Bharat Jodo Yatra: ಹವಾಮಾನ ವೈಪರೀತ್ಯ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಾಶ್ಮೀರ ಪ್ರವಾಸ ರದ್ದು - Vistara News

ದೇಶ

Bharat Jodo Yatra: ಹವಾಮಾನ ವೈಪರೀತ್ಯ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಾಶ್ಮೀರ ಪ್ರವಾಸ ರದ್ದು

ಸುಮಾರು 3,500 ಕಿ.ಮೀ. ಕ್ರಮಿಸಿರುವ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಕಾಶ್ಮೀರದ ಶ್ರೀನಗರದಲ್ಲಿ ಸೋಮವಾರ ಅಂತ್ಯವಾಗಲಿದೆ. ಈ ಕಾರ್ಯಕ್ರಮದಲ್ಲಿ ನಾಯಕ ಸಿದ್ದರಾಮಯ್ಯ (siddaramaiah) ಭಾಗವಹಿಸಬೇಕಿತ್ತು.

VISTARANEWS.COM


on

Congress leader will not attend Bharat Jodo yatra final programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022ರ ಸೆಪ್ಟೆಂಬರ್ 7ರಿಂದ ಆರಂಭವಾಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ((Bharat Jodo Yatra)) 2023ರ ಜನವರಿ 30ರಂದು, ಸೋಮವಾರ ಸಮಾರೋಪಗೊಳ್ಳಲಿದೆ. ರಾಹುಲ್ ಗಾಂಧಿ(Rahul Gandhi) ನೇತೃತ್ವದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಎಲ್ಲ ನಾಯಕರು ಭಾಗವಹಿಸುತ್ತಿದ್ದಾರೆ. ಅದರಂತೆ, ಕರ್ನಾಟಕದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರೂ ಪಾಲ್ಗೊಳ್ಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದ ಪರಿಣಾಮ ಅವರು ಕಾಶ್ಮೀರದ ಶ್ರೀನಗರಕ್ಕೆ ತೆರಳಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ದೆಹಲಿಯಿಂದ ಕಾಶ್ಮೀರಕ್ಕೆ ವಿಮಾನ ಸಂಚಾರಗಳನ್ನು ರದ್ದುಪಡಿಸಲಾಗಿದೆ.

ರಾಹುಲ್ ಗಾಂಧಿ ನೇತೃತ್ವದ ಈ ಪಾದ ಯಾತ್ರೆ ಸುಮಾರು 5 ತಿಂಗಳಿಂದ ನಡೆದಿತ್ತು. ದೇಶದುದ್ದಕ್ಕೂ ಸಂಚರಿಸಿದ ಭಾರತ್ ಯಾತ್ರೆ, ದೇಶವನ್ನು ಪ್ರೀತಿ, ವಿಶ್ವಾಸಗಳಿಂದ ಜೋಡಿಸುವ ಪ್ರಯತ್ನವಾಗಿ ಕಾಂಗ್ರೆಸ್ ಹಮ್ಮಿಕೊಂಡಿತ್ತು. ಈ ಯಾತ್ರೆಯ ಹಿಂದೆ ರಾಜಕಾರಣ ಇಲ್ಲ ಎಂದು ಹೇಳಿತ್ತಾದರೂ, ಅಂತಿಮವಾಗಿ ರಾಹುಲ್ ಗಾಂಧಿ ಅವರಿಗೆ ನಾಯಕತ್ವದ ಇಮೇಜ್ ತಂದು ಕೊಡುವ ಪ್ರಯತ್ನ ಈ ಯಾತ್ರೆಯ ಹಿಂದೆ ಇದೆ ಎನ್ನಲಾಗುತ್ತಿದೆ.

