CCB Raid | ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ದಾಳಿ; ಜಿಂಕೆ, ಕೃಷ್ಣ ಮೃಗ ಸೇರಿ 29 ವನ್ಯಜೀವಿಗಳು ಪತ್ತೆ - Vistara News

ಕರ್ನಾಟಕ

CCB Raid | ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ದಾಳಿ; ಜಿಂಕೆ, ಕೃಷ್ಣ ಮೃಗ ಸೇರಿ 29 ವನ್ಯಜೀವಿಗಳು ಪತ್ತೆ

ಸಿಸಿಬಿ ಪೊಲೀಸರು (CCB Raid) ಮಾಜಿ ಸಚಿವ ಮಲ್ಲಿಕಾರ್ಜುನ್‌ ಫಾರ್ಮ್‌ ಹೌಸ್‌ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಜಿಂಕೆ, ಮುಂಗುಸಿ, ಕಾಡುಹಂದಿಗಳು ಇರುವುದು ಪತ್ತೆ ಆಗಿದೆ. ಜತೆಗೆ ಕಾನೂನುಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡುತ್ತಿರುವ ಆರೋಪವೂ ಕೇಳಿ ಬಂದಿದೆ.

VISTARANEWS.COM

on

ccb raid ವನ್ಯಜೀವಿ ಸೆರೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಪುತ್ರ ಮಾಜಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಅಧಿಕಾರಿಗಳು (CCB Raid) ದಾಳಿ ನಡೆಸಿದ್ದಾರೆ. ದಾಳಿ ವೇಳೆ ಫಾರ್ಮ್ ಹೌಸ್‌ನಲ್ಲಿ 29ಕ್ಕೂ ಹೆಚ್ಚು ವನ್ಯಜೀವಿಗಳು ಪತ್ತೆ ಆಗಿವೆ.

CCB Raid

ಎಸ್‌.ಎಸ್‌.ಮಲ್ಲಿಕಾರ್ಜುನ್‌ ಒಡೆತನದ ಕಲ್ಲೇಶ್ವರ ಮಿಲ್‌ ಹಿಂಭಾಗದ ಫಾರ್ಮ್‌ ಹೌಸ್‌ ಮೇಲೆ ನಡೆಸಲಾಗಿದ್ದು, 7 ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, 7 ಕಾಡುಹಂದಿಗಳು, 3 ಮುಂಗುಸಿಗಳು, 2 ನರಿಗಳು ಪತ್ತೆ ಆಗಿವೆ. ಸಿಸಿಬಿ ಪೊಲೀಸರು ಪ್ರಾಣಿಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

CCB Raid

ದಾವಣಗೆರೆ ತಾಲೂಕಿನ ಹೆಬ್ಬಾಳದಲ್ಲಿ ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡುತ್ತಿದ್ದ ಸೆಂಥಿಲ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೆಂಥಿಲ್‌ ವಿಚಾರಣೆ ವೇಳೆ ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಬಾಯ್ಬಿಟ್ಟಿದ್ದ.

