ಕೋವಿಡ್‌ ಸುದ್ದಿ ಸಮಗ್ರ | ಕೊರೊನಾ ಭೀತಿ, ದೇಶಾದ್ಯಂತ ಹೈ ಅಲರ್ಟ್, ಕರ್ನಾಟಕದಲ್ಲಿ ಮತ್ತೆ ಮಾಸ್ಕ್‌ ಕಡ್ಡಾಯ - Vistara News

ಕರ್ನಾಟಕ

ಕೋವಿಡ್‌ ಸುದ್ದಿ ಸಮಗ್ರ | ಕೊರೊನಾ ಭೀತಿ, ದೇಶಾದ್ಯಂತ ಹೈ ಅಲರ್ಟ್, ಕರ್ನಾಟಕದಲ್ಲಿ ಮತ್ತೆ ಮಾಸ್ಕ್‌ ಕಡ್ಡಾಯ

ದೇಶಾದ್ಯಂತ ಕೊರೊನಾ ಭೀತಿ ಕಾಡುತ್ತಿದೆ. ಕರ್ನಾಟಕ ಸರ್ಕಾರವು ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಿದೆ. ತಪಾಸಣೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೊರೊನಾ ಕುರಿತು ಇಡೀ ದಿನ ನಡೆದ ಪ್ರಮುಖ ಬೆಳವಣಿಗೆಗಳ ಅವಲೋಕನ, ಕೋವಿಡ್‌ ಸುದ್ದಿ ಸಮಗ್ರ ಇಲ್ಲಿದೆ.

VISTARANEWS.COM


on

Bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚೀನಾದಲ್ಲಿ ಓಮಿಕ್ರಾನ್‌ ಉಪತಳಿ ಬಿಎಫ್‌.7 ಹೊಸ ಅಲೆಗೆ ಕಾರಣವಾಗುತ್ತಿರುವ ಬೆನ್ನಲ್ಲೇ ಭಾರತದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಆಯಾ ರಾಜ್ಯ ಸರ್ಕಾರಗಳು ವಿವಿಧ ಕ್ರಮ ತೆಗೆದುಕೊಳ್ಳುತ್ತಿವೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಉನ್ನತ ಮಟ್ಟದ ಸಭೆ ಆಯೋಜಿಸುವ ಮೂಲಕ ದೇಶದ ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಇದರ ಜತೆಗೆ ಕರ್ನಾಟಕದಲ್ಲೂ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸೂಚಿಸುವುದರ ಮೂಲಕ ಸೋಂಕಿನ ವಿರುದ್ಧದ ಹೋರಾಟಕ್ಕೆ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಲಾಗುತ್ತಿದೆ.

ಕರ್ನಾಟಕ ಸರ್ಕಾರವೂ ಸೋಂಕು ನಿಗ್ರಹಕ್ಕೆ ಹಲವು ರೀತಿಯ ಕ್ರಮ ತೆಗೆದುಕೊಳ್ಳುತ್ತಿದೆ. ಬೆಳಗಾವಿ ಅಧಿವೇಶನದ ಮಧ್ಯೆಯೇ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿರುವ ಕೊರೊನಾ ಪರಿಸ್ಥಿತಿ, ವೈದ್ಯಕೀಯ ಸೌಕರ್ಯ, ಮುಂಬರುವ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಸೇರಿ ಹಲವು ವಿಷಯಗಳನ್ನು ಚರ್ಚಿಸಿದರು. ಇದಾದ ಬಳಿಕವೇ ಒಳಾಂಗಣದಲ್ಲಿ ಮಾಸ್ಕ್‌ ಧರಿಸುವ ಸೂಚನೆ ನೀಡಲಾಯಿತು.