ಶ್ರೀನಗರದಲ್ಲಿ ಸೋಮವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲ ಪಿಸಿಸಿ ಅಧ್ಯಕ್ಷರು, ಸಂಸದರು ಮತ್ತು ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಹವಾಮಾನ ವೈಪರೀತ್ಯವು ಕಾಂಗ್ರೆಸ್‌ನ ಉತ್ಸಾಹಕ್ಕೆ ಭಂಗ ತರುವ ಸಾಧ್ಯತೆ ಇದೆ.

ಇದನ್ನೂ ಓದಿ: Viral Video | ಭಯಂಕರ ಚಳಿಯಲ್ಲಿ ಅಂಗಿ ಬಿಚ್ಚಿ ಕುಣಿದ ಕಾಂಗ್ರೆಸ್ ಕಾರ್ಯಕರ್ತರು; ಭಾರತ್ ಜೋಡೋ ಯಾತ್ರೆಯಲ್ಲಿ ಹುಮ್ಮಸ್ಸು

21 ಪಕ್ಷಗಳಿಗೆ ಆಹ್ವಾನ

ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲ ಪಾಲ್ಗೊಳ್ಳಲು 21 ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಲಾಗಿತ್ತು. ಈ ಪೈಕಿ ತೆಲುಗು ದೇಶಂ ಪಕ್ಷ(ಟಿಡಿಪಿ) ಮತ್ತು ತೃಣಮೂಲ ಕಾಂಗ್ರೆಸ್ ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸಿವೆ. ಒಟ್ಟು 12 ಪಕ್ಷಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಜತೆಗೆ, ಉಳಿದ ರಾಜಕೀಯ ಪಕ್ಷಗಳ ಬೆಂಬಲಿಸಿ ಪತ್ರ ಬರೆದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Train Derail:ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲಿನ ಚಾಲಕ ಅಪಘಾತದ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಲೋಕೋ ಪೈಲಟ್ ಹೇಳಿದ್ದಾರೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್, ಅಪಘಾತದ ಮೊದಲು ಸ್ಫೋಟದ ಶಬ್ದ ಕೇಳಿದೆ, ಹೀಗಾಗಿ ವಿಧ್ವಂಸಕ ಕೃತ್ಯದ ದೃಷ್ಟಿಯಿಂದ ತನಿಖೆ ಪ್ರಾರಂಭವಾಗಿದೆ ಎಂದಿದ್ದಾರೆ.

VISTARANEWS.COM


on

Train Accident
Koo

ಲಖನೌ: ಉತ್ತರ ಪ್ರದೇಶ(Uttar Pradesh)ದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೆ(Train Derail) ಒಳಗಾಗಿ ಇಬ್ಬರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ದುರ್ಘಟನೆ ಹಿಂದೆ ವಿಧ್ವಂಸಕ ಕೃತ್ಯ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಲೋಕೋ ಪೈಲೆಟ್‌ ಮಾಹಿತಿ ನೀಡಿದ್ದು, ಘಟನೆಗೆ ಮುನ್ನ ದೊಡ್ಡ ಶಬ್ದ ಕೇಳಿಸಿತ್ತು ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲಿನ ಚಾಲಕ ಅಪಘಾತದ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಲೋಕೋ ಪೈಲಟ್ ಹೇಳಿದ್ದಾರೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್, ಅಪಘಾತದ ಮೊದಲು ಸ್ಫೋಟದ ಶಬ್ದ ಕೇಳಿದೆ, ಹೀಗಾಗಿ ವಿಧ್ವಂಸಕ ಕೃತ್ಯದ ದೃಷ್ಟಿಯಿಂದ ತನಿಖೆ ಪ್ರಾರಂಭವಾಗಿದೆ ಎಂದಿದ್ದಾರೆ.

ಎಕ್ಸ್​ಪ್ರೆಸ್​​ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.

ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.

ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ದೇಶ

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

Ratna Bhandar: ಇಂದು ಬೆಳಗ್ಗೆ 9.51ಕ್ಕೆ ರತ್ನ ಭಂಡಾರವನ್ನು ಪುನಃ ತೆರೆಯಲಾಗಿದ್ದು, ಪುರಿ ಜಗನ್ನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಒಡಿಶಾ ಸರ್ಕಾರವು ಸ್ಥಾಪಿಸಿದ ಮೇಲ್ವಿಚಾರಣಾ ಸಮಿತಿಯ ಸದಸ್ಯರು ಭಂಡಾರವನ್ನು ತೆರೆದು ಅದರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಸ್ಥಳಾಂತರಿಸಿದರು.

VISTARANEWS.COM


on

Ratna Bhandar
Koo

ಭುವನೇಶ್ವರಂ: 12ನೇ ಶತಮಾನದ ಪುರಿಯ ಜಗನ್ನಾಥ ದೇವಾಲಯ(Puri Jagannath Temple)ದ ಖಜಾನೆಯಾದ ರತ್ನ ಭಂಡಾರವನ್ನು ಇಂದು ಮತ್ತೆ ತೆರೆಯಲಾಯಿತು. ಕಳೆದ ವಾರವಷ್ಟೇ ಪುರಿ ಜಗನ್ನಾಥನ ರತ್ನ ಭಂಡಾರ(Ratna Bhandar)ವನ್ನು ಬರೋಬ್ಬರಿ 46ವರ್ಷಗಳ ಬಳಿ ತೆರೆಯಲಾಗಿತ್ತು. ಒಂದು ವಾರದ ಅಂತರದಲ್ಲಿ ಎರಡನೇ ಬಾರಿಗೆ ತೆರೆಯಲಾಗಿದೆ. ಅಲ್ಲಿನ ದುರಸ್ತಿಕಾರ್ಯ ಮತ್ತು ಆಭರಣಗಳ ಲೆಕ್ಕಹಾಕುವ ಪ್ರಕ್ರಿಯೆಗಾಗಿ ಅವುಗಳನ್ನು ತಾತ್ಕಾಲಿಕ ಸ್ಟ್ರಾಂಗ್ ರೂಮ್‌(Strong Room)ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ 9.51ಕ್ಕೆ ರತ್ನ ಭಂಡಾರವನ್ನು ಪುನಃ ತೆರೆಯಲಾಗಿದ್ದು, ಪುರಿ ಜಗನ್ನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಒಡಿಶಾ ಸರ್ಕಾರವು ಸ್ಥಾಪಿಸಿದ ಮೇಲ್ವಿಚಾರಣಾ ಸಮಿತಿಯ ಸದಸ್ಯರು ಭಂಡಾರವನ್ನು ತೆರೆದು ಅದರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಸ್ಥಳಾಂತರಿಸಿದರು.

ದೇವಸ್ಥಾನ ಪ್ರವೇಶಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಮತ್ತು ಒರಿಸ್ಸಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿಸ್ವನಾಥ್ ರಾತ್, “ಭಂಡಾರದ ಒಳಕೋಣೆಯೊಳಗೆ ಸಂಗ್ರಹವಾಗಿರುವ ಎಲ್ಲಾ ಬೆಲೆಬಾಳುವ ವಸ್ತುಗಳ ಸ್ಥಳಾಂತರವನ್ನು ಸುಗಮವಾಗಿ ಪೂರ್ಣಗೊಳಿಸಲು ನಾವು ಜಗನ್ನಾಥನ ಆಶೀರ್ವಾದವನ್ನು ಕೋರಿದ್ದೇವೆ” ಎಂದು ಹೇಳಿದರು.

