Dhruva Sarja | ʻʻಅಣ್ಣ ಇಲ್ಲ ಅಂದಾಗ ಹೇಗೇಗೋ ಡಬ್ಬಿಂಗ್‌ ಮಾಡೋಕಾಗಲ್ಲʼʼ: ಧ್ರುವ ಸರ್ಜಾ - Vistara News

ಸಿನಿಮಾ

Dhruva Sarja | ʻʻಅಣ್ಣ ಇಲ್ಲ ಅಂದಾಗ ಹೇಗೇಗೋ ಡಬ್ಬಿಂಗ್‌ ಮಾಡೋಕಾಗಲ್ಲʼʼ: ಧ್ರುವ ಸರ್ಜಾ

2020ರಲ್ಲಿ ಚಿರು ಸರ್ಜಾ ಅಗಲಿದ್ದು, ಚಿರು ನಟಿಸಿರುವ ಸಿನಿಮಾ ಮೇಲೆ ಧ್ರುವಾಗಿರುವ (Dhruva Sarja ) ಪ್ರೀತಿಯ ಬಗ್ಗೆ ಪ್ರಥಮ್‌ ಪೋಸ್ಟ್‌ ಮೂಲಕ ಹೇಳಿಕೊಂಡಿದ್ದಾರೆ.

VISTARANEWS.COM


on

Dhruva Sarja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟ ಚಿರಂಜೀವಿ ಸರ್ಜಾ ನಟಿಸಿರುವ ರಾಜಮಾರ್ತಾಂಡ ಸಿನಿಮಾಗೆ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja )ಧ್ವನಿ ನೀಡುತ್ತಿದ್ದಾರೆ. 2020ರಲ್ಲಿ ಚಿರು ಸರ್ಜಾ ಅಗಲಿದ್ದು, ಚಿರು ನಟಿಸಿರುವ ಸಿನಿಮಾ ಮೇಲೆ ಧ್ರುವಾಗಿರುವ ಪ್ರೀತಿಯ ಬಗ್ಗೆ ಪ್ರಥಮ್‌ ಪೋಸ್ಟ್‌ ಮೂಲಕ ಹೇಳಿಕೊಂಡಿದ್ದಾರೆ.

