BCCI President | ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ನಿರಾಳ; ಸ್ವಹಿತಾಸಕ್ತಿ ದೂರಿನಿಂದ ಮುಕ್ತಿ - Vistara News

ಕ್ರಿಕೆಟ್

BCCI President | ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ನಿರಾಳ; ಸ್ವಹಿತಾಸಕ್ತಿ ದೂರಿನಿಂದ ಮುಕ್ತಿ

ಸೊಸೆ ಮಾಯಾಂತಿ ಲ್ಯಾಂಗರ್​ ಸ್ಟಾರ್​ಸ್ಪೋರ್ಟ್ಸ್​ನಲ್ಲಿ ಕೆಲಸ ಮಾಡುವುದರಿಂದ ರೋಜರ್​ ಬಿನ್ನಿ ಸ್ವಜನಪಕ್ಷಪಾತ ಮಾಡಿದಂತಾಗುವುದಿಲ್ಲ ಎಂದು ನೈತಿಕ ಅಧಿಕಾರಿ ವರದಿ ನೀಡಿದ್ದಾರೆ.

VISTARANEWS.COM


on

mayanti langer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಬಿಸಿಸಿಐ ಅಧ್ಯಕ್ಷರಾದ ಬೆನ್ನಲ್ಲೇ ಬಂದೆರಗಿದ ಸ್ವಜನಪಕ್ಷಪಾತದ ಆರೋಪದಿಂದ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮುಕ್ತರಾಗಿದ್ದಾರೆ. ಬಿಸಿಸಿಐ ನೈತಿಕ ಅಧಿಕಾರಿ ಹಾಗೂ ನಿವೃತ್ತ ನ್ಯಾಯಾಧೀಶ ವಿನೀತ್​ ಸರಣ್, ಬಿನ್ನಿ ವಿರುದ್ಧ ನೀಡಿದ್ದ ದೂರು ಆಧಾರ ರಹಿತ ಎಂದ ಹೇಳಿ ತಿರಸ್ಕರಿಸಿದ್ದಾರೆ. ಈ ಮೂಲಕ ಮಧ್ಯಪ್ರದೇಶ ಕ್ರಿಕೆಟ್​ ಸಂಸ್ಥೆಯ ಮಾಜಿ ಸದಸ್ಯ ಸಂಜೀವ್ ಗುಪ್ತಾ ಅವರು ನೀಡಿದ್ದ ದೂರನ್ನು ಅಲ್ಲಗೆಳೆಯಲಾಗಿದೆ.

ರೋಜರ್​ ಬಿನ್ನಿ ಅವರ ಪುತ್ರ ಸ್ಟುವರ್ಟ್​ ಬಿನ್ನಿಯ ಪತ್ನಿ ಮಾಯಾಂತಿ ಲ್ಯಾಂಗರ್​ ಬಿಸಿಸಿನಿಂದ ನೇರ ಪ್ರಸಾರದ ಹಕ್ಕುಗಳನ್ನು ಪಡೆದಿರುವ ಸ್ಟಾರ್​ ಸ್ಪೋರ್ಟ್ಸ್​ನಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಬಿಸಿಸಿಐನ ನೂತನ ಸಂವಿಧಾನದ ಪ್ರಕಾರ ಸ್ವಜನಪಕ್ಷಪಾತದ ಪ್ರಕರಣವಾಗಿರುತ್ತದೆ. ಹೀಗಾಗಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಸಬೇಕು ಎಂಬುದಾಗಿ ಸಂಜಯ್​ ಗುಪ್ತಾ ದೂರಿದ್ದರು.

ದೂರಿನ ವಿಚಾರಣೆ ನಡೆಸಿದ ನೈತಿಕ ಅಧಿಕಾರಿ ವಿನೀತ್​ ಸರಣ್​, 20 ಅಂಶಗಳ ವರದಿಯನ್ನು ಬಿಡುಗಡೆ ಮಾಡಿದೆ. ಅವರ ಪ್ರಕಾರ, ಮಾಯಾಂತಿ ಲ್ಯಾಂಗರ್ ಅವರು ಸ್ಟಾರ್​ ಸ್ಪೋರ್ಟ್ಸ್​ನ ಯಾವುದೇ ಮಾರುಕಟ್ಟೆ ವ್ಯವಹಾರಗಳನ್ನು ನಡೆಸುವುದಿಲ್ಲ. ಅವರು ಗುತ್ತಿಗೆ ಆಧಾರದಲ್ಲಿ ಚಾನೆಲ್​ಗೆ ಕೆಲಸ ಮಾಡುತ್ತಿದ್ದಾರೆ. ಸ್ಟಾರ್​ ಸ್ಪೋರ್ಟ್ಸ್​ಗೆ ನ್ಯಾಯಬದ್ಧವಾಗಿಯೇ ಬಿಸಿಸಿಐ ಗುತ್ತಿಗೆಯನ್ನು ನೀಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ | Roger Binny | ಬಿಸಿಸಿಐ ಮೇಲೆ ಐಸಿಸಿಗೆ ಒಲವಿದೆ ಎನ್ನುವುದು ಶುದ್ಧ ಸುಳ್ಳು; ರೋಜರ್​ ಬಿನ್ನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

