ಕನ್ನಡ ಸಾಹಿತ್ಯ ಸಮ್ಮೇಳನ | ಸ್ಥಳೀಯ ಭಾಷೆಗೆ ಒತ್ತಾಸೆ ನೀಡಿದ ಅಮಿತ್‌ ಶಾ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ - Vistara News

ಕ ಸಾ ಪ

ಕನ್ನಡ ಸಾಹಿತ್ಯ ಸಮ್ಮೇಳನ | ಸ್ಥಳೀಯ ಭಾಷೆಗೆ ಒತ್ತಾಸೆ ನೀಡಿದ ಅಮಿತ್‌ ಶಾ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿದರು.

VISTARANEWS.COM


on

pralhad joshi explained amit shah love for regional language
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಸ್ಥಳೀಯ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಕುರಿತು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಆಸ್ಥೆ ವ್ಯಕ್ತಪಡಿಸಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಉತ್ತರ ಕರ್ನಾಟಕದ ಹೆಬ್ಬಾಗಿಲು ಉದಯವಾಗಿ 25 ವರ್ಷವಾದ ಸಂದರ್ಭದಲ್ಲಿ ಸಮ್ಮೇಳನ ನಡೆಯುತ್ತಿರುವುದು ಅತ್ಯಂತ ಸಂತಸದ ಸಂಗತಿ. ಹಾವೇರಿಗೆ ಭವ್ಯವಾದ ಇತಿಹಾಸವಿದೆ. ಕುಲದ ಮೂಲವನ್ನೇನಾದರೂ ಬಲ್ಲಿರಾ ಎಂದ ಕನಕರು, ಜೀವನದ ತತ್ವದ ಮೂಲಕ ಸಮಾಜದ ಸುಧಾರಣೆಗೆ ಪ್ರಯತ್ನಿಸಿದ ಶರೀಫರು, ಅಂಬಿಗರ ಚೌಡಯ್ಯ, ಹೆಳವನಕಟ್ಟೆ ಗಿರಿಯಮ್ಮನಂತಹವರ ಪುಣ್ಯಭೂಮಿ.

ಈ ನೆಲದಲ್ಲಿ ಕನ್ನಡದ ಜಾತ್ರೆ ನಡೆಯುತ್ತಿದೆ. ಮೂರೂ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರು ನೆರೆದಿರುವುದು, ಕನ್ನಡದ ಅಭಿಮಾನ ನಿಜವಾಗಿ ಇರುವುದು ಹಳ್ಳಿಗಳಲ್ಲಿ ಎನ್ನುವುದು ಅರ್ಥವಾಗುತ್ತದೆ. ಎರಡು ಸಾವಿರ ವರ್ಷದ ಇತಿಹಾಸ ಹೊಂದಿರುವ ಕನ್ನಡವನ್ನು ಮರೆತು ವಿದೇಶಿ ವ್ಯಾಮೋಹದಲ್ಲಿ ದೇಶ ನಡೆದಿದೆ. ನೌಕಾದಳದ ಲಾಂಛನ ಮೊನ್ನೆಮೊನ್ನೆವರೆಗೆ ವಸಾಹತುಶಾಹಿ ಮಾನಸಿಕತೆಯಲ್ಲೇ ಇದೆ. ಮೆಕಾಲೆ ಶಿಕ್ಷಣ ಪದ್ಧತಿಯಲ್ಲಿ ನಮ್ಮ ನಡೆ, ನುಡಿಯನ್ನು ಹತ್ತಿಕ್ಕುವ ಪ್ರಯತ್ನ ಈಗಲೂ ಮುಂದುವರಿದಿರುವುದು ಸರಿಯಲ್ಲ.

