Prajadhwani : ಯಾರಿಗೇ ಟಿಕೆಟ್‌ ಕೊಟ್ಟರೂ ಕೆಲಸ ಮಾಡಿ; ಕೈತಪ್ಪಿದವರಿಗೆ MLC, ನಿಗಮ ಮಂಡಳಿ: ಡಿ.ಕೆ. ಶಿವಕುಮಾರ್‌ ಹೇಳಿಕೆ - Vistara News

ಪ್ರಮುಖ ಸುದ್ದಿ

Prajadhwani : ಯಾರಿಗೇ ಟಿಕೆಟ್‌ ಕೊಟ್ಟರೂ ಕೆಲಸ ಮಾಡಿ; ಕೈತಪ್ಪಿದವರಿಗೆ MLC, ನಿಗಮ ಮಂಡಳಿ: ಡಿ.ಕೆ. ಶಿವಕುಮಾರ್‌ ಹೇಳಿಕೆ

ಈಗಾಗಲೆ ಕಾಂಗ್ರೆಸ್‌ ಘೋಷಣೆ ಮಾಡಿರುವ ಯೋಜನೆಗಳನ್ನು ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದರು.

VISTARANEWS.COM


on

DK shivakumar calls for united effort in yadagiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಪಕ್ಷದ ಎಲ್ಲ ಕಾರ್ಯಕರ್ತರು, ನಾಯಕರು ಒಟ್ಟಾಗಿ ಶ್ರಮಿಸಬೇಕು. ಯಾರಿಗೇ ಟಿಕೆಟ್‌ ನೀಡಿದರೂ ಗೆಲ್ಲಿಸಬೇಕು, ಉಳಿದವರಿಗೆ ಎಂಎಲ್‌ಸಿ ಹಾಗೂ ನಿಗಮ ಮಂಡಳಿ ನೇಮಕ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ (Prajadhwani) ಯಾತ್ರೆ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದರು.

ಈ ಕಾರ್ಯಕ್ರಮ ಯಾದಗಿರಿಗೆ ಶಕ್ತಿ ನೀಡುವ ಕಾರ್ಯಕ್ರಮ. ಕಾಂಗ್ರೆಸ್ ಪಕ್ಷಕ್ಕೆ ಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ಬಾಬು ಜಗಜೀವನ್ ರಾಮ್, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿದ್ದಾರು. ಇಂತಹ ಮಹನೀಯರು ಅಲಂಕರಿಸಿದ ಸ್ಥಾನಕ್ಕೆ ನಿಮ್ಮ ಮಣ್ಣಿನ ಮಗ, ಧೀಮಂತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿದ್ದಾರೆ.

ಧರಂ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಭಾಗದ ಜನರಿಗೆ ಶಿಕ್ಷಣ, ಆಹಾರ, ಉದ್ಯೋಗ, ಆರೋಗ್ಯಕ್ಕೆ ತೊಂದರೆಯಾಗುತ್ತಿದೆ ಎಂದು ಚರ್ಚೆ ಮಾಡಿ ಈ ಭಾಗಕ್ಕೆ 371 ಜೆ ಮೂಲಕ ಸಂವಿಧಾನಕ್ಕೆ ತಿಂದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಬೇಕು ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಆಗ ಉಪಪ್ರಧಾನಿಯಾಗಿದ್ದ ಆಡ್ವಾಣಿ ಅವರು ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಪತ್ರ ಬರೆದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೋರಾಟ ಮುಂದುವರಿಸಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಎಲ್ಲ ವಿರೋಧ ಪಕ್ಷಗಳ ಜತೆ ಮಾತನಾಡಿ, 371ಜೆ ತಿದ್ದುಪಡಿ ಮಾಡುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟರು. ಬಿಜೆಪಿ ಸರ್ಕಾರ ಇಂತಹ ಯಾವುದಾದರೂ ಒಂದು ಕಾರ್ಯಕ್ರಮ ಮಾಡಿದ್ದಾರಾ?