ಬೂಸ್ಟರ್‌ಡೋಸ್‌ ನೀಡಿಕೆಗೆ ಬೂಸ್ಟ್‌, ತಪಾಸಣೆ ಹೆಚ್ಚಳ: ಸುಧಾಕರ್‌
ಕರ್ನಾಟಕದಲ್ಲಿ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್‌ ಧರಿಸುವ ನಿಯಮದ ಜತೆಗೆ ರಾಜ್ಯ ಸರ್ಕಾರವು ಹಲವು ಕ್ರಮ ತೆಗೆದುಕೊಂಡಿದೆ. “ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ. ಬೂಸ್ಟರ್‌ಡೋಸ್‌ ನೀಡಿಕೆಗೆ ಆದ್ಯತೆ, ಶೇ.100ರಷ್ಟು ಸಾಧನೆ ಗುರಿ, ವಿಮಾನ ನಿಲ್ದಾಣಗಳಿಗೆ ಬರುವ ವಿದೇಶಿ ಪ್ರಯಾಣಿಕರ ತಪಾಸಣೆ, ಆಸ್ಪತ್ರೆಗಳಲ್ಲಿ ಕೃತಕ ಆಮ್ಲಜನಕ ಸಂಗ್ರಹ, ಲಭ್ಯತೆ, ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗಾಗಿಯೇ ಹಾಸಿಗೆ ಮೀಸಲು ಸೇರಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು. ಹಾಗೆಯೇ, ರಾಜ್ಯದಲ್ಲಿ ಜ್ವರದಿಂದ ಬಳಲುತ್ತಿರುವವರ ಕೊರೊನಾ ತಪಾಸಣೆ ಮಾಡಲು ಕೂಡ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹೆಚ್ಚಿನ ನಿಗಾ ಇರಲಿ, ರಾಜ್ಯಗಳಿಗೆ ಕೇಂದ್ರ ಸೂಚನೆ
ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೆ ಹಲವು ನಿರ್ದೇಶನ ನೀಡಿದೆ. “ರಾಜ್ಯ ಸರ್ಕಾರಗಳು ಪ್ರಯಾಣಿಕರು ಸೇರಿ ಎಲ್ಲರ ಮೇಲೂ ಹೆಚ್ಚಿನ ನಿಗಾ ವಹಿಸಬೇಕು. ಮಾಸ್ಕ್‌ ಧಾರಣೆ, ಕೊರೊನಾ ತಪಾಸಣೆ ಸೇರಿ ಹಲವು ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೆನೋಮ್‌ ಸೀಕ್ವೆನ್ಸಿಂಗ್‌ಗೆ ಆದ್ಯತೆ ನೀಡಬೇಕು” ಎಂದು ಕೇಂದ್ರ ಆರೋಗ್ಯ ಮನ್ಸುಖ್‌ ಮಂಡಾವಿಯ ರಾಜ್ಯಗಳಿಗೆ ಸೂಚಿಸಿದ್ದಾರೆ.

ಕೊರೊನಾ ಕುರಿತ ದಿನದ ಪ್ರಮುಖ ಬೆಳವಣಿಗೆಗಳು
– ಸಂಸತ್ತಿನಲ್ಲಿ ಪ್ರತಿಯೊಬ್ಬರೂ ಮಾಸ್ಕ್‌ ಧರಿಸುವಂತೆ ಸದಸ್ಯರಿಗೆ ಸ್ಪೀಕರ್‌ ಓಂ ಬಿರ್ಲಾ ಸೂಚನೆ
– ಜಿ-20 ಸಭೆಗಳನ್ನು ವರ್ಚ್ಯುವಲ್‌ ಆಗಿಯೇ ನಡೆಸಲು ಆದ್ಯತೆ ನೀಡಬೇಕು ಎಂದು ಭಾರತ ಪ್ರತಿಪಾದನೆ
– ಕೇರಳ, ದೆಹಲಿಯಲ್ಲಿಯೂ ಕಟ್ಟೆಚ್ಚರ ವಹಿಸಿದ ಸರ್ಕಾರಗಳು, ತಪಾಸಣೆಗೆ ಹೆಚ್ಚಿನ ಆದ್ಯತೆ
– ವಿದೇಶ ಪ್ರವಾಸ ಕೈಗೊಳ್ಳದಿರಿ ಎಂದು ನಾಗರಿಕರಿಗೆ ದೇಶದ ತಜ್ಞರಿಂದ ಎಚ್ಚರಿಕೆ
– ಬಿಎಫ್‌.7 ಉಪತಳಿ ಬಗ್ಗೆ ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಹೆಚ್ಚಿನ ಅಲರ್ಟ್‌
– ಕೊರೊನಾ ಭೀತಿಯಿಂದಾಗಿ ರಾಜಸ್ಥಾನದಲ್ಲಿ ಜನಾಕ್ರೋಶ ಯಾತ್ರೆ ರದ್ದುಪಡಿಸಿದ ಬಿಜೆಪಿ
– ಮುಂದಿನ ವಾರ ಭಾರತ್‌ ಬಯೋಟೆಕ್‌ನ ನಾಸಲ್‌ (ಮೂಗಿನ ಮೂಲಕ ನೀಡುವ) ಬೂಸ್ಟರ್‌ ಡೋಸ್‌ ಲಭ್ಯ
– ಗುಜರಾತ್‌ನಲ್ಲಿ ಚೀನಾದಿಂದ ಬಂದ ವ್ಯಕ್ತಿಯೊಬ್ಬನಿಗೆ ಸೋಂಕು, ಜೆನೋಮ್‌ ಸೀಕ್ವೆನ್ಸಿಂಗ್‌ಗೆ ರವಾನೆ

