Tamil Nadu | ರಾಜ್ಯಪಾಲರ ಪೊಂಗಲ್ ಆಮಂತ್ರಣ ಪತ್ರಿಕೆಯಲ್ಲಿ 'ತಮಿಳುನಾಡು ಸರ್ಕಾರ' ಮಾಯ! - Vistara News

ದೇಶ

Tamil Nadu | ರಾಜ್ಯಪಾಲರ ಪೊಂಗಲ್ ಆಮಂತ್ರಣ ಪತ್ರಿಕೆಯಲ್ಲಿ ‘ತಮಿಳುನಾಡು ಸರ್ಕಾರ’ ಮಾಯ!

ಇತ್ತೀಚೆಗಷ್ಟೇ ತಮಿಳುನಾಡಿಗಿಂತ ತಮಿಳಗಂ ಸೂಕ್ತ ಎಂದಿದ್ದ ರಾಜ್ಯಪಾಲ ಆರ್ ಎನ್ ರವಿ ಅವರ ಪೊಂಗಲ್ ಆಮಂತ್ರಣ ಪತ್ರಿಕೆಯಲ್ಲಿ ತಮಿಳುನಾಡು ಸರ್ಕಾರ ಎಂಬ ಪದವೇ ಮಾಯ(Tamil Nadu)!

VISTARANEWS.COM


on

R N Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಇತ್ತೀಚೆಗಷ್ಟೇ ತಮಿಳುನಾಡಿಗೆ ತಮಿಳುನಾಡು ಎನ್ನುವುದಕ್ಕಿಂತ ತಮಿಳಗಂ ಎಂಬ ಹೆಸರು ಹೆಚ್ಚು ಸೂಕ್ತ ಎಂದು ಹೇಳಿ ವಿವಾದದ ಕಿಚ್ಚು ಹೊತ್ತಿಸಿದ್ದ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಈಗ ಮತ್ತೆ ಅಂಥದ್ದೇ ನಡೆಯನ್ನು ಅನುಸರಿಸಿದ್ದಾರೆ. ರಾಜಭವನದಲ್ಲಿ ನಡೆಯಲಿರುವ ಪೊಂಗಲ್ ಹಬ್ಬದ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲೂ ‘ತಮಿಳುನಾಡು ಸರ್ಕಾರ’ ಬದಲಿಗೆ ‘ತಮಿಳಗ ಆಳುನಾರ್’ ಎಂದು ಪ್ರಕಟಿಸಲಾಗಿದ್ದು, ಮತ್ತೆ ವಿವಾದಕ್ಕೆ ಕಾರಣವಾಗಿದೆ(Tamil Nadu).

ಇಷ್ಟು ಮಾತ್ರವಲ್ಲದೇ, ಆಮಂತ್ರಣ ಪತ್ರಿಕೆಯಲ್ಲಿ ತಮಿಳುನಾಡು ರಾಜ್ಯ ಸರ್ಕಾರದ ಲಾಂಛನವನ್ನು ಮುದ್ರಿಸಿಲ್ಲ. ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರವೇ ಮುದ್ರಿಸಲಾಗಿದೆ. ಆಮಂತ್ರಣ ಪತ್ರಿಕೆಯು ತಮಿಳು ಭಾಷೆಯಲ್ಲಿಯಲ್ಲಿದೆ.

