ವಿಸ್ತಾರ ಸಂಪಾದಕೀಯ | ಸರ್ಕಾರ ಮದ್ಯ ಸೇವನೆ ವಯಸ್ಸಿನ ಮಿತಿ ಇಳಿಸಲು ಹೊರಟಿದ್ದು ಅನಾಹುತಕಾರಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ | ಸರ್ಕಾರ ಮದ್ಯ ಸೇವನೆ ವಯಸ್ಸಿನ ಮಿತಿ ಇಳಿಸಲು ಹೊರಟಿದ್ದು ಅನಾಹುತಕಾರಿ

ರಾಜ್ಯದ ಬೊಕ್ಕಸ ತುಂಬಲು ಯುವ ಜನತೆಯನ್ನು ಕುಡುಕರನ್ನಾಗಿ ಮಾಡಬೇಕೆ? ಇದು ನಾಚಿಕೆಗೇಡಿನ ವಿಚಾರ. ಸೋರಿಕೆ, ಭ್ರಷ್ಟಾಚಾರ ತಡೆ, ಮಿತವ್ಯಯ, ಮದ್ಯದ ಸುಂಕ ಹೆಚ್ಚಳ ಮೂಲಕ ಖಜಾನೆ ತುಂಬುವುದನ್ನು ಬಿಟ್ಟು ಯುವ ಜನತೆಗೆ ಮದ್ಯ ಕುಡಿಸಿ ಖಜಾನೆ ತುಂಬಲು ಹೊರಟಿದ್ದನ್ನು ಒಪ್ಪಲಾಗದು.

VISTARANEWS.COM


on

liquor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು–1967ಕ್ಕೆ ಈ ಕುರಿತು ತಿದ್ದುಪಡಿ ತರಲಾಗುತ್ತಿದೆ. ತಿದ್ದುಪಡಿಗೆ ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ (ಜನವರಿ 9) ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳು ಸೆಕ್ಷನ್‌ 10 (1) (ಇ) ಅಡಿಯಲ್ಲಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸುವ ಉಲ್ಲೇಖ ತಿದ್ದುಪಡಿ ಕರಡಿನಲ್ಲಿದೆ. ನಿಜಕ್ಕೂ ಇದೊಂದು ಆಘಾತಕಾರಿ ಬೆಳವಣಿಗೆ.

ಈಗಾಗಲೇ ಯುವ ಜನ ಮದ್ಯಪಾನ ಚಟಕ್ಕೆ ದಾಸರಾಗುತ್ತಿದ್ದಾರೆ. ಈ ಆತಂಕದ ನಡುವೆಯೇ ರಾಜ್ಯ ಸರ್ಕಾರ ಮದ್ಯಪಾನ ಖರೀದಿಸುವ, ಮದ್ಯಪಾನ ಮಾಡುವ ವಯಸ್ಸನ್ನು 21ರಿಂದ 18ಕ್ಕೆ ಇಳಿಸಲು ಹೊರಟಿರುವುದು ಆತಂಕಕಾರಿ. ಈಗಾಗಲೇ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಮದ್ಯ ಸೇವಿಸಿ ತೂರಾಡುವ ದೃಶ್ಯಗಳು ಆಗಾಗ ಕಣ್ಣಿಗೆ ಬೀಳುತ್ತವೆ. ಈ ಬಗ್ಗೆ ಪೋಷಕರ ವಲಯದಲ್ಲಿ ವ್ಯಾಪಕ ಕಳವಳ ವ್ಯಕ್ತವಾಗುತ್ತಿದೆ. ಹೀಗಿರುವಾಗ ಸರ್ಕಾರ ಮದ್ಯಪಾನ ಮಾಡಬಹುದಾದ ವಯಸ್ಸನ್ನು 18ಕ್ಕೆ ಇಳಿಸಿ ಬಿಟ್ಟರೆ, ಇನ್ನು ಮುಂದೆ ಪಿಯುಸಿ ಓದುವ ಮಕ್ಕಳೂ ಮದ್ಯಪಾನ ಮಾಡಿ ರಾಜಾರೋಷವಾಗಿ ಕಾಲೇಜಿಗೆ ಹೋಗಬಹುದು! ಸರಕಾರದ ಈ ನಿರ್ಧಾರ ಅನಾಹುತಕಾರಿ, ಆಕ್ಷೇಪಾರ್ಹ ಮತ್ತು ಖಂಡನೀಯ.

