Kannada New Movie | ‘ಹೊಂದಿಸಿ ಬರೆಯಿರಿ’ ತಂಡಕ್ಕೆ ನಿರ್ದೇಶಕ ಯೋಗರಾಜ್ ಭಟ್ ಸಾಥ್: ಲಿರಿಕಲ್ ವಿಡಿಯೊ ರಿಲೀಸ್ - Vistara News

ಸಿನಿಮಾ

Kannada New Movie | ‘ಹೊಂದಿಸಿ ಬರೆಯಿರಿ’ ತಂಡಕ್ಕೆ ನಿರ್ದೇಶಕ ಯೋಗರಾಜ್ ಭಟ್ ಸಾಥ್: ಲಿರಿಕಲ್ ವಿಡಿಯೊ ರಿಲೀಸ್

ಬಹು ನಿರೀಕ್ಷಿತ ‘ನೀ ಇರದ ನಾಳೆ’ ಹಾಡಿನ (Kannada New Movie ) ಲಿರಿಕಲ್ ವೀಡಿಯೊವನ್ನು ಚಿತ್ರತಂಡ ರಿಲೀಸ್ ಮಾಡಿದೆ. ವಿಕಟ ಕವಿ, ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಈ ಹಾಡನ್ನು ಮೆಚ್ಚಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ‘ಹೊಂದಿಸಿ ಬರೆಯಿರಿ’ ಸಿನಿಮಾ (Kannada New Movie ) ಆರಂಭದಿಂದಲೂ ಎಲ್ಲರ ಗಮನ ಸೆಳೆಯುತ್ತಿದೆ. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸಿನಿಮಾ ಪ್ರಚಾರ ಕಾರ್ಯವನ್ನು ಬಿಡುವಿಲ್ಲದೇ ನಡೆಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟೀಸರ್, ಹಾಡುಗಳು ಸಿನಿ ಪ್ರೇಕ್ಷಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ. ಇದೀಗ ಚಿತ್ರದ ಮತ್ತೊಂದು ಬಹು ನಿರೀಕ್ಷಿತ ‘ನೀ ಇರದ ನಾಳೆ’ ಹಾಡಿನ ಲಿರಿಕಲ್ ವೀಡಿಯೊವನ್ನು ಚಿತ್ರತಂಡ ರಿಲೀಸ್ ಮಾಡಿದೆ. ವಿಕಟ ಕವಿ, ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಈ ಹಾಡನ್ನು ಮೆಚ್ಚಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಹೊಂದಿಸಿ ಬರೆಯಿರಿ’ ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿದ್ದು, ಪ್ರತಿ ಹಾಡುಗಳು ಸಿನಿಮಾದಲ್ಲಿ ಬಹು ಮುಖ್ಯ ಪಾತ್ರ ವಹಿಸಲಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಪ್ರೇಕ್ಷಕರ ಮನಗೆದ್ದಿದ್ದು, ಇದೀಗ ಚಿತ್ರದ ಮತ್ತೊಂದು ಬಹು ನಿರೀಕ್ಷಿತ ಹಾಡು ‘ನೀ ಇರದ ನಾಳೆ ಬೇಕಿಲ್ಲ ನನಗೆ’ ಲಿರಿಕಲ್ ವೀಡಿಯೊ ಬಿಡುಗಡೆಯಾಗಿದೆ. ಈ ಹಾಡಿಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಬರೆದಿದ್ದು, ಸಂಬಂಧಗಳಲ್ಲಿರುವ ಗೊಂದಲವನ್ನು ವ್ಯಕ್ತಪಡಿಸುವ ಹಾಡು ಇದಾಗಿದೆ. ಪ್ರವೀಣ್ ತೇಜ್, ಭಾವನ ರಾವ್ ಈ ಹಾಡಿನ ಭಾಗವಾಗಿದ್ದು, ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಹಾಡು ಇದಾಗಿದೆ. ಕೀರ್ತನ್ ಹೊಳ್ಳ, ಐಶ್ವರ್ಯಾ ರಂಗರಾಜನ್ ಹಾಡಿಗೆ ದನಿಯಾಗಿದ್ದು ಜೋ ಕೋಸ್ಟ ಸಂಗೀತ ನಿರ್ದೇಶನ ಹಾಡಿಗಿದೆ. ಸಂಡೆ ಸಿನಿಮಾಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ | Hondisi Bareyiri | ಹೊಂದಿಸಿ ಬರೆಯಿರಿ ಸಿನಿಮಾಗೆ ನಟಿ ರಮ್ಯಾ ಸಾಥ್: ರಿಲೀಸ್‌ ಆಗಲಿದೆ ಮತ್ತೊಂದು ಹಾಡು!

ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತಾ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲರ್ ಫುಲ್ ಕಲಾವಿದರ ಮುಖ್ಯ ಭೂಮಿಕೆ ಚಿತ್ರದಲ್ಲಿದೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ಬಹು ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಒನ್ ಲೈನ್ ಕಹಾನಿ ಸುತ್ತ ಹೆಣೆಯಲಾದ ಚಿತ್ರವೇ ‘ಹೊಂದಿಸಿ ಬರೆಯಿರಿ’.

ಜೋ ಕೋಸ್ಟ ಸಂಗೀತ ನಿರ್ದೇಶನ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ, ಶಾಂತಿ ಸಾಗರ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸಿನಿಮಾ ನಿರ್ಮಾಣ ಮಾಡಿದ್ದು. ಫೆಬ್ರವರಿಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ | Hondisi Bareyiri | ತೆರೆ ಮೇಲೆ ಬರಲು ಸಜ್ಜಾಗಿದೆ ಹೊಂದಿಸಿ ಬರೆಯಿರಿ ಸಿನಿಮಾ: ರಿಲೀಸ್‌ ಡೇಟ್‌ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Actor Chetan Kumar Ahimsa: “ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್ʼ ಕೃತಿಯ ಪ್ರತಿಯನ್ನು ಸಿಎಂ ʼಸೋಮಾರಿ’ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ” ಎಂದು ಚೇತನ್‌ ವ್ಯಂಗ್ಯವಾಡಿದ್ದಾರೆ.‌

VISTARANEWS.COM


on

actor Chetan Kumar Ahimsa
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ನಟ ಚೇತನ್‌ (Actor Chetan Kumar ahimsa) “ಸೋಮಾರಿ” ಎಂದು ಕರೆದಿದ್ದಾರೆ. ಅವರ ಟ್ವೀಟ್‌ ಇದೀಗ ಕುತೂಹಲವನ್ನು ಹಾಗೂ ಸಿದ್ದು ಅಭಿಮಾನಿಗಳಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ.

“ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್ʼ ಕೃತಿಯ ಪ್ರತಿಯನ್ನು ಸಿಎಂ ʼಸೋಮಾರಿ’ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ” ಎಂದು ಚೇತನ್‌ ವ್ಯಂಗ್ಯವಾಡಿದ್ದಾರೆ.‌

ಅಂಬೇಡ್ಕರ್ (Dr. BR Ambedkar) ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ); ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿಸುತ್ತಾರೆ. ಗಾಂಧಿಯವರ 36 ಬ್ರಾಹ್ಮಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು; ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಚೇತನ್ ಹೇಳಿದ್ದಾರೆ.

ಚೇತನ್‌ ಇಂಥ ಅಪ್ರಾಸಂಗಿಕ, ವಿವಾದಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ನಟ ಚೇತನ್ ವಿರುದ್ಧ ವಕೀಲರೊಬ್ಬರು ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಚೇತನ್ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಿಸಿದ್ದರು.

ಚೇತನ್ ತಮ್ಮ ಫೇಸ್ಬುಕ್ ಖಾತೆಯಲ್ಲಿ “ಕೆಂಪೇಗೌಡ ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್-ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ” ಎಂದು ಪೋಸ್ಟ್ ಮಾಡಿದ್ದರು.

