KS Eshwarappa | ಗುತ್ತಿಗೆದಾರನ ಸಾವಿನ ಪ್ರಕರಣಕ್ಕೆ ಮರುಜೀವ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ? - Vistara News

ಉಡುಪಿ

KS Eshwarappa | ಗುತ್ತಿಗೆದಾರನ ಸಾವಿನ ಪ್ರಕರಣಕ್ಕೆ ಮರುಜೀವ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂಬಂಧಿಸಿ ಸಲ್ಲಿಸಲಾದ ಬಿ-ರಿಪೋರ್ಟ್‌ನ ಮರುಪರಿಶೀಲನೆಗೆ ಕೋರ್ಟ್‌ ಆದೇಶಿಸಿರುವುದು ಈಶ್ವರಪ್ಪ (KS Eshwarappa) ಅವರಿಗೆ ಹಿನ್ನಡೆ ಆದಂತಾಗಿದೆ.

VISTARANEWS.COM


on

eshwarappa santosh suicide case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಬಿ-ರಿಪೋರ್ಟ್‌ನ್ನು ಮರುಪರಿಶೀಲನೆ ನಡೆಸುವಂತೆ ಜನಪ್ರತಿನಿಧಿ ನ್ಯಾಯಾಲಯ ಆದೇಶ ನೀಡುವುದರೊಂದಿಗೆ ಈ ಪ್ರಕರಣ ಮರು ಜೀವ ಪಡೆದುಕೊಂಡಿದೆ. ಇದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಅವರಿಗೆ ಸಂಕಷ್ಟ ತರುವ ಸಾಧ್ಯತೆ ಕಂಡುಬಂದಿದೆ.

ಗುತ್ತಿಗೆದಾರರಾಗಿದ್ದ ಸಂತೋಷ್‌ ಪಾಟೀಲ್‌ ಅವರು ಕೆ.ಎಸ್‌. ಈಶ್ವರಪ್ಪ ಅವರ ಹೆಸರು ಬರೆದಿಟ್ಟು ಉಡುಪಿಯ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ರಸ್ತೆ ಕಾಮಗಾರಿ ನಡೆಸಿದ್ದರ ಬಿಲ್‌ ಪಾವತಿ ಮಾಡಿಲ್ಲ, ಬಿಲ್‌ ಪಾವತಿಗೆ ಕಮಿಷನ್‌ ಕೊಡಬೇಕು ಎಂದು ಸಚಿವ ಆಪ್ತರು ಒತ್ತಾಯಿಸಿದರು. ಹಣ ಕೊಡಲಾಗದೆ, ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂತೋಷ್‌ ಪಾಟೀಲ್‌ ವಾಟ್ಸ್‌ ಆಪ್‌ ಮೂಲಕ ಗೆಳೆಯರಿಗೆ ಸಂದೇಶ ರವಾನಿಸಿದ್ದರು. ಇದನ್ನೇ ಆತ್ಮಹತ್ಯಾ ಟಿಪ್ಪಣಿ ಎಂದು ಪರಿಗಣಿಸಿ ಪೊಲೀಸರು ತನಿಖೆ ನಡೆಸಿದ್ದರು.

ಮೊದಲು ಸಚಿವ ಕೆ.ಎಸ್‌. ಈಶ್ವರಪ್ಪ ಅವರ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿದ್ದರಿಂದ ಅವರು ತಮ್ಮ ಸಚಿವ ಹುದ್ದೆಗೆ ರಾಜೀನಾಮೆ ಕೂಡಾ ನೀಡಿದ್ದರು. ಆದರೆ, ಕೆಲವೇ ತಿಂಗಳಲ್ಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಬಿ-ರಿಪೋರ್ಟ್‌ ಸಲ್ಲಿಸಿದ್ದರು. ಆಗ ಕೆ.ಎಸ್‌. ಈಶ್ವರಪ್ಪ ಅವರು ಸಂಭ್ರಮಾಚರಣೆ ಮಾಡಿದ್ದರು ಮತ್ತು ಆ ಬಳಿಕ ಕ್ಲೀನ್‌ ಚಿಟ್‌ ಸಿಕ್ಕಿರುವ ಪ್ರಯುಕ್ತ ತಮ್ಮನ್ನು ಸಚಿವ ಸಂಪುಟಕ್ಕೆ ಮರಳಿ ತೆಗೆದುಕೊಳ್ಳಬೇಕು ಎಂದು ದೊಡ್ಡ ಹೋರಾಟವನ್ನೇ ನಡೆಸಿದರು. ವಿಧಾನಸಭಾ ಅಧಿವೇಶನಕ್ಕೂ ಬಾರದೆ ಅಸಹಕಾರವನ್ನು ತೋರಿದ್ದರು.

ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದ ವೇಳೆ ಇದೇ ಕಾರಣಕ್ಕಾಗಿ ತಾನು ಸದನಕ್ಕೆ ಬರುತ್ತಿಲ್ಲ ಎಂದು ಸ್ಪಷ್ಟವಾಗಿ ಘೋಷಿಸಿ ಸರಕಾರದ ಮೇಲೆ ಒತ್ತಡ ಹೇರಿದ್ದರು. ಆಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರನ್ನು ಕರೆಸಿಕೊಂಡು ಮಂತ್ರಿ ಮಾಡುವ ಭರವಸೆಯನ್ನು ನೀಡಿದ್ದರು.

ಈ ನಡುವೆ ಪ್ರಕರಣ ಮತ್ತೆ ಎದ್ದು ನಿಂತಿದೆ. ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಪತ್ನಿ ಕೋರ್ಟ್‌ ಮೊರೆ ಹೊಕ್ಕಿದ್ದರು. ಈಗ ಕೋರ್ಟ್‌ ವರದಿಯನ್ನು ಮತ್ತೆ ಮರು ಪರಿಶೀಲನೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಜತೆಗೆ ಪೊಲೀಸ್ ತನಿಖೆ ವೇಳೆ ಮಾಡಿದ ವಿಡಿಯೋ ಕೋರ್ಟ್ ಗೆ ಸಲ್ಲಿಸುವಂತೆ ಸೂಚನೆ ನೀಡಿದೆ. ಈ ವಿದ್ಯಮಾನ ಮಂತ್ರಿಯಾಗಲು ತುದಿಗಾಲಿನಲ್ಲಿ ನಿಂತಿದ್ದ ಈಶ್ವರಪ್ಪ ಅವರಿಗೆ ಶಾಕ್‌ ನೀಡಿದೆ.

ಯಾರಿಗೆಲ್ಲ ಕಮಿಷನ್‌: ವಾಟ್ಸ್‌ ಆಪ್‌ ಸಂದೇಶ!
ಈ ನಡುವೆ ಕಾಮಗಾರಿಯ ಬಿಲ್‌ ಪಾವತಿಗೆ ಸಂಬಂಧಿಸಿ ಸಂತೋಷ್‌ ಪಾಟೀಲ್‌ ಅವರು ಯಾರಿಗೆಲ್ಲ ಕಮಿಷನ್‌ ನೀಡಿದ್ದರು ಎಂಬ ಬಗ್ಗೆ ಅವರು ವಾಟ್ಸ್‌ ಆಪ್‌ನಲ್ಲಿ ಕಳುಹಿಸಿದ್ದ ಸಂದೇಶವೂ ಭಾರಿ ಚರ್ಚೆಗೆ ಕಾರಣವಾಗಿದೆ.

ಸಿವಿಲ್ ವರ್ಕ್ ಮಾಡಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನೋಲ್ಕರ್ ಜೊತೆ ನಡೆಸಿದ ಚಾಟ್‌ನಲ್ಲಿ ಈ ಉಲ್ಲೇಖಗಳನ್ನು ಮಾಡಲಾಗಿದೆ. ಪೊಲೀಸರು ಕೋರ್ಟ್‌ಗೆ ಕೊಟ್ಟ ಬಿ ರಿಪೋರ್ಟ್‌ನಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಜೊತೆಗಿನ ಚಾಟ್ ಉಲ್ಲೇಖವಿದೆ ಎನ್ನಲಾಗಿದೆ.

