Astrology Answers : ನಿರುದ್ಯೋಗಿಯಾಗಿರುವ ನನಗೆ ಯಾವಾಗ ಕೆಲಸ ಸಿಗುತ್ತದೆ ಗುರೂಜಿ? - Vistara News

ಪ್ರಮುಖ ಸುದ್ದಿ

Astrology Answers : ನಿರುದ್ಯೋಗಿಯಾಗಿರುವ ನನಗೆ ಯಾವಾಗ ಕೆಲಸ ಸಿಗುತ್ತದೆ ಗುರೂಜಿ?

ಇದು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್‌. ದ್ವಾರಕನಾಥ್‌ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ನೀವೂ ಪ್ರಶ್ನೆ ಕೇಳಬಹುದು.

VISTARANEWS.COM


on

ಭವಿಷ್ಯ ಪ್ರಶ್ನೋತ್ತರ rajaguru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಶ್ನೆ: ನಾನು ನಿರುದ್ಯೋಗಿಯಾಗಿದ್ದೇನೆ. ನನಗೆ ಉದ್ಯೋಗ ಯಾವಾಗ ಸಿಗುತ್ತದೆ ದಯವಿಟ್ಟು ತಿಳಿಸಿ ಗುರೂಜಿ.
ರಾಶಿ: ಮಕರ ನಕ್ಷತ್ರ: ಶ್ರವಣ

ಪರಿಹಾರ: ನಿರುದ್ಯೋಗಿಯೆಂದು ನಿರಾಶರಾಗಬೇಡಿ. ಗುರುದೆಶೆಯಲ್ಲಿ ಖಾತ್ರಿಯಾಗಿ ನೌಕರಿಯು ಸಿಕ್ಕಿ, ಸಂತೋಷ ಪಡುತ್ತೀರಿ. ಶ್ರೀ ಗುರು ದತ್ತಾತ್ರೇಯ ಎಂಬ ಹೆಸರಿನಲ್ಲಿ ಗಾಣಗಾಪುರದಲ್ಲಿ ವಿಶ್ವಪಾಲಕನು ತ್ರಿಮೂರ್ತಿ ರೂಪದಲ್ಲಿ ಕುಳಿತಿದ್ದಾನೆ. ಅವನನ್ನು ಸಂದರ್ಶಿಸಿ, ಅನುಗ್ರಹ ಪಡೆದು, ಕೈಲಾದ ಸೇವೆ ಮಾಡಿ ಬನ್ನಿ. ದೇವರೇ ಕೈಹಿಡಿದು ನಡೆಸಿ ನಿಮಗೆ ತೃಪ್ತಿ ಸಿಗುವ ಕೆಲಸ ಕೊಡಿಸುತ್ತಾನೆ. ನಿತ್ಯ ದತ್ತ ಅಷ್ಟಕ ಪಾರಾಯಣ ಮಾಡಿ. ನಿಮ್ಮ ಊರಿನಲ್ಲಿರುವ ದತ್ತ ದೇವಸ್ಥಾನಕ್ಕೆ ಅಥವಾ ಈಶ್ವರನ ದೇವಸ್ಥಾನಕ್ಕೆ ಹೋಗಿ ಬನ್ನಿ. ಎಲ್ಲವೂ ಒಳ್ಳೆಯದಾಗುತ್ತದೆ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ : Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

Lok Sabha Election 2024: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಣದಲ್ಲಿ ಕೆ.ಪಿ. ನಂಜುಂಡಿ ಗುರುತಿಸಿಕೊಂಡಿದ್ದರು. ಇವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ, ಇದೀಗ ದಿಢೀರ್‌ ಆಗಿ ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕೆ.ಪಿ. ನಂಜುಂಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈಗ ಭೇಟಿಯಾಗಿ 15 ದಿನದಲ್ಲೇ ನಂಜುಂಡಿ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Lok Sabha Election 2024 KP Nanjundi resigns from Legislative Council
Koo

