Santro Ravi Case | ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ - Vistara News

ಕರ್ನಾಟಕ

Santro Ravi Case | ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ

ಸ್ಯಾಂಟ್ರೋ ರವಿ (Santro Ravi Case) ತಾನೊಬ್ಬ ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಡೆಸಿದ್ದು ನಿಜ, ಅಧಿಕಾರಿಗಳು, ಆಡಳಿತಾರೂಢರೇ ಸಹಾಯ ಮಾಡಿದ್ದಾರೆ ಎಂದು ಬರೆದು ಕೊಟ್ಟಿರುವ ಮುಚ್ಚಳಿಕೆ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

VISTARANEWS.COM


on

Santro Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಕುಖ್ಯಾತ ಕ್ರಿಮಿನಲ್‌, ರಾಜಕಾರಣಿಗಳು, ಅಧಿಕಾರಿಗಳ ಅಪ್ತ ಸಖನೆಂದು ಗುರುತಿಸಿಕೊಂಡಿರುವ ಮೈಸೂರಿನ ಕೆ.ಎಸ್‌. ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ (Santro Ravi Case) ತಾನೇ ಸ್ವತಃ ಈ ವಿಚಾರಗಳನ್ನು ಒಪ್ಪಿಕೊಂಡಿದ್ದಾನೆ. ತಾನೊಬ್ಬ ಬಿಜೆಪಿ ಕಾರ್ಯಕರ್ತ, ಪೊಲೀಸ್‌ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರ ವರ್ಗಾವಣೆ ಮಾಡಿಸಿದ್ದು ನಿಜ. ವೇಶ್ಯಾವಾಟಿಕೆ ದಂಧೆಯ ಆರೋಪವಿರುವುದು ನಿಜ ಎಂದೆಲ್ಲ ಲಿಖಿತವಾಗಿ ಒಪ್ಪಿಕೊಂಡಿದ್ದಾನೆ. ೨೦೨೨ರ ಜನವರಿ ೨೨ರಂದು ಪ್ರಕರಣವೊಂದು ದಾಖಲಾದಾಗ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಸ್ವತಃ ಸ್ಯಾಂಟ್ರೋ ರವಿಯೇ ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಅದರಲ್ಲಿ ಆತನ ಎಲ್ಲ ಕರಾಳ ಕೃತ್ಯಗಳ ವಿವರ ಇದೆ. ಆದರೆ, ಪೊಲೀಸರು ಇದೆಲ್ಲವನ್ನೂ ಬರೆದಿಟ್ಟುಕೊಂಡು ಸುಮ್ಮನಿದ್ದರು. ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ!

