್ಯೂಸ್‌ ಅಭಿಯಾನಕ್ಕೆ ಕುಪ್ಪಗಡ್ಡೆಯಲ್ಲಿ ಅದ್ಧೂರಿ ಆರಂಭ; ಕಳೆಗಟ್ಟಿದ ಮೆರವಣಿಗೆ

ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ವಿಸ್ತಾರ ನ್ಯೂಸ್‌ ಅಭಿಯಾನಕ್ಕೆ ಶಿವಮೊಗ್ಗ ಜಿಲ್ಲೆಯ‌ ಸೊರಬ ತಾಲೂಕಿನ ಕುಪ್ಪಗಡ್ಡೆಯ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆ ಸಾಕ್ಷಿಯಾಗಲಿದ್ದು, ಕಾರ್ಯಕ್ರಮ ವಿಧ್ಯುಕ್ತವಾಗಿ ಆರಂಭವಾಗಿದೆ.

VISTARANEWS.COM


on

soraba nammura shale ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ವಿಸ್ತಾರ ನ್ಯೂಸ್‌ ಅಭಿಯಾನ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು. ಇದು ಸರ್ಕಾರದಿಂದಷ್ಟೆ ಸಾಧ್ಯವಿಲ್ಲ. ಮಾಧ್ಯಮಗಳು, ಸಾರ್ವಜನಿಕರ ಸಹಿತ ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಾಧ್ಯ ಎಂಬ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್‌ ರೂಪಿಸಿರುವ “ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆʼʼ ಅಭಿಯಾನಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಭಾನುವಾರ ಅದ್ಧೂರಿ ಶುಭಾರಂಭ ಸಿಕ್ಕಿದೆ. ಇಡೀ ಊರಿಗೆ ಊರೇ ಸಂಭ್ರಮದಲ್ಲಿ ಭಾಗಿಯಾಗಿದೆ. ಶಾಲೆಯ ಮಕ್ಕಳು ಸಮವಸ್ತ್ರ ಧರಿಸಿ ಕೈಯಲ್ಲಿ ಪ್ಲೆಕಾರ್ಡ್‌ ಹಿಡಿದು ಸಾಗಿದರೆ, ಪೂರ್ಣಕುಂಭ ಕಲಶ ಹೊತ್ತ ಮಹಿಳೆಯರು ಮೆರವಣಿಗೆಯ ಮೆರುಗು ಹೆಚ್ಚಿಸಿದರು.

soraba nammura shale ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ವಿಸ್ತಾರ ನ್ಯೂಸ್‌ ಅಭಿಯಾನ

ಕುಪ್ಪಗಡ್ಡೆಯಲ್ಲಿ ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಓಣಿಗಳ ಸಹಿತ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚಾರ ಸಾಗಿದ್ದು, ಮಕ್ಕಳಾದಿಯಾಗಿ ಗ್ರಾಮಸ್ಥರು ಭಾಗಿಯಾಗುವ ಮೂಲಕ ಗಮನ ಸೆಳೆದರು. ಡೊಳ್ಳು ಕುಣಿತವೂ ಮೆರವಣಿಗೆಯಲ್ಲಿದ್ದು, ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.

soraba nammura shale ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ವಿಸ್ತಾರ ನ್ಯೂಸ್‌ ಅಭಿಯಾನ

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ್ ಮತ್ತು ಗ್ರಾಮಸ್ಥರು ಈ ಶಾಲೆಯನ್ನು ದತ್ತು ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ (ಡಿ. ೧೮) ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶಾಸಕ ಪಿ.ರಾಜೀವ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಇದನ್ನೂ ಓದಿ | ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ | ವಿಸ್ತಾರ ನ್ಯೂಸ್‌ ಅಭಿಯಾನದಡಿ ಇಂದು ಸೊರಬದ ಕುಪ್ಪಗಡ್ಡೆಯ ಸರ್ಕಾರಿ ಶಾಲೆ ದತ್ತು ಸಮಾರಂಭ

soraba nammura shale ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ವಿಸ್ತಾರ ನ್ಯೂಸ್‌ ಅಭಿಯಾನ