CCB Raid
ಆರೋಪಿ ಸೆಂಥಿಲ್

ಆರೋಪಿಯ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆ ವೇಳೆ ವನ್ಯಜೀವಿಗಳು ಸಿಕ್ಕಿದ್ದು, ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿ ಪೊಲೀಸರು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಜಿಂಕೆ ಸಾಕಲು ಲೈಸನ್ಸ್‌
ಪರವಾನಗಿ ಪಡೆದುಕೊಂಡು ವನ್ಯಜೀವಿಗಳನ್ನು ಸಾಕಿದ್ದೆವು ಎಂದು ಎಸ್‌ಎಸ್ ಮಲ್ಲಿಕಾರ್ಜುನ್ ಆಪ್ತರು ಮಾಹಿತಿ ನೀಡಿದ್ದಾರೆ. ಪರವಾನಗಿ ಪಡೆದೇ 2000ರಿಂದಲೇ ನಮ್ಮ ಫಾರ್ಮ್‌ ಹೌಸ್‌ನಲ್ಲಿ ಜಿಂಕೆ ಸಾಕುತ್ತಿದ್ದೆವು. ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ. ಪರವಾನಗಿ ಪಡೆದು ಸಾಕುತ್ತಿದ್ದ ನಾಲ್ಕೈದು ಜಿಂಕೆಗಳು ಮರಿ ಹಾಕಿದ್ದರಿಂದ ಇವುಗಳ ಸಂಖ್ಯೆ ಈಗ ಹೆಚ್ಚಾಗಿದೆ. ಇತ್ತೀಚೆಗೆ ಜನಿಸಿದ ಮರಿಗಳ ಸಾಕುವ ಪರವಾನಗಿ ಪಡೆಯಬೇಕಿದ್ದು, ಕಾನೂನು ಪ್ರಕಾರವೇ ನಾವು ಸಾಕುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Leopard Attack | ಒಂದೇ ದಿನ ಎರಡು ಚಿರತೆ ಸೆರೆ: ಮೈಸೂರಿನಲ್ಲಿ ಬೋನಿಗೆ ಬಿತ್ತು, ಉಡುಪಿಯಲ್ಲಿ ಬಾವಿಗೆ ಬಿತ್ತು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Prajwal Revanna Case: ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದಾರೆ. ಈಗಾಗಲೇ ಮೂರು ದಿನ ಪೊಲೀಸ್‌ ಕಸ್ಟಡಿಗೆ ಕೊಡಲಾಗಿತ್ತು. ಆದರೆ, ಇನ್ನೊಂದು ದಿನ ವಿಚಾರಣೆ ನಡೆಸುವ ಅಗತ್ಯ ಇದೆ ಎಂದು ಕೋರ್ಟ್‌ನಲ್ಲಿ ಪೊಲೀಸರು ಮನವಿ ಮಾಡಿದ್ದರಿಂದ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.

VISTARANEWS.COM

on

Prajwal Revanna Case Lawyer DevarajeGowda sent to police custody for another day
Koo

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಮತ್ತೆ ಒಂದು ದಿನ ವಿಸ್ತರಣೆಯಾಗಿದೆ. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಇಂದು (ಮೇ 16) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಮತ್ತೆ ಒಂದು ದಿನಕ್ಕೆ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್‌ ಅನುಮತಿ ನೀಡಿದೆ.

ಈ ಮೊದಲು ಎರಡು ದಿನಗಳ ಕಾಲ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್‌ (video viral) ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಅವರನ್ನು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನ ಮಾಡಲಾಗಿತ್ತು. ಈ ಸಂಬಂಧ ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಜೆಎಂಎಫ್‌ಸಿ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಹೀಗಾಗಿ ಒಂದು ದಿನ ಅವಧಿ ವಿಸ್ತರಣೆ ಮಾಡಿದ ಕೋರ್ಟ್‌, ಶುಕ್ರವಾರ (ಮೇ 17) ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿ ಆದೇಶಿಸಿದೆ.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದಾರೆ.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧಿತರಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್‌.‌ಡಿ. ರೇವಣ್ಣ (HD Revanna) ಅವರು ತಮ್ಮ ಬೆಂಗಳೂರಿನ ಸ್ವಂತ ನಿವಾಸದಿಂದ ದೂರವೇ ಉಳಿದಿದ್ದಾರೆ. ಇದು ಜ್ಯೋತಿಷಿಗಳ ಸಲಹೆ ಇರಬಹುದೇ ಎಂಬ ಚರ್ಚೆ ಪ್ರಾರಂಭವಾಗಿದೆ.

ಇಲ್ಲಿನ ಬಸವನಗುಡಿಯಲ್ಲಿರುವ ನಿವಾಸದಿಂದ ದೂರ ಉಳಿಯುವಂತೆ ಎಚ್‌.ಡಿ. ರೇವಣ್ಣ ಅವರಿಗೆ ಜ್ಯೋತಿಷಿಗಳು ನೀಡಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಕಾರಣ, ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ರೇವಣ್ಣ ಅವರು ಒಮ್ಮೆ ಮಾತ್ರ ಆ ನಿವಾಸಕ್ಕೆ ಭೇಟಿ ನೀಡಿದ್ದರು. ಅದೂ ಸಹ ಕೇವಲ ಎರಡೇ ನಿಮಿಷಗಳಲ್ಲಿ ಮನೆ ಪ್ರವೇಶಿಸಿ ಆಚೆ ಬಂದುಬಿಟ್ಟಿದ್ದರು.