ಅದು ರಾಜರಾಜೇಶ್ವರಿ ನಗರದ ನಿವಾಸಿಯಾಗಿರುವ ಜಗದೀಶ್‌ ಎಂಬವರು ನೀಡಿದ ಒಂದು ದೂರು. ಗಟ್ಟಿಗೆರೆ ನಿವಾಸಿಯಾಗಿರುವ ಅವರು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರಿಗೆ ಸ್ಯಾಂಟ್ರೋ ರವಿಯ ಖತರ್ನಾಕ್‌ ಕೃತ್ಯಗಳ ಬಗ್ಗೆ ದೂರು ನೀಡಿದ್ದರು. ರಾಜರಾಜೇಶ್ವರಿ ನಗರದ ಬಾಲಕೃಷ್ಣ ರಂಗ ಮಂದಿರದ ಮುಂಭಾಗದಲ್ಲಿ ವಾಸ ಮಾಡುತ್ತಿರುವ ಮಂಜುನಾಥ್‌ ಎಂಬಾತ ತಾನು ರಾಜಕೀಯ ಮುಖಂಡರ ಜತೆ ಸಂಬಂಧ ಹೊಂದಿದ್ದೇನೆ, ನನ್ನ ಹೆಂಡತಿ ಹೈಕೋರ್ಟ್‌ ಲಾಯರ್‌, ಸರಕಾರಿ ನೌಕರರನ್ನು ಯಾವುದೇ ಜಾಗಕ್ಕೆ ಬೇಕಾದರೂ ವರ್ಗಾವಣೆ ಮಾಡಿಕೊಡುತ್ತೇನೆ ಎಂದು ಜನರನ್ನು ನಂಬಿಸಿ ಹಣ ಪಡೆಯುತ್ತಿದ್ದಾನೆ. ಇದರ ಬಗ್ಗೆ ಗಮನ ಹರಿಸಿ ಜನರಿಗೆ ವಂಚನೆ ಆಗುವುದನ್ನು ತಡೆಯಬೇಕು ಎಂದು ಮನವಿ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ ರಾಜರಾಜೇಶ್ವರಿ ಠಾಣೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಲೋಹಿತ್‌ ಅವರು ಮಂಜುನಾಥನನ್ನು ಕರೆಸಿಕೊಂಡು ಒಂದು ಮುಚ್ಚಳಿಕೆ ಬರೆಸಿಕೊಳ್ಳುತ್ತಾರೆ. ಅದರಲ್ಲಿ ಮಂಜುನಾಥ ಅಲಿಯಾಸ್‌ ಸ್ಯಾಂಟ್ರೋ ರವಿಯ ಸಮಸ್ತ ಜಾತಕವೇ ಇದೆ. ಆತ ಮಾಡಿರುವ ಎಲ್ಲ ಕುಕೃತ್ಯಗಳ ವಿವರವಿದೆ, ಹುಟ್ಟಿನಿಂದ ಇದುವರೆಗಿನ ವಿದ್ಯಾಭ್ಯಾಸ, ವಂಚನೆಗಳ ಪೂರ್ತಿ ವಿವರ ಇದೆ. ಇದೆಲ್ಲವನ್ನೂ ಮುಚ್ಚಳಿಕೆ ಬರೆಸಿಕೊಂಡು ಪೊಲೀಸರು ಆತನನ್ನು ತಣ್ಣಗೆ ಬಿಟ್ಟು ಕಳುಹಿಸಿದ್ದಾರೆ!

ಅವನು ಹೇಳಿದ ಪ್ರಮುಖ ಅಂಶಗಳು
೧. ನಾನು ಮೈಸೂರಿನಲ್ಲಿ ವಾಸವಾಗಿದ್ದಾಗ ೨೦೦೫ರಲ್ಲಿ ಇಲವಾಲ ಪೊಲೀಸ್‌ ಠಾಣೆಯಲ್ಲಿ ನನ್ನ ವಿರುದ್ಧ ವೇಶ್ಯಾವಾಟಿಕೆ ದಂಧೆಯ ದೂರು ದಾಖಲಾಗಿತ್ತು. ಅದರ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
೨. ನಾನು ೨-೩ ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಬಿಜೆಪಿ ಪಕ್ಷದ ಸಂಸದರು, ಶಾಸಕರು, ರಾಜಕೀಯ ವ್ಯಕ್ತಿಗಳು ಪರಿಚಯ ಆಗಿರುತ್ತಾರೆ.
೩. ನಾನು ರಾಜಕೀಯ ಸಂಬಂಧಗಳನ್ನು ಬಳಸಿಕೊಂಡು ರಾಜ್ಯ ಗುಪ್ತವಾರ್ತೆಯಲ್ಲಿ ಇನ್ಸ್‌ಪೆಕ್ಟರ್‌ ಆಗಿದ್ದ ಜೆ.ಕೆ. ಸುಬ್ರಹ್ಮಣ್ಯ ಅವರನ್ನು ಚನ್ನರಾಯ ಪಟ್ಟಣ ಸರ್ಕಲ್‌ಗೆ, ಹಲಸೂರಿನಲ್ಲಿ ಇನ್ಸ್‌ಪೆಕ್ಟರ್‌ ಆಗಿದ್ದ ರವಿ ಅವರನ್ನು ಮಳವಳ್ಳಿ ಠಾಣೆಗೆ ವರ್ಗಾವಣೆ ಮಾಡಿಸಿದ್ದೇನೆ. ಇವರು ನಾನು ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿರುವಾಗ ಪರಿಚಯ ಆದವರು.