RCB vs CSK: ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ ಅನುವು ಮಾಡಿಕೊಡುವುದು ಬಹುತೇಖ ಅನುಮಾನ ಎನ್ನುವಂತಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಇದೀಗ ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶ ಪಡೆಯಬೇಕಿದ್ದರೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ ಪಂದ್ಯ ರದ್ದಾದರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಹೇಗಾದರೂ ಪಂದ್ಯದ ದಿನ ಮಳೆ ಬಾರದಿರಲಿ ಎಂದು ಆರ್​ಸಿಬಿ ಆಟಗಾರರು ಡ್ರೆಸಿಂಗ್​ ರೋಮ್​ನಲ್ಲಿ ಹರೇ ರಾಮ ಹರೇ ರಾಮ, ರಾಮ ರಾಮ ಹರೇ ಹರೇ, ಹರೇ ಕೃಷ್ಣ ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ ಎಂದು ಕೃಷ್ಣ ನಾಮ ಜಪಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಅಸಲಿಗೆ ಆರ್​ಸಿಬಿ ಆಟಗಾರರು ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿಲ್ಲ. ಬದಲಾಗಿ ನೆಟ್ಟಿಗರು ಈ ವಿಡಿಯೊವನ್ನು ಎಡಿಟ್​ ಮಾಡಿ ವೈರಲ್​ ಮಾಡಿದ್ದಾರೆ. ಪ್ರತಿ ಪಂದ್ಯ ಗೆದ್ದಾಗ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಿಸುತ್ತಾರೆ. ಈ ವಿಡಿಯೊಗೆ ಕೃಷ್ಣ ನಾಮ ಜಪವನ್ನು ಮತ್ತು ಹವಾಮಾನ ಇಲಾಖೆಯ ವರದಿಯ ಫೋಟೊವನ್ನು ಎಡಿಟ್​​ ಮಾಡಲಾಗಿದೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು, ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

Continue Reading

ಕ್ರೀಡೆ

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

RCB vs CSK: ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

VISTARANEWS.COM


on

RCB vs CSK
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮೇ 18 ರ ಶನಿವಾರ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (IPL 2024) 17ನೇ ಆವೃತ್ತಿಯ ಐಪಿಎಲ್​ನ ತಮ್ಮ ಅತಿದೊಡ್ಡ ಪಂದ್ಯವನ್ನಾಡಲು ಸಜ್ಜಾಗಿವೆ. ಎರಡೂ ತಂಡಗಳಿಗೂ ಪ್ಲೇಆಫ್ ಅರ್ಹತೆ ಪಡೆಯಲು ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಆದರೆ, ಪಂದ್ಯಕ್ಕೆ ಮಳೆ ಭೀತಿ(rcb vs csk match weather) ಎದುರಾಗಿರುವುದು ಇತ್ತಂಡಗಳಿಗೆ ಆತಂಕ ಪಡುವಂತೆ ಮಾಡಿದೆ. ಈ ಪಂದ್ಯದ ಮಳೆ ನಿಯಮ ಹೇಗಿದೆ ಎನ್ನುವ ಮಾಹಿತಿ ಇಂತಿದೆ.