ಇದನ್ನೂ ಓದಿ | ‌coronavirus | ಅಂತೆ ಕಂತೆ ಬಿಡಿ, 3ನೇ ಡೋಸ್‌ ಲಸಿಕೆ ಪಡೆಯಿರಿ ಎಂದ ಸುಧಾಕರ್‌: ಒಳಾಂಗಣದಲ್ಲಿ ಮಾಸ್ಕ್‌ ಕಡ್ಡಾಯ

ಮೋದಿ ಉನ್ನತ ಮಟ್ಟದ ಸಭೆ, ಹಲವು ಸೂಚನೆ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿ, ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರು. ಹಾಗೆಯೇ, ದೇಶದ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದನ್ನು ಮರೆಯಬಾರದು. ಸರ್ಕಾರಗಳು ಕೂಡ ಇಂತಹ ಕ್ರಮಗಳಿಗೆ ಆದ್ಯತೆ ನೀಡಬೇಕು. ಮುಂದಿನ ದಿನಗಳಲ್ಲಿ ಹಬ್ಬಗಳು, ಹೊಸ ವರ್ಷಾಚರಣೆ ಇರುವುದರಿಂದ ಹೆಚ್ಚಿನ ಜನ ಸೇರುವಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು. ಹಾಗೆಯೇ, ರಾಜ್ಯಗಳಲ್ಲಿ ಕೊರೊನಾ ತಪಾಸಣೆ ಹೆಚ್ಚಿಸಬೇಕು ಎಂದು ಕೂಡ ಸೂಚಿಸಿದರು.

ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆಯೇ?
ಸದ್ಯದ ಮಟ್ಟಿಗೆ ಭಾರತದಲ್ಲಿ ನಿತ್ಯ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿಲ್ಲ. ಕಳೆದ ಒಂದು ವಾರದಲ್ಲಿ ಸರಾಸರಿ ನಿತ್ಯ 157 ಪ್ರಕರಣಗಳು ದಾಖಲಾದರೆ, ಡಿಸೆಂಬರ್‌ 22ರಂದು 185 ಕೇಸ್‌ಗಳು ದಾಖಲಾಗಿದ್ದವು. ಬುಧವಾರಕ್ಕೆ ದೇಶದಲ್ಲಿ 131 ಪ್ರಕರಣ ದಾಖಲಾಗಿದ್ದವು. ಪ್ರಕರಣಗಳ ಸಂಖ್ಯೆಯಲ್ಲಿ ತುಸು ಏರಿಕೆಯಾದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂಬುದಾಗಿ ಮೋದಿ ಅವರಿಗೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Coronavirus | ಕೊರೊನಾ ಭೀತಿ ಹಿನ್ನೆಲೆ ಮೋದಿ ಉನ್ನತ ಮಟ್ಟದ ಸಭೆ, ಕಠಿಣ ನಿರ್ಬಂಧ ಚರ್ಚೆಯಾಯಿತೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Namma Metro : ಗುಡ್‌ ನ್ಯೂಸ್‌- ಹಳದಿ ಮೆಟ್ರೋ ಮಾರ್ಗದಲ್ಲಿ ಟ್ರಯಲ್ ರನ್‌ ಮುಕ್ತಾಯ; ಸಿಗ್ನಲಿಂಗ್ ಟೆಸ್ಟ್ ಆರಂಭ

