UPSC NDA & NA Exam | ಸೇನಾಧಿಕಾರಿ ಹುದ್ದೆಗೆ ಎನ್‌ಡಿಎ-ಎನ್‌ಎ ಪರೀಕ್ಷೆ; ಅರ್ಜಿ ಆಹ್ವಾನ - Vistara News

ಉದ್ಯೋಗ

UPSC NDA & NA Exam | ಸೇನಾಧಿಕಾರಿ ಹುದ್ದೆಗೆ ಎನ್‌ಡಿಎ-ಎನ್‌ಎ ಪರೀಕ್ಷೆ; ಅರ್ಜಿ ಆಹ್ವಾನ

ಭಾರತೀಯ ಸೇನೆಯ ಅಕಾಡೆಮಿಗಳಲ್ಲಿ ತರಬೇತಿ ಪಡೆಯುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೇಂದ್ರ ಲೋಕ ಸೇವಾ ಆಯೋಗ ಎನ್‌ಡಿಎ-ಎನ್‌ಎ ಪರೀಕ್ಷೆ ನಡೆಸುತ್ತಿದ್ದು (UPSC NDA & NA Exam), ಈಗ ಅಧಿಸೂಚನೆ ಹೊರಡಿಸಿದೆ.

VISTARANEWS.COM


on

UPSC NDA & NA Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಮುಂದಿನ 2023ರ ಏಪ್ರಿಲ್‌ನಲ್ಲಿ ನಡೆಸಲಿರುವ ನ್ಯಾಷನಲ್ ಡಿಫೆನ್ಸ್‌ ಅಕಾಡೆಮಿ ಮತ್ತು ನೇವಲ್‌ ಅಕಾಡೆಮಿ ಪರೀಕ್ಷೆಗೆ (ಎನ್‌ಡಿಎ-ಎನ್‌ಎ) (UPSC NDA & NA Exam) ಅಧಿಸೂಚನೆ ಪ್ರಕಟಿಸಿದೆ.

ಸೇನೆಯಲ್ಲಿ ಅಧಿಕಾರಿಯಾಗಬಯಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಜನವರಿ 10ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 202೦ರವರೆಗೆ ಕೇವಲ ಅವಿವಾಹಿತ ಪುರಷ ಅಭ್ಯರ್ಥಿಗಳು ಮಾತ್ರ ಈ ಪರೀಕ್ಷೆ ಬರೆಯಬಹುದಿತ್ತು. ಈಗ ಅವಿವಾಹಿತ ಮಹಿಳಾ ಅಭ್ಯರ್ಥಿಗಳು ಕೂಡ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಏಪ್ರಿಲ್‌ 16 ರಂದು ಪರೀಕ್ಷೆ
ಯುಪಿಎಸ್‌ಸಿಯು ಅಭ್ಯರ್ಥಿಗಳ ಆಯ್ಕೆಗೆ ಇದೇ ಏಪ್ರಿಲ್‌ 16 ರಂದು ಲಿಖಿತ ಪರೀಕ್ಷೆ ನಡೆಸಲಿದೆ. ರಾಜ್ಯದ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರು ಮತ್ತು ಧಾರವಾಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ತರಬೇತಿಗೆ 395 ಅಭ್ಯರ್ಥಿಗಳನ್ನು ಈ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಇವರಲ್ಲಿ ಭೂಸೇನೆಗೆ-208 (10 ಮಹಿಳೆಯರು), ನೌಕಾಪಡೆಗೆ-42 (ಮೂವರು ಮಹಿಳೆಯರು) ಮತ್ತು ವಾಯುಪಡೆಯ ಫ್ಲೈಯಿಂಗ್‌ ವಿಭಾಗಕ್ಕೆ 92 ಮತ್ತು ಗ್ರೌಂಡ್‌ ಡ್ಯೂಟಿ ವಿಭಾಗಕ್ಕೆ 28 ಮತ್ತು ನೇವಲ್ ಅಕಾಡೆಮಿಗೆ 25 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ಕಳುಹಿಸಲಾಗುತ್ತದೆ. ಈ ಅಕಾಡೆಮಿಗಳಲ್ಲಿ ಯಶಸ್ವಿಯಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳನ್ನು ಸೇನೆಯು ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  ಜನವರಿ 10, 2023 (6:00 PM)
ಅರ್ಜಿ ವಾಪಾಸ್‌ ಪಡೆಯಲು ಕೊನೆಯ ದಿನಾಂಕ:

