Oscars 2023 Nominations: ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಆಸ್ಕರ್‌ಗೆ ನಾಮನಿರ್ದೇಶನ, ಮಹತ್ವದ ಮನ್ನಣೆ - Vistara News

ಟಾಲಿವುಡ್

Oscars 2023 Nominations: ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಆಸ್ಕರ್‌ಗೆ ನಾಮನಿರ್ದೇಶನ, ಮಹತ್ವದ ಮನ್ನಣೆ

Oscars 2023 Nominations: ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಆಸ್ಕರ್‌ನ ಒರಿಜಿನಲ್‌ ಬೆಸ್ಟ್‌ ಸಾಂಗ್‌ ಕೆಟಗರಿಗೆ ನಾಮನಿರ್ದೇಶನಗೊಂಡಿದೆ.

VISTARANEWS.COM


on

RRR Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಸ್‌ ಏಂಜಲೀಸ್‌: ಇತ್ತೀಚೆಗಷ್ಟೇ ಜಾಗತಿಕ ಗೋಲ್ಡನ್‌ ಗ್ಲೋಬ್‌ ಅವಾರ್ಡ್‌ ಪಡೆದಿದ್ದ ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಈಗ ಆಸ್ಕರ್‌ನ (Oscars 2023 Nominations) ಬೆಸ್ಟ್‌ ಒರಿಜಿನಲ್‌ ಸಾಂಗ್‌ ಕೆಟಗರಿಗೆ ನಾಮ ನಿರ್ದೇಶನಗೊಂಡಿದೆ. ಆ ಮೂಲಕ ಭಾರತದ ಚಿತ್ರವೊಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಜೂನಿಯರ್‌ ಎನ್‌ಟಿಆರ್‌, ರಾಮ್‌ ಚರಣ್‌ ಅಭಿನಯದ ಆರ್‌ಆರ್‌ಆರ್‌ ಚಿತ್ರವನ್ನು ಎಸ್‌.ಎಸ್‌.ರಾಜಮೌಳಿ ನಿರ್ದೇಶನ ಮಾಡಿದ್ದಾರೆ.

ಪ್ರಶಸ್ತಿ ಘೋಷಣೆ ಯಾವಾಗ?
ನಾಮಿನೇಷನ್‌ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಪ್ರಶಸ್ತಿಗೆ ಸಿನಿಮಾಗಳನ್ನು ಆಯ್ಕೆ ಮಾಡಲಾಗುವುದು. ಈ ರೀತಿ ಆಯ್ಕೆಯಾದ ಸಿನಿಮಾಗಳ ಘೋಷಣೆಯನ್ನು ಮಾರ್ಚ್‌ ತಿಂಗಳ 12ನೇ ತಾರೀಖಿನಂದು ನಡೆಸಲಾಗುವುದು. ಆ ಕಾರ್ಯಕ್ರಮ ಯೂಟ್ಯೂಬ್‌, Hulu Live TV ಮತ್ತು ABC.com ನಲ್ಲಿ ಪ್ರಸಾರವಾಗಲಿದೆ.

80ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ‌ ಮಿಂಚಿದ RRR, ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಂಡಿತ್ತು. ಅವು ʼಅತ್ಯುತ್ತಮ ಆಂಗ್ಲೇತರ ಚಿತ್ರʼ ಹಾಗೂ ʼಅತ್ಯುತ್ತಮ ಹಾಡುʼ ವಿಭಾಗಗಳಾಗಿವೆ.

ಅತ್ಯುತ್ತಮ ಹಾಡು ಪ್ರಶಸ್ತಿಯನ್ನು ಆರ್‌ಆರ್‌ಆರ್‌ನ ʼನಾಟು ನಾಟುʼ ಗೆದ್ದುಕೊಂಡಿತ್ತು. ಈಗ ರಾಜಮೌಳಿ ನಿರ್ದೇಶನದ ಸಿನಿಮಾವು ಪ್ರಶಸ್ತಿಯ ಅಂತಿಮ ಸುತ್ತಿಗೆ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: Oscar award | ಆಸ್ಕರ್‌ ಪ್ರಶಸ್ತಿ ಕಣದಲ್ಲಿ ಕನ್ನಡದ ಕಾಂತಾರ, ವಿಕ್ರಾಂತ್‌ ರೋಣ | ಇನ್ಯಾವ ಸಿನಿಮಾಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Rashmika Mandanna: ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿದರು.

