Chanda Kochhar | 3 ಸಾವಿರ ಕೋಟಿ ರೂ. ವಂಚನೆ, ಚಂದಾ ಕೊಚ್ಚರ್‌, ಪತಿ ದೀಪಕ್‌ ಕೊಚ್ಚರ್‌ 3 ದಿನ ಸಿಬಿಐ ಕಸ್ಟಡಿಗೆ - Vistara News

ದೇಶ

Chanda Kochhar | 3 ಸಾವಿರ ಕೋಟಿ ರೂ. ವಂಚನೆ, ಚಂದಾ ಕೊಚ್ಚರ್‌, ಪತಿ ದೀಪಕ್‌ ಕೊಚ್ಚರ್‌ 3 ದಿನ ಸಿಬಿಐ ಕಸ್ಟಡಿಗೆ

ಐಸಿಐಸಿಐ ಮಾಜಿ ಸಿಇಒ ಹಾಗೂ ಎಂಡಿ ಚಂದಾ ಕೊಚ್ಚರ್‌ (Chanda Kochhar) ಹಾಗೂ ಅವರ ಪತಿ ದೀಪಕ್‌ ಕೊಚ್ಚರ್‌ ಅವರನ್ನು ಡಿಸೆಂಬರ್‌ 23ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Chanda Kochchar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ವಿಡಿಯೊಕಾನ್‌ ಗ್ರೂಪ್‌ಗೆ (Videocon Group) ಅಕ್ರಮವಾಗಿ ಸಾಲ ನೀಡಿ ಐಸಿಐಸಿಐ ಬ್ಯಾಂಕ್‌ಗೆ ಮೂರು ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್‌ (Chanda Kochhar) ಹಾಗೂ ಅವರ ಪತಿ ದೀಪಕ್‌ ಕೊಚ್ಚರ್‌ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯವು ಮೂರು ದಿನ ಸಿಬಿಐ ಕಸ್ಟಡಿಗೆ ವಹಿಸಿದೆ.

ಚಂದಾ ಕೊಚ್ಚರ್‌ ಅವರು ಐಸಿಐಸಿಐ ಬ್ಯಾಂಕ್‌ ಸಿಇಒ ಹಾಗೂ ಎಂಡಿ ಆಗಿದ್ದಾಗ 2009ರಿಂದ 2011ರ ಅವಧಿಯಲ್ಲಿ ವಿಡಿಯೊಕಾನ್‌ ಗ್ರೂಪ್‌ಗೆ 3,250 ಕೋಟಿ ರೂ. ಸಾಲ ನೀಡಿದ್ದಾರೆ. ಇದರಿಂದ ಬ್ಯಾಂಕ್‌ಗೆ ಇಷ್ಟು ಹಣ ನಷ್ಟವಾಗಿದೆ ಎಂಬ ಆರೋಪವಿದೆ. ಆರೋಪ ಕೇಳಿಬಂದ ಬಳಿಕ ಚಂದಾ ಕೊಚ್ಚರ್‌ ಅವರು 2018ರಲ್ಲಿ ಹುದ್ದೆ ತೊರೆದಿದ್ದರು.

ವಿಡಿಯೊಕಾನ್‌ ಪ್ರಮೋಟರ್‌ ವೇಣುಗೋಪಾಲ್‌ ಧೂತ್‌ ಅವರು ನ್ಯೂಪವರ್‌ ರಿನಿವೇಬಲ್‌ ಕಂಪನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದಾರೆ. ಈ ಕಂಪನಿಯಲ್ಲಿ ದೀಪಕ್‌ ಕೊಚ್ಚರ್‌ ಶೇ.50ರಷ್ಟು ಷೇರು ಹೊಂದಿದ್ದಾರೆ. ಹಾಗಾಗಿ, ವಂಚನೆ ಪ್ರಕರಣದಲ್ಲಿ ಇಬ್ಬರದ್ದೂ ಪಾಲಿದೆ ಎಂಬ ಆರೋಪವಿರುವ ಕಾರಣ ಸಿಬಿಐ ವಿಚಾರಣೆ ನಡೆಸುತ್ತಿದೆ. ಇಬ್ಬರನ್ನೂ ಸಿಬಿಐ ಅಧಿಕಾರಿಗಳು ಶುಕ್ರವಾರ ರಾತ್ರಿ (ಡಿಸೆಂಬರ್‌ 23)ರಂದು ಬಂಧಿಸಿದ್ದಾರೆ.