ರೇವಣ್ಣ ಬಿಡುಗಡೆಯಾಗಿ ಇಂದಿಗೆ ಮೂರನೇ ದಿನವಾಗಿದೆ. ಆದರೆ, ಒಮ್ಮೆ ಭೇಟಿ ನೀಡಿದ ಬಳಿಕ ಮತ್ತೆ ಆ ಕಡೆ ಸುಳಿಯುತ್ತಿಲ್ಲ. ಈ ಘಟನೆ ಬಳಿಕ ಎಚ್.ಡಿ. ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ವಾಸ್ತವ್ಯ ಹೂಡುತ್ತಿದ್ದಾರೆ. ಹೀಗಾಗಿ ರೇವಣ್ಣ ಅವರ ನಿವಾಸದಲ್ಲಿ ಯಾರೂ ಇಲ್ಲದಂತಾಗಿದೆ. ವಾಸ್ತು ದೋಷ ಇದೆ ಎಂದು ರೇವಣ್ಣ ಅಂಜಿದರೇ? ಅಥವಾ ಜ್ಯೋತಿಷಿಗಳು ಏನಾದರೂ ಸಲಹೆ ನೀಡಿದ್ದಾರೆಯೇ? ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.

ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ಕ್ರೈಂ

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

ISIS link: ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬ ಅವರ ಮೊಮ್ಮಗನ ಐಸಿಸ್ ನಂಟು ಕೇಸ್‌ನಲ್ಲಿ ಈ ಮಹತ್ವದ ಬೆಳವಣಿಗೆ ಆಗಿದೆ. ಯುಎಪಿಎ ಕಾಯಿದೆಯಡಿ ಈತನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿತ್ತು. ಅಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಬಂಧಿತನಾಗಿ ಜೈಲಿನಲ್ಲಿದ್ದ ಅಮ್ಮರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

VISTARANEWS.COM

on

isis link ummer abdul rehman mariyam
ಉಮ್ಮರ್‌ ಅಬ್ದುಲ್‌ ರೆಹಮಾನ್‌, ಇನ್ನೊಬ್ಬ ಆರೋಪಿ ಮರಿಯಂ
Koo

ಹೊಸದಿಲ್ಲಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ, ಭಯೋತ್ಪಾದಕ ಸಂಘಟನೆ (Terrorist organisation) ಐಸಿಸ್‌ ಲಿಂಕ್‌ (ISIS link) ಪ್ರಕರಣದಲ್ಲಿ ಮಾಜಿ ಶಾಸಕ ಇದಿನಬ್ಬ (Ex MLA BM Idinabba) ಅವರ ಮೊಮ್ಮಗ ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ಜಾಮೀನು (bail) ದೊರೆತಿದೆ. “ಐಸಿಸ್ ಬಾವುಟ, ಕರಪತ್ರ ಮೊಬೈಲ್‌ನಲ್ಲಿದ್ದರೆ ಆತ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ” ಎಂದು ಜಾಮೀನು ನೀಡಿದ ದಿಲ್ಲಿ ಉಚ್ಚ ನ್ಯಾಯಾಲಯ (Delhi High court) ಹೇಳಿದೆ.

ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬ ಅವರ ಮೊಮ್ಮಗನ ಐಸಿಸ್ ನಂಟು ಕೇಸ್‌ನಲ್ಲಿ ಈ ಮಹತ್ವದ ಬೆಳವಣಿಗೆ ಆಗಿದೆ. ಯುಎಪಿಎ ಕಾಯಿದೆಯಡಿ ಈತನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿತ್ತು. ಅಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಬಂಧಿತನಾಗಿ ಜೈಲಿನಲ್ಲಿದ್ದ ಉಮ್ಮರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

ರೆಹಮಾನ್‌ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ವಿಚಾರಣಾಧೀನ ಕೋರ್ಟ್ ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಸದ್ಯ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ಒದಗಿಸಿದೆ. ಉಮ್ಮರ್ ಅಬ್ದುಲ್ ರೆಹಮಾನ್ ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದೆ.

ನ್ಯಾಯಪೀಠದ ಪ್ರಕಾರ, “ಉಗ್ರ ಸಂಘಟನೆ ಬಗೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗುವುದಿಲ್ಲ. ಐಸಿಸ್ ಪರ ವಿಡಿಯೋ ಡೌನ್‌ಲೋಡ್ ಮಾಡುವುದು, ಭಾಷಣ ಆಲಿಸುವುದನ್ನು ಯುಎಪಿಎ ಕಾಯಿದೆಯಡಿ ತರಲು ಆಗುವುದಿಲ್ಲ. ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39ರಡಿ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದಿದೆ.

