Karnataka Election | ಕಾಂಗ್ರೆಸ್ ಪ್ರಜಾಧ್ವನಿ ಬಸ್ಸಿನಲ್ಲಿರುವ ಸೀಟಿನಷ್ಟು ಸ್ಥಾನ ಗೆದ್ದರೆ ಅದೇ ಹೆಚ್ಚು: ಸಚಿವ ಸಿ.ಎನ್ ಅಶ್ವತ್ಥ ನಾರಾಯಣ - Vistara News

ಕರ್ನಾಟಕ

Karnataka Election | ಕಾಂಗ್ರೆಸ್ ಪ್ರಜಾಧ್ವನಿ ಬಸ್ಸಿನಲ್ಲಿರುವ ಸೀಟಿನಷ್ಟು ಸ್ಥಾನ ಗೆದ್ದರೆ ಅದೇ ಹೆಚ್ಚು: ಸಚಿವ ಸಿ.ಎನ್ ಅಶ್ವತ್ಥ ನಾರಾಯಣ

ಕಾಂಗ್ರೆಸ್‌ ಪಕ್ಷ ಈ ಚುನಾವಣೆಯಲ್ಲಿ 40ರಿಂದ 50 ಸ್ಥಾನ ಗೆದ್ದರೆ ಅದೇ ಹೆಚ್ಚು ಎಂದು ಹೇಳಿದ್ದಾರೆ ಸಚಿವ ಅಶ್ವತ್ಥನಾರಾಯಣ ಅವರು. ಜತೆಗೆ ಮೂರನೇ ಸ್ಥಾನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಸ್ಪರ್ಧೆ ಏರ್ಪಡಲಿದೆ ಎಂದರು.

VISTARANEWS.COM


on

Ashwathanarayana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್ ಪಕ್ಷವು ‘ಪ್ರಜಾಧ್ವನಿ’ ಬಸ್ಸಿನಲ್ಲಿರುವ ಸೀಟಿನಷ್ಟು ಶಾಸಕರನ್ನು ರಾಜ್ಯದಲ್ಲಿ ಗೆದ್ದರೆ ಅದೇ ಹೆಚ್ಚು. ಕಾಂಗ್ರೆಸ್, 40ರಿಂದ 50 ಶಾಸಕ ಸ್ಥಾನ ಗೆಲ್ಲುವುದೂ ಅಸಾಧ್ಯ ಎಂದು ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. 120ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. ಅದನ್ನು 79ಕ್ಕೆ ತಂದ ಸಾಧನೆ ಸಿದ್ದರಾಮಯ್ಯ ಅವರದು ಎಂದರು. ʻʻನಿದ್ರೆರಾಮಯ್ಯ, ಎಸಿಬಿ ರಾಮಯ್ಯ ಸೇರಿ ಹಲವು ಹೆಸರು ಅವರಿಗಿದೆʼʼ ಎಂದು ತಿಳಿಸಿದರು.

ʻʻಸಂವಿಧಾನದ ಆಶಯವನ್ನು ಗೌರವಿಸದ, ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದ ಪಕ್ಷ ಕಾಂಗ್ರೆಸ್. ಭಯಭೀತ ಕಾಂಗ್ರೆಸಿಗರು ಹಗಲುಗನಸಿನೊಂದಿಗೆ ಯಾತ್ರೆ ಮಾಡುತ್ತಿದ್ದಾರೆ. 50 ಸೀಟಿನೊಂದಿಗೆ ಎರಡನೇ ಸ್ಥಾನ ಜೆಡಿಎಸ್‍ಗೆ ಸಿಗುತ್ತದೋ ಅಥವಾ ಕಾಂಗ್ರೆಸ್ ಪಕ್ಷಕ್ಕೋ ಎಂದು ನೋಡಬೇಕಿದೆ. ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಕನಿಷ್ಠ ಸ್ಥಾನಕ್ಕೆ ಇಳಿದಂತೆ ಇಲ್ಲಿಯೂ ಆಗಲಿದೆ. ಆ ಪಕ್ಷವು ಭರವಸೆ ಇಲ್ಲದೆ ಸೊರಗಿದೆʼʼ ಎಂದು ನುಡಿದರು.

ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ’ ಪ್ರವಾಸವು ಅರ್ಥಹೀನ ಎಂದು ಟೀಕಿಸಿದರಲ್ಲದೆ, ಕಾಂಗ್ರೆಸ್ ಪಕ್ಷದೊಳಗೆ ಅವರು ಪ್ರಜಾಪ್ರಭುತ್ವ, ಪ್ರಜಾಧ್ವನಿಗೆ ಗೌರವ ಕೊಟ್ಟಿಲ್ಲ. ಆ ಪಕ್ಷದ ಮೂಲಸ್ತಂಭವೇ ಕುಟುಂಬ. ಆ ಪಕ್ಷದಲ್ಲಿ ಪ್ರಜಾಪ್ರಭುತ್ವಕ್ಕೆ ಏನೂ ಮಹತ್ವ ಇಲ್ಲ. ಮಾನ್ಯತೆಯೂ ಇಲ್ಲ. ಆ ಪಕ್ಷವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅದರ ಇಚ್ಛೆ, ಮೂಲ ಉದ್ದೇಶಗಳನ್ನು ಹೇಗೆ ಈಡೇರಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ʻʻಮಹದಾಯಿ ಸಮಸ್ಯೆ ಬಗೆಹರಿಸಲು ಅವರಿಗೆ ಆಗಿರಲಿಲ್ಲ. ನಮ್ಮ ಮುಖ್ಯಮಂತ್ರಿ ಬೊಮ್ಮಾಯಿಯವರ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸಹಕಾರದಿಂದ ಕೇಂದ್ರ ಸರಕಾರದ ನೆರವಿನಿಂದ ಡಿಪಿಆರ್ ಒಪ್ಪಿಗೆ ಪಡೆದು ಅನುಷ್ಠಾನಕ್ಕೆ ಬರುತ್ತಿದೆ. ಎತ್ತಿನಹೊಳೆ ವಿಚಾರದಲ್ಲೂ ಅಷ್ಟೇ. ಅದನ್ನು ಬದ್ಧತೆಯಿಂದ ಜಾರಿಗೊಳಿಸುತ್ತಿದ್ದೇವೆ. ಕೃಷ್ಣಾ ಸೇರಿ ನೀರಾವರಿ ವಿಚಾರದಲ್ಲಿ ಬಹಳಷ್ಟು ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇವೆ. ವಿವೇಕಾನಂದ ಕಾರ್ಯಕ್ರಮದ ಮೂಲಕ ರಾಜ್ಯದ ಉದ್ದಗಲಕ್ಕೆ ಶಾಲೆಗಳನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಒಕ್ಕಲಿಗರ ನಿಗಮಕ್ಕೆ ಹಣ ಕೊಟ್ಟಿಲ್ಲ ಎಂಬ ಆಪಾದನೆ ಸತ್ಯಕ್ಕೆ ದೂರವಾದುದು. ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡದೆ ಸುಳ್ಳು ಹೇಳುತ್ತಿರುವವರ ಯಾತ್ರೆ ಇದೆʼʼ ಎಂದು ಆಕ್ಷೇಪಿಸಿದರು.

ʻʻಕೆ.ಎಚ್.ಮುನಿಯಪ್ಪ, ಪರಮೇಶ್ವರ್, ಖರ್ಗೆ ಸೇರಿ ಹಲವಾರು ನಾಯಕರಿದ್ದಾರೆ. ಇವರ ನಾಯಕರನ್ನು ಜೋಡಿಸಿ ಪಕ್ಷ ಮುಂದೆ ತೆಗೆದುಕೊಂಡು ಹೋಗಬೇಕಿದೆ. ಕಾಂಗ್ರೆಸ್ ಪಕ್ಷವು ವ್ಯಕ್ತಿ ಆಧಾರಿತವಾಗಿದೆ. ನಾವು ಪಕ್ಷ- ಕಾರ್ಯಕರ್ತರ ಆಧರಿತವಾಗಿ ಕೆಲಸ ಮಾಡುತ್ತಿದ್ದೇವೆ. ಇದುವೇ ವ್ಯತ್ಯಾಸʼʼ ಎಂದು ತಿಳಿಸಿದರು.