ಇದನ್ನೂ ಓದಿ | Bank Fraud | ಹೂಡಿಕೆ ಮಾಡಿದ್ದ ಹಣ ವಾಪಸ್‌ ಕೇಳಿದರೆ ಧಮ್ಕಿ; ಕೋಆಪರೇಟಿವ್‌ ಬ್ಯಾಂಕ್‌ನಿಂದ ವಂಚನೆ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

DK Shivakumar: ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು.

VISTARANEWS.COM


on

dk shivakumar jagdeep dhankar
Koo

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ (Vice President Jagdeep Dhankar) ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.

ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್‌ ಧನಕರ್‌ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ನೆಟ್ಟಿಗರಿಂದ ವಿಧವಿಧವಾದ ಪ್ರತಿಕ್ರಿಯೆಗಳು ಕಂಡುಬಂದವು. “ಶುಭವಾಗಲಿ ನಿಮಗೆ. ಆದಷ್ಟೂ ಶೀಘ್ರ ಬಿಜೆಪಿಗೆ ನೀವು ಬರುವಂತಾಗಲಿ. ನಂತರ, ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಆಶಿಸುತ್ತೇನೆ” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. “ಇದೆಲ್ಲ ಬೇಡ ನಮಗೆ ಸಿಎಂ ಆಗಬೇಕು” ಎಂದು ಮತ್ತೊಬ್ಬರು ಬರೆದಿದ್ದಾರೆ.

ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ದೆಹಲಿಗೆ ಬರುತ್ತಿದ್ದಂತೆ ರಣದೀಪ್‌ ಸುರ್ಜೆವಾಲಾ ಜೊತೆಗೆ ಸಭೆ ನಡೆಸಿದ್ದು, ಬಳಿಕ ಕರ್ನಾಟಕ ಭವನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದರು. ರಾತ್ರಿ 10 ಗಂಟೆಗೆ ಕೆ.ಸಿ ವೇಣುಗೋಪಾಲ್ ಜೊತೆ ಸಭೆ ನಡೆಸಿ ಸಿಎಂ ಹಾಗೂ ಡಿಸಿಎಂ ನಾಳೆ ಬೆಳಿಗ್ಗೆ ಖರ್ಗೆ ಜೊತೆಗೆ ಅಂತಿಮ ಸಭೆ ನಡೆಸಲಿದ್ದಾರೆ. ನಿರೀಕ್ಷೆಗೂ ಮೀರಿ ಆಕಾಂಕ್ಷಿಗಳ ಹೆಸರು ಪಟ್ಟಿಯಲ್ಲಿರುವುದರಿಂದ ಅಭ್ಯರ್ಥಿ ಆಯ್ಕೆ ಸಂಬಂಧ ಕಗ್ಗಂಟು ಬಗೆಹರಿಯದಾಗಿದೆ.

ಕೆಲವು ದಿನಗಳ ಹಿಂದೆ ಒಕ್ಕಲಿಗರ ಸಭೆಯಲ್ಲಿ ಮಾತನಾಡುತ್ತ ಡಿಕೆಶಿ, ತಾವು ಮುಂದಿನ ಸಿಎಂ (Next CM) ಆಗುವ ಬಗ್ಗೆ ಸುಳಿವನ್ನು ನೀಡಿದ್ದರು. “ಏನು ಆಗಬೇಕೆಂದಿದೆಯೋ ಅದು ದೆಹಲಿಯಲ್ಲಿ ತೀರ್ಮಾನ ಆಗಿದೆ. ಅಲ್ಲದೆ, ಸ್ವಲ್ಪ ದಿನ ಕಾಯಿರಿ” ಎಂದು ಹೇಳಿದ್ದರು. ಆ ಮೂಲಕ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Continue Reading

