Drugs Mafia | ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ - Vistara News

ಉಡುಪಿ

Drugs Mafia | ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

ಮಂಗಳೂರಿನ ಬಯಲಾದ ವೈದ್ಯರು, ವೈದ್ಯಕೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಒಳಗೊಂಡ ಡ್ರಗ್ಸ್‌ ಲೋಕದ (Drugs Mafia) ಮೂಲ ಇರುವುದು ಲಿವಿಂಗ್‌ ಟುಗೆದರ್‌ನಲ್ಲಿ ಎಂದು ತಿಳಿದುಬಂದಿದೆ.

VISTARANEWS.COM


on

Mangalore drugs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಂಗಳೂರಿನ ಮೆಡಿಕಲ್‌ ಕಾಲೇಜುಗಳಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಡ್ರಗ್ಸ್‌ ದಂಧೆಯಲ್ಲಿ (Drugs Mafia) ಕೇವಲ ಮಾದಕ ಲೋಕ ಮಾತ್ರವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕವೂ ಬೆಳಕಿಗೆ ಬಂದಿದೆ.

ಮಂಗಳೂರು ಪೊಲೀಸರು ಗಾಂಜಾ ಬಲೆಯಲ್ಲಿ ಬಿದ್ದಿದ್ದ, ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವೈದ್ಯರು ಸೇರಿದಂತೆ ೧೦ ಜನರನ್ನು ಬಂಧಿಸಿದ್ದಾರೆ. ಇವರು ಕೆಎಂಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ಯೇನೆಪೋಯಾ ದೇರಳಕಟ್ಟೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರಾಗಿದ್ದಾರೆ. ಹತ್ತು ಮಂದಿಯಲ್ಲಿ ಇಬ್ಬರು ಗಾಂಜಾ ಪೆಡ್ಲರ್‌ಗಳು.

ಬಂಧಿತರು ಇವರು
ಬಂಧಿತ ವಿದ್ಯಾರ್ಥಿನಿಯರು:
ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23).
ಬಂಧಿತ ವೈದ್ಯರು: ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28)
ವೈದ್ಯ ವಿದ್ಯಾರ್ಥಿಗಳು: ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23) ಬಂಧನ
ಬಂಧಿತ ಇತರರು: ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34), ಇಂಗ್ಲೆಂಡ್‌ ಮೂಲದ ಪೆಡ್ಲರ್‌ ನೀಲ್ ಕಿಶೋರಿಲಾಲ್ ರಾಮ್ ಜೀ.

ಬಂಧಿತ ಹತ್ತು ಮಂದಿಯನ್ನು ತಡರಾತ್ರಿವರೆಗೂ ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ವೇಳೆ ಆರೋಪಿಗಳು ಇನ್ನೂ ಹಲವರ ಹೆಸರುಗಳನ್ನು ಹೇಳಿದ್ದು, ಅವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

ವೈದ್ಯರು, ವೈದ್ಯ ವಿದ್ಯಾರ್ಥಿಗಳು ಮತ್ತು ಪೆಡ್ಲರ್‌ ಆಗಿರುವ ನೀಲ್‌ ಇನ್ನೂ ಹಲವರು ತಮ್ಮ ಜಾಲದಲ್ಲಿರುವುದಾಗಿ ಹೇಳಿದ್ದಾರೆ. ನೀಲ್‌ ಇನ್ನೂ ಮೂರ್ನಾಲ್ಕು ಕಾಲೇಜುಗಳ ಹೆಸರು ಹೇಳಿರುವುದು ಮಂಗಳೂರಿನ ಶೈಕ್ಷಣಿಕ ಲೋಕದಲ್ಲಿ ಆತಂಕವನ್ನು ಸೃಷ್ಟಿಸಿದೆ.