VISTARANEWS.COM


on

Rashmika Mandanna Reacts To India Decade of Growth Amid Lok Sabha Polls
Koo

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದಾರೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾಧ್ಯಮದ ಜತೆ ಮಾತನಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು.

ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದರು.

ಸದ್ಯ ದೇಶದಲ್ಲಿ 2024ರ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಯುವ ಪೀಳಿಗೆ ಜವಾಬ್ದಾರಿಯುತವಾಗಿ ಮತ ಚಲಾಯಿಸುವಂತೆ ರಶ್ಮಿಕಾ ಮನವಿ ಮಾಡಿದ್ದಾರೆ, “ಯುವ ಪೀಳಿಗೆ – ಯುವ ಭಾರತ – ಅಂತಹ ವೇಗದಲ್ಲಿ ಬೆಳೆಯುತ್ತಿದೆ. ಭಾರತವು ಅತ್ಯಂತ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ! ಯುವ ಭಾರತೀಯರು ಮತ ಚಲಾಯಿಸಬೇಕು. ಜನರು ನಿಜವಾಗಿಯೂ ನೋಡುತ್ತಿದ್ದಾರೆ, ಜನರು ತುಂಬಾ ಜವಾಬ್ದಾರಿಯುತರಾಗಿದ್ದಾರೆ. ಅದರ ಬಗ್ಗೆ ತುಂಬಾ ಸ್ಮಾರ್ಟ್ ಆಗಿದ್ದಾರೆ. ಅವರು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ರಶ್ಮಿಕಾ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಟಿಗೆ ಕೆಲವರು ಮೊದಲು ನೀವು ವೋಟ್‌ ಹಾಕಿ ಎಂದು ಕಮೆಂಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

Pushpa 2: ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

VISTARANEWS.COM


on

Pushpa 2 Allu Arjun fan recreates hook step on graduation day
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿತ್ತು. ‘ಪುಷ್ಪ 2’ ಚಿತ್ರದ ಮೊದಲ ಸಿಂಗಲ್ ‘ಪುಷ್ಪ ಪುಷ್ಪ’ ಬಿಡುಗಡೆ ಆದ ತಕ್ಷಣದಿಂದಲೇ ಟ್ರೆಂಡ್‌ ಆಗಿತ್ತು. ಅಲ್ಲು ಅರ್ಜುನ್‌ ಅವರ ಸ್ಟೈಲಿಶ್ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದರು. ಇದೀಗ ಈ ಸ್ಟೆಪ್ಸ್‌ವನ್ನು ಪದವಿ ವಿದ್ಯಾರ್ಥಿವೊಬ್ಬ ಪದವಿ ಪ್ರದಾನ ಮಾಡುವ ದಿನ ವೇದಿಕೆಯಲ್ಲಿ ‘ಪುಷ್ಪ ಪುಷ್ಪ’ ಸಾಂಗ್‌ ಸ್ಟೆಪ್ಸ್‌ ಹಾಕಿದ್ದಾನೆ. ವೇದಿಕೆ ಮೇಲೆ ಡ್ಯಾನ್ಸ್ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

ಇದನ್ನೂ ಓದಿ: Pushpa 2: ಬರೋಬ್ಬರಿ 60 ಕೋಟಿ ರೂ.ಗೆ ‘ಪುಷ್ಪ 2’ ಆಡಿಯೊ ಹಕ್ಕು ಮಾರಾಟ?

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಟಾಲಿವುಡ್

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

Lok Sabha Elections 2024: ಅಲ್ಲು ಅರ್ಜುನ್ ಮತದಾನ ಮಾಡಲು ಒಬ್ಬರೇ ಆಗಮಿಸಿದರೆ, ಜ್ಯೂನಿಯರ್‌ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ತಾಯಿ ಶಾಲಿನಿ ನಂದಮೂರಿ ಜತೆಗಿದ್ದರು. ಜತೆಗೆ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.ಬಾಹುಬಲಿ ನಿರ್ದೇಶಕ ರಾಜಮೌಳಿ ಅವರು ವೋಟ್ ಮಾಡಿದ್ದಾರೆ.

