Areca News : ಏರುತ್ತಿರುವ ಅಡಿಕೆ ಧಾರಣೆ; 47 ಸಾವಿರ ರೂ. ದಾಟಿದ ರಾಶಿ ಇಡಿಯ ಬೆಲೆ - Vistara News

ಕರ್ನಾಟಕ

Areca News : ಏರುತ್ತಿರುವ ಅಡಿಕೆ ಧಾರಣೆ; 47 ಸಾವಿರ ರೂ. ದಾಟಿದ ರಾಶಿ ಇಡಿಯ ಬೆಲೆ

ಕಳೆದ ತಿಂಗಳು ಕುಸಿತ ಕಂಡಿದ್ದ ಅಡಿಕೆ ಧಾರಣೆಯು ಮತ್ತೆ ಈಗ ಏರಿಕೆಯ ಹಾದಿ ಹಿಡಿದಿದ್ದು (Areca News), ಒಳ್ಳೆಯ ಧಾರಣೆಗೆ ಬಂದು ನಿಂತಿದೆ. ಇದರಿಂದಾಗಿ ಅಡಿಕೆ ಬೆಳೆಗಾರರ ಆತಂಕ ದೂರವಾಗಿದೆ.

VISTARANEWS.COM


on

areca news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಮತ್ತೆ ಏರಲಾರಂಭಿಸಿದ್ದು (Areca News), ಎಲೆಚುಕ್ಕಿ ರೋಗ, ಕೊಳೆರೋಗ ಮತ್ತು ಅಡಿಕೆ ಧಾರಣೆ ಕುಸಿತದ ಕಾರಣದಿಂದ ಕಂಗೆಟ್ಟಿದ್ದ ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ.

ಶಿವಮೊಗ್ಗ ಅಡಿಕೆ ಮಾರುಕಟ್ಟೆಯಲ್ಲಿ ಸರಕಿನ ಧಾರಣೆ ನಿರೀಕ್ಷೆಯನ್ನೂ ಮೀರಿ ಕ್ವಿಂಟಾಲ್‌ಗೆ 80 ಸಾವಿರದ ಸಮೀಪಕ್ಕೆ ಏರಿದ್ದರೆ, ಶಿರಸಿಯಲ್ಲಿ ಚಾಲಿಯ ಧಾರಣೆ 43 ಸಾವಿರದ ಗಡಿ ದಾಟಿದೆ. ಕಳೆದ ತಿಂಗಳು ಅಂದರೆ ಡಿಸೆಂಬರ್‌ನಲ್ಲಿ 20 ಸಾವಿರ ರೂ. ಗಳಷ್ಟು ಕುಸಿತಕ್ಕೆ ಒಳಗಾಗಿದ್ದ ರಾಶಿ ಇಡಿಯ ಬೆಲೆಯು ಈಗ ಏರುತ್ತಿದ್ದು, 47 ಸಾವಿರವನ್ನು ತಲುಪಿದೆ.

ಉತ್ತರ ಭಾರತದಲ್ಲಿ ಚಳಿಯು ಕಡಿಮೆಯಾಗಿ, ಮತ್ತೆ ಗುಟ್ಕಾ ಕಂಪನಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿರುವುದರಿಂದ ಅಡಿಕೆಗೆ ಬೇಡಿಕೆ ಹೆಚ್ಚುತ್ತಿದ್ದು, ಬೆಲೆಯೂ ನಿಧಾನವಾಗಿ ಏರುತ್ತಿದೆ. ಕಳ್ಳ ಮಾರ್ಗದ ಮೂಲಕ ಬರುತ್ತಿದ್ದ ವಿದೇಶಿ ಅಡಿಕೆ ಆಮದಿನ ಮೇಲೆ ತನಿಖಾ ಏಜೆನ್ಸಿಗಳು ಹದ್ದಿನ ಕಣ್ಣಿಟ್ಟಿರುವುದರಿಂದ ಧಾರಣೆ ಇನ್ನಷ್ಟು ಏರುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

ಯಾವುದರ ಬೆಲೆ ಎಷ್ಟು ಏರಿಕೆ?