ನಿವೃತ್ತ ಶಿಕ್ಷಕರು, ಹಳೇ ವಿದ್ಯಾರ್ಥಿಗಳ ಜತೆ ಸಂವಾದ
ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ, ಸಿಇಒ ಹರಿಪ್ರಕಾಶ್ ಕೋಣೆಮನೆ, ಶಾಸಕ ಪಿ. ರಾಜೀವ್‌, ಬಾಲ ಉತ್ಸವ್ ಮುಖ್ಯಸ್ಥ ರಮೇಶ್ ಬಾಲಸುಂದರಮ್ ಸೇರಿ ಹಲವರು ಭಾಗಿಯಾಗಿದ್ದಾರೆ. ಇದೇ ವೇಳೆ ಕುಪ್ಪಗಡ್ಡೆ ಶಾಲೆಯ ನಿವೃತ್ತ ಶಿಕ್ಷಕರು ಹಾಗೂ ಹಳೇ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು.

soraba nammura shale ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ ವಿಸ್ತಾರ ನ್ಯೂಸ್‌ ಅಭಿಯಾನ

ಶಿಕ್ಷಣ ಸಚಿವರಿಂದ ಉದ್ಘಾಟನೆ
ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ಉದ್ಘಾಟಿಸಲಿದ್ದಾರೆ. ಸೊರಬ ವಿಧಾನಸಭೆ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್‌ ಮಾಜಿ ಸದಸ್ಯ, ಪಿಇಎಸ್‌ ವಿವಿ ಕುಲಾಧಿಪತಿ, ಕರ್ನಾಟಕ ಸರ್ಕಾರದ ಶೈಕ್ಷಣಿಕ ಸುಧಾರಣೆಗಳ ಸಲಹೆಗಾರ ಪ್ರೊ. ಎಂ.ಆರ್‌. ದೊರೆಸ್ವಾಮಿ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಿವಮೊಗ್ಗ ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ, ಬಾಲ ಉತ್ಸವ ಮುಖ್ಯಸ್ಥರಾದ ರಮೇಶ್‌ ಬಾಲಸುಂದರಮ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಕುಪ್ಪಗುಡ್ಡೆ ಗ್ರಾ.ಪಂ ಅಧ್ಯಕ್ಷರಾದ ವಿದ್ಯಾ, ಎಸ್‌ಡಿಎಂಸಿ ಅಧ್ಯಕ್ಷರಾದ ದಯಾನಂದ ಶಾನಭಾಗ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಸ್ತಾರ ನ್ಯೂಸ್‌ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್‌.ವಿ. ಧರ್ಮೇಶ್‌, ನಿರ್ದೇಶಕರಾದ ಶ್ರೀನಿವಾಸ್‌ ಎಸ್‌. ಹೆಬ್ಬಾರ್‌ ಅವರು ಈ ಜನೋಪಯೋಗಿ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

೫ ಸಾವಿರ ಮಂದಿಗೆ ಅಡುಗೆ ವ್ಯವಸ್ಥೆ
ಕಾರ್ಯಕ್ರಮಕ್ಕೆ ಭವ್ಯವಾದ ವೇದಿಕೆ ಸಿದ್ಧವಾಗಿದ್ದು, ಎರಡು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ವತಃ ಗ್ರಾಮಸ್ಥರೇ ಐದು ಸಾವಿರ ಮಂದಿಗೆ ಅಡುಗೆ ವ್ಯವಸ್ಥೆ ಮಾಡಿದ್ದಾರೆ. ತಾಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕುಪ್ಪಗಡ್ಡೆ ಗ್ರಾಮದಲ್ಲಿ ಇದೀಗ ಹಬ್ಬದ ವಾತಾವರಣ ಮೂಡಿದೆ.

ಏನಿದು ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ?
ಇದು ಸರ್ಕಾರಿ ಶಾಲೆಗಳ ಸುಧಾರಣೆಗೆ ವಿಸ್ತಾರ ನ್ಯೂಸ್‌ ಆರಂಭ ಮಾಡಿರುವ ಬಹುದೊಡ್ಡ ಅಭಿಯಾನ. ಶಿಕ್ಷಣದ ಮಹತ್ವವನ್ನು ಅರಿತಿರುವ ವಿಸ್ತಾರ ನ್ಯೂಸ್‌, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂಬ ಹಂಬಲದಿಂದ ಬಾಲ ಉತ್ಸವ ಎಂಬ ಎನ್‌ಜಿಒ ಜತೆಗೂಡಿ ಈ ಅಭಿಯಾನ ರೂಪಿಸಿದೆ.

