US Shootings: ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 9 ಸಾವು - Vistara News

ಪ್ರಮುಖ ಸುದ್ದಿ

US Shootings: ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 9 ಸಾವು

ಉತ್ತರ ಕ್ಯಾಲಿಫೋರ್ನಿಯಾದ ಮೂರು ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಮಂದಿ ಗಾಯಗೊಂಡಿದ್ದಾರೆ.

VISTARANEWS.COM


on

US Shootings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾದ ಮೂರು ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಮಂದಿ ಗಾಯಗೊಂಡಿದ್ದಾರೆ.

ಉತ್ತರ ಕ್ಯಾಲಿಫೋರ್ನಿಯಾದ ಹಾಫ್‌ ಮೂನ್‌ ಬೇ ಎಂಬಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಾಟ ನಡೆಸಿದ್ದು ಘಟನೆಯ ಸ್ಥಳದಲ್ಲಿ ಝಾವೊ ಚುನ್‌ಲೀ ಎಂಬ ಚೈನೀಸ್‌- ಅಮೆರಿಕನ್‌ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಗುಂಡಿನ ದಾಳಿ ಎಸಗಿದವನು ಈತನೇ ಎಂದು ಸಂಶಯಿಸಲಾಗಿದೆ. ಅಣಬೆ ಫಾರ್ಮ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚೈನೀಸ್‌ ಕೆಲಸಗಾರರ ಮೇಲೆ ಈತ ಗುಂಡಿನ ದಾಳಿ ನಡೆಸಿದ್ದಾನೆ.

ಕ್ಯಾಲಿಫೋರ್ನಿಯಾ ಹಾಗೂ ಅಯೋವಾದ ಇನ್ನೆರಡು ಕಡೆ ಗುಂಡಿನ ದಾಳಿ ನಡೆದಿದೆ. ಈ ಮೂರು ಪ್ರತ್ಯೇಕ ಪ್ರಕರಣಗಳನ್ನು ಒಟ್ಟಾರೆ ಒಂಬತ್ತು ಮಂದಿ ಸತ್ತಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ. ಸದ್ಯ ಆರೋಪಿಗಳನ್ನು ಹಿಡಿಯಲಾಗಿದ್ದು, ಯಾವುದೇ ಅಪಾಯವಿಲ್ಲ ಎನ್ನಲಾಗಿದೆ. ಸಾವು ಹಾಗೂ ಗಾಯಾಳುಗಳ ನಿಖರ ಮಾಹಿತಿ ಬರಬೇಕಿದೆ.

ಕೇವಲ 48 ಗಂಟೆಗಳ ಮೊದಲು ಲಾಸ್‌ ಏಂಜಲೀಸ್‌ನಲ್ಲಿ ವ್ಯಕ್ತಿಯೊಬ್ಬ ಚೈನೀಸ್‌ ಹೊಸ ವರ್ಷಾಚರನೆಯಲ್ಲಿ ಗುಂಡಿನ ದಾಳಿ ನಡೆಸಿ 11 ಮಂದಿಯನ್ನು ಬಲಿ ಪಡೆದಿದ್ದ. ಅಯೋವಾದ ಸ್ಟಾರ್ಟ್ಸ್‌ ರೈಟ್‌ ಹಿಯರ್‌ ಎಂಬಲ್ಲಿ ನಡೆದ ಗುಂಡು ಹಾರಾಟದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ.

ಕಳೆದ ವರ್ಷ ಅಮೆರಿಕದಲ್ಲಿ 647 ಇಂಥ ಪ್ರಕರಣಗಳು ನಡೆದಿವೆ. ಅಮೆರಿಕದ ಬಂದೂಕು ಸಂಸ್ಕೃತಿಯ ಬಗ್ಗೆ ಇವು ಇನ್ನಷ್ಟು ಕಳವಳ ಮೂಡಿಸಿವೆ.

ಇದನ್ನೂ ಓದಿ | Russia School Shooting | 5 ಮಕ್ಕಳು ಸೇರಿ 13 ಜನರನ್ನು ಕೊಂದು ತಾನೂ ಸತ್ತ ಬಂದೂಕುಧಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

Nitish Kumar: ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು. ಮೋದಿ ನೇತೃತ್ವದಲ್ಲಿ ಮಾತ್ರ ದೇಶವು ಅಭಿವೃದ್ಧಿ ಹೊಂದಲಿದೆ ಎಂಬುದಾಗಿ ತಿಳಿಸಿದರು. ಇದೇ ವೇಳೆ ಇಂಡಿಯಾ ಒಕ್ಕೂಟಕ್ಕೆ ಟಾಂಗ್‌ ಕೊಟ್ಟ ಅವರು, “ಮುಂದಿನ ಬಾರಿಯೂ ಮೋದಿ ಅವರು ಚುನಾವಣೆಗೆ ನಿಂತರೆ, ಪ್ರತಿಪಕ್ಷಗಳ ಎಲ್ಲರೂ ಸೋಲುತ್ತಾರೆ” ಎಂದರು. ಆಗ ಮೋದಿ ಅವರು ಗಹಗಹಿಸಿ ನಕ್ಕರು.

