West Bengal | ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ʼಪಿಒಕೆʼ ಬದಲು ʼಆಜಾದ್‌ ಕಾಶ್ಮೀರ್‌ʼ! ದೀದಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಬಿಜೆಪಿ - Vistara News

ದೇಶ

West Bengal | ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ʼಪಿಒಕೆʼ ಬದಲು ʼಆಜಾದ್‌ ಕಾಶ್ಮೀರ್‌ʼ! ದೀದಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಬಿಜೆಪಿ

ಪಶ್ಚಿಮ ಬಂಗಾಳದ (West Bengal) ಶಿಕ್ಷಣ ಮಂಡಳಿಯು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆಂದು ಬಿಡುಗಡೆ ಮಾಡಿರುವ ಮಾದರಿ ಪ್ರಶ್ನೆ ಪತ್ರಿಕೆಗಳ ಪುಸ್ತಕದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು “ಆಜಾದ್‌ ಕಾಶ್ಮೀರ” ಎಂದು ಹೆಸರಿಸಲಾಗಿದೆ.

VISTARANEWS.COM


on

SSSLC Exam from March 25 2348 students registered in Koratagere taluk
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಪಾಕಿಸ್ತಾನ ಆಕ್ರಮಿತ ಪ್ರದೇಶ(ಪಿಒಕೆ)ವು ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ವಿವಾದಲ್ಲಿರುವ ಭೂಮಿ. ಭಾರತವು ಆ ಸ್ಥಳವನ್ನು ಭಾರತದ ಅವಿಭಾಜ್ಯ ಅಂಗವೆಂದು ಗುರುತಿಸಿ, ಅದಕ್ಕೆ ಪಿಒಕೆ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನ ಅದನ್ನು ತಮ್ಮ ಸ್ಥಳವೆಂದು ಹೇಳುತ್ತಿದ್ದು, ಅದಕ್ಕೆ ಆಜಾದ್‌ ಕಾಶ್ಮೀರ್‌(ಸ್ವತಂತ್ರ ಕಾಶ್ಮೀರ) ಎಂದು ಕರೆಯುತ್ತಿದೆ. ಹೀಗಿರುವ ಪಶ್ಚಿಮ ಬಂಗಾಳದ (West Bengal) ಶಿಕ್ಷಣ ಇಲಾಖೆಯು ಹತ್ತನೇ ತರಗತಿ ವಿದ್ಯಾರ್ಥಿಗಳ ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ಪಿಒಕೆಯನ್ನು ಆಜಾದ್‌ ಕಾಶ್ಮೀರ ಎಂದು ಹೆಸರಿಸುವ ಮೂಲಕ ವಿವಾದವನ್ನು ಸೃಷ್ಟಿಸಿಕೊಂಡಿದೆ.

ಇದನ್ನೂ ಓದಿ: Jansmapark Abhiyan | ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಗೆಲ್ಲುವ ಪಟ್ಟು! 2024ರ ಚುನಾವಣೆ ತಯಾರಿಯ ಬ್ಲೂಪ್ರಿಂಟ್‌
ಪ್ರತಿ ವರ್ಷ ಪಶ್ಚಿಮ ಬಂಗಾಳದ ಶಿಕ್ಷಣ ಇಲಾಖೆಯು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆಂದು ಮಾದರಿ ಪ್ರಶ್ನೆ ಪತ್ರಿಕೆಗಳುಳ್ಳ ಪುಸ್ತಕವನ್ನು ಬಿಡುಗಡೆ ಮಾಡುತ್ತದೆ. ಅದಕ್ಕೆ ರಾಜ್ಯಾದ್ಯಂತ ಇರುವ ಸರ್ಕಾರಿ ಶಾಲೆಗಳು ಪ್ರಶ್ನೆಗಳನ್ನು ಕಳುಹಿಸಿಕೊಡುತ್ತವೆ. ಈ ಬಾರಿ ಬಿಡುಗಡೆ ಮಾಡಲಾಗಿರುವ ಪುಸ್ತಕ 132ನೇ ಪುಟದಲ್ಲಿನ ಒಂದು ಪ್ರಶ್ನೆ ವಿವಾದಕ್ಕೆ ಕಾರಣವಾಗಿದೆ. ಅದರಲ್ಲಿ ವಿದ್ಯಾರ್ಥಿಗಳಿಗೆ ಭಾರತದ ಭೂಪಟದಲ್ಲಿ ಆಜಾದ್‌ ಕಾಶ್ಮೀರವನ್ನು ಗುರುತಿಸಿ ಎಂದು ಕೇಳಲಾಗಿದೆ.


ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಪ್ರಶ್ನೆಯಲ್ಲಿರುವ “ಆಜಾದ್‌ ಕಾಶ್ಮೀರ”ವನ್ನು ಕೇವಲ “ಕಾಶ್ಮೀರ” ಎಂದು ಓದಿಕೊಳ್ಳಬೇಕೆಂದು ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: Mamta Mohandas | ಕ್ಯಾನ್ಸರ್‌ ಗೆದ್ದ ಬೆನ್ನಲ್ಲೇ ವಿಟಿಲಿಗೋ ಕಾಯಿಲೆಯಿಂದ ಬಳಲುತ್ತಿರುವ ನಟಿ ಮಮತಾ ಮೋಹನ್ ದಾಸ್

ಪ್ರಶ್ನೆ ಪತ್ರಿಕೆಯಲ್ಲಾಗಿರುವ ಈ ತಪ್ಪು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. “ಈ ಬುದ್ಧಿಯು ಮಮತಾ ಬ್ಯಾನರ್ಜಿ ಅವರ ಸರ್ಕಾರದ ಪ್ರತ್ಯೇಕತಾವಾದವನ್ನು ತೋರಿಸುತ್ತದೆ. ಈ ಸರ್ಕಾರ ಕೇವಲ ಉಗ್ರರಿಗೆ ಬೆಂಬಲಿಸುವುದಷ್ಟೇ ಅಲ್ಲದೆ ಮಕ್ಕಳ ಮನಸ್ಸಿನಲ್ಲಿ ದೇಶ ವಿರೋಧಿ ಭಾವನೆ ಬಿತ್ತುವುದಕ್ಕೂ ಪ್ರಯತ್ನಿಸುತ್ತಿದೆ” ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ದಿಲೀಪ್‌ ಘೋಷ್‌ ಆಕ್ರೋಶ ಹೊರಹಾಕಿದ್ದಾರೆ. ಈ ವಿಚಾರವಾಗಿ ಶಿಕ್ಷಣ ಇಲಾಖೆಯು ಪ್ರತಿಕ್ರಿಯಿಸಿದ್ದು, “ಪ್ರಶ್ನೆ ಪತ್ರಿಕೆಯಲ್ಲಾಗಿರುವ ತಪ್ಪಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಶ್ನೆಯನ್ನು ಕಳುಹಿಸಿದವರ ವಿರುದ್ಧ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Physical Abuse & Murder:ಬಾಲಕಿಯನ್ನು ಅತ್ಯಾಚಾರಗೈದು ಬಳಿಕ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೇಬಿಯಾ ಬುಡಗಟ್ಟು ಜನಾಂಗದ ಇಬ್ಬರು ಸಹೋದರರಾದ ಕಲು ಮತ್ತು ಕಹ್ನಾ ವಿರುದ್ಧ ಪೋಕ್ಸೋ ಕಾಯ್ದೆಯಲ್ಲಿ ಕೇಸು ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ಮಹಿಳೆಯರು ಸೇರಿದಂತೆ ಇತರೆ ಏಳು ಜನರ ವಿರುದ್ಧವೂ ಕೇಸ್‌ ದಾಖಲಿಸಲಾಗಿತ್ತು. ಅವರು ಆರೋಪಿಗಳಿಗೆ ಸಾಕ್ಷ್ಯಾಧಾರ ನಾಶಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿದ್ದರು. ಇದೀಗ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಿರುವ ಕೋರ್ಟ್‌ ಉಳಿದ ಏಳು ಜನರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.