“ಆರೋಪಿ ಮೊಬೈಲ್‌ನಲ್ಲಿ ಉಗ್ರ ಒಸಾಮಾ ಬಿನ್‌ ಲಾಡೆನ್, ಐಸಿಸ್ ಬಾವುಟಗಳ ಚಿತ್ರ, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ” ಎಂದು ಎನ್‌ಐಎ ವಾದಿಸಿದರೆ, “ಇದೆಲ್ಲದರ ಮೂಲಕ ಆತನಿಗೆ ಐಸಿಸ್ ನಂಟಿದೆ ಎನ್ನಲು‌ ಆಗುವುದಿಲ್ಲ. ಯಾಕೆಂದರೆ ಇವುಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್‌ನೆಟ್‌ನಲ್ಲಿ ಸಿಗುತ್ತವೆ. ಕುತೂಹಲ ಇರುವ ಯಾರು ಬೇಕಾದರೂ ‌ಮೊಬೈಲ್, ಕಂಪ್ಯೂಟರ್‌ನಲ್ಲಿ ಇದನ್ನು ಡೌನ್‌ಲೋಡ್ ಮಾಡಬಹುದು. ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತು ಪಡಿಸಲು ಆಗುವುದಿಲ್ಲ” ಎಂದು ಕೋರ್ಟ್‌ ಹೇಳಿದೆ.

ಈಗಾಗಲೇ ಪ್ರಕರಣ ಸಂಬಂಧ ಹಲವು ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿದೆ. ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ಇದಿನಬ್ಬ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್‌ ಮರಿಯಂಳನ್ನೂ ಬಂಧಿಸಿದೆ. ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ, ಇದಿನಬ್ಬ ಮಗ ಬಿ‌.ಎಂ.ಭಾಷಾರ ಮಗ ಅನಾಸ್ ಅಬ್ದುಲ್ ಅವರ ಪತ್ನಿ. ಅನಾಸ್ ಅಬ್ದುಲ್ ರೆಹಮಾನ್ ಮದುವೆಯಾಗಿ ಇಸ್ಲಾಂಗೆ ಮತಾಂತರಗೊಂಡಿದ್ದ ದೀಪ್ತಿ ಮಾರ್ಲ, ಮರಿಯಂ ಎಂದು ಹೆಸರು ಬದಲಿಸಿಕೊಂಡಿದ್ದಳು. ಅಮ್ಮರ್ ಅಬ್ದುಲ್ ರೆಹಮಾನ್ ಬಂಧನದ ಬಳಿಕ, ಜನವರಿ 4ರಂದು ಉಳ್ಳಾಲದಲ್ಲಿ ಮರಿಯಂಳನ್ನು ಎನ್‌ಐಎ ಬಂಧಿಸಿತ್ತು.

ಈಕೆ ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು ಎಂದು ಎನ್‌ಐಎ ಆರೋಪ ಮಾಡಿತ್ತು. ಈಕೆಯ ಭಾಗಿಧಾರಿಕೆ ಬಗ್ಗೆ ಚಾರ್ಚ್ ಶೀಟ್ ಸಲ್ಲಿಸಿದ್ದು, ಇಸ್ಲಾಮಿಕ್ ಸ್ಟೇಟ್ ಐಡಿಯಾಲಜಿಯಿಂದ ಪ್ರಭಾವಿತಳಾಗಿದ್ದಳು ಎಂದಿತ್ತು. ಮಾರ್ಚ್ 5, 2021ರಲ್ಲಿ ದೆಹಲಿಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿತ್ತು. ಇದೀಗ‌ ಐಸಿಸ್ ನಂಟಿನ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್‌ಗೆ ಜಾಮೀನು ದೊರೆತಿದ್ದು, ಇನ್ನೂ ಎನ್‌ಐಎ ವಶದಲ್ಲೇ ಇರುವ ಮರಿಯಂಗೂ ಜಾಮೀನು ಸಿಗಲು ಇದು ಪೂರಕವಾಗಲಿದೆ ಎನ್ನಲಾಗಿದೆ.