ಲಿವಿಂಗ್‌ ಟುಗೆದರ್‌ ದಾರಿ!
ಈಗ ಬಂಧನಕ್ಕೆ ಒಳಗಾಗಿರುವ ವೈದ್ಯಕೀಯ ವಿದ್ಯಾರ್ಥಿನಿಯರು ಮಾದಕ ನಶೆಗೆ ಬೀಳಲು ಮುಖ್ಯ ಕಾರಣ ಅವರು ಲಿವಿಂಗ್‌ ಟುಗೆದರ್‌ ಸಂಬಂಧವನ್ನು ಹೊಂದಿರುವುದು ಎಂದು ತನಿಖೆ ವೇಳೆ ಬಯಲಾಗಿದೆ. ಇವರಲ್ಲಿ ಹೆಚ್ಚಿನವರು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದು, ಇಲ್ಲಿ ತಮಗೆ ಪರಿಚಯವಾಗುವ ಯುವಕರ ಜತೆ ಲಿವಿಂಗ್‌ ಟುಗೆದರ್‌ ಅಂತ ಒಂದೇ ರೂಮಿನಲ್ಲಿ ಇರುತ್ತಾರೆ. ಇಲ್ಲಿ ಸೆಕ್ಸ್‌ ಮತ್ತು ಮಾದಕ ನಶೆಯ ಲೋಕಗಳು ತೆರೆದುಕೊಳ್ಳುತ್ತವೆ.

ಒಮ್ಮೆ ಈ ಜಾಲಕ್ಕೆ ಪ್ರವೇಶ ಮಾಡಿದವರಿಗೆ ಹಿಂದೆ ಬರಲು ಸಾಧ್ಯವಾಗದೆ ಹುಡುಗರು ಹೇಳಿದಂತೆ ಕೇಳಿಕೊಂಡಿರಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಹೀಗಾಗಿ ಅವರು ಶಾಶ್ವತವಾಗಿ ಅವರ ಗುಲಾಮರಂತೆ ಇರಬೇಕಾಗುತ್ತದೆ.

ಲಿವಿಂಗ್‌ ಟುಗೆದರ್‌ ಲೋಕ ಹಲವು ವಿದ್ಯಾರ್ಥಿನಿಯರನ್ನು ನೇರವಾಗಿ ಮತ್ತಿನ ಲೋಕಕ್ಕೆ ಕರೆದುಕೊಂಡು ಹೋಗುತ್ತವೆ. ಮತ್ತಿನ ಲೋಕದಲ್ಲಿ ಅವರು ಹೇಗೆ ವರ್ತಿಸುತ್ತಾರೆ ಎನ್ನುವುದೇ ಗೊತ್ತಾಗದ ಪರಿಸ್ಥಿತಿ ಉಂಟಾಗುತ್ತದೆ ಎಂದು ಹೇಳಲಾಗಿದೆ.

ಮಂಗಳೂರಿನ ಹಲವು ಅಪಾರ್ಟ್ಮೆಂಟ್‌ಗಳಲ್ಲಿ ಲಿವಿಂಗ್ ಟುಗೆದರ್ ಹೆಸರಿನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಜತೆಯಾಗಿ ವಾಸ ಮಾಡುತ್ತಿದ್ದು, ಅಲ್ಲಿ ಬಾಯ್ ಫ್ರೆಂಡ್ ಗಳಿಂದ ಗಾಂಜಾ ರುಚಿ ಸವಿಯುತ್ತಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ವೈದ್ಯರು ಕೂಡಾ ಆಗಷ್ಟೇ ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ಬಂದಿದ್ದವರಾಗಿದ್ದು ಮೊದಲೇ ಸ್ವಲ್ಪ ಮಟ್ಟಿಗೆ ಚಟ ಹೊಂದಿದವರು ಈಗ ಮತ್ತೆ ದಾಸರಾಗುತ್ತಾರೆ ಎಂದು ತಿಳಿದುಬಂದಿದೆ.