VISTARANEWS.COM


on

Physical Abuse & Murder
Koo

ನವದೆಹಲಿ: ಕಳೆದ ವರ್ಷ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಬರ್ಬರ ಕೊಲೆ(Physical Abuse & Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಂತಕರಿಗೆ ರಾಜಸ್ಥಾನ(Rajasthan)ದ ಬಿಲ್ವಾರ ವಿಶೇಷ ಕೋರ್ಟ್‌ ಮರಣದಂಡನೆ(Death Penalty) ವಿಧಿಸಲಾಗಿದೆ. ನ್ಯಾಯಮೂರ್ತಿ ಅನಿಲ್‌ ಗುಪ್ತಾ ಇದ್ದ ನ್ಯಾಯಪೀಠ, ಪ್ರಕರಣದ ದೋಷಿಗಳಾದ ಕಲು ಮತ್ತು ಕಹ್ನಾ ಎಂಬ ಸಹೋದರರಿಗೆ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ್ದು, ಇದು ಅಪರೂಪಗಳಲ್ಲಿ ಅಪರೂಪದ ಪ್ರಕರಣ ಎಂದು ಹೇಳಿದೆ.

ಬಾಲಕಿಯನ್ನು ಅತ್ಯಾಚಾರಗೈದು ಬಳಿಕ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೇಬಿಯಾ ಬುಡಗಟ್ಟು ಜನಾಂಗದ ಇಬ್ಬರು ಸಹೋದರರಾದ ಕಲು ಮತ್ತು ಕಹ್ನಾ ವಿರುದ್ಧ ಪೋಕ್ಸೋ ಕಾಯ್ದೆಯಲ್ಲಿ ಕೇಸು ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ಮಹಿಳೆಯರು ಸೇರಿದಂತೆ ಇತರೆ ಏಳು ಜನರ ವಿರುದ್ಧವೂ ಕೇಸ್‌ ದಾಖಲಿಸಲಾಗಿತ್ತು. ಅವರು ಆರೋಪಿಗಳಿಗೆ ಸಾಕ್ಷ್ಯಾಧಾರ ನಾಶಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿದ್ದರು. ಇದೀಗ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಿರುವ ಕೋರ್ಟ್‌ ಉಳಿದ ಏಳು ಜನರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ. ಇದೀಗ ಇವರ ಬಿಡುಗಡೆ ಪ್ರಶ್ನಿಸಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಇನ್ನು ಮೂವರು ಮಹಿಳೆಯರಲ್ಲಿ ಇಬ್ಬರು ಕಲು ಮತ್ತು ಕಹ್ನಾನ ಪತ್ನಿಯರು ಎಂದು ಹೇಳಲಾಗಿದೆ.

ಇನ್ನು ಈ ಬಗ್ಗೆ ಸರ್ಕಾರಿ ವಕೀಲ ಮಹಾವೀರ್‌ ಸಿಂಗ್‌ ಕಿಶ್ವಂತ್‌ ಪ್ರತಿಕ್ರಿಯಿಸಿದ್ದು, ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದಿತ್ತು ಪೈಶಾಚಿಕ ಕೃತ್ಯ