ಇದನ್ನೂ ಓದಿ | Grama vastavya | ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿದ ಸಚಿವ ಅಶೋಕ್;‌ ಮಕ್ಕಳೊಂದಿಗೆ ಗಿಡ ನೆಟ್ಟರು, ಗ್ರಾಮ ಸಭೆ ನಡೆಸಿದರು

ಸರ್ಕಾರಿ ಶಾಲೆಗಳೆಂದರೆ ಸಾರ್ವಜನಿಕರ ಶಾಲೆಗಳು. ಇವುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ನಮ್ಮ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿನ ಪ್ರತಿ ಸರ್ಕಾರಿ ಶಾಲೆಯೂ ಅತ್ಯುತ್ತಮ ಶಿಕ್ಷಣ ಒದಗಿಸುವ ಶಾಲೆಯಾಗಬೇಕು. ಪ್ರತಿ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕು ಎಂಬುದು ನಮ್ಮ ಉದ್ದೇಶ. ಹಾಗಾಗಿ ಶಾಲೆ ದತ್ತು ಪಡೆಯುವುದೂ ಸೇರಿದಂತೆ ಸರ್ಕಾರದ ಜತೆ ಸಮಾಜವನ್ನು ಬೆಸೆಯುವ ಈ ಮಹತ್ಕಾರ್ಯವನ್ನು ದಾನಿಗಳ ನೆರವಿನೊಂದಿಗೆ ಮಾಡಲಾಗುತ್ತಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಪ್ಪಗಡ್ಡೆ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾದ ಕುಪ್ಪಗಡ್ಡೆ ಗ್ರಾಮವು ʼಪುಷ್ಪಗಡ್ಡೆʼ ಎಂಬ ಪೌರಾಣಿಕ ಹೆಸರನ್ನು ಹೊಂದಿದೆ. ಈ ಗ್ರಾಮ 650ಕ್ಕಿಂತ ಹೆಚ್ಚು ಕುಟುಂಬಗಳನ್ನು ಹೊಂದಿದ್ದು, ಐತಿಹಾಸಿಕ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯದಿಂದ ಪ್ರಖ್ಯಾತಿ ಪಡೆದಿದೆ. ಬಸವೇಶ್ವರ ಹಾಗೂ ಮಾರಿಕಾಂಬ ಗ್ರಾಮ ದೇವತೆಗಳ ದೇವಾಲಯಗಳು ಇದ್ದು, ಸುತ್ತಮುತ್ತಲಿನ ಗ್ರಾಮಗಳ ಸಾಕಷ್ಟು ಭಕ್ತರನ್ನು ಹೊಂದಿದೆ.

ಈ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1939-40ರಲ್ಲಿ ಚಿಕ್ಕ ದೇವಸ್ಥಾನವೊಂದರಲ್ಲಿ ಶಾಲೆ ಪ್ರಾರಂಭವಾಯಿತು. ನಂತರ ಅನೇಕ ಏಳು-ಬೀಳುಗಳನ್ನು ಕಂಡ ಈ ಶಾಲೆಯು ಈಗ ವ್ಯವಸ್ಥಿತ ಕಟ್ಟಡ ಹೊಂದಿದೆ. ಇದು ತಾಲೂಕಿನ ಮಾದರಿ ಶಾಲೆಯಾಗಿದೆ. 2.04 ಎಕರೆ ವಿಸ್ತೀರ್ಣದ ಜಾಗವನ್ನು ಹೊಂದಿದೆ.

ಕುಪ್ಪಗಡ್ಡೆ ಗ್ರಾಮ ಪಂಚಾಯಿತಿಯ ಏಕೈಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಾಗಿದ್ದು, ಸುತ್ತಮುತ್ತಲ ಗ್ರಾಮದ ನೂರಾರು ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಈ ಶಾಲೆಗೆ ಬರುತ್ತಾರೆ. ಕ್ಲಸ್ಟರ್‌ ಕೇಂದ್ರವನ್ನೂ ಈ ಶಾಲೆ ಹೊಂದಿರುತ್ತದೆ. ಶಾಲೆಯಲ್ಲಿ ಮುಖ್ಯ ಶಿಕ್ಷಕರು ಸೇರಿದಂತೆ 8 ಹುದ್ದೆಗಳ ಮಂಜೂರಾತಿ ಇದ್ದು, 7 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲೆಯಲ್ಲಿ 1ರಿಂದ 8ನೇ ತರಗತಿಯವರೆಗೆ ಕನ್ನಡ ಮಾಧ್ಯಮ ಹಾಗೂ 1ರಿಂದ 3ನೇ ತರಗತಿಯವರೆಗೆ ಇಂಗ್ಲೀಷ್ ಮಾಧ್ಯಮದ ಒಟ್ಟು 11 ತರಗತಿಗಳಿವೆ. 217 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯು ಪ್ರತಿವರ್ಷ ಕ್ರೀಡೆ ಹಾಗೂ ಇತರೆ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರುತಿದ್ದು, ಕಳೆದ ಸಾಲಿನಲ್ಲಿ ಈ ಶಾಲೆಯ ವಿದ್ಯಾರ್ಥಿ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ರಾಜ್ಯಮಟ್ಟದ ಯಂಗ್‌ ಸೈನ್ಸ್‌ ಮಾಡೆಲ್ ಇನ್ಪೈಯರ್‌ ಅವಾರ್ಡ್ ಪಡೆದಿದ್ದಾನೆ. ಈ ವರ್ಷದಲ್ಲೇ ಅಥ್ಲೆಟಿಕ್ಸ್ ವಿಭಾಗ ಕ್ರೀಡಾಕೂಟದಲ್ಲಿ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇದನ್ನೂ ಓದಿ | ಎಲೆಕ್ಷನ್‌ ಹವಾ | ಜಗಳೂರು | ಬಿಜೆಪಿಯ ರಾಮಚಂದ್ರಪ್ಪ ವಿರುದ್ಧ ಜಗಳಕ್ಕೆ ಯಾರು ನಿಲ್ಲುತ್ತಾರೆ ಎನ್ನುವುದೇ ಅಸ್ಪಷ್ಟ