VISTARANEWS.COM


on

Lok Sabha Elections 2024 Jr NTR, Allu Arjun, Chiranjeevi cast votes
Koo

ಹೈದರಾಬಾದ್‌: ಲೋಕಸಭೆಗೆ ಇಂದು 4ನೇ ಹಂತದ ಮತದಾನ ನಡೆಯಲಿದೆ. ಎರಡು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಒಟ್ಟು 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಸ್ಥಾನಗಳಿಗೆ ಮತದಾನ ನಡೆಯಲಿದೆ. ನಟ ಅಲ್ಲು ಅರ್ಜುನ್ (Allu Arjun) ಮತ್ತು ನಟ ಜ್ಯೂನಿಯರ್‌ ಎನ್‌ಟಿಆರ್‌ ( NTR Jr), ಇಂದು (ಮೇ.13) ಬೆಳಗ್ಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ತೆಲಂಗಾಣದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಜುಬಿಲಿ ಹಿಲ್ಸ್‌ನಲ್ಲಿ ಮೊದಲ ಮತದಾರರ ಗುಂಪಿನಲ್ಲಿ ಇಬ್ಬರು ಸೇರಿದ್ದಾರೆ. ಜತೆಗೆ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.

‘ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಬಿಳಿ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್‌ನಲ್ಲಿ ಕಾಣಿಸಿಕೊಂಡರೆ, ಆರ್‌ಆರ್‌ಆರ್ ಸ್ಟಾರ್ ಜ್ಯೂನಿಯರ್‌ ಎನ್‌ಟಿಆರ್‌ ನೀಲಿ ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಕಂಡು ಬಂದರು.

ಅಲ್ಲು ಅರ್ಜುನ್ ಮತದಾನ ಮಾಡಲು ಒಬ್ಬರೇ ಆಗಮಿಸಿದರೆ, ಜ್ಯೂನಿಯರ್‌ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ತಾಯಿ ಶಾಲಿನಿ ನಂದಮೂರಿ ಜತೆಗಿದ್ದರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ಮತಗಟ್ಟೆಗಳಲ್ಲಿ ಇಬ್ಬರು ನಟರು ಸರದಿಯಲ್ಲಿ ನಿಂತಿರುವ ವೀಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಬಾಹುಬಲಿ ನಿರ್ದೇಶಕ ರಾಜಮೌಳಿ ಅವರು ವೋಟ್ ಮಾಡಿದ್ದಾರೆ. ದೇಶಕ್ಕೆ ನಾವು ಜವಾಬ್ದಾರಿಯುಳ್ಳವರು, ನಾವು ಕೇರ್ ಮಾಡುತ್ತೇವೆ ಎನ್ನುವುದನ್ನು ತೋರಿಸಿ. ಬಂದು ವೋಟ್ ಮಾಡಿ ಎಂದು ಅವರು ವೋಟ್ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮತದಾನಕ್ಕೆ ಕರೆ ಕೊಟ್ಟರು. ತ್ರಿಬಲ್ ಆರ್ ಸ್ಟಾರ್ ಸಂಗೀತ ನಿರ್ದೇಶಕ ಕೀರವಾಣಿ ಅವರೂ ಕೂಡಾ ವೋಟ್ ಮಾಡಿದ್ದಾರೆ. ಅವರು ವೋಟ್ ಮಾಡಿ ಬಂದು ಮನೆಯತ್ತ ಹೋಗುವುದು ಕಂಡುಬಂದಿದೆ.