ದೇಶ

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Arvind Kejriwal: ಜೂ.1 ರಂದು ಮುಗಿಯಲಿರುವ ಜಾಮೀನು ಅವಧಿಯನ್ನು ಮತ್ತೆ 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಕೆ.ವಿ ವಿಶ್ವನಾಥನ್‌ ಇದ್ದ ನ್ಯಾಯಪೀಠ, ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಮುಂದಿನ ದಿನಗಳಲ್ಲಿ ನಡೆಸಲಿದ್ದಾರೆ ಎಂದು ಹೇಳಿತ್ತು. ಅಲ್ಲದೇ ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಗೆ ಹಸ್ತಾಂತರಿಸಿತ್ತು. ಆದರೆ ಇದೀಗ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಾರ್‌ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ ಅವರ ಅರ್ಜಿ ವಿಚಾರಣೆ ನಡೆಸುವುದಿಲ್ಲ. ಹೀಗಾಗಿ ಜಾಮೀನು ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಕೇಜ್ರಿವಾಲ್‌ ಜೂ.2ರಂದು ತಿಹಾರ್‌ ಜೈಲಿಗೆ ಮರಳಬೇಕಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೆ ಭಾರೀ ಹಿನ್ನಡೆಯಾಗಿದೆ. ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ನಿನ್ನೆಯಷ್ಟೇ ಈ ಅರ್ಜಿಯನ್ನು ತುರ್ತು ವಿಚಾರಕ್ಕೆ ಕೇಜ್ರಿವಾಲ್‌ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ನಿರಾಕರಿಸಿತ್ತು.

ಜೂ.1 ರಂದು ಮುಗಿಯಲಿರುವ ಜಾಮೀನು ಅವಧಿಯನ್ನು ಮತ್ತೆ 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಕೆ.ವಿ ವಿಶ್ವನಾಥನ್‌ ಇದ್ದ ನ್ಯಾಯಪೀಠ, ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಮುಂದಿನ ದಿನಗಳಲ್ಲಿ ನಡೆಸಲಿದ್ದಾರೆ ಎಂದು ಹೇಳಿತ್ತು. ಅಲ್ಲದೇ ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಗೆ ಹಸ್ತಾಂತರಿಸಿತ್ತು. ಆದರೆ ಇದೀಗ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಾರ್‌ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ ಅವರ ಅರ್ಜಿ ವಿಚಾರಣೆ ನಡೆಸುವುದಿಲ್ಲ. ಹೀಗಾಗಿ ಜಾಮೀನು ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಕೇಜ್ರಿವಾಲ್‌ ಜೂ.2ರಂದು ತಿಹಾರ್‌ ಜೈಲಿಗೆ ಮರಳಬೇಕಾಗಿದೆ.

ಎರಡೂ ದಿನಗಳ ಹಿಂದೆಯಷ್ಟೇ ದೆಹಲಿ ಸಚಿವೆ ಆತಿಶಿ (Atishi) ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ಮಾಹಿತಿಯೊಂದನ್ನು ನೀಡಿದ್ದು, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಪ್ರಶ್ನೆ ಮೂಡಿಸಿದೆ. ಹಾಗಾಗಿ, ಜೂನ್‌ 2ರಂದು ದೆಹಲಿ ಸಿಎಂ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿತ್ತು.

“ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ತಿಳಿಸಿದ್ದರು.

ಏನಿದು ಅಬಕಾರಿ ನೀತಿ ಹಗರಣ?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.

Continue Reading

ಕ್ರೈಂ

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

Crime News: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಭೋಪಾಲ್‌: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ (Crime News).

ಬೋಡಾಲ್ ಕಛರ್ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಮಹುಲ್ಜಿರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಘಟನೆ ಕಾರಣ ಇದುವರೆಗೆ ತಿಳಿದು ಬಂದಿಲ್ಲ. ತನಿಖೆ ಆರಂಭಿಸಲಾಗಿದೆʼʼ ಎಂದು ಅವರು ಹೇಳಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಈ ಗ್ರಾಮಕ್ಕೆ ಚಿಂದ್ವಾರಾ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.

ಆರೋಪಿ ಮಾನಸಿಕ ಅಸ್ವಸ್ಥ?

ʼʼಮಾನಸಿಕ ಅಸ್ವಸ್ಥನಾಗಿದ್ದ ಕುಟುಂಬದ ಸದಸ್ಯನೊಬ್ಬ ಈ ಕೊಲೆ ಮಾಡಿದ್ದಾನೆʼʼ ಎಂದು ಚಿಂದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ಅಂದಾಜಿಸಿದ್ದಾರೆ. ʼʼತನ್ನ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಅವರು ತಿಳಿಸಿದ್ದಾರೆ. ʼʼಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದ ಆತ ಮಂಗಳವಾರ ರಾತ್ರಿ ತನ್ನ ಕುಟುಂಬದ ಮೇಲೆ ದಾಳಿ ನಡೆಸಿ, ತನ್ನ ಸಹೋದರ, ಅತ್ತಿಗೆ, ಪತ್ನಿ, ಚಿಕ್ಕ ಮಗು ಮತ್ತಿತರರನ್ನು ಕೊಂದಿದ್ದಾನೆ. ಬಳಿಕ ಆತ ಗ್ರಾಮದಿಂದ ಸುಮಾರು 100 ಮೀಟರ್ ದೂರದಲ್ಲಿರುವ ಚರಂಡಿಯ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಘಟನೆಯ ಭೀಕರತೆಯನ್ನು ತೆರೆದಿಟ್ಟಿದ್ದಾರೆ. ಈ ಪೈಕಿ ಮಗುವೊಂದು ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು

ಇದೇ ಮಾದರಿಯ ಘಟನೆ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು. ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಾಲಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ 5 ಸದಸ್ಯರನ್ನು ಕ್ರೂರವಾಗಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ. ಮಾನಸಿಕ ಅಸ್ವಸ್ಥನಾಗಿದ್ದ ಆರೋಪಿ ಮೊದಲು ಗುಂಡಿಕ್ಕಿ ತನ್ನ ತಾಯಿಯನ್ನು ಕೊಂದಿದ್ದ. ಬಳಿಕ ಚೂರಿ ಇರಿದು ಪತ್ನಿಯನ್ನು ಹತ್ಯೆ ಮಾಡಿದ್ದ. ನಂತರ ತನ್ನ ಮೂವರು ಮಕ್ಕಳನ್ನು ಟೆರೇಸ್‌ನಿಂದ ಎಸೆದು ಕೊಂದಿದ್ದ. ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿತ್ತು. ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು‌ ಪತ್ತೆಯಾಗಿದ್ದವು. ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತ ದುರ್ದೈವಿಗಳು.

ಹಂತಕರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸೋಮವಾರ ರಾತ್ರಿ ತಾಯಿ ರಾಜೇಶ್ವರಿಗೆ ಮತ್ತೊಬ್ಬ ಮಗಳು ಫೋನ್ ಮಾಡಿದ್ದಾಳೆ. ಆದರೆ ಯಾರು ಫೋನ್‌ ರಿಸೀವ್ ಮಾಡಿರಲಿಲ್ಲ, ಮನೆಯ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮುಂಜಾನೆ ಬಂದು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬೆಡ್ ರೂಮ್‌ನಲ್ಲಿ ಮಲಗಿದ್ದಲ್ಲಿ ಅಜ್ಜಿ ಮತ್ತು ಮೊಮ್ಮಗನ ಶವಗಳು ಪತ್ತೆಯಾದರೆ, ಮಗಳು ವಸಂತಾಳ ಶವ ಅಡುಗೆ ಮನೆಯಲ್ಲಿತ್ತು.