ಶಿವಮೊಗ್ಗದ ಮ್ಯಾಮ್‌ಕೋಸ್‌ ಪ್ರಕಾರ ಕಳೆದ 2020ರಲ್ಲಿ ಇದೇ ಸಮಯದಲ್ಲಿ ಹಸದ (ಸರಕು) ಧಾರಣೆಯು ಗರಿಷ್ಠ 62 ಸಾವಿರವಿತ್ತು. ಬೆಟ್ಟೆಯು 38 ಸಾವಿರ, ಆಪಿ 39 ಸಾವಿರ, ರಾಶಿ ಇಡಿ 36 ಸಾವಿರ, ಗೊರಬಲು 22 ಸಾವಿರ ರೂ.ಗಳಿಗೆ ಮಾರಾಟವಾಗಿತ್ತು.

ಕಳೆದ ವರ್ಷ ಅಂದರೆ 2022 ರಲ್ಲಿ ಹಸದ (ಸರಕು) ಧಾರಣೆಯು ಗರಿಷ್ಠ 71 ಸಾವಿರವಿತ್ತು. ಬೆಟ್ಟೆಯು 52ಸಾವಿರ, ರಾಶಿ ಇಡಿ 46 ಸಾವಿರ, ಗೊರಬಲು 35 ಸಾವಿರ ರೂ.ಗಳಿಗೆ ಮಾರಾಟವಾಗಿತ್ತು. ಈಗ ಹಸದ (ಸರಕು) ಧಾರಣೆಯು ಗರಿಷ್ಠ 80 ಸಾವಿರವನ್ನು ಮುಟ್ಟಿ ಬಂದಿದೆ. ಬೆಟ್ಟೆಯು 53ಸಾವಿರ, ರಾಶಿ ಇಡಿ 46 ಸಾವಿರ, ಗೊರಬಲು 35 ಸಾವಿರ ರೂ.ಗಳಿಗೆ ಮಾರಾಟವಾಗುತ್ತಿದೆ (today arecanut price). ಹೆಚ್ಚು ಕಡಿಮೆ ಕಳೆದ ವರ್ಷ ಇದೇ ಸಮಯದಲ್ಲಿ ಇದ್ದ ಧಾರಣೆಯಷ್ಟೇ ಇದೆ. ಹೀಗಾಗಿ ಧಾರಣೆ ಕುಸಿಯುತ್ತದೆ ಎಂಬ ಆತಂಕ ಅಡಿಕೆ ಬೆಳೆಗಾರರಿಂದ ದೂರವಾಗಿದೆ.

Areca News
ಮ್ಯಾಮ್‌ಕೋಸ್‌ ನೀಡಿದ ಮಾಹಿತಿ

ದಾವಣಗೆರೆ, ಹೊನ್ನಾಳಿ, ಭೀಮನ ಸಮುದ್ರಾ ಮಾರುಕಟ್ಟೆಗಳಲ್ಲಿ ಕೂಡ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಬಂದಿದ್ದು, ಈಗ ರಾಶಿ ಇಡಿಯು ಕ್ವಿಂಟಾಲ್‌ಗೆ 47 ಸಾವಿರ ರೂ. ಮುಟ್ಟಿದೆ. ಶಿರಸಿ ಮಾರುಕಟ್ಟೆಯಲ್ಲಿ ರಾಶಿ ಇಡಿಯ ಗರಿಷ್ಠ ಧಾರಣೆಯು 44 ಸಾವಿರವಿದೆ. ಬೆಟ್ಟೆ ಮತ್ತು ಚಾಲಿ 42 ಸಾವಿರಕ್ಕೆ ಮಾರಾಟವಾಗುತ್ತಿದೆ. ಮಂಗಳೂರು ಮಾರುಕಟ್ಟೆಯಲ್ಲಿಯೂ ಚಾಲಿ ಬೆಲೆ ಏರುತ್ತಲೇ ಇದೆ.

ಇನ್ನು ಧಾರಣೆ ಕುಸಿಯದು

Areca News

ಈ ಹಿಂದಿನ ಧಾರಣೆಗೆ ಹೋಲಿಸಿದರೆ ರಾಶಿ ಇಡಿಯ ಧಾರಣೆಯು ಈಗ ಸ್ವಲ್ಪ ಕಡಿಮೆ ಇದೆ. ಆದರೆ 45 ಸಾವಿರ ರೂ.ಗಳಿರುವುದು ಒಳ್ಳೆಯ ಧಾರಣೆಯೇ. ಇದೇನು ಕಡಿಮೆ ಏನಲ್ಲ. ಮುಂದೆ ಬೇಡಿಕೆ ಹೆಚ್ಚಿದರೆ 50 ಸಾವಿರದವರೆಗೂ ಹೋಗಬಹುದು ಎಂದು ಮ್ಯಾಮ್‌ಕೋಸ್‌ನ ಉಪಾಧ್ಯಕ್ಷ ಮಹೇಶ್ ಹೆಚ್.ಎಸ್.ಹುಲ್ಕುಳಿ “ವಿಸ್ತಾರ ನ್ಯೂಸ್‌ʼʼಗೆ ತಿಳಿಸಿದ್ದಾರೆ.