ಇಷ್ಟೆಲ್ಲ ಸಾಧನೆಯ ನಡುವೆಯೂ ಶಾಲೆಯು ಅನೇಕ ಸಮಸ್ಯೆಗಳನ್ನು ಹೊಂದಿದೆ. ಹಳೆ ವಿದ್ಯಾರ್ಥಿಗಳು, ಎಸ್.ಡಿ.ಎಮ್.ಸಿ., ಸ್ಥಳೀಯ ಗ್ರಾಮ ಪಂಚಾಯಿತಿ, ಜನಪ್ರತಿನಿಧಿಗಳ ಸಹಕಾರದಿಂದ ಸಮಸ್ಯೆ ಪರಿಹರಿಸಿಕೊಳ್ಳಲು ಪ್ರಯತ್ನಿಸಿದೆ. ಮುಖ್ಯವಾಗಿ ಉತ್ತಮ ಕೊಠಡಿಗಳ ಕೊರತೆ ಹೊಂದಿದ್ದ ಈ ಶಾಲೆಯ ವಿದ್ಯಾರ್ಥಿ ಪ್ರಸ್ತುತ ಕುಡುಚಿ ಶಾಸಕರು, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆದ ಪಿ. ರಾಜೀವ್ ಅವರ ವೈಯಕ್ತಿಕ ಕಾಳಜಿಯಿಂದ ಸುಸಜ್ಜಿತ 9 ಕೊಠಡಿಗಳು ನಿರ್ಮಾಣವಾಗಿವೆ. ಹೆಚ್ಚುವರಿ 4 ಕೊಠಡಿಗಳ ನಿರ್ಮಾಣಕ್ಕೂ ಅವರು ಅನುಮತಿ ಕೊಡಿಸಿದ್ದಾರೆ. ಹೊಸ ಕಟ್ಟಡವು 17-06-2022ರಂದು ಸೊರಬದ ಶಾಸಕರಾದ ಕುಮಾರ್‌ ಬಂಗಾರಪ್ಪ ಅವರಿಂದ ಉದ್ಘಾಟನೆಗೊಂಡಿದೆ.

ಇದರ ನಡುವೆಯೂ ಶಾಲೆ ಅನೇಕ ಸಮಸ್ಯೆಗಳನ್ನು ಹೊಂದಿದೆ. ಶಾಲಾ ಆವರಣದ ಸುತ್ತ 300 ಅಡಿಗಳ ಭಾಗಶಃ ಕಾಂಪೌಂಡ್ ಇದ್ದು, ಇನ್ನೂ 800 ಅಡಿಗಳ ಕಾಂಪೌಂಡ್ ನಿರ್ಮಾಣದ ಅಗತ್ಯವಿದೆ.