ಪಿಎಸ್ಐ ನೇಮಕಾತಿ ಸೇರಿದಂತೆ ಎಲ್ಲಾ ಇಲಾಖೆ ಹುದ್ದೆಗಳು ಹಾಗೂ ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಅಕ್ರಮ ಮಾಡಿ ಯುವಕರ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ. ಈ ಎಲ್ಲ ಅಕ್ರಮಗಳಿಗೆ ಮುಖ್ಯಮಂತ್ರಿಗಳು, ಮಂತ್ರಿಗಳು ಇಲಾಖೆ ಅಧಿಕಾರಿಗಳ ಸಂಪೂರ್ಣ ಬೆಂಬಲ ನೀಡಲಾಗಿದೆ. ಪರಿಣಾಮ ಐಪಿಎಸ್ ಅಧಿಕಾರಿಯಿಂದ ಕೆಲವು ಅಭ್ಯರ್ಥಿವರೆಗೂ ನೂರಾರು ಮಂದಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದಾರೆ. ಇದಕ್ಕೆಲ್ಲ ಕಾರಣ ಯಾರು? ಬಿಜೆಪಿ ಸರ್ಕಾರ.

ಈ ಸರ್ಕಾರ ಯುವಕ ಉದ್ಯೋಗದಿಂದ, ಸರ್ಕಾರದ ಕಾಮಗಾರಿ ಗುತ್ತಿಗೆವರೆಗೂ ಪ್ರತಿಯೊಂದರಲ್ಲೂ ಲಂಚ, ಭ್ರಷ್ಟಾಚಾರ ಮಾಡುತ್ತಿದೆ. ಅವರದೇ ಪಕ್ಷದ ಕಾರ್ಯಕರ್ತ ಸಂತೋಷ್ ಪಾಟೀಲ್ ಸಚಿವರಾಗಿದ್ದ ಈಶ್ವರಪ್ಪ ಅವರಿಗೆ 40% ಕಮಿಷನ್ ನೀಡಲಾಗದೇ ಆತ್ಮಹತ್ಯೆ ಮಾಡಿಕೊಂಡು ಸತ್ತುಹೋದ. ಜಿಲ್ಲಾ ಮಂತ್ರಿಯೇ ಆತ ಕೆಲಸ ಮಾಡಿದ್ದಾನೆ ಎಂದು ಹೇಳಿದ್ದರೂ ಆತನ ಕೆಲಸಕ್ಕೆ ಬಿಲ್ ಪಾವತಿ ಆಗಿಲ್ಲ.

ಈ ರೀತಿ ಉಚಿತ ಯೋಜನೆ ನೀಡಿದರೆ ಯಾರು ಕೆಲಸಕ್ಕೆ ಬರುವುದಿಲ್ಲ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದ್ದರು. ಅದಕ್ಕೆ ಸಿದ್ದರಾಮಯ್ಯನವರು ಅವರ ಬದಲು ನೀವು ಹೋಗಿ ಕೆಲಸಕ್ಕೆ ಎಂದು ಸಿದ್ದರಾಮಯ್ಯನವರು ಉತ್ತರ ನೀಡಿದ್ದರು. ನಮಗೆ ಈ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಂಬಿಕೆ ಇದೆ. ಈ ಭಾಗದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ನೀವೆಲ್ಲರೂ ಅವರನ್ನು ಗೆಲ್ಲಿಸಬೇಕು. ಟಿಕೆಟ್ ಸಿಗದವರಿಗೆ ಪಕ್ಷ ಮುಂದಿನ ದಿನಗಳಲ್ಲಿ ಎಂಎಲ್ಸಿ, ವಿವಿಧ ನಿಗಮ ಮಂಡಳಿ ಮುಖ್ಯಸ್ಥರನ್ನಾಗಿ ಮಾಡಿ ಅಧಿಕಾರ ನೀಡಲಾಗುವುದು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಈ ವಿಚಾರವಾಗಿ ನೀವೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದರು.

ಈ ಭಾಗದ ಜನರಿಗೆ ಸಂವಿಧಾನದ ಮೂಲಕ ಶಕ್ತಿ ನೀಡಿದ್ದು ಯಾರು? ಕಾಂಗ್ರೆಸ್ ಪಕ್ಷ. ಮೀಸಲಾತಿ ಕೊಟ್ಟಿದ್ದು ಯಾರು? ರಾಜಕೀಯ, ಶೈಕ್ಷಣಿಕವಾಗಿ ಮೀಸಲಾತಿ ಕಾಂಗ್ರೆಸ್ ಪಕ್ಷದ ಕೊಡುಗೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ. ಮೋದಿ ಅವರು ಜನ್ ಧನ್ ಅಕೌಂಟ್ ಖಾತೆ ತೆರೆಸಿ ನಿಮ್ಮ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು, ಆ ಹಣ ಬಂತಾ? ಮುಂದೆ ಬಿಜೆಪಿಯವರು ನಿಮ್ಮ ಬಳಿಗೆ ಬಂದಾಗ, ಕಪ್ಪು ಹಣ ತಂದು ನಿಮ್ಮ ಖಾತಿಗೆ ಹಾಕುತ್ತೇನೆ ಎಂದಿದಲ್ಲಪ್ಪಾ, ಎಲ್ಲಿ ಎಂದು ಕೇಳಬೇಕು.