ಆರೋಪಿಗಳಾದ ದೀಪ್ತಿ ಮಾರ್ಲ, ಇದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರಹಿಮಾನ್, ಮೊಹಮ್ಮದ್ ವಕಾರ್ ಲಾನ್ ಯಾನೆ ವಿಲ್ಸನ್ ಕಾಶ್ಮೀರಿ, ಮಿಜಾ ಸಿದ್ದೀಕ್, ಶಿಫಾ ಹಾರೀಸ್ ಯಾನೆ ಆಯಿಷಾ, ಒಬೈದ್ ಹಮೀದ್ ಮಟ್ಟಾ, ಮಾದೇಶ್ ಶಂಕರ್ ಯಾನೆ ಅಬ್ದುಲ್ಲಾ, ಮುಜಾಮಿಲ್ ಹಸನ್ ಭಟ್ ವಿರುದ್ಧ ಈ ದೋಷಾರೋಪಣ ಪಟ್ಟಿಯನ್ನು ಎನ್ಐಎ ಸಲ್ಲಿಕೆ ಮಾಡಿದೆ. ಈ ಎಂಟು ಆರೋಪಿಗಳು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಐಸಿಸ್‌ಗೆ ಜನರನ್ನು ನೇಮಕ ಮಾಡುವುದು, ಭಯೋತ್ಪಾದಕ ಕೃತ್ಯಕ್ಕೆ ನಿಧಿ ಸಂಗ್ರಹಿಸುವುದರಲ್ಲಿ ತೊಡಗಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.

ಉಗ್ರ ಚಟುವಟಿಕೆ ಸಂಬಂಧಿಸಿ ಮಾರ್ಚ್ 5, 2021ರಂದು ಕೇರಳದ ಮಹಮ್ಮದ್ ಅಮೀನ್ ಮತ್ತು ಆತನ ಇಬ್ಬರು ಸಹಚರರನ್ನು ಎನ್ಐಎ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿತ್ತು. ಆ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು, ಭಟ್ಕಳ, ಬೆಂಗಳೂರು, ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಿ ಈ ಎಂಟು ಜನರನ್ನು ಬಂಧಿಸಲಾಗಿತ್ತು. ಲ್ಯಾಪ್‌ಟಾಪ್, ಸಿಮ್ ಕಾರ್ಡ್, ಹಾರ್ಡ್ ಡಿಸ್ಕ್ ಡ್ರೈವ್ ಸಹಿತ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿರುವುದರ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ, ಹೂಪ್, ಇನ್‌ಸ್ಟಗ್ರಾಂ ಬಳಸಿಕೊಂಡು ಈ ಆರೋಪಿಗಳು ಐಸಿಸ್‌ಗೆ ಜನರನ್ನು ಸೇರಿಸುವುದನ್ನು ಮಾಡುತ್ತಿದ್ದರು ಎಂದಿತ್ತು.

ಮರಿಯಂ, ಕ್ರೋನಿಕಲ್ ಪೌಂಡೇಶನ್ ಎಂಬ ಇನ್‌​ಸ್ಟಾಗ್ರಾಂ​ ಪೇಜ್ ಮೂಲಕ ಐಸಿಸ್​ ಕೆಲಸ ಮಾಡಲು ಶುರು ಮಾಡಿದ್ದಳು. ನಂತರ ಪತಿ ಅನಾಸ್ ಅಬ್ದುಲ್ ರೆಹಮಾನ್, ಸಂಬಂಧಿ ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು. ಸುಮಾರು 15 ನಕಲಿ‌ ಸೋಷಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದಾಳೆ. ಈ ಹಿಂದೆ ಎನ್ಐಎನಿಂದ ಬಂಧಿತನಾಗಿದ್ದ ಮಾದೇಶ ಪೆರುಮಾಳ್‌ನ​ನ್ನು ಮತಾಂತರ ಮಾಡಿ ಐಸಿಸ್​ಗೆ ಕೆಲಸ ಮಾಡುವಂತೆ ಮಾಡಿದ್ದಳು. ಇದುವರೆಗೂ ಸುಮಾರು 10 ಯುವಕರನ್ನು ಮತಾಂತರಗೊಳಿಸಿ ಐಸಿಸ್​ಗೆ ಸೇರಿಸಿದ್ದಾಳೆ ಎಂದು ಎನ್ಐಎ ದೂರಿದೆ.