ಚಿರು ಕಡೆಯ ಸಿನಿಮಾ ʻರಾಜಮಾರ್ತಾಂಡ’ ಚಿತ್ರಕ್ಕಾಗಿ ಚಿರು ಅಭಿಮಾನಿಗಳು ಕಾಯುತ್ತಿದ್ದಾರೆ. ಚಿರು ಪಾತ್ರದ ಡಬ್ಬಿಂಗ್ ಜವಾಬ್ದಾರಿಯನ್ನು ಧ್ರುವ ಸರ್ಜಾ ಹೊತ್ತಿದ್ದಾರೆ. ಈ ಬಗ್ಗೆ ಪ್ರಥಮ್‌ ಪೋಸ್ಟ್‌ ಹಂಚಿಕೊಂಡಿದ್ದು ʻʻನಿನ್ನೆ ಚಿರಂಜೀವಿ ಸರ್ಜಾ ಅವರ ʼರಾಜಮಾರ್ತಾಂಡ’ ಸಿನಿಮಾ ಡಬ್ಬಿಂಗ್ ಟೈಂ ಇದು. ಮಧ್ಯಾಹ್ನ ಊಟಕ್ಕೆ ಬನ್ನಿ ಸಿಗೋಣ ಅಂತ ಹೇಳಿದವರು ಡಬ್ಬಿಂಗ್ ಥಿಯೇಟರ್‌ನಿಂದ ಹೊರ ಬಂದಾಗ ರಾತ್ರಿ 7ಗಂಟೆ ಆಗಿತ್ತು. ಡಬ್ಬಿಂಗ್ ಮುಗೀತಾ ಎಂದು ಕೇಳಿದಕ್ಕೆ ನಮ್ ಹೀರೊ ಧ್ರುವ ಸರ್ಜಾ ಹೇಳಿದಿಷ್ಟು. ಇಲ್ಲ ಇನ್ನೊಂದೆರಡು ದಿನ ಇದೆ ಮಾಡಿ ಮುಗಿಸುತ್ತೀನಿ. ಅಣ್ಣ ಇಲ್ಲ ಅಂದಾಗ ಹೇಗೇಗೋ ಮಾಡೋಕಾಗಲ್ಲ. ಕೆಲಸ ಒಪ್ಪಿಕೊಂಡ ಮೇಲೆ ಚೆನ್ನಾಗಿ ಮಾಡ್ಬೇಕು. ಲೇಟಾದ್ರೂ ನೀಟಾಗಿ ಮಾಡೋಣ ಎಂದಿದ್ದರು. ಪ್ರತಿ ದೃಶ್ಯಕ್ಕೂ ಜೀವ ತುಂಬಿದ್ದಕ್ಕೆ ಸಾಕ್ಷಿಯಾಗಿತ್ತು. ಮೂವರು ಹಿರಿಯರನ್ನು ಧ್ರುವ ಅವರಿಗೆ ಪರಿಚಯ ಮಾಡೋಣ ಅಂತ ಕರೆದುಕೊಂಡು ಹೋಗಿದ್ದೆ. ಅದರಲ್ಲಿ ಒಬ್ಬರು ಹಿರಿಯರು ಹೇಳಿದ್ದಿಷ್ಟು. ಪ್ರಥಮ್, ಧ್ರುವ ಸರ್ಜಾ ಅವ್ರು ಒಬ್ಬ ಗೆದ್ದರೆ ಕನಿಷ್ಟ ಸಾವಿರ ಜನ ನೆಮ್ಮದಿಯಾಗಿ ಊಟ ಮಾಡುತ್ತಾರೆ ಅಂತ. ಹೀಗಾಗಿ ನಮ್ಮ ಮೀಟಿಂಗ್ ಇನ್ನೊಂದು ದಿನಕ್ಕೆ ಪೋಸ್ಟ್ ಪೋನ್ ಆಯ್ತು. ಈ ಸ್ಪೆಷಲ್ ಅರ್ಪಣೆ ಚಿರು ಅಣ್ಣನಿಗೆ ಧ್ರುವ ಅವರಿಂದ’ ಎಂದು ಒಳ್ಳೆ ಹುಡುಗ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Dhruva Sarja | ದರ್ಶನ್‌ ಮನೆಗೆ ಅಚ್ಚರಿಯ ಭೇಟಿ ಕೊಟ್ಟ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ; ಅಭಿಮಾನಿ ಫುಲ್‌ ಖುಷ್‌

ಈ ಚಿತ್ರವನ್ನು ಪ್ರಣವ್ ಗೌಡ. ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದು, ಕೆ. ಗಣೇಶ್ ಛಾಯಾಗ್ರಹಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾಥಿ, ಮೇಘಶ್ರೀ, ರುಷಿಕಾ ರಾಜ್ ಅಭಿನಯಿದ್ದಾರೆ. 

ಇದನ್ನೂ ಓದಿ | Dhruva Sarja | ದರ್ಶನ್‌ ಮನೆಗೆ ಅಚ್ಚರಿಯ ಭೇಟಿ ಕೊಟ್ಟ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ; ಅಭಿಮಾನಿ ಫುಲ್‌ ಖುಷ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

Rashmika Mandanna: ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ.

VISTARANEWS.COM


on

Rashmika Madanna Appreciation Post PM Modi Reacts
Koo

ಮುಂಬೈ: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದರು. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ಪ್ರತಿಕ್ರಿಯೆ

ರಶ್ಮಿಕಾ ಮಂದಣ್ಣ ಸೇತುವೆ ಕುರಿತು ʻʻದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ… ಪಶ್ಚಿಮ ಭಾರತದಿಂದ ಪೂರ್ವ ಭಾರತಕ್ಕೆ… ಜನರನ್ನು ಸಂಪರ್ಕಿಸುತ್ತಿದೆ, ಹೃದಯಗಳನ್ನು ಸಂಪರ್ಕಿಸುತ್ತಿದೆʼʼಎಂದು ವಿಡಿಯೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೀಗ ಪ್ರಧಾನಿ ಮೋದಿ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಖಂಡಿತವಾಗಿಯೂ! ಜನರನ್ನು ಸಂಪರ್ಕಿಸುವುದು ಮತ್ತು ಅವರ ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದು ಬೇರೇನೂ ಇಲ್ಲ.”ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

ರಶ್ಮಿಕಾ ವಿಡಿಯೊದಲ್ಲಿ ಏನಿದೆ?