ಬಿಲ್ವರಾ ಜಿಲ್ಲೆಯ ಕೊಟ್ರಿ ತಾಲೂಕಿನ ಶಹಾಪುರದಲ್ಲಿ ನಡೆದಿದ್ದು, ದನ ಮೇಯಿಸಲು ಹೋಗಿದ್ದ 14ವರ್ಷದ ಬಾಲಕಿ ನಿಗೂಢವಾಗಿ ಕಣ್ಮರೆ ಆಗಿದ್ದಳು. ದನಗಳು ಹಟ್ಟಿಗೆ ವಾಪಾಸಾದರೂ ಮಗಳು ಬಾರದೇ ಇರುವುದನ್ನು ಕಂಡ ಪೋಷಕರು ಗಾಬರಿಗೊಂಡಿದ್ದರು. ಆಕೆಗಾಗಿ ಮನೆಯವರೆಲ್ಲಾ ಹುಡುಕಾಟ ಶುರು ಮಾಡಿದ್ದರು. ಸುಮಾರು ಹೊತ್ತಿನ ಹುಡುಕಾಟದ ಬಳಿಕ ರಾತ್ರಿ 10ಗಂಟೆ ವೇಳೆಗೆ ಇದ್ದಿಲಿನ ಕುಲುಮೆಯಿಂದ ಹೊಗೆ ಹೋಗುತ್ತಿರುವುದನ್ನು ಗಮನಿಸಿದ್ದರು. ಅದನ್ನು ಕೆದಕಿ ನೋಡಿದಾಗ ಬಾಲಕಿ ಧರಿಸಿದ್ದ ಬಟ್ಟೆ ತುಂಡುಗಳು, ಚಪ್ಪಲಿ ಪತ್ತೆಯಾಗಿತ್ತು.

ತಕ್ಷಣ ಪೊಲೀಸರಿಗೆ ಕರೆ ಮಾಡಿದ ಕುಟುಂಬಸ್ಥರು ಘಟನೆ ಬಗ್ಗೆ ವಿವರಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಅರೆಬೆಂದ ಮೃತದೇಹ ಸಿಕ್ಕಿತ್ತು. ಇದರಿಂದ ಆಕೆಯನ್ನು ಹಂತಕರು ಜೀವಂತವಾಗಿ ಸುಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಇದಾದ ಬಳಿಕ ವಿಧಿ ವಿಜ್ಞಾನ ವಿಭಾಗಕ್ಕೆ ಮೃತದೇಹ ಕಳಿಸಿದಾಗ, ಬಾಲಕಿ ಪ್ರಜ್ಞಾ ಹೀನ ಸ್ಥಿತಿಯಲ್ಲಿರುವಾಗಲೇ ಆಕೆಯನ್ನು ಇದ್ದಿಲಿನ ಕುಲುಮೆಯಲ್ಲಿ ಸುಟ್ಟಿದ್ದಾರೆ. ಆಕೆಯನ್ನು ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿತ್ತು.

ಇನ್ನು ಈ ಕೃತ್ಯ ಇಡೀ ರಾಜ್ಯದಲ್ಲೇ ಸಂಚಲನ ಮೂಡಿಸಿತ್ತು. ಅಲ್ಲದೇ ರಾಜಕೀಯ ಟೀಕಾಪ್ರಹಾರಕ್ಕೂ ಕಾರಣವಾಗಿತ್ತು. ಪೊಲೀಸರು ಪ್ರಕರಣದಕ್ಕೆ ಸಂಬಂಧಿಸಿದಂತೆ ಕೇವಲ 30ದಿನಗಳಲ್ಲಿ 400ಕ್ಕೂ ಅಧಿಕ ಪುಟುಗಳ ಚಾರ್ಜ್‌ಶೀಟ್‌ ದಾಖಲಿಸಿದ್ದರು.