ಇತ್ತೀಚೆಗೆ, “ಗಾಂಧಿವಾದವನ್ನು ಕಿತ್ತೊಗೆಯಬೇಕು. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೊವನ್ನು ತೆರವು ಮಾಡಬೇಕು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Continue Reading

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

ಕಾಲಿವುಡ್

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Kamal Haasan: ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

VISTARANEWS.COM


on

Kamal Haasan Indian 2 to release on July 12
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಶಂಕರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂಡಿಯನ್ 2’ ಜುಲೈ 12 ರಂದು (Indian 2 to release) ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 19ರಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇತ್ತೀಚಿನ ಪೋಸ್ಟರ್‌ಗಳ ಪ್ರಕಾರ, ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.

ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ವಿಶೇಷ ಎಂದರೆ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರ ಛಾಯಾಗ್ರಹಣ ಇದೆ. ಎ.ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು.

ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಈ ಮಧ್ಯೆ ಕಮಲ್‌ ಹಾಸನ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼಯಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಟಾಲಿವುಡ್ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಕೆರಳಿಸಿದೆ. ಭೂತ ಕಾಲ ಮತ್ತು ಭವಿಷ್ಯದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ಗಳ ಪ್ರಕಾರ ಚಿತ್ರವು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Continue Reading

ಬಾಲಿವುಡ್

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Lok Sabha Election 2024: ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Akshay Kumar casts vote for the first time
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು. 

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಇನ್ನು ಅಮಿತಾಭ್‌ ಕೂಡ ಮತ ಚಲಾಯಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ. ʻʻಅಮಿತಾಭ್‌ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಡಿನಲ್ಲಿರುವ ಪ್ರಾಣಿಗಳು ಅಭಿ ತೋ ಪಾರ್ಟಿ ಶುರು ಹುಯಿ ಹೈ ಎಂಬ ಜನಪ್ರಿಯ ಹಾಡಿಗೆ ನೃತ್ಯ ಮಾಡುವುದು ಇದೆ. ಪೋಸ್ಟ್ ಅನ್ನು ಹಂಚಿಕೊಂಡ ಅವರು, “ನಾಳೆ ಮುಂಬೈ/ಮಹಾರಾಷ್ಟ್ರಕ್ಕೆ ನಿಮ್ಮ ದಿನ. ನಿಮ್ಮ ಹಕ್ಕನ್ನು ಚಲಾಯಿಸಿ..” ಎಂದರು.

ಆಯುಷ್ಮಾನ್ ಕೂಡ ವಿಡಿಯೊ ಮಾಡಿ, “ಸ್ನೇಹಿತರೇ, ಮತದಾನ ಮಾಡುವ ಸಮಯ ಬಂದಿದೆ. ಹೌದು, ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯುತ್ತಿದೆ, ಮತ್ತು ಈಗ ಇದು ನಿಮ್ಮ ಸರದಿ. ಪ್ರತಿ ಮತವೂ ಮುಖ್ಯವಾಗಿದೆ ಏಕೆಂದರೆ ಯಾವ ನಾಯಕರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೀವು ನಿರ್ಧರಿಸುತ್ತೀರಿ. ನಿಮ್ಮ ಮತವು ನಿಮ್ಮ ಧ್ವನಿಯಾಗಿದೆ, ಮತ್ತು ನಿಮ್ಮ ಧ್ವನಿಯನ್ನು ಎಣಿಕೆ ಮಾಡಿ, ಏಕೆಂದರೆ ನಾವು ನಮ್ಮ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬಹುದುʼʼಎಂದಿದ್ದಾರೆ. ರಣವೀರ್‌, ಕರಣ್‌ ಜೋಹರ್‌ ಸೇರಿದಂತೆ ಅನೇಕ ನಟರು ಮನವಿ ಮಾಡಿದರು.

ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading
Advertisement
actor Chetan Kumar Ahimsa
ಸಿನಿಮಾ3 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ22 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್26 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್27 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್54 mins ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ1 hour ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