“ಕೇವಲ 7 ವರ್ಷಗಳಲ್ಲಿ ಈ ಭವ್ಯವಾದ ಅದ್ಭುತವನ್ನು ನಿರ್ಮಿಸಿದ್ದೇವೆ. ಅಟಲ್ ಸೇತು ಭವಿಷ್ಯದ ಬಾಗಿಲುಗಳನ್ನು ಎಷ್ಟು ಬಲವಾಗಿ ತಟ್ಟಿದ್ದಾರೆ ಎಂದರೆ ಭಾರತಕ್ಕೆ ಹೊಸ ಬಾಗಿಲುಗಳು ತೆರೆದಿವೆ. ಅಟಲ್ ಸೇತು ಸೇತುವೆ ಅಷ್ಟೇ ಅಲ್ಲ ಯುವ ಭಾರತಕ್ಕೆ ಗ್ಯಾರಂಟಿ. ನಮ್ಮ ರಾಷ್ಟ್ರವನ್ನು ಈಗ ತಡೆಯಲಾಗದು. ನೀವು ಇಂತಹ 100ರಷ್ಟು ಅಟಲ್ ಸೇತು ಸೇತುವೆಗಳನ್ನು ಪಡೆಯಲು ಬಯಸುವಿರಾ? ಎಚ್ಚೆತ್ತುಕೊಂಡು ಅಭಿವೃದ್ಧಿಗಾಗಿ ಮತ ಚಲಾಯಿಸಿ’ ಎಂದು ರಶ್ಮಿಕಾ ವಿಡಿಯೊದಲ್ಲಿ ಹೇಳಿದ್ದರು.

ರಶ್ಮಿಕಾ ಸಾಥ್‌

ಈ ಮುಂಚೆ ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದರು.

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading

ಒಟಿಟಿ

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

ಥ್ರಿಲರ್, ರೊಮ್ಯಾಂಟಿಕ್, ಆಕ್ಷನ್ ಅನ್ನು ಒಳಗೊಂಡಿರುವ ವೀಕ್ಷಕರು ಬಹು ನಿರೀಕ್ಷೆಯ ಬ್ರಿಡ್ಜರ್ಟನ್, ಬಾಹುಬಲಿ ಸೇರಿದಂತೆ ಹಲವು ಸರಣಿಗಳು ಈ ವಾರದಲ್ಲಿ ಒಟಿಟಿ ಗೆ (OTT Release) ಬರಲಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Release
Koo

ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿರುವ ಹಲವು ಸರಣಿ ಚಿತ್ರಗಳು ಈ ವಾರ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ (OTT Release) ತೆರೆ ಕಾಣುತ್ತಿದೆ. ನೆಟ್‌ಫ್ಲಿಕ್ಸ್ (Netflix), ಡಿಸ್ನಿ+ ಹಾಟ್‌ಸ್ಟಾರ್ (Disney+ Hotstar), ಜಿಯೋ ಸಿನಿಮಾ (Jio Cinema) ಮತ್ತು ಇತರ ವೇದಿಕೆಯಲ್ಲಿ ಈ ಬಾರಿ ಪ್ರೇಕ್ಷರನ್ನು ರಂಜಿಸಲು ಹಲವು ಚಲನಚಿತ್ರಗಳು ಬಿಡುಗಡೆಯಾಗಲಿದೆ.

ಬ್ರಿಡ್ಜರ್ಟನ್ ಮತ್ತು ಬಾಹುಬಲಿ ಸರಣಿಯು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಪೆನೆಲೋಪ್ ಫೆದರಿಂಗ್‌ಟನ್ ಮತ್ತು ಕಾಲಿನ್ ಬ್ರಿಡ್ಜರ್‌ಟನ್‌ರ ಪ್ರೇಮಕಥೆಯನ್ನು ಹೇಳುವ ನೆಟ್‌ಫ್ಲಿಕ್ಸ್‌ನ ಬ್ರಿಡ್ಜರ್‌ಟನ್‌ನ ಸೀಸನ್ 3 ಸಾಕಷ್ಟು ಕುತೂಹಲ ಮೂಡಿಸಿದೆ. ಇದರೊಂದಿಗೆ ಎಸ್‌.ಎಸ್. ರಾಜಮೌಳಿ ಅವರ ಪೂರ್ವಭಾವಿ ಸರಣಿಯಾದ ಬಾಹುಬಲಿ: ಕ್ರೌನ್ ಆಫ್ ಬ್ಲಡ್‌ ಕೂಡ ಎಲ್ಲರೂ ಕಾತರದಿಂದ ಕಾಯುವಂತೆ ಮಾಡಿದೆ.

