BMTC Bus Pass | ಡಿ.26ರಿಂದ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗೆ ಆನ್‌ಲೈನ್‌ ಅರ್ಜಿ ಆಹ್ವಾನ - Vistara News

ನೋಟಿಸ್ ಬೋರ್ಡ

BMTC Bus Pass | ಡಿ.26ರಿಂದ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗೆ ಆನ್‌ಲೈನ್‌ ಅರ್ಜಿ ಆಹ್ವಾನ

BMTC Bus Pass | ವಿಕಲಚೇತನರ ನೂತನ ಪಾಸ್‌ಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಾತ್ರ ವಿತರಣೆ ಮಾಡಲಾಗುತ್ತದೆ. ಪಾಸ್‌ ನವೀಕರಣಕ್ಕೆ ನಗರದ ವಿವಿಧ ಬಸ್‌ ನಿಲ್ದಾಣಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

BMTC Bus Pass
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು(BMTC Bus Pass) ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ವಿಕಲಚೇತನರಿಗೆ ರಿಯಾಯಿತಿ ದರದ ಬಸ್ ಪಾಸ್‌ಗಳನ್ನು ವಿತರಿಸುತ್ತಿದೆ. ಅರ್ಹ ಫಲಾನುಭವಿಗಳು ಡಿಸೆಂಬರ್‌ ೨೬ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

2023ನೇ ಸಾಲಿನ ವಿಕಲಚೇತನರ ಪಾಸ್‌ಗಾಗಿ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ತದನಂತರ ತಾವು ಆಯ್ಕೆ ಮಾಡಿಕೊಂಡ ಬಸ್ ನಿಲ್ದಾಣಗಳಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ, ಪಾಸ್‌ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

2023ನೇ ಸಾಲಿನ ವಿಕಲಚೇತನರ ರಿಯಾಯಿತಿ ಪಾಸ್‌ಗಳನ್ನು ಈ ಕೆಳಕಂಡಂತೆ ವಿತರಿಸಲು, ನವೀಕರಿಸಲು ಕ್ರಮ ಕೈಗೊಳ್ಳಲಾಗಿದೆ.

  • ವಿಕಲಚೇತನರ ನೂತನ ಪಾಸ್‌ಗಳನ್ನು ವರ್ಷವಿಡೀ ವಿತರಣೆ ಮಾಡಲಾಗುವುದು.
  • ಕಳೆದ ಸಾಲಿನ ವಿಕಲಚೇತನರ ಬಸ್ ಪಾಸ್‌ಗಳನ್ನು 2023ರ ಫೆಬ್ರವರಿ ೨೮ರ ಒಳಗೆ ನವೀಕರಿಸಿಕೊಳ್ಳುವುದು.
  • ವಿಕಲಚೇತನರ ರಿಯಾಯಿತಿ ಪಾಸ್‌ನ ದರ 660 ರೂಪಾಯಿ.
  • ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2022ನೇ ಸಾಲಿನಲ್ಲಿ ವಿತರಿಸಿ ಡಿಸೆಂಬರ್ 31ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸುಗಳನ್ನು 2023ರ ಫೆಬ್ರವರಿ ೨೮ರವರೆಗೆ ಮಾನ್ಯ ಮಾಡಲಾಗುವುದು.
  • ವಿಕಲಚೇತನರ ನೂತನ ಪಾಸ್‌ಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಾತ್ರ ವಿತರಣೆ ಮಾಡಲಾಗುತ್ತದೆ. ಪಾಸ್‌ ನವೀಕರಣಕ್ಕೆ ನಗರದ ವಿವಿಧ ಬಸ್‌ ನಿಲ್ದಾಣಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕಳೆದ ಸಾಲಿನ ವಿಕಲಚೇತನರ ಬಸ್ ಪಾಸುಗಳನ್ನು ಬೆಂಗಳೂರಿನ ಈ ಕೆಳಕಂಡ ಬಸ್ ನಿಲ್ದಾಣಗಳಲ್ಲಿ ನವೀಕರಿಸಲಾಗುವುದು.