ಸಚಿವ ಈಶ್ವರಪ್ಪ ಅವರ ಪಿಎಗೆ 25 ಸಾವಿರ, ಬಿಲ್‌ ಕಮಿಷನ್‌ ಅಂತ 4.15 ಲಕ್ಷ ರೂ ಕೊಟ್ಟಿರುವುದಾಗಿ ಚಾಟ್‌ನಲ್ಲಿ ಹೇಳಲಾಗಿದೆ. ಮಹಾಂತೇಶ ಶಾಸ್ತ್ರೀ ಎಂಬುವವರು ಈ ಚಾಟ್‌ ಬಗ್ಗೆ ವಿವರ ನೀಡಿದ್ದನ್ನು ಬಿ ರಿಪೋರ್ಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಮಂತ್ರಿ ಸ್ಥಾನ ತಪ್ಪಿಸಲು ಇದೆಲ್ಲ ಪ್ರಯತ್ನ ಎಂದ ಈಶ್ವರಪ್ಪ
ಜನಪ್ರತಿನಿಧಿ ನ್ಯಾಯಾಲಯದಲ್ಲಿ ಸಾಕ್ಷ್ಯಧಾರ ಕೇಳಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಈಶ್ವರಪ್ಪ ಅವರು, ಯಾರೋ ಏನೋ 25 ಸಾವಿರ ಕೊಟ್ಟೆ, ಇವರಿಗೆ ಕೊಟ್ಟೆ ಅನ್ನೋದಕ್ಕೆ ನಾನು ಪ್ರತಿಕ್ರಿಯಿಸಲ್ಲ. ತನಿಖೆ ವೇಳೆ ಏನೇನು ಕೊಡಬೇಕಾಗಿತ್ತೋ ಅವೆಲ್ಲಾ ಕೊಡಬಹುದಿತ್ತು ಎಂದಿದ್ದಾರೆ.

ʻʻಇದರಲ್ಲೂ ರಾಜಕಾರಣ ಮಾಡಲಾಗುತ್ತಿದೆ. ಯಾರೋ ಈ ಬಗ್ಗೆ ಪ್ರೇರಣೆ ಕೊಡ್ತಿದ್ದಾರೆ. ಈ ರೀತಿ ಮಾಡಿದರೆ, ಬಿಜೆಪಿ, ಈಶ್ವರಪ್ಪಗೆ ಕೆಟ್ಟ ಹೆಸರು ಬರುತ್ತೆ ಅಂಥ ಯಾರೋ ಈ ರೀತಿ ಆಟವಾಡಿಸುತ್ತಿದ್ದಾರೆ. ಇಂತಹ ಆಟಗಳಿಗೆ ನಾನೆಂದೂ ಬಗ್ಗಲ್ಲ. ಕ್ಲೀನ್ ಚಿಟ್ ಕೊಟ್ಟಾಗಿದೆʼʼ ಎಂದು ಹೇಳಿದ್ದಾರೆ. ಮಂತ್ರಿ ಸ್ಥಾನ ಸಿಗುವುದನ್ನು ತಪ್ಪಿಸಲು ಇದೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Self Harming: ಉಡುಪಿ ಜಿಲ್ಲೆಯ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Self Harming
Koo

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್ ಬರೆದು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

theft case

ತುಮಕೂರು: ಕಳ್ಳತನವೂ ಈಗ ಪ್ರೊಫೆಷನಲ್‌ ಆಗಿಬಿಟ್ಟಿದೆ. ಭೂಪನೊಬ್ಬ ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋಕೆ ಅಂತಲೇ ತಿಂಗಳ ಸಂಬಳಕ್ಕೆ ಕಳ್ಳನನ್ನು (Theft Case) ನೇಮಿಸಿಕೊಂಡಿರುವ ಅಪರೂಪದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಬೆಂಗಳೂರು ಮೂಲದ ರಾಘವೇಂದ್ರ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ಕೊರಟಗೆರೆ ತಾಲೂಕಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳ ಕಳುವಿನಿಂದ ರೈತರು ಹೈರಾಣಾಗಿದ್ದರು. ಕೊರಟಗೆರೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಕಳ್ಳರು ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಬಳಿ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Theft Case The thief was paid a salary for theft