ಸಾಮಾನ್ಯವಾಗಿ 18 ವರ್ಷ ಎಂಬುದು ಇನ್ನೂ ಸರಿಯಾದ ಸಾಂಪ್ರದಾಯಿಕ ಶಿಕ್ಷಣವೇ ಮುಗಿದಿರದ ವಯಸ್ಸು. ಜೀವನದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದ, ಇನ್ನೂ ಪೋಷಕರ ಬೆಂಬಲ ಬೇಕಾಗುವ ವಯಸ್ಸದು. ಜತೆಗೆ ಜವಾಬ್ದಾರಿಯುತ ಕಲಿಕೆಯ ಹೊಣೆಯೂ ಇರುತ್ತದೆ. ಇಂಥ ವಯಸ್ಸಿನಲ್ಲಿ‌ ಮದ್ಯ ಸೇವಿಸಬಹುದು ಎಂದು ಸರ್ಕಾರವೇ ಹೇಳಿದರೆ ಹದಿಹರೆಯದವರು ಅದನ್ನು ಸ್ವಚ್ಛಂದತೆಯ ಪರವಾನಗಿ ಎಂದು ತಿಳಿದುಕೊಳ್ಳುವ ಸಾಧ್ಯತೆ ಅಧಿಕ. ಕಾನೂನು, ಪೊಲೀಸರ ಭಯವೇ ಅನೇಕ ಸಲ ಕಾನೂನುಬಾಹಿರ ಕೃತ್ಯಗಳನ್ನು ಮಾಡದಂತೆ ಕಟ್ಟಿಹಾಕುತ್ತದೆ. ಇದ್ಯಾವ ಭಯವೂ ಇಲ್ಲ ಎಂದಾದರೆ ಕೇಳುವವರೇ ಇಲ್ಲದಂತಾಗುತ್ತದೆ. ಕಾಲೇಜು ಆವರಣಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚುತ್ತಿದೆ ಎಂಬ ಸುದ್ದಿಯ ಹಿನ್ನೆಲೆಯಲ್ಲೇ ಈ ಸುದ್ದಿ ಬಂದಿರುವುದು ಆತಂಕಕಾರಿ.

ಮದ್ಯಪಾನ ಆರೋಗ್ಯಕರ ಸಮಾಜಕ್ಕೆ ಹಾನಿಕಾರಕ. ಹಾಗಾಗಿ ರಾಜ್ಯಾದ್ಯಂತ ಮದ್ಯ ನಿಷೇಧ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಗುಜರಾತ್ ನಲ್ಲಿ ಬಹಳ ಹಿಂದಿನಿಂದಲೇ ಪಾನ ನಿಷೇಧವಿದೆ. ಬಿಹಾರದಲ್ಲೂ ಇತ್ತೀಚೆಗೆ ಮದ್ಯ ನಿಷೇಧ ಜಾರಿ ಮಾಡಲಾಗಿದೆ. ಹೀಗಿರುವಾಗ ಕರ್ನಾಟಕ ಸರ್ಕಾರ ಮತ್ತಷ್ಟು ಯುವ ಜನತೆಗೆ ಮದ್ಯಪಾನದ ಚಟ ಅಂಟಿಸಿ ಅವರನ್ನು ಹಾಳುಗೆಡವಲು ಹೊರಟಿದ್ದು ಆತಂಕಕಾರಿ. ಪ್ರತಿಯೊಂದಕ್ಕೂ ಗುಜರಾತ್ ಮಾದರಿ ಎನ್ನುವ ಬಿಜೆಪಿ, ಮದ್ಯಪಾನ ವಿಷಯದಲ್ಲಿ ಗುಜರಾತ್ ಮಾದರಿ ಪಾಲಿಸದಿರುವುದು ಏಕೆ? ಅಮೆರಿಕದಂಥ ಮುಂದುವರಿದ ದೇಶದಲ್ಲೇ ಕನಿಷ್ಠ ಕಾನೂನುಬದ್ಧ ಮದ್ಯಪಾನ ವಯಸ್ಸನ್ನು 21ಕ್ಕೆ ನಿಗದಿಪಡಿಸಲಾಗಿದೆ. ನಮ್ಮ ದೇಶದ ಹರ್ಯಾಣದಲ್ಲಿ ಇತ್ತೀಚಿನವರೆಗೂ ವಯಸ್ಸಿನ ಮಿತಿ 25 ವರ್ಷಗಳಾಗಿತ್ತು. ಅದನ್ನೀಗ 21ಕ್ಕಿಳಿಸಲಾಗಿದೆ. ಇನ್ನಷ್ಟು ಇಳಿಸುವುದು ಒಳ್ಳೆಯ ಮಾದರಿಯಲ್ಲ.