ಹುಬ್ಬಳ್ಳಿ: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ವಿಶ್ವಕರ್ಮ ಸಮುದಾಯದ ನಾಯಕ ಕೆ.ಪಿ‌. ನಂಜುಂಡಿ (KP Nanjundi) ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ (Legislative Council membership) ರಾಜೀನಾಮೆ ನೀಡಿದ್ದಾರೆ. ಇಲ್ಲಿನ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ ನಿವಾಸಕ್ಕೆ ಆಗಮಿಸಿ ರಾಜೀನಾಮೆ‌ ಸಲ್ಲಿಸಿದ್ದಾರೆ. ಸ್ವ – ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಕೆ.ಪಿ. ನಂಜುಂಡಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಣದಲ್ಲಿ ಕೆ.ಪಿ. ನಂಜುಂಡಿ ಗುರುತಿಸಿಕೊಂಡಿದ್ದರು. ಇವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ, ಇದೀಗ ದಿಢೀರ್‌ ಆಗಿ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ ಸೇರ್ಪಡೆ?

ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಈಚೆಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿ ಮಾತನಾಡಿದ್ದರು. ಬೆಳಗ್ಗಿನ ಉಪಾಹಾರ ಸೇವನೆ ಮಾಡಿದ್ದರು. ಹೀಗಾಗಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಆಗಲೇ ವದಂತಿಗಳು ಹಬ್ಬಿದ್ದವು. ಈಗ ಅವರು ತಮ್ಮ ವಿಧಾನ ಪರಿಷತ್‌ ಅವಧಿ ಇರುವಾಗಲೇ ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಆದರೆ, ಯಾವಾಗ ಸೇರಲಿದ್ದಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.


Lok Sabha Election 2024 KP Nanjundi resigns from Legislative Council

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಡಿಕೆಶಿ ಜತೆ ಕಾಣಿಸಿಕೊಂಡಿದ್ದ ಸಹ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ (Lok Sabha Election 2024) ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರ ಶಾಲೆ ಸಹ ಶಿಕ್ಷಕ ಕೆ.ರಾಮು ಅಮಾನತುಗೊಂಡಿದ್ದಾರೆ. ಚುನಾವಣೆ ನೀತಿ ಸಂಹಿತೆ ಪ್ರಕಾರ ಸರ್ಕಾರಿ ನೌಕರರು, ರಾಜಕೀಯ ವ್ಯಕ್ತಿಗಳೊಂದಿಗೆ ಗುರುತಿಸಿಕೊಳ್ಳಬಾರದು. ಆದರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಜತೆ ಕಾಣಿಸಿಕೊಂಡು ನಿಯಮ ಉಲ್ಲಂಘಿಸಿದ್ದರಿಂದ ಕೆ.ರಾಮು ಅವರನ್ನು ಅಮಾನತು ಮಾಡಿ ಆದೇಶಿಸಲಾಗಿತ್ತು.

ನಂಜುಂಡಿ ಮನೆಯಲ್ಲಿ ಕಾಣಿಸಿಕೊಂಡಿದ್ದ ಶಿಕ್ಷಕ

ಏಪ್ರಿಲ್ 7ರಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್‌ಸಿ ಕೆ.ಪಿ. ನಂಜುಂಡಿ ಅವರ ಮನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿ ಪ್ರತ್ಯಕ್ಷವಾಗಿದ್ದ ಸಹ ಶಿಕ್ಷಕ ಕೆ.ರಾಮು ಅವರು, ಡಿ.ಕೆ. ಶಿವಕುಮಾರ್‌, ಕೆ.ಪಿ. ನಂಜುಂಡಿ ಸೇರಿ ವಿವಿಧ ರಾಜಕೀಯ ನಾಯಕರಿಗೆ ಉಪಾಹಾರ ಬಡಿಸಿದ್ದರು. ಶಿಕ್ಷಕ ಉಪಾಹಾರ ಬಡಿಸುವ ವಿಡಿಯೊ ಮತ್ತು ಫೋಟೊಗಳು ವೈರಲ್ ಆಗಿದ್ದವು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಇಒ ಕಾರಣ ಕೇಳಿ ನೋಟಿಸ್ ನೀಡಿದ್ದರು. ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿದ ಜಿಲ್ಲಾ ಚುನಾವಣಾ ಅಧಿಕಾರಿ ಎಲ್. ಚಂದ್ರಶೇಖರ್ ನಾಯಕ್ ಅವರು, ತನಿಖೆ ನಂತರ ಸಹ ಶಿಕ್ಷಕ ಕೆ ರಾಮು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Drought In Karnataka : ಭೀಕರ ಬರ; ಆಹಾರ ಸಿಗದೆ ಪ್ಲಾಸ್ಟಿಕ್, ನಟ್ಟು ಬೋಲ್ಟು ತಿನ್ನುತ್ತಿರುವ ಹಸುಗಳು!