ಇದನ್ನೂ ಓದಿ:Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading

ದೇಶ

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

Crime News: ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕಿದೆ. ಅದೂ ಬಂಧನವಾದ 15 ಗಂಟೆಯೊಳಗೆ ಎನ್ನುವುದು ವಿಶೇಷ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತುಗಳ ಮೇಲೆ ನ್ಯಾಯಾಲಯವು ನೀಡಿದೆ ಮೂಲಗಳು ತಿಳಿಸಿವೆ. ಸದ್ಯ ಈ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

VISTARANEWS.COM


on

Crime News
Koo

ಮುಂಬೈ: ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕಿದೆ. ಅದೂ ಬಂಧನವಾದ 15 ಗಂಟೆಯೊಳಗೆ ಎನ್ನುವುದು ವಿಶೇಷ. 17 ವರ್ಷದ ಈತ ಶನಿವಾರ ಪುಣೆಯಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಕೋರೆಗಾಂವ್ ಪಾರ್ಕ್‌ ಸಮೀಪ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪುರುಷ ಮತ್ತು ಮಹಿಳೆ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು (Crime News).

ʼʼಬಾಲಕನಿಗೆ ಜಾಮೀನು ಸಿಕ್ಕಿದೆ. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು ಕೆಲವೊಂದು ಷರತ್ತನ್ನೂ ವಿಧಿಸಿದೆ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತುಗಳ ಮೇಲೆ ನ್ಯಾಯಾಲಯವು ನೀಡಿದೆʼʼ ಎಂದು ಆತನ ವಕೀಲ ಪ್ರಶಾಂತ್ ಪಾಟೀಲ್ ಹೇಳಿದ್ದಾರೆ. ಆರೋಪಿ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗ.

ಘಟನೆಯ ವಿವರ

ಪುಣೆಯಲ್ಲಿ ಉದ್ಯೋಗ ನಿರ್ವಹಿಸುತ್ತಿರುವ, ಮಧ್ಯಪ್ರದೇಶದ ಎಂಜಿನಿಯರ್‌ಗಳಾದ 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ ಈ ಅಪ್ರಾಪ್ತ ಚಾಲಾಯಿಸುತ್ತಿದ್ದ, ಗಂಟೆಗೆ 200 ಕಿ.ಮೀ. ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಅಶ್ವಿನಿ ಸುಮಾರು 20 ಅಡಿ ಎತ್ತರಕ್ಕೆ ಚಿಮ್ಮಿದ್ದರು. ಕಾರಿನ ಮೇಲೆ ಎಸೆಯಲ್ಪಟ್ಟ ಅನೀಶ್‌ ಗಂಭೀರ ಗಾಯಗೊಂಡಿದ್ದರು. ಬಳಿಕ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ʼʼಮುಂಜಾನೆ 2.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ವೇಗದಲ್ಲಿತ್ತು. ಕಾರು ಬೈಕಿಗೆ ಡಿಕ್ಕಿ ಹೊಡೆದ ನಂತರ ಚಾಲಕ ಪರಾರಿಯಾಗಲು ಯತ್ನಿಸಿದ್ದ. ಸ್ಥಳೀಯರು ಆತನನ್ನು ಹಿಡಿದು ನಿಲ್ಲಿಸಿದ್ದರು. ಚಾಲಕನಲ್ಲದೆ ಕಾರಿನಲ್ಲಿ ಇನ್ನೂ ಇಬ್ಬರಿದ್ದರು. ಆ ಪೈಕಿ ಓರ್ವ ತಪ್ಪಿಸಿಕೊಂಡಿದ್ದ. ಸಿಕ್ಕ ಬಿದ್ದ ಚಾಲಕ ಸೇರಿದಂತೆ ಇಬ್ಬರನ್ನು ಜನಸಮೂಹವು ಥಳಿಸಿದೆʼʼ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಘಟನೆ ನಡೆದು 15 ನಿಮಿಷಗಳಲ್ಲಿ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆಗಾಗಲೇ ದಂಪತಿ ಅಸುನೀಗಿದ್ದರು.