೪. ಗೃಹ ಸಚಿವರ ಆಪ್ತ ಸಹಾಯಕ, ಸ್ನೇಹಿತರ ಮೂಲಕವೂ ವರ್ಗಾವಣೆಗೆ ನೆರವು ಸಿಕ್ಕಿದೆ. ಡಿಜಿ ಮತ್ತು ಐಜಿಪಿ ಕಚೇರಿ ಅಧಿಕಾರಿಗಳಿಂದಲೂ ಸಾಥ್ ಸಿಕ್ಕಿದೆ ಎಂದು ಹೇಳಿರುವ ರವಿ ತಾನು ಕರೆ ಮಾಡಿದ್ದ ಮೊಬೈಲ್ ನಂಬರ್, ಚಾಟ್ ಸಹಿತ ಎಲ್ಲವನ್ನೂ ಒಪ್ಪಿಕೊಂಡಿದ್ದಾನೆ.

ಇಷ್ಟೆಲ್ಲ ಗಂಭೀರ ಹೇಳಿಕೆಗಳಿದ್ದರೂ ಪೊಲೀಸರು ಮಾತ್ರ ಅವನ್ನು ಸುಮ್ಮನೆ ಬಿಟ್ಟು ಕಳುಹಿಸಿದ್ದಾರೆ. ಈಗ ಅವನೆಲ್ಲಿ, ಅವನೆಲ್ಲಿ ಎಂದು ಹುಡುಕುವ ನಾಟಕ ಮಾಡುತ್ತಿದ್ದಾರೆ.

ಇದನ್ನೂ ಓದಿ | Santro Ravi Case | ಸ್ಯಾಂಟ್ರೋ ಮಾತು ಕೇಳಿ ಪತ್ನಿ, ನಾದಿನಿಯನ್ನು ಜೈಲಿಗೆ ಹಾಕಿದ ಇನ್ಸ್‌ಪೆಕ್ಟರ್‌ ಪ್ರವೀಣ್‌ ಸಸ್ಪೆಂಡ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Up Next

Water Contamination | ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 50ಕ್ಕೂ ಅಧಿಕ ಮಂದಿ ಅಸ್ವಸ್ಥ

Don't Miss

RRR Film | ಆರ್‌ಆರ್‌ಆರ್‌ ಚಿತ್ರಕ್ಕೆ ಒಲಿದ ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ʼಅತ್ಯುತ್ತಮ ಹಾಡುʼ ಪ್ರಶಸ್ತಿ

Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ಮಧ್ಯೆ ಜಗಳ ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಇಲ್ಲೂ ಅಗಿರುವುದು ಅದೇ ರೀತಿಯ ಘಟನೆ. ಪತಿಯ ಅತಿಯಾದ ಕಾಳಜಿ, ಪೊಸೇಸೀವ್‌ನೆಸ್‌ನಿಂದ ಬೇಸತ್ತ ಪತ್ನಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪತಿ ಇದೀಗ ದೂರು ಕೊಟ್ಟಿದ್ದಾರೆ.

VISTARANEWS.COM


on

crime news
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ಮಧ್ಯೆ ಜಗಳ ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಇಲ್ಲೂ ಅಗಿರುವುದು ಅದೇ ರೀತಿಯ ಘಟನೆ. ಪತಿಯ ಅತಿಯಾದ ಕಾಳಜಿ, ಪೊಸೇಸೀವ್‌ನೆಸ್‌ನಿಂದ ಬೇಸತ್ತ ಪತ್ನಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪತಿ ಇದೀಗ ದೂರು ಕೊಟ್ಟಿದ್ದಾರೆ.