ಇದನ್ನೂ ಓದಿ : KPSC Departmental Examination : ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಪ್ರಮಾಣ ಪತ್ರ ಬಿಡುಗಡೆ

ಈ ಭಾಗದ ಮಕ್ಕಳಿಗಾಗಿ ಈ ಪ್ರದೇಶದಲ್ಲಿ 100 ಕಾಲೇಜುಗಳ ಸ್ಥಾಪನೆ ಮಾಡುವುದಾಗಿ ಮಾತು ನೀಡಿದ್ದೇವೆ. ಈ ಭಾಗದ ನಾಯಕರೆಲ್ಲರೂ ಸೇರಿ ಜನರಿಗೆ ಏನು ಮಾಡಬೇಕು, ಕಷ್ಟದಲ್ಲಿರುವ ಜನರಿಗೆ ಹೇಗೆ ಸಹಾಯ ಮಾಡಬೇಕು ಚರ್ಚೆ ಮಾಡಿ, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿದ ಬೆಳಗಾವಿಯಲ್ಲಿ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಆ ಮೂಲಕ ಪ್ರತಿ ತಿಂಗಳಿಗೆ 1500ರಂತೆ ವರ್ಷಕ್ಕೆ 18 ಸಾವಿರದಷ್ಟು ಹಣವನ್ನು ಪ್ರತಿ ಕುಟುಂಬ ಉಳಿಸಬಹುದಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Lok Sabha Election 2024: ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ, ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆಯಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದರು. ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ. ಗೂಂಡಾ ಗುರು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನದ್ದು ಗೂಂಡಾ ಸಂಸ್ಕೃತಿಯಾಗಿದೆ ಎಂದು ಆರ್.‌ ಅಶೋಕ್‌ ಗುಡುಗಿದ್ದಾರೆ.

VISTARANEWS.COM


on

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ (Rahul Gandhi) ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಗೂಂಡಾ ಗುರು

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ. ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ಸ್ಪೀಕರ್‌ಗೆ ಧಮ್ಕಿ ಹಾಕುವುದು ಮಹಿಳೆಯರ ಬಟ್ಟೆ ಎಳೆದು ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು-ಹೀಗೆ ಸಿಎಂ ಸಿದ್ದರಾಮಯ್ಯ ಮಾಡಿದ ರೌಡಿಸಂಗೆ ಲೆಕ್ಕವೇ ಇಲ್ಲ. ಪ್ರಧಾನಿಗೆ, ರಾಷ್ಟ್ರಪತಿಗೆ ಅವನು, ಇವಳು ಎಂದು ಕರೆಯುವವರು, ಪ್ರಧಾನಿಗೆ ಹೊಡೆಯುತ್ತೇನೆ ಎನ್ನುವವರು ನಿಜವಾದ ಗೂಂಡಾಗಳು. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ. ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂದರು.

ರಾಜ್ಯದಲ್ಲಿ ಗೂಂಡಾ ಸರ್ಕಾರವಿದ್ದು, ಸಿಎಂ ಸಿದ್ದರಾಮಯ್ಯ ಗೂಂಡಾಗುರುವಾಗಿ ವರ್ತಿಸುತ್ತಿದ್ದಾರೆ. ಕರಸೇವಕರನ್ನು ಬಂಧಿಸಿ, ಹನುಮ ಧ್ವಜ ಇಳಿಸಿ, ಮುಸ್ಲಿಂ ದಂಗೆಕೋರರಿಗೆ ಆಶ್ರಯ ನೀಡಿದ್ದು ಇದೇ ಗೂಂಡಾ ಕಾಂಗ್ರೆಸ್‌. ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹೊಡೆದವರು ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದವರು ಗೂಂಡಾ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಯಾರು ಗೂಂಡಾ ಎಂದು ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಸಮನ್ವಯ ಸಭೆ

ಬಿಜೆಪಿ-ಜೆಡಿಎಸ್‌ ಹಾಲು ಜೇನಿನಂತೆ ಕೆಲಸ ಮಾಡುತ್ತಿದೆ. ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಿಸಲು ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುವುದು. ರೈತರಿಗೆ ಪರಿಹಾರ ಕೊಡದ, ಕುಡಿಯುವ ನೀರು ಕೊಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಇಂತಹ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಬೇಕು ಎಂದು ಮನವಿ ಮಾಡಿದರು.