Namma Metro : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಗುಡ್‌ ನ್ಯೂಸ್‌ ನೀಡಿದೆ. ಹಳದಿ ಮಾರ್ಗದ (Yello line) ಚಾಲಕ ರಹಿತ (Driverless Train) ರೈಲು ಸಂಚಾರದ ಟ್ರಯಲ್‌ ರನ್‌ ಮುಕ್ತಾಯಗೊಂಡಿದ್ದು, ಸಿಗ್ನಲಿಂಗ್‌ ಟೆಸ್ಟ್‌ ಆರಂಭಗೊಂಡಿದೆ.

VISTARANEWS.COM


on

By

Namma metro Yellow line
Koo

ಬೆಂಗಳೂರು: ಬಹು ನಿರೀಕ್ಷಿತ ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದಲ್ಲಿ (Namma Metro Yellow line) ಟ್ರಯಲ್ ರನ್‌ ಮುಕ್ತಾಯಗೊಂಡಿದ್ದು, ಸಿಗ್ನಲಿಂಗ್ ಟೆಸ್ಟ್ (Driverless Metro train) ಆರಂಭವಾಗಿದೆ. ರಾಜಧಾನಿಯಲ್ಲಿ ಚಾಲಕರಹಿತ ಮೆಟ್ರೋ ರೈಲು (Driverless Metro train) ಸಂಚಾರಕ್ಕೆ ಸರ್ವ ಸಿದ್ಧತೆಗಳು ನಡೆಯುತ್ತಿವೆ. ಬಿಎಂಆರ್‌ಸಿಎಲ್‌ ತಂಡವು ಚೀನಾದ ಡ್ರೈವರ್ಲೆಸ್ ಮೆಟ್ರೋ‌ ಮೂಲಕ ಸಿಗ್ನಲಿಂಗ್ ಟೆಸ್ಟ್ ನಡೆಸಿದೆ. ಟ್ರಯಲ್ ಯಶಸ್ವಿಯಾದ ಬೆನ್ನಲ್ಲೇ ಸಿಗ್ನಲಿಂಗ್ ಟೆಸ್ಟ್ ಆರಂಭಿಸಲಾಗಿದೆ. ಹಂತ ಹಂತವಾಗಿ ಸಿಗ್ನಲಿಂಗ್ ಟೆಸ್ಟ್ ನಡೆಯಲಿದ್ದು, ಇದು ಮುಗಿಯುತ್ತಿದ್ದಂತೆ ದೂರಸಂಪರ್ಕ ಹಾಗೂ ವಿದ್ಯುತ್ ಪರೀಕ್ಷೆಗಳು ನಡೆಯಲಿದೆ.

Namma Metro Yellow Line

ಈ ಹಳದಿ ಮಾರ್ಗವು ಒಟ್ಟು 16 ಮೆಟ್ರೋ ಸ್ಟೇಷನ್‌ಗಳು ಇದ್ದು, ಬೆಂಗಳೂರಿನ ಆರ್‌.ವಿ ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸಲಿದೆ. 18.82 ಕಿ.ಮೀ. ಉದ್ದದ ಮೆಟ್ರೋ ಮಾರ್ಗದ ಕಾಮಗಾರಿ 2017ರ ನವೆಂಬರ್‌ನಲ್ಲಿ ಆರಂಭವಾಗಿತ್ತು. ಎಲ್ಲವೂ ಸರಿ ಇದ್ದರೆ 2023ರ ಜೂನ್‌ನಲ್ಲೇ ರೈಲು ಓಡಬೇಕಾಗಿತ್ತು. ಆದರೆ, ಕೆಲವೊಂದು ಕಾಮಗಾರಿ ವಿಳಂಬದಿಂದ ಮೊದಲು 2023 ಮತ್ತು ಬಳಿಕ 2024ರ ಫೆಬ್ರವರಿಯಲ್ಲಿ ಓಡಾಟ ಶುರುವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗ ಅದು 2024ರ ಜುಲೈನಲ್ಲಿ ಟ್ರಯಲ್ ರನ್‌ ಮುಕ್ತಾಯವಾಗಿದ್ದು, ಸಿಗ್ನಲಿಂಗ್ ಟೆಸ್ಟ್ ಆರಂಭವಾಗಿದೆ.

