Budget 2023: ದಿನಾಂಕ, ಸಮಯ, ನಿರೀಕ್ಷೆಗಳು, ಯಾವಾಗ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ - Vistara News

ಪ್ರಮುಖ ಸುದ್ದಿ

Budget 2023: ದಿನಾಂಕ, ಸಮಯ, ನಿರೀಕ್ಷೆಗಳು, ಯಾವಾಗ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ

ಮುಂದಿನ 2023-24 ಸಾಲಿನ ಕೇಂದ್ರ ಬಜೆಟ್‌ ಫೆಬ್ರವರಿ 1ರಂದು ಮಂಡನೆಯಾಗಲಿದ್ದು, ಜನತೆ ಕಾತರದಿಂದ ನಿರೀಕ್ಷಿಸುತ್ತಿದೆ. (Budget 2023) ವಿವರ ಇಲ್ಲಿದೆ.

VISTARANEWS.COM


on

budget 2023 date time expectations when where to watch here is the detail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2023-24 ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡಿಸಲಿದ್ದಾರೆ. ಆದಾಯ ತೆರಿಗೆದಾರರ ನಿರೀಕ್ಷೆಗಳು ಸೇರಿದಂತೆ (Budget 2023) ಉಪಯುಕ್ತ ಮಾಹಿತಿ ಇಲ್ಲಿದೆ.

ಕೇಂದ್ರ ಬಜೆಟ್‌ 2023 ದಿನಾಂಕ ಮತ್ತು ಸಮಯ

ಫೆಬ್ರವರಿ 1 ಕ್ಕೆ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್ತಿನಲ್ಲಿ ಬಜೆಟ್‌ ಭಾಷಣ ನೀಡಲಿದ್ದಾರೆ.

ಆರ್ಥಿಕ ವರ್ಷ2023-24
ಬಜೆಟ್‌ ಮಂಡನೆ ಎಲ್ಲಿಸಂಸತ್ತು
ಮಂಡಿಸುವವರುಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ದಿನಾಂಕ1 ಫೆಬ್ರವರಿ, 2023
ಬಿಡುಗಡೆಕೇಂದ್ರ ಸರ್ಕಾರ
ಅಂಕಿತರಾಷ್ಟ್ರಪತಿಗಳು
ನೋಡಲ್‌ ಸಂಸ್ಥೆಆರ್ಥಿಕ ಇಲಾಖೆ

2022ರಲ್ಲಿ ಬಜೆಟ್‌ 1.5 ಗಂಟೆಗಳಷ್ಟು ಸುದೀರ್ಘವಾಗಿತ್ತು. 2021ರ ಬಜೆಟ್‌ ಭಾಷಣ 2 ಗಂಟೆ 40 ನಿಮಿಷ ಇತ್ತು.

ಬಜೆಟ್‌ 2023 ಎಲ್ಲಿ ವೀಕ್ಷಿಸಬಹುದು?

ಲೋಕಸಭಾ ಟಿವಿ, ರಾಜ್ಯ ಸಭಾ ಟಿವಿ, ಡಿಡಿ ನ್ಯೂಸ್‌ ಮತ್ತು ಇತರ ನ್ಯೂಸ್ ಚಾನೆಲ್‌ಗಳು ಕೇಂದ್ರ ಬಜೆಟ್‌ ಮಂಡನೆಯನ್ನು ಪ್ರಸಾರ ಮಾಡಲಿವೆ. ಸಂಸದ್‌ ಟಿವಿ ಮತ್ತು ಸಂಸತ್ತಿನ ಟ್ವಿಟರ್‌ ಖಾತೆ, ದೂರದರ್ಶನದ ಮೂಲಕವೂ ವೀಕ್ಷಿಸಬಹುದು.

ಸಂಸತ್ತಿನಲ್ಲಿ ಬಜೆಟ್‌ ಅಧಿವೇಶನ

religion

ಸಂಸತ್ತಿನಲ್ಲಿ ಬಜೆಟ್‌ ಅಧಿವೇಶನ ಫೆಬ್ರವರಿ 10 ರ ತನಕ ನಡೆಯಲಿದೆ. ಎರಡನೇ ಹಂತದ ಬಜೆಟ್‌ ಅಧಿವೇಶನ ಮಾರ್ಚ್‌ 6 ಕ್ಕೆ ಶುರುವಾಗಿ ಏಪ್ರಿಲ್‌ 6ರಂದು ಮುಕ್ತಾಯವಾಗಲಿದೆ.