ಗೆಳೆಯರಿಗೆ ಡಿಯರ್ ಎಂದು ಮೆಸೇಜ್‌ ಮಾಡಬೇಡ, ಅಣ್ಣ, ಸರ್ ಎಂದು ಮೆಸೇಜ್ ಮಾಡು ಎಂದು ಪತಿ ಹೇಳಿದ್ದಕ್ಕೆ ಪತ್ನಿ ಮನೆಯನ್ನೇ ಬಿಟ್ಟು ಹೋಗಿದ್ದಾಳೆ ಎನ್ನಲಾಗಿದೆ. ಗಂಡ ಬೈದ ಎನ್ನುವ ಕಾರಣವನ್ನೇ ನೆಪವಾಗಿಟ್ಟುಕೊಂಡು ಮಹಿಳೆ ಎಸ್ಕೇಪ್‌ ಆಗಿರುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಪತ್ನಿ ಮೊಬೈಲ್‌ಗೆ Good morning dear ಎಂಬ ಮೆಸೇಜ್ ಬಂದಿತ್ತು. ಇದನ್ನ ನೋಡಿದ ಪತಿ ದಿಲೀಪ್ ಕುಮಾರ್, ʼʼಡಿಯರ್ ಅಂತ ಮೆಸೇಜ್ ಹಾಕ್ಬೇಡ. ಸರ್ ಅಂತ ಕಳಿಸುʼʼ ಎಂದು ಪತ್ನಿಗೆ ಸೂಚಿಸಿದ್ದರು. ಇದರಿಂದ ಕೆರಳಿದ ಪತ್ನಿ ವಾಗ್ವಾದ ನಡೆಸಿದ್ದರು. ಇದು ಅತಿರೇಕಕ್ಕೆ ತಿರುಗಿ ದಂಪತಿ ಮಧ್ಯೆ ದೊಡ್ಡ ಜಗಳವೇ ನಡೆದಿತ್ತು.

ಬಳಿಕ ʼʼಸರಿ ಹೋಗ್ಲಿ. ಕೋಪ ಮಾಡ್ಕೋಬೇಡʼʼ ಎಂದು ಮಗುವನ್ನು ಕರೆದುಕೊಂಡು ದಿಲೀಪ್‌ ಕುಮಾರ್‌ ರೂಂ ಒಳಗೆ ಹೋಗಿದ್ದರು. ಕೆಲವು ಸಮಯಗಳ ಬಳಿಕ ಕೆಲಸದವರು ದಿಲೀಪ್‌ ಬಳಿ ಬಂದು ಊಟ ಕೊಡಲು ಹೇಳಿ ನಿಮ್ಮ ಪತ್ನಿ ಆಚೆ ಹೋದರು ಎಂದು ಹೇಳಿದಾಗಲೇ ಪತ್ನಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಎಷ್ಟೆ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನಲೆಯಲ್ಲಿ ದಿಲೀಪ್ ದೂರು ನೀಡಿದ್ದರು. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ. ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Road Accident: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Continue Reading

ದೇಶ

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಈ ಬಾರಿ ಮಳೆಗಾಲದಲ್ಲಿ ಮನೆಯಲ್ಲೇ ಸುಮ್ಮನೆ ಹೊದಿಕೆ ಹೊದ್ದು ಮಲಗುವ ಬದಲು ಬೆಂಗಳೂರು ಸುತ್ತಮುತ್ತಲೂ ಇರುವ ಸುಂದರ ತಾಣಗಳಿಗೆ (Monsoon Tour) ಭೇಟಿ ನೀಡೋಣ. ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳೋಣ.

VISTARANEWS.COM


on

By

Monsoon Tour
Koo

ಸುರಿಯುತ್ತಿರುವ ಮಳೆಯ ನಡುವೆ ಹೊರಗೆ ಹೋಗುವುದು ಬೇಜಾರು. ಆದರೆ ಪ್ರಕೃತಿಯ ಸೌಂದರ್ಯ ಎದ್ದು ಕಾಣುವುದೇ ಮಳೆಗಾಲದಲ್ಲಿ (Monsoon Tour). ಈ ಸಂದರ್ಭದಲ್ಲಿ ದೂರ ಹೋಗುವುದು ಅಸಾಧ್ಯವಾದರೂ ಹತ್ತಿರ ಇರುವ ಕೆಲವು ತಾಣಗಳಲ್ಲಿ (tourist place) ಸುತ್ತಾಡಬಹುದು. ಮಳೆಯ ನಡುವೆ ಸುತ್ತಮುತ್ತಲಿನ ಪರಿಸರದಲ್ಲಿ (nature) ಕಾಣುವ ಹೊಸತನದ ಚಿಗುರನ್ನು ನೋಡಿ ಆನಂದಿಸಬಹುದು.

