Viral Video: ಕೇರಳದಿಂದ ಕಾಶ್ಮೀರದವರೆಗೆ; ಒಮ್ಮೆ ಕ್ವಿಕ್​ ಆಗಿ ಪ್ರವಾಸಕ್ಕೆ ಹೋಗಿಬರೋಣ ಬನ್ನಿ! - Vistara News

ವೈರಲ್ ನ್ಯೂಸ್

Viral Video: ಕೇರಳದಿಂದ ಕಾಶ್ಮೀರದವರೆಗೆ; ಒಮ್ಮೆ ಕ್ವಿಕ್​ ಆಗಿ ಪ್ರವಾಸಕ್ಕೆ ಹೋಗಿಬರೋಣ ಬನ್ನಿ!

ಹರ್ಷ್​ ಗೋಯೆಂಕಾ ಸೋಷಿಯಲ್​ ಮೀಡಿಯಾಗಳಲ್ಲಿ ಸದಾ ಒಂದಿಲ್ಲೊಂದು ಗಮನಸೆಳೆಯುವ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಸಲ ನಮ್ಮನ್ನು ಅವರು ಕೇರಳದಿಂದ ಕಾಶ್ಮೀರದವರೆಗೆ ವಿವಿಧ ಸ್ಥಳಗಳಿಗೆ ಕ್ಷಣಿಕ ಪ್ರವಾಸಕ್ಕೇ ಕರೆದುಕೊಂಡು ಹೋಗಿದ್ದಾರೆ.

VISTARANEWS.COM


on

tourist destinations Of Incredible India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತ ವೈವಿಧ್ಯತೆಯನ್ನೇ ಜೀವಾಳವಾಗಿಟ್ಟುಕೊಂಡ ದೇಶ. ಇಲ್ಲಿ ಜನಜೀವನ, ನೆಲ, ಭಾಷೆ, ಉಡುಪು, ಆಹಾರ, ಸಂಪ್ರದಾಯ, ಸಂಸ್ಕೃತಿ, ಹಬ್ಬಗಳ ಆಚರಣೆ..ಹೀಗೆ ಪ್ರತಿಯೊಂದರಲ್ಲೂ ನಾವು ವಿವಿಧತೆಯನ್ನು ಕಾಣುತ್ತೇವೆ. ಭಾರತ ತನ್ನ ಹಲವು ವಿಭಿನ್ನತೆ ಕಾರಣಕ್ಕೇ ಒಂದು ವಿಶೇಷ ರಾಷ್ಟ್ರ ಎನ್ನಿಸಿಕೊಂಡಿದೆ. ಅದರಲ್ಲೊಂದು ಇಲ್ಲಿನ ಪ್ರವಾಸಿ ತಾಣ (Tourist Destinations)ಗಳು. ಇಲ್ಲಿನ ಪ್ರತಿರಾಜ್ಯಗಳಲ್ಲೂ ಒಂದೊಂದೂ ಐತಿಹಾಸಿಕ, ಪೌರಾಣಿಕ ಹಿನ್ನೆಲೆಯಿರುವ ಪ್ರವಾಸಿ ಸ್ಥಳಗಳಿವೆ. ಶೈಕ್ಷಣಿಕ ಅರಿವು ಮೂಡಿಸುವ ತಾಣಗಳಿಂದ ಹಿಡಿದು, ಭಕ್ತಿಯ ಪರಾಕಾಷ್ಠೆಗೆ ಕೊಂಡೊಯ್ಯುವ, ಪ್ರಕೃತಿ ಸೌಂದರ್ಯವನ್ನು ಬಿಚ್ಚಿಟ್ಟು ಮನಸಿಗೆ ಆಹ್ಲಾದ ಉಂಟು ಮಾಡುವ, ರೊಮ್ಯಾಂಟಿಕ್​ ಫೀಲ್​ ಹುಟ್ಟಿಸುವ ಪ್ರದೇಶಗಳವರೆಗೆ ಎಲ್ಲ ರೀತಿಯ ಪ್ರವಾಸಿ ಸ್ಥಳಗಳೂ ಭಾರತದಲ್ಲಿವೆ. ಇಲ್ಲಿ ಪ್ರವಾಸಕ್ಕೆಂದು ಹೊರಟರೆ ಸುತ್ತಾಡಲು ಒಂದು ಜನ್ಮ ಸಾಕಾಗದಷ್ಟು ತಾಣಗಳು ಸಿಗಬಹುದು.

