Shiradi Ghat | ಮತ್ತೆ ಎದ್ದು ಬಂತು ಶಿರಾಡಿ ಸುರಂಗ ಮಾರ್ಗ! ಏಪ್ರಿಲ್‌ನೊಳಗೆ ಡಿಪಿಆರ್‌ ಅಂತಿಮ ಅಂದ್ರು ನಿತಿನ್‌ ಗಡ್ಕರಿ! - Vistara News

ಕರ್ನಾಟಕ

Shiradi Ghat | ಮತ್ತೆ ಎದ್ದು ಬಂತು ಶಿರಾಡಿ ಸುರಂಗ ಮಾರ್ಗ! ಏಪ್ರಿಲ್‌ನೊಳಗೆ ಡಿಪಿಆರ್‌ ಅಂತಿಮ ಅಂದ್ರು ನಿತಿನ್‌ ಗಡ್ಕರಿ!

ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಕನಸು ಇನ್ನೂ ಜೀವಂತವಾಗಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಈಗ ಮತ್ತೆ ಅದರ ಬಗ್ಗೆ ಮಾತನಾಡಿದ್ದಾರೆ.

VISTARANEWS.COM


on

Shiradi ghat road
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣದ ಅವಧಿಯನ್ನು ಸುಮಾರು ೧ ಗಂಟೆ ಕಡಿಮೆಗೊಳಿಸಬಲ್ಲ ಮತ್ತು ಸರಕು ಸಾಗಣೆಗೆ ಭಾರಿ ಅನುಕೂಲಕಾರಿಯಾದ ಶಿರಾಡಿ ಘಾಟಿ ಸುರಂಗ ಮಾರ್ಗ ಯೋಜನೆಗೆ ಮತ್ತೆ ಜೀವ ಬಂದಿದೆ. ಕಳೆದ ಅಧಿವೇಶನ ಸಂದರ್ಭದಲ್ಲಿ ನೀಡಲಾದ ಒಂದು ಉತ್ತರದಲ್ಲಿ ಇದು ಕಾರ್ಯಸಾಧು ಯೋಜನೆಯಲ್ಲ ಎಂಬ ಅಭಿಪ್ರಾಯ ಮೂಡಿತ್ತು. ಆದರೆ, ಈಗ ಅದೇ ಕೇಂದ್ರ ಹೆದ್ದಾರಿ ಖಾತೆ ಸಚಿವರು ನೀಡಿರುವ ಇನ್ನೊಂದು ಉತ್ತರದಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಸೆಯನ್ನು ಜೀವಂತವಾಗಿಡಲಾಗಿದೆ.

ನಳಿನ್‌ ಕುಮಾರ್‌ ಅವರಿಗೆ ಬಂದ ಪತ್ರದಲ್ಲಿ ಏನಿದೆ?
ಶಿರಾಡಿ ಘಾಟಿ ರಸ್ತೆ ಅಭಿವೃಧ್ಧಿಗೆ ಸಂಬಂಧಿಸಿ ಕೇಂದ್ರ ಸಚಿವರು ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಬರೆದಿರುವ ಪತ್ರದಲ್ಲಿ ರಸ್ತೆ ದುರಸ್ತಿ ಮತ್ತು ಸುರಂಗ ಮಾರ್ಗದ ಉಲ್ಲೇಖಗಳಿವೆ.

ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು ರೂ. 1976 ಕೋಟಿ ಮೊತ್ತದ ಬಿಡ್ ನ್ನು ಆಹ್ವಾನಿಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಇವರಿಗೆ ಬರೆದ ಪತ್ರದಲ್ಲಿ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಈ ಚತುಷ್ಪಥ ಕಾಮಗಾರಿ ಒಟ್ಟಿಗೆ ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡಲಿರುವ ಶಿರಾಡಿ ಘಾಟ್ ಟನಲ್ ಯೋಜನೆಯನ್ನು ರೂ. 15,000 ಕೋಟಿ ವೆಚ್ಚದಲ್ಲಿ 23 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಏಪ್ರಿಲ್, 2023 ರೊಳಗೆ ಡಿಪಿಆರ್ ಅನ್ನು ಅಂತಿಮಗೊಳಿಸಿ ಮತ್ತು ಮೇ, 2023 ರಲ್ಲಿ ಬಿಡ್ ಗಳನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.

