Sexual assault | ಮಹಿಳೆಗೆ ರೂಂ ಕೊಡಿಸಿ ಅತ್ಯಾಚಾರಕ್ಕೆ ಯತ್ನ - Vistara News

ಕ್ರೈಂ

Sexual assault | ಮಹಿಳೆಗೆ ರೂಂ ಕೊಡಿಸಿ ಅತ್ಯಾಚಾರಕ್ಕೆ ಯತ್ನ

ಕೇರಳದಿಂದ ಕೆಲಸದ ಮೇಲೆ ಬೆಂಗಳೂರಿಗೆ ಬಂದಿದ್ದ ಮಹಿಳಗೆ ರೂಮು ಕೊಡಿಸುತ್ತೇನೆಂದು ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

VISTARANEWS.COM


on

Sexual assault
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇರಳದಿಂದ ಕೆಲಸದ ಮೇಲೆ ಬೆಂಗಳೂರಿಗೆ ಬಂದಿದ್ದ ಮಹಿಳಗೆ ರೂಮು ಕೊಡಿಸುತ್ತೇನೆಂದು ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಕಾಡುಗೋಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಗೋವರ್ಧನ (36) ಬಂಧಿತ ಅರೋಪಿ. ಕೇರಳದಿಂದ ಬಂದಿದ್ದ ಮಹಿಳೆಯನ್ನು ಮೆಜೆಸ್ಟಿಕ್‌ನಲ್ಲಿ ಗೋವರ್ಧನ ಪರಿಚಯ ಮಾಡಿಕೊಂಡಿದ್ದ. ತಂಗಲು ರೂಂ ಕೊಡಿಸುವಂತೆ ಮಹಿಳೆ ಕೇಳಿದ್ದರು. ಆ ವೇಳೆ ಪರಿಚಯಸ್ಥರ ಲಾಡ್ಜ್‌ನಲ್ಲಿ ತನ್ನದೇ ಹೆಸರಲ್ಲಿ ಗೋವರ್ಧನ ರೂಂ ಬುಕ್ ಮಾಡಿದ್ದ. ಬಳಿಕ ಮಹಿಳೆ ಹಾಗೂ ಆರೋಪಿ ಜೊತೆಯಲ್ಲೇ ಮೂರು ದಿನ ರೂಂನಲ್ಲಿ ತಂಗಿದ್ದರು. ನಾಲ್ಕನೇ ದಿನ ಮಹಿಳೆ ಮೇಲೆ ಈತ ಅತ್ಯಾಚಾರಕ್ಕೆ ಯತ್ನಿಸಿದ್ದ. ಕೂಡಲೇ 112ಕ್ಕೆ ಕರೆ ಮಾಡಿ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ | 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆಟವಾಡುತ್ತಿದ್ದ ಮಗುವನ್ನು ಕಾಮುಕ ಎತ್ತಿಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Assault Case: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

assault case
Koo

ದಾವಣಗೆರೆ: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ (Moral policing) ನಡೆದಿದ್ದು, ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ (Assault Case) ಮಾಡಲಾಗಿದೆ. ಯುವಕ ಪರಿ ಪರಿಯಾಗಿ ಬೇಡಿಕೊಂಡರೂ ಬಿಡದೇ ಎಂಟತ್ತು ಜನ ಥಳಿಸಿದ್ದಾರೆ.

ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು ಎನ್ನಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದಾನೆ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Viral Video: ಸಣ್ಣ ಕಾರಿಗೆ ಡಿಕ್ಕಿ ಹೊಡೆದು ಗಿರಗಿರ ಪಲ್ಟಿ ಹೊಡೆದ ಎಸ್‌ಯವಿ!

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Road accident

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ಗೆ (WhatsApp Group) ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ (Cyber Crime) ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

A trader lost more than three and a half lakhs by opening a WhatsApp group message
Koo

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ (WhatsApp Group) ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ (Cyber Crime) ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ.

ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಖಾತೆಯಿಂದ ಎಗರಿಸಿದ ಹಣ‌ವು ತಮಿಳುನಾಡು ಹಾಗೂ ಬಾಂಗ್ಲಾದೇಶದ ಬ್ಯಾಂಕ್‌ ಖಾತೆಗಳಿಗೆ‌ ಜಮೆ ಆಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ಸೈಬರ್‌ ಕ್ರೈಂ ಸಹಾಯವಾಣಿಗೆ ದೂರು ನೀಡಲು ಮುಂದಾದ ಅನಿಲ್‌ ಅವರಿಗೆ ತಾಂತ್ರಿಕ ತೊಂದರೆ ಎದುರಾದ ಹಿನ್ನೆಲೆಯಲ್ಲಿ ತಡವಾಗಿ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

Continue Reading

ವೈರಲ್ ನ್ಯೂಸ್

Viral Video: ಸಣ್ಣ ಕಾರಿಗೆ ಡಿಕ್ಕಿ ಹೊಡೆದು ಗಿರಗಿರ ಪಲ್ಟಿ ಹೊಡೆದ ಎಸ್‌ಯವಿ!