ಹೊಸ ಕಟ್ಟಡಕ್ಕೆ ಹೊಂದಿಕೊಂಡಂತೆ ಸುಸಜ್ಜಿತ ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಶುದ್ಧ ಕುಡಿಯುವ ನೀರನ್ನು ಒಳಗೊಂಡ ವ್ಯವಸ್ಥಿತ ಭೋಜನಾಲಯದ ಅವಶ್ಯಕತೆ ಇದೆ. ಮಕ್ಕಳ ಹೆಚ್ಚಿನ ಓದಿಗೆ ಪ್ರತ್ಯೇಕ ಗ್ರಂಥಾಲಯ ಕೊಠಡಿ, ತಂತ್ರಜ್ಞಾನ ಕಲಿಕೆಗೆ ಸ್ಮಾರ್ಟ್‌ ಕ್ಲಾಸ್‌ ಹಾಗೂ ಪ್ರತ್ಯೇಕ ವಿಜ್ಞಾನ ಪ್ರಯೋಗಾಲಯದ ಕೊಠಡಿ ಬೇಕಾಗಿದೆ.
ಇಂಗ್ಲೀಷ್ ಮಾಧ್ಯಮದ ತರಗತಿಗಳ ಬೋಧನೆಗೆ ಪ್ರತ್ಯೇಕ ಶಿಕ್ಷಕರ ಅಗತ್ಯ ಇದೆ. ಶಾಲಾ ಆವರಣದಲ್ಲಿ ಕೈತೋಟ ನಿರ್ಮಾಣ, ಎಲ್ಲಾ ಮಕ್ಕಳಿಗೂ ಹೈಟೆಕ್ ಶೌಚಾಲಯ ನಿರ್ಮಾಣ ಹಾಗೂ ಪ್ರತ್ಯೇಕ ಕೊಳವೆಬಾವಿ ಅವಶ್ಯಕತೆ ಇದೆ. ಮಕ್ಕಳು ಆಟ ಆಡಲು ವಿಶಾಲ ಆಟದ ಮೈದಾನ, ಶಾಲಾ ದಾಖಲಾತಿ ನಿರ್ವಹಣೆಗೆ ಪ್ರತ್ಯೇಕ ಗುಮಾಸ್ತರ ಅವಶ್ಯಕತೆ ಇರುತ್ತದೆ.

ಈ ಎಲ್ಲ ಅಗತ್ಯತೆಗಳ ಪೂರೈಕೆಗಾಗಿ ಎಸ್.ಡಿ.ಎಂ.ಸಿ, ಹಳೆಯ ವಿದ್ಯಾರ್ಥಿಗಳು, ಸ್ಥಳೀಯ ಗ್ರಾಮ ಪಂಚಾಯಿತಿ, ಊರ ಗ್ರಾಮಸ್ಥರು ಹಾಗೂ ಸರ್ಕಾರದ ಎಲ್ಲ ಜನಪ್ರತಿನಿಧಿಗಳ ನೆರವನ್ನು ಶಾಲೆ ನಿರೀಕ್ಷಿಸಿದೆ.

ಇದನ್ನೂ ಓದಿ | Border Dispute | ಎಂಇಎಸ್‌ ಪುಂಡರನ್ನು ಹದ್ದುಬಸ್ತಿನಲ್ಲಿ ಇಡುವುದು ನಮಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Murder case : ಪ್ರತ್ಯೇಕ ಕಡೆಗಳಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಗಳಿಬ್ಬರ ಶವ (Dead body Found) ಪತ್ತೆಯಾಗಿದೆ. ಮೇಲ್ನೋಟಕ್ಕೆ ಕೊಲೆ ಮಾಡಿ ಬಳಿಕ ಶವ ಬಿಸಾಡಿ ಹೋಗಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ

VISTARANEWS.COM


on

By

Murder case
Koo

ಹುಬ್ಬಳ್ಳಿ/ಬೆಂಗಳೂರು: ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ‌ (Dead Body Found) ಪತ್ತೆಯಾಗಿದೆ. ಕೊಲೆ ಮಾಡಿ (Murder Case) ನಂತರ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 40 ವಯಸ್ಸಿನ ವ್ಯಕ್ತಿಯ ಶವವು ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಪಾದ ಕಟ್‌ ಮಾಡಿ, ರೈಲ್ವೆ ಬ್ರಿಡ್ಜ್‌ಗೆ ಶವ ಬಿಸಾಡಿದ ಹಂತಕರು

ಬೆಂಗಳೂರಿನ ಶ್ರೀರಾಂಪುರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಶ್ರೀರಾಂಪುರ ರೈಲ್ವೆ ಬ್ರಿಡ್ಜ್ ಬಳಿ ಶವ ಎಸೆದು ಹೋಗಿದ್ದಾರೆ. ಕ್ರಾಸ್ ಪೆಂಡೆಂಟ್ ಧರಿಸಿರುವ ಸುಮಾರು 35 ವರ್ಷದ ವ್ಯಕ್ತಿ ಪಾದ ಕಟ್ ಮಾಡಿ, ಕುತ್ತಿಗೆಗೆ ಬಲವಾಗಿ ಚುಚ್ಚಿ ಕೊಲೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

