New Year 2023 | ಕ್ರೀಡಾಕೂಟದ ವೇಳಾಪಟ್ಟಿ 2023; ಎಲ್ಲಿ, ಯಾವಾಗ ನಡೆಯುತ್ತವೆ ಕ್ರೀಡಾಕೂಟಗಳು? - Vistara News

New year 2023

New Year 2023 | ಕ್ರೀಡಾಕೂಟದ ವೇಳಾಪಟ್ಟಿ 2023; ಎಲ್ಲಿ, ಯಾವಾಗ ನಡೆಯುತ್ತವೆ ಕ್ರೀಡಾಕೂಟಗಳು?

ಭಾರತದ ಕ್ರೀಡಾಭಿಮಾನಿಗಳಿಗೆ ಕುತೂಹಲ ಹುಟ್ಟಿಸಬಲ್ಲ ಕ್ರೀಡಾಕೂಟಗಳ ವಿವರ ಇಲ್ಲಿದೆ.

VISTARANEWS.COM


on

ಸರ್ಕಾರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರೀಡಾ ಪಟುಗಳು ಹಾಗೂ ಕ್ರೀಡಾ ಪ್ರೇಮಿಗಳು ವರ್ಷಾಂತ್ಯದ ಸಂಭ್ರಮದಲ್ಲಿದ್ದಾರೆ. ಟಿ20 ವಿಶ್ವ ಕಪ್ ಏಷ್ಯಾ ಕಪ್​ ಕ್ರಿಕೆಟ್ ಮತ್ತು ಫಿಫಾ ವಿಶ್ವ ಕಪ್​ ಕ್ರಿಕೆಟ್​ ಟೂರ್ನಿಯನ್ನು ವೀಕ್ಷಿಸಿರುವ ಭಾರತದ ಕ್ರೀಡಾಸ್ತರು ಮುಂದಿನ ವರ್ಷ ನಡೆಯುವ ಪ್ರಮುಖ ಟೂರ್ನಮೆಂಟ್​ಗಳು ಯಾವಾಗ ಆರಂಭವಾಗಬಹುದು ಎಂಬ ಲೆಕ್ಕಾಚಾರ ಶುರು ಮಾಡಿಕೊಂಡಿದ್ದಾರೆ. ಪ್ರತಿ ವರ್ಷ ನಡೆಯುವ ಟೂರ್​ಗಳು ಮತ್ತು ಇನ್ನಿತರ ಪ್ರಮುಖ ಟೂರ್ನಿಗಳನ್ನು ಹೊರತುಪಡಿಸಿ ಹಲವಾರು ಪ್ರಮುಖ ಸ್ಪರ್ಧೆಗಳು 2023ರಲ್ಲಿ ಆಯೋಜನೆಗೊಂಡಿವೆ. ಅವುಗಳು ವೇಳಾಪಟ್ಟಿ ಇಲ್ಲಿದೆ.