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

Virat Kohli: ದಾನೀಶ್ ಸೇಠ್ ಅವರು ಸಂದರ್ಶನದ ವೇಳೆ ಕೊಹ್ಲಿ ಜತೆ ಹಲವು ತರ್ಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದೇ ವೇಳೆ ನ್ಯಾಗ್ಸ್ ಒಂದು ಐಪಿಎಲ್​ಗೆ ಇನ್ನೊಂದು ಡಬ್ಲ್ಯುಪಿಎಲ್​ಗೆ ಎಂದು ಹೇಳುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆರ್​ಸಿಬಿ(RCB) ತಂಡ ನಾಳೆ ನಡೆಯುವ 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ತನ್ನ ಕೊನೆಯಲೀಗ್​ ಪಂದ್ಯವನ್ನು ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಯ ಇನ್‌ಸೈಡರ್ ​ಮಿಸ್ಟರ್, ನ್ಯಾಗ್ಸ್(mr nags) ಖಾತಿಯ ದಾನೀಶ್ ಸೇಠ್(danish sait) ಅವರು ವಿರಾಟ್​ ಕೊಹ್ಲಿ(Virat Kohli) ಜತೆಗೆ ಸಂದರ್ಶನವೊಂದನ್ನು ಮಾಡಿದ್ದಾರೆ. ಈ ಸಂದರ್ಶನದಲ್ಲಿ ಕೊಹ್ಲಿ ತಮ್ಮ ಮಗಳು ವಮಿಕಾ(vamika) ಕೂಡ ಕ್ರಿಕೆಟ್​ ಪ್ರಿಯೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ದಾನೀಶ್ ಸೇಠ್ ಅವರು ಸಂದರ್ಶನದ ವೇಳೆ ಕೊಹ್ಲಿ ಜತೆ ಹಲವು ತರ್ಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದೇ ವೇಳೆ ಪಾಪು ಹೇಗಿದೆ ಎಂದು ಕೇಳಿದಾಗ ಪಾಪು ಅದು ಯಾರು ಎಂದು ಕೊಹ್ಲಿ ಮರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನ್ಯಾಗ್ಸ್ ಅಕಾಯ್​ ಎಂದು ಹೇಳಿದ್ದಾರೆ. ಹೋ.. ಮಗನಾ ಆರೋಗ್ಯವಾಗಿದ್ದಾನೆ ಎಂದು ಹೇಳುತ್ತಾರೆ. ಇದೇ ವೇಳೆ ನ್ಯಾಗ್ಸ್ ಒಂದು ಐಪಿಎಲ್​ಗೆ ಇನ್ನೊಂದು ಡಬ್ಲ್ಯುಪಿಎಲ್​ಗೆ ಎಂದು ಕೊಹ್ಲಿಯ ಕಾಲೆಳೆದಿದ್ದಾರೆ. ಈ ಮಾತು ಕೇಳಿದ ಕೊಹ್ಲಿ ಅರೇ ಏನು ಹೇಳುತ್ತಿದ್ದಿಯಾ ಮಾರಾಯ ಎಂದು ಹಿಂದಿಯಲ್ಲಿ ಹೇಳುವ ಮೂಲಕ ನಗಾಡಿದ್ದಾರೆ.

ಇದೇ ವೇಳೆ ತನ್ನ ಮಗಳಿಗೂ ಕ್ರಿಕೆಟ್​ ಎಂದರೆ ಅಚ್ಚು ಮೆಚ್ಚು ಅವಳು ಈಗಲೇ ಬ್ಯಾಟಿಂಗ್​ ಮಾಡುತ್ತಾ ಆಡುತ್ತಿದ್ದಾಳೆ. ಆದರೆ ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ತಿಳಿದಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. ಅವರ ಈ ಮಾತನ್ನು ಗಮನಿಸುವಾಗ ಮಗಳಿಗೆ ಯಾವ ಕ್ಷೇತ್ರದಲ್ಲಿಯೂ ಮುಂದುವರಿಯುವ ಸಂಪೂರ್ಣ ಸ್ವಾತಂತ್ರ್ಯ ಕೊಹ್ಲಿ ನೀಡಲಿದ್ದಾರೆ ಎನ್ನುವುದು ಅರ್ಥವಾಗುತ್ತದೆ. ಅಪ್ಪನಂತೆ ಮಗಳು ಕೂಡ ಭಾರತ ಮಹಿಳಾ ಕ್ರಿಕೆಟ್​ನಲ್ಲಿ ಸಾಧನೆ ಮಾಡಲಿ ಎಂದು ಕೊಹ್ಲಿಯ ಅಭಿಮಾನಿಗಳು ಹಾರೈಸಲಾರಂಭಿಸಿದ್ದಾರೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಕೊಹ್ಲಿ ತಮ್ಮ ನಿವೃತ್ತಿ(Virat Kohli restaurant) ವಿಚಾರದ ಬಗ್ಗೆ ಮಾತನಾಡಿದ್ದು, ಒಬ್ಬ ಕ್ರೀಡಾಪಟುವಾದ ಮೇಲೆ ಇಂದಲ್ಲ ನಾಳೆ, ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ ಎಂದು ಹೇಳಿದ್ದಾರೆ. ಇದು  ಅವರ ಅಭಿಮಾನಿಗಳಿಗೆ ಭಾರೀ ಆತಂಕ ಉಂಟುಮಾಡುವಂತೆ ಮಾಡಿದೆ. 

