KPSC CBRT Exam | ಕೆಪಿಎಸ್‌ಸಿಯ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ನಾಳೆ ಮಾಕ್‌ ಟೆಸ್ಟ್‌ - Vistara News

ಉದ್ಯೋಗ

KPSC CBRT Exam | ಕೆಪಿಎಸ್‌ಸಿಯ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ನಾಳೆ ಮಾಕ್‌ ಟೆಸ್ಟ್‌

ಕರ್ನಾಟಕ ಲೋಕ ಸೇವಾ ಆಯೋಗವು ಇನ್ನು ಮುಂದೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕಂಪ್ಯೂಟರ್‌ ಆಧಾರಿತವಾಗಿ ನಡೆಸಲು ತೀರ್ಮಾನಿಸಿದ್ದು (KPSC CBRT Exam), ಇದಕ್ಕಾಗಿ ಜ.7 ರಂದು ಮಾಕ್‌ ಟೆಸ್ಟ್‌ ನಡೆಸುತ್ತಿದೆ.

VISTARANEWS.COM


on

KPSC Key answers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಸದ್ಯವೇ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳನ್ನು (KPSC CBRT Exam) ಆರಂಭಿಸುತ್ತಿದ್ದು (Computer based recruitment test-CBRT), ಇದಕ್ಕಾಗಿ ಶನಿವಾರ (ಜ.07) ಮಾಕ್‌ ಟೆಸ್ಟ್‌ ನಡೆಸಲಾಗುತ್ತಿದೆ.

KPSC Recruitment 2023

ಈ ಪರೀಕ್ಷೆ ಹೇಗೆ ನಡೆಯುತ್ತದೆ, ಇದರಿಂದ ಆಗುವ ಸಮಸ್ಯೆಗಳೇನು ಎಂಬುದನ್ನು ತಿಳಿದುಕೊಳ್ಳಲು ಪ್ರಾಯೋಗಿಕವಾಗಿ ಈ ಅಣಕು ಪರೀಕ್ಷೆ (Mock Test)ಯನ್ನು ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಇದಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.

ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಕೋರಲಾಗಿದೆ.

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್‌ (Click Here) ಮಾಡಿ

ಪರೀಕ್ಷೆ ಹೇಗಿರುತ್ತದೆ?
ಪರೀಕ್ಷೆಯನ್ನು ಪ್ರಾಯೋಗಿಕವಾಗಿ Computer based recruitment test-CBRT ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯು ಎರಡು ಗಂಟೆಗಳ ಕಾಲ ನಡೆಯಲಿದೆ. ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಆಂಗ್ಲಭಾಷೆ ಎರಡರಲ್ಲೂ ಸಿದ್ಧಪಡಿಸಲಾಗುತ್ತದೆ. ವಸ್ತುನಿಷ್ಠ (Objective type or multiple choice) ಮಾದರಿಯಲ್ಲಿರುತ್ತದೆ.

ಪ್ರತಿ ಪ್ರಶ್ನೆ ಪತ್ರಿಕೆಯು 100 ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ 02 (ಎರಡು) ಅಂಕಗಳನ್ನು ನಿಗದಿಪಡಿಸಲಾ ಗಿರುತ್ತದೆ. ಪ್ರತಿ ಪ್ರಶ್ನೆಯು 04 (ನಾಲ್ಕು) ಆಯ್ಕೆಗಳನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ತಪ್ಪು ಉತ್ತರ ನೀಡಿದಲ್ಲಿ ಆ ಪ್ರಶ್ನೆಗೆ ನಿಗದಿಪಡಿಸಲಾದ ಅಂಕಗಳಲ್ಲಿ 1/4 ರಷ್ಟು ಅಂಕಗಳನ್ನು ದಂಡದ ರೂಪದಲ್ಲಿ ಕಳೆಯಲಾಗುತ್ತದೆ. ಅಭ್ಯರ್ಥಿಯು ಯಾವುದೇ ಪ್ರಶ್ನೆಗೆ ಉತ್ತರಿಸದೆ ಖಾಲಿ ಬಿಟ್ಟಲ್ಲಿ ಅಂದರೆ ಉತ್ತರವನ್ನು ನೀಡದಿದ್ದಲ್ಲಿ ಆ ಪ್ರಶ್ನೆಗೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ. ಪರೀಕ್ಷೆಯ ಸಿಲಬಸ್‌ ಅನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://kpsc.kar.nic.in
ಸಹಾಯವಾಣಿ ಸಂಖ್ಯೆ: 9310611990/8448513269

ಇದನ್ನೂ ಓದಿ| KPSC Recruitment 2022 | ಕೆಪಿಎಸ್‌ಸಿಯಿಂದ ವಿವಿಧ 23 ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯ ದೇಶಾದ್ಯಂತ 50,000ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ (Job Alert) ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