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದರು. ಕೊರಟಗೆರೆ ಪೊಲೀಸರು ಖತರ್ನಾಕ್ ಕಳ್ಳನ ಸಹಿತ ಮೂವರ ಹೆಡೆಮುರಿ ಕಟ್ಟಿದ್ದಾರೆ. ಐನಾತಿ ಕಳ್ಳರು ಕದ್ದ ಮಾಲನ್ನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರು.

ಸದ್ಯ ಮೂವರು ಆರೋಪಿಗಳಾದ ವೆಂಕಟೇಶ್, ರಾಘವೇಂದ್ರ ಹಾಗೂ ವಿನೇಶ್‌ನನ್ನು ಕೊರಟಗೆರೆ ಪೊಲೀಸರು ಬೆಂಗಳೂರಿನ ಕಾಮಾಕ್ಷಿಪಾಳ್ಳದಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್‌ ಅನಿಲ್‌ ಹಾಗೂ ತಂಡ ಕಳ್ಳರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕಳ್ಳರ ಬಂಧನದಿಂದ ಕೊರಟಗೆರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Coastal Weather: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

VISTARANEWS.COM


on

Karnataka weather Forecast
Koo

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ (Coastal Weather) ನಿರೀಕ್ಷೆಯಿದೆ.

ಹಲವೆಡೆ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಮಂಗಳೂರಿನಲ್ಲಿ ಭಾನುವಾರ 32.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು. 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಭಾನುವಾರ ಬೆಳಗಿನಜಾವದವರೆಗೂ ನಿರಂತರ ಮಳೆ ಸುರಿದಿದೆ. ಇನ್ನು ಉಡುಪಿ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಕಾಪು, ಶಿರ್ವ, ಪಡುಬಿದ್ರಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಹಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಉತ್ತಮ ಮಳೆ

ಕೊಡಗಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 23ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ISIS Terrorists
ದೇಶ2 mins ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Shocking News
ವಿದೇಶ9 mins ago

Shocking News: ಎಚ್‌ಐವಿ ಪಾಸಿಟಿವ್‌ ವಿಚಾರ ಮುಚ್ಚಿಟ್ಟ ಲೈಂಗಿಕ ಕಾರ್ಯಕರ್ತೆ; 211 ಮಂದಿಗೆ ಎದುರಾಯ್ತು ಸಂಕಷ್ಟ

Darshan And Vijayalakshmi Celebrate Wedding Anniversary In Dubai pavitra gowda posted karma status
ಸ್ಯಾಂಡಲ್ ವುಡ್9 mins ago

Actor Darshan: ದುಬೈನಲ್ಲಿ ʻಡಿ ಬಾಸ್‌ʼ ವೆಡ್ದಿಂಗ್‌ ಆ್ಯನಿವರ್ಸರಿ ಸೆಲೆಬ್ರೇಷನ್‌: ಇತ್ತ ಪವಿತ್ರಾ ಗೌಡ ಕರ್ಮದ ಬಗ್ಗೆ ಪಾಠ!

KKR vs SRH:
ಕ್ರೀಡೆ24 mins ago

KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

board exam public exam
ಪ್ರಮುಖ ಸುದ್ದಿ42 mins ago

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Kangana Ranaut
ದೇಶ59 mins ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Job Alert
ಉದ್ಯೋಗ1 hour ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ1 hour ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Health Benefits Of Tofu
ಆರೋಗ್ಯ1 hour ago

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

2nd PUC Exam 2 Result tomorrow
ಶಿಕ್ಷಣ2 hours ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