ರಾಜ್ಯದ ಬೊಕ್ಕಸ ತುಂಬಲು ಯುವ ಜನತೆಯನ್ನು ಕುಡುಕರನ್ನಾಗಿ ಮಾಡಬೇಕೆ? ಇದು ನಾಚಿಕೆಗೇಡಿನ ವಿಚಾರ. ಸೋರಿಕೆ, ಭ್ರಷ್ಟಾಚಾರ ತಡೆ, ಮಿತವ್ಯಯ, ಮದ್ಯದ ಸುಂಕ ಹೆಚ್ಚಳ ಮೂಲಕ ಖಜಾನೆ ತುಂಬುವುದನ್ನು ಬಿಟ್ಟು ಯುವ ಜನತೆಗೆ ಮದ್ಯ ಕುಡಿಸಿ ಖಜಾನೆ ತುಂಬಲು ಹೊರಟಿದ್ದನ್ನು ಯಾವ ಕಾರಣಕ್ಕೂ ಒಪ್ಪಲಾಗದು. ಮಹಾತ್ಮ ಗಾಂಧಿಯವರು “ಮದ್ಯ ದೆವ್ವದ ಆವಿಷ್ಕಾರ. ಅದು ಮನುಷ್ಯನಿಂದ ಅರಿವನ್ನು ಕಿತ್ತುಕೊಳ್ಳುತ್ತದೆ” ಎಂದಿದ್ದರು. ಅವರ ಸೂಚನೆಯಿಂದಾಗಿಯೇ ಸಂವಿಧಾನದ ನಿರ್ದೇಶಕ ತತ್ವಗಳಲ್ಲಿ ‘ಸಂಪೂರ್ಣ ಮದ್ಯಪಾನ ನಿಷೇಧ’ವನ್ನು ಆಶಯವಾಗಿ ಪ್ರತಿಪಾದಿಸಲಾಗಿದೆ. ಇದನ್ನು ಆಗುಮಾಡಿಸುವುದು ಸರ್ಕಾರದ ಹೊಣೆಯೇ‌ ಹೊರತು ಮದ್ಯಪಾನ ಹೆಚ್ಚಿಸುವುದಲ್ಲ. ರಾಜ್ಯ ಸರ್ಕಾರ ತಕ್ಷಣ ಈ ನಿರ್ಧಾರಕ್ಕೆ ವಿಷಾದ ವ್ಯಕ್ತಪಡಿಸಿ, ಈ ಪ್ರಸ್ತಾಪ ಹಿಂತೆಗೆದುಕೊಳ್ಳಬೇಕು.

ಸಂಪಾದಕೀಯ | ವಿಸ್ತಾರ ಸಂಪಾದಕೀಯ | ಕರಾವಳಿಯಲ್ಲಿನ ಡ್ರಗ್ಸ್ ಜಾಲ ಮಟ್ಟ ಹಾಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Upendra : ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್; ಕಲೀಷ ಪಾತ್ರದಲ್ಲಿ ಮಿಂಚಲಿರುವ ಉಪೇಂದ್ರ

Actor Upendra : ಸೂಪರ್‌ ಸ್ಟಾರ್‌ ತಲೈವಾ ರಜಿನಿಕಾಂತ್‌ ಜತೆಗೆ ರಿಯಲ್ ಸ್ಟಾರ್ ಉಪೇಂದ್ರ ಮಿಂಚಲಿದ್ದಾರೆ. ಕೂಲಿ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

By

Real Star Upendra Acting with Superstar Rajinikanth Coolie Movie
Koo

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಬೆಂಗಳೂರು

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಟ್ಟುನಿಟ್ಟಿನ ಸೂಚನೆಯೊಂದಿಗೆ 15 ದಿನಗಳ ಗಡುವು ನೀಡಿದ್ದಾರೆ.

VISTARANEWS.COM


on

By

Pot holes
Koo

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

ಸಿಟಿ ರೌಂಡ್ಸ್‌

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Muda Case : ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದಿರುವ ಆರ್‌ ವಿ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ (RV Deshpande) ಬಿಚ್ಚಿಟ್ಟರು.

VISTARANEWS.COM


on

By

I will become CM if Siddaramaiah gives permission RV Deshpande
Koo

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಮುಡಾ (MUDA Case) ವಿಚಾರವಾಗಿ ತಪ್ಪೇ ಮಾಡಿಲ್ಲ ಅಂತ ಹೇಳುತ್ತಲೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಿಎಂಗೆ ಟಾಂಗ್ ನೀಡಿದ್ರಾ ಎಂಬ ಗುಮಾನಿ ಎದ್ದಿದೆ. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂದಿದ್ದಾರೆ. ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ ಎಂದು ಮೈಸೂರಿನಲ್ಲಿ ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತ ಪಡಿಸಿದರು.

ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ರಾಮಕೃಷ್ಣ ಹೆಗೆಡೆ ಮತ್ತು ವಿವೇಕಾನಂದರ ಬಗ್ಗೆ ಹೊಗಳುತ್ತಾಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ವ್ಯಂಗ್ಯ ಮಾಡಿದ್ದಂತೆ ಇತ್ತು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟರು.