ಸದ್ಯ ಎಲ್ಲಾ ರೀತಿಯ ಪರೀಕ್ಷೆಗಳು ಮುಗಿದ ನಂತರ ಸುರಕ್ಷತಾ ಪರೀಕ್ಷೆ ನಡೆಸಿ ವರದಿ ಸಲ್ಲಿಸಲಾಗುತ್ತದೆ. ಕೇಂದ್ರ ರೈಲ್ವೆ ಸುರಕ್ಷತಾ ಅಧಿಕಾರಿಗಳ ಪರಿಶೀಲನೆ ನಂತರ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತವೆ.

Namma Metro Yellow Line

ಎಲ್ಲಿಂದ ಎಲ್ಲಿವರೆಗೆ ಹಳದಿ ಮಾರ್ಗ?

ಹಳದಿ ಲೈನ್‌ ಮೆಟ್ರೋ ಆರಂಭವಾಗುವುದು ಈಗ ಹಸಿರು ಮಾರ್ಗದಲ್ಲಿರುವ ರಾಷ್ಟ್ರೀಯ ವಿದ್ಯಾಲಯ ರಸ್ತೆ ಸ್ಟೇಷನ್‌ನಿಂದ. ರಾಷ್ಟ್ರೀಯ ವಿದ್ಯಾಲಯ ಸ್ಟೇಷನ್‌ನಿಂದ ರಾಗಿಗುಡ್ಡ, ಜಯದೇವ ಆಸ್ಪತ್ರೆ ಬಿ ಟಿ ಎಂ ಬಡಾವಣೆ, ಕೇಂದ್ರ ರೇಷ್ಮೆ ಮಂಡಳಿ, ಬೊಮ್ಮನಹಳ್ಳಿ (ರೂಪೇನ ಅಗ್ರಹಾರ), ಹೊಂಗಸಂದ್ರ (ಗಾರ್ವೇಬಾವಿ ಪಲ್ಯ), ಕೂಡ್ಲು ದ್ವಾರ, ಸಿಂಗಸಂದ್ರ, ಹೊಸ ರಸ್ತೆ, ಬೆರಟೇನ ಅಗ್ರಹಾರ, ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಹುಸ್ಕೂರು ರಸ್ತೆ (ವೀರಸಂದ್ರ), ಹೆಬ್ಬಗೋಡಿ, ಬೊಮ್ಮಸಂದ್ರ ಹೀಗೆ 14 ಸ್ಟೇಷನ್‌ಗಳು ಈ ಮಾರ್ಗದಲ್ಲಿವೆ.

Namma Metro Yellow line
Continue Reading

ಕ್ರೈಂ

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Road Accident : ಪ್ರತ್ಯೇಕ ಕಡೆಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ವಾಟರ್‌ ಟ್ಯಾಂಕರ್‌ ಹರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಸ್ಕೂಟರ್‌ನಲ್ಲಿ ಹೆದ್ದಾರಿ ದಾಟುವಾಗ ಕಾರೊಂದು ಬಡಿದು ಸವಾರ ಬಲಿಯಾಗಿದ್ದಾರೆ.