ಹೀಗೆ ಭಾರತಕ್ಕೆ ವಿಭಿನ್ನತೆಯನ್ನು ಕೊಟ್ಟ ಇಲ್ಲಿನ ಒಂದಷ್ಟು ಪ್ರವಾಸಿ ತಾಣಗಳ ತ್ವರಿತ ಪರಿಚಯವನ್ನು ಈಗ ಉದ್ಯಮಿ ಹರ್ಷ್​ ಗೋಯೆಂಕಾ ಅವರು ಮಾಡಿಸಿದ್ದಾರೆ. 30 ಸೆಕೆಂಡ್​​ಗಳ ವಿಡಿಯೊವನ್ನು ತಮ್ಮ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿರುವ ಅವರು Incredible ಎಂದು ಕ್ಯಾಪ್ಷನ್ ಬರೆದು, ಭಾರತದ ಧ್ವಜದ ಚಿತ್ರ ಹಾಕಿದ್ದಾರೆ. ಅಂದರೆ ಭಾರತ ನಂಬಿಕೆಗೆ ನಿಲುಕದಷ್ಟು ವೈವಿಧ್ಯಮಯವಾಗಿದೆ ಎಂಬ ಭಾವವನ್ನು ಅವರು ಇಲ್ಲಿ ಸ್ಫುರಿಸಿದ್ದಾರೆ.

ಹರ್ಷ್​ ಗೋಯೆಂಕಾ ಸೋಷಿಯಲ್​ ಮೀಡಿಯಾಗಳಲ್ಲಿ ಸದಾ ಒಂದಿಲ್ಲೊಂದು ಗಮನಸೆಳೆಯುವ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಸಲ ನಮ್ಮನ್ನು ಅವರು ಕೇರಳದಿಂದ ಕಾಶ್ಮೀರದವರೆಗೆ ವಿವಿಧ ಸ್ಥಳಗಳಿಗೆ ಕ್ಷಣಿಕ ಪ್ರವಾಸಕ್ಕೇ ಕರೆದುಕೊಂಡು ಹೋಗಿಬಿಟ್ಟಿದ್ದಾರೆ. ದೇಶದ ವಿವಿಧ ನಗರಗಳ ಪ್ರಸಿದ್ಧ ಪ್ರವಾಸಿ ಸ್ಥಳಗಳ ತುಣುಕುಗಳ ವಿಡಿಯೊಕ್ಕೆ, ಅದಕ್ಕೊಪ್ಪುವ ಹಾಡನ್ನೂ ಹಾಕಲಾಗಿದೆ. ಆಯಾ ಸ್ಥಳಗಳ ಹವಾಮಾನವನ್ನು-ಪರಿಸರ ವ್ಯವಸ್ಥೆಯನ್ನು ಈ ಹಾಡಿನಲ್ಲಿ ಬಿಂಬಿಸಲಾಗಿದೆ. ಇಲ್ಲಿದೆ ನೋಡಿ..ವಿಡಿಯೊ, ಹಾಗೇ, ಒಂದು ರೌಂಡ್​ ಇಲ್ಲಿಯೇ ಪ್ರವಾಸಕ್ಕೆ ಹೋಗಿ ಬಂದುಬಿಡಿ..! ವಿಡಿಯೊ ನೋಡಿದ ನೆಟ್ಟಿಗರಂತೂ ನಮ್ಮ ಭಾರತದ ವೈವಿಧ್ಯತೆಯನ್ನು ಮನಸು ತುಂಬಿ ಹೊಗಳುತ್ತಿದ್ದಾರೆ.