ಬೆಂಗಳೂರು: ಕುಡಿದ ಅಮಲಿನಲ್ಲಿ ಹುಟ್ಟಿಕೊಂಡ ಗಲಾಟೆ ಕೊಲೆಯಲ್ಲಿ (Murder Case) ಅಂತ್ಯವಾಗಿದ್ದು, ರೌಡಿ ಶೀಟರ್‌ (Rowdy Sheeter) ಒಬ್ಬಾತ ಸ್ನೇಹಿತ ರಿಕ್ಷಾ ಚಾಲಕನನ್ನು ಇರಿದು (Stabbing) ಕೊಂದು ಹಾಕಿದ್ದಾನೆ. ಬೆಂಗಳೂರಿನ ನಾಗಶೆಟ್ಟಿಹಳ್ಳಿಯಲ್ಲಿ ನಿನ್ನೆ ತಡರಾತ್ರಿ (Crime news) ಈ ಕೃತ್ಯ ನಡೆದಿದೆ.

ಮೂರ್ತಿ (45) ವರ್ಷ ಕೊಲೆಯಾದ ಆಟೋ ಡ್ರೈವರ್. ಶರಣಪ್ಪ ಕೊಲೆ ಮಾಡಿದ ರೌಡಿ. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಕೆಲ ವರ್ಷಗಳಿಂದ ಪರಿಚಯ. ನಿನ್ನೆ ಇಬ್ಬರೂ ಸ್ನೇಹಿತರು ನಾಗಶೆಟ್ಟಹಳ್ಳಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಜಗಳ ತಾರಕಕ್ಕೇರಿದ್ದು ರೌಡಿಶೀಟರ್ ಶರಣಪ್ಪ ಡ್ಯಾಗರ್‌ನಿಂದ ಹಲವು ಬಾರಿ ಮೂರ್ತಿಗೆ ಇರಿದಿದ್ದಾನೆ. ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದು. ಸದ್ಯ ಆರೋಪಿಗಾಗಿ ಸಂಜಯ್ ನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿತ

ಹಾವೇರಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅಂಥದೇ ಪ್ರಕರಣ ನಡೆದಿದೆ. ಇದರಲ್ಲಿ ಮಹಿಳೆಯನ್ನು ಆಕೆಯ ಯಾವುದೇ ತಪ್ಪಿಲ್ಲದೆ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಅರಮಲ್ಲಾಪುರ ಗ್ರಾಮದಲ್ಲಿ ಈ ಬರ್ಬರ ಘಟನೆ ನಡೆದಿದೆ. ಹನಮವ್ವ ದುರಗಪ್ಪ ಮೆಡ್ಲೆರಿ (50) ಹಲ್ಲೆಗೊಳಗಾದ ಮಹಿಳೆ. ಈಕೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳ ಜೊತೆಗೆ ಪರಾರಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಮಹಿಳೆಯ ಮೇಲೆ ಹಲ್ಲೆ ನಡೆಸಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಯುವಕನ ಮಗ ಯುವತಿಯೊಬ್ಬಳನ್ನು ಅಪಹರಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಯುವತಿ ಕಡೆಯವರು ಥಳಿಸಿದ್ದಾರೆ. ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು. ಈಕೆಯ ಮಗ ಮಂಜುನಾಥ ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ. ಆತ ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಲ್ಲದೆ ಆಭರಣಗಳನ್ನೂ ದೋಚಿದ್ದಾನೆ ಎಂದು ಇವರು ದೂರಿದ್ದಾರೆ.

ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ “ನಿನ್ನ ಮಗ ಎಲ್ಲಿದ್ದಾನೆ ಹೇಳು” ಎಂದು ಪೀಡಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದರು. ಗಾಯಗೊಂಡ ಹನಮವ್ವಳಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೇಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Prajwal Revanna Case: ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

VISTARANEWS.COM


on

Prajwal Revanna Case Revanna withdraws anticipatory bail plea
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ಸೂಚನೆ ಮೇರೆಗೆ ವಾಪಸ್‌ ಪಡೆದುಕೊಂಡಿದ್ದಾರೆ. ಅವರಿಗೆ ಸದ್ಯಕ್ಕೆ ಯಾವುದೇ ರೀತಿಯಾದಂತಹ ಬಂಧನ ಭೀತಿ ಇಲ್ಲ ಎಂದು ಹೇಳಲಾಗಿದೆ.

ತಮಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಚ್.ಡಿ. ರೇವಣ್ಣ ಅವರು ಗುರುವಾರ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ವಾದ – ಪ್ರತಿವಾದವನ್ನು ಆಲಿಸಿ, ಅರ್ಜಿಯನ್ನು ಹಿಂಪಡೆಯುವಂತೆ ರೇವಣ್ಣ ಪರ ವಕೀಲರಿಗೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ ಪರ ವಕೀಲ

ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇದ್ದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡುವ ಅವಶ್ಯಕತೆ ಇದೆ. ಆದರೆ, ಇಲ್ಲಿ ಅಂಥದ್ದೇನನ್ನೂ ಹಾಕಲಾಗಿಲ್ಲ ಎಂದು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಮುಂದೆ ಸೆಕ್ಷನ್‌ 376 ಹಾಕಲಿದ್ದಾರೆ ಎಂದು ಹೇಳಿದರು. ಅದಕ್ಕೆ ಎಸ್‌ಐಟಿ ಪರ ವಕೀಲರು, ನಾವು ಇಲ್ಲಿಯವರೆಗೂ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಸೆಕ್ಷನ್‌ 376 ಮಾತ್ರ ಅಲ್ಲ, ಬೇರೆ ನಾನ್ ಬೇಲಬಲ್ ಹಾಕಿದ್ದಾರಾ ಎಂಬುದನ್ನೂ ತಿಳಿಸಬೇಕು ಎಂದು ಕೋರಿದರು. ಇದಕ್ಕೆ ಎಸ್‌ಐಟಿ ಪರ ವಕೀಲರಾದ ಜಗದೀಶ್‌, ನಾವು ಇಲ್ಲಿತನಕ ಯಾವುದೇ ನಾನ್ ಬೇಲಬಲ್ ಸೆಕ್ಷನ್ ಹಾಕಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.

ಹೀಗಾಗಿ ಬೇಲ್‌ ಕೊಡುವಂತಹ ಯಾವುದೇ ಸೆಕ್ಷನ್‌ಗಳನ್ನೂ ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರ ಮೇಲೆ ಹಾಕಲಾಗಿಲ್ಲ. ಹೀಗಿದ್ದ ಮೇಲೆ ಅವರಿಗೆ ನಿರೀಕ್ಷಣಾ ಜಾಮೀನು ಏಕೆ ಬೇಕು? ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಹಿಂಪಡೆಯಿರಿ ಎಂದು ರೇವಣ್ಣ ಪರ ವಕೀಲರಿಗೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ರೇವಣ್ಣ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದರು. ಸದ್ಯಕ್ಕೆ ರೇವಣ್ಣ ಅವರಿಗೆ ಬಂಧನದ ಭೀತಿ ಇಲ್ಲ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಬಿಗಿಯಾದ ದಂಡ ಸಂಹಿತೆ ಸೆಕ್ಷನ್‌ಗಳನ್ನು (IPC) ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್‌ ಅವರ ಬಂಧನ ಖಚಿತವಾಗಿದೆ. ಮೈಸೂರಿನಲ್ಲೂ (Mysore news) ಇನ್ನೊಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ. ಇಲ್ಲಿಗೆ ಒಟ್ಟು ಮೂರು ದೂರುಗಳಾಗಿವೆ.

ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ (CID cyber station) ದಾಖಲಾಗಿದೆ. ಎರಡನೇ ಎಫ್ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ.

IPC 376(2)N, 506 ,354a1, 354b, 354c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿವೆ. 376(2)n ಸೆಕ್ಷನ್‌ ಮಹಿಳೆ ಮೇಲೆ‌ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ.

ಸೆಕ್ಷನ್‌ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354a1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, 354c ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.

ಎರಡನೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಮಾತ್ರ ಆರೋಪಿಯಾಗಿದ್ದಾರೆ. ಮೊದಲ ದೂರಿನಲ್ಲಿ ಎಚ್‌ಡಿ ರೇವಣ್ಣ ಕೂಡ ಆರೋಪಿಯಾಗಿದ್ದರು. ಎಚ್‌ಡಿ ರೇವಣ್ಣ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದ ಕೂಡಲೇ ಬಂಧನ ಮಾಡಲು ಎಸ್‌ಐಟಿ ಸಜ್ಜಾಗಿದೆ. ಈಗಾಗಲೇ ಆರೋಪಿಗೆ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂಧನ ಬಹುತೇಕ ಖಚಿತವಾಗಿದೆ.

ಮೈಸೂರಿನಲ್ಲೂ ದೂರು

ಪ್ರಜ್ವಲ್‌ ರೇವಣ್ಣ (Prajwal Revanna Case) ಮೇಲೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ (kidnap) ಪ್ರಕರಣ ದಾಖಲಾಗಿದೆ. ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ (Bhavani Revanna) ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.