1978ರಲ್ಲಿ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆಗೆದಿದ್ದಾಗ 128.38 ಕೆ.ಜಿ ಚಿನ್ನ ಸಿಕ್ಕಿತ್ತು. ಚಿನ್ನದ ಸುಮಾರು 454 ಆಭರಣಗಳು ದೊರಕಿದ್ದವು. ಇನ್ನು, ಇದೇ ಖಜಾನೆಯಲ್ಲಿ 221.53 ಕೆ.ಜಿ ಬೆಳ್ಳಿ ಇತ್ತು. ಬೆಳ್ಳಿಯ 293 ಆಭರಣಗಳು ದೊರಕಿದ್ದವು. ಆಗ ಸುಮಾರು 70 ದಿನಗಳವರೆಗೆ ಅಧಿಕಾರಿಗಳು ಶೋಧನೆ ನಡೆಸಿದ್ದರು. ಈಗ ಮತ್ತೆ ರತ್ನ ಭಂಡಾರದ ಆಭರಣಗಳನ್ನು ಲೆಕ್ಕ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ

ಒಡಿಶಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೆ. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP)ಸ್ಥಾಪಿಸಲಾಯಿತು. ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತವು (SJTA), ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ.

ಅನಂಗಭೀಮ ದೇವ ಕ್ರಿಶ 1238ರವರೆಗೆ ಒಡಿಶಾ ಪ್ರದೇಶದ ರಾಜನಾಗಿದ್ದ. ಈತನ ಅಧಿಕಾರದ ಅವಧಿಯಲ್ಲಿ ಪುರಿ ದೇವಾಲಯಕ್ಕೆ 1.25 ಲಕ್ಷ ತೊಲ ಚಿನ್ನವನ್ನು ದಾನವಾಗಿ ನೀಡಿದ್ದ ಎಂಬ ಇತಿಹಾಸ ಇದೆ. 1465ರಲ್ಲಿ ರಾಜ ಕಪಿಲೇಂದ್ರ ದೇವ್‌ ಕೂಡ ಸಾಕಷ್ಟು ಚಿನ್ನವನ್ನು ದಾನ ಮಾಡಿರುವ ಬಗ್ಗೆ ಉಲ್ಲೇಖ ಇದೆ.

1979ರಲ್ಲಿ ಬರೋಬ್ಬರಿ 70 ದಿನಗಳ ಕಾಲ ಸಂಪತ್ತಿನ ಮೌಲ್ಯವನ್ನು ಸಮಿತಿ ಲೆಕ್ಕ ಹಾಕಿತ್ತು. ಆದರೆ ಅದರ ಪೂರ್ತಿ ಮಾಹಿತಿಯನ್ನು ಸರ್ಕಾರ ಸಾರ್ವಜನಿಕಗೊಳಿಸಿರಲಿಲ್ಲ. ಈ ವಿಚಾರ ಕೋರ್ಟ್​ ಮೆಟ್ಟಿಲೇರಿತ್ತು. 2018ರಲ್ಲಿ ಒಡಿಶಾ ಸರ್ಕಾರಕ್ಕೆ ದೇವಸ್ಥಾನದ ರತ್ನ ಭಂಡಾರದ ಕೋಣೆಯ ಬಾಗಿಲು ತೆರೆದು ನಿಧಿಯ ಮೌಲ್ಯ ಮಾಪನ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿತ್ತು.

ಇದನ್ನೂ ಓದಿ: Puri Jagannath temple: ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ

Continue Reading

ದೇಶ

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Kashmir Encounter: ಜಡ್ಡಾನ ಬಾಟಾ ಗ್ರಾಮದಲ್ಲಿ ಉಗ್ರರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆಗೆ ಬೆಳ್ಳಂ ಬೆಳಗ್ಗೆ 2ಗಂಟೆಗೆ ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಶೋಧ ಕಾರ್ಯದ ವೇಳೆ ಸರ್ಕಾರಿ ಶಾಲೆಯೊಳಗಿನ ತಾತ್ಕಾಲಿಕ ಭದ್ರತಾ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

VISTARANEWS.COM


on

Kashmir Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ಕುಪ್ವಾರಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕೇರನ್‌ ಗಡಿ ನಿಯಂತ್ರಣ ರೇಖೆ ಬಳಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾನೆ.