VISTARANEWS.COM


on

By

Road Accident
Koo

ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್‌ ತಲೆ ಮೇಲೆ ಟ್ಯಾಂಕರ್‌ ಹರಿದಿದೆ. ಅಪಘಾತದಲ್ಲಿ ಕಿರಣ್‌ ಕುಮಾರ್‌ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್‌ ಲೇಔಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್‌ ಟ್ಯಾಂಕರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್‌ ಡೆತ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಡಿವೈಡರ್‌ ಏರಿದ ಕಾರು

ಮೈಸೂರಿನಲ್ಲಿ ಚಾಲಕನ‌ ಅಜಾಗರೂಕತೆಯಿಂದ ಕಾರೊಂದು ಡಿವೈಡರ್ ಮೇಲೇರಿದ ಘಟನೆ ನಡೆದಿದೆ. ಮೈಸೂರಿನ ಬೋಗಾದಿ ಸಿಗ್ನಲ್ ಬಳಿ ಲಾರಿಯನ್ನು ಓವರ್‌ ಟೇಕ್‌ ಮಾಡುವ ತವಕದಲ್ಲಿ ಕಾರು ಡಿವೈಡರ್ ಮೇಲೇರಿದೆ. ತಡರಾತ್ರಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

Self Harming: ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್‌ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

VISTARANEWS.COM


on

self harming mysore
ಆತ್ಮಹತ್ಯೆ ಮಾಡಿಕೊಂಡ ಭಾಗ್ಯಮ್ಮ, ಮಗಳು, ಕೊಲೆಯಾದ ಮಗ ಅಭಿಷೇಕ್‌, ಭಾವ ರವಿಚಂದ್ರ
Koo

ಮೈಸೂರು: ಕೊಲೆಯಾಗಿ (Murder Case) ಹೋದ ಪುತ್ರನ (Son) ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು (Mother) ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಮೈಸೂರಿನ (Mysore News) ಕೂರ್ಗಳ್ಳಿಯಲ್ಲಿ ನಡೆದಿದೆ.

ಭಾಗ್ಯಮ್ಮ (46) ಪುತ್ರನ ಸಾವಿನ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್‌ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್‌ 9ರಂದು ನಡೆದಿತ್ತು.

ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್‌ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ದರೋಡೆ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಒಂದು ಶಾಕಿಂಗ್‌ ಘಟನೆ ನಡೆದಿದೆ. 56 ವರ್ಷದ ಎಚ್‌ಐವಿ ಪೀಡಿತ ವ್ಯಕ್ತಿಯೊಬ್ಬರನ್ನು ಅವರ ನಿವಾಸದಲ್ಲೇ ಅತ್ಯಾಚಾರ ಎಸಗಿ ದರೋಡೆ ಮಾಡಿರುವ ಆಘಾತಕಾರಿ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ವರದಿಯಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎನ್‌ಜಿಒವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಒಂದು ವರ್ಷದ ಹಿಂದೆ ಆರೋಪಿ ಶ್ಯಾಮ್ ಪಾಟೀಲ್ ಎಂಬಾತನ ಜೊತೆ ಸ್ನೇಹ ಬೆಳೆಸಿದ್ದ. ಪಾಟೀಲ್ ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ ಪರಿಸ್ಥಿತಿಯ ಲಾಭ ಪಡೆದು ಕೃತ್ಯ ಎಸಗಿದ್ದಾನೆ.

ಸಂತ್ರಸ್ತ ಒಂಟಿಯಾಗಿರುವ ವಿಚಾರ ತಿಳಿದ ಪಾಟೀಲ್ ಅವರ ಮನೆಗೆ ಭೇಟಿ ನೀಡಿ ಜ್ಯೂಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದಾರೆ. ಸಂತ್ರಸ್ತ ಪ್ರಜ್ಞಾಹೀನರಾಗುತ್ತಿದ್ದಂತೆ, ಪಾಟೀಲ್ ಅವರ ಮುಖಕ್ಕೆ ಪ್ರಜ್ಞೆ ತಪ್ಪಿಸುವ ಲಿಕ್ವಿಡ್‌ ಸಿಂಪಡಿಸಿದ್ದಾನೆ. ನಂತರ ಅವರ ಮೇಲೆ ಅತ್ಯಾಚಾರ ಎಸಗಿ, ಕಬೋರ್ಡ್‌ನಲ್ಲಿಟ್ಟಿದ್ದ 88 ಗ್ರಾಂ ಚಿನ್ನಾಭರಣ, 20 ಸಾವಿರ ನಗದು, ಮೊಬೈಲ್ ಹ್ಯಾಂಡ್ ಸೆಟ್ ದೋಚಿ ಪರಾರಿಯಾಗಿದ್ದಾನೆ.