Continue Reading

Lok Sabha Election 2024

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Lok Sabha Election: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ಸೀಟು ಹಂಚಿಕೆ ಮಾಡಿಕೊಂಡಿವೆ. ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳು ಎಂಬ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi And Tejashwi Yadav
Koo

ಪಟನಾ: ಲೋಕಸಭೆ ಚುನಾವಣೆಗೆ (Lok Sabha Election) ಇಂಡಿಯಾ ಒಕ್ಕೂಟವೂ (India Bloc) ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅಥವಾ ಮಹಾಘಟಬಂಧನದ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡಿವೆ. ಆರ್‌ಜೆಡಿಯು (RJD) 26 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಎಡ ಪಕ್ಷವು ಐದು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ. ಇದರೊಂದಿಗೆ ಇಂಡಿಯಾ ಒಕ್ಕೂಟದಲ್ಲಿ ಬಿಹಾರದಲ್ಲಿ ಒಮ್ಮತ ಮೂಡಿದಂತಾಗಿದೆ.

ಕಿಶನ್‌ ಗಂಜ್‌ ಹಾಗೂ ಪಟನಾ ಸಾಹಿಬ್‌ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಪೂರ್ಣಿಯಾ ಹಾಗೂ ಕಟಿಹಾರ್‌ನಲ್ಲಿ ಜೆಡಿಯು ಗೆಲುವು ಸಾಧಿಸಿದ್ದು, ಪೂರ್ಣಿಯಾದಲ್ಲಿ ಆರ್‌ಜೆಡಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮೊದಲು ಪೂರ್ಣಿಯಾ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ರಾಜ್ಯಸಭೆ ಸದಸ್ಯೆ ರಂಜೀತ್‌ ರಂಜನ್‌ ಅವರ ಪತಿ ಪಪ್ಪು ಯಾದವ್‌ ಅವರು ಇಲ್ಲಿ ಸ್ಪರ್ಧಿಸಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಪಪ್ಪು ಯಾದವ್‌ ಕೂಡ ಟಿಕೆಟ್‌ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಬಿಹಾರದಲ್ಲಿ ಲೋಕ ಸಭಾ ಚುನಾವಣೆಗೆ ಎನ್​ಡಿಎ ಬಣದ ಸೀಟು ಹಂಚಿಕೆ ಒಪ್ಪಂದ ನಡೆದಿದೆ. ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಪ್ರಕಟಿಸಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 17, ಜೆಡಿಯು 16, ಎಲ್​ಜೆಪಿ (ರಾಮ್ ವಿಲಾಸ್) 5, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ತಾವ್ಡೆ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

ಬಿಹಾರದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಲಿದೆ

  1. ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): ವೈಶಾಲಿ, ಹಾಜಿಪುರ, ಸಮಸ್ತಿಪುರ, ಖಗರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಎಲ್ಜೆಪಿ (ರಾಮ್ ವಿಲಾಸ್) ಸ್ಪರ್ಧಿಸಲಿದೆ.
  2. ಹಿಂದೂಸ್ತಾನಿ ಅವಾಮ್ ಮೋರ್ಚಾ ಗಯಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ
  3. ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಕರಕಾಟ್ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

LIC Offices: ಮಾರ್ಚ್‌ 30 ಹಾಗೂ 31ರಂದು ಬ್ಯಾಂಕ್‌ಗಳು ಮಾತ್ರವಲ್ಲ ಭಾರತೀಯ ಜೀವ ವಿಮಾ ನಿಗಮದ ಕಚೇರಿಗಳು ಕಾರ್ಯನಿರ್ವಹಿಸಲಿವೆ.