ಅಡಿಕೆ ಧಾರಣೆ ಏರಿಳಿತ ಯಾರ ಕೈಯಲ್ಲೂ ಇಲ್ಲ. ಹೀಗೇ ಆಗುತ್ತದೆ ಎಂದು ಹೇಳಲಾಗದು. ಆದರೆ ಈ ವರ್ಷ ಅಡಿಕೆ ಬೆಲೆ ಕುಸಿಯಬಹುದು ಎಂದು ಬೆಳೆಗಾರರು ಆತಂಕ ಪಡಬೇಕಾಗಿಲ್ಲ. ಈಗಿರುವ ಧಾರಣೆಯೇ ಮುಂದುವರಿಯುವ ಎಲ್ಲ ಅವಕಾಶಗಳಿವೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ : Areca News | ಅಕ್ರಮವಾಗಿ ಆಮದಾಗುತ್ತಲೇ ಇದೆ ಅಡಿಕೆ; ಆಮದು ಅಡಿಕೆಯಿಂದ ಬೆಲೆ ಕುಸಿತವಾಗಿಲ್ಲ ಎಂದ ಕೇಂದ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

HD Kumaraswamy: ಕೃಷಿ ಖಾತೆ ಬಯಸಿದ್ದ ಎಚ್‌ಡಿಕೆ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ತುಟಿ ಬಿಚ್ಚಲೇ ಇಲ್ಲ!

HD Kumaraswamy: ಮಾಧ್ಯಮದ ಮುಂದೆ ನೀಡಿದ್ದ ಹೇಳಿಕೆಗೂ, NDA ಸಭೆಯಲ್ಲಿ ಆದ ಬೆಳವಣಿಗೆಗೂ ಬಹಳಷ್ಟು ಅಂತರ ಕಂಡುಬಂದಿದೆ. NDA ಸಭೆಯಲ್ಲಿ ಮಂತ್ರಿ ಸ್ಥಾನದ ಬಗ್ಗೆ ಕುಮಾರಸ್ವಾಮಿ ತುಟಿ ಬಿಚ್ಚಲಿಲ್ಲ ಎನ್ನಲಾಗಿದೆ. ಮೊದಲು ಎನ್‌ಡಿಎ ಸರ್ಕಾರ ರಚನೆ ಆಗಲಿ, ಅದೇ ಸಂತೋಷ. ಬಳಿಕ ಮಂತ್ರಿ ಸ್ಥಾನದ ಬಗ್ಗೆ ನೋಡೋಣ ಎಂದಿದ್ದಾರೆ.

VISTARANEWS.COM


on

HD Kumaraswamy NDA government
Koo

ಬೆಂಗಳೂರು: ನೂತನ ಸರ್ಕಾರ ರಚನೆಯ (Central Government) ಕುರಿತು ನಿನ್ನೆ ನಡೆದ ಎನ್‌ಡಿಎ (NDA) ಮೈತ್ರಿ ಕೂಟದ ಸಭೆಯಲ್ಲಿ ಮಾಜಿ ಸಿಎಂ, ಜೆಡಿಎಸ್‌ (JDS) ನಾಯಕ ಎಚ್. ಡಿ ಕುಮಾರಸ್ವಾಮಿ (HD Kumaraswamy) ಭಾಗಿಯಾದರು. ಆದರೆ, ಸಭೆಗೆ ತೆರಳುವ ಮುನ್ನ ಕೇಂದ್ರ ಸಂಪುಟದಲ್ಲಿ ಕೃಷಿ ಖಾತೆ (Agriculture) ಪಡೆಯುವ ಬಗ್ಗೆ ಮನದ ಇಂಗಿತ ವ್ಯಕ್ತಪಡಿಸಿದ್ದ ಎಚ್‌ಡಿಕೆ, ಅಲ್ಲಿ ಈ ಕುರಿತು ಯಾವುದೇ ಮಾತನಾಡಲಿಲ್ಲ ಎಂದು ತಿಳಿದುಬಂದಿದೆ.