ಸಂತ್ರಸ್ತ ಮರುದಿನ ಬೆಳಗ್ಗೆ ಎಚ್ಚೆತ್ತಾಗ ತಾನು ದರೋಡೆಯಾಗಿರುವುದು ಗಮನಕ್ಕೆ ಬಂದಿದೆ. ಅವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ಯಾಮ್ ಪಾಟೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Viral News: ಇದೆಂಥಾ ಹುಚ್ಚಾಟ! ಎನ್‌ಡಿಎ ಕಳಪೆ ಪ್ರದರ್ಶನದಿಂದ ಖಿನ್ನತೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

Continue Reading

ಬೆಂಗಳೂರು

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

police constable : ಕಳೆದ ನಾಲ್ಕೈದು ದಿನದಿಂದ ನಾಪತ್ತೆಯಾಗಿದ್ದ ಮಡಿವಾಳ ಠಾಣೆ ಪೊಲೀಸ್‌ ಕಾನ್ಸ್‌ಟೇಬಲ್‌ ಶಿವರಾಜ್‌ ನಿನ್ನೆ ಸೋಮವಾರ ಶವವಾಗಿ ಪತ್ತೆಯಾಗಿದ್ದರು. ಮೊದಮೊದಲು ಇದೊಂದು ಕೊಲೆ ಇರಬಹುದು ಎಂದು ಶಂಕಿಸಲಾಗಿತ್ತು. ಆದರೆ ಶಿವರಾಜ್‌ ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ (Self harming) ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

By

police constable commits suicide by jumping into well
Koo

ಬೆಂಗಳೂರು: ನಾಪತ್ತೆಯಾಗಿದ್ದ (Missing Case) ಕಾನ್ಸ್‌ಟೇಬಲ್‌ (police constable) ಪಾಳು ಬಾವಿಯಲ್ಲಿ ನಿನ್ನೆ ಸೋಮವಾರ (ಜು.1) ಶವವಾಗಿ (Dead Body Found) ಪತ್ತೆಯಾಗಿದ್ದರು. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ. 26ರಂದು ನಾಪತ್ತೆ ಆಗಿದ್ದರು. ಸುಬ್ರಹ್ಮಣ್ಯಪುರ ಠಾಣೆ ಹಾಗೂ ಮಡಿವಾಳ ಠಾಣೆ ಪೊಲೀಸರು ಜಂಟಿಯಾಗಿ ಕಾನ್ಸ್‌ಟೇಬಲ್‌ ಶಿವರಾಜ್‌ಗಾಗಿ ಹುಡುಕಾಟ ನಡೆಸಿದ್ದೆ ರೋಚಕವಾಗಿತ್ತು. ಶಿವರಾಜ್ ಪತ್ತೆ ಮಾಡಲು ಬರೋಬ್ಬರಿ 250 ಸಿಸಿಟಿವಿ ಪರಿಶೀಲಿಸಿದ್ದರು.

ಕಳೆದ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಸುಬ್ರಹ್ಮಣ್ಯಪುರದಿಂದ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೊ ಸ್ಟೇಷನ್ ವರೆಗೂ ಸಿಸಿಟಿವಿ ಪರಿಶೀಲನೆ ನಡೆಸಿದ್ದರು. ಸಿಸಿಟಿವಿ ಬೆನ್ನು ಹತ್ತಿ ಬಂದಿದ್ದ ಪೊಲೀಸರು ಕೊನೆಗೆ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ ತಲುಪಿದ್ದರು.

ಈ ವೇಳೆ ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್, ನಂತರ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿಶ್ವವಿದ್ಯಾಲಯದ ಒಳಗೆ ನಡೆದು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಜು.1ರ ಬೆಳಗ್ಗೆ ಬೆಂಗಳೂರು ವಿವಿ ಆವರಣದೊಳಗೆ ಹುಡುಕಾಡಿದ್ದರು. ಈ ವೇಳೆ ವಿವಿ ಆವರಣದ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ತೇಲುತ್ತಿತ್ತು.