ಮದ್ಯ ಸೇವಿಸಿದ್ದ

ಪಬ್‌ನಲ್ಲಿ ಪಾರ್ಟಿ ಮಾಡಿದ್ದ ಅಪ್ರಾಪ್ತರು ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯ ಕಾರಣ ನೀಡಿ ಎಫ್ಐಆರ್ ದಾಖಲಿಸಲಾಗಿದೆ. ಕಾರು ಚಲಾಯಿಸಿದ ಹದಿಹರೆಯದವನ ತಂದೆ ಮತ್ತು ಆತನಿಗೆ ಮದ್ಯ ಪೂರೈಸಿದ ಪಬ್ ವಿರುದ್ಧವೂ ದೂರು ದಾಖಲಿಸುವ ಸಾಧ್ಯತೆ ಇದೆ. ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು, ಇದು ʼಘೋರ ಅಪರಾಧʼ ಆಗಿರುವುದರಿಂದ ಆರೋಪಿಯನ್ನು ವಯಸ್ಕನಂತೆ ಪರಿಗಣಿಸಿ ಆತನನ್ನು ಕಸ್ಟಡಿಗೆ ನೀಡಬೇಕೆಂದು ಕೋರಿದ್ದರು. ಜಾಮೀನು ಆದೇಶದ ವಿರುದ್ಧ ಅವರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Continue Reading

ದೇಶ

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

ISIS Terrorists: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯಗಳು ನಡೆಯುವ ಕೆಲವೇ ಗಂಟೆಗಳ ಮೊದಲೇ ಉಗ್ರರನ್ನು ಬಂಧಿಸಿರುವುದು ಪ್ರಾಮುಖ್ಯತೆ ಪಡೆದಿದೆ.

VISTARANEWS.COM


on

ISIS Terrorists
Koo

ಅಹಮದಾಬಾದ್: ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಬಂಧಿಸಿದ್ದಾರೆ. ಸರ್ದಾರ್‌ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Ahmedabad Airport) ಎಟಿಸ್‌ ಸಿಬ್ಬಂದಿಯು ಶ್ರೀಲಂಕಾದ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗಲೇ ಅವರನ್ನು ಬಲೆಗೆ ಹಾಕಿದ್ದಾರೆ. ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ವರನ್ನೂ ಬಂಧಿಸುತ್ತಲೇ ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಎಟಿಎಸ್‌ ಸಿಬ್ಬಂದಿಯು ವಿಚಾರಣೆ ನಡೆಸುತ್ತಿದ್ದಾರೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ಏನು ಮಾಡುತ್ತಿದ್ದರು? ಅವರು ರೂಪಿಸಿದ ಸಂಚೇನು? ಎಲ್ಲಿಗೆ ಹೋಗುವವರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯಗಳು ನಡೆಯುವ ಕೆಲವೇ ಗಂಟೆಗಳ ಮೊದಲೇ ಉಗ್ರರನ್ನು ಬಂಧಿಸಿರುವುದು ಪ್ರಾಮುಖ್ಯತೆ ಪಡೆದಿದೆ.

ಮೊದಲ ಕ್ವಾಲಿಫೈಯರ್​ ಪಂದ್ಯ ಮಂಗಳವಾರ (ಮೇ 21) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಬುಧವಾರ (ಮೇ 22) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯವೂ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಇದರಿಂದಾಗಿ ಅಹಮದಾಬಾದ್‌ನಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇದರ ಮಧ್ಯೆಯೇ, ಏರ್‌ಪೋರ್ಟ್‌ನಲ್ಲಿ ನಾಲ್ವರು ಉಗ್ರರ ಬಂಧನವಾಗಿದೆ.

ಮೇ 12ರಂದು ಬಾಂಬ್‌ ಬೆದರಿಕೆ

ಮೇ 12ರಂದು ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು. ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಬೆದರಿಕೆಯ ಮೇಲ್‌ ಬರುತ್ತಲೇ ಭದ್ರತಾ ಸಿಬ್ಬಂದಿಯು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿತ್ತು. ಇಡೀ ವಿಮಾನ ನಿಲ್ದಾನದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳಿಗಾಗಿ ಇನ್ನಿಲ್ಲದಂತೆ ಪರಿಶೀಲನೆ ನಡೆಸಲಾಗಿತ್ತು. ಹಾಗಾಗಿ, ಉಗ್ರರ ಬಂಧನವು ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ: ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Continue Reading

ದೇಶ

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

Liquid Nitrogen Paan: ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.ಈ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ.