ಸ್ವಾರ್ಥ ರಾಜಕಾರಣ, ಹಿಂದೂ ಧರ್ಮ ವಿಭಜನೆಗೆ ಯತ್ನ, ಜಾತಿ ಭೇದ, ಭ್ರಷ್ಟಾಚಾರ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಹಿಂದಕ್ಕೆ ಪಡೆದ ಕಾಂಗ್ರೆಸ್ಸಿಗರು ಇವತ್ತು ಭ್ರಷ್ಟಾಚಾರ ಕುರಿತು ಮಾತನಾಡುತ್ತಾರೆ. 40 ಶೇಕಡಾ ಬಗ್ಗೆ ಮಾತನಾಡುತ್ತಾರೆ. ಶೇ 40ರಿಂದ ಶೇ 100 ಭ್ರಷ್ಟಾಚಾರ ಮಾಡಿದವರು ಕಾಂಗ್ರೆಸ್‍ನವರು. ಅವರು ಮಾಡಿದ ಕೆಲಸಗಳನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಸಾಕ್ಷಿ, ಆಧಾರಗಳಿಲ್ಲದೆ ಆಪಾದನೆ ಮಾಡುತ್ತಿದ್ದು, ಆರೋಪ ಮಾಡಿದ ಗುತ್ತಿಗೆದಾರರು ಸೆರೆಮನೆಗೆ ಹೋಗಿದ್ದಾರೆ. ಇವರ ಕುಮ್ಮಕ್ಕಿನಿಂದ ಗುತ್ತಿಗೆದಾರ ನ್ಯಾಯಾಲಯದಲ್ಲಿ ಕಣ್ಣೀರು ಹಾಕುವಂತಾಗಿದೆ ಎಂದು ವಿವರಿಸಿದರು.

ಕಾಂಗ್ರೆಸ್‍ನವರು ತಡಕಾಟ, ಹುಡುಕಾಟದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದವರು ಸಂಪೂರ್ಣ ಹತಾಶ ಸ್ಥಿತಿಯಲ್ಲಿದ್ದಾರೆ. ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಯ ಭಯದಿಂದ ತಡೆಯಾಜ್ಞೆ ತಂದ ಸ್ಟೇ ಸಿದ್ದರಾಮಯ್ಯನವರು ಬೇರೆಯವರ ಕುರಿತು ಅವಹೇಳನಕಾರಿ ಹೇಳಿಕೆ ಕೊಡುತ್ತಾರೆ ಎಂದು ಟೀಕಿಸಿದರು. ಪುಸ್ತಕದಲ್ಲಿ ಏನಿದೆ ಎಂದು ನೋಡಿ ಬಳಿಕ ಮಾನನಷ್ಟ ಮೊಕದ್ದಮೆ ಹಾಕಬಹುದಿತ್ತಲ್ಲವೇ ಎಂದು ಕೇಳಿದರು.

ಸದನದಲ್ಲಿ ಪೌರುಷ ತೋರಿಸದ ಸಿದ್ದರಾಮಯ್ಯ
ಸಿದ್ದರಾಮಯ್ಯ ಸದನದಲ್ಲಿ ತಮ್ಮ ಪೌರುಷವನ್ನು ಯಾಕೆ ತೋರಿಸುತ್ತಿಲ್ಲ? ತುಂಬ ವಿಚಾರ ಗೊತ್ತಿದ್ದರೆ ಮಾತನಾಡಬಹುದಲ್ಲವೇ? ರಾಜ್ಯಕ್ಕೆ ಅತಿ ಹೆಚ್ಚಿನ ಸಾಲ ಪಡೆದುಕೊಂಡವರು ಸಿದ್ದರಾಮಯ್ಯ. ನಾವು ವಿಪರೀತ ಮಳೆ, ಕೋವಿಡ್ ಸೋಂಕಿನ ಕಾಲದಲ್ಲಿ ಆದಾಯ ಸಂಪೂರ್ಣ ಕುಸಿದ ಕಾರಣ ಸಾಲ ಪಡೆದೆವು. ಆಗ ಗರಿಷ್ಠ ಸಾಲ ಪಡೆದ ಸಿದ್ದರಾಮಯ್ಯರು ಈಗ 200 ಯೂನಿಟ್ ಕರೆಂಟ್ ಉಚಿತವಾಗಿ ಕೊಡುವ ಭರವಸೆ ಕೊಡುತ್ತಾರೆ. ಅಧಿಕಾರದಲ್ಲಿದ್ದಾಗ ಪವರ್ ಕಟ್ ಮಾಡಿ, ಬಜೆಟನ್ನು ಲೈಟ್ ಹಾಕಿ ಓದಿ ಮಂಡಿಸಿದ ಮಹಾಪುರುಷ ಅವರು ಎಂದು ತಿಳಿಸಿದರು.

