Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌-ಬೈಕ್‌ ನಡುವೆ ಭೀಕರ ಅಪಘಾತ; ಸವಾರನ ತಲೆ ಹೋಳು - Vistara News

ಕರ್ನಾಟಕ

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌-ಬೈಕ್‌ ನಡುವೆ ಭೀಕರ ಅಪಘಾತ; ಸವಾರನ ತಲೆ ಹೋಳು

Road Accident : ಕುಲಹಳ್ಳಿ ಬಳಿ ಬೈಕ್‌ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದೇ ವೇಳೆ ಕೆಳಕ್ಕೆ ಬಿದ್ದ ಬೈಕ್‌ ಸವಾರನ ತಲೆ ಮೇಲೆ ಟ್ರ್ಯಾಕ್ಟರ್‌ ಚಕ್ರ ಹತ್ತಿದ್ದು, ತಲೆ ಚೂರುಚೂರಾಗಿದೆ.

VISTARANEWS.COM


on

rabakavi road accident
ಅಪಘಾತ ನಡೆದ ಸ್ಥಳದಲ್ಲಿ ಸಾರ್ವಜನಿಕರು ಸೇರಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ರಬಕವಿಬನಹಟ್ಟಿ ತಾಲೂಕಿನ ಕುಲಹಳ್ಳಿ ಬಳಿ ಬೈಕ್‌ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಬೈಕ್‌ ಸವಾರನ ತಲೆಯೇ ಸಿಡಿದು ಚೂರುಚೂರಾಗಿದೆ.

ಕುಲಹಳ್ಳಿ ಗ್ರಾಮದ ಲಕ್ಷ್ಮಣ ಹುನ್ನೂರ (೩೦) ಮೃತ ದುರ್ದೈವಿ. ಇವರು ಕೆಲಸ ನಿಮಿತ್ತ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಇವರ ತಲೆ ಮೇಲೆ ಹಾಯ್ದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಬಕವಿಬನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Brave hunt : ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿ ಪರಾರಿ; ತಡೆಯಲು ಹೋದ 70ರ ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ. ದರದರನೆ ಎಳೆದೊಯ್ದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Attica Babu: ಕಳ್ಳರಿಬ್ಬರು ಕದ್ದ ಚಿನ್ನವನ್ನು ಖರೀದಿ ಮಾಡಿದ್ದಕ್ಕೆ ಅಟ್ಟಿಕಾ ಗೋಲ್ಡ್‌ ಕಂಪೆನಿ ಮಾಲೀಕನ ಬಂಧನವಾಗಿದೆ. ಕಳ್ಳ ಮಾಲು ಕೇಸ್‌ನಲ್ಲಿ ಮೂವರನ್ನು ಬಂಧಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

attika babu
Koo

ದೊಡ್ಡಬಳ್ಳಾಪುರ: ಕಳ್ಳರು ಕದ್ದ ಚಿನ್ನವನ್ನು ಖರೀದಿ ಮಾಡಿದ ಆರೋಪದಡಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು (Attica Babu) ಮತ್ತೊಮ್ಮೆ ಬಂಧನವಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಶನಿವಾರ (ಜೂ.29) ಮುಂಜಾನೆ ಬಂಧಿಸಿ ಕರೆತಂದಿದ್ದಾರೆ.

ಮೊನ್ನೆಯಷ್ಟೇ ತುರುವೇಕೆರೆ ಪೊಲೀಸರು ಬೆಂಗಳೂರಿಗೆ ಬಂದು ಬಾಬುರನ್ನು ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಬಂದ ಅಟ್ಟಿಕಾ ಬಾಬುರನ್ನು ದೊಡ್ಡಬಳ್ಳಾಪುರ ಪೊಲೀಸರು ಕೂಡಲೆ ಬಂಧಿಸಿದ್ದಾರೆ.

ಇಬ್ಬರು ಕಳ್ಳರು ಕಳ್ಳತನ ಮಾಡಿದ ಚಿನ್ನದ ಮಾಲು ಖರೀದಿ ಆರೋಪದಲ್ಲಿ ಬಾಬು ಬಂಧನವಾಗಿದೆ. ಬೊಮ್ಮನಹಳ್ಳಿ ಬಾಬು ಸೇರಿದಂತೆ ಮೂವರ ಬಂಧನವಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ತುರುವೇಕೆರೆ ಪೊಲೀಸ್‌ ಠಾಣೆಯಲ್ಲೂ ಪ್ರಕರಣ ದಾಖಲು

ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು (Turuvekere Police) ಜೂನ್‌ 26 ಬಂಧಿಸಿದ್ದರು. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ (Bengaluru) ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದರು.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿತ್ತು. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌ ಎಂಬಾತ ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ. ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್‌ ಕಂಪನಿಯಲ್ಲಿ ಉದಯ್‌ ಅಲಿಯಾಸ್‌ ಅಶೋಕ್‌ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಆಗಮಿಸಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿತ್ತು. ಬಳಿಕ ಜಾಮೀನು ಪಡೆದು ಹೊರಬಂದಿದ್ದ ಬಾಬುರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಳ್ಳ ಮಾಲು ಕೇಸ್‌ನಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Attica Babu : ಅಟ್ಟಿಕಾ ಬಾಬು ತಂದಿಟ್ಟಿದ್ದ ಲೋಡ್‌ಗಟ್ಟಲೆ ರಂಜಾನ್‌-ಯುಗಾದಿ ಕಿಟ್‌ ಸೀಜ್‌ ಮಾಡಿದ ಪೊಲೀಸರು!