ಅಲ್ಲದೆ ಸಕಲೇಶಪುರದಿಂದ ಮಾರನಹಳ್ಳಿಯ ಭಾಗದ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಕೂಡಲೆ ದುರಸ್ತಿ ಮಾಡಲು ನಿರ್ಧರಿಸಲಾಗಿದ್ದು, .ದುರಸ್ತಿ ಕಾಮಗಾರಿಗೆ ರೂ. 12.20 ಕೋಟಿ ಬಿಡ್ ನ ಮೌಲ್ಯಮಾಪನ ಮಾಡಲಾಗುತ್ತಿದೆ. ಅಲ್ಲದೆ, ಅಸ್ತಿತ್ವದಲ್ಲಿರುವ ರಸ್ತೆ ನಿರ್ವಹಣೆಗೆ ಗುತ್ತಿಗೆದಾರರು ಪ್ಯಾಚ್ ವರ್ಕ್ ದುರಸ್ತಿಗೆ ಮುಂದಾಗಿದ್ದಾರೆ ಎಂದು ಗಡ್ಕರಿಯವರು ನಳಿನ್ ಕುಮಾರ್ ಕಟೀಲ್ ಇವರಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುರಂಗ ಮಾರ್ಗ ಯೋಜನೆ ಕಾರ್ಯಸಾಧುವಲ್ಲ ಎಂದು ಈ ಹಿಂದಿನ ಉತ್ತರದಲ್ಲಿ ಹೇಳಿದ್ದ ಗಡ್ಕರಿ ಅವರು ತುರ್ತಾಗಿ ಮತ್ತೆ ಡಿಪಿಆರ್‌ ಮಾತು ಆಡಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವುದು ಸ್ಪಷ್ಟವಾಗಲಿಲ್ಲ.

ಇದನ್ನೂ ಓದಿ | Shiradi ghat | ಶಿರಾಡಿ ಘಾಟಿ ರಸ್ತೆ ಅವ್ಯವಸ್ಥೆ: ವಾರದಲ್ಲಿ ವಿಶೇಷ ಸಭೆ ಕರೆದು ಪರಿಹಾರ ಎಂದ ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Karnataka rain : ವಾರದವರೆಗೂ ಬಿಡುವು ನೀಡಿದ್ದ ವರುಣ ನಿನ್ನೆ ಶನಿವಾರದಿಂದ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Rain news) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾದರೆ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ, ವಿಜಯನಗರ ಮತ್ತು ಹಾವೇರಿಯ ಬಹುತೇಕ ಕಡೆಗಳಲ್ಲಿ ಮಳೆಯು ಅಬ್ಬರಿಸಲಿದೆ.

ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ರಾಜಧಾನಿಯಲ್ಲಿ ಅಬ್ಬರದ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲಿನಿಂದ ಕಂಗೆಟ್ಟ ಸಿಟಿ ಮಂದಿಗೆ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ವಾತಾವರಣವೂ ಕೂಲ್‌ ಆಗಿದೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

ಮೈಸೂರಿನಲ್ಲಿ ಗಾಳಿ-ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆ

ಮೈಸೂರಿನಲ್ಲಿ ವಿವಿಧೆಡೆ ಭಾರಿ ಮಳೆ ಗಾಳಿಗೆ ಬಾಳೆ ಬೆಳೆ ನೆಲಕ್ಕುರುಳಿದೆ. ಮಳೆ, ಗಾಳಿಯು ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಮಾಡಿದೆ. ಶನಿವಾರ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರವೇ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳಿ ಗಿಡ ನೆಲಕ್ಕುರುಳಿದ್ದು ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಕೆಜಿಎಫ್‌ನಲ್ಲಿ ಭರ್ಜರಿ ಮಳೆ

ಕೋಲಾರ ಜಿಲ್ಲೆಯ ವಿವಿಧಡೆ ತಡರಾತ್ರಿ ಗುಡುಗು ಸಿಡಿಲ ಧಾರಾಕಾರ ಮಳೆಯಾಗಿದೆ. ಕೆಜಿಎಫ್‌ನಲ್ಲಿ 6.4 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಬಂಗಾರಪೇಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಜಿಎಫ್‌ನ ಬೆಮಲ್ ಬಡಾವಣೆಯಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರಲಿದೆ. ತಡರಾತ್ರಿ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಗಂಭೀರ

ಇನ್ನೂ ವಿಜಯನಗರದ ನಿವಾಸಿ ಬೈಕ್‌ನಲ್ಲಿ ಬರುವಾಗ ಗಾಳಿ ಮಳೆಗೆ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಇಮ್ಯುನಿಯಲ್ ಎಂಬಾತ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಜಿಎಫ್ ನ ಮಾರಿಕೊಪ್ಪ ಮತ್ತು ಆಂಧ್ರದ ಕುಪ್ಪಂ ರಾಮಕುಪ್ಪಂ ಬಂಗಾರಪೇಟೆ ಮಾಲೂರು ಕಡೆ ಬಿರುಸಿನ ಮಳೆಯಾಗಿದೆ .ಹಳ್ಳ ಕೊಳ್ಳಗಳು ತುಂಬಿ ನೀರು ಹರಿದಿದೆ. ಇನ್ನು ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಟ!

ಭವಾನಿ ರೇವಣ್ಣ ಅವರನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

VISTARANEWS.COM


on

Bhavani Revanna hide Not Present For SIT Questioning At Home
Koo

ಬೆಂಗಳೂರು: ಮಗ ಪ್ರಜ್ವಲ್ ರೇವಣ್ಣ (Prajwal Revanna) ಸೆಕ್ಸ್ ಸ್ಕ್ಯಾಂಡಲ್‌ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣ ಮಾಡಿ ಒತ್ತಡ ಹಾಕಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು (Bhavani Revanna) ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೂರು ಜಿಲ್ಲೆ, ನಾಲ್ಕು ತಂಡ, ಸತತ ಹುಡುಕಾಟ

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

ಎಲ್ಲವೂ ಗೊತ್ತಿದ್ದೂ ಕಣ್ಣಾ ಮುಚ್ಚಾಲೆ ಆಡ್ತಿದ್ದಾರಾ ಭವಾನಿ ರೇವಣ್ಣ?

ತನಿಖೆಗೆ ಸಹಕರಿಸ್ತೀವಿ, ನೊಟೀಸ್ ಕೊಟ್ರೆ ವಿಚಾರಣೆಗೆ ಹಾಜರಾಗ್ತೀವಿ ಎಂದಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ನಿ ಭವಾನಿ ಈಗ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಅವರ ಮನೆಗೆ ಹೋಗಿ ಭವಾನಿ ರೇವಣ್ಣರನ್ನ ವಿಚಾರಣೆ ‌ನಡೆಸಲು ಎಸ್ ಐ ಟಿ ಮುಂದಾಗಿತ್ತು. ಆದರೆ ಮನೆಯಿಂದ ಹೊರಬಂದು ಅಜ್ಞಾತ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ. ಎಸ್ ಐ ಟಿ ನೊಟೀಸ್ ಗೆ ಉತ್ತರವನ್ನೂ ಕೊಟ್ಟಿಲ್ಲ‌ ಸಂಬಂಧಿಕರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ.

ಯಾವ ಕ್ಷಣದಲ್ಲಾದ್ರೂ ಭವಾನಿ ರೇವಣ್ಣ ವಶ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

ಹೈ ಕೋರ್ಟ್ ಮೊರೆ ಹೋಗಲು ಭವಾನಿ ರೇವಣ್ಣ ಚಿಂತನೆ?

ಎಸ್ಐಟಿಯಿಂದ ತಪ್ಪಿಸಿಕೊಳ್ಳೋಕೆ ಭವಾನಿ ರೇವಣ್ಣಗೆ ಇರುವ ಒಂದೇ ಚಾನ್ಸ್ ಅಂದರೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು. ಆದರೆ ಇಂದು ಭಾನುವಾರ ಆದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ರಜೆ ಇರುತ್ತದೆ. ಇಂಥ ಸಂಗತಿಗಳಿಗೆಲ್ಲ ಹೈಕೋರ್ಟ್ ತುರ್ತು ವಿಚಾರಣೆ ನಡೆಸುವುದಿಲ್ಲ. ಹಾಗಾಗಿ ಇಂದೂ ಕೂಡ ಭವಾನಿ ರೇವಣ್ಣ ತಲೆಮರೆಸಿಕೊಂಡಿರಲು ಪ್ರಯತ್ನಿಸಲಿದ್ದಾರೆ. ಹೈ ಕೋರ್ಟ್‌ಗೆ ಸೋಮವಾರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ವಿಚಾರಣೆ ವೇಳೆ ಮೊಂಡಾಟ

ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ವೇಳೆ ಭಾರೀ ಮೊಂಡಾಟ ತೋರಿದ್ದಾರೆ ಎನ್ನಲಾಗಿದೆ. ಎಷ್ಟು ವಿಚಾರಣೆ ಮಾಡಿದ್ರೂ ಪ್ರಜ್ವಲ್‌ ಸರಿಯಾಗಿ ಬಾಯಿ ಬಿಡ್ತಿಲ್ಲ. ವಿಚಾರಣೆ ವೇಳೆ ಎದ್ದೇಳೋದು.. ಆಕಡೆ ಈಕಡೆ ಓಡಾಡೋದು.. ಏನೂ ಗೊತ್ತಿಲ್ಲ ಅಂತಾನೆ ಉತ್ತರ ನೀಡುತ್ತಾ ಎಸ್ಐಟಿ ಅಧಿಕಾರಿಗಳಿಗೆ ತಲೆ ಕೆಡಿಸಿದ್ದಾರೆ. ಏನು ಕೇಳಿದ್ರೂ ನಂಗೆ ಗೊತ್ತಿಲ್ಲ.. ನಾನೇನು ಮಾಡಿಲ್ಲ ಅಂತಿರುವ ಪ್ರಜ್ವಲ್‌ರನ್ನು ಮೊಬೈಲ್ ಬಗ್ಗೆ ಮತ್ತೆ ಬಾಯಿ ಬಿಡಿಸಲು ಎಸ್ಐಟಿ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಯಾವ ಮೊಬೈಲ್..? ಇರುವ ಮೊಬೈಲ್ ಏರ್ಪೋರ್ಟ್ ನಲ್ಲೇ ಕೊಟ್ಟೆ.. ಯಾವ ಮೊಬೈಲ್ ಬಗ್ಗೆ ಮಾತನಾಡ್ತಿದೀರಾ..? ಹಳೆ ಮೊಬೈಲ್ ಕಳೆದೋಗಿದೆ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ರ ಈಗಿನ ಮೊಬೈಲ್‌ನಲ್ಲಿ ಯಾವುದೇ ರೀತಿ ವಿಡಿಯೋಗಳು, ಮೆಸೇಜ್ ಗಳು ಪತ್ತೆಯಾಗಿಲ್ಲ. ಸದ್ಯ ಡಿಜಿಟಲ್ ಎವಿಡೆನ್ಸ್ ಕಲೆ ಹಾಕಲು ಎಸ್ಐಟಿ, ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದೆ.

ಈಗಾಗಲೇ ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

Continue Reading

ಬಾಗಲಕೋಟೆ

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Foeticide Case: ಕೆಲವು ದಿನಗಳ ಹಿಂದೆಯಷ್ಟೇ ಬಾಲಕೋಟೆಯ ಮಹಾಲಿಂಗಪುರದಲ್ಲಿ ಮೂರನೇ ಮಗು ಹೆಣ್ಣು ಎಂಬದನ್ನು ಪತ್ತೆ ಮಾಡಿಸಿ ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ ಘಟನೆ ಬೆಳಕಿಗೆ ಬಂದಿತ್ತು. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಗರ್ಭಿಣಿ ಮೃತಪಟ್ಟಿದ್ದರು. ಪೊಲೀಸರು ನರ್ಸ್‌ ಸೇರಿದಂತೆ ಹಲವರನ್ನು ಬಂಧನ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಭ್ರೂಣ ಹತ್ಯೆಯ ಎರಡನೇ ಪ್ರಕರಣ ಇದು. ಇದರಿಂದಾಗಿ ಜನ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರೆ.