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ (malenadu) ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ (bengaluru) ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಪ್ರಾಚೀನ ಭಾರತೀಯ ದೇವಾಲಯಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ವಾಸ್ತುಶಿಲ್ಪದ ಪರಂಪರೆಯನ್ನು ಪ್ರದರ್ಶಿಸುತ್ತವೆ. ಈ ಪವಿತ್ರ ತಾಣಗಳು ಕೇವಲ ಪೂಜಾ ಸ್ಥಳಗಳಲ್ಲ. ಇತಿಹಾಸ, ಕಲೆ ಮತ್ತು ಆಧ್ಯಾತ್ಮಿಕತೆಯ ಭಂಡಾರಗಳಾಗಿವೆ. ಇವುಗಳಲ್ಲಿ ಹಲವು ದೇವಾಲಯ ನಮ್ಮ ಬೆಂಗಳೂರಿನ ಸುತ್ತಮುತ್ತಲಿದೆ. ಈ ಬಾರಿ ಮಳೆಗಾಲದಲ್ಲಿ ಈ ಎಂಟು ದೇವಾಲಯಗಳಲ್ಲಿ ಹೆಜ್ಜೆ ಹಾಕಿ ಮಳೆಗಾಲದ ನೆನಪನ್ನು ಬೆಚ್ಚಗೆ ಮನದಲ್ಲಿ ತುಂಬಿ ಇಡೋಣ.


1. ಚೆನ್ನಕೇಶವ ದೇವಸ್ಥಾನ

ಹಾಸನ ಜಿಲ್ಲೆಯಲ್ಲಿರುವ 12ನೇ ಶತಮಾನದ ಬೇಲೂರಿನ ಚೆನ್ನಕೇಶವ ದೇವಾಲಯವು ತನ್ನ ಸಂಕೀರ್ಣವಾದ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಇದು ನಕ್ಷತ್ರಾಕಾರದ ದೇವಾಲಯವಾಗಿದ್ದು, ಹಿಂದೂ ದೇವರಾದ ವಿಷ್ಣುವಿಗೆ ಸಮರ್ಪಿತವಾಗಿದೆ.


2. ಕೋಟಿಲಿಂಗೇಶ್ವರ ದೇವಸ್ಥಾನ

ಬೃಹತ್ ಶಿವಲಿಂಗಕ್ಕೆ ಹೆಸರುವಾಸಿಯಾಗಿರುವ ಈ ದೇವಾಲಯವು ವಿಶ್ವದ ಅತಿದೊಡ್ಡ ಲಿಂಗಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಕೋಟಿಲಿಂಗೇಶ್ವರ ದೇವಸ್ಥಾನ ಕೋಲಾರದಲ್ಲಿದೆ.


3. ಹೊಯ್ಸಳೇಶ್ವರ ದೇವಸ್ಥಾನ

12ನೇ ಶತಮಾನದ ಈ ದೇವಾಲಯವು ಹಾಸನ ಜಿಲ್ಲೆಯಲ್ಲಿದೆ ಮತ್ತು ಇದು ಶಿವನಿಗೆ ಸಮರ್ಪಿತವಾಗಿದೆ. ಹೊಯ್ಸಳ ವಾಸ್ತುಶೈಲಿಗೆ ಹೆಸರುವಾಸಿಯಾದ. ಇದು ಹಳೇಬೀಡುನಲ್ಲಿರುವ ಅತಿ ದೊಡ್ಡ ದೇವಾಲಯವಾಗಿದೆ.

Monsoon Tour


4. ಶ್ರೀ ರಂಗನಾಥಸ್ವಾಮಿ ದೇವಸ್ಥಾನ

ಮೈಸೂರಿನ ಸಮೀಪ ಶ್ರೀರಂಗಪಟ್ಟಣದಲ್ಲಿರುವ ಈ ದೇವಾಲಯವು ಕರ್ನಾಟಕದಲ್ಲಿಯೇ ಅತಿ ದೊಡ್ಡದಾಗಿದೆ ಮತ್ತು ವಿಷ್ಣುವಿನ ರೂಪವಾದ ರಂಗನಾಥನಿಗೆ ಸಮರ್ಪಿತವಾಗಿದೆ. ವೈಷ್ಣವ ಸಂಪ್ರದಾಯದ 108 ಅಭಿಮಾನ ಕ್ಷೇತ್ರಗಳಲ್ಲಿ ಒಂದಾಗಿ ಇದು ವಿಶೇಷ ಸ್ಥಾನವನ್ನು ಹೊಂದಿದೆ.