ತಮಿಳಗಂ ಹೆಸರು ಸೂಕ್ತ ಎಂಬ ಹೇಳಿಕೆಯನ್ನು ವಿರೋಧಿಸಿ ಸೋಮವಾರ ನಡೆದ ವಿಧಾನಮಂಡಳ ಅಧಿವೇಶನದ ವೇಳೆ ಡಿಎಂಕೆ, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ರಾಜ್ಯಪಾಲರ ಭಾಷಣವನ್ನು ವಿರೋಧಿಸಿದ್ದವು. ಇಷ್ಟಾಗಿಯೂ, ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದ ಕೆಲವು ಭಾಗಗಳನ್ನು ಕೈಬಿಟ್ಟು, ಅವರು ತಮ್ಮದೇ ಆದ ಭಾಷಣ ಓದಿದ್ದರು. ಇದರಿಂದಾಗಿ ಸಿಎಂ ಸ್ಟಾಲಿನ್ ಅವರು, ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರವೇ ಪರಿಗಣಿಸಬೇಕೆಂಬ ನಿರ್ಣಯಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತ್ತು. ಆಗ, ಸಭೆ ಮಧ್ಯದಲ್ಲೇ ರಾಜ್ಯಪಾಲ ಆರ್ ಎನ್ ರವಿ ಹೊರ ನಡೆದಿದ್ದರು.

ತಮಿಳುನಾಡು, ತೆಲಂಗಾಣ ಮತ್ತು ಕೇರಳ ರಾಜ್ಯಪಾಲರು ಮತ್ತು ಅಲ್ಲಿನ ಚುನಾಯಿತ ಸರ್ಕಾರಗಳ ನಡುವೆ ದಿನದಿಂದ ದಿನಕ್ಕೆ ಸಂಘರ್ಷ ಹೆಚ್ಚುತ್ತಲೇ ಇದೆ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ರಾಜಭವನ ಹಾಗೂ ಸಿಎಂ ಆಫೀಸ್ ಮಧ್ಯೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ತಲೆದೋರುತ್ತಿವೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿವೆ.

ಇದನ್ನೂ ಓದಿ | Thamizhagam | ತಮಿಳುನಾಡಿಗಿಂತ ತಮಿಳಗಂ ಹೆಚ್ಚು ಸೂಕ್ತ ಎಂದ ರಾಜ್ಯಪಾಲರ ವಿರುದ್ಧ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Modi Roadshow Live: ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ಇದಕ್ಕೂ ಮೊದಲು ಅವರು ಸೋಮವಾರವೇ ಮೋದಿ ಅವರು ವಾರಾಣಸಿಯಲ್ಲಿ ರೋಡ್‌ ಶೋ ಮೂಲಕ ಅಲೆ ಸೃಷ್ಟಿಸಿದ್ದಾರೆ.

VISTARANEWS.COM


on

Modi Roadshow Live
Koo

ವಾರಾಣಸಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯ ಗತಾಯ ಹ್ಯಾಟ್ರಿಕ್‌ ಸಾಧಿಸುವ ಉತ್ಸಾಹದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ (Modi Roadshow Live) ಕೈಗೊಂಡಿದ್ದಾರೆ. ಬನಾರಸ್‌ ಹಿಂದು ವಿಶ್ವವಿದ್ಯಾಲಯದ ಗೇಟ್‌ನಿಂದ ರೋಡ್‌ ಶೋ ಆರಂಭವಾಗದ್ದು, ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ 4ರಲ್ಲಿ ರೋಡ್‌ ಶೋ ಮುಕ್ತಾಯಗೊಳ್ಳಲಿದೆ. ಮೋದಿ ಅವರನ್ನು ಕಣ್ತುಂಬಿಕೊಳ್ಳಲು ರಸ್ತೆಯುದ್ದಕ್ಕೂ ಸಾವಿರಾರು ಜನ ನೆರೆದಿದ್ದಾರೆ. ಮೋದಿ ಅವರಿಗೆ ಸಿಎಂ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರದ ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರು ರೋಡ್‌ಶೋನ ಭಾಗವಾಗಿದ್ದಾರೆ. ಮಹಿಳೆಯರ ಸಾಂಸ್ಕೃತಿಕ ನೃತ್ಯ, ಜೈ ಶ್ರೀರಾಮ್‌ ಎಂಬ ಘೋಷಣೆಗಳು ಸಾಮಾನ್ಯ ಎಂಬಂತಾಗಿದೆ. ನರೇಂದ್ರ ಮೋದಿ ಪರವೂ ಜನ ಘೋಷಣೆಗಳನ್ನು ಮೊಳಗಿಸಿದ್ದಾರೆ. ರೋಡ್‌ ಶೋ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪುಗಳು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಿವೆ. ಸುಮಾರು ಐದು ಕಿಲೋಮೀಟರ್ ಉದ್ದದ ರೋಡ್ ಶೋ ಮಿನಿ ಇಂಡಿಯಾ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಗಳ ಒಂದು ನೋಟವನ್ನು ನೀಡಿದೆ.