ಬ್ರಿಡ್ಜರ್ಟನ್ ಸೀಸನ್ 3 ಭಾಗ 1

ಬ್ರಿಡ್ಜರ್ಟನ್ ಭಾಗ 2 ಕಳೆದ ಜೂನ್ 13ರಂದು ಬಿಡುಗಡೆಯಾಗಿತ್ತು. ಇದೀಗ ಇದರ ಮುಂದುವರಿದ ಸರಣಿ ಬಿಡುಗಡೆಯಾಗಿದೆ.

ನಿಕೋಲಾ ಕೋಗ್ಲಾನ್, ಲ್ಯೂಕ್ ನ್ಯೂಟನ್, ಕ್ಲೌಡಿಯಾ ಜೆಸ್ಸಿ, ಲ್ಯೂಕ್ ಥಾಂಪ್ಸನ್, ಜೊನಾಥನ್ ಬೈಲಿ, ಸಿಮೋನ್ ಆಶ್ಲೇ ಮುಖ್ಯ ಭೂಮಿಕೆಯಲ್ಲಿರುವ ಈ ಸರಣಿ ಮೇ 16ರಿಂದ ನೆಟ್ ಫ್ಲಿಕ್ಸ್ ನಲ್ಲಿ ತೆರೆ ಕಾಣುತ್ತಿದೆ. ಇದು ಜೂಲಿಯಾ ಕ್ವಿನ್‌ನ ಹೆಚ್ಚು ಮಾರಾಟವಾದ ಕಾದಂಬರಿಗಳನ್ನು ಆಧರಿಸಿದ ಪ್ರೇಮಕಥೆಯಾಗಿದೆ. ಲೇಡಿ ವಿಸ್ಲ್‌ಡೌನ್ ಮೇಲೆ ಚಿತ್ರ ಕೇಂದ್ರೀಕೃತವಾಗಿದೆ. ಕುಟುಂಬದ ಒತ್ತಡದಿಂದ ಪೆನೆಲೋಪ್ ಫೆದರಿಂಗ್‌ಟನ್ (ನಿಕೋಲಾ ಕಾಗ್ಲಾನ್) ತನಗಾಗಿ ಗಂಡನನ್ನು ಹುಡುಕಲು ಪ್ರಾರಂಭಿಸುತ್ತಾಳೆ. ಆಗ ಕಾಲಿನ್ ಬ್ರಿಡ್ಜರ್ಟನ್ (ಲ್ಯೂಕ್ ನ್ಯೂಟನ್) ಅವಳ ಬದುಕಿನಲ್ಲಿ ಆಗಮಿಸುತ್ತಾನೆ. ಅವರಿಬ್ಬರು ಉತ್ತಮ ಸ್ನೇಹಿತರಾಗಿ ಜೀವನವನ್ನು ಕಾಣಲು ಬಯಸುತ್ತಾರೆ.


ಬಾಹುಬಲಿಕೆ ಕ್ರೌನ್ ಆಫ್ ಬ್ಲಡ್

ಶರದ್ ಕೇಳ್ಕರ್, ಸಮಯ್ ಠಕ್ಕರ್, ರಾಜೇಶ್ ಖಟ್ಟರ್ ಅವರು ಧ್ವನಿ ನೀಡಿರುವ ಸರಣಿ ಮೇ 17ರಂದು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ. ಇದು ಮಾಹಿಷ್ಮತಿ ರಾಜ್ಯದ ಕಥೆಯನ್ನು ಆಧರಿಸಿದೆ. ಎಸ್.ಎಸ್. ರಾಜಮೌಳಿ ಅವರ ಇತ್ತೀಚಿನ ಚಿತ್ರದ ಅನಿಮೇಟೆಡ್ ಸರಣಿ ಇದಾಗಿದೆ. 2D ಅನಿಮೇಟೆಡ್ ಸರಣಿಯು ಒಂದು ಮಹಾಕಾವ್ಯದ ಕಥೆಯನ್ನು ಹೊಂದಿದೆ. ಭವ್ಯವಾದ ಯುದ್ಧದ ಸರಣಿಗಳು ಮತ್ತು ಕೆಲವು ಸಾಂಪ್ರದಾಯಿಕ ಪಾತ್ರಗಳು ಇದರಲ್ಲಿ ಗಮನ ಸೆಳೆಯಲಿದೆ.