ಜನವರಿ 18 ರಿಂದ 24, 2023
ಪರೀಕ್ಷೆ ನಡೆಯುವ ದಿನಾಂಕ:  ಏಪ್ರಿಲ್‌ ೧೬, 202೩
ಫಲಿತಾಂಶ ಪ್ರಕಟ: ಅಕ್ಟೋಬರ್‌, 202
ಕೋರ್ಸ್‌ ಪ್ರಾರಂಭ : ಜನವರಿ, 2024

ಸಹಾಯವಾಣಿ ಸಂಖ್ಯೆ: 011-23385271 / 23381125 / 23098543
ಅರ್ಜಿ ಸಲ್ಲಿಸಲು ವೆಬ್‌ವಿಳಾಸ: Website

ಭೂಸೇನೆಗೆ ಆಯ್ಕೆ ಮಾಡುವ 208 ಅಭ್ಯರ್ಥಿಗಳಲ್ಲಿ ಹತ್ತು ಮಂದಿ ಮಹಿಳೆಯರಾಗಿರಲಿದ್ದಾರೆ. ನೌಕಾಪಡೆಗೆ ಆಯ್ಕೆ ಮಾಡುವ 42 ಅಭ್ಯರ್ಥಿಗಳಲ್ಲಿ 3 ಮಂದಿ ಮಹಿಳೆಯರಿಗೆ ಅವಕಾಶ ದೊರೆಯಲಿದೆ. ವಾಯುಪಡೆಗೆ ಆಯ್ಕೆ ಯಾಗುವ ಒಟ್ಟು 120 ಅಭ್ಯರ್ಥಿಗಳಲ್ಲಿ 6 ಅಭ್ಯರ್ಥಿಗಳು ಮಹಿಳೆಯರಾಗಿರಲಿದ್ದಾರೆ. ನೇವಲ್‌ ಅಕಾಡೆಮಿಯಲ್ಲಿ ಮಾತ್ರ ಮಹಿಳೆಯರಿಗೆ ತರಬೇತಿ ಪಡೆಯಲು ಅವಕಾಶ ನೀಡಲಾಗಿಲ್ಲ.

ಯಾರು ಅರ್ಜಿ ಸಲ್ಲಿಸಬಹುದು?
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಅವಿವಾಹಿತ ಯುವಕರು ಮತ್ತು ಯುವತಿಯರು ಈ ಪರೀಕ್ಷೆ ಬರೆಯಬಹುದಾಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿ ಗಳೂ ಅರ್ಜಿಸಲ್ಲಿಸಬಹುದು.

ನೌಕಾ ಪಡೆ ಮತ್ತು ವಾಯುಪಡೆಗೆ ಸೇರಬೇಕೆಂದು ಇಚ್ಛಿಸಿದ್ದಲ್ಲಿ ದ್ವಿತೀಯ ಪಿಯುಸಿಯಲ್ಲಿ  ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಕಲಿತಿರಬೇಕು. ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳು 2004ರ ಜುಲೈ 2 ರಿಂದ 2007ರ ಜುಲೈ 1ರ ನಡುವೆ ಜನಿಸಿರಬೇಕು.