ಇದನ್ನೂ ಓದಿ: Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

ಮತ ಚಲಾಯಿಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅಲ್ಲು ಅರ್ಜುನ್, ʻನಾನು ಯಾವುದೇ ಪಕ್ಷಕ್ಕೆ ಸೇರಿಲ್ಲʼ ಎಂದು ಸ್ಪಷ್ಟಪಡಿಸಿದರು. “ದಯವಿಟ್ಟು ನಿಮ್ಮ ಮತಗಳನ್ನು ಚಲಾಯಿಸಿ. ಇದು ಅತ್ಯಂತ ಜವಾಬ್ದಾರಿಯುತ ದಿನ” ಎಂದು ಅವರು ಹೇಳಿದರು. ʻʻನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ, ನನಗೆ ಆತ್ಮೀಯರಾಗಿರುವ ಎಲ್ಲರಿಗೂ ಬೆಂಬಲ ನೀಡುತ್ತೇನೆ. ನನ್ನ ಚಿಕ್ಕಪ್ಪ, ನನ್ನ ಸ್ನೇಹಿತ, ನನ್ನ ಮಾವ ಎಲ್ಲರೂ ರಾಜಕೀಯದಲ್ಲಿದ್ದಾರೆʼʼಎಂದರು.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ

ಆಂಧ್ರಪ್ರದೇಶದಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಸತತ ಎರಡನೇ ಬಾರಿಗೆ ಸಿಎಂ ಗಾದಿಗೇರಲು ವೈ.ಎಸ್.‌ ಜಗನ್‌ಮೋಹನ್‌ ರೆಡ್ಡಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಮತ್ತೆ ಅಧಿಕಾರಕ್ಕೇರಲು ಟಿಡಿಪಿಯೂ ಸಜ್ಜಾಗಿದ್ದು, ಚುನಾವಣೆ ರಣಕಣವು ತೀವ್ರ ಜಿದ್ದಾಜಿದ್ದಿನಿಂದ ಕೂಡಿದೆ.ಹಿಂದಿನ ಮೂರು ಹಂತದ ಚುನಾವಣೆಗಳಲ್ಲಿ 2019ರ ಸಾರ್ವತ್ರಿಕ ಚುನಾವಣೆಗಿಂತ ಕಡಿಮೆ ಮತದಾನವಾಗಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಮೊಹುವಾ ಮೊಯಿತ್ರಾ: ಕೃಷ್ಣನಗರ ಕ್ಷೇತ್ರ
ಪಶ್ಚಿಮ ಬಂಗಾಳದ ಕೃಷ್ಣನಗರದಿಂದ ಸ್ಪರ್ಧೆ. ಟಿಎಂಸಿ ಅಭ್ಯರ್ಥಿ. ಸಂಸತ್ ನಲ್ಲಿ ಪ್ರಶ್ನೆಗಾಗಿ ಹಣ ಆರೋಪ ಹೊತ್ತಿರುವ ಸಂಸದೆ.

ಅಮೃತ ರಾಯ್: ಕೃಷ್ಣನಗರ ಕ್ಷೇತ್ರ
ಪಶ್ಚಿಮಬಂಗಾಳದ ಕೃಷ್ಣನಗರದ ಬಿಜೆಪಿ ಅಭ್ಯರ್ಥಿ. ರಾಜ ವಂಶಸ್ಥೆ, ಮೊಹುವಾ ಮೊಯಿತ್ರಾ ವಿರುದ್ಧ ಸ್ಪರ್ಧೆ.

ಅಧಿರ್ ರಂಜನ್ ಚೌಧರಿ : ಬೆಹರಾಮಪುರ್ ಕ್ಷೇತ್ರ
ಪಶ್ಚಿಮ ಬಂಗಾಳದ ಬೆಹರಾಂಪುರ ಕ್ಷೇತ್ರದಿಂದ ಸ್ಪರ್ಧೆ. ಕಾಂಗ್ರೆಸ್ ಅಭ್ಯರ್ಥಿ

ಯೂಸುಫ್ ಪಠಾಣ್ : ಬೆಹರಾಮಪುರ್ ಕ್ಷೇತ್ರ
ಮಾಜಿ ಕ್ರಿಕೆಟಿಗ ಯೂಸುಫ್ ಬೆಹರಾಂಪುರ ಕ್ಷೇತ್ರದಿಂದ ಟಿ ಎಂ ಸಿ ಅಭ್ಯರ್ಥಿ. ಅಧಿರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧೆ

ಅಖಿಲೇಶ್ ಯಾದವ್: ಕನೌಜ್ ಕ್ಷೇತ್ರ
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಕನೌಜ್ ಕ್ಷೇತ್ರದಿಂದ ಸ್ಪರ್ಧೆ. ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಸುಬ್ರತಾ ಪಾಠಕ್ ಸಂಸದರಾಗಿದ್ದಾರೆ. 2019 ರ ಚುನಾವಣೆಯಲ್ಲಿ ಯಾದವ್, ಪತ್ನಿ ಡಿಂಪಲ್ ಅವರನ್ನು ಸೋಲಿಸುವ ಮೂಲಕ ಪಾಠಕ್ ಗೆಲುವು ಸಾಧಿಸಿದ್ದರು

ಗಿರಿರಾಜ್ ಸಿಂಗ್: ಬೇಗುಸರಾಯ್‌ ಕ್ಷೇತ್ರ
ಬಿಹಾರದ ಬೇಗುಸರಾಯ್‌ ಕ್ಷೇತ್ರದಿಂದ ಸ್ಪರ್ಧೆ. ಬಿಜೆಪಿಯ ಉಸ್ತುವಾರಿ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್. 2019ರ ಚುನಾವಣೆಯಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ವಿರುದ್ಧ ಸಿಂಗ್ ವಿಜಯಶಾಲಿಯಾಗಿದ್ದರು

ವೈ.ಎಸ್. ಶರ್ಮಿಳಾ: ಕಡಪ ಕ್ಷೇತ್ರ
ಆಂಧ್ರದ ಮಾಜಿ ಸಿಎಂ ವೈಎಸ್ಆರ್ ಅವರ ಪುತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ, ತಮ್ಮ ಸೋದರ ಸಂಬಂಧಿ, ಎರಡು ಬಾರಿ ಹಾಲಿ ಸಂಸದ ವೈಎಸ್ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶರ್ಮಿಳಾ ಸಹೋದರ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಅಸಾದುದ್ದೀನ್ ಓವೈಸಿ: ಹೈದರಾಬಾದ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಕ್ಷೇತ್ರದಿಂದ ಸ್ಪರ್ಧೆ

ಮಾಧವಿ ಲತಾ: ಹೈದರಾಬಾದ್
ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ. ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಖ್ಯಾತಿ ಪಡೆದಿರುವ ಮಾಧವಿ ಲತಾ‌

ಅರ್ಜುನ್ ಮುಂಡ : ಖುಂತಿ ಕ್ಷೇತ್ರ
ಮೂರು ಬಾರಿ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಸಚಿವರಾಗಿ ಕಾರ್ಯ ನಿರ್ವಹಿಸಿತ್ತಿರುವ ಅರ್ಜುನ್ ಮುಂಡ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಬಂಡಿ ಸಂಜಯ್ ಕುಮಾರ್: ಕರೀಂನಗರ ಕ್ಷೇತ್ರ
ಮಾಜಿ ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಹಾಲಿ ಸಂಸದ ಬಂಡಿ ಸಂಜಯ್ ಕುಮಾರ್ ಕರೀಂನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಶತ್ರುಘ್ನ ಸಿನ್ಹಾ: ಅಸನ್ಸೋಲ್ ಕ್ಷೇತ್ರ
ಪಶ್ಚಿಮ ಬಂಗಾಳ ಅಸನ್ನೋಲ್ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರ್ ಬಾಬು ಎಂದೇ ಪ್ರಸಿದ್ದಿಯಾಗಿರುವ ಶತ್ರುಘ್ನ ಸಿನ್ಹಾ ಸ್ಪರ್ಧೆ. ಟಿ ಎಂ ಸಿ ಪಕ್ಷದ ಅಭ್ಯರ್ಥಿ

ಕಿಶನ್ ರೆಡ್ಡಿ : ಸಿಕಂದರಾಬಾದ್ ಕ್ಷೇತ್ರ
ಪ್ರಸ್ತುತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಸ್ಪರ್ಧೆಸುತ್ತಿರುವ ಕ್ಷೇತ್ರ