ದೆಹಲಿಗೆ ಬರುತ್ತಿದ್ದಂತೆ, ಮಾಧ್ಯಮದ ಮುಂದೆ ಕೃಷಿ ಖಾತೆ ಸಿಕ್ಕರೆ ತಾನು ನಿಭಾಯಿಸಬಲ್ಲೆ ಎಂದು ಮಾಜಿ ಸಿಎಂ ಹೇಳಿದ್ದರು. ಎಲ್ಲರ ಆಶಯವೂ ಅದೇ ಆಗಿದೆ, ನನಗೆ ಕೃಷಿ ಖಾತೆ ನೀಡಬೇಕು ಎಂಬುದಾಗಿದೆ. ನಾನು ಕೂಡ ಕೃಷಿ ಸಚಿವನಾಗಿ ಕರ್ತವ್ಯ ನಿಭಾಯಿಸಬಲ್ಲೆ ಎಂದಿದ್ದರು.

ಆದರೆ ಮಾಧ್ಯಮದ ಮುಂದೆ ನೀಡಿದ್ದ ಹೇಳಿಕೆಗೂ, NDA ಸಭೆಯಲ್ಲಿ ಆದ ಬೆಳವಣಿಗೆಗೂ ಬಹಳಷ್ಟು ಅಂತರ ಕಂಡುಬಂದಿದೆ. NDA ಸಭೆಯಲ್ಲಿ ಮಂತ್ರಿ ಸ್ಥಾನದ ಬಗ್ಗೆ ಕುಮಾರಸ್ವಾಮಿ ತುಟಿ ಬಿಚ್ಚಲಿಲ್ಲ ಎನ್ನಲಾಗಿದೆ. ಮೊದಲು ಎನ್‌ಡಿಎ ಸರ್ಕಾರ ರಚನೆ ಆಗಲಿ, ಅದೇ ಸಂತೋಷ. ಬಳಿಕ ಮಂತ್ರಿ ಸ್ಥಾನದ ಬಗ್ಗೆ ನೋಡೋಣ ಎಂದಿದ್ದಾರೆ.

ಸಭೆ ಕ್ಲುಪ್ತವಾಗಿ ಮುಗಿಯುತು. ಜೆಡಿಯು ನಾಯಕ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಮಾತಿಗೆ ಎಚ್‌ಡಿಕೆ ಸಹಮತ ವ್ಯಕ್ತಪಡಿಸಿದರು. ಎಲ್ಲರೂ ಎನ್‌ಡಿಎಗೆ ತಮ್ಮ ಸಹಕಾರ ವ್ಯಕ್ತಪಡಿಸಿದರು. ಮಿತ್ರಪಕ್ಷಗಳಿಂದ ಔಪಚಾರಿಕವಾಗಿ ಸಮ್ಮತಿ ಪತ್ರ ಪಡೆಯುವ ಪ್ರಕ್ರಿಯೆ ನಡೆದಿದ್ದು, ಇಂದು ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಎನ್‌ಡಿಎ ಸಭೆಯ ಬಳಿಕ ಬೆಂಗಳೂರಿಗೆ ತೆರಳುವ ಮೊದಲು ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. “ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಿತು. ನರೇಂದ್ರ ಮೋದಿ ಅವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೊಂದು ವೇಳೆ, ನರೇಂದ್ರ ಮೋದಿ ಅವರು ಬಯಸಿದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ” ಎಂಬುದಾಗಿ ಅವರು ಹೇಳಿದರು. ಕರ್ನಾಟಕದಲ್ಲಿ ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಮಾಡಿಕೊಂಡಿರುವುದರಿಂದ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಕೂಡ ಸಹಕಾರಿಯಾಗಿದೆ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಎಲ್ಲ ಪಕ್ಷಗಳ ನಾಯಕರು ನರೇಂದ್ರ ಮೋದಿ (PM Narendra Modi) ಅವರಿಗೆ ಬೆಂಬಲ ಸೂಚಿಸಿದರು. ಮೈತ್ರಿಕೂಟದ ಸರ್ಕಾರ ರಚನೆಗೆ ಕುರಿತು ತೆಗೆದುಕೊಂಡ ಒಂದು ಸಾಲಿನ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಿದರು. ಖಾತೆ ಹಂಚಿಕೆ, ಯಾವ ಖಾತೆ ಯಾರಿಗೆ ನೀಡಬೇಕು ಎಂಬುದರ ಕುರಿತು ಆಮೇಲೆ ನೋಡಿಕೊಳ್ಳೋಣ. ಮೊದಲು ಸರ್ಕಾರ ರಚನೆಯಾಗಲಿ ಎಂಬುದಾಗಿ ಎಲ್ಲ ನಾಯಕರು ಮೋದಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