ಜರಾ ಹಟ್ಕೆ ಜರಾ ಬಚ್ಕೆ

ವಿಕ್ಕಿ ಕೌಶಲ್, ಸಾರಾ ಅಲಿ ಖಾನ್, ಇನಾಮುಲ್ಹಾಕ್, ಸುಶ್ಮಿತಾ ಮುಖರ್ಜಿ ಅಭಿನಯದ ಈ ಚಿತ್ರ ಜಿಯೋ ಸಿನಿಮಾದಲ್ಲಿ ಮೇ 17ರಂದು ಬಿಡುಗಡೆಯಾಗಲಿದೆ. ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹಿಂದಿ ಚಿತ್ರ. ಇದರಲ್ಲಿ ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ವಿವಾಹಿತ ದಂಪತಿಯಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಂತ ಮನೆಯನ್ನು ಮಾಡಿಕೊಳ್ಳಲು ಅವರು ಮಾಡುವ ಪರಿಶ್ರಮ ಚಿತ್ರದಲ್ಲಿದೆ. ಚಿತ್ರ ಕಳೆದ ವರ್ಷ ಜೂನ್ 2 ರಂದು ಬಿಡುಗಡೆಯಾಗಿದ್ದು, ಇದೀಗ ಒಟಿಟಿಗೆ ಪಾದಾರ್ಪಣೆ ಮಾಡುತ್ತಿದೆ.

ಇದನ್ನೂ ಓದಿ: Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಗ್ರೇಟ್ ಇಂಡಿಯನ್ ಕಪಿಲ್ ಶೋ

ಕಪಿಲ್ ಶರ್ಮಾ, ಅರ್ಚನಾ ಪುರಾಣ್ ಸಿಂಗ್, ಕೃಷ್ಣಾ ಅಭಿಷೇಕ್ ಅವರ ಈ ಸರಣಿ ಮೇ 18ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಕಪಿಲ್ ಶರ್ಮಾ ತನ್ನ ಹೊಸ ನೆಟ್‌ಫ್ಲಿಕ್ಸ್ ಸರಣಿಗೆ ಅಂತಾರಾಷ್ಟ್ರೀಯ ಅತಿಥಿ ಬ್ರಿಟಿಷ್ ಪಾಪ್ ಐಕಾನ್ ಎಡ್ ಶೀರಾನ್ ಅವರನ್ನು ವೇದಿಕೆಗೆ ಆಹ್ವಾನಿಸಿದ್ದಾರೆ. ಎಡ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಹಲವಾರು ಬಾರಿ ಹಾಸ್ಯನಟರನ್ನು ಭೇಟಿ ಮಾಡಿದ್ದಾರೆ ಮತ್ತು ಈ ಬಾರಿ ಅವರು ಶರ್ಮಾ ಅವರ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೂರ್ವಸಿದ್ಧತೆಯಿಲ್ಲದ ಸಂಗೀತ ಕಛೇರಿಯನ್ನು ಅವರು ಇಲ್ಲಿ ನಡೆಸಿಕೊಡಲಿದ್ದಾರೆ.

Continue Reading
Advertisement
Rashmika Madanna Appreciation Post PM Modi Reacts
ಟಾಲಿವುಡ್32 seconds ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

RCB vs CSK
ಕ್ರೀಡೆ6 mins ago

RCB vs CSK: ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿ ಏನು?

illegal hunting chikkamagaluru
ಕ್ರೈಂ17 mins ago

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

Cannes 2024 Aishwarya Rai turns lady in black in Falguni
ಸಿನಿಮಾ23 mins ago

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

These foods are really what our body needs in summer
ಆರೋಗ್ಯ46 mins ago

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Lok Sabha Election 2024
ದೇಶ56 mins ago

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Medical Negligence
ದೇಶ58 mins ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ1 hour ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

techie wife udr case
ಕ್ರೈಂ2 hours ago

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

Karnataka weather Forecast
ಮಳೆ3 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ19 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು22 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