ಕೂಡಲೇ ಜ್ಞಾನಭಾರತಿ ಠಾಣೆಗೆ ಮಡಿವಾಳ ಪೊಲೀಸರು ಮಾಹಿತಿ ನೀಡಿದ್ದರು. ಸದ್ಯ ಶಿವರಾಜ್‌ ಮೃತಪಟ್ಟಿರುವುದು ಕೊಲೆಯಲ್ಲ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಯಾಕೆಂದರೆ ವಿವಿ ಆವರಣದೊಳಗೆ ಶಿವರಾಜ್‌ ಒಬ್ಬೊಂಟಿಯಾಗಿ ನಡೆದುಕೊಂಡು ಬಂದಿದ್ದು, ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಮೃತದೇಹ ಹೊರತೆಗೆದಾಗ ಮೃತದೇಹಕ್ಕೆ ಕಲ್ಲು ಕಟ್ಟಿರುವುದು ಬೆಳಕಿಗೆ ಬಂದಿದೆ.

ಈ ಮೊದಲು ಕೊಲೆ ಎಂಬುದಾಗಿ ಅನುಮಾನ ವ್ಯಕ್ತವಾಗಿತ್ತು. ಆದರೆ ಸಿಸಿಟಿವಿಯಲ್ಲಿ ಶಿವರಾಜ್‌ ಒಬ್ಬರೇ ಬಂದಿರುವುದರಿಂದ ಇದೊಂದು ಆತ್ಮಹತ್ಯೆ ಎಂಬುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೂ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸ್ಪಷ್ಟ ಉತ್ತರ ಸಿಗಲಿದೆ.

ಇದನ್ನೂ ಓದಿ:Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

ಸೊಸೆ ಕಾಟಕ್ಕೆ ಬೇಸತ್ತಿದ್ದರಾ?

ಕೌಟುಂಬಿಕ ಕಾರಣಕ್ಕೆ ಮನನೊಂದು ಶಿವರಾಜ್‌ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನವು ಶುರುವಾಗಿದೆ. ಶಿವರಾಜ್‌ನ ಅಣ್ಣನ ಮಗನ ಪತ್ನಿ (ಸೊಸೆ) ವಾಣಿ ಎಂಬಾಕೆ ಕಾಟಕ್ಕೆ ಶಿವರಾಜ್‌ ಬೇಸತ್ತಿದ್ದರು ಎನ್ನಲಾಗಿದೆ. ವಾಣಿ ಶಿವರಾಜ್‌ಗೆ ಮೇಲಿಂದ ಮೇಲೆ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಕರ್ತವ್ಯಕ್ಕೆ ಹೊರಟ ಶಿವರಾಜ್ ನಾಪತ್ತೆಯಾಗಿದ್ದ, ಸೊಸೆ ವಾಣಿ ಕಿರುಕುಳದಿಂದ ಬೇಸತ್ತು ಹೋಗಿದ್ದ ಎಂದು ಶಿವರಾಜ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದರು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Namma metro Yellow line
ಬೆಂಗಳೂರು6 mins ago

Namma Metro : ಗುಡ್‌ ನ್ಯೂಸ್‌- ಹಳದಿ ಮೆಟ್ರೋ ಮಾರ್ಗದಲ್ಲಿ ಟ್ರಯಲ್ ರನ್‌ ಮುಕ್ತಾಯ; ಸಿಗ್ನಲಿಂಗ್ ಟೆಸ್ಟ್ ಆರಂಭ

Shoaib Akhtar
ಕ್ರೀಡೆ22 mins ago

Shoaib Akhtar: ಭಗವದ್ಗೀತೆಯ ಸಂದೇಶ ಹಂಚಿಕೊಂಡ ಪಾಕ್​ ಆಟಗಾರ ಶೋಯೆಬ್ ಅಖ್ತರ್

Gold Rate Today
ಚಿನ್ನದ ದರ32 mins ago

Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Road Accident
ಕ್ರೈಂ48 mins ago

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Virat Kohli
ಕ್ರೀಡೆ1 hour ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Stock Market
ವಾಣಿಜ್ಯ1 hour ago

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

self harming mysore
ಕ್ರೈಂ1 hour ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು2 hours ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ2 hours ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ2 hours ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