ʻʻಶಿವಕುಮಾರ್ ಜಗತ್ ಪ್ರಖ್ಯಾತರು. ಅವರನ್ನು ಕಾನೂನಿನಡಿ ಪ್ರಶ್ನಿಸಬಾರದು. ಏನು ಭ್ರಷ್ಟಾಚಾರ ಮಾಡಿದರೂ ಮಾಡಪ್ಪ ಎನ್ನಬೇಕು. ಇವರ ಪಾಪದ ಕೊಡ ತುಂಬಿ ತುಳುಕಿ ಹರೀತಿದೆ. ಇವರನ್ನು ಸಂಪೂರ್ಣವಾಗಿ ಮನೆಗೆ ಕಳುಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ʻʻಸ್ಯಾಂಟ್ರೊ ರವಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸರಕಾರ ಸಿದ್ಧವಿದೆʼʼ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್‍ನದು ಕವರ್ ಆಪ್ ಆಪರೇಷನ್. ನಾವು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ. ನೇರವಾಗಿ ಫಲಾನುಭವಿಗೆ ಸೌಲಭ್ಯವನ್ನು (ಡಿಬಿಟಿ) ತಲುಪಿಸುತ್ತಿದ್ದೇವೆ. ಭ್ರಷ್ಟಾಚಾರರಹಿತ ವ್ಯವಸ್ಥೆ ಕಟ್ಟಲು ನಾವು ಮುಂದಾಗಿದ್ದೇವೆ ಎಂದರು.

ಇದು ಪ್ರಜಾದ್ರೋಹ ಯಾತ್ರೆ ಎಂದ ಪಿ. ರಾಜೀವ್‌
ಶಾಸಕ ಪಿ.ರಾಜೀವ್ ಅವರು ಮಾತನಾಡಿ, ರಾಜ್ಯ ಮತ್ತು ದೇಶವನ್ನು ಸುಮಾರು 60 ವರ್ಷ ಆಳ್ವಿಕೆ ಮಾಡಿದ ಕಾಂಗ್ರೆಸ್ ಪಕ್ಷವು ಇವತ್ತು ಪ್ರಜಾಧ್ವನಿ ಯಾತ್ರೆ ಕೈಗೊಂಡಿದೆ. ಅದು ಕಾಂಗ್ರೆಸ್ ಪಕ್ಷ ಮಾಡಿದ ದ್ರೋಹಕ್ಕೆ ಶೋಕದ ಯಾತ್ರೆ. ದೇಶಕ್ಕೆ ಮಾಡಿದ ಅಕ್ಷಮ್ಯ ಅಪರಾಧಕ್ಕಾಗಿ ಇದು ಪ್ರಜಾದ್ರೋಹ ಯಾತ್ರೆ ಎಂದು ಜನತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಜೆಗಳ ಧ್ವನಿಯನ್ನು ಕಾಂಗ್ರೆಸ್ ಆಲಿಸಿದ್ದರೆ ಇವತ್ತು ಆ ಪಕ್ಷಕ್ಕೆ ಇಂಥ ದುರ್ಗತಿ ಬರುತ್ತಿರಲಿಲ್ಲ. ಕಾಂಗ್ರೆಸ್‍ನದು ಓಡುವ ಬಸ್ಸಲ್ಲ. ದೂಡುವ ಬಸ್ಸಾಗಿದೆ. ಒಬ್ಬರ ಕೈಯಲ್ಲೇ ಸ್ಟೇರಿಂಗ್ ಇರದ ಬಸ್ ಅದು. ಸಿದ್ದರಾಮಯ್ಯರ ಕೈಯಲ್ಲಿ ಸ್ಟೇರಿಂಗ್ ಇದ್ದರೆ ಡಿ.ಕೆ.ಶಿವಕುಮಾರ್ ಕಾಲಲ್ಲಿ ಬ್ರೇಕ್ ಇದೆ. ಕಾಂಗ್ರೆಸ್ ಪಕ್ಷ ಪ್ರಜೆಗಳ ಧ್ವನಿಯನ್ನು ಆಲಿಸಿದ್ದರೆ ಭಗತ್ ಸಿಂಗ್ ನೇಣಿಗೆ ಏರುವುದನ್ನು ತಪ್ಪಿಸಬಹುದಾಗಿತ್ತು ಎಂದರು.