ಇದನ್ನೂ ಓದಿ: Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

ಸಿಎಂ ಆಗುವ ಆಸೆ ಬಗ್ಗೆ ದೇಶಪಾಂಡೆ ಹೇಳಿದ್ದೇನು?

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರು, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆ

ಇದೇ ವೇಳೆ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ತೊಂದರೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬಂದಿರುವುದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ರೂ. ಬೇಕಾಗಿದೆ. ತೊಂದರೆಯಾಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Yettinahole Project: ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ ಮಾಡಲಾಗುವುದು. ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

By

Yettinahole project lift work to be inaugurated on September 6 Gowri festival
Koo

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ (Yettinahole Project) ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ತಿಳಿಸಿದರು.

ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.

ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ

ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಸಿಎಂ ನಿವಾಸದಲ್ಲಿ ಭೋಜನ ಕೂಟ

ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂದು ಕೇಳಿದಾಗ, “ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು ಎಂದು ತಿಳಿಸಿದರು.

ಕೋವಿಡ್‌ ಸಮಯದಲ್ಲ ಅಕ್ರಮ

ಕೋವಿಡ್ ಸಮಯದಲ್ಲಿನ ಅಕ್ರಮದ ಬಗ್ಗೆ ನ್ಯಾ.ಕುನ್ಹಾ ಅವರ ಸಮಿತಿ ವರದಿ ಸಲ್ಲಿಕೆ ಹಾಗೂ ಮಾಜಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಸುಧಾಕರ್ ಅವರ ಹೇಳಿಕೆಯ ಬಗ್ಗೆಯೂ ಮಾಹಿತಿ ಇಲ್ಲ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ಈ ವಿಚಾರವಾಗಿ ಸರ್ಕಾರದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ ಎಂದು ತಿಳಿಸಿದರು.

ರಾಜಭವನದಲ್ಲಿ ವಿರೋಧ ಪಕ್ಷಗಳ ನಾಯಕರ ವಿರುದ್ಧ ಯಾವುದೇ ಅರ್ಜಿ ಇಲ್ಲ ಎಂದು ರಾಜ್ಯಪಾಲರು ಹೇಳಿದ್ದು, ಹಾಗಾದರೆ ಫೈಲ್‌ಗಳು ಏನಾದವು ಎಂದು ಕೇಳಿದಾಗ, “ನಮಗೂ ಅದೇ ಯಕ್ಷಪ್ರಶ್ನೆಯಾಗಿದೆ. ನಾಳೆ ಈ ವಿಚಾರವಾಗಿ ಮಾಹಿತಿ ಪಡೆಯುತ್ತೇವೆ. ನಾವು ನಮಗೆ ಬಂದಿರುವ ಮಾಹಿತಿಗಳ ಮೇರೆಗೆ ನಮ್ಮ ಮನವಿ ಸಲ್ಲಿಸಿದ್ದೇವೆ ಎಂದರು. ಕಾಂಗ್ರೆಸ್ ನಾಯಕರ ವಿರುದ್ಧದ ಎರಡು ಅರ್ಜಿಗಳು ಮಾತ್ರ ರಾಜ್ಯಪಾಲರ ಬಳಿ ಉಳಿದುಕೊಂಡಿವೆಯಂತೆ ಎಂದು ಕೇಳಿದಾಗ, ಆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ವಿರುದ್ಧ ಕೆಲವರು ಅರ್ಜಿ ಕೊಡುತ್ತಿರುತ್ತಾರೆ. ಮತ್ತೆ ಕೆಲವರು ನನ್ನ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ದೂರು ನೀಡಲಿ ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್‌ ಮರುವಿನ್ಯಾಸ:

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರುವಿನ್ಯಾಸಗೊಳಿಸಿ ಅವರಿಗೆ ನೀಡಿದರು. ಈ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, “ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Real Star Upendra Acting with Superstar Rajinikanth Coolie Movie
ಸ್ಯಾಂಡಲ್ ವುಡ್3 hours ago

Actor Upendra : ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್; ಕಲೀಷ ಪಾತ್ರದಲ್ಲಿ ಮಿಂಚಲಿರುವ ಉಪೇಂದ್ರ

Pot holes
ಬೆಂಗಳೂರು4 hours ago

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

I will become CM if Siddaramaiah gives permission RV Deshpande
ಮೈಸೂರು5 hours ago

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Irani gang active in Belagavi Single women are the target
ಬೆಳಗಾವಿ6 hours ago

Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

Yettinahole project lift work to be inaugurated on September 6 Gowri festival
ಬೆಂಗಳೂರು7 hours ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ8 hours ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು8 hours ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ9 hours ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ9 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ9 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 day ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