ಇದನ್ನೂ ಓದಿ: Viral Video: ಗೌನ್​ ಧರಿಸುತ್ತಿದ್ದ ನ್ಯಾಯಾಧೀಶರಿಗೆ ಬಿತ್ತು ಗುಂಡೇಟು; ಆಕಸ್ಮಿಕವಾಗಿ ಫೈರಿಂಗ್​ ಮಾಡಿದ್ದು ಅವರದ್ದೇ ಪಿಸ್ತೂಲ್​​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

Jyoti Rai: ಸದ್ಯ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ನಕಲಿ ಅಶ್ಲೀಲ ವಿಡಿಯೊ ವೈರಲ್‌ ಆಗಿದೆ. ಈ ಬಗ್ಗೆ ನಟಿ ಸೈಬರ್‌ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಈ ಘಟನೆಯಿಂದ ತೀವ್ರವಾಗಿ ನೊಂದುಕೊಂಡಿರುವ ಅವರು ಇದೀಗ ನೋವಿನ ನಡುವೆಯೂ ಹಿರಿಯ ಗಾಯಕ ಮೊಗಿಲಯ್ಯ ಅವರ ಕಷ್ಟಕ್ಕೆ ಸ್ಪಂದಿಸುವ ಮೂಲಕ ಮಾದರಿಯಾಗಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಮೊಗಿಲಯ್ಯ ಅವರಿಗೆ ಜ್ಯೋತಿ ರೈ ಅವರು ಅಕ್ಷಯ ತೃತೀಯದಂದು 50 ಸಾವಿರ ರೂ. ಧನ ಸಹಾಯ ಮಾಡಿದ್ದಾರೆ.

VISTARANEWS.COM


on

Jyoti Rai
Koo

ಹೈದರಾಬಾದ್‌: ಸದ್ಯ ಕಿರುತೆರೆ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಮೂಲದ ಜ್ಯೋತಿ ರೈ (Jyoti Rai) ಕುರಿತಾದ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವುದೇ ಇದಕ್ಕೆ ಕಾರಣ. ಈ ಪ್ರಕರಣದಿಂದ ಆಘಾತಕ್ಕೊಳಗಾದ ಅವರು ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾಗಿದ್ದಾರೆ.

ತೆಲುಗಿನ ಜನಪ್ರಿಯ ಜನಪದ ಗಾಯಕ ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ (Darshanam Mogilaiah) ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದಾರೆ.

ಧನ ಸಹಾಯ

ಅಕ್ಷಯ ತೃತೀಯ ದಿನ (ಶುಕ್ರವಾರ)ದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʼʼಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತುʼʼ ಎಂದು ಜ್ಯೋತಿ ರೈ ಹೇಳಿದ್ದಾರೆ.

ಮುಂದುವರಿದು, ʼʼಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣʼʼ ಎಂದು ಕರೆ ನೀಡಿದ್ದಾರೆ.

ಸವಾಲು

ಇದರ ಜತೆಗೆ ತಮ್ಮದು ಎನ್ನಲಾದ ನಕಲಿ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲು ಹಾಕಿದ್ದಾರೆ. ʼʼಈ ವಿಡಿಯೊ (ಮೊಗಿಲಯ್ಯ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ವಿಡಿಯೊ)ವನ್ನು ವೈರಲ್‌ ಮಾಡುವ ತಾಕತ್ತು ನಿಮ್ಮಲ್ಲಿ ಇದೆಯಾ? ಇದು ನಿಜವಾದುದು. ಈ ಕೆಳಗಿನ ಸಾಲುಗಳು ಕೆಲಸ ಇಲ್ಲದವರಿಗೆ, ಬುದ್ಧಿ ಇಲ್ಲದವರಿಗಾಗಿ. ಜಗತ್ತು ನನ್ನೆಡೆಗೆ ಅಂಧಕಾರವನ್ನು ದೂಡಿದಾಗ ನನ್ನೊಳಗಿನ ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ನನ್ನೊಳಗಿನ ಬೆಳಕು ಉರಿಯಲು ಇಂತಹ ಕತ್ತಲೇ ಇಂಧನ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏಳುತ್ತದೆ. ನಕಾರಾತ್ಮಕ ಶಕ್ತಿಯು ಮೆಟ್ಟಿಲು; ನಾನು ಅದರ ಮೇಲೆ ಹತ್ತಿ ಸಕಾರಾತ್ಮಕತೆಯ ದಿಗಂತದ ಕಡೆಗೆ ಸಾಗುತ್ತೇನೆʼʼ ಎಂದು ಜ್ಯೋತಿ ರೈ ಬರೆದುಕೊಂಡಿದ್ದಾರೆ. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ. ಅಭಿಮಾನಿಗಳು ಅವರ ಈ ದಿಟ್ಟತನವನ್ನು, ಮಾನವೀಯತೆಯ ಗುಣವನ್ನು ಮೆಚ್ಚಿದ್ದಾರೆ.