‌ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಭೆ ನಡೆಯಿತು. ತೆಲುಗುದೇಶಂ ಪಕ್ಷದ (TDP), ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌, ಆರ್‌ಎಲ್‌ಡಿಯ ಜಯಂತ್‌ ಚೌಧರಿ, ಜನಸೇನಾ ಪಕ್ಷದ ಪವನ್‌ ಕಲ್ಯಾಣ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಎಲ್ಲರೂ ಒಗ್ಗೂಡಿ ಸರ್ಕಾರ ರಚಿಸುವುದು, ಒಗ್ಗಟ್ಟಿನಿಂದ ಇರುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚೆಯಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Continue Reading

ಮೈಸೂರು

Death News: ಬಿಎಸ್‌ವೈ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ ನಿಧನ

Death News: ಕಾ.ಪು ಸಿದ್ದಲಿಂಗಸ್ವಾಮಿ ಅವರು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.

VISTARANEWS.COM


on

death news kapu siddalingaswamy
Koo

ಮೈಸೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ (Kapu Siddalingaswamy) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಇತ್ತೀಚೆಗೆ ಯಡಿಯೂರಪ್ಪ ಹಾಗೂ ನೂತನ ಸಂಸದ ವಿ.ಸೋಮಣ್ಣ ಮೈಸೂರಿಗೆ ಬಂದು ಅವರ ಆರೋಗ್ಯ ವಿಚಾರಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿವೆ.‌

ಇಂದು ಬಾಗಲಕೋಟೆ, ಬೀದರ್, ಕರಾವಳಿ ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Muslim Women: ಟಕಾ ಟಕ್‌ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!

Continue Reading

ಪ್ರಮುಖ ಸುದ್ದಿ

Karnataka Weather: ಇಂದು ಬಾಗಲಕೋಟೆ, ಬೀದರ್, ಕರಾವಳಿ ಜಿಲ್ಲೆಗಳು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಸಿಡಿಲು ಬಡಿದು ಕುರಿಗಾಹಿ, 15ಕ್ಕೂ ಅಧಿಕ ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 15ಕ್ಕೂ ಅಧಿಕ ಕುರಿಗಳು ಹಾಗೂ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಹೊರಭಾಗದಲ್ಲಿ ಬುಧವಾರ ನಡೆದಿದೆ.

ಅಮೋಘಿ ಸೋಮನಿಂಗ ಕಣಮುಚನಾಳ (35) ಮೃತ ದುರ್ದೈವಿ. ಮಳೆ ಬರುತ್ತಿದ್ದ ಕಾರಣ ಕುರಿಗಳೊಂದಿಗೆ ಮರದ ಕೆಳಗೆ ಕುರಿಗಾಹಿ ಅಮೋಘಿ ನಿಂತಿದ್ದ. ಈ ವೇಳೆ ಮರಕ್ಕೆ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಜತೆಗೆ 15ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.

ಕೊಟ್ಟೂರಿನಲ್ಲಿ ಸಿಡಿಲಿಗೆ ಯುವಕ ಬಲಿ

ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಸುರಿದ ಮಳೆಗೆ ಸಿಡಿಲು ಬಡಿದು ಅವಘಡ ನಡೆದಿದೆ. ಮದ್ದಾನಿ (20) ಸಿಡಿಲಿಗೆ ಬಲಿಯಾದ ಯುವಕ.

Continue Reading

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಗೆದ್ದಿರುವುದರಿಂದ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರದೀಪ್‌ ಈಶ್ವರ್‌ ಅವರು ಸಲ್ಲಿಸಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಅದು ನಕಲಿ ಎಂಬುದು ಗೊತ್ತಾಗಿದೆ.