ಇದೀಗ ಬಂಧಿತರಿಂದ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ | Drugs Menace | ಮಾದಕ ನಶೆಯಲ್ಲಿ ಸಿಲುಕಿದ ಚಿತ್ರನಟ, ಮ್ಯಾನೇಜರ್‌ ಅರೆಸ್ಟ್‌, 12.5 ಲಕ್ಷ ಮೌಲ್ಯದ ಗಾಂಜಾ ವಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

Road Accident: ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಉಡುಪಿಯಲ್ಲಿ ಸ್ಕೂಟರ್‌ಗೆ‌ ಟ್ರಕ್‌ ಡಿಕ್ಕಿ ಹೊಡೆದರೆ, ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಗುದ್ದಿದೆ. ಚಿತ್ರದುರ್ಗದಲ್ಲಿ ಲಾರಿ- ಬಸ್ ನಡುವೆ ಅಪಘಾತ ನಡೆದರೆ, ಚಿಕ್ಕಮಗಳೂರಲ್ಲಿ ರಸ್ತೆ ಮಧ್ಯೆ ಐರಾವತ ಬಸ್ ಹೊತ್ತಿ ಉರಿದಿದೆ.

VISTARANEWS.COM


on

By

Road Accident
Koo

ಉಡುಪಿ/ಮಂಡ್ಯ/ಚಿತ್ರದುರ್ಗ/ ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ನಾಲ್ಕು ಅಪಘಾತದಲ್ಲಿ ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿ ಸ್ಕೂಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಕಟ್ಟಡವೊಂದರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ನೇರವಾಗಿ ಹೋಗುತ್ತಿದ್ದರು. ಈ ವೇಳೆ ಲೆಫ್ಟ್ ಟರ್ನ್ ತೆಗೆದುಕೊಳ್ಳುವ ಧಾವಂತದಲ್ಲಿ ಟ್ರಕ್‌ ಸ್ಕೂಟಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಟ್ರಕ್ ಚಾಲಕ ತಕ್ಷಣ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ದುರಂತ ತಪ್ಪಿದೆ. ಒಂದು ತಿಂಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ ಇದೇ ರೀತಿಯ ಅಪಘಾತ ನಡೆದಿತ್ತು.

Road Accident

ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಕಾರೊಂದು ಗುದ್ದಿದೆ. ಮಂಡ್ಯದ ಹನಕೆರೆ ಗ್ರಾಮದ ಸಮೀಪದ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಅಪಘಾತ ನಡೆದಿದೆ. ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹೈವೆಯಲ್ಲಿ ಉರುಳಿಬಿದ್ದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಚಿತ್ರದುರ್ಗದಲ್ಲಿ ಲಾರಿ- ಬಸ್ ನಡುವೆ ಅಪಘಾತ

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮದದಲ್ಲಿ ಲಾರಿ ಹಾಗೂ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ವೋಲ್ವೋ ಬಸ್‌ ಹೊರಟಿತ್ತು. ಈ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದು ವೋಲ್ವೋ ಬಸ್‌ ಜಮೀನಿಗೆ ನುಗ್ಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಮಗಳೂರಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಐರಾವತ ಬಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಚಾಲಕನ-ನಿರ್ವಾಹಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಎ.ಸಿ ಬಸ್‌ನಲ್ಲಿ ಡ್ರೈವರ್-ಕಂಡಕ್ಟರ್ ಸೇರಿ 40 ಮಂದಿ ಪ್ರಯಣಿಕರಿದ್ದರು. ತರೀಕೆರೆ ತಾಲೂಕಿನ ನೇರಲಕೆರೆ ಕ್ರಾಸ್ ಬಳಿ ಬೆಳಗಿನ ಜಾವ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಇದನ್ನೂ ಗಮನಿಸಿದ ಚಾಲಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬಳಿಕ ನೋಡನೋಡುತ್ತಿದ್ದ ಐರಾವತ ಎಸಿ ಸ್ಲೀಪರ್ ಬಸ್ ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Covaxin
ದೇಶ2 mins ago

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

T20 World Cup 2024
ಕ್ರೀಡೆ27 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

pm narendra modi yogi adityanath
ಪ್ರಮುಖ ಸುದ್ದಿ50 mins ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್59 mins ago

Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ1 hour ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Drowned in water
ಹಾಸನ1 hour ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

HD DeveGowda Wont celebrate 92nd birthday
ರಾಜಕೀಯ1 hour ago

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

hd revanna case
ಕ್ರೈಂ2 hours ago

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

Murder case
ದಾವಣಗೆರೆ2 hours ago

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Amruthadhaare Serial bhoomika in birthday chaya singh
ಕಿರುತೆರೆ2 hours ago

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