ಜಡ್ಡಾನ ಬಾಟಾ ಗ್ರಾಮದಲ್ಲಿ ಉಗ್ರರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆಗೆ ಬೆಳ್ಳಂ ಬೆಳಗ್ಗೆ 2ಗಂಟೆಗೆ ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಶೋಧ ಕಾರ್ಯದ ವೇಳೆ ಸರ್ಕಾರಿ ಶಾಲೆಯೊಳಗಿನ ತಾತ್ಕಾಲಿಕ ಭದ್ರತಾ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಜಮ್ಮುವಿನ ರಕ್ಷಣಾ ಇಲಾಖೆ ಪಿಆರ್‌ಒ ಪ್ರತಿಕ್ರಿಯಿಸಿದ್ದು, ಉಧಂಪುರದ ಏರ್ ಫೋರ್ಸ್ ಸ್ಟೇಷನ್‌ನಿಂದ ಎಎಲ್‌ಹೆಚ್‌ನ ತ್ವರಿತ ಕ್ರಮವು ದೋಡಾದಲ್ಲಿ (ಜೆ&ಕೆ) ತೀವ್ರವಾಗಿ ಗಾಯಗೊಂಡ ಸೈನಿಕನ ಜೀವವನ್ನು ಉಳಿಸಿದೆ. ಸವಾಲಿನ ಹವಾಮಾನದ ಹೊರತಾಗಿಯೂ, ಉಧಮ್‌ಪುರದ ಕಮಾಂಡ್ ಆಸ್ಪತ್ರೆಯಲ್ಲಿ ಸಕಾಲಿಕ ವೈದ್ಯಕೀಯ ಆರೈಕೆಯನ್ನು ಖಾತರಿಪಡಿಸುವ ಮೂಲಕ ಸ್ಥಳಾಂತರಿಸುವಿಕೆ ಯಶಸ್ವಿಯಾಗಿದೆ. ಅವರ ಸಮರ್ಪಣೆ ಮತ್ತು ಶೌರ್ಯಕ್ಕಾಗಿ ತಂಡಕ್ಕೆ ಅಭಿನಂದನೆಗಳು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಸೋಮವಾರ (ಜುಲೈ 16) ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದಾರೆ. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಸೈನಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ಇತ್ತೀಚೆಗೆ ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ವಾಣಿಜ್ಯ

Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

Sensex Jump: ಬೆಳಗ್ಗೆ ಸೆನ್ಸೆಕ್ಸ್ ಸುಮಾರು 200 ಅಂಕಗಳ ಕುಸಿತದೊಂದಿಗೆ ಪ್ರಾರಂಭವಾಯಿತು. ಬಳಿಕ 326 ಅಂಕಗಳ ಕುಸಿತ ಕಂಡಿತು. ಆದರೆ ಈ ಹಂತದಲ್ಲಿ, ಬ್ಯಾಂಕಿಂಗ್, ಐಟಿ ಮತ್ತು ಎಫ್‌ಎಂಸಿಜಿ ಷೇರುಗಳಲ್ಲಿನ ಖರೀದಿಯ ಹೆಚ್ಚಾಗುತ್ತಿದ್ದಂತೆ ಸೆನ್ಸೆಕ್ಸ್ 813 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು ಮತ್ತು ಸೆನ್ಸೆಕ್ಸ್ 81,203 ಪಾಯಿಂಟ್‌ಗಳ ಗರಿಷ್ಠ ಮಟ್ಟವನ್ನು ತಲುಪಿತು.