ಸಿಕಂದರಾಬಾದ್‌ನಲ್ಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ಸಿಗ್ನಲ್ ಜಂಪ್ ಮಾಡಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ರಸ್ತೆ ಮಧ್ಯೆಯೇ ಉರುಳಿ ಬಿದ್ದಿದೆ. ಈ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral Video) ಆಗಿದೆ. ಟ್ರಾಫಿಕ್ ನಿಯಮಗಳನ್ನು ಪಾಲಿಸದೇ ಇರುವುದು ಎಷ್ಟು ಅಪಾಯಕಾರಿ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ ಎಂದು ಅನೇಕ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

By

Viral Video
Koo

ಸಿಕಂದರಾಬಾದ್: ಸಂಚಾರ ನಿಯಮಗಳು (Traffic rules) ಇರುವುದು ಸವಾರರು (riders) ಮತ್ತು ಪಾದಚಾರಿಗಳ (pedestrians) ಸುರಕ್ಷತೆಗಾಗಿ. ಈ ನಿಯಮಗಳನ್ನು ಉಲ್ಲಂಘಿಸುವುದು ಬಹಳ ಅಪಾಯಕಾರಿ. ಇದು ಮಾರಣಾಂತಿಕವೂ ಆಗಬಹುದು. ಹೀಗಾಗಿಯೇ ಸಂಚಾರ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾರಿಗೆ ತರಲಾಗುತ್ತದೆ.

ಟ್ರಾಫಿಕ್ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವುದರಿಂದ ದೊಡ್ಡ ಅಪಘಾತಗಳು ಸಂಭವಿಸುತ್ತವೆ ಎಂಬುದನ್ನು ಸಾಬೀತುಪಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ. ಈ ವಿಡಿಯೋದಲ್ಲಿ ಚಾಲಕ ಸಿಗ್ನಲ್ ಜಂಪ್ ಮಾಡಿದ ಅನಂತರ ಕಾರು ಪಲ್ಟಿಯಾಗಿದ್ದು ವಿರುದ್ಧ ದಿಕ್ಕಿನಿಂದ ಬಂದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಈ ಘಟನೆ ನಡೆದಿರುವ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕೆಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಸಿಕಂದರಾಬಾದ್‌ನ ಜುಬಿಲಿ ಬಸ್ ನಿಲ್ದಾಣದ ಬಳಿ ಕಪ್ಪು ಬಣ್ಣದ ಎಸ್‌ಯುವಿಯು ಹೆಚ್ಚಿನ ವೇಗದಲ್ಲಿ ಸಿಗ್ನಲ್ ಅನ್ನು ಜಂಪ್ ಮಾಡಿದೆ. ಅತಿ ವೇಗವಾಗಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿದೆ. ಬಳಿಯೇ ಬಿಳಿ ಕಾರಿಗೆ ಡಿಕ್ಕಿಯಾಗಿದೆ. ರಸ್ತೆ ಮಧ್ಯೆಯೇ ಕಾರು ಉರುಳಿ ಬಿದ್ದಿದೆ. ಈ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಿಗ್ನಲ್ ಜಂಪಿಂಗ್ ಮತ್ತು ಅತಿವೇಗದ ಅಪಾಯಗಳನ್ನು ಎತ್ತಿ ತೋರಿಸುತ್ತದೆ.

ಘಟನಾ ಸ್ಥಳದಲ್ಲಿದ್ದ ಜನರು ಅಪಘಾತದ ಸ್ಥಳಕ್ಕೆ ಧಾವಿಸಿದ್ದಾರೆ. ಎಲ್ಲರೂ ಸೇರಿ ಕಾರಿನಲ್ಲಿದ್ದವರು ಸಹಾಯ ಮಾಡಲು ಮುಂದಾಗಿದ್ದಾರೆ. ಭೀಕರ ಅಪಘಾತ ಸಂಭವಿಸಿದರೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.


ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಅಪಘಾತ ಸ್ಥಳಕ್ಕೆ ಧಾವಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.
ಸಾಮಾಜಿಕ ಮಾಧ್ಯಮ ಬಳಕೆದಾರರು ಕಾನ್‌ಸ್ಟೆಬಲ್ ಅವರ ನಿಧಾನ ಪ್ರತಿಕ್ರಿಯೆಗಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಅಪಘಾತಕ್ಕೀಡಾದವರಿಗೆ ಸಹಾಯ ಮಾಡಲು ಮತ್ತು ಪಲ್ಟಿಯಾದ ಕಾರಿನೊಳಗೆ ಸಿಕ್ಕಿಬಿದ್ದವರನ್ನು ರಕ್ಷಿಸಲು ಅವರು ತಕ್ಷಣವೇ ವಾಹನದ ಕಡೆಗೆ ಓಡಬೇಕು ಎಂದು ಅನೇಕ ನೆಟ್ಟಿಗರು ವಾದಿಸಿದ್ದಾರೆ.