VISTARANEWS.COM


on

Foeticide Case Foeticide another Case in Bagalkot
Koo

ಬಾಗಲಕೋಟೆ: ರಾಜ್ಯದಲ್ಲಿ ಭ್ರೂಣ ಹತ್ಯೆ ಜಾಲದ ಕರಾಳ ಮುಖಗಳು ಒಂದೊಂದೇ ಬಯಲಾಗುತ್ತಿವೆ. ಈಗಾಗಲೇ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ಕಾನೂನು ಬಾಹಿರ ಎಂದು ಘೋಷಿಸಿ, ಕಠಿಣ ಕ್ರಮಗಳ ಕಾನೂನು ಇದ್ದರೂ ಇದನ್ನು ತಡೆಯಲಾಗದಿರುವ (Foeticide Case) ಬಗ್ಗೆ ಈಗ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದೆಲ್ಲದರ ನಡುವೆ ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಪ್ರಕರಣ ಬಯಲಾಗಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಆಗಿದೆ. ನಗರದ ಹೊರ ವಲಯದ ಕಸದ ರಾಶಿ ನಡುವೆ ನವಜಾತ ಶಿಶುವಿನ ಶವ ಕಂಡುಬಂದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಬಾಲಕೋಟೆಯ ಮಹಾಲಿಂಗಪುರದಲ್ಲಿ ಮೂರನೇ ಮಗು ಹೆಣ್ಣು ಎಂಬದನ್ನು ಪತ್ತೆ ಮಾಡಿಸಿ ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ ಘಟನೆ ಬೆಳಕಿಗೆ ಬಂದಿತ್ತು. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಗರ್ಭಿಣಿ ಮೃತಪಟ್ಟಿದ್ದರು. ಪೊಲೀಸರು ನರ್ಸ್‌ ಸೇರಿದಂತೆ ಹಲವರನ್ನು ಬಂಧನ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಭ್ರೂಣ ಹತ್ಯೆಯ ಎರಡನೇ ಪ್ರಕರಣ ಇದು. ಇದರಿಂದಾಗಿ ಜನ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

Foeticide another Case in Bagalkot

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ಭೇಟಿ ಬೆನ್ನಲ್ಲೇ ಜಿಲ್ಲೆಯಲ್ಲಿ ವ್ಯಾಪಕವಾಗಿ ಭ್ರೂಣ ಹತ್ಯೆಯ ಜಾಲಗಳು ಕಾಣಿಸುತ್ತಿವೆ. ನಗರದ ಹೊರ ವಲಯದ ಕಸದ ರಾಶಿ ನಡುವೆ ನವಜಾತ ಶಿಶುವಿನ ಶವ ಕಂಡುಬಂದಿದೆ. ಈಗಾಗಲೇ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ಕಾನೂನು ಬಾಹಿರ ಎಂದು ಘೋಷಿಸಿ, ಕಠಿಣ ಕ್ರಮಗಳ ಕಾನೂನು ಇದ್ದರೂ ಇದನ್ನು ತಡೆಯಲಾಗದಿರುವ ಬಗ್ಗೆ ಈಗ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೆ ಇಂಥ ಪ್ರಕರಣಗಳು ಆಗದಂತೆ ಕಾನೂನನ್ನು ಮತ್ತಷ್ಟು ಕಠಿಣ ಮಾಡಬೇಕು ಎಂದು ಜನರೂ ಕೂಡ ಒತ್ತಾಯಿಸುತ್ತಿದ್ದಾರೆ.

ಜಾಲಕ್ಕೆ ಅಧಿಕಾರಿಗಳು ಬೆಂಗಾವಲು?

ಇಷ್ಟೂ ಪ್ರಕರಣಗಳು ಆದರೂ ಆರೋಗ್ಯ ಇಲಾಖೆ, ಡಿಸಿಪಿಒ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಾಢ ನಿದ್ರೆಯಲ್ಲಿದೆಯಾ? ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಲಿಂಗ ಪತ್ತೆ ,ಗರ್ಭಪಾತ,ಭ್ರೂಣ ಹತ್ಯೆ ಜಾಲಕ್ಕೆ ಅಧಿಕಾರಿಗಳು ಬೆಂಗಾವಲಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಇನ್ನು ವರದಿಗಳ ಪ್ರಕಾರ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ, ದಕ್ಷಿಣ ಭಾರತದ ರಾಜ್ಯಗಳು ಈ ಹೆಣ್ಣು ಭ್ರೂಣ ಹತ್ಯೆ ತಡೆಯಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿವೆ. ಮಧ್ಯ ಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢಗಳಲ್ಲಿ ಈ ಪ್ರಕರಣಗಳು ಹೆಚ್ಚು ಆದರೂ, ಈಗ ಹೊರ ಬಿದ್ದಿರುವ ಮಾಹಿತಿಯನ್ನು ನೋಡುತ್ತಿದ್ದರೆ ಕರ್ನಾಟಕವೂ ಏನೂ ಕಡಿಮೆಯಿಲ್ಲ ಎನ್ನುವಂತಾಗುತ್ತಿದೆ. ಈ ಕಳಂಕವನ್ನು ನಾವು ತೊಡೆದುಕೊಳ್ಳಬೇಕಿದೆ. ಕಾನೂನು ಜಾರಿ, ಜಾಗೃತಿ ಜತೆಗೆ ತಂದೆ-ತಾಯಿಗಳ ಮನೋಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು.