ಅರ್ಜಿ ಶುಲ್ಕ ಎಷ್ಟು?
ಎಸ್‌ಸಿ/ಎಸ್‌ಟಿ ಮತ್ತು ಸೇನೆಯ ಅಧಿಕಾರಿಗಳ (ಜೆಸಿಎ/ಎನ್‌ಸಿಎ ಒಆರ್) ಪುತ್ರರಾಗಿದ್ದಲ್ಲಿ  ಅಂಥ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯ್ತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು 100 ರೂ. ಶುಲ್ಕ ಅರ್ಜಿ ಶುಲ್ಕ ಪಾವತಿಸ ಬೇಕಿರುತ್ತದೆ. ಯಾವುದೇ ಎಸ್‌ಬಿಐ ಶಾಖೆಯಲ್ಲಿ ಶುಲ್ಕ ಪಾವತಿಸಬಹುದಾಗಿದೆ ಅಥವಾ ವೀಸಾ ಕಾರ್ಡ್/ಮಾಸ್ಟರ್ ಕಾರ್ಡ್‌ ಪೇ ಕಾರ್ಡ್/ಡೆಬಿಟ್ ಕಾರ್ಡ್‌ಗಳ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆ ಹೇಗೆ?
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಅಥವಾ  ನೇವಲ್ ಅಕಾಡೆಮಿಗೆ ಆಯ್ಕೆಯಾಗಲು ಅಭ್ಯರ್ಥಿಯು ಮೂರು ಹಂತಗಳ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪ್ರವೇಶ ಪರೀಕ್ಷೆ ಮೊದಲನೇ ಹಂತ. ಇದರಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಎಸ್‌ಎಸ್‌ಬಿ ನಡೆಸುವ ಬೌದ್ಧಿಕ ಹಾಗೂ ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗಬೇಕು. ಅಧಿಕಾರಿಗೆ ಇರಬೇಕಾದ ಅರ್ಹತೆಗಳನ್ನು ಈ ವ್ಯಕ್ತಿತ್ವ ಪರೀಕ್ಷೆಯ ಸಂದರ್ಭದಲ್ಲಿ ಒರೆಗೆ ಹಚ್ಚಿ ನೋಡಲಾಗುತ್ತದೆ. 
ಈ ಎರಡನೇ ಹಂತ ದಾಟಿದ ಅಭ್ಯರ್ಥಿಗಳು ಎಸ್‌ಎಸ್‌ಬಿ ನಡೆಸುವ ದೈಹಿಕ ಸಾಮರ್ಥ್ಯ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು. ಈ ಮೂರೂ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಿಗೆ ಅವರವರ ಆಯ್ಕೆಯ ಕೋರ್ಸ್‌ಗಳಿಗೆ ಸೀಟು ಲಭ್ಯತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ| Central University Recruitment | ಸೆಂಟ್ರಲ್‌ ವಿವಿಯಲ್ಲಿ 77 ಬೋಧಕೇತರ ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Foxconn’s Hiring: ವಿವಾಹಿತ ಮಹಿಳೆಯರಿಗೆ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಕೆಲಸ ಕೊಡುವುದಿಲ್ಲ! ಭುಗಿಲೆದ್ದ ವಿವಾದ

ಆಪಲ್ ಸಾಧನಗಳ ಪ್ರಮುಖ ತಯಾರಕರಾದ ಫಾಕ್ಸ್‌ಕಾನ್ ನ ಭಾರತದಲ್ಲಿರುವ ಕಂಪನಿಗೆ ಇತ್ತೀಚೆಗೆ ನೇಮಕಾತಿ (Foxconn’s Hiring) ಪ್ರಕ್ರಿಯೆಗಳು ನಡೆದಿದ್ದು, ವಿವಾಹಿತ ಮಹಿಳೆಯರನ್ನು ಸಂದರ್ಶನ ಮತ್ತು ಆಯ್ಕೆ ವಿಚಾರದಲ್ಲಿ ದೂರ ಇಡಲಾಗಿದೆ. ಇದಕ್ಕೆ ಅವರ ಕೌಟುಂಬಿಕ ಕಾರಣಗಳನ್ನು ನೀಡಿರುವುದಾಗಿ ತಿಳಿದುಬಂದಿದೆ. ಇದು ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ.