ಬಜೆಟ್‌ ನಿರೀಕ್ಷೆಗಳು

ಮಧ್ಯಮ ವರ್ಗದ ಜನತೆ ಈ ಸಲದ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯ ಮಿತಿ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ನಡೆಯಲಿರುವ ಕೊನೆಯ ಪೂರ್ಣಪ್ರಮಾಣದ ಚುನಾವಣೆ ಇದಾಗಿರುವುದರಿಂದ, ಜನಪ್ರಿಯ ಬಜೆಟ್‌ ಅನ್ನು ಮಧ್ಯಮ ವರ್ಗದ ಜನತೆ ನಿರೀಕ್ಷಿಸುತ್ತಿದ್ದಾರೆ. ಹಾಗೂ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ, ಸೆಕ್ಷನ್‌ 80ಡಿ ಮತ್ತು ಸೆಕ್ಷನ್‌ 87ಎ ಇತ್ಯಾದಿಗಳ ಅಡಿಯಲ್ಲಿ ಕೆಲವು ತೆರಿಗೆ ವಿನಾಯಿತಿಗಳನ್ನು ನಿರೀಕ್ಷಿಸುತ್ತಿದ್ದಾರೆ.

ಆದಾಯ ತೆರಿಗೆ ವಿನಾಯಿತಿಯ ಮಿತಿ ಹೆಚ್ಚಳ?

cash

ಆದಾಯ ತೆರಿಗೆ ವಿನಾಯಿತಿಯ ಮಿತಿಯನ್ನು ಈಗಿಮ ವಾರ್ಷಿಕ 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಏರಿಕೆ ಮಾಡಬೇಕು. ಸೆಕ್ಷನ್‌ 87 ಎ ಅಡಿಯಲ್ಲಿ ರಿಬೇಟ್‌ ಪಡೆಯುವವರಿಗೆ ಇದರಿಂದ ಪರಿಣಾಮವಾಗದು. ಹೀಗಿದ್ದರೂ, ಅವರು ಐಟಿಆರ್‌ ಸಲ್ಲಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಸಣ್ಣ ತೆರಿಗೆದಾರರಿಗೆ ಸಹಕರಿಸಲು ಆದಾಯ ತೆರಿಗೆ ಮಿತಿಯನ್ನು 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಏರಿಸುವುದು ಸೂಕ್ತ ಎನ್ನುತ್ತಾರೆ ತಜ್ಞರು.

ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮಿತಿ ಏರಿಕೆ?

ಈ ಹಿಂದೆ 2018-19ರಲ್ಲಿ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಅನ್ನು ಪರಿಚಯಿಸಲಾಗಿತ್ತು. ಇಂಧನ ಮತ್ತು ವೈದ್ಯಕೀಯ ವೆಚ್ಚಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಈಗಿನ 50,000 ರೂ.ಗಳಿಂದ 1 ಲಕ್ಷ ರೂ.ಗೆ ಏರಿಸಬೇಕು ಎಂಬ ನಿರೀಕ್ಷೆ ಇದೆ.

ಸೆಕ್ಷನ್‌ 80 ಸಿ ಅಡಿಯಲ್ಲಿ ಮಿತಿ ಹೆಚ್ಚಳ?

ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ಈಗ 1.5 ಲಕ್ಷ ರೂ. ಹೂಡಿಕೆಗೆ ಆದಾಯ ತೆರಿಗೆ ವಿನಾಯಿತಿ ಸಿಗುತ್ತದೆ. ಕಳೆದ ದಶಕದಿಂದ ಇದು ಬದಲಾಗಿಲ್ಲ. ಹೀಗಾಗಿ ಇದನ್ನು ಏರಿಸುವ ಮೂಲಕ ಉಳಿತಾಯ ಮತ್ತು ಹೂಡಿಕೆಗೆ ಸಹಕರಿಸಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

ಬಜೆಟ್‌ಗೆ ಸಂಬಂಧಿಸಿ ಸಂವಿಧಾನದಲ್ಲಿ ಕೆಲವು ನಿಬಂಧನೆಗಳು ಇವೆ. ಅವುಗಳ ವಿವರ ಇಲ್ಲಿದೆ.

ಬಜೆಟ್‌ಗೆ ಸಂಬಂಧಿಸಿ ಸಂವಿಧಾನ ಏನೆನ್ನುತ್ತದೆ?