ಇದನ್ನೂ ಓದಿ: Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

ಇತ್ತೀಚೆಗೆ ಜ್ಯೋತಿ ರೈ ಅವರದ್ದು ಎನ್ನಲಾದ ಮೂರು ಅಶ್ಲೀಲ ವಿಡಿಯೊ ಹಾಗೂ ಕೆಲವು ಫೋಟೊಗಳು ವೈರಲ್ ಆಗಿದ್ದವು. ಬಳಿಕ ನಟಿ ಈ ಬಗ್ಗೆ ಸುದೀರ್ಘವಾಗಿ ಪತ್ರವನ್ನು ಬರೆದು ಸ್ಪಷ್ಟನೆ ನೀಡಿದ್ದರು. ʻʻನಾನು ಅಪರಿಚಿತ ವ್ಯಕ್ತಿಗಳಿಂದ ಕೆಲವು ಸಂದೇಶಗಳನ್ನು ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ಸರಿ ಮಾಡಲು ಸಾಧ್ಯವಾದಂತಹ ಡ್ಯಾಮೇಜ್ ಆಗಲಿದೆ. ನಿಮ್ಮ ತನಿಖೆಗೆ ಅನುಕೂಲವಾಗುವಂತೆ ಯೂಸರ್ ಐಡಿಗಳನ್ನು ಪೋಸ್ಟ್‌ ಮಾಡಿದ್ದೇನೆʼʼ ಎಂದು ಹೇಳಿಕೊಂಡಿದ್ದರು. ಜತೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಹ ನೀಡಿದ್ದರು.

Continue Reading

ಕಲಬುರಗಿ

Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

Assault Case : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕ್ಷೇತ್ರದಲ್ಲೇ ಹೇಯ ಕೃತ್ಯವೊಂದು ನಡೆದಿದೆ. ಹಣಕ್ಕಾಗಿ ಕಾರು ವ್ಯಾಪಾರಿ ಸೇರಿ ಮತ್ತಿಬ್ಬರನ್ನು ಮನೆಯೊಂದರಲ್ಲಿ ಕೂಡಿ ಹಾಕಿದ ದುರ್ಷಮಿಗಳು, ಅವರನ್ನು ಬೆತ್ತಲೆ ಮಾಡಿ, ಕರೆಂಟ್‌ ಶಾಕ್‌ ಕೊಟ್ಟು ಹಲ್ಲೆ ಮಾಡಿ ಟಾರ್ಚರ್‌ ಮಾಡಿದ್ದಾರೆ.

VISTARANEWS.COM


on

By

Assault case in kalaburagi
ಆರು ಮಂದಿ ಬಂಧಿತ ಆರೋಪಿಗಳು ಹಾಗೂ ಮಧ್ಯ ಭಾಗದಲ್ಲಿ ಕಿಡ್ನ್ಯಾಪ್‌ ಆಗಿದ್ದ ಅರ್ಜುನ್‌
Koo

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

Viral News: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರಿ ಬಿಡಿ ಹಗಲಿನಲ್ಲೇ ಮಹಿಳೆಯರು, ಯುವತಿಯರು, ಮಕ್ಕಳು ಓಡಾಡಲು ಭಯಪಡುವಂತಾಗಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ರಸ್ತೆ ಬದಿಯಲ್ಲಿ ಸ್ಕೂಟಿ‌ ನಿಲ್ಲಿಸಿಕೊಂಡು ನಿಂತಿದ್ದ ಯುವತಿ ಬಳಿಗೆ ಬಂದ ಸ್ಕೂಟರ್‌ನಲ್ಲಿದ್ದ ಇಬ್ಬರು ಯುವಕರು ಹಿಂದಿಯಲ್ಲಿ ನಿಂದಿಸಿದ್ದಾರೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ರಸ್ತೆಯ ಪಕ್ಕ ಸ್ಕೂಟಿ ನಿಲ್ಲಿಸಿ ಯುವತಿ ತಮ್ಮ ಪಾಡಿಗೆ ತಾವು ನಿಂತಿದ್ದರು. ಅಲ್ಲಿಗೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು, ʼʼಕುಡಿದ ನಶೆಯಲ್ಲಿ ರೋಡ್ ಶೋ ಮಾಡುತ್ತೀಯಾ?ʼʼ ಎಂದು ಬೈದಿದ್ದಾರೆ. ಯುವಕರ ಅವಾಚ್ಯ ನಿಂದನೆಯಿಂದ ಒಂದು ಕ್ಷಣ ಗಾಬರಿಗೊಳಗಾದ ಯುವತಿ ಬಳಿಕ ಅವರನ್ನು ದಿಟ್ಟವಾಗಿ ಎದುರಿಸಿದ್ದಾರೆ. ಅವರನ್ನೇ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಪುಂಡರು ಅಶ್ಲೀಲ ಪದಗಳಿಂದ ಯುವತಿಯನ್ನು ಹಿಂದಿಯಲ್ಲಿ ನಿಂದಿಸಿದ್ದಾರೆ. ಹೀಗೆ ಯುವಕರು ಕೆಲಕಾಲ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಸದ್ಯ ಈ ವಿಡಿಯೊ ವೈರಲ್ ಆಗಿದ್ದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಅನುಚಿತವಾಗಿ ವರ್ತಿಸುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ನಡುಬೀದಿಯಲ್ಲಿ ಲೈಂಗಿಕ ಕಿರುಕುಳ