VISTARANEWS.COM


on

Liquid Nitrogen Paan
Koo

ಬೆಂಗಳೂರು: ಪಾನ್‌(ಬೀಡಾ)(Liquid Nitrogen Paan) ಸೇವಿಸೋದಂದ್ರೆ ಬಹುತೇಕ ಎಲ್ಲರಿಗೂ ಇಷ್ಟ ಇರುತ್ತದೆ. ಮೊದಲೆಲ್ಲಾ ವಯಸ್ಸಾದವರು ಪಾನ್‌ ಸೇವಿಸೋ ಅಭ್ಯಾಸ ಇಟ್ಟುಕೊಂಡಿದ್ದರು. ಈಗೀಗ ಯುವಕರೂ ಪಾನ್‌ ಹಾಕುವ ಶೋಕಿ ರೂಢಿಸಿಕೊಂಡಿದ್ದಾರೆ. ಇದೀಗ ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ. ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ ಈ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಟ್ರೆಂಡಿ ಫುಡ್‌ಗಳು ಕೆಲವೊಮ್ಮೆ ಹೇಗೆ ಪ್ರಾಣಕ್ಕೆ ಕುತ್ತಾಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ..

ಬಾಲಕಿಯನ್ನು ಇಂಟ್ರಾಆಪರೇಟಿವ್ OGD ಸ್ಕೋಪಿಯೊಂದಿಗೆ ಪರಿಶೋಧನಾತ್ಮಕ ಲ್ಯಾಪರೊಟಮಿಗೆ ಒಳಪಡಿಸಲಾಯಿತು. ಅಲ್ಲಿ ಅನ್ನನಾಳ, ಹೊಟ್ಟೆ ಮತ್ತು ಡ್ಯುವೋಡೆನಮ್ ಅನ್ನು ಪರೀಕ್ಷಿಸಲು ಎಂಡೋಸ್ಕೋಪ್ ಬಳಸಲಾಯಿತು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಸುಮಾರು 4×5 ಸೆಂ.ಮೀ ಅಳತೆಯ ಅನಾರೋಗ್ಯಕರ ಪ್ಯಾಚ್ ಕಂಡುಬಂದಿದೆ. ಇದೀಗ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಿದ್ದು, ಬಾಲಕಿ ವೈದ್ಯರ ನಿಗಾದಲ್ಲಿದ್ದಾಳೆ.

ಏನಿದು ಲಿಕ್ವಿಡ್‌ ನೈಟ್ರೋಜನ್‌ ಪಾನ್‌?

ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವಂತಹ ಟ್ರೆಂಡಿ ಪಾನ್‌ ಈ ಲಿಕ್ವಿಡ್ ನೈಟ್ರೋಜನ್ ಪಾನ್. ಪಾನ್‌ನಲ್ಲಿ ದ್ರವರೂಪದಲ್ಲಿ ಸಾರಜನಕವನ್ನು ತುಂಬಲಾಗುತ್ತದೆ. ಇದನ್ನು ಸೇವಿಸಿದಾಗ ಬಾಯಲ್ಲಿ ಹೊಗೆ ಬರಲು ಶುರು ಆಗುತ್ತದೆ. ಇದು ಬಾಯಿಯ ಚರ್ಮವನ್ನು ಹಾನಿಗೊಳಿಸುತ್ತದೆ ಮತ್ತು ತೀವ್ರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ. ಈ ಆವಿಯನ್ನು ಉಸಿರಾಡುವುದರಿಂದ ಉಸಿರಾಟದ ಸಮಸ್ಯೆ ಎದುರಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಿಕ್ವಿಡ್ ನೈಟ್ರೋಜನ್ ಜಗತ್ತಿನಲ್ಲಿಯೇ ಅತಿ ತಣ್ಣನೆಯ ವಸ್ತುವಾಗಿದ್ದು, ಅದನ್ನು ಸಾರಜನಕದ ದ್ರವೀಕರಣದಿಂದ ಮಾಡಲಾಗುತ್ತದೆ. ಅದರ ತಂಪಿನಲ್ಲಿ ಎಷ್ಟೊಂದು ತೀಕ್ಷ್ಣತೆ ಇರುತ್ತದೆ ಎಂದರೆ ಅಂಗೈ ಮೇಲೆ ಸುರಿದುಕೊಂಡರೆ ಅಂಗೈ ತೂತಾಗುತ್ತದೆ. ಇದನ್ನು ಸೇವಿಸುವುದರಿಂದ ಇದು ಅಂಗಾಂಶಗಳಿಗೆ ಆಮ್ಲಜನಕದ ಪೂರೈಕೆಯನ್ನು ಕಡಿತಗೊಳಿಸುವ ಮೂಲಕ ಉಸಿರುಕಟ್ಟುವಿಕೆಗೆ ಕಾರಣವಾಗುತ್ತದೆ. ಸ್ಮೋಕ್‌ ಬಿಸ್ಕತ್‌, ಬಿಯರ್‌, ಐಸ್‌ ಕ್ರೀಂಗಳಲ್ಲಿ ಇದನ್ನು ಬಳಸಲಾಗುತ್ತಿದೆ. ಈಗಾಗಲೇ ತಮಿಳುನಾಡು ಇದರ ನೇರ ಬಳಕೆಯನ್ನು ನಿಷೇಧಿಸಿದ್ದು, ಕರ್ನಾಟಕದಲ್ಲೂ ಬ್ಯಾನ್ ಮಾಡುವಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ:Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

ಕೆಲವು ತಿಂಗಳ ಹಿಂದೆ ದಾವಣಗೆರೆಯಲ್ಲೂ ಇಂತಹದ್ದೇ ಒಂ ಘಟನೆ ವರದಿ ಆಗಿತ್ತು. ವಸ್ತುಪ್ರದರ್ಶನದಲ್ಲಿ ಬಾಲಕನೊಬ್ಬ ‘ಸ್ಮೋಕ್ ಬಿಸ್ಕೆಟ್’ ಸೇವಿಸಿದ ಬಳಿಕ ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಳಿಕ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ ಕುರಿತು ಹಲವರು ದ್ವನಿಯೆತ್ತಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಅದನ್ನು ಬ್ಯಾನ್‌ ಮಾಡಿತ್ತು.

Continue Reading
Advertisement
theft case
ತುಮಕೂರು3 mins ago

Theft Case : ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

Physical Abuse & Murder
ದೇಶ5 mins ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Crime News
ದೇಶ7 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

ISIS Terrorists
ದೇಶ8 mins ago

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

Deepika Padukone Enjoy Lunch Date After Casting Their Vote
ಬಾಲಿವುಡ್10 mins ago

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Prajwal Revanna Case One more SPP appointed for SIT cases Govt gears up for arguments in High Court
ಕ್ರೈಂ27 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

MS Dhoni Retirement
ಕ್ರಿಕೆಟ್31 mins ago

MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

Kannada New Movie sanju weds geetha another movie came
ಸ್ಯಾಂಡಲ್ ವುಡ್34 mins ago

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

HD Revanna
ಪ್ರಮುಖ ಸುದ್ದಿ37 mins ago

HD Revanna: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಎಚ್‌ಡಿ ರೇವಣ್ಣಗೆ ಜಾಮೀನು, ಬಿಗ್‌ ರಿಲೀಫ್

IPL 2024
ಕ್ರೀಡೆ1 hour ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ24 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