ಮಂಗಳವಾರ (ಮೇ 14) ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

Continue Reading

ದೇಶ

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Viral Video:ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು.

VISTARANEWS.COM


on

Viral Video
Koo

ನವದೆಹಲಿ: ರಾಷ್ಟ್ರೀಯ ಜನತಾ ದಳ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ಪುತ್ರ ತೇಜ್‌ ಪ್ರತಾಪ್‌ ಯಾದವ್‌(Tej Pratap Yadav) ಮತ್ತೆ ವಿವಾದಕ್ಕೀಡಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ(Lok Sabha Election 2024)ಪಾಟಲೀಪುರದಿಂದ ಕಣಕ್ಕಿಳಿಸಿರುವ ಸಹೋದರಿ ಮೀಸಾ ಭಾರತಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ತೇಜ್‌ ಪ್ರತಾಪ್‌ ಯಾದವ್‌ ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳುವ ಮೂಲಕ ದರ್ಪ ಮೆರೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಏನಿದೆ?

ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ತೇಜ್‌ ಪ್ರತಾಪ್‌ ವರ್ತನೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಪ್ರೀತಿ ಗಾಂಧಿ, ತೇಜ್‌ ಪ್ರತಾಪ್‌ ಯಾವುದಕ್ಕೂ ಅರ್ಹನಲ್ಲ. ಸ್ವಪಕ್ಷ ಕಾರ್ಯಕರ್ತನ ಮೇಲೆಯೇ ಬಹಳ ಕ್ರೂರವಾಗಿ ಹಲ್ಲೆ ಮಾಡುತ್ತಾರೆ. ಇದು ಮಾತು ಮತ್ತು ಕೃತಿಗಿರುವ ವ್ಯತ್ಯಾಸ ಎಂದು ಕಿಡಿ ಕಾರಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ತೆನಾಲಿ ಮತಗಟ್ಟೆಯಲ್ಲಿ ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾರೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಇದನ್ನೂ ಓದಿ:Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾನೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Continue Reading

ದೇಶ

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

Naxals: ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದಾರೆ.

VISTARANEWS.COM


on

Naxals
Koo

ಮುಂಬೈ: ದೇಶದಲ್ಲಿ ಮಾವೋವಾದಿಗಳನ್ನು ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು (Security Forces) ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್‌ಕೌಂಟರ್‌ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮತ್ತೆ ಮೂವರು ನಕ್ಸಲರನ್ನು (Naxals) ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. ಇದರೊಂದಿಗೆ ಭದ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿಯೇ 100ಕ್ಕೂ ಅಧಿಕ ನಕ್ಸಲರನ್ನು ಹತ್ಯೆ ಮಾಡಿದಂತಾಗಿದೆ. ಕೆಲ ದಿನಗಳ ಹಿಂದಷ್ಟೇ ಛತ್ತೀಸ್‌ಗಢದಲ್ಲಿ 12 ಮಾವೋವಾದಿಗಳನ್ನು ಹತ್ಯೆಗೈಯಲಾಗಿತ್ತು.

“ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿದ್ದಾರೆ. ಇದೇ ವೇಳೆ ಇಬ್ಬರು ಮಹಿಳಾ ನಕ್ಸಲರು ಸೇರಿ ಒಟ್ಟು ಮೂವರನ್ನು ಹತ್ಯೆ ಮಾಡಲಾಗಿದೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Two naxals killed in encounter In Sukma

23 ನಕ್ಸಲರ ಹತ್ಯೆ

ಏಪ್ರಿಲ್‌ 2ರಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ 13 ಮಂದಿ ನಕ್ಸಲರು ಹತರಾಗಿದ್ದರು. ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಮತ್ತು ಛತ್ತೀಸ್‌ಗಢ ಪೊಲೀಸರ ಭದ್ರತಾ ಪಡೆಗಳೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದರು. ಇದು 2024ರಲ್ಲಿ ನಡೆದ ಬೃಹತ್‌ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಎನಿಸಿತ್ತು. ಇದಾದ ಕೆಲ ದಿನಗಳ ಬಳಿಕವೂ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ 10 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

5 ತಿಂಗಳಲ್ಲಿ 100 ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಐದು ತಿಂಗಳಲ್ಲಿ 100ಕ್ಕೂ ಅಧಿಕ ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Encounter: ದೇಶದ್ರೋಹಿ ಮಾವೋವಾದಿಗಳಿಗೆ ಹೊಡೆತ; ಎನ್‌ಕೌಂಟರ್‌ನಲ್ಲಿ 13 ನಕ್ಸಲರ ಹತ್ಯೆ

Continue Reading

ದೇಶ

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Maldives: ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲ ತಿಂಗಳ ಹಿಂದೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇಷ್ಟಾದರೂ, ಚೀನಾ ಯೋಜನೆ, ದುಡ್ಡಿನ ಮುಲಾಜಿನಿಂದಾಗಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ವಾಪಸ್‌ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, “ಭಾರತವು ಮಾಲ್ಡೀವ್ಸ್‌ಗೆ ನೀಡಿರುವ ಮೂರು ಯುದ್ಧವಿಮಾನಗಳನ್ನು ನಿರ್ವಹಿಸುವ ಪೈಲಟ್‌ಗಳೇ ನಮ್ಮಲ್ಲಿಲ್ಲ” ಎಂಬುದಾಗಿ ಮಾಲ್ಡೀವ್ಸ್‌ ತಿಳಿಸಿದೆ. ಇದು ಮಾಲ್ಡೀವ್ಸ್‌ (Maldives) ಸೇನೆಯ ಅದಕ್ಷತೆಗೆ ನಿದರ್ಶನ ಎಂದು ಹೇಳಲಾಗುತ್ತಿದೆ.

ಮಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಸ್ಸನ್‌ ಮೌಮೂನ್‌, “ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸುವ ಕೌಶಲವು ನಮ್ಮ ಪೈಲಟ್‌ಗಳಿಗೆ ಇಲ್ಲ. ಅಂತಹ ಪರವಾನಗಿ ಹೊಂದಿರುವ ಪೈಲಟ್‌ಗಳು ಮಾಲ್ಡೀವ್ಸ್‌ ಸೇನೆಯಲ್ಲಿ ಇಲ್ಲ” ಎಂದು ಹೇಳಿದ್ದಾರೆ. ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Continue Reading
Advertisement
Karnataka Weather Forecast
ಮಳೆ24 seconds ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Overweight man suffering from chest pain, high blood pressure, cholesterol level
ಆರೋಗ್ಯ4 mins ago

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

Prajwal Revanna Case HD Revanna bail plea arguments and counter arguments
ಕ್ರೈಂ11 mins ago

Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

IPL 2024
ಪ್ರಮುಖ ಸುದ್ದಿ14 mins ago

IPL 2024 : ಡೆಲ್ಲಿ ವಿರುದ್ದ ಗೆದ್ದ ಆರ್​ಸಿಬಿ ತಂಡದ ಸಂಭ್ರಮ ಹೀಗಿತ್ತು, ಇಲ್ಲಿದೆ ವಿಡಿಯೊ

Modi Roadshow Live
ದೇಶ19 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Viral Video
ದೇಶ23 mins ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ42 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ45 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ49 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್50 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ24 seconds ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ19 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ13 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ1 day ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಟ್ರೆಂಡಿಂಗ್‌