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲೇ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ. ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ಒಂದು ವಾರದ ಹಿಂದೆ 10:30ರ ಸುಮಾರಿಗೆ ನಡೆದ ಘಟನೆ ಇದು.

ಜತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ. ಹೀಗಾಗಿ ಸದ್ಯ ಬೆಂಗಳೂರಿಗರು ಒಬ್ಬರೇ ಓಡಾಡಲು ಭಯಪಡುವಂತಾಗಿದೆ.

ಇದನ್ನೂ ಓದಿ: Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Continue Reading

ವೈರಲ್ ನ್ಯೂಸ್

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Viral News:ಬಾರ್ ಅಂಡ್ ರೆಸ್ಟೊರೆಂಟ್‌ನ ಹೊರಗೆ ಮೂವರು ಯುವತಿಯರು ಪರಸ್ಪರ ಗಲಾಟೆ ಮಾಡುತ್ತಿದ್ದರು. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ್ದರು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಯುವತಿಯರನ್ನು ಸಮಾಧಾನಪಡಿಸಲು ಮುಂದಾಗುತ್ತಾರೆ. ಮತ್ತು ತಕ್ಷಣ ಅಲ್ಲಿಂದ ತೆರಳುವಂತೆ ಸೂಚಿಸುತ್ತಾರೆ. ಆಗ ಕೋಪಗೊಂಡ ಯುವತಿಯರು ಪೊಲೀಸರಿಗೇ ಆವಾಜ್‌ ಹಾಕಿದ್ದಾರೆ. ಸಾಲದೆಂಬುದಕ್ಕೆ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಬಾರ್‌ನಲ್ಲಿ ತಡರಾತ್ರಿ ಪಾರ್ಟಿ(Mumbai Bar) ಮುಗಿಸಿ ಮೂವರು ಯುವತಿಯ ಮಾರಾಮಾರಿ ನಡೆದಿದ್ದು, ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ನಶೆಯಲ್ಲಿ ತೂರಾಡುತ್ತಿದ್ದ ಯುವತಿಯರ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್(Viral News) ಆಗಿದೆ. ಪಾರ್ಟಿಯ ಮೂಡಿನಲ್ಲಿದ್ದ ಯುವತಿಯರನ್ನು ಕೊನೆಗೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮುಂಬೈನ ವಿರಾರ್ ಪ್ರದೇಶದ ಗೋಕುಲ್ ಟೌನ್‌ಶಿಪ್‌ನಲ್ಲಿ ಈ ಘಟನೆ ನಡೆದಿದೆ.