VISTARANEWS.COM


on

LIC
Koo

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಕೊನೆಯ ದಿನವು ಭಾನುವಾರವೇ ಇರುವುದರಿಂದ ಬ್ಯಾಂಕ್‌ಗಳು (Banks) ಶನಿವಾರ ಹಾಗೂ ಭಾನುವಾರವೂ (ಮಾರ್ಚ್‌ 30, 31) ಕಾರ್ಯನಿರ್ವಹಿಸಲಿವೆ. ಬ್ಯಾಂಕ್‌ಗಳು ಮಾತ್ರವಲ್ಲ, ಭಾರತೀಯ ಜೀವ ವಿಮಾನ ನಿಗಮದ (LIC Offices) ಕಚೇರಿಗಳು ಕೂಡ ಶನಿವಾರ ಹಾಗೂ ಭಾನುವಾರ ಕಾರ್ಯನಿರ್ವಹಿಸಲಿವೆ. ಮಾರ್ಚ್‌ 30 ಹಾಗೂ 31 ಪ್ರಸಕ್ತ ಹಣಕಾಸು ವರ್ಷದ (Fiscal Year) ಕೊನೆಯ ದಿನಗಳಾಗಿರುವ ಕಾರಣ ಗ್ರಾಹಕರಿಗೆ ತೊಂದರೆಯಾಗಬಾರದು ಎಂದು ವೀಕೆಂಡ್‌ನಲ್ಲೂ ಎಲ್‌ಐಸಿ ಕಚೇರಿಗಳು ಕಾರ್ಯನಿರ್ವಹಿಸಲಿವೆ.

ವಿತ್ತೀಯ ವರ್ಷದ ಕೊನೆಯ ಎರಡು ದಿನಗಳಂದು ಆದಾಯ ತೆರಿಗೆ ಇಲಾಖೆ ಕಚೇರಿಗಳು ಕೂಡ ಕಾರ್ಯನಿರ್ವಹಿಸಲಿವೆ. ಹಣಕಾಸು ಚಟುವಟಿಕೆಯ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗಳು ಕೂಡ ತೆರೆದಿರಲಿವೆ. ಎಲ್‌ಐಸಿ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಎಲ್‌ಐಸಿಯೇ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Job Alert: ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಏ. 9ರೊಳಗೆ ಅರ್ಜಿ ಸಲ್ಲಿಸಿ

2023-24ರ ಹಣಕಾಸು ವರ್ಷದ (ಎಫ್​ಎ) ಕೊನೆಯ ದಿನ ಭಾನುವಾರ ಬರುವುದರಿಂದ ಈ ಸೂಚನೆ ಬಂದಿದೆ. ಅಧಿಕೃತ ಹೇಳಿಕೆಯಲ್ಲಿ, “2023-24ರ ಹಣಕಾಸು ವರ್ಷದಲ್ಲಿ ತೆರಿಗೆ ಪಾವತಿಗಳಿಗೆ ಸಂಬಂಧಿಸಿದ ಎಲ್ಲ ವಹಿವಾಟುಗಳನ್ನು ಲೆಕ್ಕಹಾಕಲು ಮಾರ್ಚ್ 31, 2024 ರಂದು (ಭಾನುವಾರ) ಸರ್ಕಾರಿ ರಸೀದಿಗಳು ಮತ್ತು ಪಾವತಿಗಳನ್ನು ವ್ಯವಹರಿಸುವ ಬ್ಯಾಂಕುಗಳ ಎಲ್ಲಾ ಶಾಖೆಗಳನ್ನು ವಹಿವಾಟುಗಳಿಗೆ ತೆರೆದಿಡಲು ಭಾರತ ಸರ್ಕಾರ ವಿನಂತಿಸಿದೆ” ಎಂದು ಆರ್​​ಬಿಐ ಹೇಳಿದೆ.

ಆರ್‌ಬಿಐನ ಏಜೆನ್ಸಿ ಬ್ಯಾಂಕುಗಳಾಗಿ ಪಟ್ಟಿ ಮಾಡಲಾದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ (ಪಿಎಸ್​ಬಿ) ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೆನರಾ ಬ್ಯಾಂಕ್ ಸೇರಿವೆ. ಅಂತೆಯೇ, ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ಮತ್ತು ಎಚ್​ಡಿಎಫ್​ಸಿ ಬ್ಯಾಂಕ್ ಲಿಮಿಟೆಡ್​ನಂತ ಖಾಸಗಿ ಬ್ಯಾಂಕುಗಳು ಏಜೆನ್ಸಿ ಬ್ಯಾಂಕಿಂಗ್ ಕಾರ್ಯಾಚರಣೆಗಳನ್ನ ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.