ವರದಿ ಪ್ರಸಾರ ಮಾಡಿದ್ದ ವಿಸ್ತಾರ

ಸಹ ಶಿಕ್ಷಕ ರಾಮು ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಗ್ಗೆ ವಿಸ್ತಾರ ನ್ಯೂಸ್‌ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿ ಸ್ಪಂದಿಸಿ ಕ್ರಮ ಕೈಗೊಂಡಿದ್ದಾರೆ.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಸಹ ಶಿಕ್ಷಕ ರಾಮು ಅವರ ವಿರುದ್ಧ ಬಿಜೆಪಿಯ ವಸಂತಕುಮಾರ್ ಹಾಗೂ ಇತರರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಎಂಎಲ್‌ಸಿ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದಾಗ ಅವರಿಗೆ ಶಿಕ್ಷಕ ರಾಮು ಅವರು ಊಟ ಬಡಿಸುತ್ತಿರುವ ಬಗ್ಗೆ ವಿಸ್ತಾರ ವಾಹಿನಿಯಲ್ಲಿ ವರದಿ ಪ್ರಸಾರವಾಗಿರುವುದನ್ನು ಉಲ್ಲೇಖಿಸಿ, ದೂರು ಸಲ್ಲಿಸಿದ್ದರು. ಹೀಗಾಗಿ ಅನುಮತಿ ಪಡೆಯದೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ಸಮಯದಲ್ಲಿ ಸಚಿವರ ಹಾಗೂ ರಾಜಕೀಯ ವ್ಯಕ್ತಿಗಳ ಜತೆಯಲ್ಲಿ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೆ.ರಾಮು ಅವರನ್ನು ಅಮಾನತು ಮಾಡಿ ಜಿಲ್ಲಾ ಚುನಾವಣಾ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Balakot Airstrike: ಭಾರತದ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆಯನ್ನು ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Balakot Airstrike: ಭಾರತೀಯ ವಾಯುಪಡೆಯ (ಐಎಎಫ್) ಮಾಜಿ ಮುಖ್ಯಸ್ಥ ಮತ್ತು ಇದೀಗ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕನಾಗಿರುವ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ (ನಿವೃತ್ತ) ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆ ವಿರುದ್ಧ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ದೃಢವಾದ ನಿಲುವನ್ನು ಶ್ಲಾಘಿಸಿದ್ದಾರೆ.

VISTARANEWS.COM


on

balakot airstrike RKS bhadauria
Koo

ಹೊಸದಿಲ್ಲಿ: ಪಾಕಿಸ್ತಾನದ ವಾಯುಪಡೆ (Pakistan Airforce) ಮತ್ತು ಸೇನೆಯ ರಕ್ಷಣೆಯನ್ನೂ ಭೇದಿಸಿ ಭಾರತದ ವಾಯುಪಡೆ (Indian Airforce) ಬಾಲಾಕೋಟ್ ವೈಮಾನಿಕ ದಾಳಿಯನ್ನು (Balakot Airstrike) ನಡೆಸಿತು. ದಾಳಿಯಲ್ಲಿ ಭಾರತದ ಸೈನ್ಯಕ್ಕೆ ಯಾವುದೇ ನಷ್ಟವೂ ಉಂಟಾಗಿರಲಿಲ್ಲ ಎಂದು ಮಾಜಿ ಐಎಎಫ್ (IAF) ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ (RKS Bhadauria) ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ಮಾಜಿ ಮುಖ್ಯಸ್ಥ ಮತ್ತು ಇದೀಗ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕನಾಗಿರುವ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ (ನಿವೃತ್ತ) ಹೀಗೆ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆ ವಿರುದ್ಧ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ದೃಢವಾದ ನಿಲುವನ್ನು ಶ್ಲಾಘಿಸಿದ್ದಾರೆ.