ಘಟನೆ ವಿವರ:

ಬಾರ್ ಅಂಡ್ ರೆಸ್ಟೊರೆಂಟ್‌ನ ಹೊರಗೆ ಮೂವರು ಯುವತಿಯರು ಪರಸ್ಪರ ಗಲಾಟೆ ಮಾಡುತ್ತಿದ್ದರು. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ್ದರು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಯುವತಿಯರನ್ನು ಸಮಾಧಾನಪಡಿಸಲು ಮುಂದಾಗುತ್ತಾರೆ. ಮತ್ತು ತಕ್ಷಣ ಅಲ್ಲಿಂದ ತೆರಳುವಂತೆ ಸೂಚಿಸುತ್ತಾರೆ. ಆಗ ಕೋಪಗೊಂಡ ಯುವತಿಯರು ಪೊಲೀಸರಿಗೇ ಆವಾಜ್‌ ಹಾಕಿದ್ದಾರೆ. ಸಾಲದೆಂಬುದಕ್ಕೆ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಕಿಡಿದ ನಶೆಯಲ್ಲಿ ಪೊಲೀಸರನ್ನು ಅಚಾಚ್ಯ ಶಬ್ಧಗಳಿಂದ ನಿಂದಿಸಿದ ಯುವತಿಯರು, ಮಹಿಳಾ ಪೊಲೀಸ್ ಪೇದೆಯೊಬ್ಬರ ಕೈ ಕಚ್ಚಿದ್ದಲ್ಲದೆ, ಆಕೆಯ ಸಮವಸ್ತ್ರವನ್ನೂ ಹರಿದಿದ್ದಾರೆ. ಮತ್ತೊಬ್ಬ ಕಾನ್ ಸ್ಟೇಬಲ್ ತಲೆಗೆ ಬಕೆಟ್ ನಿಂದ ಹೊಡೆದಿದ್ದಾನೆ. ಅವರ ಕೈಯನ್ನೂ ಕಚ್ಚಿದ್ದಾರೆ. ಪೊಲೀಸರು ಆರೋಪಿಗಳನ್ನು ಕಾವ್ಯ, ಅಶ್ವಿನಿ ಮತ್ತು ಪೂಣಂ ಎಂದು ಗುರುತಿಸಿದ್ದಾರೆ. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ:Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

ಕೆಲವು ತಿಂಗಳ ಹಿಂದೆ ಕಲಬುರಗಿಯಲ್ಲೂ ಇಂತಹದ್ದೇ ಒಂದಿ ಘಟನೆ ನಡೆದಿತ್ತು. ಪರೀಕ್ಷೆ ವೇಳೆ ಕಾಪಿ ಮಾಡಲು ಅವಕಾಶ ನೀಡಲಿಲ್ಲ ಎಂದು ಇಬ್ಬರು ವ್ಯಕ್ತಿಗಳು ಪೊಲೀಸ್ ಮುಖ್ಯ ಪೇದೆ ಮೇಲೆ ಹಲ್ಲೆ ನಡೆಸಿದ್ದರು. ಲಾಠಿ ಕಸಿದು, ಕಲ್ಲಿನಿಂದ ಹೊಡೆದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿತ್ತು. ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 20ರಂದು ಹಲ್ಲೆ ಮಾಡಿದ ಆರೋಪಿಗಳ ಪೈಕಿ ಒಬ್ಬರ ಸಹೋದರಿಯ ಪರೀಕ್ಷೆ ಬರೆಯುತ್ತಿದ್ದರು. ಈ ವೇಳೆ ಈ ಆಕೆಯ ಅಣ್ಣ ತಾನು ತಂಗಿಗೆ ಸಹಾಯ ಮಾಡಲು ಮುಂದಾಗಿದ್ದ. ಈ ವೇಳೆ ಆತನನ್ನು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ತಡೆದಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಹೋದರ ಪೋಲಸ್ ಅಂತಲೂ ನೋಡದೇ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಂಗಿ ಪರವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಯುವಕ ತಕರಾರು ಎತ್ತಿದ್ದ. ಅದಕ್ಕೆ ಒಪ್ಪದೇ ಇದ್ದಾಗ ಆರೋಪಿ ಹಲ್ಲೆ ಮಾಡಿದ್ದಾನೆ.

Continue Reading
Advertisement
Rain News
ಮಳೆ2 mins ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ32 mins ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ38 mins ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ40 mins ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ54 mins ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್2 hours ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

James Anderson
ಪ್ರಮುಖ ಸುದ್ದಿ2 hours ago

James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

Sleeping tips
ಆರೋಗ್ಯ2 hours ago

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

Lok Sabha Election
ದೇಶ2 hours ago

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Babar Azam
ಪ್ರಮುಖ ಸುದ್ದಿ2 hours ago

Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು5 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