VISTARANEWS.COM


on

Nitish Kumar
Koo

ನವದೆಹಲಿ: ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಇದಕ್ಕೂ ಮೊದಲು ಎನ್‌ಡಿಎ ಪಕ್ಷಗಳ ಸಭೆ ನಡೆದಿದ್ದು, ನರೇಂದ್ರ ಮೋದಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಣೆ ಮಾಡಲಾಯಿತು. ಇನ್ನು ಸಭೆಯ ವೇಳೆ, ನಿತೀಶ್‌ ಕುಮಾರ್‌ ಅವರು ಆಡಿದ ಮಾತಿಗೆ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕಿದ್ದಾರೆ.

“ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಮೋದಿಯ ಪಾದ ಮುಟ್ಟಿ, ನಮಸ್ಕರಿಸಲು ಮುಂದಾದ ನಿತೀಶ್

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.‌

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

Continue Reading

ಕರ್ನಾಟಕ

MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ!

MLC Election Results: ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಗೆಲುವು ಕಂಡಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಭೇರಿ ಮೊಳಗಿಸಿದ್ದಾರೆ.

VISTARANEWS.COM


on

MLC Election Results
ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್
Koo

ಬೆಂಗಳೂರು: ವಿಧಾನ ಪರಿಷತ್‌ಗೆ ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (MLC Election Results) ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಗೆಲುವು ಕಂಡಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಭೇರಿ ಮೊಳಗಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ರಾಮೋಜಿಗೌಡ ಗೆಲುವು

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ 36,729 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ 24,888 ಮತ ಪಡೆದಿದ್ದಾರೆ. ಈ ಮೂಲಕ 11,841 ಮತಗಳ ಅಂತರದಿಂದ ರಾಮೋಜಿಗೌಡ ಗೆದ್ದಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಡಿ.ಟಿ ಶ್ರೀನಿವಾಸ್ ಜಯಭೇರಿ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ 8,909 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ 7,142 ಮತ ಪಡೆದಿದ್ದಾರೆ. ಈ ಮೂಲಕ 1,767 ಮತಗಳ ಅಂತರದಿಂದ ಡಿ.ಟಿ ಶ್ರೀನಿವಾಸ್ ಗೆಲುವು ದಾಖಲಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

MLC Election

ಕಲಬುರಗಿ: ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (North East Graduate Constituency) ಎರಡನೇ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಕಂಡಿದ್ದಾರೆ. ಇವರು 4,651 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯ ಸಾಧಿಸುವ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ಗೆ 43,484 ಮತ ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ 38,833 ಮತಗಳು ಗಳಿಸಿದ್ದಾರೆ. ಈ ಮೂಲಕ 4,651 ಮತಗಳ ಅಂತರದಿಂದ ಡಾ.ಚಂದ್ರಶೇಖರ್ ಪಾಟೀಲ್ ಕ್ಷೇತ್ರದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಒಟ್ಟಾರೆ 1,09,031 ಮತ ಚಲಾವಣೆಯಾಗಿದ್ದು, ಇದರಲ್ಲಿ 96,519 ಮತಗಳು ಪುರಸ್ಕೃತಗೊಂಡಿದ್ದು, 12,513 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ | MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಫಲಿತಾಂಶದ ಬಗ್ಗೆ ಕಾಂಗ್ರೆಸ್‌ನ ನೂತನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಇದು ನನ್ನ ಗೆಲುವಲ್ಲಾ, ಏಳು ಜಿಲ್ಲೆಯ ಪದವಿಧರರ ಗೆಲುವು. ನನ್ನ ಗೆಲುವಿಗೆ ಶಿಕ್ಷಕರು, ಪದವೀಧರರು ಕಾರಣ. ಕಲ್ಯಾಣ‌ ಕರ್ನಾಟಕ ಭಾಗದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಶ್ರಮಿಸುವೆ. ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡುವೆ. ನಾನು ರಾಜಕಾರಣಿ ಮನೆತನದವನು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನನಗೂ ಶಿಕ್ಷಕರ ಸಮಸ್ಯೆ ಕಷ್ಟ ಏನು ಅಂತ ಗೊತ್ತಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು, ಕೆಲಸ‌ ಮಾಡಲು ಸಹಕರಿಸಲಿಲ್ಲ.. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹಿರಿಯರ ಜತೆ ಮಾತನಾಡುವೆ ಎಂದು ತಿಳಿಸಿದ್ದಾರೆ.