Continue Reading

ಸಿನಿಮಾ

Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

Ram Charan: ಪವನ್ ಕಲ್ಯಾಣ್ ಪರವಾಗಿ ರೋಡ್​ ಶೋಗಳಲ್ಲಿ ಭಾಗಿಯಾದರು. ರಾಮ್ ಚರಣ್ ಜೊತೆಗೆ ಅವರ ತಾಯಿ ಸಹ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡಿದರು. ಹೀಗಾಗಿ ಇಬ್ಬರೂ ನಟರ ಸುತ್ತ ಅಭಿಮಾನಿಗಳ ದಂಡೇ ಇತ್ತು. ಇದೇ ವೇಳೆ ರಾಮ್‌ಚರಣ್‌ ಅವರ ಶರ್ಟ್‌ ಕೂಡ ಹರಿದು ಹಾಕಿದ್ದಾರೆ ಫ್ಯಾನ್ಸ್‌. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ,

VISTARANEWS.COM


on

Ram Charan get mobbed by fans during public appearances
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ರಾಮ್ ಚರಣ್ (Ram Charan) ಇಬ್ಬರೂ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನು, ಇಬ್ಬರೂ ತಾರೆಯರು ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ನಂದ್ಯಾಲದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರದಲ್ಲಿ ಅಲ್ಲು ಅರ್ಜುನ್ ಪಾಲ್ಗೊಂಡಿದ್ದರೆ, ನಟ ರಾಮ್ ಚರಣ್, ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ ಪರವಾಗಿ ಚುನಾವಣೆ ಪ್ರಚಾರ ಮಾಡಲೆಂದು ಪೀಠಾಪುರಂಗೆ ತೆರಳಿದ್ದರು. ಪವನ್ ಕಲ್ಯಾಣ್ ಪರವಾಗಿ ರೋಡ್​ ಶೋಗಳಲ್ಲಿ ಭಾಗಿಯಾದರು. ರಾಮ್ ಚರಣ್ ಜೊತೆಗೆ ಅವರ ತಾಯಿ ಸಹ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡಿದರು. ಹೀಗಾಗಿ ಇಬ್ಬರೂ ನಟರ ಸುತ್ತ ಅಭಿಮಾನಿಗಳ ದಂಡೇ ಇತ್ತು. ಇದೇ ವೇಳೆ ರಾಮ್‌ಚರಣ್‌ ಅವರ ಶರ್ಟ್‌ ಕೂಡ ಹರಿದು ಹಾಕಿದ್ದಾರೆ ಫ್ಯಾನ್ಸ್‌. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ,

ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ʻʻಅಲ್ಲು ಅರ್ಜುನ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಸ್ನೇಹಿತ ರವಿಚಂದ್ರ ಕಿಶೋರ್ ರೆಡ್ಡಿ ಅವರನ್ನು ಬೆಂಬಲಿಸಲು ನಂದ್ಯಾಲಕ್ಕೆ ಭೇಟಿ ನೀಡಲು ಹೊರಟಾಗ ನೂರಾರು ಅಭಿಮಾನಿಗಳು ಸ್ವಾಗತಿಸಿರುವುದು ಕಂಡು ಬಂದಿದೆ. ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಕೈಮುಗಿದು ಸ್ವಾಗತಿ ಅವರತ್ತ ಕೈ ಬೀಸಿದರು ಮತ್ತು ಮುಗುಳ್ನಕ್ಕರು. ಅವರ ಪಕ್ಕದಲ್ಲಿ ಸ್ನೇಹಾ ರೆಡ್ಡಿ ಕೂಡ ನಿಂತಿದ್ದರು.

ಇದನ್ನೂ ಓದಿ: Ram Charan: ನಟ ರಾಮ್‌ಚರಣ್‌ಗೆ ಗೌರವ ಡಾಕ್ಟರೇಟ್​: ಫ್ಯಾನ್ಸ್‌ ಫುಲ್‌ ಖುಷ್‌!