VISTARANEWS.COM


on

Sensex Jump
Koo

ಮುಂಬೈ: ಇಂದಿನ ವಹಿವಾಟಿನಲ್ಲಿ ಬಿಎಸ್‌ಇ(BSE) ಸೆನ್ಸೆಕ್ಸ್ ಮತ್ತೆ ಇತಿಹಾಸ ಸೃಷ್ಟಿಸಿದೆ(Sensex Jump). ಸೆನ್ಸೆಕ್ಸ್ ಮೊದಲ ಬಾರಿಗೆ 81,000 ಮಟ್ಟವನ್ನು ದಾಟುವಲ್ಲಿ ಯಶಸ್ವಿಯಾಗಿದೆ. ಬೆಳಿಗ್ಗೆ ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡುಬಂದಿತ್ತು. ಆದರೆ ಹೂಡಿಕೆದಾರರ ಕೆಳಹಂತದಿಂದ ಖರೀದಿ ಮರಳಿದ ನಂತರ ಸೆನ್ಸೆಕ್ಸ್ 810 ಪಾಯಿಂಟ್ಸ್ ಏರಿಕೆ ಕಂಡು 81,203 ಪಾಯಿಂಟ್ಸ್‌ಗಳಲ್ಲಿ ಗರಿಷ್ಠ ಮಟ್ಟ ತಲುಪಿತು. ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ(Nifty) ಕೂಡ ಮೊದಲ ಬಾರಿಗೆ 24,838 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ನಿಫ್ಟಿಯಲ್ಲಿ 234 ಅಂಕಗಳ ಅದ್ಭುತ ಚೇತರಿಕೆ ಕಂಡುಬಂದಿದೆ.

ಬೆಳಗ್ಗೆ ಸೆನ್ಸೆಕ್ಸ್ ಸುಮಾರು 200 ಅಂಕಗಳ ಕುಸಿತದೊಂದಿಗೆ ಪ್ರಾರಂಭವಾಯಿತು. ಬಳಿಕ 326 ಅಂಕಗಳ ಕುಸಿತ ಕಂಡಿತು. ಆದರೆ ಈ ಹಂತದಲ್ಲಿ, ಬ್ಯಾಂಕಿಂಗ್, ಐಟಿ ಮತ್ತು ಎಫ್‌ಎಂಸಿಜಿ ಷೇರುಗಳಲ್ಲಿನ ಖರೀದಿಯ ಹೆಚ್ಚಾಗುತ್ತಿದ್ದಂತೆ ಸೆನ್ಸೆಕ್ಸ್ 813 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು ಮತ್ತು ಸೆನ್ಸೆಕ್ಸ್ 81,203 ಪಾಯಿಂಟ್‌ಗಳ ಗರಿಷ್ಠ ಮಟ್ಟವನ್ನು ತಲುಪಿತು. ಸೆನ್ಸೆಕ್ಸ್ 81,000 ಗಡಿ ದಾಟುವಲ್ಲಿ ಯಶಸ್ವಿಯಾಗಿರುವುದು ಇದೇ ಮೊದಲು. ಇನ್ನು ನಿಫ್ಟಿ ಕೂಡ ನಿನ್ನೆ 110 ಪಾಯಿಂಟ್‌ಗಳಷ್ಟು ಕುಸಿದಿತ್ತು. ಆದರೆ ಕಡಿಮೆ ಮಟ್ಟದಿಂದ, ನಿಫ್ಟಿ 243 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು, ನಂತರ ಸೂಚ್ಯಂಕವು ಗರಿಷ್ಠ 24,746.80 ಪಾಯಿಂಟ್‌ಗಳನ್ನು ತಲುಪಿತು.