  1. ಸಂವಿಧಾನದ 112ನೇ ವಿಧಿಯ ಪ್ರಕಾರ ಕೇಂದ್ರ ಬಜೆಟ್‌ ಅನ್ನು ಸಂಸತ್ತಿನಲ್ಲಿ ಫೆಬ್ರವರಿಯ ಕೊನೆಯ ದಿನ ಅಥವಾ ಮೊದಲ ದಿನಕ್ಕೆ ಮುನ್ನ ಮಂಡಿಸಬೇಕು.
  2. ಸಂವಿಧಾನದ 114ನೇ ವಿಧಿಯ ಪ್ರಕಾರ ಭಾರತದ ಒಟ್ಟು ನಿಧಿ, ಕೇಂದ್ರ ಸರ್ಕಾರದ ಆದಾಯ ಮತ್ತು ಸಂಪನ್ಮೂಲ, ಸಾಲದ ಮೂಲಕ ಪಡೆಯುವ ಫಂಡ್‌ಗಳ ಬಗ್ಗೆ ಪ್ರತ್ಯೇಕ ಲೆಕ್ಕಪತ್ರಗಳನ್ನು ನೀಡಬೇಕು. ಇದಕ್ಕಾಗಿ ಮುಂಗಡಪತ್ರವನ್ನು ಮಂಡಿಸಬೇಕು.
  3. ಸಂವಿಧಾನದ 266ನೇ ವಿಧಿಯ ಪ್ರಕಾರ ಸರ್ಕಾರ ತೆರಿಗೆ ಮತ್ತು ಇತರ ಮೂಲಗಳಿಂದ ಪಡೆಯುವ ಆದಾಯದ ಲೆಕ್ಕವನ್ನು ನೀಡಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Prajwal Revanna Case: ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

VISTARANEWS.COM


on

Prajwal Revanna Case I was never kidnapped and son has made a false complaint Video of victim goes viral
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ. ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆಯು ವಿಡಿಯೊದಲ್ಲಿದೆ.

ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದ ಮಹಿಳೆ!

“ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ, ನಾನು ಎಲ್ಲಿಯೂ ಹೋಗಿಲ್ಲ. ನನ್ನ ಸಂಬಂಧಿಕರ ಮನೆಯಲ್ಲಿದ್ದೇನೆ. ರೇವಣ್ಣ ಆಗಲಿ, ಪ್ರಜ್ವಲ್ ರೇವಣ್ಣ ಆಗಲಿ, ಭವಾನಿ ಅಕ್ಕಾ ಆಗಲಿ, ಸತೀಶ್ ಬಾಬಾಣ್ಣ ಆಗಲಿ ಯಾರಿಂದಲೂ ತೊಂದರೆ ಆಗಿಲ್ಲ. ನನ್ನನ್ನು ಚೆನ್ನಾಗಿ ನೋಡಿಕೊಂಡು ಕಳಿಸಿಕೊಟ್ಟಿದ್ದಾರೆ. ನಾನು ಆರಾಮಾಗಿದ್ದೇನೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡುವಾಗ ವಿಚಾರ ಗೊತ್ತಾಯಿತು. ಮೊಬೈಲ್‌ನಲ್ಲಿ ಬಂದ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ. ಮನೆಯ ಬಳಿ ಯಾರು ಗಾಬರಿ ಆಗೋದು ಬೇಡ. ನಾನು ಸುರಕ್ಷಿವಾಗಿದ್ದೇನೆ. ಎಲ್ಲರೂ ಆರಾಮಾಗಿರಿ. ನಾಲ್ಕು ದಿನ ಸಂಬಂಧಿಕರ ಮನೆಗೆ ಹೋಗಿದ್ದೆ. ವಾಪಸ್‌ ಬರುತ್ತೇನೆ. ಎಲ್ಲಿ ಯಾರಿಗೆ ಮಾಹಿತಿ ಕೊಡಬೇಕೋ ಕೊಡುತ್ತೇನೆ. ಯಾರು ಮನೆ ಹತ್ತಿರ ಹೋಗಬೇಡಿ, ಪೊಲೀಸ್‌ನವರು ಟಾರ್ಚರ್ ಕೊಡಬೇಡಿ. ಎಲ್ಲರೂ ಗಾಬರಿಯಾಗುತ್ತಾರೆ. ನಾವು ಕೂಲಿ ಮಾಡಿಕೊಂಡು ಇರುವವರು ಹೊಟ್ಟೆ ಮೇಲೆ‌ ಹೊಡಿಯಬೇಡಿ. ಪೊಲೀಸಿನವರು ಮನೆ ಬಳಿ ಬಂದರೆ ಅಕ್ಕಪಕ್ಕದವರು ಏನೆಂದು ಕೊಳ್ಳುವುದಿಲ್ಲ. ಏನಾದರೂ ತೊಂದರೆಯಾದರೆ ನಾನೇ ಬಂದು ಹೇಳಿಕೆ ಕೊಡ್ತೇನೆ. ನನಗಾಗಲಿ, ಕುಟುಂಬದವರಿಗೆ ಆಗಲಿ, ಗಂಡನಿಗಾಗಲೀ ಏನಾದರೂ ತೊಂದರೆಯಾದರೆ ನೀವೇ ಜವಾಬ್ದಾರರು. ನನ್ನ ಮಗ ಗೊತ್ತಿಲ್ಲದೆ ಹೀಗೆ ಮಾಡಿಬಿಟ್ಟಿದ್ದಾನೆ. ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ನಾನಾಗಿಯೇ ಸಂಬಂಧಿಕರ ಮನೆಗೆ ಬಂದಿದ್ದೇನೆ” ಎಂದು ಸಂತ್ರಸ್ತೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಈ ವಿಡಿಯೊ ಮಾಡಿದ್ದು ಯಾರು?