ವಾರಾಂತ್ಯದಲ್ಲಿ ತೆರೆದಿರುವ ಬ್ಯಾಂಕ್​ಗಳ ವಿವರ ಇಲ್ಲಿದೆ

  • ಬ್ಯಾಂಕ್ ಆಫ್ ಬರೋಡಾ
  • ಬ್ಯಾಂಕ್ ಆಫ್ ಇಂಡಿಯಾ
  • ಬ್ಯಾಂಕ್ ಆಫ್ ಮಹಾರಾಷ್ಟ್ರ
  • ಕೆನರಾ ಬ್ಯಾಂಕ್
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಇಂಡಿಯನ್ ಬ್ಯಾಂಕ್
  • ಇಂಡಿಯನ್ ಓವರ್ಸೀಸ್ ಬ್ಯಾಂಕ್
  • ಪಂಜಾಬ್ ಮತ್ತು ಸಿಂಧ್ ಬ್ಯಾಂಕ್
  • ಪಂಜಾಬ್ ನ್ಯಾಷನಲ್ ಬ್ಯಾಂಕ್
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
  • ಯುಕೋ ಬ್ಯಾಂಕ್
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Lok Sabha Election 2024: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಕಳೆದ 4 ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. ಇಲ್ಲಿ ಯಾರೇ ಅಭ್ಯರ್ಥಿಯಾದರೂ ಕಮಲ ಅಭ್ಯರ್ಥಿಗೆ ನಿರಾಯಾಸ ಗೆಲುವು ಎಂಬ ಮಾತು ಚಾಲ್ತಿಯಲ್ಲಿದೆ. ಈ ಬಾರಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸ್ವಪಕ್ಷೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅವರನ್ನು ಬದಲಾವಣೆ ಮಾಡಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಮಣೆ ಹಾಕಲಾಗಿದೆ. ಈಗ ಬ್ರಿಜೇಶ್‌ ಚೌಟ ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ಇದರಿಂದ ಇವರು ಲಕ್ಷಾಧಿಪತಿ ಎಂದು ತಿಳಿದುಬಂದಿದ್ದು, ಇವರು ಹೊಂದಿರುವ ಕಾರಿಗೆ ಸಾಲ ಮಾಡಿದ್ದಾಗಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಬಿಎಸ್ಸಿ ಪದವೀಧರರಾಗಿರುವ ಇವರು, ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಸಹ ಪೂರೈಸಿದ್ದಾರೆ.

VISTARANEWS.COM


on

Lok Sabha Election 2024 Brijesh Chowta declares assets
Koo

ಮಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗ ನಾಮಪತ್ರ ಸಲ್ಲಿಕೆ ಶುರುವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ (Dakshina Kannada Lok Sabha constituency) ಬಿಜೆಪಿ ಅಭ್ಯರ್ಥಿ (BJP Candidate) ಕ್ಯಾಪ್ಟನ್​ ಬ್ರಿಜೇಶ್ ಚೌಟಾ (Brijesh Chowta) ಶುಕ್ರವಾರ (ಮಾ. 29) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಾವು 70 ಲಕ್ಷ ರೂಪಾಯಿ ಒಡೆಯ ಎಂದು ಘೋಷಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ಬಳಿ ಇರುವ ಕಾರನ್ನು ಸಾಲ ಮಾಡಿ ತೆಗೆದುಕೊಂಡಿದ್ದಾಗಿ 42 ವರ್ಷದ ಬ್ರಿಜೇಶ್‌ ಹೇಳಿದ್ದಾರೆ. ಇವರು ಏಪ್ರಿಲ್‌ 4ರಂದು ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸುವುದಾಗಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಕಳೆದ 4 ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. ಇಲ್ಲಿ ಯಾರೇ ಅಭ್ಯರ್ಥಿಯಾದರೂ ಕಮಲ ಅಭ್ಯರ್ಥಿಗೆ ನಿರಾಯಾಸ ಗೆಲುವು ಎಂಬ ಮಾತು ಚಾಲ್ತಿಯಲ್ಲಿದೆ. ಈ ಬಾರಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರಿಗೆ ಸ್ವಪಕ್ಷೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅವರನ್ನು ಬದಲಾವಣೆ ಮಾಡಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಮಣೆ ಹಾಕಲಾಗಿದೆ. ಈಗ ಚೌಟ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದು, ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 70,81,365 ಲಕ್ಷ ರೂಪಾಯಿ ಎಂದು ಬ್ರಿಜೇಶ್ ಚೌಟ ಉಲ್ಲೇಖಿಸಿದ್ದಾರೆ.