ಬಜೆಟ್‌ಗೂ ಮುನ್ನವೇ ಸೆನ್ಸೆಕ್ಸ್‌ ದಾಖಲೆ

ಭಾರತೀಯ ಷೇರು ಮಾರುಕಟ್ಟೆಯಲ್ಲಿನ ಈ ಅದ್ಭುತ ಏರಿಕೆಗೆ ಪ್ರಮುಖ ಕಾರಣ ಮುಂಬರು ದಿನಗಳಲ್ಲಿ ನಡೆಯಲಿರುವ ಕೇಂದ್ರ ಬಜೆಟ್‌ನಿಂದ ಎಂದು ಅಂದಾಜಿಸಲಾಗಿದೆ. ಬಜೆಟ್‌ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಾಗಿ ಹೆಚ್ಚಿನ ಹಣವನ್ನು ಒದಗಿಸಬಹುದು ಮತ್ತು ರೈಲ್ವೆ, ರಕ್ಷಣೆ ಮತ್ತು ವಿದ್ಯುತ್ ಕ್ಷೇತ್ರಗಳಿಗೆ ದೊಡ್ಡ ಘೋಷಣೆಗಳು ಸಾಧ್ಯ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ಬಳಕೆ ಹೆಚ್ಚಿಸಲು, ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಬಜೆಟ್‌ನಲ್ಲಿ ಉಡುಗೊರೆಗಳನ್ನು ನೀಡಬಹುದು, ಅದಕ್ಕಾಗಿಯೇ ಬಜೆಟ್ ಮಂಡನೆ ಮೊದಲು ಈ ವಹಿವಾಟಿನಲ್ಲಿ ಈ ಹೆಚ್ಚಳ ಕಂಡುಬಂದಿದೆ.

ಏಷ್ಯಾದ ಮಾರುಕಟ್ಟೆಗಳಲ್ಲಿ ಮಿಶ್ರ ವ್ಯಾಪಾರ

ಜಪಾನ್‌ನ ನಿಕ್ಕಿ ಸೂಚ್ಯಂಕ 1.99% ಮತ್ತು ಚೀನಾದ ಶಾಂಘೈ ಕಾಂಪೋಸಿಟ್ 0.41% ನಷ್ಟು ಕುಸಿದಿದೆ. ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ 0.05% ಹೆಚ್ಚಾಗಿದೆ. ಇನ್ನು ಅಮೆರಿಕದ ಮಾರುಕಟ್ಟೆಯಲ್ಲಿ ಬುಧವಾರ ಏರಿಕೆ ಕಂಡುಬಂದಿದೆ. ಡೌ ಜೋನ್ಸ್ ಇಂಡಸ್ಟ್ರಿಯಲ್ ಸರಾಸರಿ 243 ಪಾಯಿಂಟ್‌ಗಳು (0.59%) ಏರಿಕೆಯಾಗಿ 41,198 ಕ್ಕೆ ತಲುಪಿದೆ. ಆದರೆ NASDAQ 512 (2.77%) ಪಾಯಿಂಟ್‌ಗಳಿಂದ ಹೆಚ್ಚಾಯಿತು ಮತ್ತು 17,996 ನಲ್ಲಿ ಕೊನೆಗೊಂಡಿತು.
ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್, ಏಷ್ಯನ್ ಪೇಂಟ್ಸ್, ಹಿಂದೂಸ್ತಾನ್ ಯೂನಿಲಿವರ್, ಐಸಿಐಸಿಐ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಮಾರುಕಟ್ಟೆ ನಿಧಾನವಾಗಿ ಏರಿಕೆ ಕಾಣುತ್ತಿವೆ. ಇನ್ನು ಇನ್ಫೋಸಿಸ್, ಟಿಸಿಎಸ್, ಆಕ್ಸಿಸ್ ಬ್ಯಾಂಕ್, ಸನ್ ಫಾರ್ಮಾ ಮತ್ತು ಎಸ್‌ಬಿಐ ಮಾರುಕಟ್ಟೆಗಳಲ್ಲೂ ಚೇತರಿಕೆ ಕಂಡು ಬಂದಿದೆ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading
Advertisement
Viral Video
Latest23 mins ago

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Train Accident
ದೇಶ24 mins ago

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Crime News
ಪ್ರಮುಖ ಸುದ್ದಿ33 mins ago

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Lady Police Officer
Latest45 mins ago

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

kiccha sudeep‌ Fans
ಸಿನಿಮಾ1 hour ago

Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

Ratna Bhandar
ದೇಶ1 hour ago

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

GT World Mall
ಪ್ರಮುಖ ಸುದ್ದಿ1 hour ago

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Viral Video
Latest1 hour ago

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Dog Attacks
Latest2 hours ago

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