VISTARANEWS.COM


on

By

Foxconn's Hiring
Koo

ಆಪಲ್ (apple) ಸಾಧನಗಳ ಪ್ರಮುಖ ತಯಾರಕರಾದ ಫಾಕ್ಸ್‌ಕಾನ್ (Foxconn’s Hiring) ಭಾರತದಲ್ಲಿನ (india) ತನ್ನ ಪ್ರಮುಖ ಸ್ಮಾರ್ಟ್‌ಫೋನ್ ಸ್ಥಾವರದಲ್ಲಿ (smartphone plant) ವಿವಾಹಿತ ಮಹಿಳೆಯರನ್ನು ಹೊರಗಿಡುತ್ತಿದೆ! ಇದು ಎರಡೂ ಕಂಪನಿಗಳ ನೀತಿ ಸಂಹಿತೆಗಳಿಗೆ ವಿರುದ್ಧವಾಗಿದ್ದು, ವೈವಾಹಿಕ ಸ್ಥಿತಿಯನ್ನು (marital status) ಆಧರಿಸಿ ತಾರತಮ್ಯವನ್ನು ತೋರುತ್ತಿರುವುದು ಸ್ಪಷ್ಟವಾಗಿದೆ.

ಜೂನ್ 25ರಂದು ಮಾಧ್ಯಮವೊಂದರಲ್ಲಿ ಪ್ರಕಟವಾದ ತನಿಖಾ ವರದಿಯು ಫಾಕ್ಸ್‌ಕಾನ್ ವಿವಾಹಿತ ಮಹಿಳೆಯರಿಗೆ ಅವರ ಉದ್ಯೋಗ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ತಾರತಮ್ಯವನ್ನು ತೋರಿಸಿದೆ ಎಂದು ಬಹಿರಂಗಪಡಿಸಿತು. ಅವಿವಾಹಿತರಿಗೆ ಹೋಲಿಸಿದರೆ ವಿವಾಹಿತ ಮಹಿಳೆಯರಿಗೆ ಹೆಚ್ಚಿನ ಕುಟುಂಬ ಜವಾಬ್ದಾರಿಗಳು ಕಾರಣ ಎಂಬ ಕಾರಣಕ್ಕಾಗಿ ಅವರಿಗೆ ಕೆಲಸ ನಿರಾಕರಿಸಲಾಗುತ್ತಿದೆ.

ಮದುವೆಯ ನಂತರದ ಸಮಸ್ಯೆಗಳು

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿರುವ ಪ್ರಮುಖ ಐಫೋನ್ ಅಸೆಂಬ್ಲಿ ಘಟಕದಲ್ಲಿ ಸ್ಮಾರ್ಟ್‌ಫೋನ್ ತಯಾರಕರು ವಿವಾಹಿತ ಮಹಿಳೆಯರನ್ನು ಉದ್ಯೋಗಾವಕಾಶಗಳಿಂದ ವ್ಯವಸ್ಥಿತವಾಗಿ ಹೊರಗಿಟ್ಟಿದ್ದಾರೆ. ಪ್ರಪಂಚದ ಅತಿ ದೊಡ್ಡ ಕಾಂಟ್ರ್ಯಾಕ್ಟ್ ಎಲೆಕ್ಟ್ರಾನಿಕ್ಸ್ ತಯಾರಕರು ವಿವಾಹಿತ ಮಹಿಳೆಯರಿಗೆ “ಮದುವೆ ನಂತರದ ಹೆಚ್ಚಿನ ಸಮಸ್ಯೆಗಳಿರುತ್ತವೆ” ಎಂದು ಪ್ರತಿಪಾದಿಸುವ ಮೂಲಕ ಇದನ್ನು ಸಮರ್ಥಿಸಿದ್ದಾರೆ.
ಭಾರತದಾದ್ಯಂತ ಸುಮಾರು 12 ಫಾಕ್ಸ್‌ಕಾನ್ ನೇಮಕಾತಿ ಏಜೆನ್ಸಿಗಳ ಹಲವಾರು ಮಾಜಿ ಮತ್ತು ಪ್ರಸ್ತುತ ಉದ್ಯೋಗಿಗಳು ಇದನ್ನು ದೃಢಪಡಿಸಿದ್ದಾರೆ.