ಸ್ಥಳೀಯ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಕುರಿತು ಕೇಂದ್ರ ಸರ್ಕಾರದಲ್ಲಿ ನಡೆದ ಚರ್ಚೆಯನ್ನು ಪ್ರಲ್ಹಾದ ಜೋಶಿ ಉಲ್ಲೇಖಿಸಿದರು. ಸ್ಥಳೀಯ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣದ ಕುರಿತು ಚರ್ಚೆ ನಡೆಯುತ್ತಿತ್ತು. ಅಲ್ಲಿರುವ ಕೆಲ ಅಧಿಕಾರಿಗಳು, ಸಂಶೋಧನೆ ಮತ್ತು ಅಭಿವೃದ್ಧಿ ಗತಿ ಏನಾಗಬಹುದು? ಎಂದು ಕೆಲ ಅಧಿಕಾರಿಗಳು ಹೇಳಿದರು. ಗೃಹಸಚಿವರು ಹೇಳಿದರು, ದಕ್ಷಿಣ ಕೊರಿಯಾದಿಂದ ನಮ್ಮ ದೇಶಕ್ಕೆ ಟಿವಿ, ಎಲ್‌ಇಡಿ ಪರದೆಗಳು ಬರುತ್ತವೆ. ಅಲ್ಲಿ ಇಂಗ್ಲಿಷ್‌ ಇಲ್ಲ, ಅಲ್ಲಿ ಹೇಗೆ ಸಂಶೋಧನೆ ಆಗುತ್ತದೆ? ಎಂದು ಮರುಪ್ರಶ್ನಿಸಿದರು. ರಷ್ಯಾದಲ್ಲಿ ಇಂಗ್ಲಿಷ್‌ ಇಲ್ಲ. ಆದರೆ ಕರ್ನಾಟಕದಲ್ಲಿ ಇಂಗ್ಲಿಷ್‌ ವ್ಯಾಮೋಹ ಹೆಚ್ಚಾಗಿದೆ. ಪಾಲಕರು ಕನ್ನಡ ಶಾಲೆಗೆ ಕಳಿಸಲು ಸಿದ್ಧರಾಗಿಲ್ಲ.

ಅಮ್ಮನಿಗೆ ಮಮ್ಮಿ ಎನ್ನುತ್ತೇವೆ, ತಾಯಿಯ ಅಕ್ಕನಿಗೆ ಆಂಟಿ ಎನ್ನುತ್ತಾರೆ. ಇಂತಹ ವಿಚಿತ್ರವಾದ ಸನ್ನಿವೇಶದಲ್ಲಿದ್ದೇವೆ. ಕನ್ನಡದ ಬಗ್ಗೆ ಅಭಿಮಾನ ಇಟ್ಟುಕೊಳ್ಳಬೇಕು. ಬೇರೆ ಭಾಷೆ ಕಲಿಯುವುದರ ಬಗ್ಗೆ ವಿರೋಧ ಇಲ್ಲ. ಕನ್ನಡದ ಶಾಲೆಯಿಂದ ಬಂದವರು ಎಂಬ ಅಭಿಮಾನ ನನಗಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಸ್ಥಳೀಯ ಭಾಷೆಗೆ ಪ್ರಾಮುಖ್ಯತೆ ನೀಡಿದ್ದೇವೆ ಎಂದರು.

ಇದನ್ನೂ ಓದಿ | ಕನ್ನಡ ಸಾಹಿತ್ಯ ಸಮ್ಮೇಳನ | ಸಾಹಿತಿಗಳು ರಾಜಕೀಯ ಮಾಡಬೇಡಿ: ಮುಸ್ಲಿಂ ಪ್ರಾತಿನಿಧ್ಯದ ಕುರಿತು ಕಸಾಪಕ್ಕೆ ಬಿ.ಕೆ. ಹರಿಪ್ರಸಾದ್‌ ಬುದ್ಧಿಮಾತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
dimond smuggling
ದೇಶ9 mins ago

Dimond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Tongue Reveals Health
ಆರೋಗ್ಯ9 mins ago

Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

HD Devegowda
ಕರ್ನಾಟಕ15 mins ago

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು ಎಂದು ಕಣ್ಣೀರು ಹಾಕಿದ ದೇವೇಗೌಡರು

Lok Sabha Election 2024 Only a guaranteed wave in Karnataka says Cm Siddaramaiah
ಕರ್ನಾಟಕ22 mins ago

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Virat kohli
ಪ್ರಮುಖ ಸುದ್ದಿ36 mins ago

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Job Alert
ಉದ್ಯೋಗ38 mins ago

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Murder case In Bengaluur
ಬೆಂಗಳೂರು39 mins ago

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Summer Hairstyles
ಫ್ಯಾಷನ್39 mins ago

Summer Hairstyles: ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

hardik pandya
ಕ್ರೀಡೆ39 mins ago

IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

Yuzvendra Chahal
ಪ್ರಮುಖ ಸುದ್ದಿ1 hour ago

Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