2022ರಲ್ಲೂ ಬಂಧಿಸಲಾಗಿತ್ತು

ಎರಡನೇ ಮದುವೆಯಾಗಿ, ಮೋಸ ಮಾಡಿದ್ದಾರೆ ಎಂಬುದಾಗಿ ಮಹಿಳೆಯೊಬ್ಬರು ದೂರು ನೀಡಿದ ಕಾರಣ 2022ರಲ್ಲೂ ಅಟ್ಟಿಕಾ ಬಾಬು ಅವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದರು. ಶೇಖ್‌ ಮಿನಾಜ್‌ ಎಂಬ ಮಹಿಳೆಯು ಹಲ್ಲೆ ಹಾಗೂ ಮೋಸ ಮಾಡಿದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಮಹಿಳೆ ದೂರಿನ ಹಿನ್ನೆಲೆಯಲ್ಲಿ ಅಟ್ಟಿಕಾ ಬಾಬು ವಿರುದ್ಧ ಹಲ್ಲೆ, ವರದಕ್ಷಿಣೆ ಕಿರುಕುಳದ ಪ್ರಕರಣ ಕೂಡ ದಾಖಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಅಟ್ಟಿಕಾ ಬಾಬು ಬಿಡುಗಡೆಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Love Failure : ಅತ್ತಿಗೆ ತಂಗಿಯನ್ನು ಹುಚ್ಚನಂತೆ ಪ್ರೀತಿಸುತ್ತಿದ್ದ ಯುವಕನೊರ್ವ ಮದುವೆಗೆ ಒಪ್ಪದ್ದಕ್ಕೆ ಮನನೊಂದು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

VISTARANEWS.COM


on

By

Love Failure
Koo

ರಾಯಚೂರು: ರಾಯಚೂರಲ್ಲಿ ಪ್ರೇಮ ವೈಫಲ್ಯಕ್ಕೆ (Love Failure) ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣ ಸಮೀಪದ ಕನಸಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತೋಷ್ (22) ಮೃತ ದುರ್ದೈವಿ.

ಮನೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮುನ್ನ ತನ್ನ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ನಲ್ಲಿ ʻನಾನು ಸತ್ತರು ಪ್ರೀತಿಗೋಸ್ಕರ ಸೋಲ್ತಿನಿ ಯಾಕೆಂದರೆ ನಾನು ಒಬ್ಬ ಹುಚ್ಚು ಪ್ರೇಮಿʼ ಎಂದು ಫೋಟೊ ಜತೆಗೆ ಬರಹವೊಂದನ್ನು ಹಾಕಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂತೋಷ್‌ ತನ್ನ ಅಣ್ಣನ ಹೆಂಡತಿ ತಂಗಿಯನ್ನೇ ಪ್ರೀತಿ ಮಾಡುತ್ತಿದ್ದ. ಆದರೆ ಮದುವೆಗೆ ಒಪ್ಪದಿದ್ದಾಗ ಮನನೊಂದು ಆತ್ಮಹತ್ಯೆ ಶರಣಾಗಿದ್ದಾನೆ. ಮುದ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Love Failure

ಇದನ್ನೂ ಓದಿ: Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self harming

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Gold Rate Today: ಬೆಂಗಳೂರಿನಲ್ಲಿ ಶನಿವಾರ (ಜೂನ್‌ 29) 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ಒಂದು ರೂಪಾಯಿ ಏರಿಕೆಯಾಗಿರುವುದು ಗ್ರಾಹಕರಿಗೆ ಅಷ್ಟೇನೂ ಹೊರೆಯಾಗಿಲ್ಲ. ಇನ್ನು ಒಂದು ಗ್ರಾಂ ಬೆಳ್ಳಿಯ ಬೆಲೆಯು 89.40 ರೂಪಾಯಿ ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಚಿನ್ನದ ಬೆಲೆಯು (Gold Rate Today) ಶನಿವಾರ (ಜೂನ್‌ 29) ತುಸು ಏರಿಕೆ ಕಂಡಿದೆ. ಸಿಲಿಕಾನ್‌ ಸಿಟಿಯಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ. ಇದರಿಂದಾಗಿ ವೀಕೆಂಡ್‌ನಲ್ಲಿ ಚಿನ್ನದ ಖರೀದಿಸಲು ಮುಂದಾದವರಿಗೆ ಅಷ್ಟೇನೂ ಹೊರೆಯಾಗುವುದಿಲ್ಲ.