ಇಂತಹ ಅಪಘಾತಗಳನ್ನು ತಪ್ಪಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಅನುಸರಿಸಬೇಕು. ವೇಗದ ಚಾಲನೆ, ರಸ್ತೆ ನಿಯಮಗಳನ್ನು ಪಾಲಿಸದೇ ಇರುವುದು ವಾಹನ ಸವಾರರಿಗೆ ಮತ್ತು ರಸ್ತೆಯಲ್ಲಿರುವ ಇತರ ಸವಾರರು ಮತ್ತು ಪಾದಚಾರಿಗಳಿಗೆ ಮಾರಕವಾಗಬಹುದು.

Continue Reading

ಕರ್ನಾಟಕ

Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

Prajwal Revanna Case: 2 ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಎಚ್‌.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ 2 ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 14ಕ್ಕೆ ಹೈಕೋರ್ಟ್ ಮೂಂದೂಡಿದೆ. ಹೈಕೋರ್ಟ್‌ನ ನ್ಯಾ. ಕೃಷ್ಣ ಧೀಕ್ಷಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದೇ ವೇಳೆ ರೇವಣ್ಣ ಜಾಮೀನು ರದ್ದು ಮಾಡಲು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ಮುಂದೂಡಿಕೆ.

ಈವರೆಗೆ 2 ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case), ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ರೇವಣ್ಣ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇತ್ತೀಚೆಗೆ ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಇದೀಗ ಎರಡು ಎಫ್‌ಐಆರ್‌ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದನ್ನೂ ಓದಿ | Nikhil Kumaraswamy: ಸಿನಿಮಾಗೆ ಗುಡ್‌ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ?

ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ‌ ಪ್ರತ್ಯಕ್ಷ; ಎಸ್ಐಟಿ ವಿಚಾರಣೆಗೆ ಹಾಜರು!

ಬೆಂಗಳೂರು: ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ವಿಚಾರಣೆಗಾಗಿ ಎಚ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ (Prajwal Revanna Case) ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿರುವುದು ಕಂಡುಬಂದಿದೆ.

ಸಿಐಡಿಯಲ್ಲಿರುವ ಎಸ್ಐಟಿ ಕಚೇರಿಗೆ ವಕೀಲರ ಜತೆ ಭವಾನಿ ರೇವಣ್ಣ‌ ಆಗಮಿಸಿದ್ದಾರೆ. ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್, ಇಂದು ಮಧ್ಯಾಹ್ನ 1 ಗಂಟೆಯೊಳಗೆ ಎಸ್‌ಐಟಿ (SIT) ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ಹೀಗಾಗಿ ಭವಾನಿ ರೇವಣ್ಣ ಪ್ರತ್ಯಕ್ಷವಾಗಿದ್ದಾರೆ.

ಒಂದು ವಾರ ಮಧ್ಯಂತರ ಜಾಮೀನು

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿತ್ತು. ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿತ್ತು.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಭವಾನಿ ಅವರಿಗೆ ಕೋರ್ಟ್‌ ಕೆಲವು ಸೂಚನೆಗಳನ್ನು ನೀಡಿದೆ. ಅದರಂತೆ ಅವರು ನಡೆದುಕೊಳ್ಳಬೇಕಿದೆ. ಅವುಗಳು ಹೀಗಿವೆ:
1) ಭವಾನಿ ಅವರು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಬೇಕು.
2) ವಿಚಾರಣೆಯ ನಂತರ ಐದು ಗಂಟೆಯ ಬಳಿಕ ಅವರನ್ನು ಇಟ್ಟುಕೊಳ್ಳಬಾರದು.
3) ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು.
4) ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗಿತ್ತು. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆದಿತ್ತು. ಅವರ ಮೊಬೈಲ್ ಲೊಕೇಶನ್‌ ಟವರ್ ಡಂಪ್, ಸಿಡಿಆರ್ ಪರಿಶೀಲನೆ ನಡೆಸಲಾಗಿತ್ತು. ಇದೀಗ ಮಧ್ಯಂತ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಅವರೇ ವಿಚಾರಣೆಗೆ ಆಗಮಿಸಿದ್ದಾರೆ.

Continue Reading
Advertisement
Karnataka Weather Forecast
ಮಳೆ6 mins ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Rishabh Pant
ಪ್ರಮುಖ ಸುದ್ದಿ36 mins ago

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Health Tips Kannada
ಆರೋಗ್ಯ36 mins ago

Health Tips Kannada: ಯಾವ ಬೀಜ ತಿಂದರೆ ನಮ್ಮ ಆರೋಗ್ಯಕ್ಕೆ ಏನು ಪ್ರಯೋಜನ?

Health Tips
ಆರೋಗ್ಯ2 hours ago

Health Tips: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಬೇಕೆ? ಈ ಆಹಾರ ಸೇವಿಸಿ

Dina Bhavishya
ಭವಿಷ್ಯ2 hours ago

Dina Bhavishya : ಹಣ ಗಳಿಸುವ ವಿವಿಧ ಮಾರ್ಗಗಳಿಗೆ ಈ ರಾಶಿಯವರಿಗೆ ಸಿಗಲಿದೆ ಪುಷ್ಟಿ

T20 World Cup
ಪ್ರಮುಖ ಸುದ್ದಿ6 hours ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Narendra Modi
ದೇಶ7 hours ago

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ7 hours ago

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ7 hours ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ13 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