ಸುಭಾಷ್ ಚಂದ್ರ ಬೋಸ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ರಾಜೀನಾಮೆ ಕೊಟ್ಟು ಹೊರಬರಬೇಕಾಯಿತು. ಕಾಂಗ್ರೆಸ್ ಪ್ರಜೆಗಳ ಧ್ವನಿ ಆಲಿಸಿದ್ದರೆ ಭಾರತ ಇಬ್ಭಾಗ ಆಗುತ್ತಿರಲಿಲ್ಲ. ಪಾಕಿಸ್ತಾನದ ಸೃಷ್ಟಿ ಆಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷ ಜನರ ಧ್ವನಿಯನ್ನು ಆಲಿಸಿದ್ದರೆ ಚೀನಾಗೆ 40 ಸಾವಿರ ಚದರ ಕಿಮೀ ವಿಸ್ತೀರ್ಣವನ್ನು ಬಿಟ್ಟು ಕೊಡುತ್ತಿರಲಿಲ್ಲ. ಜನರ ಧ್ವನಿ ಆಲಿಸಿದ್ದರೆ ರಾಮಜನ್ಮಭೂಮಿಯಲ್ಲಿ ಯಾವತ್ತೋ ರಾಮ ಮಂದಿರ ನಿರ್ಮಾಣ ಆಗುತ್ತಿತ್ತು ಎಂದು ರಾಜೀವ್ ವಿಶ್ಲೇಷಿಸಿದರು.

ದೇಶದ ಜನರ ಧ್ವನಿ ಆಲಿಸಿದ್ದರೆ 370ನೇ ಪರಿಚ್ಛೇದ ಯಾವತ್ತೋ ರದ್ದಾಗುತ್ತಿತ್ತು. ಕಾಶ್ಮೀರ ಈ ಭಾರತದ ಮುಕುಟವಾಗಿ ಆಗಲೇ ಮಿಂಚಲು ಸಾಧ್ಯ ಆಗುತ್ತಿತ್ತು. ದಲಿತರ ಮೀಸಲಾತಿ ಯಾವತ್ತೋ ಹೆಚ್ಚಾಗುತ್ತಿತ್ತು. ದಲಿತರ ಮೂಗಿಗೆ ತುಪ್ಪ ಹಚ್ಚಿ ದಶಕಗಳ ವರೆಗೆ ದೇಶವನ್ನು ದುರ್ಗತಿಗೆ ತರುವುದು ತಪ್ಪುತ್ತಿತ್ತು. ದಲಿತರಿಗೆ ಯಾವತ್ತೋ ಉಚಿತ ಕರೆಂಟ್ ಕೊಡಬಹುದಿತ್ತು. ಉಚಿತ ವಿದ್ಯುತ್ ಕೊಡಲು ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರಕಾರ ಬರಬೇಕಾಯಿತು ಎಂದು ವಿವರಿಸಿದರು.‌

ಹಳ್ಳಿಯ ಮಕ್ಕಳು ಶಿಕ್ಷಣ ವಂಚಿತರಾಗಿದ್ದರು. ಸೈಕಲ್ ಕೊಡಲು ಯಡಿಯೂರಪ್ಪ ಬರಬೇಕಾಯಿತು. ದೇಶದ ಹಸಿವನ್ನು ನೀಗಿಸಿದ ರೈತ ಉಪವಾಸ ಇರುತ್ತಿರಲಿಲ್ಲ. ಪ್ರಜಾ ಧ್ವನಿ ಆಲಿಸಿದ್ದರೆ ರೈತರಿಗೆ, ಕೃಷಿಕರಿಗೆ ಯಾವತ್ತೋ ಸನ್ಮಾನ ಸಿಗುತ್ತಿತ್ತು. ಆದರೆ, ಅವತ್ತು ಪ್ರಜೆಗಳ ಧ್ವನಿ ಆಲಿಸಲಿಲ್ಲ. ನರೇಂದ್ರ ಮೋದಿಯವರು ಕೃಷಿಕರಿಗೆ ಸನ್ಮಾನ ಮಾಡುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | Congress Guarantee | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಉಚಿತ ವಿದ್ಯುತ್‌: ಪ್ರಜಾಧ್ವನಿ ಯಾತ್ರೆಯಲ್ಲಿ ಮೊದಲನೆ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಹಾಸನ

Dengue Fever: ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರದಿಂದ ನಾಲ್ಕನೇ ಬಾಲಕಿ ಬಲಿ

Dengue Fever: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು.