ಸದ್ಯ ಎಸ್‌ಐಟಿ ವಶದಲ್ಲಿರುವ ಸಂತ್ರಸ್ತ ಮಹಿಳೆಯ ಈ ವಿಡಿಯೊವನ್ನು ಮಾಡಿದ್ದು ಯಾರು? ರಿಲೀಸ್ ಮಾಡಿದ್ದು ಯಾರು? ಎಂಬ ಪ್ರಶ್ನೆ ಈಗ ಎಸ್‌ಐಟಿಗೆ ತಲೆನೋವಾಗಿ ಕಾಡುತ್ತಿದೆ. ಹಾಗಾದರೆ, ತಾವು ವಶಕ್ಕೆ ಪಡೆಯುವ ಮೊದಲೇ ಈ ವಿಡಿಯೊವನ್ನು ಮಾಡಲಾಗಿತ್ತಾ? ಆದರೆ, ಮಹಿಳೆಯನ್ನ ಎಲ್ಲಿ ಇರಿಸಿ ಈ ವಿಡಿಯೊ ಮಾಡಲಾಗಿದೆ? ಈ ವಿಡಿಯೊವನ್ನು ಯಾವ? ಯಾರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಲಾಗಿದೆ. ಈಕೆಯೇ ಆ್ಯಂಡ್ರಾಯ್ಡ್ ಮೊಬೈಲ್ ಅನ್ನು ಬಳಕೆ ಮಾಡುತ್ತಿದ್ದರೇ ಎಂಬಿತ್ಯಾದಿ ಪ್ರಶ್ನೆಗಳೊಂದಿಗೆ ತನಿಖೆ ನಡೆಸಬೇಕಿದೆ.

Continue Reading

ದೇಶ

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Adhir Ranjan: ಅಂಬಾನಿ-ಅದಾನಿ ಹಣದ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಅಂಬಾನಿ ಹಾಗೂ ಅದಾನಿ ದುಡ್ಡು ಕಳುಹಿಸಿದರೆ, ನಾವೂ ಅವರ ವಿರುದ್ಧ ಮಾತನಾಡುವುದಿಲ್ಲ” ಎಂದು ಹೇಳಿರುವ ವಿಡಿಯೊ ಈಗ ಸಂಚಲನ ಮೂಡಿಸಿದೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

VISTARANEWS.COM


on

Adhir Ranjan
Koo

ಕೋಲ್ಕೊತಾ: ಉದ್ಯಮಿಗಳಾದ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ. ಇದೇ ಕಾರಣಕ್ಕಾಗಿ ಅದಾನಿ-ಅಂಬಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮಾತನಾಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ದೂರಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (Adhir Ranjan Chowdhury) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಅಂಬಾನಿ ಹಾಗೂ ಅದಾನಿ ದುಡ್ಡು ಕಳುಹಿಸಿದರೆ, ನಾವೂ ಅವರ ವಿರುದ್ಧ ಮಾತನಾಡುವುದಿಲ್ಲ” ಎಂದು ಹೇಳಿರುವ ವಿಡಿಯೊ ಈಗ ಸಂಚಲನ ಮೂಡಿಸಿದೆ.