VISTARANEWS.COM


on

By

Job Alert
Koo

ಬೆಂಗಳೂರು: ಅಂಚೆ ಇಲಾಖೆಯಲ್ಲಿ (post office) ಕೆಲಸ ಮಾಡಬಯಸುವವರಿಗೆ (Job Alert) ಒಂದು ಸಿಹಿ ಸುದ್ದಿ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್ (Grameen Doc Sevak) ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು (Indian post department) ಅರ್ಜಿಯನ್ನು ಆಹ್ವಾನಿಸಿದೆ. ಯಾವುದೇ ಲಿಖಿತ ಪರೀಕ್ಷೆ, ಸಂದರ್ಶನ ನಿಯಮವಿಲ್ಲದೆ ಕೇವಲ ಎಸ್ ಎಸ್ ಎಲ್ ಸಿ ಯಲ್ಲಿ (SSLC) ಪಡೆದ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಭಾರತೀಯ ಅಂಚೆ ಇಲಾಖೆಯು ಕಳೆದ ವರ್ಷ ಜನವರಿಯಲ್ಲಿ ಸುಮಾರು 40,000 ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು. ಈ ವರ್ಷವೂ ಸಾವಿರಾರು ಹುದ್ದೆಗಳ ಅಧಿಸೂಚನೆ ಇನ್ನೂ ಬಿಡುಗಡೆಯಾಗಬೇಕಿದೆ. ಹೊಸ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಹುದ್ದೆ ವಿವರ

ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿದ್ದು, ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂಬಳ ಆರಂಭದಲ್ಲಿ 10,000 ರೂ.ಗಳಿಂದ 12,000 ರೂ.ಗಳವರೆಗೆ ಇರುತ್ತದೆ. ಬಡ್ತಿಗಳ ಮೂಲಕ ಉನ್ನತ ಸ್ಥಾನಗಳನ್ನ ತಲುಪಬಹುದು. ಭಾರತೀಯ ಅಂಚೆ ಪಾವತಿ ಬ್ಯಾಂಕ್ ಸೇವೆಗಳ ಮೂಲಕ ಪ್ರೋತ್ಸಾಹಕಗಳನ್ನ ಪಡೆಯಬಹುದು.

ಅರ್ಹತೆ ಏನು?

ಎಸ್ ಎಸ್ ಎಲ್ ಸಿ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18ರಿಂದ 40 ವರ್ಷದೊಳಗಿನವರಿಗಿರಬೇಕು. ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಆಯ್ಕೆ ಪ್ರಕ್ರಿಯೆ ಹೇಗೆ?

10ನೇ ತರಗತಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ತಮ್ಮ ಪ್ರದೇಶದ ಸುತ್ತಮುತ್ತಲಿನ ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುವ ಅವಕಾಶಕ್ಕೆ ಆಯ್ಕೆ ಮಾಡಬಹುದು. ಅರ್ಹತೆಯ ಆಧಾರದ ಮೇಲೆ ಹತ್ತಿರದ ಅಂಚೆ ಕಚೇರಿಗಳಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ 10ನೇ ತರಗತಿಯಲ್ಲಿ ಪಡೆದ ಅಂಕಗಳು ಮತ್ತು ಮೀಸಲಾತಿ ನಿಯಮದ ಆಧಾರದ ಮೇಲೆ ಹಂತ ಹಂತವಾಗಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ https://indiapostgdsonline.gov.in/ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಆಯ್ಕೆಯಾಗುವ ಅಭ್ಯರ್ಥಿಗಳ ವಿವರವನ್ನೂ ಈ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 18,799 ಹುದ್ದೆಗಳ ಭರ್ತಿಗೆ ರೈಲ್ವೆ ರಿಕ್ರೂಟ್‌ಮೆಂಟ್‌ ಬೋರ್ಡ್‌ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆ ಇದಾಗಿದ್ದು, ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಮೊದಲ ಹಂತದಲ್ಲಿ 5,696 ನೇಮಕಾತಿ ನಡೆಸಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 25.

VISTARANEWS.COM


on

Job Alert
Koo

ನವದೆಹಲಿ: ಉತ್ತಮ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 18,799 ಹುದ್ದೆಗಳ ಭರ್ತಿಗೆ ರೈಲ್ವೆ ರಿಕ್ರೂಟ್‌ಮೆಂಟ್‌ ಬೋರ್ಡ್‌ (Railway Recruitment Board) ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಲೋಕೋ ಪೈಲಟ್‌ (Assistant Loco Pilot) ಹುದ್ದೆ ಇದಾಗಿದ್ದು, ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು (RRB Recruitment 2024). ಮೊದಲ ಹಂತದಲ್ಲಿ 5,696 ನೇಮಕಾತಿ ನಡೆಸಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 25 (Job Alert).