5. ಲೇಪಾಕ್ಷಿ ದೇವಸ್ಥಾನ

ಬೆಂಗಳೂರಿನಿಂದ ಇದು ತುಂಬ ದೂರ ಏನಿಲ್ಲ. ಆಂಧ್ರಪ್ರದೇಶದ ಅನಂತಪುರದಲ್ಲಿದೆ ಲೇಪಾಕ್ಷಿ ದೇವಾಲಯ. ಇಲ್ಲಿನ ಅದ್ಭುತ ವಿಜಯನಗರ ವಾಸ್ತುಶಿಲ್ಪ ಮತ್ತು ಪ್ರಸಿದ್ಧ ನೇತಾಡುವ ಸ್ತಂಭಗಳು ಪ್ರವಾಸಿಗರಲ್ಲಿ ಬೆರಗು ಮೂಡಿಸುತ್ತದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣ ಕೆತ್ತನೆಗಳು ಮತ್ತು ವರ್ಣಚಿತ್ರಗಳು ನಯನ ಮನೋಹರವಾಗಿದೆ.


6. ಭೋಗ ನಂದೀಶ್ವರ ದೇವಸ್ಥಾನ

ನಂದಿ ಬೆಟ್ಟದ ತಪ್ಪಲಿನಲ್ಲಿರುವ ಈ ದೇವಾಲಯದ ಸಂಕೀರ್ಣವು ಶಿವನಿಗೆ ಸಮರ್ಪಿತವಾಗಿದೆ ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ನಿಖರವಾದ ಮೂಲಗಳು ತಿಳಿದಿಲ್ಲವಾದರೂ ವಾಸ್ತುಶಿಲ್ಪವು 9ನೇ – 10ನೇ ಶತಮಾನದ ಹಿಂದಿನದು ಎಂದು ನಂಬಲಾಗಿದೆ.


7. ಶ್ರೀ ಚಾಮುಂಡೇಶ್ವರಿ ದೇವಸ್ಥಾನ

ಮೈಸೂರಿನಲ್ಲಿರುವ ವಿಶ್ವಪ್ರಸಿದ್ಧ ಈ ದೇವಾಲಯವು ಚಾಮುಂಡಿ ಬೆಟ್ಟದ ಮೇಲಿದೆ ಮತ್ತು ದುರ್ಗದ ರೂಪವಾದ ಚಾಮುಂಡೇಶ್ವರಿ ದೇವಿಯನ್ನು ಇಲ್ಲಿ ಪೂಜಿಸಲಾಗುತ್ತದೆ.

ಇದನ್ನೂ ಓದಿ: Sri Lanka Tour: ಕಡಿಮೆ ವೆಚ್ಚದಲ್ಲಿ ಶ್ರೀಲಂಕಾ ಪ್ರವಾಸ; ಐಆರ್‌ಸಿಟಿಸಿ ಸ್ಪೆಷಲ್‌ ಪ್ಯಾಕೇಜ್‌


8. ತಲಕಾಡು ಪಂಚಲಿಂಗ ದೇವಾಲಯಗಳು

ತಲಕಾಡು ಶಿವನಿಗೆ ಅರ್ಪಿತವಾದ ಪಂಚಲಿಂಗ ದೇವಾಲಯಗಳು ಸೇರಿದಂತೆ ಹಲವಾರು ಪುರಾತನ ದೇವಾಲಯಗಳಿಗೆ ನೆಲೆಯಾಗಿದೆ. ಪಂಚ ಲಿಂಗ ದರ್ಶನವು ಸಾಮಾನ್ಯವಾಗಿ ಪ್ರತಿ ಹನ್ನೆರಡು, ಏಳು, ಐದು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಕಾರ್ಯಕ್ರಮವಾಗಿದ್ದು, ಆಶೀರ್ವಾದ ಪಡೆಯಲು ಭಕ್ತರು ಐದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Heavy rain : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (rain news) ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (karnataka weather forecast) ಯೆಲ್ಲೋ ಹಾಗೂ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್ ರಾಜ್ಯವನ್ನು ಆವರಿಸಿದೆ. ವಾರಾಂತ್ಯದಲ್ಲಿ ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಜೂ.10ರವರೆಗೆ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ, ಬಾಗಲಕೋಟೆ, ಕೊಪ್ಪಳ , ಧಾರವಾಡದಲ್ಲೂ ವ್ಯಾಪಕ ಮಳೆಯಾಗಲಿದೆ.

ಮಲೆನಾಡಿನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ ಸುಮಾರು 32 ಮತ್ತು 23 ಡಿ.ಸೆ ಇರಲಿದೆ.

ಮತ್ತೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು ಗಂಟೆಗೆ 40-50 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

Gas leak : ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

Gas leak
Koo

ಮೈಸೂರು: ಗುಜರಿಯ ಗೋಡೌನ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಾಗಿ (Gas Leakage) 30 ಮಂದಿ ಅಸ್ವಸ್ಥಗೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಅಂಗಡಿಯಲ್ಲಿ ಈ ಸಮಸ್ಯೆ ಉಂಟಾಗಿದ್ದು, ಆರಂಭದಲ್ಲಿ ಶೆಡ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥಗೊಂಡರೆ ಬಳಿಕ ಸುತ್ತಲಿನ ಗ್ರಾಮಸ್ಥರೂ ಆರೋಗ್ಯ ಸಮಸ್ಯೆ ಎದುರಿಸಿ ಆಸ್ಪತ್ರೆ ಸೇರಿದ್ದಾರೆ.

ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ಗುಜರಿ ಗೋಡೌನ್​ನಲ್ಲಿ ಘಟನೆ ಸಂಭವಿಸಿದೆ. ಅನಿಲ ಗೋಡೌನ್​ನಿಂದ ಹೊರಕ್ಕೆ ಬಂದು ಕೆಸರೆ ಗ್ರಾಮದಲ್ಲಿ ಹರಡಿದಿಎ. ಕೆಸರೆ ಗ್ರಾಮಸ್ಥರಲ್ಲೂ ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡಿದ್ದಾರೆ. ಎನ್.ಆರ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಹಾಗೂ ಆರೋಗ್ಯಾಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ (WhatsApp Group) ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ (Cyber Crime) ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆz

ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ.

ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಖಾತೆಯಿಂದ ಎಗರಿಸಿದ ಹಣ‌ವು ತಮಿಳುನಾಡು ಹಾಗೂ ಬಾಂಗ್ಲಾದೇಶದ ಬ್ಯಾಂಕ್‌ ಖಾತೆಗಳಿಗೆ‌ ಜಮೆ ಆಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

Continue Reading
Advertisement
crime news
ಕರ್ನಾಟಕ4 mins ago

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

Viral Video
ವೈರಲ್ ನ್ಯೂಸ್11 mins ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Ramoji Rao passed away
ದೇಶ21 mins ago

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Vastu Tips
ಧಾರ್ಮಿಕ44 mins ago

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

Monsoon Tour
ದೇಶ45 mins ago

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Health Tips Kannada
ಆರೋಗ್ಯ2 hours ago

Health Tips Kannada: ಯಾವ ಬೀಜ ತಿಂದರೆ ನಮ್ಮ ಆರೋಗ್ಯಕ್ಕೆ ಏನು ಪ್ರಯೋಜನ?

Health Tips
ಆರೋಗ್ಯ3 hours ago

Health Tips: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಬೇಕೆ? ಈ ಆಹಾರ ಸೇವಿಸಿ

Dina Bhavishya
ಭವಿಷ್ಯ3 hours ago

Dina Bhavishya : ಹಣ ಗಳಿಸುವ ವಿವಿಧ ಮಾರ್ಗಗಳಿಗೆ ಈ ರಾಶಿಯವರಿಗೆ ಸಿಗಲಿದೆ ಪುಷ್ಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ15 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