Continue Reading

ಕರ್ನಾಟಕ

Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Hassan MP Prajwal Revanna case:ಇಂದು ಎಸ್‌ಐಟಿ ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಅಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯ ಎಮ್ ಪಿ ಚುನಾವಣಾ ಎಕ್ಸಿಟ್ ಪೋಲ್ ನಡೀತಿದ್ದು, ಪ್ರಜ್ವಲ್ ರೇವಣ್ಣ ಗೆಲ್ಲುವ ಸಾಧ್ಯತೆ ಎಂಬ ಮಾತಿರುವ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಗರು, ಅಭಿಮಾನಿಗಳು ಸೇರಬಹುದಾದ ಸಂಭವವಿದೆ. ಹೀಗಾಗಿ ಹೀಗಾಗಿ ಇವತ್ತು ಅಥವಾ ನಾಳೆ ಸ್ಥಳ ಮಹಜರು ಮಾಡಿದ್ರೆ ಮುಂದಿನ ಹಂತದ ಪ್ರಕ್ರಿಯೆ ಸುಲಭವಾಗುತ್ತದೆ ಎಂದು ಪ್ಲ್ಯಾನ್‌ ಮಾಡಿರೋ ಎಸ್‌ಐಟಿ, ಸ್ಥಳ ಮಹಜರು ನಂತರ ಮತ್ತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆಸಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ಮೂರನೇ ದಿನದ ಕಸ್ಟಡಿ ಮುಂದುವರೆದಿದ್ದು, ಇಂದೇ ಸ್ಥಳ ಮಹಜರಿಗೆ ಎಸ್ಐಟಿ ಪ್ಲಾನ್ ಮಾಡಿದೆ. ಕಳೆದ ಎರಡು ದಿನಗಳಿಂದ ವಿಚಾರಣೆ ವೇಳೆ ಪ್ರಜ್ವಲ್‌ ಏನನ್ನೂ ಬಾಯ್ಬಿಡದಿರುವುದ ಎಸ್‌ಐಟಿಗೆ ಭಾರೀ ತಲೆನೋವಾಗಿದೆ. ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದರೂ ಎಲ್ಲವೂ ಷಡ್ಯಂತರ.. ನಾನೇನು ಮಾಡಿಲ್ಲ ಅಂತಲೇ ಪ್ರಜ್ವಲ್‌ ಉತ್ತರ ನೀಡಿದ್ದಾರೆ.

ಇಂದು ಎಸ್‌ಐಟಿ ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಅಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯ ಎಮ್ ಪಿ ಚುನಾವಣಾ ಎಕ್ಸಿಟ್ ಪೋಲ್ ನಡೀತಿದ್ದು, ಪ್ರಜ್ವಲ್ ರೇವಣ್ಣ ಗೆಲ್ಲುವ ಸಾಧ್ಯತೆ ಎಂಬ ಮಾತಿರುವ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಗರು, ಅಭಿಮಾನಿಗಳು ಸೇರಬಹುದಾದ ಸಂಭವವಿದೆ. ಹೀಗಾಗಿ ಹೀಗಾಗಿ ಇವತ್ತು ಅಥವಾ ನಾಳೆ ಸ್ಥಳ ಮಹಜರು ಮಾಡಿದ್ರೆ ಮುಂದಿನ ಹಂತದ ಪ್ರಕ್ರಿಯೆ ಸುಲಭವಾಗುತ್ತದೆ ಎಂದು ಪ್ಲ್ಯಾನ್‌ ಮಾಡಿರೋ ಎಸ್‌ಐಟಿ, ಸ್ಥಳ ಮಹಜರು ನಂತರ ಮತ್ತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆಸಲಿದೆ.