ಇದನ್ನೂ ಓದಿ: Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Continue Reading

ದಾವಣಗೆರೆ

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Murder case : ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವದ ಕಿವಿ ಓಲೆಯಿಂದ‌ಲೇ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಡಿಕೆ ಮರಗಳನ್ನು ನಾಶ ಮಾಡಿದವಳನ್ನು ಆರೋಪಿಗಳು ಕೊಂದು ಮುಗಿಸಿದ್ದಾಗಿ ತಿಳಿದು ಬಂದಿದೆ.

VISTARANEWS.COM

on

By

Murder case in davangere
Koo

ದಾವಣಗೆರೆ/ಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು (Murder case) ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ಭದ್ರಾ ನಾಲೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾದ ಹಿನ್ನೆಲೆ ಬಸವಾ ಪಟ್ಟಣ ಠಾಣೆಯ ಪೊಲೀಸರು ಇದೊಂದು ಕೊಲೆ ಎಂದು ಭಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.

ಆದರೆ ಶವ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಶವ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಆದರೆ ಶವದ ಗುರುತಾಗಲಿ ಜತೆಗೆ ಆರೋಪಿಗಳ ಸುಳಿವು ಯಾವುದು ಸಿಕ್ಕಿರಲಿಲ್ಲ. ಇತ್ತ ಎಲ್ಲ ಠಾಣೆಗಳಲ್ಲೂ ಯಾವುದಾದರೂ ಮಿಸ್ಸಿಂಗ್‌ ಕಂಪ್ಲೇಟ್‌ ಬಂದಿದ್ಯಾ ಎಂದು ಕ್ರಾಸ್‌ ಚೆಕ್‌ ಮಾಡಿಕೊಂಡಿದ್ದರು.

ಆಗ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದರು. ಭದ್ರಾ ನಾಲೆಯಲ್ಲಿ ಸಿಕ್ಕ ಶವಕ್ಕೂ ಇಲ್ಲಿ ಮಿಸ್ಸಿಂಗ್‌ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಶವದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಿದ್ದರು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾದವರು.

ಇದನ್ನೂ ಓದಿ:Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

ಕುಮಾರ ಎಚ್ ಜಿ (38) ಹಾಗೂ ಚಿದಾನಂದಪ್ಪ (54) ಎಂಬುವವರು ನೇತ್ರಾವತಿಯನ್ನು ಕೊಂದು ನಾಲೆಗೆ ಬೀಸಾಕಿ ಹೋಗಿದ್ದರು. ಆರೋಪಿಗಳ ಜಮೀನಿನಲ್ಲಿ ನೇತ್ರಾವತಿ ಅಡಿಕೆ ಮರಗಳನ್ನು ಕಡಿದು ಹಾಕಿದ್ದಳು. ಇದೇ ಸಿಟ್ಟಿನಲ್ಲಿ ನೇತ್ರಾವತಿಯನ್ನು ಕೊಲೆ‌ ಮಾಡಿ ಬಳಿಕ ಕೈ-ಕಾಲು ಕಟ್ಟಿ ಭದ್ರಾ ಕಾಲುವೆಗೆ ಎಸೆದಿದ್ದರು. ಆದರೆ ಮಹಿಳೆಯ ಕಿವಿಯೋಲೆಯಿಂದ ಸಿಕ್ಕಿಬಿದ್ದರು.

Murder Case
ಕೊಲೆಯಾದ ನೇತ್ರಾವತಿ ಹಾಗೂ ಕೊಲೆ ಆರೋಪಿಗಳು

ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣ ಭೇದಿಸಿದ ಬಸವಾ ಪಟ್ಟಣ ಠಾಣೆಯ ಪೊಲೀಸರ ಕಾರ್ಯಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

HD Revanna: ರೇವಣ್ಣ ಬಿಡುಗಡೆಯಾಗಿ ಇಂದಿಗೆ ಮೂರನೇ ದಿನವಾಗಿದೆ. ಆದರೆ, ಒಮ್ಮೆ ಭೇಟಿ ನೀಡಿದ ಬಳಿಕ ಮತ್ತೆ ಆ ಕಡೆ ಸುಳಿಯುತ್ತಿಲ್ಲ. ಈ ಘಟನೆ ಬಳಿಕ ಎಚ್.ಡಿ. ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ವಾಸ್ತವ್ಯ ಹೂಡುತ್ತಿದ್ದಾರೆ. ಹೀಗಾಗಿ ರೇವಣ್ಣ ಅವರ ನಿವಾಸದಲ್ಲಿ ಯಾರೂ ಇಲ್ಲದಂತಾಗಿದೆ. ವಾಸ್ತು ದೋಷ ಇದೆ ಎಂದು ರೇವಣ್ಣ ಅಂಜಿದರೇ? ಅಥವಾ ಜ್ಯೋತಿಷಿಗಳು ಏನಾದರೂ ಸಲಹೆ ನೀಡಿದ್ದಾರೆಯೇ? ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.