ಸಂದರ್ಶನವೊಂದರಲ್ಲಿ ಕೊಹ್ಲಿಗೆ ಸಕ್ಸಸ್​​ ಹಿಂದೆ ಯಾಕಿಷ್ಟು ಹಸಿವಿನಿಂದ ಓಡುತ್ತಿದ್ದೀರಿ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳಿದರು.

‘ನನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ನನಗೆ ಯಾವುದೇ ವಿಷಾದ ಇರಬಾರದು. ಖಂಡಿತವಾಗಿ ಆ ರೀತಿ ನಾನು ಮಾಡಿಕೊಳ್ಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಒಮ್ಮೆ ನಾನು ಕ್ರಿಕೆಟ್​ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ. ನಾನು ಆಡುವ ಕೊನೆವರೆಗೂ ನನ್ನಲ್ಲಿರುವ ಬೆಸ್ಟ್​ ಅನ್ನು ನೀಡಲು ಬಯಸುತ್ತೇನೆ. ಅದೊಂದೇ ನನ್ನನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯ ಬಗೆಗಿನ ಸ್ಪಷ್ಟತೆಯನ್ನು ತಿಳಿಸಿದರು. ಕೊಹ್ಲಿಯ ಈ ಹೇಳಿಕೆ ಕಂಡು ಅವರ ಅಭಿಮಾನಿಗಳು ಆತಂಕಕ್ಕೆ ಒಳಪಟ್ಟಿದ್ದು, ಶೀಘ್ರದಲ್ಲೇ ಕೊಹ್ಲಿ ನಿವೃತ್ತಿ ಹೇಳಲಿದ್ದಾರಾ? ಎಂದು ಚಿಂತೆ ಪಡುವಂತೆ ಮಾಡಿದೆ.

Continue Reading

ಕ್ರೀಡೆ

IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

IPL Ticket Scam:ಚೆನ್ನೈ ಮತ್ತು ಆರ್​ಸಿಬಿ ನಡುವಣ ಪಂದ್ಯಕ್ಕೆ ಹವಾಮಾನ ಇಲಾಖೆ ಶೇ.89 ರಷ್ಟು ಮಳೆ(Rain forecast for Bengaluru) ಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ.

VISTARANEWS.COM


on

IPL Ticket Scam
Koo

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​(CSK)​ ಮತ್ತು ಆರ್​ಸಿಬಿ(RCB vS CSK) ಪಂದ್ಯದ ಟಿಕೆಟ್​ ಖರೀದಿಸಲು(IPL Ticket Scam) ಹೋಗಿ ಬೆಂಗಳೂರು ಮೂಲದ ಅಭಿಮಾನಿಯೊಬ್ಬ ಬರೋಬ್ಬರಿ 3 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಬದ್ಧ ಎದುರಾಳಿಗಳಾಗಿರುವ, ಪ್ಲೇ ಆಫ್​(IPL 2024) ಹಂತಕ್ಕೇರಲು ಮಹತ್ವದ ಪಂದ್ಯವಾಗಿರುವ ಕಾರಣ ಈ ಪಂದ್ಯದ ಕಾವು ಹೆಚ್ಚಾಗಿದೆ. ಹೀಗಾಗಿ ಈ ಪಂದ್ಯ ನೋಡಲು ಅಭಿಮಾನಿಗಳು ಕಾಳಸಂತೆಯಲ್ಲಿ ದುಬಾರಿ ಬೆಲೆ ಕೊಟ್ಟು ಟಿಕೆಟ್​ ಖರೀದಿ ಮಾಡುತ್ತಿದ್ದಾರೆ.