ಇತ್ತ ರಾಮ್ ಚರಣ್, ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ ಪರವಾಗಿ ಚುನಾವಣೆ ಪ್ರಚಾರ ಮಾಡಲೆಂದು ಪೀಠಾಪುರಂಗೆ ತೆರಳಿದ್ದರು. ಪವನ್ ಕಲ್ಯಾಣ್ ಪರವಾಗಿ ರೋಡ್​ ಶೋಗಳಲ್ಲಿ ಭಾಗಿಯಾದರು. ರಾಮ್ ಚರಣ್ ಜತೆಗೆ ಅವರ ತಾಯಿ ಸಹ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡಿದರು. ರಾಮ್ ಚರಣ್, ಪವನ್ ಕಲ್ಯಾಣ್ ಒಟ್ಟಿಗೆ ಬಂದಿದ್ದನ್ನು ನೋಡಲು ಸಾವಿರಾರು ಮಂದಿ ಅಭಿಮಾನಿಗಳು ಪೀಠಾಪುರಂನಲ್ಲಿ ನೆರೆದಿದ್ದರು.

ರೋಡ್ ಶೋ ಮಾಡುವ ವೇಳೆ ರಾಮ್ ಚರಣ್ ಅನ್ನು ಅಭಿಮಾನಿಗಳು ಮುತ್ತಿಕೊಂಡರು. ರಾಮ್ ಚರಣ್ ಅಭಿಮಾನಿಗಳಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟರು.. ಅಭಿಮಾನಿಗಳು ರಾಮ್ ಚರಣ್ ಅನ್ನು ತಳ್ಳಿದರು, ಶರ್ಟ್​ ಅನ್ನು ಹರಿದರು. . ಇಷ್ಟೆಲ್ಲ ಆದರೂ ಸಹ ರಾಮ್ ಚರಣ್ ಏನೂ ಪ್ರತಿಕ್ರಿಯೆ ನೀಡದೆ ಸಹಿಸಿಕೊಂಡು ಕಾರಿನ ಬಳಿ ಹೋಗಿ ಕುಳಿತುಕೊಂಡರು. ಈ ಘಟನೆಯ ಹಲವು ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸಿನಿಮಾ ವಿಚಾರಕ್ಕೆ ಬಂದರೆ ಅಲ್ಲು ಅರ್ಜುನ್‌ ಪುಷ್ಪ: ದಿ ರೂಲ್ ಬಿಡುಗಡೆಗಾಗಿ ಸಜ್ಜಾಗಿದ್ದಾರೆ. ಆಗಸ್ಟ್ 15 ರಂದು ಅಲ್ಲು ಅವರ ಪುಷ್ಪ: ದಿ ರೂಲ್ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಧನಂಜಯ್, ರಾವ್ ರಮೇಶ್ ಮುಂತಾದವರು ನಟಿಸಿದ್ದಾರೆ. ರಾಮ್ ಚರಣ್‌ ಪ್ರಸ್ತುತ ಕಿಯಾರಾ ಆಡ್ವಾಣಿ ಜತೆ ಶಂಕರ್ ಅವರ ಗೇಮ್ ಚೇಂಜರ್ ಚಿತ್ರೀಕರಣದಲ್ಲಿದ್ದಾರೆ.

Continue Reading
Advertisement
Prajwal Revanna Case Prajwal case controlled by Congress government says R Ashok
ರಾಜಕೀಯ6 mins ago

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Himanta Biswa Sarma
ರಾಜಕೀಯ12 mins ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Facebook, Instagram Down
ತಂತ್ರಜ್ಞಾನ19 mins ago

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Madhavi Raje Scindia
ದೇಶ31 mins ago

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

woman murder case kengeri
ಕ್ರೈಂ40 mins ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Anchor Anushree talking with fans on instagram live
ಕಿರುತೆರೆ42 mins ago

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

NewsClick case
ದೇಶ1 hour ago

NewsClick Case: ಚೀನಾ ಪರ ಪ್ರಚಾರ; ಬಂಧನದಲ್ಲಿದ್ದ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ರಿಲೀಸ್‌

Drone Prathap Special Gift For sangeetha sringeri Birthday
ಕಿರುತೆರೆ1 hour ago

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

gold rate today
ಚಿನ್ನದ ದರ1 hour ago

Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್2 hours ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ8 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ18 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202420 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202424 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