ಕ್ರೀಡಾಕೂಟಯಾವಾಗ?ಎಲ್ಲಿ?
ಪುರುಷರ ಹಾಕಿ ವಿಶ್ವ ಕಪ್​ಜನವರಿ 13ರಿಂದ29ಭಾರತ (ಭುವನೇಶ್ವರ)
ಆಸ್ಟ್ರೇಲಿಯಾ ಓಪನ್​ಜನವರಿ 16ರಿಂದ 29ಆಸ್ಟ್ರೇಲಿಯಾ (ಮೆಲ್ಬೋರ್ನ್​)
ಖೇಲೋ ಇಂಡಿಯಾ ಯೂತ್​ ಗೇಮ್ಸ್​ಜನವರಿ 31ರಿಂದ ಫೆಬ್ರವರಿ 11ಮಧ್ಯಪ್ರದೇಶ
ಮಹಿಳೆಯರ ವಿಶ್ವ ಬಾಕ್ಸಿಂಗ್​ ಚಾಂಪಿಯನ್​ಷಿಪ್​ಮಾರ್ಚ್​ 15ರಿಂದ 31ಭಾರತ (ಹೊಸ ದಿಲ್ಲಿ)
ಆಲ್​ ಇಂಗ್ಲೆಂಡ್​ ಬ್ಯಾಡ್ಮಿಂಟನ್​ ಚಾಂಪಿಯನ್​ಷಿಪ್​ಮಾರ್ಚ್​​ 14ರಿಂದ 19ಬರ್ಮಿಂಗ್ಬಮ್​ (ಇಂಗ್ಲೆಂಡ್​)
ಏಷ್ಯನ್​ ರಸ್ಲಿಂಗ್​ ಚಾಂಪಿಯನ್​ಷಿಪ್​ಮಾರ್ಚ್​ 28ರಿಂದ ಏಪ್ರಿಲ್​ 2ಭಾರತ (ನವ ದೆಹಲಿ)
ಪುರುಷರ ಬಾಕ್ಸಿಂಗ್​ ವಿಶ್ವ ಚಾಂಪಿಯನ್​ಷಿಪ್​ಮೇ 1ರಿಂದ14 ಉಜ್ಬೇಕಿಸ್ತಾನ (ತಾಷ್ಕೆಂಟ್​)
ಏಷ್ಯನ್​ ವೇಟ್​ಲಿಫ್ಟಿಂಗ್​ ಚಾಂಪಿಯನ್​ಶಿಪ್​ಮೇ 3ರಿಂದ13ಜಿಂಜು, ದಕ್ಷಿಣ ಕೊರಿಯಾ
ದೋಹಾ ಡೈಮಂಡ್​ ಲೀಗ್​ಮೇ 5ಕತಾರ್​
ವಿಶ್ವ ಟೇಬಲ್​ ಟೆನಿಸ್​ ಚಾಂಪಿಯನ್​ಷಿಪ್​ಮೇ 22ರಿಂದ 28ದಕ್ಷಿಣ ಆಫ್ರಿಕಾ (ಡರ್ಬನ್​)
ಫ್ರೆಂಚ್​ ಓಪನ್​ ಮೇ 28ರಿಂದ ಜೂನ್​ 11ಪ್ಯಾರಿಸ್​, ಫ್ರಾನ್ಸ್​
ವಿಂಬಲ್ಡನ್​ ಜುಲೈ 3ರಿಂದ 13ಇಂಗ್ಲೆಂಡ್​
ಮಹಿಳೆಯರ ಫಿಫಾ ಫುಟ್ಬಾಲ್​ ​ಜುಲೈ 20ರಿಂದ ಆಗಸ್ಟ್​ 20 ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​
ವರ್ಲ್ಡ್​ ಅಥ್ಲೆಟಿಕ್ಸ್ ಚಾಂಪಿಯನ್​​ಷಿಪ್​ಆಗಸ್ಟ್​​ 19ರಿಂದ 27ಹಂಗರಿ (ಬುಡಾಪೆಸ್ಟ್​)
ಬ್ಯಾಡ್ಮಿಂಟನ್​ ವಿಶ್ವ ಚಾಂಪಿಯನ್​ಷಿಪ್​ಆಗಸ್ಟ್​​ 21ರಿಂದ 27ಡೆನ್ಮಾರ್ಕ್​ (ಕೋಪನ್​ಹೇಗ್​)
ಯುಎಸ್​ ಓಪನ್​ ಆಗಸ್ಟ್​​ 28ರಿಂದ ಸೆಪ್ಟೆಂಬರ್​ 10ಅಮರಿಕ (ನ್ಯೂಯಾರ್ಕ್​)
ವಿಶ್ವ ವೇಟ್​ಲಿಫ್ಟಿಂಗ್ ಚಾಂಪಿಯನ್​ಷಿಪ್​ಸೆಪ್ಟೆಂಬರ್ 2ರಿಂದ 17ಸೌದಿ ಅರೇಬಿಯಾ (ರಿಯಾದ್​)
ವಿಶ್ವ ಕುಸ್ತಿ ಚಾಂಪಿಯನ್​ಶಿಪ್​ಸೆಪ್ಟೆಂಬರ್​ 16ರಿಂದ 24ಸರ್ಬಿಯಾ
ಏಷ್ಯಾ ಕಪ್​ ಕ್ರಿಕೆಟ್​ ಸೆಪ್ಟೆಂಬರ್ 2ರಿಂದ 17ಪಾಕಿಸ್ತಾನ
ಏಷ್ಯನ್ ಗೇಮ್ಸ್​ ಸೆಪ್ಟೆಂಬರ್​ 23- ಅಕ್ಟೋಬರ್​ 8ಚೀನಾ (ಹ್ಯಾಂಗ್ಜೊ)
ಏಕ ದಿನ ವಿಶ್ವ ಕಪ್ ಅಕ್ಟೋಬರ್​26- ನವೆಂಬರ್​ 26ಭಾರತ
ವರ್ಲ್ಡ್​​ ಟೂರ್​ ಫೈನಲ್ಸ್​ ಡಿಸೆಂಬರ್​ಕತಾರ್​

ಭಾರತೀಯರ ಪಾಲಿಗೆ ಕ್ರಿಕೆಟ್​ ಪ್ರಮುಖವಾಗಿದೆ. ಅಂತೆಯೇ ಈ ವರ್ಷದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​, ಏಷ್ಯಾ ಕಪ್​ ಹಾಗೂ ಏಕ ದಿನ ವಿಶ್ವ ಕಪ್ ನಡೆಯಲಿದೆ. ಅದನ್ನು ಹೊರತುಪಡಿಸಿದರೆ ಬ್ಯಾಡ್ಮಿಂಟರ್​ ಟೂರ್​ಗಳು ಮತ್ತು ವಿಶ್ವ ಚಾಂಪಿಯನ್​ಷಿಪ್​ ಭಾರತಕ್ಕೆ ಪ್ರಮುಖ ಎನಿಸಿದೆ. ಅದರ ಜತೆಗೆ ಏಷ್ಯಾ ಕಪ್​ ಹಾಗೂ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ಗಾಗಿಯೂ ಭಾರತೀಯ ಅಥ್ಲೀಟ್​ಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ | ICC World Cup 2023| ತೆರಿಗೆ ಸಮಸ್ಯೆ; ಏಕದಿನ ವಿಶ್ವಕಪ್ ಆತಿಥ್ಯ ಕೈಜಾರುವ ಭೀತಿಯಲ್ಲಿ ಬಿಸಿಸಿಐ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
kempegowda Jayanti
ಪ್ರಮುಖ ಸುದ್ದಿ55 seconds ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ5 mins ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ16 mins ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ41 mins ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್1 hour ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ1 hour ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ2 hours ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು2 hours ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ2 hours ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್2 hours ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