ಪದ್ಮ ಸಿನ್ಹಾ ವಿಜಯ್‌ ಕುಮಾರ್‌ ಎನ್ನುವಾತ ipl_2024_tickets_24 ಎಂಬ ಖಾತೆಯ ಮೂಲಕ ಪಂದ್ಯಗಳ ಟಿಕೆಟ್​ ಬುಕ್ಕಿಂಗ್​ ಮಾಡಿಕೊಡಲಾಗುವುದು ಎಂದು ಹೇಳಿ ತನ್ನ ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಮಾಹಿತಿ ಎಲ್ಲವನ್ನೂ ಹಂಚಿಕೊಂಡು, ಪ್ರತಿ ಟಿಕೆಟ್‌ಗೆ 2,300 ರೂ. ದರದಂತೆ 3 ಟಿಕೆಟ್‌ಗೆ 7,900 ರೂ. ನಿಗದಿ ಪಡಿಸಿದ್ದ. ಈ ಮೂಲಕ ಟಿಕೆಟ್‌ ಖರೀದಿಸಲು ಬರುವವರ ವಿಶ್ವಾಸ ಸಂಪಾದಿಸಿದ್ದ. ಇದನ್ನು ನಂಬಿದ ಬೆಂಗಳೂರು ಮೂಲದ 28 ವರ್ಷದ ಅಭಿಮಾನಿಯೊಬ್ಬ ಟಿಕೆಟ್​ ಖರೀದಿಸಲು ಮುಂದಾಗಿ ತನ್ನ ಖಾತೆಯಲ್ಲಿದ್ದ 3 ಲಕ್ಷ ಕಳೆದುಕೊಂಡಿದ್ದಾನೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

ವಿಜಯ್‌ ಕುಮಾರ್‌ ಆನ್‌ಲೈನ್‌ ಪಾವತಿ ಭರವಸೆ ನೀಡಿದ್ದಂತೆ ಈ ಅಭಿಮಾನಿಗೆ 3 ಇ-ಟಿಕೆಟ್‌ಗಳನ್ನು ವರ್ಗಾಯಿಸಿದ್ದಾನೆ. ಆದರೆ, ಹಣ ಪಾವತಿ ನಿಲ್ಲದೆ ಆಗಾಗ ಈ ಅಭಿಮಾನಿಯ ಖಾತೆಯಿಂದ 7,900 ರೂ.ಗಳಂತೆ ಹಣ ವರ್ಗಾವಣೆ ಆಗಿ 3 ಲಕ್ಷ ರೂ,ಗಳಿಗೂ ಅಧಿಕ ಮೊತ್ತ ವಂಚಕನ ಖಾತೆಗೆ ಸೇರಿದೆ. ಈ ವೇಳೆ ಅಭಿಮಾನಿ ವಿಜಯ್‌ ಕುಮಾರ್‌ಗೆ ಕರೆ ಮಾಡಿ ವಿಚಾರಿಸಿದಾಗ ತಾಂತ್ರಿಕ ದೋಷ ಕಾರಣ ಹೀಗಾಗಿದ್ದು, ಹಣವನ್ನು ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾನೆ. ಆ ಬಳಿಕವೂ ಕೂಡ ಹಣ ವರ್ಗಾವಣೆ ನಡೆದ ಕಾರಣ ಅನುಮಾನಗೊಂಡ ಅಭಿಮಾನಿ ಪೊಲೀಸರಿಗೆ ದೂರು ನೀಡಿದ್ದಾನೆ. ಹಣ ಪಾವತಿಯನ್ನು ತಡೆಯುವ ಹೊತ್ತಿಗಾಗಲೇ 3 ಲಕ್ಷ ರೂ. ಗಳಿಗೂ ಅಧಿಕ ಮೊತ್ತವನ್ನು ಕಳೆದುಕೊಂಡಿದ್ದ. ಸದ್ಯ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

​ಭಾರೀ ಮಳೆ ಎಚ್ಚರಿಕೆ


ಚೆನ್ನೈ ಮತ್ತು ಆರ್​ಸಿಬಿ ನಡುವಣ ಪಂದ್ಯಕ್ಕೆ ಹವಾಮಾನ ಇಲಾಖೆ ಶೇ.89 ರಷ್ಟು ಮಳೆ(Rain forecast for Bengaluru) ಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ. 15 ಅಂಕ ಪಡೆಯುವ ಚೆನ್ನೈ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಈಗಾಗಲೇ ಮೂರು ತಂಡಗಳಾದ ಕೆಕೆಆರ್​, ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ಪ್ಲೇ ಆಫ್​ ತಲುಪಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading
Advertisement
Prajwal Revanna Case Lawyer Devarajegowda sent to judicial custody End of police custody
ಕ್ರೈಂ32 mins ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ45 mins ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್47 mins ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ49 mins ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್1 hour ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು1 hour ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ1 hour ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್1 hour ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

1 year of CM Siddaramaiah government BJP prepares chargesheet and Congress gears up for counter
ರಾಜಕೀಯ2 hours ago

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

RCB vs CSK
ಕ್ರೀಡೆ2 hours ago

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