ಉತ್ತರ ಪ್ರದೇಶದ ಫತೇಪುರ್ ಸಿಕ್ರಿಯಲ್ಲಿ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಬದೌರಿಯಾ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ಸ್ಪಷ್ಟ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸರ್ಜಿಕಲ್ ಸ್ಟ್ರೈಕ್‌ಗಳು ಸೇರಿದಂತೆ ಭಯೋತ್ಪಾದಕ ಘಟನೆಗಳಿಗೆ ತ್ವರಿತ ಪ್ರತಿಕ್ರಿಯೆ ನೀಡಲಾಗುತ್ತಿದೆ ಎಂದರು.

“ಬಿಜೆಪಿ ಅಧಿಕಾರಕ್ಕೆ ಬಂದಾಗ, ಪ್ರಧಾನಿ ಮೋದಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ಸ್ಪಷ್ಟ ನೀತಿಯನ್ನು ಪ್ರತಿಪಾದಿಸಿದರು. ಭಯೋತ್ಪಾದನೆಯ ಘಟನೆ ಸಂಭವಿಸಿದಾಗ ಮತ್ತು ದುಷ್ಕರ್ಮಿಗಳು ಗಡಿಯುದ್ದಕ್ಕೂ ಅಡಗಿಕೊಂಡಾಗ, ಎಲ್ಒಸಿಯಾದ್ಯಂತ ಸರ್ಜಿಕಲ್ ಸ್ಟ್ರೈಕ್ ಮಾಡಲಾಯಿತು. ಪುಲ್ವಾಮಾ ಭಯೋತ್ಪಾದಕ ದಾಳಿ ಸಂಭವಿಸಿದಾಗ, ಲಾಂಚ್‌ಪ್ಯಾಡ್‌ಗಳು ಗಡಿಯಾಚೆ ಹೋಗಿ ಹುಡುಕಿದವು. ಆ ಸಮಯದಲ್ಲಿ ಅದು ಒಂದು ಪ್ರಮುಖ ಹೆಜ್ಜೆ ಮತ್ತು ಬಲವಾದ ಸಂದೇಶವಾಗಿತ್ತು” ಎಂದವರು ಹೇಳಿದರು.

“ನಾವು ನಡೆಸಿದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನದ ವಾಯುಸೇನೆ ಮತ್ತು ಸೇನೆಯ ರಕ್ಷಣೆಯನ್ನು ಭೇದಿಸಿ ನಾವು ಹೋದೆವು. ಆದರೆ ನಾವು ಯಾವುದೇ ನಷ್ಟವನ್ನು ಅನುಭವಿಸಲಿಲ್ಲ. ಅದು ಯಶಸ್ವಿ ಕಾರ್ಯಾಚರಣೆಯಾಗಿತ್ತು. ನಾವು ಪ್ರತಿ ಸನ್ನಿವೇಶಕ್ಕೂ ಸಿದ್ಧರಿದ್ದೇವೆ. ಯಾರೇ ಆಗಲಿ ನಮ್ಮ ದೇಶದಲ್ಲಿ ಭಯೋತ್ಪಾದನೆಯನ್ನು ಹರಡಿದರೆ, ಅವರು ಎಲ್ಲಿ ಅಡಗಿಕೊಂಡರೂ ಅವರನ್ನು ಗುರಿಯಾಗಿಸಿ ಹೊಡೆಯುತ್ತೇವೆ. ಇದರ ಅರ್ಥ ಸ್ಪಷ್ಟವಾಗಿದೆ- ಉಗ್ರವಾದಕ್ಕೆ ನಮ್ಮದು ಶೂನ್ಯ ಸಹಿಷ್ಣುತೆ, ನಾವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ” ಎಂದು ಮಾಜಿ ಐಎಎಫ್ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಹೇಳಿದ್ದಾರೆ.

ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಭದೌರಿಯಾ, ದಾಳಿಯ ನಂತರ ಗಡಿಯುದ್ದಕ್ಕೂ ಭೂಗತವಾಗಿರುವ ಲಾಂಚ್‌ಪ್ಯಾಡ್‌ಗಳನ್ನು ತಟಸ್ಥಗೊಳಿಸುವಲ್ಲಿ ಯಶಸ್ವಿ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು. ಭಾರತದ ಕಡೆಯಿಂದ ಯಾವುದೇ ನಷ್ಟವಾಗದಂತೆ ಪಾಕಿಸ್ತಾನದ ವಾಯುಪಡೆ ಮತ್ತು ಸೇನೆಯ ರಕ್ಷಣೆಯನ್ನು ಭೇದಿಸುವ ಮೂಲಕ ಇದನ್ನು ಕಾರ್ಯಗತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Balakot Airstrike Anniversary: ಬಾಲಾಕೋಟ್ ಏರ್‌ಸ್ಟ್ರೈಕ್‌ಗೆ 4 ವರ್ಷ, ಪಾಕ್‌ನ ಉಗ್ರರ ಶಿಬಿರಗಳು ಧ್ವಂಸ! ಅಂದು ಏನೆಲ್ಲ ನಡೆಯಿತು?

Continue Reading

ಕರ್ನಾಟಕ

Amit Shah: ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ; ಒಂದೇ ಕ್ಷೇತ್ರದಲ್ಲಿ ಕ್ಯಾಂಪೇನ್!‌

Amit Shah: ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಬುಧವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದಕ್ಕೂ ಮೊದಲು ಅಂದರೆ ಇಂದು (ಮಂಗಳವಾರ) ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

VISTARANEWS.COM


on

Amit Shah
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಕಣವು ದಿನೇದಿನೆ ರಂಗೇರುತ್ತಿದೆ. ರಾಜ್ಯ ನಾಯಕರ ಜತೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ನ ಕೇಂದ್ರ ನಾಯಕರು ಕೂಡ ರಾಜ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಘಟಾನುಘಟಿ ನಾಯಕರು ಕರ್ನಾಟಕದಲ್ಲಿ (Karnataka) ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಇಂದು ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

ಇದನ್ನೂ ಓದಿ: Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

Continue Reading
Advertisement
Lok Sabha Election 2024 KP Nanjundi resigns from Legislative Council
Lok Sabha Election 20242 mins ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ9 mins ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Bengaluru Karaga 2024
ಬೆಂಗಳೂರು16 mins ago

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

balakot airstrike RKS bhadauria
ಪ್ರಮುಖ ಸುದ್ದಿ25 mins ago

Balakot Airstrike: ಭಾರತದ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆಯನ್ನು ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Viral Video
ಕ್ರೀಡೆ28 mins ago

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Drought In Karnataka
ಬೆಳಗಾವಿ1 hour ago

Drought In Karnataka : ಭೀಕರ ಬರ; ಆಹಾರ ಸಿಗದೆ ಪ್ಲಾಸ್ಟಿಕ್, ನಟ್ಟು ಬೋಲ್ಟು ತಿನ್ನುತ್ತಿರುವ ಹಸುಗಳು!

Vastu Tips
ಲೈಫ್‌ಸ್ಟೈಲ್1 hour ago

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Karun Nair
ಕ್ರೀಡೆ1 hour ago

Karun Nair: ತ್ರಿಶತಕ ಬಾರಿಸಿದರೂ ಭಾರತ ತಂಡದಲ್ಲಿ ಕಡೆಗಣನೆ; ಕೌಂಟಿಯಲ್ಲಿ ದ್ವಿಶತಕ ಬಾರಿಸಿದ ಕರುಣ್ ನಾಯರ್

OM Puri
ಬಾಲಿವುಡ್2 hours ago

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

malasia helicopter crash viral video
ವೈರಲ್ ನ್ಯೂಸ್2 hours ago

Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು19 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ20 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು23 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