ಯುಟ್ಯೂಬ್‌ ಚಾನೆಲ್‌ನ ನಿರೂಪಕರೊಬ್ಬರ ಜತೆ ಮಾತನಾಡಿದ ಅಧೀರ್‌ ರಂಜನ್‌ ಚೌಧರಿ, “ಅಂಬಾನಿ ಹಾಗೂ ಅದಾನಿ ಅವರಿಂದ ಹಣ ಸಿಕ್ಕರೆ ನಾನು ಸಂತೋಷದಿಂದ ಇರುತ್ತೇನೆ. ಅಷ್ಟಕ್ಕೂ ನಾನು ಬಡತನ ರೇಖೆಗಿಂತ ಕೆಳಗಿರುವ (BPL) ಸಂಸದನಾಗಿದ್ದೇನೆ. ಚುನಾವಣೆ ಪ್ರಚಾರಕ್ಕಾಗಿ ನನಗೆ ಹಣ ಬೇಕು. ಟೆಂಪೋಗಟ್ಟಲೆ ಹಣ ಬಿಡಿ, ಒಂದು ಬ್ಯಾಂಗ್‌ ತುಂಬ ಅವರು ಹಣ ಕಳುಹಿಸಿದರೂ ನನಗೆ ಸಾಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ತಮಾಷೆಯಾಗಿ ಉತ್ತರ ನೀಡಿದ್ದಾರೆ.

ಉದ್ಯಮಿಗಳ ವಿರುದ್ಧ ಸಂಸತ್ತಿನಲ್ಲಿ ನೀವು ಮಾತನಾಡುತ್ತೀರಲ್ಲ ಎಂದು ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ, “ಅವರು ನಮಗೆ ಹಣ ಕಳುಹಿಸುವುದಿಲ್ಲ. ಹಾಗಾಗಿ, ನಾವು ಅವರ ವಿರುದ್ಧ ಮಾತನಾಡುತ್ತೇವೆ” ಎಂದರು. “ಅವರು ಹಣ ಕಳುಹಿಸಿದರೆ ನೀವು ಅವರ ವಿರುದ್ಧ ಮಾತನಾಡುವುದಿಲ್ಲವೇ” ಎಂದು ಕೇಳಿದ ಪ್ರಶ್ನೆಗೆ, “ಅವರು ನಮಗೆ ಹಣ ಕಳುಹಿಸಿದಾಗ ನೋಡೋಣ” ಎಂದು ಹಾರಿಕೆಯ ಉತ್ತರ ನೀಡಿದರು. ಈ ವಿಡಿಯೊ ಭಾರಿ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗುತ್ತಿವೆ.

ಕಾಲೆಳೆದ ಬಿಜೆಪಿ

ಅಂಬಾನಿ-ಅದಾನಿ ಕುರಿತು ಅಧೀರ್‌ ರಂಜನ್‌ ಚೌಧರಿ ಹೇಳಿಕೆ ನೀಡುತ್ತಲೇ ಬಿಜೆಪಿ ಟಾಂಗ್‌ ನೀಡಿದೆ. “ಉದ್ಯಮಿಗಳಿಂದ ಬ್ಯಾಗ್‌ ತುಂಬ ಹಣ ಸಿಕ್ಕರೆ ಸಂಸತ್ತಿನಲ್ಲಿ ಅವರ ವಿರುದ್ಧ ಮಾತನಾಡುವುದಿಲ್ಲ ಎಂಬುದಾಗಿ ಕಾಂಗ್ರೆಸ್‌ ನಾಯಕ ಹೇಳಿದ್ದಾರೆ. ಉದ್ಯಮಿಗಳಿಗೆ ಹಣ ಕೊಡಿ ಎಂಬುದಾಗಿ ಪರೋಕ್ಷವಾಗಿ ಹೇಳುವ ಜತೆಗೆ ಅವರನ್ನು ಟಾರ್ಗೆಟ್‌ ಮಾಡುತ್ತಿರುವುದನ್ನೂ ಒಪ್ಪಿಕೊಂಡಿದ್ದಾರೆ. ಇದು ಹಫ್ತಾ ವಸೂಲಿ ಕಾಂಗ್ರೆಸ್‌ ಹಾಗೂ ಇಂಡಿಯಾ ಒಕ್ಕೂಟ” ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲಾ ಟೀಕಿಸಿದ್ದಾರೆ. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಅಧೀರ್‌ ರಂಜನ್‌ ಚೌಧರಿ, “ಬಿಜೆಪಿಯವರಿಗೆ ಜೋಕ್‌ ಯಾವುದು, ಸೀರಿಯಸ್‌ ಯಾವುದು ಎಂಬುದರ ಪರಿಜ್ಞಾನವೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Prajwal Revanna Case Naveen Gowda post against MLA A Manju
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?

ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಎ. ಮಂಜುಗೂ ಸಂಕಷ್ಟ?

ಈಗಾಗಲೇ ಎಸ್‌ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

ಇದು ಸೂಕ್ಷ್ಮ ವಿಷಯವಾಗಿದೆ. ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ಇನ್ವೆಸ್ಟಿಗೇಶನ್ ಆಗುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ. ಈ ಕೇಸ್‌ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ. ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಟೀಂ ವಿದೇಶಕ್ಕೆ ಹೋಗಲ್ಲ

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್‌ನವರು ಅವರಿಗೆ ಇನ್ಫಾರ್ಮೇಷನ್ ಕೊಡುತ್ತಾರೆ. ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ಗುರುತಿಸಿ ಸಿಬಿಐಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಐನವರು ನಮಗೆ ಮಾಹಿತಿಯನ್ನು ನೀಡುತ್ತಾರೆ. ಆಮೇಲೆ ನಮ್ಮ ಏಜನ್ಸಿಗಳಿಗೂ ಈ ಬಗ್ಗೆ ಗೊತ್ತಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್‌ ವಿವರಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುತ್ತದೆ. ಯಾವುದೇ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಸದ್ಯ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ನಾನು ಹೇಳಿಕೆ ಕೊಡುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಬಿಜೆಪಿಗೆ ಸೋಲಿನ ಭಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಅದಕ್ಕೆ ಪದೇ ಪದೆ ಈ ರೀತಿ ಹೇಳುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ನೋಡೋಣ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading

ಕರ್ನಾಟಕ

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

MLC Election: ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಒಪಿಎಸ್ ಜಾರಿ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಕೂಡ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚುನಾವಣೆಯಲ್ಲಿ (Legislative Council Elections) ಆರೂ ಸ್ಥಾನಗಳನ್ನೂ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸುತ್ತಿದೆ. ಈ ನಡುವೆ ಮತದಾರರನ್ನು ಸೆಳೆಯಲು ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವ ಭಾವಿ ಸಭೆಯಲ್ಲೂ ಒಪಿಎಸ್ (Old Pension Scheme) ಜಾರಿ ಬಗ್ಗೆ ಚರ್ಚೆಯಾಗಿರುವುದು ಕಂಡುಬಂದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆ.ಕೆ. ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ,‌ ಮರಿತ್ತಿಬ್ಬೇಗೌಡ ಭಾಗಿಯಾಗಿದ್ದರು. ಈ ವೇಳೆ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ, ತನ್ವೀರ್ ಸೇಠ್, ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಒಪಿಎಸ್ ಮರು ಜಾರಿ ಮಾಡಿದ್ರೆ ಗೆಲುವು ಖಚಿತ

ರಾಜ್ಯದಲ್ಲಿ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರೆ ಗೆಲುವು ಖಚಿತ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಬಳಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ನೌಕರರ ಮತದಾರರನ್ನು ಸೆಳೆಯಲು ಒಪಿಎಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ‌ ಬಳಿಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗಿದ್ದು, 6 ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕೈ ಅಭ್ಯರ್ಥಿಗಳ ಪಟ್ಟಿ

  1. ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  2. ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  3. ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  4. ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  5. ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  6. ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್‌ 03, 2024
ಫಲಿತಾಂಶ: ಜೂನ್‌ 06, 2024

Continue Reading
Advertisement
Vande Bharat Express
ದೇಶ3 mins ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಕರ್ನಾಟಕ13 mins ago

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Prajwal Revanna Case I was never kidnapped and son has made a false complaint Video of victim goes viral
ಕ್ರೈಂ13 mins ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Adhir Ranjan
ದೇಶ20 mins ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ44 mins ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

felicitation programme for SSLC student Harshita D M who got 2nd place in the state
ತುಮಕೂರು54 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ56 mins ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ59 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಕರ್ನಾಟಕ1 hour ago

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Queen's Premier League start
ಕ್ರಿಕೆಟ್2 hours ago

Queen’s Premier League: ಕಿರುತೆರೆ ,ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರುವಾಯ್ತು ಕ್ವೀನ್ಸ್‌ ಪ್ರೀಮಿಯರ್ ಲೀಗ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast Heavy rain in chikkmagalur
ಮಳೆ44 mins ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ59 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ14 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

ಟ್ರೆಂಡಿಂಗ್‌