70,81,365 ಲಕ್ಷ ರೂಪಾಯಿಯ ಒಟ್ಟು ಆಸ್ತಿ ಮೌಲ್ಯದಲ್ಲಿ ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂಪಾಯಿ ಆಗಿದ್ದರೆ, ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂಪಾಯಿ ಆಗಿದೆ. ಇನ್ನು ಬ್ರಿಜೇಶ್ ಚೌಟ ಅವರು ಕಾರಿಗಾಗಿ ಸಾಲ ಮಾಡಿದ್ದು, ಒಟ್ಟು 9,62,010 ರೂಪಾಯಿ ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ಬಿ.ಎಸ್ಸಿ ಪದವೀಧರ

ಬ್ರಿಜೇಶ್‌ ಚೌಟ ಅವರು ಬಿಎಸ್ಸಿ ಪದವೀಧರರಾಗಿದ್ದು, ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಸಹ ಪೂರೈಸಿದ್ದಾರೆ.

ಯಾರು ಈ ಬ್ರಿಜೇಶ್‌ ಚೌಟ?

ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾಜಿ ಸೈನಿಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ಆಡಳಿತ ನಿರ್ವಹಣಾ ತಜ್ಞ. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದವರು..

ಕ್ಯಾಪ್ಟನ್ ಚೌಟ ಅವರು ಭಾರತೀಯ ಸೇನೆಯ ಮಾನವ ಸಂಪನ್ಮೂಲ, ಭದ್ರತೆ, ಕಾರ್ಯಾಚರಣೆಗಳು, ಆಡಳಿತ ಮತ್ತು ಲಾಜಿಸ್ಟಿಕ್ಸ್‌ನ ಸ್ವತಂತ್ರ ನಿರ್ವಹಣೆಯಲ್ಲಿ ಏಳು ವರ್ಷಗಳ ಅನುಭವವನ್ನು ಹೊಂದಿರುವುದು ಅವರ ವಿಶೇಷತೆಯಾಗಿದೆ.

Lok Sabha Election 2024 Captain Brijesh Chowta with PM Narendra Modi

ಇದನ್ನೂ ಓದಿ : Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

ಎನ್‌ಸಿಸಿ ಮತ್ತು ಆರ್‌ಎಸ್‌ಎಸ್‌ ಪ್ರೇರಣೆಯಿಂದ ಸೇನೆ ಸೇರಿದ ಚೌಟ

ಬ್ರಿಜೇಶ್‌ ಚೌಟ ಅವರು ಕಾಲೇಜಿನಲ್ಲಿದ್ದಾಗ ಎನ್‌ಸಿಸಿ ಕೆಡೆಟ್‌ ಆಗಿದ್ದರು. ಅದರ ಜತೆಗೆ ಆರೆಸ್ಸೆಸ್‌ ಜತೆಗಿನ ಸಂಬಂಧ ಅವರನ್ನು ಸೇನೆಯನ್ನು ಸೇರಲು ಪ್ರೇರಣೆ ನೀಡಿತು. ಪದವಿ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್‌ಗಾಗಿ UPSC ಪರೀಕ್ಷೆಯನ್ನು ಬರೆದರು. ಎಸ್‌ಎಸ್‌ಬಿ ಮೂಲಕ ಪರೀಕ್ಷೆ ತೇರ್ಗಡೆಯಾದ ನಂತರ OTI ಚೆನ್ನೈನಲ್ಲಿ ತರಬೇತಿ ಪಡೆದಿದ್ದಾರೆ.

Lok Sabha Election 2024 : ಏಳು ವರ್ಷಗಳ ಸೇನಾ ಸೇವೆ ಎಲ್ಲೆಲ್ಲಿ ನಡೆದಿತ್ತು?

ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಆರಂಭಿಕ ತರಬೇತಿ ಪಡೆದಿರುವುದು ಚೆನ್ನೈನಲ್ಲಿ. ಮುಂದಿನ ಮೂರು ತಿಂಗಳ ಕಾಲ ಶಿಲ್ಲಾಂಗ್‌ನಲ್ಲಿ ತರಬೇತಿ ನಡೆಯಿತು. ಪದಾತಿದಳದ ಗೂರ್ಖಾ ರೆಜಿಮೆಂಟ್‌ನಲ್ಲಿ ಕೆಲಸ ಮಾಡಿದ್ದ ಅವರು ಮೂರು ವರ್ಷಗಳ ಕಾಲ ಮಣಿಪುರದಲ್ಲಿ ಮತ್ತು ನಂತರ ಒಂದು ವರ್ಷ ಅಸ್ಸಾಂನಲ್ಲಿ ಬಂಡಾಯ ಉತ್ತುಂಗದಲ್ಲಿದ್ದಾಗ ಕೆಲಸ ಮಾಡಿದ್ದರು.

