Road accident : ಕ್ಯಾಂಟರ್‌ ಡಿಕ್ಕಿಯಾಗಿ ಶಾಲಾ ಉದ್ಯೋಗಿ ಮಹಿಳೆ ದುರ್ಮರಣ, ರಸ್ತೆ ಕಾಮಗಾರಿ ಕಿರಿಕಿರಿ - Vistara News

ಕರ್ನಾಟಕ

Road accident : ಕ್ಯಾಂಟರ್‌ ಡಿಕ್ಕಿಯಾಗಿ ಶಾಲಾ ಉದ್ಯೋಗಿ ಮಹಿಳೆ ದುರ್ಮರಣ, ರಸ್ತೆ ಕಾಮಗಾರಿ ಕಿರಿಕಿರಿ

ಮಾಗಡಿ ರಸ್ತೆಯ ಚಿಕ್ಕ ಗೊಲ್ಲರ ಹಟ್ಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ (Road accident) ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿನ ರಸ್ತೆ ಕಾಮಗಾರಿ ಕಿರಿಕಿರಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Chikkagollara hatti accident
ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ನಳಿನಾ ಮತ್ತು ಅಪಘಾತ ನಡೆದ ಜಾಗ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ಮುಂಜಾನೆ ಯಶವಂತಪುರ ಬಳಿ ಖಾಸಗಿ ಬಸ್‌ ಡಿಕ್ಕಿ ಹೊಡೆದು (Road accident) ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡರೆ ಮಧ್ಯಾಹ್ನದ ಹೊತ್ತಿಗೆ ಮಾಗಡಿ ರಸ್ತೆಯಲ್ಲಿ ಕ್ಯಾಂಟರ್‌ ಬಡಿದು ಶಾಲಾ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ.

ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಖಾಸಗಿ ಶಾಲಾ ಉದ್ಯೋಗಿ ನಳಿನಾ ಎಂಬವರಿಗೆ ಹಿಂಬದಿಯಿಂದ ಬಂದ ಕ್ಯಾಂಟರ್‌ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಈ ಭಾಗದಲ್ಲಿ ಕಳೆದ ಕೆಲ‌ವು ತಿಂಗಳಿನಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿಯ ಗುಂಡಿ ತಪ್ಪಿಸಲು ವಾಹನ ಸವಾರರು ಅನಿವಾರ್ಯವಾಗಿ ಒನ್ ವೇ ರಸ್ತೆ ಬಳಸುತ್ತಿದ್ದರು. ಅದೇ ರೀತಿಯಲ್ಲಿ ನಳಿನಾ ಅವರು ಕೂಡಾ ಒನ್ ವೇಗೆ ಬಂದಾಗ ಹಿಂದಿನಿಂದದ ಬಂದ ಕ್ಯಾಂಟರ್ ದ್ವಿಚಕ್ರ ವಾಹನಕ್ಕೆ ಬಡಿದಿದೆ. ಬಳಿಕ ಅದರ ಚಕ್ರ ನಳಿನಾ ಅವರ ತಲೆ ಮೇಲೆ ಹರಿದಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road accident : ಬೆಂಗಳೂರಿನಲ್ಲಿ ಖಾಸಗಿ ಬಸ್‌ ಅಟ್ಟಹಾಸ: ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ದಾರುಣ ಮೃತ್ಯು

ಚಾಲಕನ್ನ ವಶಕ್ಕೆ ಪಡೆದ ಮಾದನಾಯಕನಹಳ್ಳಿ ಪೊಲೀಸರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಕರ್ನಾಟಕ

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

BESCOM Helpline: ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆಗಳು ಇದ್ದರೆ ದೂರು ಸಲ್ಲಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ಬೆಸ್ಕಾಂ ನೀಡಿದೆ. ಗ್ರಾಹಕರು ಬೆಸ್ಕಾಂ ಸಂಖ್ಯೆಗೆ ಸಂದೇಶ ಕಳುಹಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು.

VISTARANEWS.COM


on

Bescom Helpline
Koo

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯ ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು (rain damage) ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು (BESCOM Helpline) ಬೆಸ್ಕಾಂ ನೀಡಿದೆ.

ವಾಟ್ಸ್‌ಆ್ಯಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜತೆಗೆ ಎಸ್‌ಎಂಎಸ್‌ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಇದನ್ನೂ ಓದಿ | Mahila Samman Saving Certificate : ಮಹಿಳಾ ಸಮ್ಮಾನ್‌ ಸೇವಿಂಗ್‌ ಸರ್ಟಿಫಿಕೇಟ್‌ಗೆ 7.5% ಬಡ್ಡಿ, ಏಪ್ರಿಲ್‌ 1ರಿಂದ ಲಭ್ಯ

ಜಿಲ್ಲಾವಾರು ವಾಟ್ಸ್‌ಆ್ಯಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021.

ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ಆ್ಯಪ್‌ ಸಂಖ್ಯೆ: 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ಗಳಿಗೆ ಮಾತ್ರ: 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

Continue Reading

ಕರ್ನಾಟಕ

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Murder Case: ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲ್ಲಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Theft Case In Bengaluru

ಬೆಂಗಳೂರು: ಈಗೀನ ಕಾಲದಲ್ಲಿ ಯಾರನ್ನಾ ನಂಬೋದು ಬಿಡೋದು? ಅಕ್ಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ತಂಗಿಯ (Theft Case) ಬಂಧನವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

ಇನ್ನೂ ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದೇ ಕಾರಣಕ್ಕೆ ಅಕ್ಕ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಳು. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್‌ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

Prajwal Revanna case: ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

VISTARANEWS.COM


on

Prajwal Revanna case Interpol issues messages against Prajwal to 196 countries
Koo

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್‌ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿರುವ ಸಿಬಿಐ (CBI), ಈ ಕುರಿತು ಇಂಟರ್‌ಪೋಲ್‌ (Interpol) ಮೂಲಕ 196 ದೇಶಗಳಿಗೆ ಮೆಸೇಜ್‌ ರವಾನೆ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್‌ ಎಲ್ಲಿಯೇ ಕಂಡರೂ, ಯಾವ ದೇಶದಿಂದ ಯಾವ ದೇಶಕ್ಕೆ ಹೋದರೂ ಎಸ್‌ಐಟಿಗೆ ಮಾಹಿತಿ ಸಿಗಲಿದೆ.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳಿಗೆ ಇಂಟರ್‌ಪೋಲ್‌ನಿಂದ ಮಾಹಿತಿ ಬಂದಿದೆ. ಹೀಗಾಗಿ ಇನ್ನು ಮುಂದೆ ಎಸ್‌ಐಟಿ ಸಹ ಪ್ರಜ್ವಲ್‌ ವಿರುದ್ಧ ಕಾನೂನು ಸಮರ ಸಾರಲು ಹೆಚ್ಚಿನ ಅನುಕೂಲವಾದಂತೆ ಆಗಲಿದೆ. ಅಲ್ಲದೆ, ಅವರ ಪ್ರತಿ ಚಲನವಲನಗಳು, ಸಂಚಾರದ ಮಾಹಿತಿಗಳು ಲಭ್ಯವಾಗಲಿವೆ.

ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟಿಸ್‌ ಅನ್ನು ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೋಟಿಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಸುಳಿವು ಪಡೆಯಲು ಈ ನೋಟಿಸ್‌ ಮುಖ್ಯವಾಗಿದೆ.

ಇನ್ನಷ್ಟು ಸಿಬ್ಬಂದಿ

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ್ತೆ ಎಂಟು ಮಂದಿ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಮೂವರು ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿ ನಿಯೋಜಿಸಲಾಗಿದ್ದು, ಕೂಡಲೇ ಸಿಐಡಿ ಕಚೇರಿಯ ಎಸ್ಐಟಿಯಲ್ಲಿ ವರದಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಓರ್ವ ಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ ಗಳು, ಒರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಸಿಬ್ಬಂದಿ ಸೇರಿ ಎಂಟು ಜನರ ನೇಮಕ ಮಾಡಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟಿಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ6 mins ago

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

Music Festival
ಬೆಂಗಳೂರು21 mins ago

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Amanatullah Khan
ದೇಶ49 mins ago

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Yuzvendra Chahal
ಕ್ರಿಕೆಟ್58 mins ago

Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

Bescom Helpline
ಕರ್ನಾಟಕ1 hour ago

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

Nissan India
ಆಟೋಮೊಬೈಲ್1 hour ago

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

IPL 2024
ಕ್ರೀಡೆ2 hours ago

IPL 2024 : ಅಭಿಮಾನಿಯ 80 ಸಾವಿರ ರೂಪಾಯಿ ಮೊಬೈಲ್​ ಒಡೆದು ಹಾಕಿದ ಚೆನ್ನೈ ಸ್ಟಾರ್​; ಇಲ್ಲಿದೆ ವಿಡಿಯೊ

Murder Case
ಕರ್ನಾಟಕ2 hours ago

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Prajwal Revanna case Interpol issues messages against Prajwal to 196 countries
ಕ್ರೈಂ3 hours ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

PM Modi
ಪ್ರಮುಖ ಸುದ್ದಿ3 hours ago

PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ3 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ6 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ8 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