ವಿಚಾರಣೆ ವೇಳೆ ಮೊಂಡಾಟ

ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ವೇಳೆ ಭಾರೀ ಮೊಂಡಾಟ ತೋರಿದ್ದಾರೆ ಎನ್ನಲಾಗಿದೆ. ಎಷ್ಟು ವಿಚಾರಣೆ ಮಾಡಿದ್ರೂ ಪ್ರಜ್ವಲ್‌ ಸರಿಯಾಗಿ ಬಾಯಿ ಬಿಡ್ತಿಲ್ಲ. ವಿಚಾರಣೆ ವೇಳೆ ಎದ್ದೇಳೋದು.. ಆಕಡೆ ಈಕಡೆ ಓಡಾಡೋದು.. ಏನೂ ಗೊತ್ತಿಲ್ಲ ಅಂತಾನೆ ಉತ್ತರ ನೀಡುತ್ತಾ ಎಸ್ಐಟಿ ಅಧಿಕಾರಿಗಳಿಗೆ ತಲೆ ಕೆಡಿಸಿದ್ದಾರೆ. ಏನು ಕೇಳಿದ್ರೂ ನಂಗೆ ಗೊತ್ತಿಲ್ಲ.. ನಾನೇನು ಮಾಡಿಲ್ಲ ಅಂತಿರುವ ಪ್ರಜ್ವಲ್‌ರನ್ನು ಮೊಬೈಲ್ ಬಗ್ಗೆ ಮತ್ತೆ ಬಾಯಿ ಬಿಡಿಸಲು ಎಸ್ಐಟಿ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಯಾವ ಮೊಬೈಲ್..? ಇರುವ ಮೊಬೈಲ್ ಏರ್ಪೋರ್ಟ್ ನಲ್ಲೇ ಕೊಟ್ಟೆ.. ಯಾವ ಮೊಬೈಲ್ ಬಗ್ಗೆ ಮಾತನಾಡ್ತಿದೀರಾ..? ಹಳೆ ಮೊಬೈಲ್ ಕಳೆದೋಗಿದೆ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ರ ಈಗಿನ ಮೊಬೈಲ್‌ನಲ್ಲಿ ಯಾವುದೇ ರೀತಿ ವಿಡಿಯೋಗಳು, ಮೆಸೇಜ್ ಗಳು ಪತ್ತೆಯಾಗಿಲ್ಲ. ಸದ್ಯ ಡಿಜಿಟಲ್ ಎವಿಡೆನ್ಸ್ ಕಲೆ ಹಾಕಲು ಎಸ್ಐಟಿ, ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದೆ.

ಈಗಾಗಲೇ ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ:Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Continue Reading
Advertisement
Karnataka Rain
ಮಳೆ2 mins ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ5 mins ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಟ!

IND vs PAK
ಕ್ರಿಕೆಟ್13 mins ago

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

Foeticide Case Foeticide another Case in Bagalkot
ಬಾಗಲಕೋಟೆ44 mins ago

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Healthy Sandwich Spread
ಆರೋಗ್ಯ49 mins ago

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

Taiwan Athletics Open
ಕ್ರೀಡೆ1 hour ago

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Assembly Election Results 2024:
ದೇಶ1 hour ago

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Man
ಆರೋಗ್ಯ1 hour ago

Health Tips For Rainy Season: ಮಳೆಗಾಲ ಶುರುವಾಗಿದೆ, ಅನಾರೋಗ್ಯಕ್ಕೆ ತುತ್ತಾಗದಿರಲು ಈ ಸಲಹೆ ಪಾಲಿಸಿ

WhatsApp Features
ಗ್ಯಾಜೆಟ್ಸ್1 hour ago

WhatsApp Features: ವಾಟ್ಸ್ ಆ್ಯಪ್ ನಲ್ಲಿರುವ ಈ 7 ವಿಶೇಷ ಫೀಚರ್ ಗಳ ಬಗ್ಗೆ ಗೊತ್ತೇ? ನೀವೂ ಬಳಸಿ

USA vs CAN
ಕ್ರೀಡೆ1 hour ago

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು18 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