ಇದರೊಂದಿಗೆ ನಗರದಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ (ಜೂನ್‌ 28) ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 43 ರೂ. ಏರಿಕೆ ಏರಿಕೆಯಾಗಿತ್ತು. ಇನ್ನು ಬೆಳ್ಳಿಯ ಬೆಲೆಯಲ್ಲಿ ತುಸು ಅಂದರೆ 0.10 ರೂ. ಇಳಿಕೆಯಾಗಿದ್ದು, ಒಂದು ಗ್ರಾಂ ಬೆಳ್ಳಿಗೆ 89.40 ರೂ. ಇದೆ.

Gold Rate Today

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Continue Reading

ಮಳೆ

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Karnataka Rain : ಮುಂಗಾರು ಮಳೆ ಅಬ್ಬರಕ್ಕೆ ಹಲವೆಡೆ ಅನಾಹುತಗಳು ಮುಂದುವರಿದಿದ್ದು, ಮೈಸೂರಿನಲ್ಲಿ ಮಳೆಗೆ ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ವೃದ್ಧರೊಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

karnataka Rain
Koo

ಮೈಸೂರು: ಮೈಸೂರಿನಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಎರಡು ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯೊಳಗೆ ಇದ್ದ ವೃದ್ಧ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗೋಪಾಲಪುರ ಗ್ರಾಮದ ದೇವಮ್ಮ ಮತ್ತು ಸಣ್ಣ ತಾಯಮ್ಮ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ಇದೇ ಗ್ರಾಮದ ರಾಜೇಗೌಡ ಎಂಬುವರ ಮನೆ ಗೋಡೆ ಕೂಡ ಕುಸಿದಿದೆ. ಮನೆ ಗೋಡೆ ಕುಸಿಯುವಾಗ ಒಳಗೆ ಇದ್ದ ರಾಜೇಗೌಡ ಅವರು ಚಾವಣಿ ಅಡಿಯಲ್ಲಿ ಸಿಲುಕಿದ್ದರು. ಸಣ್ಣಪುಟ್ಟ ಗಾಯಗಳಷ್ಟೇ ಆಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮತ್ತು ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಬಿನಿ ಜಲಾಶಯ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ

ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ ಕೇವಲ 9 ಅಡಿಗಳು ಮಾತ್ರ ಬಾಕಿ ಇವೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ತಗ್ಗಿದ್ದು, ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಸಮುದ್ರ ಮಟ್ಟದಿಂದ 2,284 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2275.06 ಅಡಿಗಳು ಇದೆ. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ, ಸದ್ಯ 14.30 ಟಿಎಂಸಿ ನೀರಿದೆ. ಜಲಾಶಯದ ಇಂದಿನ ಒಳಹರಿವು 17873 ಕ್ಯೂಸೆಕ್, ಹೊರಹರಿವು 2000 ಕ್ಯೂಸೆಕ್ ಇದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಯಲ್ಲಿ ವಾಹನ ಓಡಾಟ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಶಿಥಿಲಗೊಂಡಿದೆ. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿತ್ತು. ಹೀಗಾಗಿ ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ ನೀಡಿದರು. ಸೇತುವೆಯ ಪರಿಸ್ಥಿಯನ್ನು ಗಮನಿಸಿ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡರು.

ಸೇತುವೆ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಚೆಲ್ಯಡ್ಕ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿಷೇಧ ಮಾಡಲಾಗಿದೆ. ಉಳಿದಂತೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 8 ರಿಂದ ಬೆಳಗ್ಗೆ 6ರ ವರೆಗೆ ಸಂಪೂರ್ಣ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಳಗಿನ ಅವಧಿಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಅಂದರು. ಇನ್ನೂ ಮಳೆಗಾಲ ಮುಗಿದ ಬಳಿಕ ಸೇತುವೆಯ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ ಎಂದು ಮಾಹಿತಿ ನೀಡಿದರು, ಜಿಲ್ಲಾಧಿಕಾರಿಗೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ,ತಹಶೀಲ್ದಾರ್ ಪುರಂದರ ಹೆಗ್ಡೆ ಸಾಥ್ ನೀಡಿದ್ದರು.

ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan Suffering From Sade Sati
ಸ್ಯಾಂಡಲ್ ವುಡ್7 mins ago

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

deepika padukone
Latest7 mins ago

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

attika babu
ಬೆಂಗಳೂರು ಗ್ರಾಮಾಂತರ8 mins ago

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Shah Rukh Khan
ಪ್ರಮುಖ ಸುದ್ದಿ9 mins ago

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Ram Path
ದೇಶ26 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

DP Manu
ಕ್ರೀಡೆ28 mins ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು36 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ47 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್56 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ1 hour ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