ತಾರತಮ್ಯಕ್ಕೆ ಕಾರಣಗಳೇನು?

ಏಜೆಂಟ್‌ಗಳು ಮತ್ತು ಫಾಕ್ಸ್‌ಕಾನ್ ಹೆಚ್ ಆರ್ ಅಧಿಕಾರಿಗಳು ಈ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ. ವಿವಾಹಿತ ಮಹಿಳೆಯರಿಗೆ ಗರ್ಭಾವಸ್ಥೆ ಮತ್ತು ಕುಟುಂಬದ ಜವಾಬ್ದಾರಿ ಹೆಚ್ಚಿರುವುದರಿಂದ ಅವರು ಹೆಚ್ಚಿನ ಕಾರ್ಯಕ್ಷಮತೆಯಿಂದ ಕೆಲಸ ಮಾಡುವುದಿಲ್ಲ. ಅದೂ ಅಲ್ಲದೆ ವಿವಾಹಿತ ಹಿಂದೂ ಮಹಿಳೆಯರು ಮೈತುಂಬ ಆಭರಣ ಧರಿಸಿ ಬರುತ್ತಿರುವ ಕಾರಣ ನಮ್ಮ ಉತ್ಪಾದನೆಗೆ ಅಡ್ಡಿಯಾಗುತ್ತದೆ ಎಂಬ ವಿಚಿತ್ರ ಪ್ರತಿಪಾದನೆ ಕೇಳಿ ಬರುತ್ತಿದೆ.

ತೈವಾನ್ ಪ್ರಧಾನ ಕಚೇರಿಯ ತಯಾರಕರು ಕಾರ್ಮಿಕ ಕೊರತೆಯನ್ನು ಎದುರಿಸುತ್ತಿರುವಾಗ ಹೆಚ್ಚಿನ ಉತ್ಪಾದನಾ ಅವಧಿಯಲ್ಲಿ ವಿವಾಹಿತ ಮಹಿಳೆಯರನ್ನು ನೇಮಿಸಿಕೊಳ್ಳದಿರುವ ತನ್ನ ನೀತಿಯನ್ನು ಸಡಿಲಿಸುತ್ತಿದ್ದಾರೆ ಎಂದು ಕಂಪೆನಿಯ ಹೆಚ್ ಆರ್ ಒಬ್ಬರು ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ, ನೇಮಕಾತಿ ಏಜೆನ್ಸಿಗಳು ಮಹಿಳಾ ಅಭ್ಯರ್ಥಿಗಳಿಗೆ ತಮ್ಮ ವೈವಾಹಿಕ ಸ್ಥಿತಿಯನ್ನು ಮರೆಮಾಚಲು ಸಹಾಯ ಮಾಡುತ್ತವೆ ಎನ್ನಲಾಗಿದೆ.