ಇವರದು ರಾಜಕೀಯ ಕುಟುಂಬವಲ್ಲ

ಬ್ರಿಜೇಶ್‌ ಚೌಟ ಅವರು ಮೂಡುಬಿದಿರೆಯ ಬಂಟ ಕುಟುಂಬಕ್ಕೆ ಸೇರಿದವರು. ಹಾಗಂತ ಇವರೇನೂ ಶ್ರೀಮಂತ ಕುಟುಂಬದವರಲ್ಲ. ಬ್ರಿಜೇಶ್‌ ಚೌಟ ಅವರು ಸೈನ್ಯಕ್ಕೆ ಸೇರಿದ ನಂತರ ಕುಟುಂಬ ಫರಂಗಿಪೇಟೆಯಲ್ಲಿ ನೆಲೆಸಿದೆ.

Captain Brijesh Chowta and cow

ಕಂಬಳದ ಸಂಯೋಜಕ ಬ್ರಿಜೇಶ್‌ ಚೌಟ

ಬ್ರಿಜೇಶ್‌ ಚೌಟ ಅವರು ಕರಾವಳಿಯ ಸಾಂಸ್ಕೃತಿಕ ಮತ್ತು ಕ್ರೀಡಾ ನೇತಾರರಾಗಿಯೂ ಹೆಸರಾಗಿದ್ದಾರೆ. ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಮಂಗಳೂರಿನಲ್ಲಿ ಆಯೋಜಿಸುವ ಮೂಲಕ ಅವರು ಗಮನ ಸೆಳೆದಿದ್ದಾರೆ.

Captain Brijesh Chowta and Kambala poster

ಬ್ರಿಜೇಶ್‌ ಚೌಟ ಅವರ ರಾಜಕೀಯ ಜೀವನ

ಬ್ರಿಜೇಶ್‌ ಚೌಟ ಅವರು ಕಾಲೇಜು ಜೀವನದಿಂದಲೇ ರಾಷ್ಟ್ರೀಯವಾದಿ, ಆರೆಸ್ಸೆಸ್‌ ಸ್ವಯಂಸೇವಕ. ಹೀಗಾಗಿ ಬಿಜೆಪಿಯ ಕಡೆಗೆ ಸಹಜ ಒಲವು ಹೊಂದಿದ್ದರು. ಅವರು ಬಿಜೆಪಿಯಲ್ಲಿ ಸಕ್ರಿಯವಾಗಿದ್ದು 2013ರ ವಿಧಾನಸಭಾ ಚುನಾವಣೆಯ ಬಳಿಕ. ಅವರು ಮೂರು ವರ್ಷಗಳ ಕಾಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ನಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಹೆಸರು ಅಭ್ಯರ್ಥಿಯಾಗಿ ಕೇಳಿಬಂದಿತ್ತು. ಇದೀಗ ಅವರಿಗೆ ಸಂಸತ್‌ ಪ್ರವೇಶಕ್ಕೆ ಟಿಕೆಟ್‌ ಸಿಕ್ಕಿದೆ.

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜೇಶ್‌ ಚೌಟ ಆಯ್ಕೆ ಆಗಿದ್ದು ಹೇಗೆ?

ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಯುವ ನಾಯಕ, 42 ವರ್ಷದ ಬ್ರಿಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಅಂದಹಾಗೆ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿರುವುದು ಮಹತ್ವದ ನಡೆಯಾಗಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್‌ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿರುತ್ತಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಲಿಟ್ ಫೆಸ್ಟ್ ಸಂಘಟನೆ

ಪಕ್ಷದ ಚಟುವಟಿಕೆ ಜತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

ಕಂಬಳಕ್ಕಾಗಿ ಹೋರಾಟ

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿಗ ಚರ್ಚೆ ನಡೆಯುತ್ತಿರುವಾಗಲೇ ಬ್ರಿಜೇಶ್ ಚೌಟ ಹೆಸರು ಮುನ್ನೆಲೆಗೆ ಬಂದಿತ್ತು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬ್ರಿಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದರೂ ಅವಿವಾಹಿತರಾಗಿಯೇ ಇದ್ದು ತನ್ನ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.

Continue Reading
Advertisement
Utthana Essay Competition 2023
ಕರ್ನಾಟಕ13 mins ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 202414 mins ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು15 mins ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ19 mins ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ31 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202437 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ43 mins ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು43 mins ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

LIC
ದೇಶ2 hours ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌2 hours ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