VISTARANEWS.COM


on

Pradeep Eshwar
Koo

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ (Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಸುಧಾಕರ್‌ ಅವರಿಗೆ ಈ ಗೆಲುವು ರಾಜಕೀಯದಲ್ಲಿ ಪುನರ್ಜನ್ಮ ಸಿಕ್ಕಂತಾಗಿದೆ. ಇದರ ಬೆನ್ನಲ್ಲೇ, ಸುಧಾಕರ್‌ ಅವರು ಒಂದೇ ಒಂದು ಮತದಿಂದ ಗೆದ್ದರೂ ರಾಜೀನಾಮೆ ನೀಡುತ್ತೇನೆ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ವಿರುದ್ಧ ಆಕ್ರೋಶ, ಟ್ರೋಲ್‌, ಮೀಮ್‌ಗಳು ಹರಿದಾಡುತ್ತಿವೆ. ಇದರ ಮಧ್ಯೆಯೇ, ಪ್ರದೀಪ್‌ ಈಶ್ವರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಇದು ನಕಲಿ ಪೋಸ್ಟ್‌ ಎಂಬುದು ಬಳಿಕ ಗೊತ್ತಾಗಿದೆ.

ಪತ್ರದಲ್ಲಿ ಏನಿದೆ?

“ಬಾಲ್ಯದಿಂದಲೇ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು, ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ.ಸುಧಾಕರ್‌ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್‌ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್‌ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ, ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ” ಎಂಬ ಪತ್ರವು ವೈರಲ್‌ ಆಗಿದೆ.

ವೈರಲ್‌ ಆಗಿರುವ ರಾಜೀನಾಮೆ ಪತ್ರ

ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಿರುವ ಕುರಿತು ವೈರಲ್‌ ಆದ ಪತ್ರವನ್ನು ಪರಿಶೀಲನೆ ನಡೆಸಲಾಗಿದ್ದು, ಅದು ನಕಲಿ ರಾಜೀನಾಮೆ ಪತ್ರ ಎಂಬುದಾಗಿ ತಿಳಿದುಬಂದಿದೆ. ಆದಾಗ್ಯೂ, ಪ್ರದೀಪ್‌ ಈಶ್ವರ್‌ ಅವರು ಸುಧಾಕರ್‌ ಕುರಿತು ಹೇಳಿದ್ದ ಹಳೆಯ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿದ ಮಾತಿನಂತೆ ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಬೇಕು ಎಂದು ಜನರು, ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಸುಧಾಕರ್‌ ಗೆಲುವಿನ ಕುರಿತು ಪ್ರದೀಪ್‌ ಈಶ್ವರ್‌ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Continue Reading
Advertisement
Lok Sabha Election 2024
ದೇಶ2 mins ago

Lok Sabha Election 2024: ಒಬ್ಬ ಅಭ್ಯರ್ಥಿ ಎರಡೂ ಕ್ಷೇತ್ರಗಳಲ್ಲೂ ಗೆದ್ದರೆ ಏನಾಗುತ್ತದೆ?

HD Kumaraswamy NDA government
ಪ್ರಮುಖ ಸುದ್ದಿ16 mins ago

HD Kumaraswamy: ಕೃಷಿ ಖಾತೆ ಬಯಸಿದ್ದ ಎಚ್‌ಡಿಕೆ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ತುಟಿ ಬಿಚ್ಚಲೇ ಇಲ್ಲ!

death news kapu siddalingaswamy
ಮೈಸೂರು48 mins ago

Death News: ಬಿಎಸ್‌ವೈ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ ನಿಧನ

Lotus Seeds Benefits
ಆರೋಗ್ಯ1 hour ago

Lotus Seeds Benefits: ತಾವರೆ ಬೀಜಗಳನ್ನು ಸೇವಿಸಿ; ಇದು ರುಚಿಗೂ ಒಳ್ಳೆಯದು, ಹೃದಯಕ್ಕೂ ಒಳ್ಳೆಯದು

Karnataka Weather
ಪ್ರಮುಖ ಸುದ್ದಿ2 hours ago

Karnataka Weather: ಇಂದು ಬಾಗಲಕೋಟೆ, ಬೀದರ್, ಕರಾವಳಿ ಜಿಲ್ಲೆಗಳು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Whitening Toothpaste
ಆರೋಗ್ಯ2 hours ago

Whitening Toothpaste: ವೈಟ್ನಿಂಗ್‌ ಪೇಸ್ಟ್‌ಗಳಿಂದ ಹಲ್ಲುಗಳಿಗೆ ಹಾನಿ ಆಗುತ್ತಾ?

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Odisha
ದೇಶ8 hours ago

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Pradeep Eshwar
ಕರ್ನಾಟಕ9 hours ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ9 hours ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