VISTARANEWS.COM

on

Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧಿತರಾಗಿ ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್‌.‌ಡಿ. ರೇವಣ್ಣ (HD Revanna) ಅವರು ತಮ್ಮ ಬೆಂಗಳೂರಿನ ಸ್ವಂತ ನಿವಾಸದಿಂದ ದೂರವೇ ಉಳಿದಿದ್ದಾರೆ. ಇದು ಜ್ಯೋತಿಷಿಗಳ ಸಲಹೆ ಇರಬಹುದೇ ಎಂಬ ಚರ್ಚೆ ಪ್ರಾರಂಭವಾಗಿದೆ.

ಇಲ್ಲಿನ ಬಸವನಗುಡಿಯಲ್ಲಿರುವ ನಿವಾಸದಿಂದ ದೂರ ಉಳಿಯುವಂತೆ ಎಚ್‌.ಡಿ. ರೇವಣ್ಣ ಅವರಿಗೆ ಜ್ಯೋತಿಷಿಗಳು ನೀಡಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಕಾರಣ, ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ರೇವಣ್ಣ ಅವರು ಒಮ್ಮೆ ಮಾತ್ರ ಆ ನಿವಾಸಕ್ಕೆ ಭೇಟಿ ನೀಡಿದ್ದರು. ಅದೂ ಸಹ ಕೇವಲ ಎರಡೇ ನಿಮಿಷಗಳಲ್ಲಿ ಮನೆ ಪ್ರವೇಶಿಸಿ ಆಚೆ ಬಂದುಬಿಟ್ಟಿದ್ದರು.

ರೇವಣ್ಣ ಬಿಡುಗಡೆಯಾಗಿ ಇಂದಿಗೆ ಮೂರನೇ ದಿನವಾಗಿದೆ. ಆದರೆ, ಒಮ್ಮೆ ಭೇಟಿ ನೀಡಿದ ಬಳಿಕ ಮತ್ತೆ ಆ ಕಡೆ ಸುಳಿಯುತ್ತಿಲ್ಲ. ಈ ಘಟನೆ ಬಳಿಕ ಎಚ್.ಡಿ. ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ವಾಸ್ತವ್ಯ ಹೂಡುತ್ತಿದ್ದಾರೆ. ಹೀಗಾಗಿ ರೇವಣ್ಣ ಅವರ ನಿವಾಸದಲ್ಲಿ ಯಾರೂ ಇಲ್ಲದಂತಾಗಿದೆ. ವಾಸ್ತು ದೋಷ ಇದೆ ಎಂದು ರೇವಣ್ಣ ಅಂಜಿದರೇ? ಅಥವಾ ಜ್ಯೋತಿಷಿಗಳು ಏನಾದರೂ ಸಲಹೆ ನೀಡಿದ್ದಾರೆಯೇ? ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading
Advertisement
Prajwal Revanna Case Lawyer DevarajeGowda sent to police custody for another day
ಕ್ರೈಂ6 mins ago

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Lok Sabha Election 2024
Lok Sabha Election 202416 mins ago

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

isis link ummer abdul rehman mariyam
ಕ್ರೈಂ19 mins ago

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Murder case in davangere
ದಾವಣಗೆರೆ19 mins ago

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Terrorists Killed
ದೇಶ26 mins ago

Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Startup Investment
ವಾಣಿಜ್ಯ29 mins ago

Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

Virat Kohli
ಕ್ರೀಡೆ34 mins ago

Virat Kohli: ನಿವೃತ್ತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್​ ಕೊಹ್ಲಿ; ಅಭಿಮಾನಿಗಳಿಗೆ ಆತಂಕ

Bhavani Singh pankaj shivanna couple expecting-their first child
ಕಿರುತೆರೆ43 mins ago

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

ರಾಜಕೀಯ58 mins ago

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

Bomb threat
ದೇಶ1 hour ago

Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