Continue Reading

ದೇಶ

Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

Narendra Modi: ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾಗಿ, ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಯಾದ ನರೇಂದ್ರ ಮೋದಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ದ್ರೌಪದಿ ಮುರ್ಮು (Droupadi Murmu) ಅವರು ನೇಮಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ (NDA Meeting) ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾಗಿ, ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಯಾದ ನರೇಂದ್ರ ಮೋದಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ದ್ರೌಪದಿ ಮುರ್ಮು (Droupadi Murmu) ಅವರು ನೇಂಮಿಸಿದ್ದಾರೆ.

ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಬಳಿಕ ಮೋದಿ ಮಾತನಾಡಿದರು. “ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲು ಮನವಿ ಮಾಡಲಾಗಿದೆ. ಇನ್ನುಳಿದ ಮಾಹಿತಿಯನ್ನು ರಾಷ್ಟ್ರಪತಿ ಭವನ ನೀಡಲಿದೆ. ಸಾಮಾನ್ಯ ಜನರ ಕನಸು ಪೂರ್ತಿಗೊಳಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತೇವೆ. ಇನ್ನಷ್ಟು ವೇಗದೊಂದಿಗೆ ಕೆಲಸ ಮುಂದುವರಿಸೋಣ. 2014 ರಲ್ಲಿ ನಾನು ಹೊಸಬನಾಗಿದ್ದೆ. ಈಗ ನನಗೆ ಅನುಭವ ಸಿಕ್ಕಿದೆ, ಹೀಗಾಗಿ ಕೂಡಲೇ ಆರಂಭಿಸಲಿದ್ದೇವೆ. ಈ ಅನುಭವ ದೇಶದ ಸೇವೆಗೆ ಸಿಗಲಿದೆ” ಎಂದು ತಿಳಿಸಿದರು.

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

Continue Reading

ಕರ್ನಾಟಕ

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಅವರು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ 4,651 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ.

VISTARANEWS.COM


on

MLC Election
Koo

ಕಲಬುರಗಿ: ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (North East Graduate Constituency) ಎರಡನೇ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಕಂಡಿದ್ದಾರೆ. ಇವರು 4,651 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯ ಸಾಧಿಸುವ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ಗೆ 43,484 ಮತ ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ 38,833 ಮತಗಳು ಗಳಿಸಿದ್ದಾರೆ. ಈ ಮೂಲಕ 4,651 ಮತಗಳ ಅಂತರದಿಂದ ಡಾ.ಚಂದ್ರಶೇಖರ್ ಪಾಟೀಲ್ ಕ್ಷೇತ್ರದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಒಟ್ಟಾರೆ 1,09,031 ಮತ ಚಲಾವಣೆಯಾಗಿದ್ದು, ಇದರಲ್ಲಿ 96,519 ಮತಗಳು ಪುರಸ್ಕೃತಗೊಂಡಿದ್ದು, 12,513 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ | MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಫಲಿತಾಂಶದ ಬಗ್ಗೆ ಕಾಂಗ್ರೆಸ್‌ನ ನೂತನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಇದು ನನ್ನ ಗೆಲುವಲ್ಲಾ, ಏಳು ಜಿಲ್ಲೆಯ ಪದವಿಧರರ ಗೆಲುವು. ನನ್ನ ಗೆಲುವಿಗೆ ಶಿಕ್ಷಕರು, ಪದವೀಧರರು ಕಾರಣ. ಕಲ್ಯಾಣ‌ ಕರ್ನಾಟಕ ಭಾಗದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಶ್ರಮಿಸುವೆ. ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡುವೆ. ನಾನು ರಾಜಕಾರಣಿ ಮನೆತನದವನು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನನಗೂ ಶಿಕ್ಷಕರ ಸಮಸ್ಯೆ ಕಷ್ಟ ಏನು ಅಂತ ಗೊತ್ತಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು, ಕೆಲಸ‌ ಮಾಡಲು ಸಹಕರಿಸಲಿಲ್ಲ.. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹಿರಿಯರ ಜತೆ ಮಾತನಾಡುವೆ ಎಂದು ತಿಳಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿಗೆ ಗೆಲುವು; ರಘುಪತಿ ಭಟ್‌ ಬಂಡಾಯ ವಿಫಲ

dhananjaya sarji mlc election

ಮೈಸೂರು: ವಿಧಾನ ಪರಿಷತ್‌ಗೆ (MLC Election Results) ನೈರುತ್ಯ ಪದವೀಧರ ಕ್ಷೇತ್ರದಿಂದ (Graduate constituency) ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭರ್ಜರಿ ಗೆಲುವು ದೊರೆತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ಆಯನೂರು ಮಂಜುನಾಥ್‌ಗೆ ಹೀನಾಯ ಸೋಲಾಗಿದೆ. ಬಿಜೆಪಿಯಿಂದ ಬಂಡಾಯ ಎದ್ದು ಸ್ಪರ್ಧಿಸಿದ್ದ ಮಾಜಿ ಶಾಸಕ ರಘುಪತಿ ಭಟ್‌ (Raghupathi Bhat) ಅವರ ಉಮೇದುವಾರಿಕೆ ವಿಫಲವಾಗಿದೆ.

ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯವಾಗಿವೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ್‌ಗೆ 13,516 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಗೆ 24,111 ಮತಗಳ ಅಂತರದ ಭರ್ಜರಿ ಗೆಲುವು ಪ್ರಾಪ್ತವಾಗಿವೆ. ಈ ಮೂಲಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸತತ ಏಳನೇ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.

ಚಲಾವಣೆಯಾಗಿದ್ದ ಒಟ್ಟು ಮತಗಳು 66497. ಈ ಪೈಕಿ ಸಿಂಧುವಾದ ಮತಗಳು 61382. ಕುಲಗೆಟ್ಟ ಮತಗಳು 5115. ಗೆಲುವಿಗಾಗಿ ನಿಗದಿಪಡಿಸಿದ್ದ ಕೋಟಾ ಮತಗಳು 30,692. ನಿಗದಿಪಡಿಸಿದ್ದ ಕೋಟಾ ಮತಗಳಿಗಿಂತ ಹೆಚ್ಚಿನ ಪ್ರಮಾಣದ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ ಬಿಜೆಪಿಯ ಧನಂಜಯ ಸರ್ಜಿ.

ಇದನ್ನೂ ಓದಿ | MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ 7,039 ಮತಗಳು ಲಭ್ಯವಾಗಿವೆ. ಇವರ ಪರವಾಗಿ ಶಿವಮೊಗ್ಗದಿಂದ ಮಾಜಿ ಸಚಿವ ಈಶ್ವರಪ್ಪ ಕೂಡ ಬಂದು ಮತ ಯಾಚಿಸಿದ್ದರು. ಆದರೆ ಬಿಜೆಪಿ ಮತ ಗಳಿಕೆಯಲ್ಲಿ ಯಾವುದೇ ಕನ್ನ ಕೊರೆಯಲು ಇವರು ವಿಫಲರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಪಕ್ಷ ಟಿಕೆಟ್‌ ನೀಡಿರಲಿಲ್ಲ. ವಿಧಾನ ಪರಿಷತ್ತಿಗೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರಘುಪತಿ ಭಟ್‌ಗೆ ಅದೂ ಸಿಕ್ಕಿರಲಿಲ್ಲ. ಇದೀಗ ಬಂಡಾಯವೂ ವಿಫಲವಾಗಿದೆ. ಹಿಜಾಬ್‌ ಮುಂತಾದ ಪ್ರಕರಣಗಳಲ್ಲಿ ಆಕ್ರಮಣಕಾರಿ ನಿಲುವು ತಾಳಿದ್ದ ರಘುಪತಿ ಭಟ್‌ ಅವರ ಈ ತೀವ್ರ ನಿಲುವೇ ಅವರನ್ನು ಬಿಜೆಪಿ ಕೈಬಿಡಲು ಕಾರಣವಾಯಿತಾ ಎಂಬ ಮಾತು ಇದೀಗ ಕೇಳಿ ಬರುತ್ತಿದೆ.

Continue Reading
Advertisement
Alliance Candidates Win in MLC South West Constituency Celebration at Ripponpet
ಶಿವಮೊಗ್ಗ15 mins ago

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

A trader lost more than three and a half lakhs by opening a WhatsApp group message
ಕರ್ನಾಟಕ21 mins ago

Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

Nitish Kumar
ದೇಶ23 mins ago

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

World Environment Day
Latest24 mins ago

World Environment Day:ವಿಶ್ವ ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದ ‘ಕೇಳಚಂದ್ರ ಕಾಫಿ’

MLC Election Results
ಕರ್ನಾಟಕ25 mins ago

MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ!

Karnataka weather Forecast
ಮಳೆ54 mins ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Narendra Modi
ದೇಶ54 mins ago

Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

MLC Election
ಕರ್ನಾಟಕ1 hour ago

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

Saree Fashion
ಫ್ಯಾಷನ್1 hour ago

Saree Fashion: ಸೆಲೆಬ್ರೆಟಿ ಲುಕ್‌ಗಾಗಿ ಬಂತು ಬಂಗಾರ ವರ್ಣದ ಸೀರೆಗಳು!

T20 World Cup
ಪ್ರಮುಖ ಸುದ್ದಿ2 hours ago

T20 World Cup : ಪಾಕಿಸ್ತಾನ ತಂಡಕ್ಕೆ ಕರಾಳ ದಿನ; ಮಾಜಿ ಆಟಗಾರರಿಂದ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ54 mins ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