Continue Reading

ಉದ್ಯೋಗ

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ (UPSC Specialist Grade III, Assistant Director Grade-II & Other Recruitment 2024). ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13. ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ ಜೂನ್‌ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪ ಅಧೀಕ್ಷಕ ಪುರಾತತ್ವ ರಸಾಯನ ಶಾಸ್ತ್ರಜ್ಞ – 4 ಹುದ್ದೆ, ವಿದ್ಯಾರ್ಹತೆ- ಪದವಿ / ಸ್ನಾತಕೋತ್ತರ ಪದವಿ (ರಸಾಯನ ಶಾಸ್ತ್ರ)
ಉಪ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ – 67 ಹುದ್ದೆ, ವಿದ್ಯಾರ್ಹತೆ- ಪಿಜಿ (ಪುರಾತತ್ವಶಾಸ್ತ್ರ / ಭಾರತೀಯ ಇತಿಹಾಸ)
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್‌ಕ್ವಾರ್ಟಸ್‌ (ನೌಕಾಪಡೆ) – 4 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್) – 6 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಮೆಡಿಸಿನ್) – 61 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ) – 39 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ) 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್) – 23 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್-3 (ಅನಸ್ತೇಶಿಯಾಲಜಿ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಕುಷ್ಠರೋಗ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಮೆಡಿಸಿನ್) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಸರ್ಜರಿ) – 7 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ರಸೂತಿ ಮತ್ತು ಜ್ಞಾನಶಾಸ್ತ್ರ) – 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ನೇತ್ರಶಾಸ್ತ್ರ) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಆರ್ಥೋಪೆಡಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 ಓಟೊ-ರೈನೋ-ಲಾರಿಂಗಲಜಿ (ಕಿವಿ, ಮೂಗು ಮತ್ತು ಗಂಟಲು) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪೀಡಿಯಾಟ್ರಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ಯಾಥಾಲಜಿ) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಸೈಕಿಯಾಟ್ರಿ) – 1 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (ಡಿಸಿಐಒ / ಟೆಕ್) 9 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸಹಾಯಕ ನಿರ್ದೇಶಕರು (ತೋಟಗಾರಿಕೆ) 4 ಹುದ್ದೆ, ವಿದ್ಯಾರ್ಹತೆ ಎಂಎಸ್‌ಸಿ ತೋಟಗಾರಿಕೆ
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಕೆಮಿಕಲ್) 5 ಹುದ್ದೆ, ವಿದ್ಯಾರ್ಹತೆ: ಡಿಪದವಿ (ಸಂಬಂಧಿತ ವಿಭಾಗ)/ ಪಿಜಿ (ರಸಾಯನಶಾಸ್ತ್ರ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಆಹಾರ) 19 ಹುದ್ದೆ, ವಿದ್ಯಾರ್ಹತೆ: ಪದವಿ (ಫುಡ್ ಟೆಕ್ನಾಲಜಿ)/ ಪಿಜಿ ಡಿಪ್ಲೋಮಾ (ಫ್ರೂಟ್ಸ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಹೊಸೇರಿ) 12 ಹುದ್ದೆ, ವಿದ್ಯಾರ್ಹತೆ: ಪದವಿ (ಟೆಕ್ಸ್ ಟೈಲ್ ಟೆಕ್ನಾಲಜಿ ಅಥವಾ ಹೋಸಿಯರಿ ಟೆಕ್ನಾಲಜಿ ಅಥವಾ ನೈಟಿಂಗ್‌ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಲೆದರ್ & ಪಾದರಕ್ಷೆ) – 8 ಹುದ್ದೆ, ವಿದ್ಯಾರ್ಹತೆ: ಪದವಿ (ಲೆದರ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಮೆಟಲ್ ಫಿನಿಶಿಂಗ್) – 2 ಹುದ್ದೆ, ವಿದ್ಯಾರ್ಹತೆ: ಪದವಿ (ಕೆಮಿಕಲ್)
ಟೆಕ್ನಾಲಜಿ ಅಥವಾ ಕೆಮಿಕಲ್ ಎಂಜಿನಿಯರಿಂಗ್) / ಪಿಜಿ (ಕೆಮಿಸ್ಟ್ರಿ)
ಎಂಜಿನಿಯರ್ ಮತ್ತು ಹಡಗು ಸರ್ವೇಯರ್ ಕಮ್-ಡೆಪ್ಯುಟಿ ಡೈರೆಕ್ಟರ್ ಜನರಲ್ (ಟೆಕ್ನಿಕಲ್) – 2 ಹುದ್ದೆ, ವಿದ್ಯಾರ್ಹತೆ: ಮೆರೈನ್ ಎಂಜಿನಿಯರ್ ಆಫೀಸರ್ ಕ್ಲಾಸ್ -1ರ ಪ್ರಮಾಣ ಪತ್ರ
ತರಬೇತಿ ಅಧಿಕಾರಿ (ಮಹಿಳಾ ತರಬೇತಿ)- ಉಡುಪು ತಯಾರಿಕೆ – 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ತರಬೇತಿ ಅಧಿಕಾರಿ (ಮಹಿಳಾ ತರಬೇತಿ) – ಎಲೆಕ್ಟ್ರಾನಿಕ್ ಮಕಾನಿಕ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ಅಸಿಸ್ಟೆಂಟ್‌ ಫೊಫೆಸರ್‌ – 1 ಹುದ್ದೆ, ವಿದ್ಯಾರ್ಹತೆ: ಎಂ.ಸಿ.ಎಚ್. ಯುರಾಲಜಿ ಅಥವಾ ಡಿಎನ್‌ಬಿ (ಯುರಾಲಜಿ)

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿ 25 ರೂ. ಪಾವತಿಸಬೇಕು. ಮೀಸಲಾತಿ ಹೊಂದಿರುವವರಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Continue Reading
Advertisement
dk shivakumar jagdeep dhankar
ಪ್ರಮುಖ ಸುದ್ದಿ48 seconds ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್3 mins ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ4 mins ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್26 mins ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ26 mins ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Crime News
ಕ್ರೈಂ48 mins ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ51 mins ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ51 mins ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Viral Video
ವೈರಲ್ ನ್ಯೂಸ್1 hour ago

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

India Highest Paid Item Girl not Malaika Nora, Katrina, Sunny
ಸಿನಿಮಾ1 hour ago

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