ಹುದ್ದೆಗಳ ವಿವರ

ಅಹಮದಾಬಾದ್- 238, ಅಜ್ಮೀರ್- 228, ಬೆಂಗಳೂರು- 473, ಭೋಪಾಲ್- 284, ಭುವನೇಶ್ವರ- 280, ಬಿಲಾಸ್ಪುರ್- 1,316, ಚಂಡೀಗಢ- 66, ಚೆನ್ನೈ- 148, ಗೋರಖ್ಪುರ 43, ಗುವಾಹಟಿ- 62, ಜಮ್ಮು-ಶ್ರೀನಗರ- 39, ಕೊಲ್ಕತ್ತಾ- 345, ಮಾಲ್ಡಾ- 217, ಮುಂಬೈ- 547, ಮುಜಾಫರ್ಪುರ- 38, ಪಾಟ್ನಾ- 38, ಪ್ರಯಾಗ್ ರಾಜ್- 286, ರಾಂಚಿ- 153, ಸಿಕಂದರಾಬಾದ್- 758, ಸಿಲಿಗುರಿ- 67, ತಿರುವನಂತಪುರಂ- 70 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ

ಮೆಟ್ರಿಕ್ಯೂಲೇಷನ್‌ / ಎಸ್ಸೆಸ್ಸೆಲ್ಸಿ ಜತೆಗೆ ಐಟಿಐ ಶಿಕ್ಷಣವನ್ನು ಅಂಗೀಕೃತ ಸಂಸ್ಥೆಗಳಲ್ಲಿ ಪಡೆದವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವಿಭಾಗ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳ ಅರ್ಜಿ ಶುಲ್ಕ 250 ರೂ. ಇದನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ವಯೋಮಿತಿ

ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.

ಆಯ್ಕೆ ವಿಧಾನ

ಆಯ್ಕೆ ವಿಧಾನ 5 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT 1), ಎರಡನೇ ಹಂತದಲ್ಲಿ CBT 2, ಬಳಿಕ ಕಂಪ್ಯೂಟರ್ ಬೇಸ್ಟ್‌ ಆಪ್ಟಿಟ್ಯೂಡ್ ಟೆಸ್ಟ್‌ (CBAT), ನಂತರ ಡಾಕ್ಯುಮೆಂಟ್‌ ಪರಿಶೀಲನೆ (DV) ಮತ್ತು ಕೊನೆಯ ಹಂತದಲ್ಲಿ ವೈದ್ಯಕೀಯ ಪರೀಕ್ಷೆ (ME) ನಡೆಯಲಿದೆ. ಆಯ್ಕೆಯಾದವರಿಗೆ 19,900 ರೂ. – 63,200 ರೂ. ಮಾಸಿಕ ವೇತನವಿದೆ.

ಅಗತ್ಯವಾದ ಡಾಕ್ಯುಮೆಂಟ್‌

ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳು: ಇತ್ತೀಚಿನ, ಬಣ್ಣದ ಪಾಸ್‌ಪೋರ್ಟ್‌ ಫೋಟೊ. ಸಹಿ ಸ್ಕ್ಯಾನ್. ಇನ್ನು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಪಿಡಿಎಫ್ ರೂಪದಲ್ಲಿ ಎಸ್‌ಸಿ / ಎಸ್‌ಟಿ ಪ್ರಮಾಣ ಪತ್ರ ಅಪ್‌ಲೋಡ್‌ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (www.rrbapply.gov.in)
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊಗಳನ್ನು ನಿರ್ದಿಷ್ಟ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ತುಂಬಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Job Alert: ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಕರ್ನಾಟಕ

KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

KAS Exam: 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆಯಲು ಈಗಾಗಲೇ ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿತ್ತು. ಆದರೆ, ಇದೀಗ 2017-18 ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ಹೆಚ್ಚುವರಿ ವಿಶೇಷ ಅವಕಾಶ ನೀಡಲಾಗಿದೆ.

VISTARANEWS.COM


on

KAS Exam
Koo

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಕೆಪಿಎಸ್‌ಸಿ ಗುಡ್‌ ನ್ಯೂಸ್‌ (Job News) ನೀಡಿದೆ. 2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (KAS Exam) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದೆ. ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿದ್ದಾರೆ.

ಈ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24 ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದೆ.

ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿದೆ. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ | Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

Job Recruitment

ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited)​ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ವಿವರ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

Continue Reading

Latest

Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment ಕೆಲಸದ ಅಗತ್ಯ ಎಲ್ಲರಿಗೂ ಇರುತ್ತದೆ. ಜೀವನ ನಡೆಸುವುದಕ್ಕೆ ಕೈಯಲ್ಲಿ ಒಂದು ಉದ್ಯೋಗವಿಲ್ಲದಿದ್ದರೆ ಅವರ ಸಂಸಾರವೇ ಕಷ್ಟದ ಸುರಿಮಳೆಗೆ ಸಿಗಬೇಕಾಗುತ್ತದೆ. ಇನ್ನು ಕಷ್ಟಪಟ್ಟು ಓದಿರುತ್ತೇವೆ. ಅದಕ್ಕೆ ಸೂಕ್ತವಾದ ಕೆಲಸ ಸಿಕ್ಕಿರುವುದಿಲ್ಲ. ಕನಸುಕಂಗಳಿಂದ ಉದ್ಯೋಗ ಹುಡುಕುತ್ತಿರುವವರಿಗೆ ಹೆಚ್ಎಎಲ್ ಬಂಪರ್ ಆಫರ್ ನೀಡಿದೆ. ತಡಮಾಡಬೇಡಿ, ನಾಳೆಯೇ ಸಂದರ್ಶನವಿದೆ.

VISTARANEWS.COM


on

Job Recruitment
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಬೆಂಗಳೂರು ವರದಾನ ಎನ್ನಬಹುದು. ಇಲ್ಲಿ ಹೇಗೆ ಆದರೂ ಒಂದು ಕೆಲಸ ಗಿಟ್ಟಿಸಿಕೊಳ್ಳಬಹುದು ಎಂಬ ಆಸೆ ಕಣ್ಣಿನಿಂದ ರಾಜ್ಯದ ಎಲ್ಲ ಭಾಗಗಳ ಜನ ಧಾವಿಸಿ ಬರುತ್ತಾರೆ. ಇದೀಗ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬಂಪರ್ ಆಫರ್ ನೀಡಿದೆ.

ಎಚ್‌ಎಎಲ್‌ನಲ್ಲಿ ಅನೇಕ ಹುದ್ದೆಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಅದನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 22, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಶೈಕ್ಷಣಿಕ ಅರ್ಹತೆ ಏನು?

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದ ತರಬೇತಿ ಹಂತದಲ್ಲಿ ತಿಂಗಳಿಗೆ 7000-7700 ರೂ. ವೇತನ ನೀಡಲಾಗುತ್ತದೆ. ಜತೆಗೆ ಇತರ ಭತ್ಯೆ ಇರುತ್ತದೆ.
ಉದ್ಯೋಗ ಸ್ಥಳ

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಉದ್ಯೋಗ ಮಾಡಬೇಕಾಗುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಇದು ಅನುಕೂಲವಾಗಲಿದೆ.

ಇದನ್ನೂ ಓದಿ: Murder Case: ಹುಡುಗಿ ಜೊತೆ ಕುಳಿತವನ ಮೇಲೆ ಗುಂಡಿನ ಸುರಿಮಳೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆಯ್ಕೆ ಪ್ರಕ್ರಿಯೆ ಹೇಗೆ?

ಪ್ರತಿಯೊಂದು ಹುದ್ದೆಗೂ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕ: ತಾಂತ್ರಿಕ ತರಬೇತಿ ಸಂಸ್ಥೆ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್), ಸುರಂಜನದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ), ಬೆಂಗಳೂರು-560017
ದಿನಾಂಕ ಜೂನ್ 22, 2024ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

Continue Reading
Advertisement
Empty Stomach Foods
ಆರೋಗ್ಯ34 mins ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ2 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ2 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ3 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

NEET UG
ಪ್ರಮುಖ ಸುದ್ದಿ7 hours ago

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

T20 world cup 2024
ಪ್ರಮುಖ ಸುದ್ದಿ8 hours ago

T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತಕ್ಕೆಭರ್ಜರಿ 50 ರನ್​ಗಳ ಭರ್ಜರಿ ಗೆಲುವು

Mangalya chain was stolen by pretending to be a police in Shira
ಕರ್ನಾಟಕ8 hours ago

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Union Minister Pralhad Joshi statement
ಕರ್ನಾಟಕ8 hours ago

Pralhad Joshi: ಕೇವಲ ಶೇ.0.1 ಮತ ಗಳಿಕೆ ಹೆಚ್ವಿದ್ದಕ್ಕೇ ಕಾಂಗ್ರೆಸ್ ಗೆದ್ದ ಭ್ರಮೆಯಲ್ಲಿದೆ; ಪ್ರಲ್ಹಾದ್ ಜೋಶಿ ಗೇಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