Continue Reading

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ಮಳೆ

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Karnataka Weather Forecast : ದಿನೇದಿನೆ ಸುಡುತ್ತಿರುವ ಬಿಸಿಲಿಗೆ ಜನರು ಬೆಂದು ಹೋಗುತ್ತಿದ್ದಾರೆ. ಸದ್ಯ ರಾಯಚೂರಲ್ಲಿ ಗರಿಷ್ಟ ತಾಪಮಾನದ ಕಾರಣಕ್ಕೆ ಮಧ್ಯಾಹ್ನದ ನಂತರ ಜನರು ಹೊರಬರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನದ ನಂತರ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

ಸೆಕೆಗೆ ಕಾವೇರಿ ನದಿಗಿಳಿದ ಜನ

ಮಂಡ್ಯ ಜಿಲ್ಲೆಯಲ್ಲೂ ಬಿಸಿಲ ಬೇಗೆ ಹೆಚ್ಚಾಗಿದೆ. ಬಿಸಿಲಿನ ಸೆಕೆ ತಾಳಲಾರದೆ ಜನರು ನದಿಗಿಳಿದು ತಾಪವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬ ಸಮೇತವಾಗಿ ಬಂದು ಮಂಡ್ಯದ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಇಳಿಯುತ್ತಿದ್ದಾರೆ. ಬಿಸಿಲಿನ ಕಾವಿನಿಂದಾಗಿ ಕಾವೇರಿ ನದಿ ದಂಡೆಯಲ್ಲಿ ಜನರ ದಂಡು ಹೆಚ್ಚಾಗಿದೆ.

ಬೆಂಗಳೂರಲ್ಲಿ ಸುರಿದ ಮಳೆಗೆ ಧರೆಗುರುಳಿದ ಮರಗಳು

ಬೆಂಗಳೂರಿನಲ್ಲಿ ನಿನ್ನೆ ಗುರುವಾರ ಸಂಜೆ ಸುರಿದ ಮಳೆಗೆ ಮರಗಳು ಧರೆಗುರುಳಿವೆ. ಕೆಲವು ಕಡೆ ಅರ್ಧ ಗಂಟೆ, ಮತ್ತೆ ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆಯಾಗಿದೆ. ಬನಶಂಕರಿ, ಹಂಪಿನಗರ, ವಿಜಯನರ, ರಾಜರಾಜೇಶ್ವರಿನಗರ ಹಾಗೂ ನಾಯಂಡಹಳ್ಳಿ ಸೇರಿ ಮೆಜೆಸ್ಟಿಕ್‌ ಸುತ್ತಮುತ್ತ ಉತ್ತಮ ಮಳೆಯಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಸುಮಾರು 10 ನಿಮಿಷಗಳ ಸಾಧಾರಣ ಮಳೆಯಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ (ಮಿ.ಮೀ)
ವಿದ್ಯಾಪೀಠ – 20, ಹಂಪಿನಗರ – 12.5, ಮಾರುತಿ ಮಂದಿರ – 12, ರಾಜರಾಜೇಶ್ವರಿನಗರ – 7.5, ನಾಯಂಡಹಳ್ಳಿ – 7.5, ಬಸವನಪುರ – 5.5, ದೊಡ್ಡನೆಕ್ಕುಂದಿ – 5, ಎಚ್‌ಎಸ್‌ಆರ್‌ ಲೇಔಟ್‌- 5, ಉತ್ತರಹಳ್ಳಿ – 5 ಹಾಗೂ ಮಹದೇವಪುರ – 4, ರಾಮಮೂರ್ತಿ ನಗರ – 4, ಹೆಮ್ಮಿಗೆಪುರ – 4.5, ಕೆಂಗೇರಿ – 4.5 ಸೇರಿದಂತೆ ಯಲಹಂಕ ಉಪನಗರ – 3.5, ಹೊರಮಾವು – 3.5ಮಿ.ಮೀ ಮಳೆಯಾಗಿದೆ. ಬೆಂಗಳೂರು ದಕ್ಷಿಣದಲ್ಲಿ 10-15 ಮರಗಳು ಧರೆಗೆ ಉರುಳಿರುವ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಕ್ರೈಂ5 mins ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Hockey India
ಕ್ರೀಡೆ18 mins ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ26 mins ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ27 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ32 mins ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್37 mins ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ41 mins ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Karnataka Weather Forecast
ಮಳೆ46 mins ago

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Rashmika Mandanna's younger sister Shiman
ಟಾಲಿವುಡ್59 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ1 hour ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ19 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