ಸರಿಪಡಿಸಲು ಕ್ರಮ

ಆಪಲ್ ಮತ್ತು ಫಾಕ್ಸ್‌ಕಾನ್ 2022ರಲ್ಲಿ ತಮ್ಮ ನೇಮಕಾತಿ ಅಭ್ಯಾಸಗಳಲ್ಲಿನ ನ್ಯೂನತೆಗಳನ್ನು ಒಪ್ಪಿಕೊಂಡಿವೆ ಮತ್ತು ಪರಿಸ್ಥಿತಿಯನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಕಂಪನಿ ಹೇಳಿದೆ. ಆದರೂ ಶ್ರೀಪೆರಂಬದೂರ್ ಸ್ಥಾವರದಲ್ಲಿ 2023 ಮತ್ತು 2024ರ ನೇಮಕಾತಿಯಲ್ಲಿ ಈ ಲೋಪ ಸಂಭವಿಸಿವೆ.

ಇದನ್ನೂ ಓದಿ: Frank Duckworth : ಮಳೆ ಪೀಡಿತ ಪಂದ್ಯಗಳಿಗೆ ಅನ್ವಯಿಸುವ ಡಕ್ವರ್ತ್​​ ಲೂಯಿಸ್ ನಿಯಮದ ರೂವಾರಿ ಫ್ರಾಂಕ್​ ಡಕ್ವರ್ತ್​​ ನಿಧನ

Continue Reading

ಉದ್ಯೋಗ

Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Job Alert: ರೈಲ್ವೆ ರಿಕ್ರೂಟ್‌ಮೆಂಟ್‌ ಸೆಲ್‌ ಈಶಾನ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷಗಳ ತರಬೇತಿ ಅವಧಿ ಇದಾಗಿದ್ದು, ಐಟಿಐ ಪಾಸಾಗಿ ದೇಶದ ಯಾವುದೇ ಭಾಗದಲ್ಲಿ ಉದ್ಯೋಗ ನಿರ್ವಹಿಸಲು ತಯಾರಿರುವವರು ಸರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 11.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ರಿಕ್ರೂಟ್‌ಮೆಂಟ್‌ ಸೆಲ್‌ (Railway Recruitment Cell) ಈಶಾನ್ಯ ರೈಲ್ವೆ ವಿಭಾಗ (North Eastern Railway)ದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಿದೆ (RRC NER Apprentice Recruitment 2024). 1 ವರ್ಷಗಳ ತರಬೇತಿ ಅವಧಿ ಇದಾಗಿದ್ದು, ಐಟಿಐ ಪಾಸಾಗಿ ದೇಶದ ಯಾವುದೇ ಭಾಗದಲ್ಲಿ ಉದ್ಯೋಗ ನಿರ್ವಹಿಸಲು ತಯಾರಿರುವವರು ಸರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 11 (Job Alert).

ಹುದ್ದೆಗಳ ವಿವರ

ಮೆಕ್ಯಾನಿಕಲ್ ವರ್ಕ್‌ಶಾಪ್‌ ಗೋರಖ್‌ಪುರ್- 411
ಸಿಗ್ನಲ್ ವರ್ಕ್‌ಶಾಪ್‌ ಗೋರಖ್‌ಪುರ್- 63
ಬ್ರಿಡ್ಜ್‌ ವರ್ಕ್‌ಶಾಪ್‌ ಗೋರಖ್‌ಪುರ್‌- 35
ಮೆಕ್ಯಾನಿಕಲ್ ವರ್ಕ್‌ಶಾಪ್‌ ಇಜ್ಜಾತ್‌ ನಗರ್- 151
ಡೀಸೆಲ್ ಶೇಡ್‌ ಇಜ್ಜಾತ್ ನಗರ್- 60
ಕ್ಯಾರಿಯೇಜ್ ಆ್ಯಂಡ್‌ ವ್ಯಾಗನ್ ಇಜ್ಜಾತ್ ನಗರ್- 64
ಕ್ಯಾರಿಯೇಜ್ ಅಂಡ್ ವ್ಯಾಗನ್ ಲಕ್ನೊ ಜಂಕ್ಷನ್- 155
ಡೀಸೆಲ್‌ ಶೆಡ್ ಗೊಂಡ- 90
ಕ್ಯಾರಿಯೇಜ್ ಆ್ಯಂಡ್‌ ವ್ಯಾಗನ್ ವಾರಣಾಸಿ- 75 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಎಸ್‌ಎಸ್‌ಎಲ್‌ಸಿ ನಂತರ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್‌, ಕಾರ್ಪೆಂಟರ್, ಮಷಿನಿಸ್ಟ್‌ ಮತ್ತಿತರ ಟ್ರೇಡ್‌ಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ. 50 ಅಂಕಗಳೊಂದಿಗೆ ಐಟಿಐ ತೇರ್ಗಡೆ ಹೊಂದಿರುವುದು ಕಡ್ಡಾಯ. ಜತೆಗೆ ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 15 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ವಿಶೇಷ ಚೇತನರಿಗೆ 10 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಆರ್ಥಿಕವಾಗಿ ಹಿಂದುಳಿದವರು / ಮಹಿಳಾ ಅಭ್ಯರ್ಥಿಗಳು, ವಿಶೇಷ ಚೇತನರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