ಕೆಂಪೇಗೌಡ ಬಸ್‌ ನಿಲ್ದಾಣಶಿವಾಜಿನಗರ ಬಸ್ ನಿಲ್ದಾಣಶಾಂತಿನಗರ ಟಿಟಿಎಂಸಿ  ಕೃಷ್ಣರಾಜ ಮಾರುಕಟ್ಟೆ ಬಸ್ ನಿಲ್ದಾಣ
ಬನಶಂಕರಿ ಟಿಟಿಎಂಸಿಜಯನಗರ ಟಿಟಿಎಂಸಿಕೆಂಗೇರಿ ಟಿಟಿಎಂಸಿ  ಹೊಸಕೋಟೆ ಬಸ್ ನಿಲ್ದಾಣ  
ವಿಜಯನಗರ ಟಿಟಿಎಂಸಿಯಶವಂತಪುರ ಟಿಟಿಎಂಸಿವೈಟ್‌ಫೀಲ್ಡ್ ಟಿಟಿಎಂಸಿ  ಯಲಹಂಕ ಹಳೆ ಬಸ್ ನಿಲ್ದಾಣ
ದೊಮ್ಮಲೂರು ಟಿಟಿಎಂಸಿ   

ಇದನ್ನೂ ಓದಿ | Christmas Celebrations | ರಾಜ್ಯಾದ್ಯಂತ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ; ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಕರ್ನಾಟಕ

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

SSLC Exam Result 2024: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ- 1ರ ಫಲಿತಾಂಶದ ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

VISTARANEWS.COM


on

SSLC exam results to be announced soon
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam Result 2024) ಬರೆದಿದ್ದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾದುನೋಡುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿತ್ತು, ಆದರೆ, ರಾಜ್ಯದಲ್ಲಿ ಮಂಗಳವಾರ ಎರಡನೇ ಹಂತದ ಮತದಾನವೂ ಮುಗಿಲಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮೇ 7 ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿರುವುದರಿಂದ ಮೇ 9 ಮತ್ತು 10ರಂದು ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಸಜ್ಜಾಗಿದೆ ಎನ್ನಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಮೈಸೂರು

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Book Release: ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Ithichanda Ramesh Uthappaʼs Four books to be released in Mysore on May 9
Koo

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

ಬಿಡುಗಡೆಯಾಗಲಿರುವ ಕೃತಿಗಳು

  • ಕಾಡು ಹೇಳಿದ ಕಥೆ: ವೈಲ್ಡ್‌ ಲೈಫ್ ರಿಪೋರ್ಟಿಂಗ್
  • ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
  • ಆನೆ: ಬದಲಾದ ವರ್ತನೆ
  • ಅರ್ಜುನ ನಿನ್ನ ಮರೆಯಲೆಂತು ನಾ..!
Continue Reading

ಪ್ರಮುಖ ಸುದ್ದಿ

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಇಎ ವಿಸ್ತರಿಸಿದೆ.

VISTARANEWS.COM


on

Village Administrative Officer
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆ (Village Administrative Officer) ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೆ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ಆದರೆ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಹುದ್ದೆ ಆಕಾಂಕ್ಷಿಗಳು ಕೋರಿದ್ದರು. ಹೀಗಾಗಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ (Job News) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಫೆ.20ರಂದು ಅಧಿಸೂಚನೆ (VAO Recruitment 2024) ಪ್ರಕಟಿಸಿತ್ತು. ಅದರಂತೆ ಮಾರ್ಚ್‌ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ಮೇ 4 ವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 7 ರ ರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿತ್ತು. ಹೀಗಿದ್ದರೂ ಮತ್ತೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಕೆ ಅವಧಿ (ಮೇ 15ರವರೆಗೆ) ವಿಸ್ತರಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: ಮೇ 15
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ವೇಳೆ ವರೆಗೆ): ಮೇ 18

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ.20ರಂದು ಅಧಿಸೂಚನೆ ಹೊರಡಿಸಿತ್ತು. ಆಸಕ್ತ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.
Continue Reading
Advertisement
Mureder Case
ಪ್ರಮುಖ ಸುದ್ದಿ3 hours ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು4 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ5 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ6 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ7 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ7 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ8 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ8 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ7 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ8 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ9 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ15 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ16 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ16 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ17 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು18 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