VISTARANEWS.COM


on

dengue fever hassan news
Koo

ಹಾಸನ:‌ ಹಾಸನ ಜಿಲ್ಲೆಯಲ್ಲಿ (Hassan news) ಮಾರಕ ಡೆಂಗ್ಯು ಜ್ವರ (Dengue Fever) ಆರ್ಭಟ ಮುಂದುವರಿದಿದ್ದು, ಶಂಕಿತ ಡೆಂಗ್ಯುವಿಗೆ ಮತ್ತೊಬ್ಬ ಬಾಲಕಿ (Girl child death) ಬಲಿಯಾಗಿದ್ದಾಳೆ. ನಿನ್ನೆಯವರೆಗೂ ಹಾಸನ ಜಿಲ್ಲೆಯಲ್ಲಿ ಮೂವರು ಹೆಣ್ಣು ಮಕ್ಕಳು ಜ್ವರದಿಂದ ಮೃತಪಟ್ಟಿದ್ದರು. ಇದು ನಾಲ್ಕನೇ ಸಾವು.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಾಳೆ.

ಇದರಿಂದ, ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುವಿಗೆ ನಾಲ್ವರು ಬಾಲಕಿಯರು ಬಲಿಯಾದಂತಾಗಿದೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಮೂರು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ಜುಲೈ 1ರಂದು ಅರಕಲಗೂಡು ಮೂಲದ ಅಣ್ಣಪ್ಪಶೆಟ್ಟಿ ಹಾಗು ಪದ್ಮ ದಂಪತಿ ಪುತ್ರಿ ಅಕ್ಷತಾ (13) ಸಾವಿಗೀಡಾಗಿದ್ದಾಳೆ. ಜೂನ್ 30ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಮೂಲದ ವರ್ಷಿಕಾ(8) ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬುಧವಾರ ಹೊಳೆನರಸೀಪುರ ತಾಲ್ಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಾಳೆ. ಈಕೆ ಹೊಳೆನರಸೀಪುರ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ಮತ್ತು ತನುಜ ಎಂಬವರ ಪುತ್ರಿ.

ಪುಟ್ಟ ಮಕ್ಕಳ‌ ಪ್ರಾಣಕ್ಕೆ ಡೆಂಗ್ಯು ಕಂಟಕವಾಗುತ್ತಿದೆ ಎಂಬ ಭೀತಿ ಎದುರಾಗುತ್ತಿದೆ. ಮಕ್ಕಳು ಹಗಲು ಹೊರಗಡೆ ನಿರ್ಬೀತಿಯಿಂದ ಆಟವಾಡುತ್ತಾರೆ. ಡೆಂಗ್ಯು ಹರಡುವ ಸೊಳ್ಳೆಗಳು ಹಗಲಿನಲ್ಲಿ ಸಕ್ರಿಯವಾಗಿದ್ದು, ಬಯಲಿನಲ್ಲಿ ಸುಲಭವಾಗಿ ಸಿಗುವ ಮಕ್ಕಳನ್ನು ಕಚ್ಚುತ್ತಿವೆ. ಹೀಗಾಗಿ ಮಕ್ಕಳಲ್ಲಿ ಡೆಂಗ್ಯು ಪೀಡಿತರು ಜಾಸ್ತಿ ಎಂದು ತರ್ಕಿಸಲಾಗಿದೆ.

ಜ್ವರ ತೀವ್ರಗೊಂಡ ಬಳಿಕ ಮಕ್ಕಳು ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಜ್ವರದಿಂದ ಬಳಲಿದ ಮಕ್ಕಳ ಸರಣಿ ಸಾವಿನಿಂದ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ 205 ಜನರಿಗೆ ಡೆಂಗ್ಯು ಜ್ವರ ದೃಡಪಟ್ಟಿದೆ. ಸುಮಾರು 6204 ಜನರಿಗೆ ಡೆಂಗ್ಯು ಲಕ್ಷಣಗಳು ಕಾಣಿಸಿಕೊಂಡಿವೆ. ಜ್ವರ, ಮೈ ಕೈ ನೋವು ಸೇರಿ ಡೆಂಗ್ಯು ಲಕ್ಷಣ ಇರುವ ಆರು ಸಾವಿರ ಜನರ ರಕ್ತದ ಮಾದರಿ ಸಂಗ್ರಹಿಸಲಾಗಿದೆ.

ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಡೆಂಗ್ಯು ವ್ಯಾಪಕವಾಗಿ ಹರಡುತ್ತಿದೆ. ನಿಂತ ನೀರಿನಲ್ಲಿ ಡೆಂಗ್ಯು ಸೊಳ್ಳೆಗಳು ಹುಟ್ಟಿಕೊಳ್ಳುತ್ತಿವೆ. ಡೆಂಗ್ಯು ನಿಯಂತ್ರಣ ಮಾಡುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಜನ ಆಕ್ರೋಶಿಸಿದ್ದಾರೆ.

ಡೆಂಗ್ಯು ಜ್ವರ ಪರೀಕ್ಷೆಗೆ ದರ ನಿಗದಿ

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಇದನ್ನೂ ಓದಿ: Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Road Accident: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮತ್ತು ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯು ಶಿರಾ ತಾಲೂಕಿನ ಸೀಬಿ ಅರಣ್ಯ ಪ್ರದೇಶ ಸಮೀಪದ ಶಿರಾ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಗುರುವಾರ ಸಂಜೆ ಜರುಗಿದೆ.

VISTARANEWS.COM


on

A lorry collided with a bike Two persons died on the spot
Koo

ಶಿರಾ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮತ್ತು ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯು ಶಿರಾ ತಾಲೂಕಿನ ಸೀಬಿ ಅರಣ್ಯ ಪ್ರದೇಶ ಸಮೀಪದ ಶಿರಾ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಗುರುವಾರ ಸಂಜೆ (Road Accident) ನಡೆದಿದೆ.

ತಾಲೂಕಿನ ಚಿಕ್ಕ ಸೀಬಿ ಗ್ರಾಮದ ಲಿಂಗರಾಜ್ (20) ಮೃತ ಬೈಕ್ ಸವಾರ ಮತ್ತು ಹಿಂಬದಿಯಲ್ಲಿ ಇದ್ದ‌ ಸಿದ್ದಲಿಂಗಪ್ಪ (50) ಅಪಘಾತದಲ್ಲಿ ಮೃತಪಟ್ಟವರು. ಗುರುವಾರ ಮಧ್ಯಾಹ್ನ ತಮ್ಮ ಸ್ವಗ್ರಾಮ ಚಿಕ್ಕ ಸೀಬಿಯಿಂದ ದೊಡ್ಡ ಅಲದ ಮರದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ.

ಇದನ್ನೂ ಓದಿ: Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

ತುಮಕೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿಯ ಚಕ್ರ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಹಾಗೂ ಶಿರಾ ಉಪ ವಿಭಾಗದ ಡಿವೈಎಸ್‌ಪಿ ಬಿ.ಕೆ. ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Drowned In Water: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಹೊಸನಗರದಲ್ಲಿ ಗುರುವಾರ ಜರುಗಿದೆ. ಹೊಸನಗರ ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

VISTARANEWS.COM


on

Drowned In Water A woman died while crossing the kalu sanka
Koo

ಹೊಸನಗರ: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು (Drowned In Water) ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

ಮೃತ ಮಹಿಳೆ ಶಶಿಕಲಾ ಬೆಳಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ದುಮುಕದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿ ಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಇದನ್ನೂ ಓದಿ: Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading
Advertisement
dengue fever hassan news
ಹಾಸನ6 mins ago

Dengue Fever: ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರದಿಂದ ನಾಲ್ಕನೇ ಬಾಲಕಿ ಬಲಿ

Hot Corn Recipe
ಆಹಾರ/ಅಡುಗೆ38 mins ago

Hot Corn Recipe: ಮಳೆಗಾಲದಲ್ಲಿ ಬಿಸಿಬಿಸಿಯಾದ ಜೋಳವನ್ನು ಮನೆಯಲ್ಲೇ ಮಾಡುವುದು ಹೇಗೆ?

karnataka Weather Forecast Rain
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Vastu Tips
ಧಾರ್ಮಿಕ2 hours ago

Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ

Dina Bhavishya
ಭವಿಷ್ಯ2 hours ago

Dina Bhavishya :‌ ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಗುಡ್‌ ನ್ಯೂಸ್

Team India
ಪ್ರಮುಖ ಸುದ್ದಿ8 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ8 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ8 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ8 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ8 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ13 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ15 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ16 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ18 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ18 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ19 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ20 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