RRC NER Apprentice Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://apprentice.rrcner.net/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಲಗತ್ತಿಸಿ ಲಾಗಿನ್‌ ಆಗಿ.
  • ಸೂಕ್ತ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ 91 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Job Alert: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 15 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್‌ 29ರವರೆಗೆ ವಿಸ್ತರಿಸಲಾಗಿದೆ. ಡಿಪ್ಲೋಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ನಿಮ್ಮ ಕನಸು ನನಸಾಗಿಸುವ ಗೋಲ್ಡನ್‌ ಚಾನ್ಸ್‌ ಇಲ್ಲಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Government Tool Room & Training Centre) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ (GTTC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 15 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್‌ 29ರವರೆಗೆ ವಿಸ್ತರಿಸಲಾಗಿದೆ. ಡಿಪ್ಲೋಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ (Job Alert).

ಹುದ್ದೆಗಳ ವಿವರ

ಉಪನ್ಯಾಸಕ (ಎಂಜಿನಿಯರಿಂಗ್)- 30 ಹುದ್ದೆ, ವಿದ್ಯಾರ್ಹತೆ: ಮೆಕಾಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ.
ಇಂಜಿನಿಯರ್- 2 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್ / ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ ಪದವಿ
ಆಫೀಸರ್ ಗ್ರೇಡ್-II- 2 ಹುದ್ದೆ, ವಿದ್ಯಾರ್ಹತೆ: ಕಲೆ / ವಿಜ್ಞಾನ / ಬಿಸಿನೆಸ್ ಅಡ್ಮಿನ್‌ನಲ್ಲಿ ಪದವಿ
ಫೋರ್‌ಮನ್‌ ಗ್ರೇಡ್-II- 4 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಟೂಲ್ & ಡೈ ಮೇಕಿಂಗ್
ಬೋಧಕ (Instructor) ಗ್ರೇಡ್-I- 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್
ಟೆಕ್ನಿಷಿಯನ್ ಗ್ರೇಡ್-II- 8 ಹುದ್ದೆ, ವಿದ್ಯಾರ್ಹತೆ: 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್
ಬೋಧಕ ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್
ಟೆಕ್ನಿಷಿಯನ್ ಗ್ರೇಡ್-III- 23 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಟೆಕ್ನಿಷಿಯನ್ ಗ್ರೇಡ್-IV- 4 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್, ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆಯಲ್ಲಿ ಐಟಿಐ
ಸಹಾಯಕ (Assistant) ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಕಲೆ / ವಾಣಿಜ್ಯ / ವಿಜ್ಞಾನದಲ್ಲಿ ಪದವಿ, ಸೆಕ್ರೆಟರಿಯಲ್ ಪ್ರಾಕ್ಟೀಸ್ / ಮಾಡರ್ನ್ ಆಫೀಸ್ ಪ್ರಾಕ್ಟೀಸ್ / ಕಮರ್ಷಿಯಲ್ ಪ್ರಾಕ್ಟೀಸ್ / ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೋಮಾ.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18-27 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ಮತ್ತು ಎಸ್‌ಸಿ / ಎಸ್‌ಟಿ / ಕ್ಯಾಟಗರಿ-I / ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ವಿಭಾಗದ ಅಭ್ಯರ್ಥಿಗಳು 750 ರೂ., ಎಸ್‌ಸಿ / ಎಸ್‌ಟಿ / ಕ್ಯಾಟಗರಿ I / ಮಾಜಿ ಯೋಧರು 500 ರೂ., ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯ ನೋಟಿಸ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

GTTC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ 91 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ (Job Alert) ಆಹ್ವಾನಿಸಲಾಗಿದೆ. ಬಿಕಾಂ ಪದವೀಧರರು, ಕಂಪ್ಯೂಟರ್, ಅಕೌಂಟಿಂಗ್ ಜ್ಞಾನ ಹೊಂದಿರುವವ ಅನುಭವಿಗಳು ವೆಬ್ ಸೈಟ್ ನಿಂದ ಅರ್ಜಿ ನಮೂನೆಯನ್ನು ಪಡೆದು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು.

VISTARANEWS.COM


on

By

Job Alert
Koo

ಬೆಂಗಳೂರು: ಬ್ಯಾಂಕ್ ಉದ್ಯೋಗ (bank job) ಬಯಸುತ್ತಿರುವವರಿಗೆ ಸಿಹಿ ಸುದ್ದಿ. ಸುಪ್ರಸಿದ್ದ ಕೆನರಾ ಬ್ಯಾಂಕ್ (bank) ಒಂದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Job Alert) ಆಹ್ವಾನಿಸಲಾಗಿದೆ. ಬಿಕಾಂ ಪದವೀಧರರು, ಕಂಪ್ಯೂಟರ್, ಅಕೌಂಟಿಂಗ್ ಜ್ಞಾನ ಹೊಂದಿರುವ ಅನುಭವಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನ (canara bank) ಅಧಿಕೃತ ವೆಬ್ ಸೈಟ್ ಮೂಲಕ ಸಂಪೂರ್ಣ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆ ವಿವರ

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯ ಜವಾಬ್ದಾರಿ ನೀಡಲಾಗುತ್ತದೆ. ಆಯ್ಕೆಯ ಬಳಿಕ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತನ, ಇತರ ಸೌಲಭ್ಯಗಳು ದೊರೆಯಲಿದೆ.

ಅರ್ಹತೆ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, ಎಸ್ ಸಿ/ಎಸ್ ಟಿ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಬಿಕಾಂ ಪದವಿ ಪಡೆದಿರುವ, ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ

ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳು ಆಯ್ಕೆ ಮಾಡಿ ಮುಖಾಮುಖಿ ಸಂದರ್ಶನದ ಬಳಿಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment ಗೆ ಭೇಟಿ ನೀಡಿ ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. ಕೇಳಿರುವ ಮಾಹಿತಿಯನ್ನು ತುಂಬಿಸಿ ಅರ್ಜಿಯನ್ನು ಭರ್ತಿ ಮಾಡಿ. ಫೋಟೋ, ಸಹಿ, ಶೈಕ್ಷಣಿಕ ಪ್ರಮಾಣಪತ್ರ, ಅನುಭವದ ಪುರಾವೆ ಸೇರಿದಂತೆ ಇತರ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದೆ. ಇದನ್ನು ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮಾಡಿ. ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಅಂಚೆ ಮೂಲಕ ಜೂನ್ 30ರೊಳಗೆ ಸಲ್ಲಿಸಬೇಕಿದೆ.

Continue Reading
Advertisement
IRCTC
ದೇಶ42 seconds ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ4 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest6 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ10 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್12 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest13 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ14 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ18 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ51 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್59 mins ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